ಬೆಂಗಳೂರು : ದಾವಣಗೆರೆ ಸೇರಿದಂತೆ ಉತ್ತರ ಕರ್ನಾಟಕದ ಸಕ್ಕರೆ ಕಾರ್ಖಾನೆಗಳಿಗೆ ಅ. 20 ರಿಂದಲೇ ಕಬ್ಬು ಕ್ರಷಿಂಗ್ ಆರಂಭಿಸಲು ಅನುಮತಿ ನೀಡಲಾಗಿದೆ ಎಂದು ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ. ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಈ ಆದೇಶ ಮಾಡಲಾಗಿದೆ. ಈ ಮೊದಲು ಮಂಡ್ಯ, ಮೈಸೂರು, ಹಾಸನ, ಚಾಮರಾಜನಗರ ಜಿಲ್ಲೆಗಳಲ್ಲಿ ಜೂನ್ 22ರಿಂದ ಹಾಗೂ ಬೆಳಗಾವಿ, ವಿಜಯಪುರ, ಬೀದರ್, ಕಲಬುರಗಿ, ಬಾಗಲಕೋಟೆ, ಗದಗ, ಯಾದಗಿರಿ, ದಾವಣಗೆರೆ, ಉತ್ತರ ಕನ್ನಡ, …
Read More »ಲಂಚ ಸ್ವೀಕರಿಸುತ್ತಿದ್ದ ಶಿರಸ್ತೇದಾರ ಸೇರಿ ಮೂವರು ಸಿಬ್ಬಂದಿ ಲೋಕಾಯುಕ್ತ ಬಲೆಗೆ
ಹಾವೇರಿ : ಆರ್ಟಿಸಿ ದುರಸ್ತಿ ಮಾಡಿಕೊಡಲು 12 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಶಿರಸ್ತೇದಾರ ಸೇರಿ ಮೂವರು ಸಿಬ್ಬಂದಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಜಿಲ್ಲೆಯ ಹಾನಗಲ್ ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ನಡೆದಿದೆ. ಶಿರಸ್ತೇದಾರ ತಮ್ಮಣ್ಣ ಕಾಂಬಳೆ, ದ್ವಿತೀಯ ದರ್ಜೆ ಸಹಾಯಕರುಗಳಾದ ಗೂಳಪ್ಪ ಮನಗೂಳಿ ಹಾಗೂ ಶಿವಾನಂದ ಬಡಿಗೇರ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು. ಬೊಮ್ಮನಹಳ್ಳಿ ಗ್ರಾಮದ ಶಂಕ್ರಪ್ಪ ಗುಮಗುಂಡಿ ಎಂಬುವರ ಆರ್ಟಿಸಿ ದುರಸ್ತಿ ಮಾಡಿಕೊಡಲು ಆರೋಪಿಗಳು ಲಂಚ ಪಡೆಯುತ್ತಿದ್ದ ವೇಳೆ …
Read More »ಪತ್ನಿಯನ್ನು ಹತ್ಯೆ ಮಾಡಿ ವಾಟರ್ ಹೀಟರ್ನಿಂದ ಕರೆಂಟ್ ಹೊಡೆದು ಸಾವು ಎಂದು ಬಿಂಬಿಸಿದ್ದ ಪತಿ ಅರೆಸ್ಟ್
ಬೆಂಗಳೂರು: ಅಕ್ರಮ ಸಂಬಂಧ ಹೊಂದಿರುವುದಾಗಿ ಶಂಕಿಸಿ ಪತ್ನಿ ಮೇಲೆ ಹಲ್ಲೆ ಮಾಡಿ ಕುತ್ತಿಗೆ ಹಿಸುಕಿ ಕೊಲೆ ಮಾಡಿದ ಬಳಿಕ ಕೃತ್ಯ ಮರೆ ಮಾಚಲು ವಾಟರ್ ಹೀಟರ್ನಿಂದ ಕರೆಂಟ್ ಹೊಡೆದು ಮೃತಪಟ್ಟಿರುವುದಾಗಿ ಕಥೆ ಕಟ್ಟಿದ ಪತಿಯನ್ನು ಹೆಬ್ಬಗೋಡಿ ಠಾಣೆ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಹತ್ಯೆಗೊಳಗಾದ ರೇಷ್ಮಾ (32). ಹತ್ಯೆ ಮಾಡಿದ ಆರೋಪದಡಿ ಪತಿ ಪ್ರಶಾಂತ್ ಕಮ್ಮಾರ್ (25) ಎಂಬಾತನನ್ನು ಬಂಧಿಸಲಾಗಿದೆ. ರೇಷ್ಮಾ ಸಹೋದರಿ ರೇಣುಕಾ ಎಂಬುವರು ನೀಡಿದ ದೂರಿನ ಮೇರೆಗೆ ಹತ್ಯೆ ಪ್ರಕರಣ …
