Breaking News

ರಾಜಕೀಯ

ಮೈಸೂರಿನಿಂದ ಧರ್ಮಸ್ಥಳಕ್ಕೆ ಬೃಹತ್ ಕಾರು ರ‍್ಯಾಲಿ

ಮೈಸೂರು: ಧರ್ಮಸ್ಥಳದ ಪಾವಿತ್ರ್ಯತೆ ಉಳಿಸಲು ಮೈಸೂರಿನಿಂದ ಮಾಜಿ ಸಚಿವ ಸಾ‌.ರಾ.ಮಹೇಶ್ ಅವರ​ ನೇತೃತ್ವದಲ್ಲಿ ಇಂದು ಧರ್ಮಸ್ಥಳಕ್ಕೆ ಬೃಹತ್ ಕಾರು ರ‍್ಯಾಲಿ ತೆರಳಿತು. ದಟ್ಟಗಳ್ಳಿಯಲ್ಲಿರುವ ಸಾ.ರಾ‌‌.ಕನ್ವೆನ್ಷನ್ ಹಾಲ್ ಮುಂಭಾಗದ ಗಣಪತಿ ದೇವಸ್ಥಾನದಲ್ಲಿ ಸಾ.ರಾ.ಮಹೇಶ್ ಹಾಗೂ ಜೆಡಿಎಸ್ ಮುಖಂಡರು ಪೂಜೆ ಸಲ್ಲಿಸಿದರು. ನಂತರ ರ‍್ಯಾಲಿಗೆ ಚಾಲನೆ ನೀಡಲಾಯಿತು ಈ ಸಂದರ್ಭದಲ್ಲಿ ಸಾ.ರಾ.ಮಹೇಶ್ ಮಾತನಾಡಿ, “ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಬಂದಾಗ ಬಹಳ ನೋವಾಗಿತ್ತು‌. ಈಗ ಸತ್ಯ ಹೊರಬರುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಸ್​ಐಟಿ ನಿಷ್ಪಕ್ಷವಾಗಿ ತನಿಖೆ …

Read More »

45 ವರ್ಷಗಳಿಂದ ಆವೆಮಣ್ಣಿನ ಗಣಪತಿ ಮೂರ್ತಿ ತಯಾರಿಸುತ್ತಿರುವ ನಿವೃತ್ತ ಕಲಾಶಿಕ್ಷಕ

ಉಡುಪಿ: ಗಣೇಶೋತ್ಸವಕ್ಕೆ ಇನ್ನು ಒಂದೇ ದಿನ ಬಾಕಿ. ವಿನಾಯಕನ ಮೂರ್ತಿಗಳಿಗೆ ಅಂತಿಮ ಸ್ಪರ್ಶ ನೀಡುವ ಕೆಲಸ ಎಲ್ಲೆಡೆ ಭರದಿಂದ ಸಾಗುತ್ತಿದೆ. ಈ ಮಧ್ಯೆ ನಗರದ ಅಲೆವೂರಿನ ನಿವೃತ್ತ ಶಿಕ್ಷಕರೊಬ್ಬರು ಸದ್ದಿಲ್ಲದೆ ಕಳೆದ ನಾಲ್ಕೂವರೆ ದಶಕದಿಂದ ಮೂರ್ತಿ ತಯಾರಿಸಿ ಮಾರಾಟ ಮಾಡುವುದರ ಜೊತೆಗೆ ಪರಿಸರ ಸಂರಕ್ಷಣೆಯ ಸಲಹೆಗಳನ್ನು ನೀಡುವ ಮೂಲಕ ಗಮನ ಸೆಳೆಯುತ್ತಿದ್ದಾರೆ. ಅಲೆವೂರಿನ 70 ವರ್ಷದ ಶೇಖರ ಕಲ್ಮಾಡಿ ಅವರು, ಪ್ರತಿವರ್ಷವೂ ಪರಿಸರಸ್ನೇಹಿ ಮಣ್ಣಿನ ಗಣಪನ ಮೂರ್ತಿಗಳನ್ನು ತಯಾರಿಸಿ ಮಾರಾಟ ಮಾಡುತ್ತಾರೆ. …

Read More »

