Breaking News

ರಾಜಕೀಯ

ಸಿದ್ದರಾಮಯ್ಯ ಬಗ್ಗೆ ಅನಂತ್​ಕುಮಾರ್​ ಹೆಗಡೆ ವ್ಯಂಗ್ಯ; ಸಚಿವ ಎಚ್​.ಕೆ. ಪಾಟೀಲ್​ ತಿರುಗೇಟು!

ಬಾಗಲಕೋಟೆ: ಸಿದ್ದರಾಮಯ್ಯ ಸರ್ಕಾರದಲ್ಲಿ ಅಧಿಕಾರಿಗಳಿಗೆ, ಶಾಸಕರಿಗೆ ಪಗಾರ ಕೊಡಲು ಹಣವಿಲ್ಲ ಎಂದು ಸಂಸದ ಅನಂತಕುಮಾರ ಹೆಗಡೆ ಮಾಡಿದ ಟೀಕಾಪ್ರಹಾರಕ್ಕೆ ಪ್ರತಿಕ್ರಿಯಿಸಿದ ಸಚಿವ ಹೆಚ್.ಕೆ. ಪಾಟೀಲ್, ಯಾವ ಶಾಸಕ ಪಗಾರ ಇಲ್ಲದೇ ಇದ್ದಾರೆ? ಹೇಳಿ ನೋಡೋಣ ಎಂದು ಹೇಳಿದ್ದಾರೆ.   ಬಾಗಲಕೋಟೆಯ ಬಾದಾಮಿ ತಾಲೂಕಿನ ಹೂಲಗೇರಿ ಗ್ರಾಮದಲ್ಲಿ ಮಾತನಾಡಿದ ಸಚಿವ ಹೆಚ್.ಕೆ. ಪಾಟೀಲ್, ಯಾವ ಶಾಸಕ ಪಗಾರ ಇಲ್ಲದೆ ಇದ್ದಾರೆ ಹೇಳಿ? ನಾನು ಮಂತ್ರಿ ಇದ್ದೇನೆ, ಇಲ್ಲೇ ಶಾಸಕರು ಸಹ ಇದ್ದಾರೆ. ನಮ್ಮ …

Read More »

ಕಳಸಾ-ಬಂಡೂರಿ: ಪರಿಸರ ಇಲಾಖೆ ಅನುಮತಿ ನೀಡಿದರೆ ನಾಳೆಯೇ ಕಾಮಗಾರಿ ಆರಂಭ: ಸಿಎಂ

ನವಲಗುಂದ: ‘ಕಳಸಾ-ಬಂಡೂರಿ (ಮಹಾದಾಯಿ) ಯೋಜನೆಯ ಚಂಡು ಕೇಂದ್ರ ಸರ್ಕಾರದ ಅಂಗಳದಲ್ಲಿದೆ. ಕೇಂದ್ರ ಪರಿಸರ ಇಲಾಖೆಯ ಇವತ್ತು ಅನುಮತಿ ನೀಡಿದರೆ ನಾಳೆಯೇ ಕೆಲಸ ಆರಂಭಿಸುತ್ತೇವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ನವಲಗುಂದದ ಮಾಡೆಲ್‌ ಹೈಸ್ಕೂಲ್‌ ಆವರಣದಲ್ಲಿ ಶನಿವಾರ ಏರ್ಪಡಿಸಿದ್ದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಗ್ಯಾರಂಟಿ ಕಾರ್ಯಕ್ರಮಗಳ ಫಲಾನುಭವಿಗಳ ಸಮಾವೇಶದಲ್ಲಿ ಅವರು ಮಾತನಾಡಿದರು. ಕಳಸಾ- ಬಂಡೂರಿ ಯೋಜನಗೆ ಟೆಂಡರ್‌ ಆಹ್ವಾನಿಸಲಾಗಿದೆ. ಆದರೆ, ಯೋಜನೆಗೆ ಪರಿಸರ ಇಲಾಖೆ ಅನುಮೋದನೆ ನೀಡಬೇಕಿದೆ, ಆ …

Read More »

