ಬೆಂಗಳೂರು: ಮಾದಕ ಪದಾರ್ಥಗಳ ಮಾರಾಟ ದಂಧೆಯಲ್ಲಿ ತೊಡಗಿದ್ದ ನೈಜೀರಿಯಾ ಪ್ರಜೆಯನ್ನ ಸಿಸಿಬಿಯ ಪೊಲೀಸರು ಬಂಧಿಸಿದ್ದಾರೆ. ಅರ್ನೆಸ್ಟ್ ಯುಗಾಹ್ಸ್ (45) ಬಂಧಿತ ಆರೋಪಿ. ಆತನಿಂದ 2.5 ಕೆ.ಜಿ ಎಂಡಿಎಂಎ, 300 ಎಕ್ಸ್‌ಟಸಿ ಮಾತ್ರೆಗಳ ಸಹಿತ ಒಟ್ಟು 5.15 ಕೋಟಿ ರೂಪಾಯಿ ಮೌಲ್ಯದ ಮಾದಕ ಪದಾರ್ಥಗಳನ್ನ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಹಿಂದೆ ಕಾಡುಗೋಡಿ, ಹೆಣ್ಣೂರು ಠಾಣೆಗಳಲ್ಲಿ ಅರ್ನೆಸ್ಟ್ ವಿರುದ್ಧ ಪ್ರಕರಣಗಳು ದಾಖಲಾಗಿದ್ದವು. ಇತ್ತೀಚಿಗೆ ಜೈಲಿನಿಂದ ಬಿಡುಗಡೆಯಾಗಿದ್ದ ಆರೋಪಿ ಪುನಃ ಮಾದಕ ದಂಧೆ …
Read More »ಜನವರಿ 22ರಿಂದ ಜನವರಿ 31ರವರೆಗೆ ಜಂಟಿ ಅಧಿವೇಶನ, ನರೇಗಾ ಬಗ್ಗೆ ವಿಶೇಷ ಚರ್ಚೆ: ಸಿಎಂ
ಬೆಂಗಳೂರು: ಜನವರಿ 22 ರಿಂದ ಜನವರಿ 31ರ ವರೆಗೆ ಜಂಟಿ ಅಧಿವೇಶನ ನಡೆಯಲಿದ್ದು, ಅಧಿವೇಶನದ ವೇಳೆ ನರೇಗಾ(MGNREGA) ಯೋಜನೆ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಿನಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಂಟಿ ಅಧಿವೇಶನ ನಡೆಯಲಿದ್ದು, ರಾಜ್ಯಪಾಲರ ಭಾಷಣ ಮತ್ತು ನರೇಗಾ(MGNREGA) ಯೋಜನೆ ಬದಲಾವಣೆಯ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ. ಅಧಿವೇಶನದ ನಂತರ ಆಯವ್ಯಯದ ಸಿದ್ಧತೆ ಪ್ರಾರಂಭಿಸಲಾಗುವುದು ಎಂದು ತಿಳಿಸಿದರು. ನವದೆಹಲಿಗೆ ಭೇಟಿ ನೀಡುವ ಬಗ್ಗೆ …
Read More »ಕ್ರಾಂತಿ ಮಹಿಳಾ ಮಂಡಳ ಮತ್ತು ಉಮಾ ಸಂಗೀತ ಪ್ರತಿಷ್ಠಾನದಿಂದ ಹರಿಶಿನ ಕುಂಕುಮ ಕಾರ್ಯಕ್ರಮ ಭೂತಾಯಿಗೆ ಕೃತಜ್ಞತೆ ಸಲ್ಲಿಸುವ ಹಬ್ಬವೇ ಸಂಕ್ರಾಂತಿ: ಪ್ರೇಮಾ ದೇವಿ