Read More »ಕಂದಕಕ್ಕೆ ಉರುಳಿದ ಸಾರಿಗೆ ಬಸ್; 49 ಪ್ರಯಾಣಿಕರಿಗೆ ಗಾಯ
ಕಾರವಾರ(ಉತ್ತರ ಕನ್ನಡ): ಸಾರಿಗೆ ಸಂಸ್ಥೆಯ ಬಸ್ವೊಂದು ಕಂದಕಕ್ಕೆ ಉರುಳಿ ಬಿದ್ದು ಮೂರು ಬಾರಿ ಪಲ್ಟಿಯಾದ ಪರಿಣಾಮ ಚಾಲಕ, ನಿರ್ವಾಹಕ ಸೇರಿ 49 ಪ್ರಯಾಣಿಕರು ಗಾಯಗೊಂಡಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಘಟನೆ ಶನಿವಾರ ರಾತ್ರಿ ಅಂಕೋಲಾ ತಾಲೂಕಿನ ವಡ್ಡಿ ಘಾಟ್ ತಿರುವಿನಲ್ಲಿ ಸಂಭವಿಸಿದೆ. ಕುಮಟಾ-ಶಿರಸಿ ರಸ್ತೆ ಕಾಮಗಾರಿಯ ನಿಮಿತ್ತ ಸಂಚಾರ ಬಂದ್ ಮಾಡಲಾಗಿದ್ದು, ಶಿರಸಿಗೆ ಪ್ರಯಾಣಿಸುವ ಬಸ್ ಮಾರ್ಗವನ್ನು ವಡ್ಡಿ ಮೂಲಕ ಸಂಚರಿಸುವಂತೆ ಬದಲಿಸಲಾಗಿತ್ತು. ರಾಜ್ಯ ಹೆದ್ದಾರಿಯಾದ ಇದರ ಘಟ್ಟದ ಪ್ರದೇಶದಲ್ಲಿ ಭಾರಿ …
Read More »ಗುತ್ತಿಗೆದಾರರ ನೋವು ಅರ್ಥವಾಗುತ್ತದೆ, ಆದರೆ ಯಾರೂ ಸರ್ಕಾರಕ್ಕೆ ಬೆದರಿಕೆ ಹಾಕಲು ಸಾಧ್ಯವಿಲ್ಲ: ಡಿಸಿಎಂ
ಬೆಂಗಳೂರು: “ಗುತ್ತಿಗೆದಾರರ ನೋವು ನಮಗೆ ಅರ್ಥವಾಗುತ್ತದೆ, ಆದರೆ ಯಾರೂ ಸಹ ಸರ್ಕಾರಕ್ಕೆ ಬೆದರಿಕೆ ಹಾಕಲು ಸಾಧ್ಯವಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕುಮಾರಪಾರ್ಕ್ ಸರ್ಕಾರಿ ನಿವಾಸದಲ್ಲಿ ರಾಜ್ಯ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಉಪ ಮುಖ್ಯಮಂತ್ರಿಗಳು ಮಾಧ್ಯಮದವರಿಗೆ ಪ್ರತಿಕ್ರಿಯಿಸಿದರು. “ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಸರ್ಕಾರದ ಅವಧಿಯಲ್ಲಿ ಬಜೆಟ್ ಮಿತಿಯನ್ನು ಮೀರಿ ಹೆಚ್ಚು ಕೆಲಸಗಳನ್ನು ಕೊಟ್ಟಿದ್ದರು. ಇದರಿಂದ ಸಮಸ್ಯೆ ಹೆಚ್ಚಾಗಿದೆ. ನಾನು ನನ್ನ ಕೈಲಾದಷ್ಟು ಬಿಲ್ ಪಾವತಿಸಿದ್ದೇನೆ. …
Read More »33 ಸಾವಿರ ಕೋಟಿ ಬಾಕಿ ಬಿಲ್ ಬಿಡುಗಡೆ ಮಾಡದಿದ್ದರೆ ಹೋರಾಟ ಖಂಡಿತ: ಆರ್.ಮಂಜುನಾಥ್