ಬೆಳಗಾವಿ: ಖ್ಯಾತ ವೈದ್ಯ ಡಾ.ಕೊಡಕಣಿ ನಿಧನ

ಬೆಳಗಾವಿ: ಇಲ್ಲಿನ ಖ್ಯಾತ ಪ್ರಸ್ತೂತಿ ಮತ್ತು ಸ್ತ್ರೀರೋಗ ತಜ್ಞ ವೈದ್ಯರಾಗಿದ್ದ ಡಾ.ಬಿ.ಎಸ್. ಕೊಡಕಣಿ (89) ಅವರು ಗುರುವಾರ ನಿಧನರಾದರು. 1959ರಲ್ಲಿ ಬರೋಡಾ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ಪದವಿ ಪಡೆದ ಅವರು 1962ರಲ್ಲಿ ಸ್ತ್ರೀರೋಗ ಶಾಸ್ತ್ರದಲ್ಲಿ ಎಂ.ಡಿ. ಪದವೀಧರರಾಗಿ, ಮುಂಬೈ ಆಸ್ಪತ್ರೆಯಲ್ಲಿ ನಾಲ್ಕು ವರ್ಷಗಳ ರಿಜಿಸ್ಟ್ರಾರ್‌ ಆಗಿ ಸೇವೆಸಲ್ಲಿಸಿದ್ದರು. 1966ರಲ್ಲಿ ಜವಾಹರಲಾಲ್‌ ನೆಹರು ವೈದ್ಯಕೀಯ ಮಹಾವಿದ್ಯಾಲಯದ ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗದ ಮುಖ್ಯಸ್ಥರಾಗಿ ನೇಮಕಗೊಂಡರು. ಇಂಗ್ಲೆಂಡ್, ಯೂರೋಪ, ಕೆನಡಾ, ಅಮೆರಿಕಾಗಳಲ್ಲಿ ಉಪನ್ಯಾಸಕರಾಗಿ, …

Read More »

ಯಲ್ಲಮ್ಮನಗುಡ್ಡ: ಭಾರತ ಹುಣ್ಣಿಮೆ ಜಾತ್ರೆಗೆ ಜನಸಾಗರ

ಯಲ್ಲಮ್ಮನಗುಡ್ಡ (ಬೆಳಗಾವಿ ಜಿಲ್ಲೆ): ಇಲ್ಲಿನ ಯಲ್ಲಮ್ಮನ ಸನ್ನಿಧಾನದಲ್ಲಿ ಶನಿವಾರ ಅಪಾರ ಸಂಖ್ಯೆ ಭಕ್ತಾದಿಗಳ ಸಮ್ಮುಖದಲ್ಲಿ ಭಾರತ ಹುಣ್ಣಿಮೆ ಜಾತ್ರೆ ಸಡಗರದಿಂದ ನೆರವೇರಿತು. ಕೋವಿಡ್‌ ಮತ್ತು ಬರಸ್ಥಿತಿಯಿಂದಾಗಿ ಇತ್ತೀಚಿನ ವರ್ಷಗಳಲ್ಲಿ ಜಾತ್ರೆ ಸಂಭ್ರಮ ಕಳೆಗುಂದಿತ್ತು. ಈಗ ಮತ್ತೆ ವೈಭವ ಮರುಕಳಿಸಿದೆ. ಕೆಲವರು ಚಕ್ಕಡಿಗಳಲ್ಲಿ, ಇನ್ನೂ ಕೆಲವರು ಕಾಲ್ನಡಿಗೆಯಲ್ಲಿ ಗುಡ್ಡಕ್ಕೆ ಬಂದರು. ಯಲ್ಲಮ್ಮ ದೇವಸ್ಥಾನ, ಸುತ್ತಲಿನ ದೇಗುಲಗಳಲ್ಲಿ ಕಾರ್ಯಕ್ರಮ ನಡೆದವು. ಕರ್ನಾಟಕದ ಜಿಲ್ಲೆಗಳಲ್ಲದೇ, ನೆರೆಯ ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶಗಳಿಂದಲೂ ಅಪಾರ ಸಂಖ್ಯೆಯಲ್ಲಿ ಬಂದಿದ್ದ …

Read More »

ಚನ್ನವೀರಯ್ಯ, ಶಿವಾಜಿಗೆ ಪ್ರಶಸ್ತಿ

ಮುಗಳಖೋಡ: ಬೆಳಗಾವಿ ಸಪ್ತಸ್ವರ ಸಂಗೀತ ಕಲಾ ಬಳಗದ ವತಿಯಿಂದ ನೀಡಲಾಗುವ ‘ಗಡಿನಾಡು ಪತ್ರಿಕಾ ಮಾಧ್ಯಮ ರತ್ನ’ ‍ರಾಜ್ಯಮಟ್ಟದ ಪ್ರಶಸ್ತಿಗೆ ಸಮೀಪದ ಹಂದಿಗುಂದದ ಚನ್ನವೀರಯ್ಯ ಹಿರೇಮಠ ಮತ್ತು ‘ಕರ್ನಾಟಕ ಪತ್ರಿಕಾ ಮಾಧ್ಯಮ ರತ್ನ’ ಪ್ರಶಸ್ತಿಗೆ ಪಾಲಭಾವಿಯ ಶಿವಾಜಿ ಮೇತ್ರಿ ಆಯ್ಕೆಯಾಗಿದ್ದಾರೆ.   ಫೆ.26ರಂದು ಇಲ್ಲಿನ ಕುಮಾರ ಗಂಧರ್ವ ರಂಗಮಂದಿರದಲ್ಲಿ ನಡೆಯಲಿರುವ ವಿಶ್ವ ಕನ್ನಡ ಸಾಹಿತ್ಯ ಹಾಗೂ ಸಾಂಸ್ಕೃತಿಕ ಉತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ. ಶಿವಾಜಿ

