Breaking News

ರಾಜಕೀಯ

ನ್ನಡದಲ್ಲೂ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ: ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಮನವಿ

ಬೆಂಗಳೂರು: ಕೇಂದ್ರ ಸರ್ಕಾರದ ಉದ್ಯೋಗಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಹಿಂದಿ ಮತ್ತು ಇಂಗ್ಲಿಷ್​ ಭಾಷೆಯಲ್ಲಿ ಮಾತ್ರ ನಡೆಸುವುದನ್ನು ಒಪ್ಪಲು ಸಾಧ್ಯವಿಲ್ಲ. ಕನ್ನಡದಲ್ಲಿ ಪ್ರವೇಶ ಪರೀಕ್ಷೆ ನಡೆಸುವಂತೆ ಈ ಹಿಂದೆ ಒತ್ತಾಯಿಸಿದ್ದೆ. ಅಗತ್ಯ ಬಿದ್ದರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಭಾಷಾ ಮಾಧ್ಯಮವನ್ನು ಮರುಪರಿಶೀಲಿಸುವಂತೆ ಪ್ರಧಾನಿ ಮೋದಿಗೆ ಮತ್ತೊಮ್ಮೆ ಪತ್ರ ಬರೆಯುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಕಂಠೀರವ ಕ್ರೀಡಾಂಗಣದಲ್ಲಿ ರಾಜ್ಯ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಆಯೋಜನೆ ಮಾಡಿದ್ದ 68ನೇ ಕರ್ನಾಟಕ ರಾಜ್ಯೋತ್ಸವ ಆಚರಣೆ …

Read More »

ಅರಣ್ಯ ಸಿಬ್ಬಂದಿ ಗಾಯಗೊಳಿಸಿ ಪರಾರಿಯಾಗಿದ್ದ ಚಿರತೆ ಕೊನೆಗೂ ಸೆರೆ

ಬೆಂಗಳೂರು: ಕಾರ್ಯಾಚರಣೆ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ದಾಳಿ ಮಾಡಿದ್ದ ಚಿರತೆಯನ್ನು ಕೊನೆಗೂ ಸೆರೆ ಹಿಡಿಯಲಾಗಿದೆ. ಬೊಮ್ಮನಹಳ್ಳಿ ಕೃಷ್ಣಾರೆಡ್ಡಿ ಬಡಾವಣೆ ಸುತ್ತಮುತ್ತ ಕಾಣಿಸಿಕೊಂಡು ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಿದ್ದ ಚಿರತೆ ಬೋನಿನಲ್ಲಿ ಬಂಧಿಯಾಗಿದೆ. ಚಿರತೆ ಕಾಣಿಸಿಕೊಂಡ ಹಿನ್ನೆಲೆ ಸೆರೆಹಿಡಿಯಲು ಟಾಸ್ಕ್​ ಫೋರ್ಸ್​ ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡಿದ್ದರು. ಈ ವೇಳೆ ಟಾಸ್ಕ್​ ಫೋರ್ಸ್​ ಸಿಬ್ಬಂದಿ ಧನರಾಜ್​ ಎಂಬುವರು ಚಿರತೆ ದಾಳಿಯಿಂದ ಗಾಯಗೊಂಡಿದ್ದರು. ಚಿರತೆ ದಾಳಿಯಿಂದ ಧನರಾಜ್​ ಕಾಲು, ಹೊಟ್ಟೆ ಭಾಗಕ್ಕೆ ಗಾಯವಾಗಿದ್ದು, ಅವರನ್ನು …

Read More »

ಪ್ರಸ್ತುತ ನಾವು ಬಳಕೆ ಮಾಡುತ್ತಿರುವ ಧ್ವಜ ಬೇರೊಂದು ಪಕ್ಷದ ಧ್ವಜವಾಗಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

