Breaking News

ರಾಜಕೀಯ

ಪ್ರತಾಪ್ ಸಿಂಹ ಅಲ್ಲ.. ಯದುವೀರ್ ಅಲ್ಲ.. ಮೈಸೂರಿನಿಂದ ಕಣಕ್ಕಿಳಿಯುತ್ತಾರಾ ಸುಮಲತಾ?

ಮೈಸೂರು, ಮಾರ್ಚ್ 12: ಲೋಕಸಭಾ ಚುನಾವಣೆ ಹತ್ತಿರಕ್ಕೆ ಬರುತ್ತಿದ್ದಂತೆ ಒಂದೊಂದು ಕ್ಷೇತ್ರದಲ್ಲಿಯೂ ಲೆಕ್ಕಾಚಾರಗಳು ಬದಲಾಗುತ್ತಿವೆ. ಇಷ್ಟು ದಿನ ಮಂಡ್ಯ ಇಂತಹ ಗೊಂದಲದಿಂದ ಸಕತ್ ಸುದ್ದಿಯಾಗುತ್ತಿತ್ತು. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಿಂದಾಗಿ ಹಾಲಿ ಸಂಸದೆ ಸುಮಲತಾ ಅವರಿಗೆ ಟಿಕೆಟ್ ಕೈ ತಪ್ಪುವ ಭಯವಿದೆ. ದೇ ಬೆನ್ನಲ್ಲೇ ಮೈಸೂರು ಕ್ಷೇತ್ರದಿಂದ ಅಚ್ಚರಿಯ ಬೆಳವಣಿಗೆಯೊಂದು ಸುದ್ದಿಯಾಗಿದೆ.ಹೌದು.. ಮೈಸೂರು – ಕೊಗಡು ಕ್ಷೇತ್ರಗಳ ಹಾಲಿ ಸಂಸದ ಪ್ರತಾಪ್ ಸಿಂಹ ಅವರಿಗೆ ಈ ಬಾರಿ ಟಿಕೆಟ್ ಕೈ …

Read More »

ಕಮರ್ಷಿಯಲ್ ಟ್ಯಾಕ್ಸ್ ಅಧಿಕಾರಿ ಲೋಕಾಯುಕ್ತ ಬಲೆಗೆ

ತುಮಕೂರು: ಲಂಚಕ್ಕೆ ಕೈಯೊಡ್ಡಿದಾಗಲೇ ಕಮರ್ಷಿಯಲ್ ಟ್ಯಾಕ್ಸ್ ಅಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಜಿಎಸ್ ಟಿ ಹಣ ಕಡಿತ ಮಾಡಲು 40 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.ಮಂಜುನಾಥ್ ವಿ.ಕೆ. ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ.   ಮಂಜುನಾಥ್ ರೆಡ್ಡಿ ಎಂಬುವವರ ಬಳಿ 50 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಒಡ್ಡಿದ್ದರು. ಮಂಜುನಾಥ್ ರೆಡ್ಡಿ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಮುಂಗಡವಾಗಿ 40 ಸಾವಿರ …

Read More »

ಬರದಿಂದ ತತ್ತರಿಸಿರುವ ರಾಜ್ಯದ ಜನತೆಗೆ ಗುಡ್ ನ್ಯೂಸ್ : ʻಅಂತರ್ಜಲ ಮಟ್ಟʼ ಹೆಚ್ಚಳಕ್ಕೆ ಮಹತ್ವದ ಕ್ರಮ