Read More »

ಉಧೋ ಉಧೋ ಯಲ್ಲಮ್ಮಹಿಂದೆ ‘ಬಳೆಕಟ್ಟೆ’ ಎಂದು ಕರೆಯಲಾಗುತ್ತಿದ್ದ ಸ್ಥಳವೀಗ ‘ಬಳೆಪೇಟೆ’ ಆಗಿದೆ.

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನಗುಡ್ಡದಲ್ಲಿ ನಡೆಯುವ ಜಾತ್ರೆಯಲ್ಲಿ ಯಲ್ಲಮ್ಮ ದೇವಸ್ಥಾನದಿಂದ ಪಶ್ಚಿಮ ದಿಕ್ಕಿಗೆ ಕಣ್ಣು ಹಾಯಿಸಿದರೆ ವೈವಿಧ್ಯಮಯ ಬಣ್ಣ ಬಣ್ಣದ ಬಳೆಗಳ ಮಾರಾಟ ಕಂಡುಬರುತ್ತದೆ. ಹಿಂದೆ ‘ಬಳೆಕಟ್ಟೆ’ ಎಂದು ಕರೆಯಲಾಗುತ್ತಿದ್ದ ಸ್ಥಳವೀಗ ‘ಬಳೆಪೇಟೆ’ ಆಗಿದೆ. ನೂರಾರು ಕುಟುಂಬಗಳು ದಶಕಗಳಿಂದ ಬಳೆ ಮಾರಾಟ ಮಾಡುತ್ತ ಬಂದಿವೆ. ಈಗೀಗ ಮಾರುಕಟ್ಟೆಯಲ್ಲಿ ಜಾಗ ಸಾಲದ್ದಕ್ಕೆ ಗುಡ್ಡದ ಪರಿಸರದಲ್ಲಿ ಎಲ್ಲೆಂದರಲ್ಲಿ ಬಳೆಗಳ ಮಾರಾಟ ನಡೆಯುತ್ತದೆ. ಹುಣ್ಣಿಮೆ ಸಮೀಪಿಸುತ್ತಲೇ ಎಲ್ಲ ಅಂಗಡಿಗಳನ್ನು ವಿದ್ಯುದ್ದೀಪಗಳಿಂದ ಅಲಂಕರಿಸಲಾಗುತ್ತದೆ. ಬಳೆಗಳನ್ನು ಒಪ್ಪ-ಓರಣವಾಗಿ …

Read More »

ನನ್ನ ಸೋಲಿಗೆ ಕಾಂಗ್ರೆಸ್‌ ನಾಯಕರೇ ಮೂಲ ಕಾರಣ: ಇಕ್ಬಾಲ್‌ ಅನ್ಸಾರಿ

ಕೊಪ್ಪಳ : ನನ್ನ ಸೋಲಿಗೆ ಕಾಂಗ್ರೆಸ್‌ ನಾಯಕರೇ ಮೂಲ ಕಾರಣ ಎಂದು ಮಾಜಿ ಶಾಸಕ ಇಕ್ಬಾಲ್‌ ಅನ್ಸಾರಿ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ನನ್ನ ಸೋಲಿಗೆ ಕಾಂಗ್ರೆಸ್‌ ನಾಯಕರೇ ಕಾರಣ, ನಾನು ಮುಸ್ಲಿಂ ಅನ್ನೋ ಕಾರಣಕ್ಕೆ, ಮುಸ್ಲಿಂ ನಾಯಕ ಬೆಳೆಯಬಾರದು ಎಂದು ನನ್ನ ಸೋಲಿಸಿದ್ದಾರೆ ಎಂದು ಆರೋಪಿಸಿದ್ದಾರೆ.   ನನ್ನ ಸೋಲಿಗೆ ಕಾಂಗ್ರೆಸ್‌ ಹಲವು ನಾಯಕರು ಕಾರಣ, ಮನೆ ಮನೆಗೆ ಹೋಗಿ ಮೋಸದ ಬಗ್ಗೆ …

Read More »