ಬೆಂಗಳೂರು: ಕರ್ನಾಟಕದ ಹೆಸರಿಗೆ ಇಂದು 50ರ ಸಂಭ್ರಮ. ನಾಡಿನೆಲ್ಲೆಡೆ ಸಡಗರ ಸಂಭ್ರಮದಿಂದ ಹಳದಿ ಮತ್ತು ಕೆಂಪು ಬಣ್ಣದ ನಾಡಧ್ವಜಗಳು ಹಾರಾಡುತ್ತಿವೆ. ಆದರೆ ಈ ಧ್ವಜ ಅಧಿಕೃತ ನಾಡಧ್ವಜವಾ? ಈ ಧ್ವಜವನ್ನು ಯಾರು ರಚಿಸಿದ್ದು, ಸರ್ಕಾರ ನಾಡಧ್ವಜದ ವಿಚಾರದಲ್ಲಿ ಏನೆಲ್ಲಾ ಮಾಡಿದೆ. ನಾಡಧ್ವಜ ಹೊಂದಲು ಸಾಂವಿಧಾನಿಕ ಮಾನ್ಯತೆ ಇದೆಯಾ ಎನ್ನುವ ಕುರಿತ ವರದಿ ಇಲ್ಲಿದೆ. 1956ರಲ್ಲಿಯೇ ಕನ್ನಡಿಗರ ವಾಸಿಸುವ ಪ್ರದೇಶಗಳನ್ನು ಒಳಗೊಂಡು ರಾಜ್ಯ ಏಕೀಕರಣಗೊಂಡರೂ ಕರ್ನಾಟಕದ ಹೆಸರು ಪಡೆಯಲು 17 ವರ್ಷ ಹೋರಾಟ …

Read More »

ರಾಜ್ಯದಲ್ಲಿ ಸೈಬರ್ ಪ್ರಕರಣ ಹೆಚ್ಚಳ, ಸೈಬರ್ ಕ್ರೈಂ ತಡೆಗೆ ಹೊಸ ನಿಯಮ ತರಲು ಕ್ರಮ: ಡಾ. ಪರಮೇಶ್ವರ್

ತುಮಕೂರು: ರಾಜ್ಯದಲ್ಲಿ ಸೈಬರ್ ಪ್ರಕರಣಗಳು ಹೆಚ್ಚಾಗ್ತಿದ್ದು, ಇಂಥ ಪ್ರಕರಣಗಳ ತಡೆಗೆ ಎಚ್ಚರಿಕೆ ವಹಿಸ್ತಿದ್ದೇವೆ. ಇದಕ್ಕಾಗಿ ಹೋಂ ಡಿಪಾರ್ಟ್ಮೆಂಟ್ ಹಾಗೂ ಐಟಿ ಡಿಪಾರ್ಟ್ಮೆಂಟ್ ಸೇರಿ ಒಂದು ಹೊಸ ಸಮಿತಿ ಮಾಡಲಾಗಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದ್ದಾರೆ. ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಆಯಂಟಿ ಸೈಬರ್ ಕಾನೂನು ಜಾರಿಗೆ ತರಲು ಒಂದು ಅಜೆಂಡಾ ರೂಪಿಸಲು ಜವಾಬ್ದಾರಿ ಕೊಟ್ಟಿದ್ದಾರೆ.ನಾವು ಸದ್ಯದಲ್ಲೇ ಅದನ್ನ ಪ್ರಕಟಣೆ ಮಾಡ್ತೀವಿ. ಸೈಬರ್ ಪ್ರಕರಣಗಳನ್ನು ಪೊಲೀಸ್ ಇಲಾಖೆ ಗಂಭೀರವಾಗಿ …

Read More »

ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿ ಕುರಿತು ಸರ್ಕಾರ ಸರ್ವಪಕ್ಷ ಸಭೆ

ಮುಂಬೈ (ಮಹಾರಾಷ್ಟ್ರ): ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿ ಕಿಚ್ಚು ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆಯುತ್ತಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಇಂದು ರಾಜಧಾನಿ ಮುಂಬೈನಲ್ಲಿ ಸರ್ವಪಕ್ಷ ಸಭೆ ನಡೆಸಿದೆ. ಮರಾಠ ಮೀಸಲಾತಿ ನೀಡಲು ಎಲ್ಲ ಪಕ್ಷಗಳು ಒಪ್ಪಿಗೆ ಸೂಚಿಸಿವೆ ಎಂದು ಮುಖ್ಯಮಂತ್ರಿ ಏಕನಾಥ್ ಶಿಂಧೆ ಸಭೆ ಬಳಿಕ ತಿಳಿಸಿದ್ದಾರೆ. ಸರ್ವಪಕ್ಷ ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ವಪಕ್ಷ ಸಭೆಯಲ್ಲಿ ಮರಾಠ ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎಂದು ಎಲ್ಲರೂ ಒಪ್ಪಿಕೊಂಡಿದ್ದಾರೆ. ಅದು …

Read More »

