ನಿಗಮ ಮಂಡಳಿಗೆ ಅಧ್ಯಕ್ಷರ ನೇಮಕ ವಿಚಾರ: ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ, ಡಿಸಿಎಂ ಜಂಟಿಯಾಗಿ ನಿರ್ಧಾರ ಮಾಡುತ್ತಾರೆ. ಹಿರಿಯ ಶಾಸಕರನ್ನು ಆಯ್ಕೆ ಮಾಡುತ್ತೇವೆ ಎಂದು ತಿಳಿಸಿದ್ದು, ನಾವು ಹಿರಿಯ ಶಾಸಕರ ಜೊತೆ ಕಾರ್ಯಕರ್ತರಿಗೂ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಬೇಕು ಎಂದು ಹೇಳಿದ್ದೇವೆ. ಶೇಕಡಾ 50ರಷ್ಟು ಕಾರ್ಯಕರ್ತರಿಗೆ, ಶೇಕಡಾ 50ರಷ್ಟು ಶಾಸಕರಿಗೆ ನೀಡಲು ಮನವಿ ಮಾಡಿದ್ದೇವೆ. ಕಾರ್ಯಕರ್ತರಿಗೆ ಕೊಟ್ಟರೆ ಒಳ್ಳೆಯದು ಎಂದು ಹೇಳಿದರು. ಚಿಕ್ಕೋಡಿ: ರಾಜ್ಯ ಸರ್ಕಾರದಹಲವು ಇಲಾಖೆಗಳಲ್ಲಿ ಅಧಿಕಾರಿಗಳ ವರ್ಗಾವಣೆ …
Read More »ಸಂಸ್ಕೃತ ಭಾಷೆ ಮಾತನಾಡಿ ದೇಶದ ಗಮನ ಸೆಳೆದ ನಂದೇಶ್ವರ ಗ್ರಾಮ
ಚಿಕ್ಕೋಡಿ : ಭಾರತ ದೇಶದ ಪರಂಪರೆಯಲ್ಲಿ ಮಠ – ಮಂದಿರಗಳು ತನ್ನದೇ ಆದಂತಹ ಪ್ರಮುಖ ಪಾತ್ರ ವಹಿಸಿವೆ. ಆಯಾ ಕಾಲಘಟ್ಟಕ್ಕೆ ಅನುಗುಣವಾಗಿ ಸಮಾಜಕ್ಕೆ ಕೊಡುಗೆಗಳನ್ನು ನೀಡಿ, ತನ್ನ ಸುತ್ತಮುತ್ತಲಿನ ವಾತಾವರಣದಲ್ಲಿ ಶಿಕ್ಷಣ, ಅನ್ನದಾಸೋಹ, ಸಂಸ್ಕೃತಿ, ಉತ್ತಮ ವಿಚಾರಧಾರೆ, ಭಕ್ತಿ ಭಂಡಾರಗಳನ್ನು ಸಾರುತ್ತ ಮಠಗಳ ಚಾರಿತ್ರ್ಯವನ್ನು ಇತಿಹಾಸ ಪುಟಗಳಲ್ಲಿ ಉಳಿಯುವಂತೆ ಹಲವು ಮಠಾಧೀಶರು ಕೂಡಾ ಕಾರ್ಯ ಮಾಡಿದ್ದಾರೆ. ಅದರಂತೆ ಇಲ್ಲಿನ ಗ್ರಾಮವೊಂದು ಸಂಸ್ಕೃತ ಭಾಷೆಯಿಂದಲೇ ಪ್ರಸಿದ್ಧಿ ಹೊಂದಿದೆ. ಆಧುನಿಕ ಯುಗದಲ್ಲಿ ಹಲವು ಮಠಾಧೀಶರುಗಳ …
Read More »28 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಂಡಿಗೇರಿ ಪೊಲೀಸರು
ಹುಬ್ಬಳ್ಳಿ: ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ 28 ವರ್ಷಗಳ ಹಿಂದೆ ಜೈಲು ಸೇರಿ ನಂತರ ಜಾಮೀನಿನ ಮೇಲೆ ಹೊರಗೆ ಬಂದು ನ್ಯಾಯಾಲಯಕ್ಕೂ ಹಾಜರಾಗದೇ ತಲೆಮರೆಸಿಕೊಂಡು ಓಡಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಬೆಂಡಿಗೇರಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ನಗರದ ತಾರಿಹಾಳ ರೋಡ್ ನಿವಾಸಿ ಮಹ್ಮದ್ ಹನೀಫಸಾಬ್ ಹೊಸಮನಿ, (57) ಬಂಧಿತ ಆರೋಪಿ. ಈತ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ 1995ರಲ್ಲಿ ದಾಖಲಾಗಿದ್ದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ 28 ವರ್ಷಗಳಿಂದ ತಲೆಮರೆಸಿಕೊಂಡಿದ್ದ. ನ್ಯಾಯಾಲಯ LPC ಪ್ರಕರಣ ಎಂದು ಪರಿಗಣಿಸಿ ಅವನ …
Read More »ಐಟಿ ದಾಳಿ ವೇಳೆ 42 ಕೋಟಿ ರೂ. ಪತ್ತೆ ಪ್ರಕರಣ: ಹೃದಯಾಘಾತದಿಂದ ಗುತ್ತಿಗೆದಾರ ಅಂಬಿಕಾಪತಿ ಸಾವು
ಬೆಂಗಳೂರು: ಐಟಿ ದಾಳಿಯ ವೇಳೆ ಕೋಟಿ ಕೋಟಿ ಹಣ ಪತ್ತೆಯಾದ ವಿಚಾರದಲ್ಲಿ ಭಾರೀ ಸುದ್ದಿಯಾಗಿದ್ದ ರಾಜ್ಯ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಇಂದು ಸಂಜೆ 6.40 ಸುಮಾರಿಗೆ ಹೆಬ್ಬಾಳದ ಖಾಸಗಿ ಆಸ್ಪತ್ರೆಯಲ್ಲಿ ಅಂಬಿಕಾಪತಿ ಮೃತಪಟ್ಟಿದ್ದಾರೆ. ಕಳೆದ ತಿಂಗಳಷ್ಟೇ ಅಂಬಿಕಾಪತಿ ಮನೆಯ ಮೇಲೆ ಐಟಿ ದಾಳಿ ನಡೆದಾಗ 42 ಕೋಟಿ ರೂ. ಹಣ ಪತ್ತೆಯಾಗಿತ್ತು. ಈ ವಿಚಾರ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಯಾಗಿ ಆರೋಪ-ಪ್ರತ್ಯಾರೋಪಗಳಿಗೆ ಎಡೆಮಾಡಿಕೊಟ್ಟಿತ್ತು. ತಮ್ಮ ಮನೆಯಲ್ಲಿದ್ದ ಹಣ …
Read More »ಜಾನಪದ ಲೋಕ ವಿದೇಶಗಳಿಗೂ ಮಾದರಿ: ಚಂದ್ರಶೇಖರ ಕಂಬಾರ ಬಣ್ಣನೆ
ಬೆಂಗಳೂರು ರಾಮನಗರದಲ್ಲಿ ನಾಗೇಗೌಡರು ನಿರ್ಮಿಸಿರುವ ಜಾನಪದ ಲೋಕವು ರಾಜ್ಯ, ದೇಶಕ್ಕೆ ಮಾತ್ರವಲ್ಲದೆ, ವಿದೇಶಗಳಿಗೂ ಮಾದರಿಯಾಗಿದೆ. ಇತ್ತೀಚೆಗೆ ಸ್ಪೇನ್, ಇಂಗ್ಲೆಂಡಿನಿಂದಲೂ ಜಾನಪದ ತಜ್ಞರು ಭೇಟಿ ಮಾಹಿತಿ ಪಡೆದಿದ್ದಾರೆಂದು ಹಿರಿಯ ಸಾಹಿತಿ ಡಾ. ಚಂದ್ರಶೇಖರ ಕಂಬಾರ ಶ್ಲಾಘನೆ ವ್ಯಕ್ತಪಡಿಸಿದರು. ಸೋಮವಾರ ರವೀಂದ್ರ ಕಲಾಕ್ಷೇತ್ರದಲ್ಲಿ ಜಾನಪದ ಪರಿಷತ್ತು ಆಯೋಜಿಸಿದ್ದ ನಾಡೋಜ ಎಚ್.ಎಲ್. ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು. ಹಿಂದೊಮ್ಮೆ ಜಾನಪದ ಲೋಕದ ಬಗ್ಗೆ ರಷ್ಯಾದಲ್ಲಿ ಉಲ್ಲೇಖಿಸಿದ್ದ ಸಂದರ್ಭದಲ್ಲಿ ಅಲ್ಲಿನ ಕಲಾವಿದರು …
Read More »ವಿಧಾನಸೌಧ ಸಚಿವಾಲಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಚಿತ್ತ ಬೆಳಗಾವಿಯತ್ತ
