ಚಿಕ್ಕಮಗಳೂರು: ನರ್ಸ್ವೊಬ್ಬಳು ತನ್ನ ಪ್ರಿಯಕರನಿಗಾಗಿ ವಸತಿ ಶಾಲೆಯ ಅಪ್ರಾಪ್ತ ವಯಸ್ಸಿನ ಹುಡುಗಿಯರಿಗೆ ಅಮಲು ಪದಾರ್ಥ ನೀಡಿ ಪ್ರಜ್ಞೆ ತಪ್ಪಿಸಿ ತನ್ನ ಲವರ್ ಜೊತೆ ಬಿಡುತ್ತಿದ್ದ ಪ್ರಕರಣವೊಂದು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದ್ದು, ಈ ಪ್ರಕರಣದಡಿ ನರ್ಸ್ ಸೇರಿ ಮೂವರು ಆರೋಪಿಗಳನ್ನು ಕಡೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ವಸತಿ ಶಾಲೆಯ ಪ್ರಾಂಶುಪಾಲರು ಕಡೂರು ಠಾಣೆಗೆ ದೂರು ನೀಡಿದ್ದು, ತನಿಖೆ ಮುಂದುವರಿದಿದೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ವಸತಿ ಶಾಲೆಯ ಪಕ್ಕದ ಹಳ್ಳಿಯಲ್ಲಿ ಎನ್‌ಎಂ …
Read More »ಆಟಗಾರರು ಸಾಂಪ್ರದಾಯಿಕ ಉಡುಗೆ ತೊಟ್ಟು ದೀಪಾವಳಿ ಹಬ್ಬವನ್ನು ಆದ್ಧೂರಿಯಾಗಿ ಆಚರಿಸಿದರು.
ಬೆಂಗಳೂರು: ದೇಶಾದ್ಯಂತ ಬೆಳಕಿನ ಹಬ್ಬ ದೀಪಾವಳಿಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಜೊತೆಗೆ ವಿಶ್ವಕಪ್‌ನ ಲೀಗ್ ಹಂತದ ಕೊನೆ ಪಂದ್ಯಾಟಕ್ಕೆ ಬೆಂಗಳೂರಿಗೆ ಬಂದಿಳಿದಿರುವ ಭಾರತ ತಂಡದ ಆಟಗಾರರು ದೀಪಾವಳಿ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದರು. ಇಂದು ಭಾರತ ಮತ್ತು ನೆದರ್ಲೆಂಡ್ಸ್ ನಡುವಿನ ಪಂದ್ಯವು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಈಗಾಗಲೇ ಭಾರತವು ಲೀಗ್ ಹಂತದ 8 ಪಂದ್ಯಗಳಲ್ಲಿ ಗೆದ್ದು ಬೀಗಿದ್ದು, ಸೆಮಿಫೈನಲ್ ಸೆಣಸಾಟಕ್ಕೆ ಸಜ್ಜಾಗಿದೆ. ಭಾರತವು ಇಂದು ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ನೆದರ್ಲೆಂಡ್ಸ್ ತಂಡವನ್ನು …
Read More »ಯುವತಿಯರ ಡೀಪ್ ಫೇಕ್ ಫೋಟೋ ಪ್ರಕರಣ: ಎಸ್ಪಿ ಪ್ರತಿಕ್ರಿಯೆ