ಬೆಂಗಳೂರು : ಬರದಿಂದ ತತ್ತರಿಸಿರುವ ರಾಜ್ಯದ ಜನತೆಗೆ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಅಂತರ್ಜಲ ಹೆಚ್ಚಳಕ್ಕೆ ಮಹತ್ವದ ಕ್ರಮ ಕೈಗೊಂಡಿದೆ. ಭಾರತೀಯ ವಿಜ್ಞಾನ ಸಂಸ್ಥೆ ಸಹಯೋಗದಲ್ಲಿ ಅಂತರ್ಜಲ ಮಟ್ಟ ಹೆಚ್ಚಳಕ್ಕೆ ತುರ್ತು ಹಾಗೂ ದೀರ್ಘಕಾಲದ ಕ್ರಮಗಳನ್ನು ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ.   ಬೆಳ್ಳಂದೂರು, ವರ್ತೂರು ಕೆರೆಗಳು ಬರಿದಾಗಿರುವುದರಿಂದ ಆ ಪ್ರದೇಶಗಳಲ್ಲಿ ಅಂತರ್ಜಲ ಕಡಿಮೆಯಾಗಿದೆ. 1,300 ಎಂಎಲ್ಡಿ ಸಂಸ್ಕರಿಸಿದ ಗುಣಮಟ್ಟದ ನೀರನ್ನು ಕೆರೆಗಳಿಗೆ ತುಂಬಿಸಲು ಉದ್ದೇಶಿಸಲಾಗಿದೆ ಜಲಮಂಡಳಿ ಅಧ್ಯಕ್ಷ ಡಾ. ರಾಮ್ಪ್ರಸಾತ್ ಮನೋಹರ್ ತಿಳಿಸಿದ್ದಾರೆ. …

Read More »

ರಾಜ್ಯ ಸರ್ಕಾರದಿಂದ ‘ಫೇಕ್ ನ್ಯೂಸ್’ ತಡೆಗೆ ಮಹತ್ವದ ಕ್ರಮ: ಶೀಘ್ರವೇ ‘ಆದೇಶ’ ಪ್ರಕಟ

ಬೆಂಗಳೂರು: ರಾಜ್ಯದಲ್ಲಿ ಫೇಕ್ ನ್ಯೂಸ್ ಹಾವಳಿ ತಪ್ಪಿಸೋದಕ್ಕೆ ಸರ್ಕಾರದಿಂದ ಮಹತ್ವದ ಕ್ರಮ ಕೈಗೊಳ್ಳೋದಕ್ಕೆ ಮುಂದಾಗಿದೆ. ಈ ಸಂಬಂಧ ಶೀಘ್ರವೇ ಆದೇಶ ಕೂಡ ಪ್ರಕಟವಾಗಲಿದೆ. ಈ ಕುರಿತಂತೆ ಇಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರ ನೇತೃತ್ವದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಮಹತ್ವದ ಸಭೆ ನಡೆಯಿತು. ಈ ಸಭೆಯ ಬಳಿಕ ಮಾತನಾಡಿದಂತ ಅವರು ರಾಜ್ಯದಲ್ಲಿ ಫೇಕ್ ನ್ಯೂಸ್ ನಿಯಂತ್ರಣದ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದರು.   ಫೇಕ್ ನ್ಯೂಸ್ ಪತ್ತೆ ಹಚ್ಚುವುದು …

Read More »

ಕೇಂದ್ರ ಸರ್ಕಾರಿ ನೌಕರರಿಗೆ D.A 4 % ಹೆಚ್ಚಳ : ಕೇಂದ್ರದಿಂದ ಅಧಿಕೃತ ಆದೇಶ..!

ನವದೆಹಲಿ : ಕೇಂದ್ರ ಸರ್ಕಾರಿ ನೌಕರರಿಗೆ ಶೇ. 4 ತುಟ್ಟಿಭತ್ಯೆ ಹೆಚ್ಚಳ ಮಾಡಿ ಕೇಂದ್ರ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಜನವರಿ 1, 2024 ರಿಂದ ಜಾರಿಗೆ ಬರುವಂತೆ ಮೂಲ ವೇತನದ 46% ರಿಂದ 50% ಕ್ಕೆ ಹೆಚ್ಚಿಸಲಾಗುವುದು. ತುಟ್ಟಿಭತ್ಯೆಯು ಸಂಭಾವನೆಯ ಒಂದು ವಿಶಿಷ್ಟ ಅಂಶವಾಗಿ ಮುಂದುವರಿಯುತ್ತದೆ ಮತ್ತು ಎಫ್‌ಆರ್ 9 (21) ರ ವ್ಯಾಪ್ತಿಯಲ್ಲಿ ವೇತನವೆಂದು ಪರಿಗಣಿಸಲಾಗುವುದಿಲ್ಲ.50 ಪೈಸೆಗಿಂತ ಕಡಿಮೆ ಭಾಗಗಳನ್ನು ನಿರ್ಲಕ್ಷಿಸಬಹುದು ಎಂದು ಹೇಳಲಾಗಿದೆ.   ಪ್ರಧಾನಿ …

Read More »