ಬೆಂಗಳೂರು:ವಿಧಾನಸೌಧ ಸಚಿವಾಲಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಚಿತ್ತ ಬೆಳಗಾವಿಯತ್ತ ಹರಿದಿದೆ. ಜ.4ರಿಂದ ಪ್ರಾರಂಭವಾಗಲಿರುವ ಚಳಿಗಾಲದ ಅಧಿವೇಶನಕ್ಕೆ ತೆರಳಲು ಸಿದ್ಧತೆಗಳು ನಡೆದಿದ್ದು, ಆಫೀಸ್‌ನಲ್ಲಿ ಅಗತ್ಯವಿರುವುದನ್ನು ಪ್ಯಾಕಿಂಗ್ ಮಾಡಲಾಗುತ್ತಿದೆ. ಬೆಳಗಾವಿಗೆ ಏನೇನು ತೆಗೆದುಕೊಂಡು ಹೋಗಬೇಕು ಎನ್ನುವುದನ್ನು ಎರಡೆರಡು ಬಾರಿ ಖಚಿತಪಡಿಸಿಕೊಂಡು ಮೇಲಾಧಿಕಾರಿಗಳ ಅನುಮತಿ ಪಡೆದು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಬೆಳಗಾವಿಗೆ ಕಡತಗಳನ್ನು ಸಾಗಿಸಲು ಅನುಕೂಲವಾಗುವಂತೆ ಟ್ರಂಕ್‌ಗಳನ್ನು ಮಾಡಿಸಿದ್ದು, ಆ ಮೂಲಕವೇ ಪ್ಯಾಕಿಂಗ್ ಮಾಡಲಾಗುತ್ತಿದೆ ಎಂದು ವಿಧಾನಸಭಾಧ್ಯಕ್ಷರ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ. ಎಲ್ಲಾ ವಿಭಾಗಕ್ಕೂ ಪ್ರತ್ಯೇಕ …
Read More »500 ಮಕ್ಕಳಿರುವ ಶಾಲೆಗಳನ್ನು ಕೆಪಿಎಸ್ ಎಂದು ಪರಿಗಣಿಸುವಂತೆ ಶಿಕ್ಷಣ ಇಲಾಖೆ ಸೂಚನೆ
ಒಂದೇ ಆವರಣದಲ್ಲಿ ಅಥವಾ 500 ಮೀ. ಅಂತರದಲ್ಲಿ 500 ವಿದ್ಯಾರ್ಥಿಗಳ ದಾಖಲಾತಿ ಹೊಂದಿರುವ ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳೆಂದು ಪರಿಗಣಿಸುವಂತೆ ಸಮಗ್ರ ಶಿಕ್ಷಣ ಕರ್ನಾಟಕವು ನಿರ್ದೇಶನ ನೀಡಿದೆ. ರಾಜ್ಯದಲ್ಲಿ ಪ್ರಸ್ತುತ 285 ಕೆಪಿಎಸ್ ಶಾಲೆಗಳು ಕಾರ್ಯನಿರ್ವಹಿಸತ್ತಿವೆ. ಒಂದೇ ಸೂರಿನಡಿ ಪೂರ್ವ ಪ್ರಾಥಮಿಕದಿಂದ ಪದವಿ ಪೂರ್ವದವರೆಗೂ ಶಿಕ್ಷಣ ನೀಡುವ ಸಲುವಾಗಿ ಹಂತ ಹಂತವಾಗಿ ಒಂದು ಸಾವಿರ ಕೆಪಿಎಸ್ ಸ್ಥಾಪಿಸುವ ಗುರಿ ಹೊಂದಲಾಗಿದೆ. ಈ ಸಂಬಂಧ ಹಲವು ಜನಪ್ರತಿನಿಧಿಗಳು, ಸ್ಥಳೀಯ ಸಂಘ …
Read More »ಪತ್ರಿಕಾ ವಿತರಕರಿಗೆ ಸಾಮಾಜಿಕ ಭದ್ರತೆ ಕಲ್ಪಿಸಲು ಹೊಸ ಯೋಜನೆ ಜಾರಿ: ಸಚಿವ ಸಂತೋಷ್ ಲಾಡ್
ಬೆಂಗಳೂರು:ಪತ್ರಿಕಾ ವಿತರಕರು ಶ್ರಮಜೀವಿಗಳಾಗಿದ್ದು, ಅವರಿಗೆ ಸಾಮಾಜಿಕ ಭದ್ರತೆ ಕಲ್ಪಿಸಲು ಹೊಸದಾಗಿ ಯೋಜನೆ ರೂಪಿಸಿ, ಅಪಘಾತದಲ್ಲಿ ಮೃತಪಟ್ಟ ಪತ್ರಿಕಾ ವಿತರಕರಿಗೆ 2 ಲಕ್ಷ ವೈದ್ಯಕೀಯ ನೆರವಿಗೆ 1 ಲಕ್ಷ ರೂ ನೆರವಿನ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಪತ್ರಿಕಾ ವಿತರಕರ ಸಮಸ್ಯೆಗೆ ಸ್ಪಂಧಿಸಿ ಯೋಜನೆಯನ್ನು ಜಾರಿಗೊಳಿಸಿದ್ದಕ್ಕಾಗಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(KUWJ) ಮತ್ತು ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಅಭಿನಂದನೆ ಸ್ವೀಕರಿಸಿ …