ಬೆಳಗಾವಿ: ದೇಶಾದ್ಯಂತ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್ ಫೇಕ್ ವಿಡಿಯೋ ಸದ್ದು ಮಾಡುತ್ತಿರುವಾಗಲೇ ಬೆಳಗಾವಿ ಜಿಲ್ಲೆಯಲ್ಲಿ ಡೀಪ್ ಫೇಕ್ ಫೋಟೋ ಎಡಿಟ್ ಪ್ರಕರಣ ಬೆಳಕಿಗೆ ಬಂದಿದೆ. ಪ್ರೀತಿಸಲು ನಿರಾಕರಿಸಿದ್ದಕ್ಕೆ ಯುವತಿ ಹಾಗೂ ಆಕೆಯ ಇಬ್ಬರು ಸ್ನೇಹಿತೆಯರ ನಗ್ನ ಫೋಟೋ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿದ್ದ ಖಾನಾಪುರದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಯುವಕನ ಪ್ರೀತಿಯನ್ನು ಯುವತಿ ನಿರಾಕರಿಸಿದ್ದಳು. ಇದರಿಂದಾಗಿ ನಿನ್ನ ಮತ್ತು ಸ್ನೇಹಿತೆಯರ …
Read More »ಕುಂದಾನಗರಿಯಲ್ಲಿ ಕೋಟೆ ಕಟ್ಟಿ ಬೆಳಕಿನ ಹಬ್ಬ ಸಂಭ್ರಮಿಸುವ ಮಕ್ಕಳು
ಬೆಳಗಾವಿ: ದೀಪಾವಳಿ ಹಬ್ಬವನ್ನು ಒಂದೊಂದು ಭಾಗಗಳಲ್ಲಿ ಒಂದೊಂದು ರೀತಿ ಆಚರಿಸುತ್ತಾರೆ. ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮಕ್ಕಳು ಕೋಟೆ ಕಟ್ಟಿ ಸಂಭ್ರಮಿಸುತ್ತಾರೆ. ಛತ್ರಪತಿ ಶಿವಾಜಿ ಮಹಾರಾಜರ ಧೈರ್ಯ, ಸಾಹಸ, ಪರಾಕ್ರಮವನ್ನು ಇಂದಿನ ಪೀಳಿಗೆಗೆ ತಿಳಿಸುವ ಕೆಲಸ ಮಾಡುತ್ತಿದ್ದಾರೆ. ಆ ಕುರಿತು ಈಟಿವಿ ಭಾರತದ ವಿಶೇಷ ವರದಿ ಇಲ್ಲಿದೆ. ದೀಪಾವಳಿ ಹಬ್ಬಕ್ಕೆ ಪಟಾಕಿ ಹಚ್ಚಿ, ದೀಪ ಬೆಳಗಿಸಿ, ಸಿಹಿ ಹಂಚಿ ಸಂಭ್ರಮಿಸುವುದು ಸಾಮಾನ್ಯ. ಆದರೆ ಕುಂದಾನಗರಿಯ ಮಕ್ಕಳು ಮಾತ್ರ ಐತಿಹಾಸಿಕ ಕೋಟೆಗಳ ಮಾದರಿ ನಿರ್ಮಿಸಿ …
Read More »ಕುಂದಾನಗರಿಯಲ್ಲಿ ಬೆಳಕಿನ ಹಬ್ಬದ ಸಂಭ್ರಮ ಹಸಿರು ಪಟಾಕಿ ಬಳಸುವಂತೆ ಡಿಸಿ ಮನವಿ
ಬೆಳಗಾವಿ: ಬೆಳಕಿನ ಹಬ್ಬ ದೀಪಾವಳಿಯನ್ನು ರಾಜ್ಯಾಧ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತದೆ. ದೀಪಾವಳಿ ವಿಶೇಷ ಎಂದರೆ ದೀಪ ಬೆಳಗಿಸುವುದು, ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮ ಪಡುವ ಹಬ್ಬ. ಆದರೆ ಈ ಸಡಗರ ಮಧ್ಯೆ ಪಟಾಕಿ ಸಿಡಿಸಲು ಹೋಗಿ ಅದೆಷ್ಟೋ ಅವಘಡಗಳು ಸಂಭವಿಸಿ ಯುವಕರು, ಮಕ್ಕಳು ಕಣ್ಣು ಕಳೆದುಕೊಂಡಿದ್ದಾರೆ. ಇಂತಹ ಘಟನೆಗಳು ಪ್ರತಿವರ್ಷವೂ ನಡೆಯುತ್ತಲೇ ಇವೆ. ಜತೆಗೆ ಪರಿಸರ ಮಾಲಿನ್ಯ ಹೆಚ್ಚಾಗುತ್ತಿದೆ. ಮನಗಂಡ ಬೆಳಗಾವಿ ಜಿಲ್ಲಾಡಳಿತ ಪರಿಸರಕ್ಕೆ ಮಾರಕವಾಗಿರುವ ಪಟಾಕಿಗಳನ್ನು ಬ್ಯಾನ್ ಮಾಡಿ …
Read More »ಸಿದ್ದರಾಮಯ್ಯ ಡುಪ್ಲಿಕೇಟ್ ಸಿಎಂ: H.D.K.
