Breaking News

ರಾಜಕೀಯ

ಹಣದುಬ್ಬರಕ್ಕೆ ಅನುಗುಣವಾಗಿ ಬಳಕೆದಾರರ ಶುಲ್ಕ ಪರಿಷ್ಕರಣೆಗೆ ಸಂಪನ್ಮೂಲ ಕ್ರೋಢೀಕರಣ ಸಮಿತಿ ಶಿಫಾರಸು

ಬೆಂಗಳೂರು: ಸಾರ್ವಜನಿಕ ಸೇವೆಗಳಲ್ಲಿ ಬಳಕೆದಾರ ಶುಲ್ಕಗಳನ್ನು ತರ್ಕಬದ್ಧಗೊಳಿಸಿ, ಹಣದುಬ್ಬರಕ್ಕೆ ಅನುಗುಣವಾಗಿ ಬಳಕೆದಾರರ ಶುಲ್ಕಗಳನ್ನು ಸ್ವಯಂಚಾಲಿತವಾಗಿ ಪರಿಷ್ಕರಿಸುವ ವ್ಯವಸ್ಥೆಯನ್ನು ರೂಪಿಸುವಂತೆ ಸಂಪನ್ಮೂಲ ಕ್ರೋಢೀಕರಣ ಸಮಿತಿ (RMC) ತನ್ನ ಅಂತಿಮ ವರದಿಯಲ್ಲಿ ಶಿಫಾರಸು ಮಾಡಿದೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಮತ್ತು ಸುಸ್ಥಿರ ಆರ್ಥಿಕ ಬೆಳವಣಿಗೆಯನ್ನು ಬಲಪಡಿಸುವ ಉದ್ದೇಶದಿಂದ ಆಗಸ್ಟ್ 2024ರಲ್ಲಿ ರಚಿಸಲಾದ ಸಂಪನ್ಮೂಲ ಕ್ರೋಢೀಕರಣ ಸಮಿತಿ ತನ್ನ ಅಂತಿಮ ವರದಿಯನ್ನು ಸಿಎಂ ಸಿದ್ದರಾಮಯ್ಯಗೆ ಸಲ್ಲಿಸಿದೆ. ಸಂಪನ್ಮೂಲ ಕ್ರೋಢೀಕರಣ ಸಮಿತಿಯು ಕೈಗೊಂಡ ಸಮಗ್ರ ವಿಶ್ಲೇಷಣೆ ಮತ್ತು …

Read More »

ಮದುವೆ ಪತ್ರಿಕೆ ಕೊಡುವ ನೆಪದಲ್ಲಿ ಬಂದ ದುಷ್ಕರ್ಮಿಗಳು: ಮಾಲೀಕರ ಕೈಕಾಲು ಕಟ್ಟಿ 200 ಗ್ರಾಂ ಚಿನ್ನ ಕದ್ದು ಎಸ್ಕೇಪ್

ಮಂಗಳೂರು/ಬೆಂಗಳೂರು: ಪರಿಚಯವೇ ಇಲ್ಲದವರು ಮನೆಗೆ ಆಹ್ವಾನ ಪತ್ರಿಕೆ ನೀಡುವ ಸೋಗಿನಲ್ಲಿ ಮನೆಗೆ ಬಂದು, ಹಾಡಹಗಲೇ ಮನೆ ಮಾಲೀಕರ ಕೈಕಾಲು ಕಟ್ಟಿ ಹಾಕಿ 200 ಗ್ರಾಂ ಚಿನ್ನಾಭರಣ ದೋಚಿದ ಘಟನೆ ಆನೇಕಲ್ ತಾಲೂಕಿನ ಅತ್ತಿಬೆಲೆ ಪೊಲೀಸ್‌ ಠಾಣೆಯ ವ್ಯಾಪ್ತಿಯ ನೆರಳೂರು ಗ್ರಾಮದಲ್ಲಿ ಬುಧವಾರ ನಡೆದಿದೆ. ನೆರಳೂರು ಗ್ರಾಮದ ನಿವಾಸಿಗಳಾದ ನಾಗವೇಣಿ ಮತ್ತು ರವಿಕುಮಾರ್‌ ಅವರ ಮನೆಗೆ ಆಹ್ವಾನ ಪತ್ರಿಕೆ ನೀಡಲು ಬಂದವರಂತೆ ನಟಿಸಿ ಕಳ್ಳರು ಕೃತ್ಯ ಎಸಗಿದ್ದಾರೆ. ರವಿಕುಮಾರ್‌ ಖಾಸಗಿ ಕಂಪನಿಯಲ್ಲಿನ ಉದ್ಯೋಗಿಯಾಗಿದ್ದಾರೆ. …