ಬೆಳಗಾವಿಯಲ್ಲಿ ಸಚಿವ ಜಾರಕಿಹೊಳಿ ಧ್ವಜಾರೋಹಣ; ಕರ್ನಾಟಕ ಭಾವೈಕ್ಯತೆ ತವರು ಮನೆ ಎಂದು ಬಣ್ಣನೆ

ಬೆಳಗಾವಿ : ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವಕ್ಕೆ ಭುವನೇಶ್ವರಿ ದೇವಿ ಮೂರ್ತಿಗೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್​ ಜಾರಕಿಹೊಳಿ ಪೂಜೆ ಸಲ್ಲಿಸಿದರು. ಬಳಿಕ ಹಳದಿ-ಕೆಂಪು ಬಣ್ಣದ ಬಲೂನ್​ಗಳನ್ನು ಹಾರಿಸುವ ಮೂಲಕ‌ ಚಾಲನೆ ನೀಡಿ, ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಕನ್ನಡ ನಾಡು ವಿವಿಧ ಧರ್ಮ ಮತ್ತು ಸಂಸ್ಕೃತಿಗಳ ಸಂಗಮವಾಗಿದೆ. ಪ್ರಾಚೀನ ಕಾಲದಿಂದಲೂ ತನ್ನದೇ ಆದ ಭವ್ಯ ಸಾಂಸ್ಕೃತಿಕ ಪರಂಪರೆಯನ್ನು ಬೆಳೆಸಿಕೊಂಡು ಬಂದಿದೆ. ಸಾಮರಸ್ಯವೇ ಕನ್ನಡ ಸಂಸ್ಕೃತಿಯ ಜೀವಾಳ. ನಾಡಿನ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಲು …

Read More »

ಭಾರತೀಯ ನಾಗರಿಕರು ಇದೇ ನವೆಂಬರ್ 10ರಿಂದ ತನ್ನ ದೇಶಕ್ಕೆ ವೀಸಾ ಇಲ್ಲದೆ ಪ್ರಯಾಣಿಸಬಹುದು

ನವದೆಹಲಿ: ಭಾರತೀಯರು ವೀಸಾ ಇಲ್ಲದೆ ತನ್ನ ದೇಶಕ್ಕೆ ಭೇಟಿ ನೀಡಬಹುದು ಎಂದು ಥಾಯ್ಲೆಂಡ್ ಹೇಳಿದೆ. ಭಾರತೀಯರು ನವೆಂಬರ್ 10, 2023 ರಿಂದ ಮೇ 10, 2024 ರವರೆಗೆ ವೀಸಾ ಇಲ್ಲದೆ ಥಾಯ್ಲೆಂಡ್‌ಗೆ ಪ್ರವಾಸ ಕೈಗೊಳ್ಳಬಹುದು ಮತ್ತು ಅಲ್ಲಿ 30 ದಿನಗಳವರೆಗೆ ಉಳಿಯಬಹುದು ಎಂದು ಥಾಯ್ ಪ್ರವಾಸೋದ್ಯಮ ಇಲಾಖೆ ತಿಳಿಸಿದೆ.   ತನ್ನ ದೇಶಕ್ಕೆ ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಥಾಯ್ಲೆಂಡ್ ಈಗ ಭಾರತ ಮತ್ತು ತೈವಾನ್ ನಾಗರಿಕರಿಗೆ ವೀಸಾರಹಿತ ಪ್ರವಾಸದ ಸೌಲಭ್ಯ …

Read More »

ಅರಣ್ಯ ಇಲಾಖೆಯ ಬೋನಿಗೆ ಬೀಳದ ಚಿರತೆ, ಮುಂದುವರೆದ ಕಾರ್ಯಾಚರಣೆ

ಬೆಂಗಳೂರು: ನಗರದ ಹೊರವಲಯದಲ್ಲಿರುವ ಬೊಮ್ಮನಹಳ್ಳಿಯ ಸಿಂಗಸಂದ್ರ ಎಇಸಿಎಸ್ ಲೇಔಟ್‌ನಲ್ಲಿ ಸೋಮವಾರ ಕಾಣಿಸಿಕೊಂಡ ಚಿರತೆ, ಈವರೆಗೆ ಅಧಿಕಾರಿಗಳ ಕಣ್ಣಿಗೆ ಬಿದ್ದಿಲ್ಲ. ಪರಿಣಾಮ ಜನರು ಭಯದಲ್ಲಿಯೇ ಓಡಾಡುಂತಾಗಿದೆ. ಸೆರೆಗಾಗಿ ಎರಡು ಬೋನುಗಳನ್ನು ಇಟ್ಟಿರುವ ಅರಣ್ಯ ಇಲಾಖೆ ಐದು ತಂಡಗಳನ್ನು ನಿಯೋಜಿಸಿ ಕಾರ್ಯಾಚರಣೆಗೆ ಇಳಿದಿದ್ದಾರೆ. ಕಡೆಂಜಾ ಅಪಾರ್ಟ್​ಮೆಂಟ್​ ಸಮೀಪ ಚಿರತೆ ಓಡಾಡುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಸುತ್ತಮುತ್ತ ಹುಡುಕಾಟ ನಡೆಸಿದ್ದಾರೆ. ಆದರೆ, ಚಿರತೆ ಮಾತ್ರ ಅಧಿಕಾರಿಗಳ ತಪ್ಪಿಸಿಕೊಂಡು ಓಡಾಡುತ್ತಿದೆ. ಮೈಸೂರಿನಿಂದ ವಿಶೇಷ ತಂಡ ಸೇರಿದಂತೆ ಬನ್ನೇರುಘಟ್ಟದ ಅರವಳಿಕೆ …