ಬೆಂಗಳೂರು: ಮಾಜಿ ಸಿಎಂ ಮತ್ತು ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆಸಿದ ಮಾಧ್ಯಮಗೋಷ್ಠಿಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಕಾಂಗ್ರೆಸ್ ಸರ್ಕಾರ ಜಾರಿ ಮಾಡಿರುವ ನಾಲ್ಕು ಗ್ಯಾರಂಟಿಗಳ ವೈಫಲ್ಯದ ಬಗ್ಗೆ ದಾಖಲೆಗಳ ಸಮೇತ ಮಾಜಿ ಸಿಎಂ ಮಾತನಾಡಿದರು. ತೆಲಂಗಾಣದಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಪ್ರಚಾರ ನಡೆಸುತ್ತಿದ್ದಾರೆ. ಕಾಂಗ್ರೆಸ್ನ ಭರವಸೆಗಳನ್ನು ನಂಬಬೇಡಿ, ಗ್ಯಾರಂಟಿಗಳಿಗೆ ಮರುಳಾಗಬೇಡಿ, ಕಾಂಗ್ರೆಸ್ ಮೋಸ ಮಾಡುತ್ತಿದೆ ಎಂದು ಹೆಚ್ಡಿಕೆ ಆರೋಪಿಸಿದರು. …
Read More »ದೀಪಾವಳಿ ಹಬ್ಬ : ಮಣ್ಣಿನ ಹಣತೆಗಳ ಖರೀದಿಯಲ್ಲಿ ನಿರತರಾದ ಸಿಲಿಕಾನ್ ಸಿಟಿ ಮಂದಿ
ಬೆಂಗಳೂರು : ದೀಪಾವಳಿ ಹಬ್ಬದಲ್ಲಿ ಎಲ್ಲೆಡೆ ಸಂಭ್ರಮ ಮನೆಮಾಡಿದೆ. ಮೂರು ದಿನಗಳ ಕಾಲ ಸಾಲು ಸಾಲು ದೀಪಗಳನ್ನು ಹಚ್ಚಿ ಸಂಭ್ರಮಿಸುವುದು ಈ ಹಬ್ಬದ ಸಂಪ್ರದಾಯ. ಅಂಧಕಾರವ ಕಳೆದು ಬೆಳಕಿನೆಡೆಗೆ ಕರೆದುಕೊಂಡು ಹೋಗುವ ದೀಪಗಳ ಹಬ್ಬವನ್ನು ಸ್ವಾಗತಿಸಲು ನಗರದ ಮಾರುಕಟ್ಟೆಯಲ್ಲಿ ಬಗೆಬಗೆಯ ಹಣತೆಗಳು ಬಂದಿವೆ. ಮಣ್ಣಿನ ದೀಪಗಳು ದುಬಾರಿ ಎನಿಸಿದರೂ ಪರಿಸರ ಸ್ನೇಹಿ ದೀಪಗಳಾಗಿರುವುದರಿಂದ ಬೇಡಿಕೆ ಹೆಚ್ಚಿದೆ. ನಗರದಲ್ಲಿ ಜೇಡಿ ಮಣ್ಣಿನಿಂದ ಹೂವು, ಆನೆಯ ಮಾದರಿಯ ದೀಪ, ನವಿಲುಗರಿ ಮತ್ತು ಮಹಿಳಾ ಪ್ರತಿರೂಪದ …
Read More »ಭಾರತ vs ನೆದರ್ಲೆಂಡ್ಸ್ ಪಂದ್ಯ: ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ಸರಕು ಸಾಗಣೆ ವಾಹನಗಳಿಗೆ ನಿಷೇಧ
ಬೆಂಗಳೂರು: ಐಸಿಸಿ ಏಕದಿನ ವಿಶ್ವಕಪ್‌ನ ಭಾರತ ಹಾಗೂ ನೆದರ್ಲೆಂಡ್ಸ್ ನಡುವಿನ ಪಂದ್ಯಕ್ಕೆ ನಾಳೆ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣ ಆತಿಥ್ಯವಹಿಸುತ್ತಿರುವ ಹಿನ್ನೆಲೆಯಲ್ಲಿ ಸುಗಮ ಸಂಚಾರದ ದೃಷ್ಟಿಯಿಂದ ಮೈದಾನದ ಸುತ್ತಮುತ್ತ ಸರಕು ಹಾಗೂ ಸಾಗಣಿಕೆ ವಾಹನಗಳಿಗೆ ನಿಷೇಧ ವಿಧಿಸಲಾಗಿದೆ. ವಿಶ್ವಕಪ್‌ನಲ್ಲಿ ಲೀಗ್ ಹಂತದ ಮತ್ತು ಭಾರತ ತಂಡದ ಕೊನೆಯ ಪಂದ್ಯ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಯಾವುದೇ ರೀತಿಯ ಸಂಚಾರ ದಟ್ಟಣೆ ಆಗದಂತೆ ಕ್ರಮವಹಿಸಲಾಗಿದೆ. ಕ್ಯಾಬ್ಗಳಿಗೆ ಪಿಕ್ ಅಪ್ ಅಂಡ್ ಡ್ರಾಪ್ ಸ್ಥಳಗಳನ್ನ ಗುರುತಿಸಲಾಗಿದೆ. ವಾರಾಂತ್ಯ …
Read More »ಯಡಿಯೂರಪ್ಪರನ್ನು ಬಳಸಿಕೊಳ್ಳಲು ವಿಜಯೇಂದ್ರಗೆ ಪಟ್ಟ: ಎಂ.ಬಿ ಪಾಟೀಲ್
ಬೆಂಗಳೂರು : ಯಡಿಯೂರಪ್ಪರನ್ನು ಬಳಸಿಕೊಳ್ಳಲು ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡುವ ಮೂಲಕ ಬಿಜೆಪಿ ಹೈಕಮಾಂಡ್ ನಾಯಕರು ನಾಟಕವಾಡ್ತಿದ್ದಾರೆ ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ. ಬಿ.ವೈ ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆ ಮಾಡಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಬಿಜೆಪಿಗೆ ರಾಜ್ಯಾಧ್ಯಕ್ಷರು ಇದ್ದರು. ನಾವು ಕೇಳಿದ್ದು ವಿಪಕ್ಷ ನಾಯಕನನ್ನು. ಆದರೆ, ಹೊಸ ರಾಜ್ಯಾಧ್ಯಕ್ಷರನ್ನು ಆಯ್ಕೆ ಮಾಡಿದ್ದಾರೆ. ಅದು ಅವರ ಪಕ್ಷದ ಆಂತರಿಕ ವಿಚಾರ. ಈ ಹಿಂದೆ ಲಿಂಗಾಯತರೇ ರಾಜ್ಯದ ಸಿಎಂ …
Read More »ಡಿಕೆಶಿಯವರೊಂದಿಗೆ ಹೊಂದಾಣಿಕೆ ಪ್ರಶ್ನೆಯೇ ಇಲ್ಲ ಎಂದ ಜಾರಕಿಹೊಳಿ
ಬೆಳಗಾವಿ: ನಾನು ಯಾವುದೇ ಹುದ್ದೆಗೆ ಬೇಡಿಕೆ ಇಟ್ಟಿಲ್ಲ. ಉಪಮುಖ್ಯಮಂತ್ರಿ (DCM) ಡಿ.ಕೆ. ಶಿವಕುಮಾರ್ (D.K. Shivakumar) ಅವರೊಂದಿಗೆ ಹೊಂದಾಣಿಕೆ ಆಗುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ (Sathish jarakiholi) ಹೇಳಿದರು. ಬೆಳಗಾವಿ (belagavi) ರಾಜಕಾರಣದಲ್ಲಿ ಬೇರೆಯವರ ಹಸ್ತಕ್ಷೇಪದ ಕುರಿತು ಮುನಿಸಿಕೊಂಡಿರುವ ಜಾರಕಿಹೊಳಿ ಬೆಳಗಾವಿಯಲ್ಲಿ ಮಾತನಾಡಿ, ಈ ಬಗ್ಗೆ ಪಕ್ಷದ ವತಿಯಿಂದ ಚರ್ಚೆ ನಡೆಯಬೇಕು. ನಾವು ಏನೂ ಮಾಡಲು ಸಾಧ್ಯವಿಲ್ಲ ಎಂದರು. ಡಿ.ಕೆ. ಶಿವಕುಮಾರ್ ಅವರು ಹಲವು ಬಾರಿ …
Read More »
Laxmi News 24×7