ಕೆಜಿಎಫ್ ಸಿನಿಮಾ ಖ್ಯಾತಿಯ ನಟ ದಿನೇಶ್ ಮಂಗಳೂರು ನಿಧನ

ಉಡುಪಿ: ನಟ, ಕಲಾ ನಿರ್ದೇಶಕ ದಿನೇಶ್ ಮಂಗಳೂರು ಅವರು ಇಂದು (ಸೋಮವಾರ) ಮುಂಜಾನೆ ಜಿಲ್ಲೆಯ ಕುಂದಾಪುರದ ಕೋಟೇಶ್ವರ ಸರ್ಜನ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ‘ಆ ದಿನಗಳು’, ‘ಕೆಜಿಎಫ್’, ‘ಉಳಿದವರು ಕಂಡಂತೆ’, ‘ಕಿಚ್ಚ’, ‘ಕಿರಿಕ್ ಪಾರ್ಟಿ’ ಸೇರಿದಂತೆ ಹಲವಾರು ಸಿನಿಮಾಗಳಲ್ಲಿ ದಿನೇಶ್ ಮಂಗಳೂರು ನಟಿಸಿದ್ದರು. ಕನ್ನಡ ಚಿತ್ರರಂಗದಲ್ಲಿ ಬಹುಬೇಡಿಕೆಯ ಪೋಷಕ ನಟನಾಗಿ ಗುರುತಿಸಿಕೊಂಡಿದ್ದರು. ನಟನ ನಿಧನಕ್ಕೆ ಚಿತ್ರರಂಗದ ಗಣ್ಯರು ಸೇರಿದಂತೆ ಅನೇಕರು ಕಂಬನಿ ಮಿಡಿದಿದ್ದಾರೆ. ಕೆಲ ದಿನಗಳ ಹಿಂದೆ ಅವರಿಗೆ ಸ್ಟ್ರೋಕ್ ಆಗಿತ್ತು. ಬೆಂಗಳೂರಿನಲ್ಲಿ …

Read More »

ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟನೆಗೆ ಕರೆಯಬಾರದೆಂದು ಸಂವಿಧಾನದಲ್ಲಿದೆಯೇ? : ಸಚಿವ ಸಂತೋಷ ಲಾಡ್

ಬಳ್ಳಾರಿ: ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟನೆಗೆ ಕರೆಯಬಾರದೆಂದು ಸಂವಿಧಾನದಲ್ಲಿ ಇದೆಯೇ?. ಎಲ್ಲದಕ್ಕೂ ಆಕ್ಷೇಪ ಮಾಡ್ತಾ ಹೋದ್ರೆ ಏನು ಮಾಡಬೇಕು? ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ಸಚಿವ ಸಂತೋಷ ಲಾಡ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಂಡೂರಿನಲ್ಲಿ ನುಲಿಯ ಚಂದಯ್ಯನವರ 918ನೇ ಜಯಂತಿಯ ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದ ಅವರು, ದೇಶದಲ್ಲಿ ಅತೀ ಹೆಚ್ಚು ದೇಣಿಗೆ ನೀಡಿದವರು ಯಾರು? ಅಜೀಂ ಪ್ರೇಮ್​​ ಜಿ ಫೌಂಡೇಶನ್​​ನಿಂದ ಎರಡುವರೆ ಲಕ್ಷ ಕೋಟಿ ಹಣ ನೀಡಿದ್ದಾರೆ. …

Read More »

ಊಟದಲ್ಲಿ ನಿದ್ರೆ ಮಾತ್ರೆ ಹಾಕಿ ಅತ್ತೆಯನ್ನು ಕೊಂದ ಸೊಸೆ; ಆರೋಪಿಗಳ ಬಂಧನ

ಚಿಕ್ಕಮಗಳೂರು: ಒಳಸಂಚು ರೂಪಿಸಿ ಊಟದಲ್ಲಿ ನಿದ್ರೆ ಮಾತ್ರೆ ಬೆರೆಸಿ ಅತ್ತೆಯನ್ನು ಕೊಲೆ ಮಾಡಿ ಚಿನ್ನಾಭರಣ, ಹಣ ದೋಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೊಸೆ ಹಾಗೂ ಇನ್ನೊಬ್ಬ ಆರೋಪಿಯನ್ನು ಜಿಲ್ಲೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತು ಪೊಲೀಸ್ ವರಿಷ್ಟಾಧಿಕಾರಿ ವಿಕ್ರಂ ಅಮಟೆ ಅವರು ಮಾತನಾಡಿದ್ದು, ಆ. 20 ರಂದು ದಾವಣಗೆರೆ ಡಾಲರ್ಸ್ ಕಾಲೋನಿ ನಿವಾಸಿ ಶ್ರೀಮತಿ ವೀಣಾ ರಾಮ ಚಂದ್ರಪ್ಪ ಎಂಬುವರು ಠಾಣೆಗೆ ಹಾಜರಾಗಿ ತನ್ನ ಅತ್ತಿಗೆ ಅಶ್ವಿನಿ ಅವರು ಸ್ನೇಹಿತ ಆಂಜನೇಯನ …

Read More »

