ಬೆಂಗಳೂರು : ಬೇಲಿಯೇ ಎದ್ದು ಹೊಲ ಮೇಯ್ದಂತೆ ಖದೀಮರನ್ನ ಸದೆ ಬಡಿಯಬೇಕಾದ ರೈಲ್ವೇ ಹೆಡ್ಕಾನ್ಸ್ಟೇಬಲ್ ಬಬ್ಬರನ್ನು ಕಳ್ಳನೊಂದಿಗೆ ಶಾಮೀಲಾಗಿ ರೈಲುಗಳಲ್ಲಿ ಕಳ್ಳತನವೆಸಗುತ್ತಿದ್ದ ಜಾಲವನ್ನ ಬೆಂಗಳೂರು ದಂಡು ರೈಲ್ವೇ ಪೊಲೀಸರು ಪತ್ತೆ ಹಚ್ಚಿದ್ದಾರೆ. ಚಿಕ್ಕಬಳ್ಳಾಪುರ ರೈಲ್ವೆ ಹೊರ ಪೊಲೀಸ್ ಠಾಣೆಯಲ್ಲಿ ಹೆಡ್ಕಾನ್ಸ್ಟೇಬಲ್ ಆಗಿರುವ ಸಿದ್ದರಾಮರೆಡ್ಡಿ ಹಾಗೂ ಖದೀಮ ಸಾಬಣ್ಣ ಎಂಬುವರನ್ನ ಬಂಧಿಸಿ, ಪೊಲೀಸ್ ಕಸ್ಟಡಿ ಪಡೆದು ಹೆಚ್ಚಿನ ವಿಚಾರಣೆಗೊಳಪಡಿಸಲಾಗಿದೆ. 2011ರ ಬ್ಯಾಚ್ ಸಿಬ್ಬಂದಿಯಾಗಿದ್ದ ಸಿದ್ದರಾಮರೆಡ್ಡಿ, ರೈಲ್ವೇ ಹೆಡ್ಕಾನ್ಸ್ಟೇಬಲ್ ಆಗಿ ರಾಯಚೂರಿನಲ್ಲಿ ಸೇವೆಗೆ …
Read More »ರೈಲ್ವೆ ನಿಲ್ದಾಣದ ಬಳಿ ಸಿಕ್ಕ ಅನುಮಾನಾಸ್ಪದ ಬಾಕ್ಸ್ನಲ್ಲಿ ಉಪ್ಪು ಪತ್ತೆ: ಶಿವಮೊಗ್ಗ ಎಸ್ಪಿ
ಶಿವಮೊಗ್ಗ : ನಗರದ ರೈಲು ನಿಲ್ದಾಣದ ಬಳಿ ಭಾನುವಾರ ಪತ್ತೆಯಾದ ಬಾಕ್ಸ್ನಲ್ಲಿ ಯಾವುದೇ ಸ್ಫೋಟಕ ವಸ್ತುಗಳಿರಲಿಲ್ಲ. ಬಾಕ್ಸ್ನಲ್ಲಿ ಪತ್ತೆಯಾಗಿರುವುದು ಉಪ್ಪು ಎಂದು ಮೇಲ್ನೋಟಕ್ಕೆ ಅನಿಸಿದೆ ಎಂದು ಎಸ್ಪಿ ಮಿಥುನ್ ಕುಮಾರ್ ತಿಳಿಸಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿನ್ನೆ ಶಿವಮೊಗ್ಗದ ರೈಲು ನಿಲ್ದಾಣದ ಪಾರ್ಕಿಂಗ್ ಜಾಗದ ಬಳಿ ಪತ್ತೆಯಾದ ಬಾಕ್ಸ್ನಲ್ಲಿ ಅನುಮಾನಾಸ್ಪದ ವಸ್ತುಗಳಿವೆ ಎಂದು ತಿಳಿದು ಬಂದ ಕಾರಣ ಪರಿಶೀಲನೆ ಮಾಡಿದ್ದೆವು. ನಂತರ ಅದು ಇನ್ನಷ್ಟು ಹೆಚ್ಚಿನ ಪರಿಶೀಲನೆ ಅವಶ್ಯಕತೆ ಇದೆ …
Read More »ಟೈಗರ್ 3′ ಮುಂಗಡ ಬುಕ್ಕಿಂಗ್ನಲ್ಲಿ ದಾಖಲೆ; ಸಿನಿಮಾ ಟಿಕೆಟ್ ಶರವೇಗದಲ್ಲಿ ಮಾರಾಟ
ಮನೀಶ್ ಶರ್ಮಾ ನಿರ್ದೇಶನದ, ಸಲ್ಮಾನ್ ಖಾನ್ ಮತ್ತು ಕತ್ರಿನಾ ಕೈಫ್ ನಟನೆಯ ‘ಟೈಗರ್ 3’ ಸಿನಿಮಾದ ಅಡ್ವಾನ್ಸ್ ಬುಕ್ಕಿಂಗ್ಗೆ ಉತ್ತಮ ರೆಸ್ಪಾನ್ಸ್ ಸಿಗುತ್ತಿದೆ. ಭಾರತೀಯ ಚಿತ್ರರಂಗದ ಬಹುನಿರೀಕ್ಷೆಯ ಸಿನಿಮಾ ‘ಟೈಗರ್ 3’. ಸಲ್ಮಾನ್ ಖಾನ್, ಕತ್ರಿನಾ ಕೈಫ್ ಮತ್ತು ಇಮ್ರಾನ್ ಹಶ್ಮಿ ಮುಖ್ಯಭೂಮಿಕೆಯ ಈ ಚಿತ್ರದ ಮೇಲೆ ಭಾರೀ ನಿರೀಕ್ಷೆ ಇದೆ. ಮನೀಶ್ ಶರ್ಮಾ ನಿರ್ದೇಶನದ ಸಿನಿಮಾದ ಅಡ್ವಾನ್ಸ್ ಬುಕ್ಕಿಂಗ್ಗೆ ಉತ್ತಮ ರೆಸ್ಪಾನ್ಸ್ ಸಿಗುತ್ತಿದೆ. ಬಿಡುಗಡೆಗೂ ಮುನ್ನ ಟಿಕೆಟ್ಗಳು ಶರವೇಗದಲ್ಲಿ …
