ಬಳ್ಳಾರಿ : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿದ್ದಾರೆ. ಈ ಹಿನ್ನೆಲೆ ಇಂದಿನಿಂದ ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿರುವ ಕ್ಯಾಂಟೀನ್ ಬಂದ್ ಆಗಲಿದೆ ಎಂದು ತಿಳಿದು ಬಂದಿದೆ. ಕ್ಯಾಂಟೀನ್ ನಲ್ಲಿ ಯಾವ ವಸ್ತುಗಳು ಕೂಡ ಇಂದಿನಿಂದ ಸಿಗೋಲ್ಲ. ನಟ ದರ್ಶನ್ ಗೆ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ನೀಡಿರುವ ಹಿನ್ನೆಲೆ ಬಳ್ಳಾರಿ ಜೈಲಿನಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲ್ ನಲ್ಲಿ ದರ್ಬಾರ್ …
Read More »ಆಪರೇಷನ್ ಕಮಲ’ದ ಮೂಲಕ ಸರ್ಕಾರ ಬೀಳಿಸಲು ಬಿಜೆಪಿ ಸಂಚು ಮಾಡುತ್ತಿದೆ : ‘CM
ಬೆಂಗಳೂರು : ‘ಆಪರೇಷನ್ ಕಮಲ’ದ ಮೂಲಕ ಸರ್ಕಾರ ಬೀಳಿಸಲು ಬಿಜೆಪಿ (BJP) ಸಂಚು ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಆಪರೇಷನ್ ಕಮಲದ ಮೂಲಕ ಸರ್ಕಾರವನ್ನು ಅಸ್ಥಿರಗೊಳಿಸಲು BJP ಪ್ರಯತ್ನಿಸುತ್ತಿದ್ದು, ನಮ್ಮ ಶಾಸಕರು ದುಡ್ಡಿನ ಆಸೆಗೆ ಬಲಿಯಾಗುವುದಿಲ್ಲ. ಬಿಜೆಪಿಯವರು ಈ ನಿಟ್ಟಿನಲ್ಲಿ ಪ್ರಯತ್ನಿಸುತ್ತಿರುವುದು ನಿಜ ಎಂದು ಶಾಸಕ ರವಿ ಗಣಿಗ ನನ್ನ ಬಳಿಯೂ ಹೇಳಿದ್ದಾರೆ. …
Read More »ಜುಲೈ ವೇಳೆಗೆ ಬ್ಯಾಂಕ್ ಸಾಲದ ಬೆಳವಣಿಗೆ ಶೇ.15.1ಕ್ಕೆ ಏರಿಕೆ: RBI
ನವದೆಹಲಿ:ಕೃಷಿ ಮತ್ತು ಸಂಬಂಧಿತ ಚಟುವಟಿಕೆಗಳ ಮರುಹಂಚಿಕೆ 2024 ರ ಜುಲೈನಲ್ಲಿ ಶೇಕಡಾ 18.1 ರಷ್ಟು ಬೆಳವಣಿಗೆಯನ್ನು ದಾಖಲಿಸಿ 21.55 ಲಕ್ಷ ಕೋಟಿರೂ.ಗೆತಲುಪಿದೆ ಎಂದು ಆರ್ಬಿಐ ತಿಳಿಸಿದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಆಹಾರೇತರ ಬ್ಯಾಂಕ್ ಸಾಲವು ಜುಲೈ 2024 ರ ವೇಳೆಗೆ ಶೇಕಡಾ 15.1 ರಷ್ಟು ಬೆಳವಣಿಗೆಯನ್ನು ದಾಖಲಿಸಿ 162.92 ಲಕ್ಷ ಕೋಟಿರೂ.ಗೆತಲುಪಿದೆ. ಆದಾಗ್ಯೂ, ಬ್ಯಾಂಕುಗಳ ಠೇವಣಿ ಬೆಳವಣಿಗೆಯು ಶೇಕಡಾ 11.3 ರಷ್ಟು ಹಿಂದುಳಿದು …