ಬೈಕ್ – ಕ್ಯಾಂಟರ್ ಡಿಕ್ಕಿ: ಫಾರೆಸ್ಟ್ ಗಾರ್ಡ್ ಸೇರಿದಂತೆ ಇಬ್ಬರ ಸಾವು

ನೆಲಮಂಗಲ: ಬೈಕ್ ಮತ್ತು ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವನ್ನಪ್ಪಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ. ನೆಲಮಂಗಲದ ರಾಷ್ಟ್ರೀಯ ಹೆದ್ದಾರಿ 48ರ ಹನುಮಂತಪುರ ಗೇಟ್ ಬಳಿ ಅಪಘಾತ ನಡೆದಿದೆ. ಬೈಕ್​​ನಲ್ಲಿದ್ದ ಫಾರೆಸ್ಟ್ ಗಾರ್ಡ್ ಕೆಂಪರಾಜು, ಸೆಂಟ್ರಿಂಗ್ ಕೆಲಸ ಮಾಡುವ ಮತ್ತೊಬ್ಬ ವ್ಯಕ್ತಿ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ನೆಲಮಂಗಲ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಎಸ್​ಪಿ ಭೇಟಿ: ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ …

Read More »

ವಿಶ್ವಪ್ರಸಿದ್ಧ ಮೈಸೂರು ದಸರಾ ಉದ್ಘಾಟನೆಯಲ್ಲಿ ಬಾನು ಮುಷ್ತಾಕ್‌ ಅವರಿಂದ ಶೋಭೆಯ ಸಂದೇಶ

ವಿಶ್ವಪ್ರಸಿದ್ಧ ಮೈಸೂರು ದಸರಾ ಉದ್ಘಾಟನೆಯಲ್ಲಿ ಬಾನು ಮುಷ್ತಾಕ್‌ ಅವರಿಂದ ಶೋಭೆಯ ಸಂದೇಶ ಮೈಸೂರು: ಕನ್ನಡಕ್ಕೆ ಮೊದಲ ಬೂಕರ್ ಪ್ರಶಸ್ತಿಯ ಗೌರವ ತಂದುಕೊಟ್ಟ ಹೆಮ್ಮೆಯ ಕನ್ನಡತಿ ಶ್ರೀಮತಿ ಬಾನು ಮುಷ್ತಾಕ್‌ ಅವರು ಈ ಬಾರಿಯ ವಿಶ್ವಪ್ರಸಿದ್ಧ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಮಾಡುತ್ತಿರುವುದು ಅತ್ಯಂತ ಸ್ವಾಗತಾರ್ಹವಾದ ಸಂಗತಿ. ಅಂತರಾಷ್ಟ್ರೀಯ ಮಟ್ಟದಲ್ಲಿ ಕನ್ನಡದ ಕೀರ್ತಿಪತಾಕೆಯನ್ನು ಎತ್ತಿಹಿಡಿದ ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನೆ ಮಾಡಿಸುವ ಸರ್ಕಾರದ ನಿರ್ಧಾರವನ್ನು ನಾವು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇವೆ. ನಾಡಿನ …

Read More »

ದೇಶ ಕಾಯುವ ಯೋಧ, ನಾಡಿಗೆ ಅನ್ನ ನೀಡುವ ರೈತ ಇವರುಗಳು ಸಮಾಜದ ಎರಡು ಕಣ್ಣುಗಳಿದ್ದಂತೆ ಸೈನಿಕರ ಮತ್ತು ರೈತರ ಬೆನ್ನಿಗೆ ನಿಲ್ಲುವುದು ನಮ್ಮೆಲ್ಲರ ಕರ್ತವ್ಯ.

ಮೂಡಲಗಿ: ದೇಶ ಕಾಯುವ ಯೋಧ, ನಾಡಿಗೆ ಅನ್ನ ನೀಡುವ ರೈತ ಇವರುಗಳು ಸಮಾಜದ ಎರಡು ಕಣ್ಣುಗಳಿದ್ದಂತೆ ಸೈನಿಕರ ಮತ್ತು ರೈತರ ಬೆನ್ನಿಗೆ ನಿಲ್ಲುವುದು ನಮ್ಮೆಲ್ಲರ ಕರ್ತವ್ಯ. ಆ ನಿಟ್ಟಿನಲ್ಲಿ ಗೋಕಾಕ ಮತ್ತು ಸುತ್ತಮುತ್ತಲಿನ ತಾಲೂಕುಗಳಲ್ಲಿ ವಾಸವಾಗಿರುವ ಸೈನಿಕರ ಅನುಕೂಲಕ್ಕಾಗಿ ಸುಸಜ್ಜಿತವಾದ ಆರ್ಮಿ ಕ್ಯಾಂಟಿನ್ ಪ್ರಾರಂಭಿಸಲು ದೇಶದ ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರಿಗೆ ಮನವಿ ಮಾಡಿಕೊಳ್ಳಲಾಗಿತ್ತು. ಇದಕ್ಕೆ ಸ್ಪಂಧಿಸಿದ ಸಚಿವರು ಗೋಕಾಕ ನಗರದಲ್ಲಿ ಆರ್ಮಿ ಕ್ಯಾಂಟಿನ್ ಸ್ಥಾಪನೆಗೆ ಅನುಮೋಧನೆ …