Read More »ರಾಜ್ಯ ಸರ್ಕಾರದ ಕಾರ್ಯವೈಖರಿ ವಿರೋಧಿಸಿ ಸಂಸದ ಸಂಗಣ್ಣ ಕರಡಿ ಉಪವಾಸ ಸತ್ಯಾಗ್ರಹ
ಕೊಪ್ಪಳ : ರೈತರ ಕೃಷಿ ಪಂಪ್ಸೆಟ್ಗಳಿಗೆ ಪರಿವರ್ತಕ ಸಹಿತ ಉಚಿತ ಮೂಲಸೌಕರ್ಯ ಒದಗಿಸುವ ಯೋಜನೆ ರದ್ದುಪಡಿಸುವ ಆದೇಶ ಹಿಂಪಡೆಯಬೇಕು. ರೈತರ ಪಂಪ್ಸೆಟ್ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಸೇರಿದಂತೆ ವಿವಿಧ ಬೇಡಿಕೆ ಮುಂದಿಟ್ಟುಕೊಂಡು ಕೊಪ್ಪಳ ಜಿಲ್ಲಾಡಳಿತ ಭವನದ ಮುಂದೆ ಸಂಸದ ಸಂಗಣ್ಣ ಕರಡಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ರೈತರು ಬದುಕೋದೆ ಕಷ್ಟವಾಗಿದೆ. ಅಂತಹದರಲ್ಲಿ ಸೆಪ್ಟೆಂಬರ್ 22ರಿಂದ ಬಂದ ರೈತರ ಅರ್ಜಿಗಳಿಗೆ ಪಂಪ್ಸೆಟ್ ಸಲಕರಣೆ ಉಚಿತ ಕೊಡೋದಿಲ್ಲ ಅಂತ ರಾಜ್ಯ ಸರ್ಕಾರ ಆದೇಶ ಮಾಡಿದೆ. …
Read More »ಹಿರಿಯ ಭೂ ವಿಜ್ಞಾನಿ ಪ್ರತಿಮಾ ಹತ್ಯೆ ಪ್ರಕರಣ: ಮಾಜಿ ಕಾರು ಚಾಲಕನ ಬಂಧನ
ಬೆಂಗಳೂರು: ಹಿರಿಯ ಭೂ ವಿಜ್ಞಾನಿ ಪ್ರತಿಮಾ ಕೆ.ಎಸ್. (45) ಹತ್ಯೆ ಪ್ರಕರಣ ಸಂಬಂಧ ಈ ಹಿಂದೆ ಪ್ರತಿಮಾ ಅವರ ಕಾರು ಚಾಲಕನಾಗಿದ್ದ ಕಿರಣ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ರಾಹುಲ್ ಕುಮಾರ್ ಶಹಾಪುರ್ ಅವರು ಪತ್ರಿಕಾಗೋಷ್ಟಿ ನಡೆಸಿ ಮಾಹಿತಿ ನೀಡಿದರು. ಆರೋಪಿ ಕಿರಣ್ ಕಳೆದ ಎಂಟು ವರ್ಷಗಳಿಂದ ಗಣಿ ಇಲಾಖೆ ಪ್ರಧಾನ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇರೆಗೆ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಕಳೆದ ನಾಲ್ಕು …
Read More »ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ: ಈರಣ್ಣ ಕಡಾಡಿ