Read More »

ಗಡಿಜಿಲ್ಲೆ ಚಾಮರಾಜನಗರದ ಇಬ್ಬರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದರೆ, ಕೊಪ್ಪಳ ಜಿಲ್ಲೆಯಲ್ಲಿ ಮೂವರು, ಬೆಳಗಾವಿಯ ಇಬ್ಬರು ಹಾಗು ವಿಜಯನಗರ ಜಿಲ್ಲೆಯಲ್ಲಿ ಒಬ್ಬರಿಗೆ ಪ್ರಶಸ್ತಿ ದೊರಕಿದೆ.

ಚಾಮರಾಜನಗರ: ನವೆಂಬರ್ 1ರಂದು 50ನೇ ವರ್ಷದ ಕರ್ನಾಟಕ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 68 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಇಂದು ಬೆಂಗಳೂರಿನಲ್ಲಿ ಘೋಷಿಸಿದರು. ಚಾಮರಾಜನಗರದ ಇಬ್ಬರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದರೆ, ಕೊಪ್ಪಳ ಜಿಲ್ಲೆಯಲ್ಲಿ ಮೂವರು, ಬೆಳಗಾವಿ ಜಿಲ್ಲೆಯ ಇಬ್ಬರು, ವಿಜಯನಗರ ಜಿಲ್ಲೆಯಲ್ಲಿ ಒಬ್ಬರಿಗೆ ಪ್ರಶಸ್ತಿ ಸಿಕ್ಕಿದೆ. ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಗಣ್ಯರ ವಿವರ ಹೀಗಿದೆ. ಪ್ರೊ.ಸಿ.ನಾಗಣ್ಣ: ಮೈಸೂರು …

Read More »

ಕರ್ನಾಟಕಕ್ಕೆ 50ರ ಸಂಭ್ರಮವಾದ್ರೂ, ಕನ್ನಡ ಭಾಷೆ ಮಾತ್ರ ಬೆಳವಣಿಗೆಯಾಗಿಲ್ಲ: ಮುಖ್ಯಮಂತ್ರಿ ಚಂದ್ರು

ಬೆಂಗಳೂರು: ಪ್ರತಿವರ್ಷ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತದೆ. ಮೈಸೂರು ರಾಜ್ಯವು ಈಗಿನ ಕರ್ನಾಟಕ 1956ರ ನವೆಂಬರ್ 1ರಂದು ಏಕೀಕರಣವಾಗಿದ್ದು, ಇದರ ಸಂಕೇತವಾಗಿ ರಾಜ್ಯೋತ್ಸವ ಆಚರಿಸುತ್ತೇವೆ. ರಾಜ್ಯ ಸರ್ಕಾರ ಕೂಡ ಈ ವರ್ಷ ಕನ್ನಡ ರಾಜ್ಯೋತ್ಸವವನ್ನು ಮನೆ ಮನೆಗಳಲ್ಲಿ ರಂಗೋಲಿ ಹಾಗೂ ದೀಪಗಳನ್ನು ಹಚ್ಚುವ ಮೂಲಕ ಅದ್ಧೂರಿಯಾಗಿ ಆಚರಿಸುವಂತೆ ಮನವಿ ಮಾಡಿದೆ. ವಿಶಾಲ ಮೈಸೂರು ರಾಜ್ಯಕ್ಕೆ ನವೆಂಬರ್ 1, 1973ರಂದು ‘ಕರ್ನಾಟಕ’ ಎಂದು ಮರುನಾಮಕರಣ ಮಾಡಲಾಯಿತು. ಈ ಕುರಿತು ಹಿರಿಯ ನಟ …

Read More »