Read More »

ಅಪ್ರಾಪ್ತೆ ತಂಗಿಗೆ ಮಗು ಕರುಣಿಸಿ ಜೈಲುಪಾಲಾದ ಭೂಪ!

ಕೊಪ್ಪಳ, ನವೆಂಬರ್​ 06: ನಿನ್ನನ್ನು ಮದುವೆ ಆಗುತ್ತೇನೆ ಎಂದು ಪುಸಲಾಯಿಸಿ ಸ್ವಂತ ಅಣ್ಣನೇ ಅಪ್ರಾಪ್ತೆ ತಂಗಿ ಜೊತೆ ದೈಹಿಕ ಸಂಪರ್ಕ ಬೆಳೆಸಿ ಮಗು ಕರುಣಿಸಿರುವ ಆಘಾತಕಾರಿ ಘಟನೆ ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗರ್ಭವತಿಯಾಗಿದ್ದ ಬಾಲಕಿ ವಾರದ ಹಿಂದೆ ಮಗುವಿಗೆ ಜನ್ಮ ನೀಡಿದ್ದು, 21 ವರ್ಷದ ಆರೋಪಿ ಅಣ್ಣನ ವಿರುದ್ಧ ಬಾಲಕಿ ದೂರಿನನ್ವಯ ಪೋಕ್ಸೋ ಕೇಸ್ ದಾಖಲಾಗಿದೆ. ಸದ್ಯ ಆರೋಪಿಯನ್ನ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಘಟನೆ ಏನು? ಮನೆಯಲ್ಲಿ ಯಾರೂ …

Read More »

ಬೆಂಗಳೂರು ಸಾಕಾಗಿದೆ, ಯಾರನ್ನೂ ಇಲ್ಲಿಗೆ ಕರೆಯಬೇಡಿ’ ಎಂಬ ರೆಡ್ಡಿಟ್‌ನಲ್ಲಿ ವೈರಲ್ ಆಗಿರುವ ಪೋಸ್ಟ್ ನಗರದ ಸಮಸ್ಯೆಗಳನ್ನು ಬಿಚ್ಚಿಟ್ಟಿದೆ.

ಬೆಂಗಳೂರು ಸಾಕಾಗಿದೆ, ಯಾರನ್ನು ಇಲ್ಲಿಗೆ ಬನ್ನಿ ಎಂದು ಕರೆಯಬೇಡಿ ಎಂಬ ಪೋಸ್ಟ್​​ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ರೆಡ್ಡಿಟ್​​ನಲ್ಲಿ ಈ ಪೋಸ್ಟ್ ವೈರಲ್ ಆಗಿದ್ದು, ಇದಕ್ಕೊಂದು ಶೀರ್ಷಿಕೆಯನ್ನು ಕೂಡ ನೀಡಿದ್ದಾರೆ. “ಬೆಂಗಳೂರು ಸಾಕಾಗಿದೆ, ಜನರನ್ನು ಆಹ್ವಾನಿಸುವುದನ್ನು ನಿಲ್ಲಿಸುವ ಸಮಯ ಬಂದಿದೆ. ಮಿತಿ ಮೀರಿ ಬೆಳೆಯುತ್ತಿರುವ ನಗರ, ಹೆಚ್ಚುತ್ತಿರುವ ಬಾಡಿಗೆಗಳು, ಮೂಲಸೌಕರ್ಯದ ಕೊರತೆ, ಅಪರಾಧಗಳು, ಹೀಗೆ ಅನೇಕ ವಿಚಾರಗಳಿಂದ ಬೆಂಗಳೂರು ಬೇಡ ಎನ್ನುವ ನಿರ್ಧಾರಕ್ಕೆ ಬರಬೇಕಾದ ಸ್ಥಿತಿ ಬಂದಿದೆ.” ಎಂದು ಈ …