ಬೆಳಗಾವಿ : ರೈತರ ಕೃಷಿ ಪಂಪ್ ಸೆಟ್‌ಗಳಿಗೆ ಸ್ವಂತ ಖರ್ಚಿನಲ್ಲಿಯೇ ಹೊಸ ಸಂಪರ್ಕ ಪಡೆಯುವ ಆದೇಶವನ್ನು ರಾಜ್ಯ ಸರ್ಕಾರ ಕೂಡಲೇ ಹಿಂಪಡೆಯಬೇಕು. ಇದೇ ತಿಂಗಳು 10ರಂದು ರಾಜ್ಯಾದ್ಯಂತ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತೇವೆ. ಅದಕ್ಕೂ ಮಣಿಯದಿದ್ದರೆ ಚಳಿಗಾಲ ಅಧಿವೇಶನದ ವೇಳೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಬೇಕಾಗುತ್ತದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಎಚ್ಚರಿಸಿದ್ದಾರೆ. ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಬರಗಾಲ, ಅನಿಯಮಿತ ವಿದ್ಯುತ್ ಲೋಡ್ ಶೆಡ್ಡಿಂಗ್‌ನಿಂದ ಕಂಗಾಲದ …
Read More »ರಾಜ್ಯದೆಲ್ಲೆಡೆ ಕೃಷಿ ಪಂಪ್ಸೆಟ್ಗಳಿಗೆ ಏಳು ತಾಸು ನಿರಂತರ ವಿದ್ಯುತ್ ಪೂರೈಕೆ: ಸಿಎಂ
ಬೆಂಗಳೂರು : ಕೃಷಿ ಪಂಪ್ಸೆಟ್ಗೆ ಇನ್ನು ಮುಂದೆ ನಿರಂತರ 7 ತಾಸು ತ್ರಿಫೇಸ್ ವಿದ್ಯುತ್ ಪೂರೈಕೆ ಮಾಡಲು ನಿರ್ಧರಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಇಂಧನ ಇಲಾಖೆ ಪರಿಶೀಲನೆ ನಡೆಸಿ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಮೂರು ವಾರಗಳ ಹಿಂದೆ ಇಂಧನ ಇಲಾಖೆಯಲ್ಲಿ ಪರಿಶೀಲನೆ ಮಾಡಲಾಗಿತ್ತು. ಆಗಲೇ ಕೃಷಿ ಪಂಪ್ಸೆಟ್ಗೆ ಏಳು ಗಂಟೆ ವಿದ್ಯುತ್ ಕೊಡುತ್ತೇವೆ ಎಂದು ಭರವಸೆ ಕೊಟ್ಟಿದ್ದೆವು. ಆಗ ನಮಗೆ ಐದು ಗಂಟೆ …
Read More »10 ಕೆಜಿ ಅಕ್ಕಿ ವಿತರಣೆ ಮಾಡೋ ಗುರಿ ಇದೆ.. ಕೇಂದ್ರ ಹೆಚ್ಚುವರಿ ಅಕ್ಕಿ ನೀಡುತ್ತಿಲ್ಲ:ಮುನಿಯಪ್ಪ
ಮೈಸೂರು: “ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಅಪ್ರಸ್ತುತವಾಗಿದ್ದು, ಈಗ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಇದ್ದಾರೆ. ಸರ್ಕಾರ ಸುಭದ್ರವಾಗಿದೆ. ಸರ್ಕಾರಕ್ಕೆ ಯಾವುದೇ ಅಪಾಯ ಇಲ್ಲ” ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ ಹೆಚ್ ಮುನಿಯಪ್ಪ ಹೇಳಿದರು. ಮೈಸೂರಿನ ಮುಕ್ತ ವಿಶ್ವವಿದ್ಯಾಲಯದ ಘಟಿಕೋತ್ಸವ ಸಭಾಂಗಣದಲ್ಲಿ ಒಂದು ರಾಷ್ಟ್ರ ಒಂದು ಪಡಿತರ ಚೀಟಿ ಯೋಜನೆಯ ಕಾರ್ಯಕ್ರಮ ಉದ್ಘಾಟನೆ ಮಾಡಿ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. “ರಾಜ್ಯದ ಅಯಾ ಭಾಗದ ಜನರ ಆಹಾರ ಪದ್ಧತಿಗೆ …