Read More »ಕಾರ್ಖಾನೆಯ ಕಾರ್ಮಿಕರಿಗೆ ದೀಪಾವಳಿ ಧಮಾಕಾ; ಶೇ. ೧೦ ರಷ್ಟು ವೇತನ ಹೆಚ್ಚಳ
ಘಟಪ್ರಭಾ : ಈ ಭಾಗದ ರೈತರ ಜೀವನಾಡಿಯಾಗಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯು ಪ್ರಸಕ್ತ ಕಬ್ಬು ನುರಿಸುವ ಹಂಗಾಮಿನಲ್ಲಿ 3 ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಸುವ ಗುರಿಯನ್ನು ಹೊಂದಿದ್ದೇವೆ ಎಂದು ಕಾರ್ಖಾನೆಯ ಮಾರ್ಗದರ್ಶಕರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಸೋಮವಾರದಂದು ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಕಾರ್ಮಿಕರ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ರೈತರು ಉತ್ತಮ ಇಳುವರಿಯ ಕಬ್ಬನ್ನು ನಮ್ಮ ಕಾರ್ಖಾನೆಗೆ ಪೂರೈಸುವ ಮೂಲಕ ಕಾರ್ಖಾನೆಯ …
Read More »ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಅಭ್ಯರ್ಥಿಗಳ ಕ್ರಿಮಿನಲ್ ಹಿನ್ನೆಲೆ ಬಹಿರಂಗಪಡಿಸಬೇಕು
ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಅಭ್ಯರ್ಥಿಗಳ ಕ್ರಿಮಿನಲ್ ಹಿನ್ನೆಲೆ ಬಹಿರಂಗಪಡಿಸಬೇಕು ಎಂಬ ಸುಪ್ರೀಂ ಕೋರ್ಟ್ ನಿರ್ದೇಶನ ಪಾಲಿಸಲು ಅಭ್ಯರ್ಥಿಗಳು ಬಾಕಿಯಿರುವ ಕ್ರಿಮಿನಲ್ ಕೇಸ್‌ಗಳ ವಿವರ ನೀಡಲು ಪ್ರತ್ಯೇಕ ನಮೂನೆಯನ್ನು ಒದಗಿಸಬೇಕು ಎಂದು ಹೈಕೋರ್ಟ್ ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ. ಕ್ರಿಮಿನಲ್ ಪ್ರಕರಣಗಳ ಮಾಹಿತಿ ನೀಡುವಂತೆ ಆದೇಶಿಸಿದ್ದ ಏಕ ಸದಸ್ಯಪೀಠದ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ವಜಾಗೊಳಿಸಿರುವ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ಕೃಷ್ಣ ಎಸ್.ದೀಕ್ಷಿತ್ ಅವರಿದ್ದ …
Read More »
Laxmi News 24×7