Read More »ಓಮಾನ್ ನಲ್ಲಿ ಭೀಕರ ರಸ್ತೆ ಅಪಘಾತ: ಬೆಳಗಾವಿ ಮೂಲದ ನಾಲ್ವರು ಸಜೀವ ದಹನ
ಓಮಾನ್ ನಲ್ಲಿ ಭೀಕರ ರಸ್ತೆ ಅಪಘಾತ: ಬೆಳಗಾವಿ ಮೂಲದ ನಾಲ್ವರು ಸಜೀವ ದಹನ ಬೆಳಗಾವಿ: ಓಮಾನ್ ದೇಶದ ಹೈಮಾ ಎಂಬಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ. ವಿಜಯಾ ತಹಶಿಲ್ದಾರ, ಪೂಜಾ, ಪವನ್ ಕುಮಾರ ಮತ್ತು ಆದಿಶೇಷ ಮೃತಪಟ್ಟವರಾಗಿದ್ದಾರೆ. ಈ ನಾಲ್ವರು ಓಮಾನ್ಗೆ ಪ್ರವಾಸಕ್ಕೆ ತೆರಳಿದ್ದರು. ಹೈಮಾ ಎಂಬ ಪ್ರದೇಶದಲ್ಲಿ ಹೋಗುತ್ತಿದ್ದ ವೇಳೆ ಕಾರು ಮತ್ತು …
Read More »ಹಿರಿಯ ರಾಜಕಾರಿಣಿ, ಮಾಜಿ ಸಚಿವ ಕೆ.ಎಚ್.ಶ್ರೀನಿವಾಸ್ ನಿಧನ
ಬೆಂಗಳೂರು: ಮಾಜಿ ಸಚಿವ ಹಾಗೂ ಜನತಾ ಪರಿವಾರದ ಹಿರಿಯ ನಾಯಕ ಕೆ ಎಚ್ ಶ್ರೀನಿವಾಸ ಅವರು ವಯೋಸಹಜ ಅನಾರೋಗ್ಯದಿಂದ ಶುಕ್ರವಾರ ನಿಧನರಾದರು. ಅವರಿಗೆ 85 ವರ್ಷ ವಯಸ್ಸಾಗಿತ್ತು. ಮಲೆನಾಡು ಭಾಗದಲ್ಲಿ ಪ್ರಭಾವಿ ನಾಯಕರಾಗಿದ್ದ ಶ್ರೀನಿವಾಸ ಅವರು ಮೈಸೂರು ವಿಶ್ವವಿದ್ಯಾನಿಲಯದಲ್ಲಿ ರಾಜ್ಯಶಾಸ್ತ್ರ ಮತ್ತು ಕಾನೂನಿನ ಶಿಕ್ಷಣವನ್ನು ಮುಗಿಸಿದ ನಂತರ ಕಾನೂನು ವೃತ್ತಿಯನ್ನು ಪ್ರಾರಂಭಿಸಿದರು. ರಾಜಕೀಯಕ್ಕೆ ಬರುವ ಮುನ್ನ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದರು. ಶ್ರೀನಿವಾಸ ಅವರು ಮೈಸೂರು ವಿಧಾನಸಭೆಯ ಮಾಜಿ ಸದಸ್ಯರಾದ ಕಾನುಗೋಡು ಹರಿಯಪ್ಪನವರ್ …
Read More »ಮೂಡಲಗಿ ಪುರಸಭೆಯ ನೂತನ ಅಧ್ಯಕ್ಷೆಯನ್ನಾಗಿ ಮುಸ್ಲಿಂ ಮಹಿಳೆಗೆ ಅಧಿಕಾರ ನೀಡಲು ಕಾರಣಿಕರ್ತರಾದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಪಟ್ಟಣದ ವಿವಿಧ ಸಮಾಜಗಳ ಮುಖಂಡರು ಅಭಿನಂದನೆ ಸಲ್ಲಿಸಿದರು.