ಬೆಂಗಳೂರು: ”33 ಸಾವಿರ ಕೋಟಿ ಬಾಕಿ ಬಿಲ್ ಬಿಡುಗಡೆ ಮಾಡಿಲ್ಲವೆಂದರೆ ಹೋರಾಟ ಮಾಡುವುದು ಖಂಡಿತ” ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್.ಮಂಜುನಾಥ ಸ್ಪಷ್ಟಪಡಿಸಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಜೊತೆಗಿನ ಸಭೆ ಬಳಿಕ ಶನಿವಾರ ಸಂಜೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, “ಡಿಸೆಂಬರ್ ಒಳಗೆ ಬಿಲ್ ಕ್ಲೀಯರ್ ಮಾಡುತ್ತೇವೆ ಅಂತ ಹೇಳಿದ್ದಾರೆ. ಸಿಎಂ ಜೊತೆಗೆ ಸಭೆ ಮಾಡಿಸುವುದಾಗಿ ಹೇಳಿದ್ದಾರೆ. ಒಂದು ವೇಳೆ ಬಾಕಿ ಬಿಲ್ ಪೇಮೆಂಟ್ ಆಗದಿದ್ದರೆ ರಾಜ್ಯಪಾಲರ ಮೊರೆ ಹೋಗುತ್ತೇವೆ. ನಾವು …
Read More »ಬೆಳಗಾವಿ ಜಿಲ್ಲೆಯ ಏಳು ನಿರ್ದೇಶಕ ಸ್ಥಾನಕ್ಕೆ ಇಂದು ಮತದಾನ
ಬೆಳಗಾವಿ ಜಿಲ್ಲೆಯ ಏಳು ನಿರ್ದೇಶಕ ಸ್ಥಾನಕ್ಕೆ ಇಂದು ಮತದಾನ ತೀವ್ರ ಕುತೂಹಲ ಕೆರಳಿಸಿದ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಚುನಾವಣಾ ಅಖಾಡದಲ್ಲಿ ಘಟಾನುಘಟುಗಳ ಜಿದ್ದಾಜಿದ್ದು ಬೆಳಗಾವಿ ಜಿಲ್ಲೆಯ ಏಳು ನಿರ್ದೇಶಕ ಸ್ಥಾನಕ್ಕೆ ನಡೆಯುತ್ತಿರೋ ಮತದಾನ ಒಟ್ಟು 698 ಮತಗಳಲ್ಲಿ 676 ಅರ್ಹ ಮತದಾರರಿಗೆ ಮತ ಚಲಾವಣೆ ಹಕ್ಕು ಅನರ್ಹಗೊಳಿಸಿದ್ದ 22 ಮತದಾರರಲ್ಲಿ 16 ಜನರಿಗೆ ಮತದಾನಕ್ಕೆ ಅವಕಾಶ ಧಾರವಾಡ ಹೈಕೋರ್ಟ್ ನಲ್ಲಿ ರೀಟ್ ಅರ್ಜಿ ಸಲ್ಲಿಸಿದ್ದ ಈ 16 ಜನರಿಗೆ …
Read More »ಕಬ್ಬು ಬೆಳೆಗಾರ ರೈತರೊಂದಿಗೆ ಧಾರವಾಡ ಜಿಲ್ಲಾಧಿಕಾರಿಗಳ ಸಭೆ..
ಕಬ್ಬು ಬೆಳೆಗಾರ ರೈತರೊಂದಿಗೆ ಧಾರವಾಡ ಜಿಲ್ಲಾಧಿಕಾರಿಗಳ ಸಭೆ…..ಕಬ್ಬು ಸಾಗಾಣಿಕೆ ವೆಚ್ಚ ನಿಗದಿಗೆ ಡಿಸಿ ಕ್ರಮದ ಭರವಸೆ. : ನಿರಂತರ ಹೋರಾಟದ ಫಲವಾಗಿ ಕಬ್ಬು ಬೆಳೆದ ರೈತರು ನಿಟ್ಟುಸಿರು ಬಿಡುವಂತಾಗಿದೆ. ಕಲಘಟಗಿ ಭಾಗದ ರೈತರೊಂದಿಗೆ ಕಬ್ಬು ಸಾಗಾಣಿಕೆ ದರ ನಿಗದಿ ಬಗ್ಗೆ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು ಸಭೆ ಜರುಗಿಸಿ, ಕಬ್ಬು ಸಾಗಾಣಿಕೆ ವೆಚ್ಚ ನಿಗದಿಗೆ ಕ್ರಮದ ಭರವಸೆ ನೀಡಿದ್ದಾರೆ. ಹೌದು ಧಾರವಾಡ ಜಿಲ್ಲಾಧಿಕಾರಿ ಸಭಾ ಭವನದಲ್ಲಿ ಕಬ್ಬು …
Read More »ಧಾರವಾಡದಲ್ಲಿ ಬೀದಿಗೆ ಇಳಿದು ದಲಿತ ಸಂಘಟನೆ ಆಕ್ರೋಶ.