Read More »

ತಿಂಗಳಿನಿಂದ ಪೊಲೀಸ್​ ಠಾಣೆಯಲ್ಲೇ ನಿಂತಿದ್ದ ಕಾರಲ್ಲಿತ್ತು ಚಿನ್ನ, ಬೆಳ್ಳಿ ಮತ್ತು ಕಂತೆ ಕಂತೆ ಹಣ!

ತಿಂಗಳಿನಿಂದ ಪೊಲೀಸ್​ ಠಾಣೆಯಲ್ಲೇ ನಿಂತಿದ್ದ ಕಾರಲ್ಲಿತ್ತು ಚಿನ್ನ, ಬೆಳ್ಳಿ ಮತ್ತು ಕಂತೆ ಕಂತೆ ಹಣ! ಚಿಕ್ಕಮಗಳೂರು, ನವೆಂಬರ್​ 06: ಪೊಲೀಸರು ಸೀಜ್​ ಮಾಡಿದ್ದ ಕಾರಣ​ ಒಂದು ತಿಂಗಳಿನಿಂದ ಪೊಲೀಸ್​ ಠಾಣೆಯಲ್ಲಿ ನಿಂತಿದ್ದ ಕಾರಿನಲ್ಲಿ ಲಕ್ಷಾಂತರ ರೂಪಾಯಿ ಹಣ, ಚಿನ್ನ ಮತ್ತು ಬೆಳ್ಳಿ ಪತ್ತೆಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ನಡೆದಿದೆ. ಮಾಜಿ ಶಿಕ್ಷಣ ‌ಸಚಿವ ದಿ .ಗೋವಿಂದೇಗೌಡರ ಮನೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣ ಸಂಬಂಧ ನೇಪಾಳಿ ಗ್ಯಾಂಗ್​ನ ಸಾಂಗ್ಲಿ ಪೊಲೀಸರ ನೆರವು ಪಡೆದು ಬಂಧಿಸಲಾಗಿತ್ತು. …

Read More »

ಧಾನಿ ನರೇಂದ್ರ ಮೋದಿ ನವೆಂಬರ್ 28ಕ್ಕೆ ಉಡುಪಿಗೆ

ಉಡುಪಿ: ಪ್ರಧಾನಿ ನರೇಂದ್ರ ಮೋದಿ ನವೆಂಬರ್ 28ಕ್ಕೆ ಉಡುಪಿಗೆ ಬರಲಿದ್ದಾರೆ. ಕೃಷ್ಣಮಠಕ್ಕೆ ಭೇಟಿ ನೀಡುವ ಅವರು ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಪ್ರಧಾನಿ ಭೇಟಿಯ ಜೊತೆಗೆ ಉಡುಪಿಯ “ಕೃಷ್ಣ ಕಾರಿಡಾರ್” ಯೋಜನೆಯ ಕನಸು ಚಿಗುರಿದೆ. ನವೆಂಬರ್​ 28ಕ್ಕೆ ಮೋದಿ ಉಡುಪಿ ಭೇಟಿ, ಭಕ್ತರನ್ನುದ್ದೇಶಿಸಿ ಮಾತು: ಪ್ರಧಾನಿಯಾದ ಬಳಿಕ ಇದೇ ಮೊದಲ ಬಾರಿಗೆ ನರೇಂದ್ರ ಮೋದಿ ಉಡುಪಿ ಅವರು ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ. ಪರ್ಯಾಯ ಶ್ರೀ ಪುತ್ತಿಗೆ ಮಠದವರು ಆಯೋಜಿಸಿರುವ ಲಕ್ಷ ಕಂಠ …