ಟಿಕೆಟ್ ಕೊಟ್ಟರೆ 100% ಕಾಂಗ್ರೆಸ್ ನಿಂದ ನಿಲ್ತೀನಿ -ಸಾಧು ಕೋಕಿಲಾ

ಕಾಂಗ್ರೆಸ್ ಪಕ್ಷ ಟಿಕೆಟ್ ಕೊಟ್ಟರೆ ಚುನಾವಣೆ ಎದುರಿಸುತ್ತೇನೆ ಎಂದು ನಟ ಸಾಧು ಕೋಕಿಲಾ ಹೇಳಿದ್ದಾರೆ. ನಾನು ಒಂದು ಧರ್ಮಕ್ಕೆ ಸೀಮಿತಿ ಆಗಿಲ್ಲ. ಬೆಂಗಳೂರಿನಲ್ಲಿ ನಾನು ಜನರಲ್ ಕಂಪಾರ್ಟಮೆಂಟ್. ನನ್ನನ್ನ ಎಲ್ಲಾ ಜಾತಿ ಧರ್ಮದವರು ಗುರುತಿಸುತ್ತಾರೆ. ನನ್ನ ಹಿನ್ನಲೆ ಜನರಿಗೆ ಗೊತ್ತಿದೆ.ನನನ್ನು ಯಾವ ಜಾತಿಗೂ ಸೇರಿಸಬೇಡಿ. ನಾನು ಎಲ್ಲರಿಗೂ ಸೇರಿದವನು. ಬೆಂಗಳೂರು 15 ಲಕ್ಷ ಜನ ಕ್ರಿಶ್ಚಿಯನ್ ಸಮುದಾಯದವರು ಇದ್ದಾರೆ. ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಹೆಚ್ಚು ಕ್ರಿಶ್ಚಿಯನ್ ಸಮುದಾಯದವರು ಇದ್ದಾರೆ. ಕ್ರಿಶ್ಚಿಯನ್ …

Read More »

ಪಕ್ಷವು ಗುಡಿಸು ಅಂದ್ರೆ ಗುಡಿಸುತ್ತೇವೆ, ಒರೆಸು ಅಂದ್ರೆ ಒರೆಸುತ್ತೇವೆ: ಕಟೀಲು

ಮಂಗಳೂರು, ಮಾ.12: ನಾವು ಪಕ್ಷ ಏನೇ ಹೇಳಿದರೂ ಮಾಡುತ್ತೇವೆ. ಪಕ್ಷದವರು ನಮ್ಮ ಬಳಿ ಗುಡಿಸು ಅಂದರೆ ಗುಡಿಸುತ್ತೇವೆ. ಒರೆಸು ಅಂದರೆ ಒರೆಸುತ್ತೇವೆ. ನಮಗೆ ಅಧಿಕಾರವೇ ಪ್ರಾಮುಖ್ಯ ಅಲ್ಲ. ಏನು ಬದಲಾವಣೆ ಮಾಡಬೇಕೋ ಅದನ್ನು ರಾಷ್ಟ್ರೀಯ ನಾಯಕರು ಮಾಡುತ್ತಾರೆ ಎಂದು ಸಂಸದ, ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ. ಲೋಕಸಭೆ ಚುನಾವಣೆಗೆ ನಳಿನ್ ರಿಗೆ ಬಿಜೆಪಿ ಟಿಕೆಟ್ ಕೈತಪ್ಪುವ ಸಾಧ್ಯತೆ ಇದೆ ಎಂದು ವರದಿಗಳಾಗಿವೆ. ಈ ಹಿನ್ನೆಲೆಯಲ್ಲಿ ಮಾಧ್ಯಮದವರಿಗೆ …

Read More »