ಕ್ರಾಂತಿ ಮಹಿಳಾ ಮಂಡಳ ಮತ್ತು ಉಮಾ ಸಂಗೀತ ಪ್ರತಿಷ್ಠಾನದಿಂದ ಹರಿಶಿನ ಕುಂಕುಮ ಕಾರ್ಯಕ್ರಮ ಭೂತಾಯಿಗೆ ಕೃತಜ್ಞತೆ ಸಲ್ಲಿಸುವ ಹಬ್ಬವೇ ಸಂಕ್ರಾಂತಿ: ಪ್ರೇಮಾ ದೇವಿ ಬೆಳಗಾವಿ ನಗರದ ಹಿಂದವಾಡಿಯಲ್ಲಿ ಕ್ರಾಂತಿ ಮಹಿಳಾ ಮಂಡಳ ಮತ್ತು ಉಮಾ ಸಂಗೀತ ಪ್ರತಿಷ್ಠಾನ ವತಿಯಿಂದ ಆಯೋಜಿಸಲಾದ ಹರಿಶಿನ ಕುಂಕುಮ ಕಾರ್ಯಕ್ರಮವನ್ನು ಪ್ರೇಮಾ ದೇವಿ ನಿಂಗಪ್ಪ ಅಣ್ಣಿಗೇರಿ ಮತ್ತು ಇಂದಿರಾ ಮಾಣಿಕ್ ಶಂಕರ್ ಗೌಡ ಇವರು ಭತ್ತದ ರಾಶಿಗೆ ಪೂಜೆ ಸಲ್ಲಿಸುವುದರ ಮೂಲಕ ಉದ್ಘಾಟಿಸಿದರು. ಈ ವೇಳೆ …
Read More »ಅವರು ಭಾಷಣದಲ್ಲಿ ಹಿಂದೂ ಹಿಂದೂ ಎನ್ನುತ್ತಿರುತ್ತಾರೆ, ನಾನು 152 ದೇವಸ್ಥಾನ ಕಟ್ಟಿ ಹಿಂದೂ ಸಂಸ್ಕೃತಿ ಉಳಿಸುತ್ತಿದ್ದೇನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಅವರು ಭಾಷಣದಲ್ಲಿ ಹಿಂದೂ ಹಿಂದೂ ಎನ್ನುತ್ತಿರುತ್ತಾರೆ, ನಾನು 152 ದೇವಸ್ಥಾನ ಕಟ್ಟಿ ಹಿಂದೂ ಸಂಸ್ಕೃತಿ ಉಳಿಸುತ್ತಿದ್ದೇನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಕೇವಲ ಭಾಷಣದಲ್ಲಿ ಹಿಂದೂ ಹಿಂದೂ ಎನ್ನುತ್ತಿರುತ್ತಾರೆ, ಆದರೆ ಹಿಂದೂಗಳಿಗೆ ಏನೂ ಮಾಡುವುದಿಲ್ಲ. ನಾನು ಕೇವಲ ಭಾಷಣ ಮಾಡದೆ, ಹಿಂದೂ ಸಂಸ್ಕೃತಿ ಉಳಿಸುತ್ತಿದ್ದೇನೆ, ಕ್ಷೇತ್ರದಲ್ಲಿ 152 ದೇವಸ್ಥಾನ ಕಟ್ಟಿಸಿದ್ದೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಿಂದೋಳ್ಳಿ ಗ್ರಾಮದಲ್ಲಿ …
Read More »ದೇಶದ್ರೋಹಿಗಳಿಗೆ 20 ಲಕ್ಷ, ಹಿಂದೂಗಳಿಗೆ ಏನೂ ಇಲ್ಲ: ವಿಜಯೇಂದ್ರ ಕಿಡಿ
ದೇಶದ್ರೋಹಿಗಳಿಗೆ 20 ಲಕ್ಷ, ಹಿಂದೂಗಳಿಗೆ ಏನೂ ಇಲ್ಲ: ವಿಜಯೇಂದ್ರ ಕಿಡಿ ಬಳ್ಳಾರಿಯಲ್ಲಿ ನಡೆದ ಪ್ರತಿಭಟನಾ ಸಮಾವೇಶದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ದೇಶದ್ರೋಹಿಗಳು ಸತ್ತರೆ 20 ಲಕ್ಷ ರೂ. ನೀಡುವ ಕಾಂಗ್ರೆಸ್ ಸರ್ಕಾರ, ಹಿಂದೂಗಳ ಹತ್ಯೆಯಾದರೆ ತಿರುಗಿಯೂ ನೋಡುವುದಿಲ್ಲ ಎಂದು ಆರೋಪಿಸಿದರು. ವಾಲ್ಮೀಕಿ ಸಮುದಾಯಕ್ಕೆ ಕಾಂಗ್ರೆಸ್ ಸರ್ಕಾರದಿಂದ ಏನೂ ಕೊಡುಗೆ ಇಲ್ಲ ಎಂದು ಪ್ರಶ್ನಿಸಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ …
Read More »ದರ್ಗಾ ಮೇಲೆ ಬಾಣ ಬಿಟ್ಟಂತ ಸನ್ನೆ: ಬೆಳಗಾವಿಯಲ್ಲಿ ಏಳು ಜನರ ಮೇಲೆ ಎಫ್ಐಆರ್ ದಾಖಲು
ಬೆಳಗಾವಿ: ಶೋಭಾ ಯಾತ್ರೆ ವೇಳೆ ಹಿಂದೂ ನಾಯಕಿಯೊಬ್ಬರು ದರ್ಗಾ ಬಳಿ ಬಾಣ ಬಿಟ್ಟಂತೆ ಸನ್ನೆ ಮಾಡಿದ ಘಟನೆ ನಡೆದಿದ್ದು, ಈ ಸಂಬಂಧ ಏಳು ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಬೆಳಗಾವಿಯ ಮಚ್ಚೆ ಗ್ರಾಮದ ಸಮೀಪ ನಡೆದ ಅಖಂಡ ಹಿಂದೂ ಸಮ್ಮೇಳನದ ಅಂಗವಾಗಿ ಭಾನುವಾರ ಆಯೋಜಿಸಿದ್ದ ಶೋಭಾ ಯಾತ್ರೆ ವೇಳೆ ಅನ್ಯಕೋಮಿನ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದಡಿ ಹಿಂದೂ ನಾಯಕಿ ಹರ್ಷಿತಾ ಠಾಕೂರ ಸೇರಿದಂತೆ ಒಟ್ಟು 7 ಜನರ ವಿರುದ್ಧ …
Read More »ಅಕ್ಕ ಪ್ರೀತಿಸುತ್ತಿದ್ದ ಹುಡುಗನನ್ನೇ ಹತ್ಯೆಗೈದ ಅಪ್ರಾಪ್ತ ಬಾಲಕ
ಅಕ್ಕ ಪ್ರೀತಿಸುತ್ತಿದ್ದ ಹುಡುಗನನ್ನೇ ಹತ್ಯೆಗೈದ ಅಪ್ರಾಪ್ತ ಬಾಲಕ ಬೆಳಗಾವಿ:ಅಕ್ಕ ಪ್ರೀತಿಸುತ್ತಿದ್ದ ಹುಡುಗನನ್ನೇ ಹತ್ಯೆಗೈದ ಅಪ್ರಾಪ್ತ ಬಾಲಕ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದಲ್ಲಿ ಘಟನೆ. ರಾಜಾಪುರ ಗ್ರಾಮದ ಮಂಜುನಾಥ ಸುಭಾಷ್ ಎಣ್ಣಿ (23) ಕೊಲೆಯಾದವ. ಕಳೆದ ಹಲವು ವರ್ಷಗಳಿಂದ ಅಪ್ರಾಪ್ತ ಸಹೋದರಿಯನ್ನು ಪ್ರೀತಿಸುತ್ತಿದ್ದ ಮಂಜುನಾಥ. ಅಕ್ಕನ ಉಸಾಬರಿಗೆ ಬರಬೇಡ ಎಂದು ಹಲವು ಸಲ ಮಂಜುನಾಥಗೆ ವಾರ್ನ್ ಮಾಡಿದ್ದ ಅಪ್ರಾಪ್ತ ಬಾಲಕ. ಆದರೂ ಅಪ್ರಾಪ್ತ ಅಕ್ಕನ ಜೊತೆಗೆ ಫೋನ್‌ನಲ್ಲಿ ಮಾತನಾಡುತ್ತಿದ್ದ …
Read More »ನಕ್ಸಲ್ ಚಟುವಟಿಕೆ ತ್ಯಜಿಸಿ ಶರಣಾಗಿದ್ದ 6 ಮಂದಿಯನ್ನು ಜೈಲಿನಿಂದ ಬಿಡುಗಡೆ ಮಾಡುವಂತೆ ಕುಟುಂಬಸ್ಥರ ಒತ್ತಾಯ
ರಾಯಚೂರು: ಕಳೆದ ವರ್ಷ ನಕ್ಸಲ್ ಚಟುವಟಿಕೆ ತ್ಯಜಿಸಿ ಶರಣಾಗಿದ್ದ ಆರು ಮಂದಿಯನ್ನು ಕೂಡಲೇ ಜೈಲಿನಿಂದ ಬಿಡುಗಡೆ ಮಾಡಬೇಕೆಂದು ಅವರು ಕುಟುಂಬಸ್ಥರು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು. ನಕ್ಸಲ್‌ಮುಕ್ತ ಕರ್ನಾಟಕವೆಂದು ರಾಜ್ಯ ಸರ್ಕಾರ ಘೋಷಿಸಿ ಒಂದು ವರ್ಷ ಗತಿಸಿದೆ. ಹೀಗಿದ್ದರೂ ಸರ್ಕಾರಕ್ಕೆ ಶರಣಾದ ಮಾನವಿ ತಾಲೂಕಿನ ಮಾರೆಪ್ಪ ಆರೋಲಿ, ಮುಂಡಗಾರು ಲತಾ, ಸುಂದರಿ ಕುತ್ತೂರು, ವನಜಾಕ್ಷಿ ಬಾಳೆಹೊಳೆ, ಕೆ.