ನ್ಯಾ.ಬಿ.ಆರ್ ಗವಾಯಿ ಮೇಲೆ ಶೂ ದಾಳಿ ವಿಚಾರ …ಧಾರವಾಡದಲ್ಲಿ ಬೀದಿಗೆ ಇಳಿದು ದಲಿತ ಸಂಘಟನೆ ಆಕ್ರೋಶ. ನ್ಯಾಯಮೂರ್ತಿ ಬಿ.ಆರ್ ಗವಾಯಿ ಮೇಲೆ ನಡೆದ ಶೂ ದಾಳಿ ಖಂಡಿಸಿ ಹಾಗೂ ಶೂ ದಾಳಿದಾತನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಧಾರವಾಡದಲ್ಲಿ ದಲಿತ ಸಂಘಟನೆಯ ಕಾರ್ಯಕರ್ತೆರು ಬೀದುಗೆ ಇಳಿದು ಪ್ರತಿಭಟನೆ ಮೆರವಣಿಗೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ವೈ- ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ವತಿಯಿಂದ ನಗರದ ಕಲಾಭವನದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನೆ …
Read More »ನಾವು ಆರ್.ಎಸ್.ಎಸ್.ನ್ನು ಟಾರ್ಗೆಟ್ ಮಾಡಿಲ್ಲ… ಶೆಟ್ಟರ್ ಸಿಎಂ ಆಗಿದ್ದಾಗ ಹೊರಡಿಸಿದ ಆದೇಶ ಜಾರಿ ಮಾಡಿದ್ದೇವೆ; ಸಿಎಂ ಸಿದ್ಧರಾಮಯ್ಯ
ನಾವು ಆರ್.ಎಸ್.ಎಸ್.ನ್ನು ಟಾರ್ಗೆಟ್ ಮಾಡಿಲ್ಲ… ಶೆಟ್ಟರ್ ಸಿಎಂ ಆಗಿದ್ದಾಗ ಹೊರಡಿಸಿದ ಆದೇಶ ಜಾರಿ ಮಾಡಿದ್ದೇವೆ; ಸಿಎಂ ಸಿದ್ಧರಾಮಯ್ಯ ನಾವು ಆರ್.ಎಸ್.ಎಸ್.ನ್ನು ಟಾರ್ಗೆಟ್ ಮಾಡಿಲ್ಲ… ಶೆಟ್ಟರ್ ಸಿಎಂ ಆಗಿದ್ದಾಗ ಹೊರಡಿಸಿದ ಆದೇಶ ಜಾರಿ ಮಾಡಿದ್ದೇವೆ ಆಗ ವಿರೋಧಿಸದವರು ಈಗೇಕೆ ವಿರೋಧಿಸುತ್ತಿದ್ದಾರೆ? ಸಿಎಂ ಸಿದ್ಧರಾಮಯ್ಯ ಪ್ರಶ್ನೆ ಸರ್ಕಾರಿ ಜಾಗದಲ್ಲಿ ಸಂಘ-ಸಂಸ್ಥೆಗಳ ಚಟುವಟಿಕೆಗಳಿಗೆ ನಿರ್ಬಂಧ ಹೇರುವ ಬಗ್ಗೆ 2013ರಲ್ಲಿ ಜಗದೀಶ ಶೆಟ್ಟರ್ ಅವರು ಮುಖ್ಯಮಂತ್ರಿಯಾಗಿದ್ದಾಗಲೇ ಆದೇಶ ಹೊರಡಿಸಿದ್ದರು. ಈ ಆದೇಶ ಆರ್‌ಎಸ್‌ಎಸ್‌ಗೂ ಅನ್ವಯವಾಗುತ್ತದೆ. ಅದನ್ನೇ …
Read More »
Laxmi News 24×7