Breaking News

ರಾಜಕೀಯ

ರಾಜ್ಯದ ಹಲವೆಡೆ ಹಿಂಗಾರು ಮಳೆ ಮಜ್ಜನ; ಯಲಹಂಕದ ಕೋಗಿಲು ಕ್ರಾಸ್ ಜಲಾವೃತ

ಬೆಂಗಳೂರು : ಸೋಮವಾರ ರಾತ್ರಿಯಿಂದ ನಗರದಲ್ಲಿ ಧಾರಾಕಾರವಾಗಿ ಹಿಂಗಾರು ಮಳೆ ಸುರಿಯುತ್ತಿದೆ. ಕೆಲವೆಡೆ ರಸ್ತೆಗಳಲ್ಲಿ ನೀರು ನಿಂತು ಕೆರೆಯಂತಾದವು. ಹಲವು ಅಂಡರ್‌ಪಾಸ್​ಗಳಲ್ಲಿ ಮೊಣಕಾಲುದ್ದ ನೀರು ತುಂಬಿ ವಾಹನ ಸವಾರರು ಪರದಾಡಿದರು. ಮಲ್ಲೇಶ್ವರಂ, ಶಾಂತಿನಗರ, ಮೈಸೂರು ಬ್ಯಾಂಕ್, ಟೌನ್ ಹಾಲ್, ಯಲಹಂಕ ಸೇರಿ ಹಲವೆಡೆ ಮಳೆ ಸುರಿಯುತ್ತಿದೆ. ಸಂಜೆ ಸಾಧಾರಣವಾಗಿ ಆರಂಭವಾದ ಮಳೆ ನಂತರ ಕೊಂಚ ಬಿಡುವು ನೀಡಿತು. ರಾತ್ರಿಯಾಗುತ್ತಿದ್ದಂತೆ ಮತ್ತೆ ಬಿರುಸಾಯಿತು. ನಗರದ ಹಲವೆಡೆ ಬಿಟ್ಟೂಬಿಡದೆ ಮಳೆಯಾಗುತ್ತಿದೆ. ಯಲಹಂಕದಲ್ಲಿ ಮಳೆ-ಕೋಗಿಲು ಕ್ರಾಸ್ …

Read More »

ರೈತರೇ ಗಮನಿಸಿ : `ಬರ ಪರಿಹಾರ’ ಪಡೆಯಲು `FID’ ಗುರುತಿನ ಸಂಖ್ಯೆ ಕಡ್ಡಾಯ

ಬೆಂಗಳೂರು : ಬೆಳೆ ವಿಮೆ ನೋಂದಣಿಗೆ, ಕನಿಷ್ಟ ಬೆಂಬಲ ಬೆಲೆಯಲ್ಲಿ ಕೃಷಿ ಉತ್ಪನ್ನ ಮಾರಾಟ ಮಾಡಲು, ಬೆಳೆ ಸಾಲ ಪಡೆಯಲು, ಬೆಳೆ ಹಾನಿಗೆ ಪರಿಹಾರ ಪಡೆಯಲು ಹಾಗೂ ಇತರೆ ಸೌಲಭ್ಯ ಪಡೆಯಲು ರೈತರ ಗುರುತಿನ ಸಂಖ್ಯೆ (ಎಫ್‍ಐಡಿ) ಕಡ್ಡಾಯವಾಗಿದೆ. ಎಫ್‍ಐಡಿ ಮಾಡಿಸದ ರೈತರು ಕೂಡಲೇ ಕೃಷಿ ಅಥವಾ ತೋಟಗಾರಿಕೆ ಇಲಾಖೆ ಕಚೇರಿಯಲ್ಲಿ ತಮ್ಮ ಆಧಾರ್ ಕಾರ್ಡ್, ಪಹಣಿ, ಬ್ಯಾಂಕ್ ಪಾಸ್ ಬುಕ್, ಮೊಬೈಲ್ ಸಂಖ್ಯೆಯೊಂದಿಗೆ ತೆರಳಿ ನೋಂದಣಿ ಮಾಡಿಸಿ ಎಫ್‍ಐಡಿ …

Read More »