ಆಂಧ್ರ ರಾಜಕೀಯಲ್ಲಿ ‘ಕಂಡೋಮ್​’ ಸದ್ದು

ಅಮರಾವತಿ: ಆಂಧ್ರ ಪ್ರದೇಶದ (Andhra Pradesh) ರಾಜಕೀಯ ಯಾವಾಗಲೂ ಹಾಟ್ ಆಗಿರುತ್ತೆ, ಈಗ ಲೋಕಸಭಾ (Lok Sabha Election) ಮತ್ತು ವಿಧಾನಸಭಾ ಚುನಾವಣೆಗಳು (Assembly Election) ಏಕಕಾಲದಲ್ಲಿ ನಡೆಯುವುದರಿಂದ ರಾಜಕೀಯ ಮತ್ತಷ್ಟು ಹಾಟ್​ ಆಗಿದೆ. ಅದರಲ್ಲೂ ಸಾಮಾಜಿಕ ಜಾಲತಾಣದಲ್ಲಿ (Social Media) ಮಹಿಳೆಯವರು ನಾಚಿಕೆಯಿಂದ ಸಾಮಾಜಿಕ ಜಾಲತಾಣ ಬಳಕೆಯನ್ನೇ ಕಡಿಮೆ ಮಾಡುವ ಮಟ್ಟಕ್ಕೆ ಇಳಿದಿದೆ. ಕಂಡೋಮ್ ಪ್ಯಾಕೇಟ್​ಗಳನ್ನು ಬಿಡದೆ ಆಂಧ್ರ ರಾಜಕೀಯ ಪಕ್ಷಗಳು ಪ್ರಚಾರಕ್ಕೆ ಬಳಕೆ ಮಾಡಿಕೊಳ್ಳುತ್ತಿದ್ದು, ಈ ಕುರಿತ …

Read More »

ಬೈಕ್ ‘ಓವರ್ ಟೆಕ್’ ವಿಷಯಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯ

ಉತ್ತರಕನ್ನಡ : ಬೈಕ್ ಓವರ್ಟೇಕ್ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಆರು ಜನ ಆರೋಪಿಗಳು ಯುವಕನ ಮೇಲೆ ಹಲ್ಲೆ ನಡೆಸಿದ್ದು, ಇದೀಗ ಯುವಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶೆಟ್ಟಿಕೊಪ್ಪ ಜಾತ್ರೆಯಲ್ಲಿ ನಡೆದ ಘಟನೆಯಾಗಿದೆ. ಪ್ರಜ್ವಲ್ ಪ್ರಕಾಶ್ ಕಕ್ಕೇರಿಕರ ಎನ್ನುವ ಯುವಕನ ಮೇಲೆ 6 ಜನರು ಹಲ್ಲೆ ಮಾಡಿದ್ದಾರೆ. ಈ ವೇಳೆ ಹಲ್ಲೆಗೆ ಒಳಗಾದ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಹೇಳಲಾಗುತ್ತಿದೆ.ಮೃತ ಯುವಕನನ್ನು ಹಳಿಯಾಳ ಮೂಲದವನೆಂದು ಹೇಳಲಾಗುತ್ತಿದೆ. ಶರಣ್ …

Read More »

ರಸ್ತೆ ದುರಸ್ತಿ ಕಾರ್ಯಕ್ಕೆ ಚಾಲನೆ

ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಖಾನಾಪುರ ತಾಲೂಕಿನ ಕಣಕುಂಬಿ ಬಳಿ ಬೆಳಗಾವಿ- ಚೋರ್ಲಾ -ಗೋವಾ ರಸ್ತೆ ದುರಸ್ತಿ ಕಾರ್ಯಕ್ಕೆ ಚಾಲನೆ ನೀಡಿದರು. ಗೋವಾದಿಂದ ರಣಕುಂಡಿ ಕ್ರಾಸ್‌ ವರೆಗಿನ ಈ ರಸ್ತೆ 43.ಕಿ.ಮೀಟರ್‌ ಉದ್ದವಾಗಿದ್ದು, 58.90 ಕೋಟಿ ರೂಪಾಯಿ ವೆಚ್ಚದಲ್ಲಿ ಸುಧಾರಣೆ ಕಾರ್ಯ ಕೈಗೊಳ್ಳುತ್ತಿದ್ದು, 11 ತಿಂಗಳ ಅವಧಿಯಲ್ಲೇ ರಸ್ತೆ ದುರಸ್ತಿ ಕಾರ್ಯ ಮುಗಿಸುವ ಗುರಿ ಹೊಂದಲಾಗಿದೆ ಎಂದು ಹೇಳಿದರು.

Read More »