ಮೂಡಲಗಿ- ಮೂಡಲಗಿ ಪುರಸಭೆಯ ನೂತನ ಅಧ್ಯಕ್ಷೆಯನ್ನಾಗಿ ಮುಸ್ಲಿಂ ಮಹಿಳೆಗೆ ಅಧಿಕಾರ ನೀಡಲು ಕಾರಣಿಕರ್ತರಾದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಪಟ್ಟಣದ ವಿವಿಧ ಸಮಾಜಗಳ ಮುಖಂಡರು ಅಭಿನಂದನೆ ಸಲ್ಲಿಸಿದರು. ಮೂಡಲಗಿ ಪುರಸಭೆಗೆ ಬುಧವಾರದಂದು ನಡೆದ ಅಧ್ಯಕ್ಷ- ಉಪಾಧ್ಯಕ್ಷರ ಚುನಾವಣೆಯಲ್ಲಿ ಸಾಮಾನ್ಯ ಮಹಿಳೆಗೆ ಮೀಸಲಿದ್ದ ಅಧ್ಯಕ್ಷ ಸ್ಥಾನಕ್ಕೆ ಮುಸ್ಲಿಂ ಸಮುದಾಯದ ಮಹಿಳೆಗೆ ಅಧ್ಯಕ್ಷರಾಗುವ ಅದೃಷ್ಟವನ್ನು ನೀಡಿರುವ ಬಾಲಚಂದ್ರ ಜಾರಕಿಹೊಳಿ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ. ಅದರಲ್ಲೂ ಸಾಮಾನ್ಯ ಮಹಿಳೆಗೆ ಮೀಸಲಿದ್ದ ಸ್ಥಾನಕ್ಕೆ …
Read More »ಪತಿಯನ್ನು ಹತ್ಯೆ ಮಾಡಿ ಅಪಘಾತದ ಕಥೆ ಸೃಷ್ಟಿಸಿದಳೆ ಪತ್ನಿ?
ಗದಗ: ತಾಲೂಕಿನ ಕೋಟುಮಚಗಿ ಗ್ರಾಮದಲ್ಲಿ ವ್ಯಕ್ತಿಯೊಬ್ಬನ ಶವ ಹೆದ್ದಾರಿಯಲ್ಲಿ ಪತ್ತೆಯಾಗಿದ್ದು, ಮೊದಲು ಅಪಘಾತದಂತೆ ಕಂಡು ಬಂದರೂ ಪತ್ನಿಯೇ ಹತ್ಯೆ ಮಾಡಿ ಆತನನ್ನು ಹೆದ್ದಾರಿಯಲ್ಲಿ ಎಸೆದಿದ್ದಾಳೆ ಎಂಬ ಆರೋಪ ಮಾಡಲಾಗಿದೆ. ಮಂಜುನಾಥ್ ಮೀಸಿ ಎಂಬಾತ ಶವವಾಗಿ ಪತ್ತೆಯಾದ ವ್ಯಕ್ತಿಯಾಗಿದ್ದು, ಆತನ ಪತ್ನಿ ಶಾರದಮ್ಮ ಕೊಲೆ ಮಾಡಿದ್ದಾಳೆ ಎಂದು ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ. ಗುರುವಾರ(ಆ 29)ತಡರಾತ್ರಿ ಮನೆಯಲ್ಲೇ ಹತ್ಯೆ ಮಾಡಿ ಹೆದ್ದಾರಿಯಲ್ಲಿ ಬಿಸಾಕಿ ಅಪಘಾತದ ಕಥೆ ಸೃಷ್ಟಿ ಮಾಡಿದ್ದಾಳೆ ಎಂದು ಆರೋಪಿಸಲಾಗಿದೆ. ಮಂಜುನಾಥ್ ಕೋಟುಮಚಗಿಯಲ್ಲಿ …
Read More »ಸೆ. 2 ರಿಂದ ರಾಜ್ಯಾದ್ಯಂತ 1-5 ನಮೂನೆ ಡಿಜಿಟಲ್ ಪೋಡಿ ದುರಸ್ಥಿ ಅಭಿಯಾನ: ಕೃಷ್ಣ ಬೈರೇಗೌಡ
ಬೆಂಗಳೂರು ಆಗಸ್ಟ್ 30: ಸೆಪ್ಟೆಂಬರ್ 2 ರಿಂದ 1-5 ನಮೂನೆ ಪೋಡಿ ದುರಸ್ಥಿ ಕಾರ್ಯವನ್ನು ಅಭಿಯಾನ ಮಾದರಿಯಲ್ಲಿ ರಾಜ್ಯಾದ್ಯಂತ ಜಾರಿಗೊಳಿಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ತಹಶೀಲ್ದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ದಶಕಗಳಿಂದ ಬಾಕಿ ಉಳಿದಿರುವ ಪೋಡಿ ದುರಸ್ಥಿ ಕಾರ್ಯಕ್ಕೆ ಚುರುಕು ನೀಡುವ ಸಂಬಂಧ ವಿಕಾಸಸೌಧದಲ್ಲಿ ಶುಕ್ರವಾರ ಎಲ್ಲಾ ಜಿಲ್ಲಾಧಿಕಾರಿಗಳು, ತಹಶೀಲ್ದಾರರು, ಕಂದಾಯ ನಿರೀಕ್ಷಕರೂ ಸೇರಿ ಇಲಾಖೆಯ ಎಲ್ಲಾ ಅಧಿಕಾರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ …
Read More »ಹಬ್ಬಕ್ಕೆ ಖಾಸಗಿ ಬಸ್‌ಗಳು ಪ್ರಯಾಣ ದರ ಹೆಚ್ಚಿಸಿದರೆ ಪರವಾನಗಿ ರದ್ದು :ರಾಮಲಿಂಗಾರೆಡ್ಡಿ
ಬೆಂಗಳೂರು,ಆ.30- ಗೌರಿ-ಗಣೇಶ ಸೇರಿದಂತೆ ಇತರ ಹಬ್ಬಗಳ ಸಂದರ್ಭದಲ್ಲಿ ಪ್ರಯಾಣದರವನ್ನು ಹೆಚ್ಚಳ ಮಾಡಿದರೆ ಖಾಸಗಿ ಬಸ್‌ಗಳ ರಹದಾರಿಯನ್ನು ರದ್ದುಗೊಳಿಸಲು ಕ್ರಮ ಕೈಗೊಳ್ಳುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ ನೀಡಿದ್ದಾರೆ. ಈ ಬಗ್ಗೆ ಇಲಾಖಾ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಮಾರ್ಗದರ್ಶನ ನೀಡಿರುವ ಸಚಿವರು, ಖಾಸಗಿ ಬಸ್‌ಗಳ ಪ್ರಯಾಣದರದಲ್ಲಿ ನಿಗಾ ವಹಿಸುವಂತೆ ತಾಕೀತು ಮಾಡಿದ್ದಾರೆ. ಸಾಮಾನ್ಯವಾಗಿ ಖಾಸಗಿ ಬಸ್‌ಗಳು ಗೌರಿ-ಗಣೇಶ, ಯುಗಾದಿ, ನಾಗರಪಂಚಮಿ, ದೀಪಾವಳಿ, ಆಯುಧಪೂಜೆಯಂತಹ ಸಂದರ್ಭಗಳಲ್ಲಿ ಬಸ್ ಪ್ರಯಾಣ ದರಗಳನ್ನು ಮೂರರಿಂದ ನಾಲ್ಕು …
Read More »ಸಿಎಂ ಬದಲಾವಣೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ
ಬೆಂಗಳೂರು: ಮುಡಾ ಹಗರಣ ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಬೆನ್ನಲ್ಲೇ ಸಿಎಂ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಈ ಚರ್ಚೆ ಬಗ್ಗೆ ಇದೀಗ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತೆರೆ ಎಳೆಯುವ ಯತ್ನ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ. ಸಿಎಂ ಬದಲಾಗಬೇಕು ಎಂದು ಯಾರೂ ಸಹ ಬಯಸಿಯೂ ಇಲ್ಲ ಎಂದು ಸ್ಪಷ್ಟಪಡಿಸಿದರು. ಸಿಎಂ ಬದಲಾವಣೆ ಬಗ್ಗೆ ನಾವು ಊಹೆ ಕೂಡ ಮಾಡಿಲ್ಲ. …
Read More »
Laxmi News 24×7