ವಸಂತ, ಟಿ.ಎನ್.ಜೀಶ ಅವರನ್ನು ಜೈಲಿನಿಂದ ಬಿಡುಗಡೆ ಮಾಡಿಲ್ಲ ಎಂದು ಮಾರೆಪ್ಪ ಆರೋಲಿ ಅವರ ಪುತ್ರ ಚನ್ನಬಸವ …
Read More »ಬಾದಾಮಿಗೆ ₹2,000 ಕೋಟಿ ಅನುದಾನ ನೀಡಲಾಗಿದೆ- ಸಿಎಂ
ಬಾಗಲಕೋಟೆ: ಬಾದಾಮಿ ಕ್ಷೇತ್ರಕ್ಕೆ ಕಳೆದೆರಡು ವರ್ಷಗಳಲ್ಲಿ 2,000 ಕೋಟಿ ರೂ. ಅನುದಾನ ನೀಡಲಾಗಿದೆ. ಬಾದಾಮಿಯ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಬಾಗಲಕೋಟೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ ವತಿಯಿಂದ ಸೋಮವಾರ ಬಾದಾಮಿಯ ಇಮ್ಮಡಿ ಪುಲಿಕೇಶಿ ವೇದಿಕೆಯಲ್ಲಿ ಆಯೋಜಿಸಲಾಗಿದ್ದ ಚಾಲುಕ್ಯ ಉತ್ಸವ -2026 ಉದ್ಘಾಟಿಸಿ ಸಿಎಂ ಮಾತನಾಡಿದರು. ಚಾಲುಕ್ಯರು ನಿರ್ಮಿಸಿದ ದೇಗುಲಗಳ ವಾಸ್ತುಶಿಲ್ಪದ ಮಹತ್ವ ಅರಿಯುವ ಉದ್ದೇಶವನ್ನು …
Read More »ರಾಸಲೀಲೆಯ ವಿಡಿಯೋ ವೈರಲ್: IPS ಅಧಿಕಾರಿ ಡಾ.ಕೆ.ರಾಮಚಂದ್ರರಾವ್ ಸಸ್ಪೆಂಡ್
ಬೆಂಗಳೂರು: ರಾಸಲೀಲೆಯ ವಿಡಿಯೋ ವೈರಲ್ ಆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಿರಿಯ ಐಪಿಎಸ್ ಅಧಿಕಾರಿ, ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಡಿಜಿಪಿ ಡಾ.ಕೆ.ರಾಮಚಂದ್ರರಾವ್ ಅವರನ್ನು ರಾಜ್ಯ ಸರ್ಕಾರ ಸೇವೆಯಿಂದ ಸಸ್ಪೆಂಡ್ ಮಾಡಿ ಸೋಮವಾರ ರಾತ್ರಿ ಆದೇಶ ಹೊರಡಿಸಿದೆ. ಸರ್ಕಾರಿ ಕರ್ತವ್ಯದಲ್ಲಿ, ಸಮವಸ್ತ್ರದಲ್ಲಿ ಇರುವಾಗಲೇ ಮಹಿಳೆಯರ ಜತೆ ಅಸಭ್ಯವಾಗಿ ವರ್ತಿಸಿದ್ದಾರೆ ಎನ್ನಲಾದ ವೈರಲ್ ವಿಡಿಯೋವನ್ನು ಗಂಭೀರವಾಗಿ ಪರಿಗಣಿಸಿದ ಸರ್ಕಾರ ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತು ಮಾಡಿದೆ. ಹಿರಿಯ ಪೊಲೀಸ್ ಅಧಿಕಾರಿ (ಕೆಎನ್: 1993ರ ಬ್ಯಾಚ್) …
Read More »
Laxmi News 24×7