Read More »

ಖಾಸಗಿ ಜಮೀನಿನಲ್ಲಿ ಮಾಲೀಕರ ಅನುಮತಿ ಇಲ್ಲದೆ ಶವ ಸಂಸ್ಕಾರ ಮಾಡಬಹುದೇ: ಸರ್ಕಾರದ ನಿಲುವು ಕೇಳಿದ ಹೈಕೋರ್ಟ್

ಬೆಂಗಳೂರು: ಖಾಸಗಿ ಜಮೀನಿನಲ್ಲಿ ಮಾಲೀಕರ ಪರವಾನಿಗೆಯಿಲ್ಲದೆ ಶವ ಸಂಸ್ಕಾರ ಮಾಡಬಹುದೇ ಎಂಬುದರ ಕುರಿತು ತನ್ನ ನಿಲುವನ್ನು ತಿಳಿಸಬೇಕು ಎಂದು ಸರ್ಕಾರಕ್ಕೆ ಹೈಕೋರ್ಟ್​ ನಿರ್ದೇಶನ ನೀಡಿದೆ. ತಮ್ಮ ಒಪ್ಪಿಗೆಯಿಲ್ಲದೇ ಸೊಸೆಯ ಶವವನ್ನು ಮನೆಯ ಬಳಿ ಹೂಳಲಾಗಿದೆ. ಹಾಗಾಗಿ ಸಮಾಧಿಯನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ನಿರ್ದೇಶನ ನೀಡುವಂತೆ ಕೋರಿ ಬಂಗಾರಪೇಟೆಯ ತುರಾಂಡಹಳ್ಳಿಯ ಹೆಚ್‌. ಗೋಪಾಲಗೌಡ ಎಂಬುವರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜ್‌ ಅವರಿದ್ದ ಏಕ ಸದಸ್ಯಪೀಠ ಈ ನಿರ್ದೇಶನ …

Read More »

ಗೃಹಲಕ್ಷ್ಮಿಯರಿಗಾಗಿ ಸೊಸೈಟಿ; ಕಡಿಮೆ ಬಡ್ಡಿದರದಲ್ಲಿ ಸಿಗಲಿದೆ 3 ಲಕ್ಷ ರೂ. ಸಾಲ:

ಬೆಂಗಳೂರು: ರಾಜ್ಯದ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಲಾಭ ತಂದುಕೊಡುವ ಸಲುವಾಗಿ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘ ಆರಂಭಿಸಲಾಗುತ್ತಿದೆ. ಮೂರು ತಿಂಗಳಲ್ಲಿ ಜಿಲ್ಲಾ ಮಟ್ಟದಲ್ಲಿ ಸೊಸೈಟಿ ವಿಸ್ತರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​ ಹೇಳಿದ್ದಾರೆ. ನಗರದ ಕಂಠೀರವ ಸ್ಟೇಡಿಯಂನಲ್ಲಿ ನ.19ರಂದು ನಡೆಯಲಿರುವ ಐಸಿಡಿಎಸ್ ಯೋಜನೆಯ ಅಂಗನವಾಡಿ ಸುವರ್ಣ ಮಹೋತ್ಸವ, ಅಕ್ಕ ಪಡೆ ಲೋಕಾರ್ಪಣೆ, ಗೃಹಲಕ್ಷ್ಮಿ ಬ್ಯಾಂಕ್ ಉದ್ಘಾಟನೆ ಕುರಿತು ಡಾ.ಬಾಬು ಜಗಜೀವನರಾಮ್ ಆಡಿಟೋರಿಯಂ ಮತ್ತು ತರಬೇತಿ ಕೇಂದ್ರದಲ್ಲಿ …

Read More »

ಕಬ್ಬು ಬೆಳೆಗಾರರ ಜೊತೆ ಸಚಿವರ ಸಂಧಾನ ಸಭೆ ವಿಫಲ: ಮಿನಿಸ್ಟರ್​​ ಕಾರಿಗೆ ರೈತರ ಮುತ್ತಿಗೆ

ಚಿಕ್ಕೋಡಿ, ಬೆಳಗಾವಿ: ಕಳೆದ ಏಳು ದಿನಗಳಿಂದ ನಡೆದಿರುವ ಕಬ್ಬು ಬೆಳೆಗಾರರ ಹೋರಾಟ ಕೊನೆಗೊಳಿಸಲು ಸರ್ಕಾರದ ಪರವಾಗಿ ಕಾನೂನು ಸಚಿವ ಎಚ್ ಕೆ ಪಾಟೀಲ್ ಬೆಳಗಾವಿಗೆ ಆಗಮಿಸಿ ಸಂಧಾನ ಮಾತುಕತೆ ನಡೆಸಿದರು. ನಾಳೆಯೇ ಸರ್ಕಾರ ಒಂದು ನಿರ್ಧಾರ ಪ್ರಕಟಿಸಬೇಕು ಎಂದು ರೈತರು ಪಟ್ಟು ಹಿಡಿದರು. ಆದರೆ, ಸಚಿವರು ಏಳನೇ ತಾರೀಖಿನವರೆಗೂ ಕಾಲಾವಕಾಶ ಕೇಳಿದರು. ಇದಕ್ಕೆ ಕಬ್ಬು ಬೆಳೆಗಾರರು ಒಪ್ಪದೇ ಇದ್ದಾಗ ಮಾತುಕತೆ ಮುರಿದು ಬಿತ್ತು. ಇದರಿಂದ ಆಕ್ರೋಶಗೊಂಡ ರೈತರು ಸಚಿವರ ಕಾರಿಗೆ ಮುತ್ತಿಗೆ …

Read More »

ಹುಕ್ಕೇರಿ : ಸತಿ – ಪತಿಯರಲ್ಲಿ ಸಾಮರಸ್ಯ ಕೂಡಿರಲಿ – ಯರನಾಳ ಬ್ರಹ್ಮಾನಂದ ಅಜ್ಜನವರು.

ಹುಕ್ಕೇರಿ : ಸತಿ – ಪತಿಯರಲ್ಲಿ ಸಾಮರಸ್ಯ ಕೂಡಿರಲಿ – ಯರನಾಳ ಬ್ರಹ್ಮಾನಂದ ಅಜ್ಜನವರು. ಸತಿ ಪತಿಯರು ಸಾಮರಸ್ಯದಿಂದ ಬಾಳಿದರೆ ಕುಟುಂಬದಲ್ಲಿ ಸೌಖ್ಯ ಕಾಣಬಹುದು ಎಂದು ಹುಕ್ಕೇರಿ ತಾಲೂಕಿನ ಯರನಾಳ ಕಾಳಿಕಾ ಮಠದ ಬ್ರಹ್ಮಾನಂದ ಅಜ್ಜನವರು ಹೇಳಿದರು. ಹುಕ್ಕೇರಿ ತಾಲೂಕಿನ ಯರನಾಳ ಕಾಳಿಕಾ ಮಠದ ಜಾತ್ರಾ ಮಹೋತ್ಸವ ಅಂಗವಾಗಿ ಕಾರಿಮಠದ ಗುರುಸಿದ್ದ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಜರುಗಿದ ಶಿವಾನುಭವ ಗೋಷ್ಟಿ ಯಲ್ಲಿ ಭಕ್ತರನ್ನು ಉದ್ದೇಶಿಸಿ ಮಾತನಾಡಿದ ಬ್ರಹ್ಮಾನಂದ ಅಜ್ಜನವರು ಕುಟುಂಬದಲ್ಲಿ …

Read More »