Read More »ಮರಳು ಸಮಸ್ಯೆ ಪರಿಹರಿಸಲು ಸರ್ಕಾರದಿಂದ ಪ್ರಾಮಾಣಿಕ ಪ್ರಯತ್ನ: ಗುಂಡೂರಾವ್
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮರಳಿನ ಸಮಸ್ಯೆಯನ್ನು ಪರಿಹರಿಸಲು ನಮ್ಮ ಕಾಂಗ್ರೆಸ್ ಸರ್ಕಾರ ಪ್ರಾಮಾಣಿಕ ಪ್ರಯತ್ನ ನಡೆಸಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಮಂಗಳೂರು ನಗರ ದಕ್ಷಿಣ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಮರಳು ಸಮಸ್ಯೆ ಬಗ್ಗೆ ಮಾಡಿರುವ ಆರೋಪಕ್ಕೆ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಸಚಿವರು, ಶಾಸಕರಾದ ವೇದವ್ಯಾಸ್ ಕಾಮತ್ ಅವರೇ, ದಕ್ಷಿಣ ಕನ್ನಡ ಜಿಲ್ಲೆಯ ಮರಳಿನ ಸಮಸ್ಯೆ ಕಾಂಗ್ರೆಸ್ ಸರ್ಕಾರ …
Read More »ಸತೀಶ್ ಜಾರಕಿಹೊಳಿ ಅವರಿಗೆ ನಾಡಿನ ದೂರೆಯಾಗುವ ಶಕ್ತಿ ಇದೆ.: ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ
ಬಾಗಲಕೋಟೆ: “ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ನಾಡಿನ ದೂರೆಯಾಗುವ ಶಕ್ತಿ ಇದೆ. ಬರುವ ದಿನಗಳಲ್ಲಿ ಅವರಿಗೆ ಬೆಂಬಲವಾಗಿ ನಿಲ್ಲುತ್ತೇವೆ” ಎಂದು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಅಭಿಪ್ರಾಯಪಟ್ಟರು. ಬಾಗಲಕೋಟೆ ನವನಗರದ ಕಲಾ ಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಜಿಲ್ಲಾ ವಾಲ್ಮೀಕಿ ಜನಜಾಗೃತಿ ಸಮಾವೇಶದ ಸಾನಿಧ್ಯವಹಿಸಿ ಮಾತನಾಡಿದ ಅವರು, “ರಾಜ್ಯ ರಾಜಕೀಯದಲ್ಲಿ ಏನಾದರೂ ಬೆಳವಣಿಗೆಗಳು ನಡೆದರೆ ದಲಿತರೊಬ್ಬರು ರಾಜ್ಯದ ಮುಖ್ಯಮಂತ್ರಿಯಾಗಲಿ ಎಂಬ ಸ್ಪಷ್ಟ ಸಂದೇಶವನ್ನು ಕಳುಹಿಸೋಣ” ಎಂದು ಕರೆ ನೀಡಿದರು. “ದಲಿತರು ವೋಟ್ …
Read More »
Laxmi News 24×7