ಹೆಚ್.ಡಿ.ದೇವೇಗೌಡರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪ್ರದಾನ

ಬೆಂಗಳೂರು: ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಬಹುಮುಖ್ಯ ದತ್ತಿ ಪ್ರಶಸ್ತಿಯಾದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪದ್ಮನಾಭನಗರದ ತಮ್ಮ ನಿವಾಸದಲ್ಲಿ ಇಂದು ಸಂಜೆ ನಡೆದ ಸರಳ ಸಮಾರಂಭದಲ್ಲಿ ಸರ್ವೋಚ್ಚ ನ್ಯಾಯಾಲಯದ ವಿಶ್ರಾಂತ ಮುಖ್ಯ ನ್ಯಾಯಮೂರ್ತಿಗಳಾದ ಎಂ.ಎನ್. ವೆಂಕಟಾಚಲಯ್ಯ ಅವರು ಹಾಗೂ ಪರಿಷತ್ತಿನ ಅಧ್ಯಕ್ಷ ನಾಡೋಜ ಮಹೇಶ್ ಜೋಶಿ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಹೆಚ್.ಡಿ.ದೇವೇಗೌಡರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪ್ರದಾನಪ್ರಶಸ್ತಿ ಪ್ರದಾನ ಮಾಡಿ …

Read More »

ಹಾಲಿ, ಮಾಜಿ ಶಾಸಕರು ಸೇರಿದಂತೆ ಬಿಜೆಪಿ, ಜೆಡಿಎಸ್​​ನ ಹಲವರು ಕಾಂಗ್ರೆಸ್​ಗೆ ಬರ್ತಾರೆ: ಸಿಎಂ

ಬೆಂಗಳೂರು: ಬಿಜೆಪಿ ಮತ್ತು ಜೆಡಿಎಸ್​​ನಿಂದ ಬಹಳಷ್ಟು ಜನ‌ ಕಾಂಗ್ರೆಸ್​ಗೆ ಬರುತ್ತಾರೆ. ಹಾಲಿ ಶಾಸಕರುಗಳೂ ಹಾಗೂ ಮಾಜಿಗಳು ಬರ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಗೃಹ ಕಚೇರಿಯಲ್ಲಿಂದು ಮಾತನಾಡಿದ ಅವರು, ಬರುವವರನ್ನೆಲ್ಲರನ್ನೂ ನಮ್ಮ ಪಕ್ಷಕ್ಕೆ ಸೇರಿಸಿಕೊಳ್ಳುತ್ತೇವೆ. ನೋ ಆಪರೇಷನ್​, ಪಕ್ಷದ ಸಿದ್ಧಾಂತ ಒಪ್ಪಿ ಬರುವವರು ಬಿಜೆಪಿಯವರಾಗಿರಲಿ ಅಥವಾ ಜೆಡಿಎಸ್​ನವರಾಗಿರಲಿ, ಅವರನ್ನು ಕಾಂಗ್ರೆಸ್​​ಗೆ ಸೇರಿಸಿಕೊಳ್ಳುತ್ತೇವೆ ಎಂದರು. ಪ್ರಧಾನಿ ಮೋದಿಗೆ ಸಿಎಂ ತಿರುಗೇಟು: ಮಧ್ಯಪ್ರದೇಶ ಚುನಾವಣಾ ರ‍್ಯಾಲಿಯಲ್ಲಿ ಪ್ರಧಾನಿ ಮೋದಿ ಕರ್ನಾಟಕ ಸರ್ಕಾರದ ವಿರುದ್ಧ ಮಾಡಿದ ಭಾಷಣಕ್ಕೆ …

Read More »

ಹಿರಿಯ ಭೂ ವಿಜ್ಞಾನಿ ಪ್ರತಿಮಾ ಹತ್ಯೆ ಪ್ರಕರಣ: ಮಾಜಿ ಕಾರು ಚಾಲಕನ ಬಂಧನ

ಬೆಂಗಳೂರು: ಹಿರಿಯ ಭೂ ವಿಜ್ಞಾನಿ ಪ್ರತಿಮಾ ಕೆ.ಎಸ್. (45) ಹತ್ಯೆ ಪ್ರಕರಣ ಸಂಬಂಧ ಈ ಹಿಂದೆ ಪ್ರತಿಮಾ ಅವರ ಕಾರು ಚಾಲಕನಾಗಿದ್ದ ಕಿರಣ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ರಾಹುಲ್ ಕುಮಾರ್ ಶಹಾಪುರ್ ಅವರು ಪತ್ರಿಕಾಗೋಷ್ಟಿ ನಡೆಸಿ ಮಾಹಿತಿ ನೀಡಿದರು. ಆರೋಪಿ ಕಿರಣ್ ಕಳೆದ ಎಂಟು ವರ್ಷಗಳಿಂದ ಗಣಿ ಇಲಾಖೆ ಪ್ರಧಾನ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇರೆಗೆ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಕಳೆದ ‌ನಾಲ್ಕು …

Read More »

ನಾನು 2028ಕ್ಕೆ ಸಿಎಂ ಸ್ಥಾನಕ್ಕಾಗಿ ಕ್ಲೈಮ್​ ಮಾಡುತ್ತೇನೆ: ಸತೀಶ್ ಜಾರಕಿಹೊಳಿ

ಬೆಂಗಳೂರು: ಈಗ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ. ನಾನು 2028ಕ್ಕೆ ಸಿಎಂ ಸ್ಥಾನಕ್ಕಾಗಿ ಕ್ಲೈಮ್​ ಮಾಡುತ್ತೇನೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ. ವಿಕಾಸಸೌಧದಲ್ಲಿ ಇಂದು ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬೇರೆಯವರು ಕೇಳುವುದು, ಬಿಡುವುದು ಅವರವರ ಇಷ್ಟಕ್ಕೆ ಬಿಟ್ಟದ್ದು. ನಾವು 28ಕ್ಕೆ ಕ್ಲೈಂ ಮಾಡ್ತೇವೆ. ಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ ಅಂತ ಹೇಳಿದ್ದಾರೆ, ಬೇರೆಯವರು ಹೇಳುವ …

Read More »

ಹಾಡ ಹಗಲೇ ಕಾರಿನ ಗ್ಲಾಸ್ ಒಡೆದು 4.5 ಲಕ್ಷ ಹಣ ಎಗರಿಸಿ ಕಳ್ಳರು ಪರಾರಿ

ಮಂಡ್ಯ: ಹಾಡ ಹಗಲೇ ಕಾರಿನ ಗ್ಲಾಸ್ ಒಡೆದು 4.5 ಲಕ್ಷ ಹಣ ಎಗರಿಸಿ ಕಳ್ಳರು ಪರಾರಿಯಾಗಿರುವ ಘಟನೆ ಮಂಡ್ಯದ ನಗರಸಭೆ ಆವರಣದಲ್ಲಿ ನಡೆದಿದೆ‌. ಪಾಂಡವಪುರ ತಾಲೂಕಿನ ಚಿನಕುರಳಿ ಗ್ರಾಮದ ಪರಮೇಶ್ ಹಣ ಕಳೆದುಕೊಂಡವರು. ನಗರಸಭೆ ಆವರಣದಲ್ಲಿ ಕಾರು ನಿಲ್ಲಿಸಿ ಎಸ್​ಬಿಐ ಬ್ಯಾಂಕ್​ಗೆ ಕೆಲಸದ ನಿಮಿತ್ತ ಹೋಗಿದ್ದರು. ಕಾರಿನಲ್ಲಿ ಹಣವಿಟ್ಟಿದ್ದನ್ನು ಗಮನಿಸಿದ ಖತರ್ನಾಕ್ ಕಳ್ಳರು ಕಾರಿನ ಗಾಜು ಒಡೆದು ಹಣ ದೋಚಿದ್ದಾರೆ. ಪರಮೇಶ್ ರಿಜಿಸ್ಟರ್ ಕಚೇರಿಯಲ್ಲಿ ಜಮೀನು ರಿಜಿಸ್ಟರ್ ಮಾಡಿಸಿ ಹಣ ಪಡೆದು …

Read More »

ಒಂದೂವರೆ ವರ್ಷದ ಹಿಂದೆ ಮೃತಪಟ್ಟ ವ್ಯಕ್ತಿಗೆ ವಿಚಾರಣೆಗೆ ಬರಲು ಕೋರ್ಟ್​ ನೋಟಿಸ್​:

ಬೆಹ್ರೋರ್ (ರಾಜಸ್ಥಾನ): ಇಂತಹ ಘಟನೆಗಳಿಂದ ನಮ್ಮ ನ್ಯಾಯಾಲಯಗಳು ಮತ್ತು ಪೊಲೀಸ್​ ವ್ಯವಸ್ಥೆಯ ಮೇಲೆ ಅನುಮಾನ ಮತ್ತು ಬೇಸರ ಉಂಟಾಗುತ್ತದೆ. ಒಂದೂವರೆ ವರ್ಷಗಳ ಹಿಂದೆ ಮೃತಪಟ್ಟಿದ್ದ ವ್ಯಕ್ತಿಗೆ ಚುನಾವಣಾ ಪ್ರಕ್ರಿಯೆಗೆ ಅಡ್ಡಿ ಆರೋಪದ ಮೇಲೆ ಕೋರ್ಟ್​ ಈಗ ನೋಟಿಸ್​ ನೀಡಿದೆ. ಕಂಡು ಕುಟುಂಬಸ್ಥರು ಅಚ್ಚರಿಗೆ ಒಳಗಾಗಿದ್ದಾರೆ. ಈ ಘಟನೆ ಬೆಳಕಿಗೆ ಬಂದಿದ್ದು ರಾಜಸ್ಥಾನದಲ್ಲಿ. ರಾಜ್ಯದಲ್ಲಿ ನವೆಂಬರ್ 25 ರಂದು ವಿಧಾನಸಭೆ ಚುನಾವಣೆ ನಿಗದಿಯಾಗಿದೆ. ಸೂಕ್ಷ್ಮ ಪ್ರದೇಶಗಳಾದ ಬೆಹ್ರೋರ್, ನೀಮ್ರಾನಾ ಮತ್ತು ಮಂದನ್‌ನಲ್ಲಿ ಕೆಲವರನ್ನು …

Read More »

5 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿದ್ದ ತಂದೆಗೆ 20 ವರ್ಷ ಕಠಿಣ ಶಿಕ್ಷೆ

ಚಾಮರಾಜನಗರ: ಹೆಂಡತಿ ಹೊರ ಹೋದ ವೇಳೆ ಮಗಳ ಮೇಲೆ ಅತ್ಯಾಚಾರ ಎಸಗಿದ್ದ ತಂದೆಗೆ ಚಾಮರಾಜನಗರದ ಮಕ್ಕಳ ಸ್ನೇಹಿ ನ್ಯಾಯಾಲಯವು 20 ವರ್ಷ ಕಠಿಣ ಶಿಕ್ಷೆ ವಿಧಿಸಿ ಆದೇಶ ನೀಡಿದೆ. ಮೈಸೂರಿನ ಗೌಸಿಯ ನಗರದ ನಿವಾಸಿ ಸೈಯದ್ ಮುಜಾಮಿಲ್(45) ಶಿಕ್ಷೆಗೊಳಗಾದ ಅಪರಾಧಿ. ಈತ ಮೂರು ಮದುವೆ ಯಾಗಿದ್ದು, ಮೊದಲ ಹೆಂಡತಿ ದೂರವಾಗಿದ್ದರೆ, ಎರಡನೇ ಹೆಂಡತಿ ಮೃತಪಟ್ಟಿದ್ದಳು. ಚಾಮರಾಜನಗರದ ಮೂಲದ ಮಹಿಳೆಯೊಬ್ಬರ ಜೊತೆ ಮೂರನೇ ವಿವಾಹವಾಗಿತ್ತು. 2022ರ ಜನವರಿ 4 ರಂದು ಅಪರಾಧಿ ಪತ್ನಿ …

Read More »

ರಾಜ್ಯದ ವಿವಿಧೆಡೆ ಧಾರಾಕಾರ ಮಳೆ.

ಹಾವೇರಿ: ಸೋಮವಾರ ಸಂಜೆ ಹಾವೇರಿ ನಗರ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಭಾರಿ ಮಳೆಯಾಗಿದೆ. ನಿಧಾನವಾಗಿ ಆರಂಭವಾದ ಮಳೆ ನಂತರ ತೀವ್ರತೆ ಪಡೆಯಿತು. ಸುಮಾರು ಗಂಟೆಗೂ ಅಧಿಕ ಕಾಲ ಸುರಿದ ಮಳೆರಾಯನ ಆರ್ಭಟಕ್ಕೆ ಜನಜೀವನ ಅಸ್ತವ್ಯಸ್ಥಗೊಂಡಿತ್ತು. ಮಳೆಯ ರಭಸಕ್ಕೆ ಚರಂಡಿಗಳೆಲ್ಲ ತುಂಬಿ ಚರಂಡಿಯ ನೀರು ತ್ಯಾಜ್ಯ ರಸ್ತೆಗಳ ಮೇಲೆ ಬಂದು ನಿಂತಿತು. ರೈಲು ನಿಲ್ದಾಣದ ಬಳಿ ಇರುವ ಅಂಡರ್​​ ಬ್ರಿಡ್ಜ್‌ನಲ್ಲಿ ಮಳೆ ನೀರು ನಿಂತು ಕೆಲಕಾಲ ರಸ್ತೆ ಸಂಚಾರ ಸಹ ಸ್ಥಗಿತವಾಗಿತ್ತು. ವಾಹನ …

Read More »