Read More »

ಯಾದಗಿರಿ ಜಿಲ್ಲೆಯ ಶಹಾಪುರ ಪಟ್ಟಣದಲ್ಲಿ ಇಂದು ಆಯೋಜಿಸಿದ್ದ ಶೋಷಿತ ವರ್ಗಗಳ ‘ಐಕ್ಯತಾ ಸಮಾವೇಶ’

ಯಾದಗಿರಿ ಜಿಲ್ಲೆಯ ಶಹಾಪುರ ಪಟ್ಟಣದಲ್ಲಿ ಇಂದು ಆಯೋಜಿಸಿದ್ದ ಶೋಷಿತ ವರ್ಗಗಳ ‘ಐಕ್ಯತಾ ಸಮಾವೇಶ’ ಬಹಿರಂಗ ಸಭೆಯಲ್ಲಿ ಪಾಲ್ಗೊಂಡು, ಮಾತನಾಡಿದೆ. ಸಾಮಾಜಿಕ ಸಮಾನತೆ, ಸಹಬಾಳ್ವೆ ಮತ್ತು ಐಕ್ಯತೆಯ ಸಂದೇಶವನ್ನು ಸಾರುವ ಉದ್ದೇಶದಿಂದ ಆಯೋಜಿಸಿದ್ದ ಈ ಸಭೆಯಲ್ಲಿ ಮೈಸೂರಿನ ಉರಿಲಿಂಗಿ ಪೆದ್ದಿ ಮಠದ ಶ್ರೀ ಜ್ಞಾನ ಪ್ರಕಾಶ ಸ್ವಾಮೀಜಿ, ಧರ್ಮಗುರುಗಳು ಹಾಗೂ ಕರ್ನಾಟಕ ರಾಜ್ಯ ವಕ್ಸ್ ಮಂಡಳಿ ಅಧ್ಯಕ್ಷರು ಹಫೀಜ್ ಸೈಯದ್ ಮೊಹಮ್ಮದ್ ಅಲಿ ಅಲ್ ಹುಸೇನಿ ಸಜ್ಜಾದ ನಶೀನ್, ಶ್ರೀ ಹಜರತ್ …

Read More »

ಮೂಡಲಗಿ ತಾಲೂಕಿನ ಹೊನಕುಪ್ಪಿ ಗ್ರಾಮದಲ್ಲಿ ಇಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಟ್ರಸ್ಟ್ ಸಮಿತಿಯ ವತಿಯಿಂದ ಪ್ರತಿಷ್ಠಾಪಿಸಲಾದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಮೂರ್ತಿಯ ಉದ್ಘಾಟನೆ

ಮೂಡಲಗಿ ತಾಲೂಕಿನ ಹೊನಕುಪ್ಪಿ ಗ್ರಾಮದಲ್ಲಿ ಇಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಟ್ರಸ್ಟ್ ಸಮಿತಿಯ ವತಿಯಿಂದ ಪ್ರತಿಷ್ಠಾಪಿಸಲಾದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಮೂರ್ತಿಯ ಉದ್ಘಾಟನೆಯನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಸಾಹಸಮಯ ಜೀವನ ಮತ್ತು ತ್ಯಾಗವನ್ನು ಸ್ಮರಿಸಿ, ಹೊನಕುಪ್ಪಿ ಹಾಗೂ ಸಿದ್ದಾಮರಹಳ್ಳಿ ಗ್ರಾಮದ ಸಮಸ್ತ ನಾಗರಿಕರ ಧನಸಹಾಯದಿಂದ ಈ ಮೂರ್ತಿ ಪ್ರತಿಷ್ಠಾಪನೆಗೊಂಡಿರುವುದಕ್ಕೆ ಅಭಿನಂದನೆ ಸಲ್ಲಿಸಲಾಯಿತು. ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು, ಪರಮ ಪೂಜ್ಯ ಶ್ರೀ ಬಿಳಿಯಾನಸಿದ್ದ ಸ್ವಾಮೀಜಿ …

Read More »