ಕರ್ನಾಟಕದಲ್ಲಿ ಮುಂದಿನ ಸಲ ನಾನೂ ಸಿಎಂ ಆಗ್ತೀನಿ – ಯತ್ನಾಳ್ ಕಿಡಿ

ಯಾದಗಿರಿ:-ಕರ್ನಾಟಕದಲ್ಲಿ ಮುಂದಿನ ಸಲ ನಾನೂ ಬರ್ತೀನಿ, ನಾನೇ ಸಿಎಂ ಆಗ್ತಿನಿ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಬಾಂಬ್‌ ಸಿಡಿಸಿದ್ದಾರೆ. ಕರ್ನಾಟಕದಲ್ಲಿ ವಿಜಯೇಂದ್ರನನ್ನು ನೋಡಿ ವೋಟ್‌ ಹಾಕೋದಿಲ್ಲ. ಏಕೆಂದರೆ ಇದು ಮೋದಿ ಚುನಾವಣೆ, ವಿಜಯೇಂದ್ರನನ್ನ ತೆಗೆದುಕೊಂಡು ಏನು ಮಾಡೋದು. ವಿಜಯೇಂದ್ರ ಪಾರ್ಟಿ ಅಧ್ಯಕ್ಷ ಆಗಿರಲಿ, ಸುಡುಗಾಡಾದ್ರೂ ಆಗಿರಲಿ. ರಾಜ್ಯದಲ್ಲಿ ಈ ಸಲ ಬಿಜೆಪಿ 28 ಸ್ಥಾನ ಗೆದ್ದೇ ಗೆಲ್ಲುತ್ತೆ. ಇದಕ್ಕೆ ವಿಜಯೇಂದ್ರ ಸಂಬಂಧಪಡಲ್ಲ ಎಂದು ಕಿಡಿ ಕಾರಿದ್ದಾರೆ   …

Read More »

21 ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ಇಲ್ಲಿದೆ ನೋಡಿ

ಈ ಹಿನ್ನೆಲೆ ಕೆಪಿಸಿಸಿ ‌ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಹಾಗೂ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೆವಾಲಾ ಸೇರಿದಂತೆ ಹಲವು ನಾಯಕರ ಜೊತೆಗೆ ಸಭೆ ನಡೆಸಿದ್ದು, ಸಭೆಯಲ್ಲಿ 21 ಲೋಕಸಭೆ ಕ್ಷೇತ್ರದ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಚರ್ಚೆ ನಡೆದಿದೆ. ಈ ಆಕಾಂಕ್ಷಿಗಳ ಪಟ್ಟಿಯನ್ನ ಹೈಕಮಾಂಡ್‌ ಮುಂದೆ ಇಟ್ಟಿದ್ದು, ಕಾಂಗ್ರೆಸ್‌ ಹೈಕಮಾಂಡ್‌ ಯಾರಿಗೆ ಮಣೆ ಹಾಕುತ್ತೆ ಎಂಬುದನ್ನ ಕಾದುನೋಡ್ಬೇಕಾಗಿದೆ. ಕರ್ನಾಟಕದ 7 ಕ್ಷೇತ್ರಕ್ಕೆ ಅಭ್ಯರ್ಥಿಗಳ ಪಟ್ಟಿ …

Read More »

ಅಪಾಯಕಾರಿ ಕಾಟನ್ ಕ್ಯಾಂಡಿ,ಗೋಬಿ ಮಂಚೂರಿಯನ್ನು ಮಾರಾಟ ಮಾಡುವಂತಿಲ್ಲ: ದಿನೇಶ್ ಗುಂಡೂರಾವ್

ಬೆಂಗಳೂರು : ಅಪಾಯಕಾರಿ ಕಾಟನ್ ಕ್ಯಾಂಡಿ,ಗೋಬಿ ಮಂಚೂರಿಯನ್ನು ಮಾರಾಟ ಮಾಡುವಂತಿಲ್ಲ ಎಂದು ಆರೋಗ್ಯ ಸಚಿವ‌ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ವಿಧಾನಸೌಧ ದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಸಚಿವರು,ಗೋಬಿ ಮಂಚೂರಿ, ಕಾಟನ್ ಕ್ಯಾಂಡಿಯಲ್ಲಿ ಅಪಾಯಕಾರಿ ಕೃತಕ ಬಣ್ಣ ಬಳಕೆ ಹೆಚ್ಚಾಗಿರುವುದು ಆಹಾರ ತಪಾಸಣೆಯಲ್ಲಿ ಕಂಡು ಬಂದಿದೆ ಎಂದು ಹೇಳಿದರು. ಒಂದು ವೇಳೆ ಯಾರಾದರೂ ಇವುಗಳನ್ನು ಮಾರಾಟ ಮಾಡಿದರೆ ಅಥವಾ ಅಪಾಯಕಾರಿ ಕೃತಕ ಬಣ್ಣ ಬಳಕೆ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ …

Read More »