Breaking News

ರಾಜ್ಯ

ಬೆಳಗಾವಿಯ ಶಾಂತಾಯಿ ವೃದ್ಧಾಶ್ರಮದಲ್ಲಿ ಇಂದು ಆಧ್ಯಾತ್ಮಿಕ ಸಂಭ್ರಮ: ಶ್ರೀ ಸ್ವಾಮಿ ಸಮರ್ಥ ಹಾಗೂ ವಿಠ್ಠಲ-ರುಕುಮಾಯಿ ಮೂರ್ತಿ ಪ್ರತಿಷ್ಠಾಪನೆ

ಬೆಳಗಾವಿಯ ಶಾಂತಾಯಿ ವೃದ್ಧಾಶ್ರಮದಲ್ಲಿ ಇಂದು ಆಧ್ಯಾತ್ಮಿಕ ಸಂಭ್ರಮ: ಶ್ರೀ ಸ್ವಾಮಿ ಸಮರ್ಥ ಹಾಗೂ ವಿಠ್ಠಲ-ರುಕುಮಾಯಿ ಮೂರ್ತಿ ಪ್ರತಿಷ್ಠಾಪನೆ ಬೆಳಗಾವಿಯ ಶಾಂತಾಯಿ ವೃದ್ಧಾಶ್ರಮದಲ್ಲಿ ಇಂದು ಆಧ್ಯಾತ್ಮಿಕ ಸಂಭ್ರಮ ಮೇಳೈಸಿತ್ತು. ಆಶ್ರಮದ ನೂತನ ಕಟ್ಟಡದ ಭೂಮಿ ಪೂಜೆ ಹಾಗೂ ದೈವ ಸ್ವರೂಪಿ ಮೂರ್ತಿಗಳ ಪ್ರತಿಷ್ಠಾಪನಾ ಕಾರ್ಯಕ್ರಮ ಅತ್ಯಂತ ಶ್ರದ್ಧಾಭಕ್ತಿಯಿಂದ ನೆರವೇರಿತು. ಬೆಳಗಾವಿಯ ಶಾಂತಾಯಿ ವೃದ್ಧಾಶ್ರಮದಲ್ಲಿ ಫೆಬ್ರವರಿ 4ರ ಬುಧವಾರದಂದು ಶ್ರೀ ಸ್ವಾಮಿ ಸಮರ್ಥ ಹಾಗೂ ಶ್ರೀ ವಿಠ್ಠಲ-ರುಕುಮಾಯಿ ಮೂರ್ತಿಗಳ ಪ್ರತಿಷ್ಠಾಪನಾ ಮಹೋತ್ಸವ ಅದ್ದೂರಿಯಾಗಿ …

Read More »

ಅಬಕಾರಿ ಇಲಾಖೆಯಲ್ಲಿ 6 ಸಾವಿರ ಕೋಟಿ ಹಗರಣ ಆರೋಪ – ಆರ್.ಬಿ ತಿಮ್ಮಾಪೂರ ರಾಜೀನಾಮೆಗೆ ಬಿಗಿಪಟ್ಟು

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಬರೋಬ್ಬರಿ 6 ಸಾವಿರ ಕೋಟಿ ಹಗರಣ ನಡೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ  ಹಾಗೂ ವಿಪಕ್ಷ ನಾಯಕ ಆರ್‌. ಅಶೋಕ್‌ (R Ashok) ಆರೋಪಿಸಿದರು. ವಿಧಾನಸೌಧದ ಕೆಂಗಲ್‌ ಗೇಟ್‌ ಬಳಿ ಮಾತನಾಡಿದ ಶಾಸಕ ವಿಜಯೇಂದ್ರ, ಸಿದ್ದರಾಮಯ್ಯ ಸರ್ಕಾರ ಬಹಳ ಬಂಡತನದಿಂದ ನಡೆದುಕೊಳ್ಳುತ್ತಿದೆ. ಹಗರಣಗಳ ಅಲೆಯಲ್ಲಿ ಸಿಲುಕಿಕೊಂಡಿದೆ. ಅಬಕಾರಿ ಇಲಾಖೆವರೆಗೂ  ಬಂದು ತಲುಪಿದೆ. ಮನಸೋ ಇಚ್ಛೆ ಬೇಕಾಬಿಟ್ಟಿ ಲಿಕ್ಕರ್ ಲೆಸೆನ್ಸ್ ಕೊಡ್ತಾ ಇದ್ದಾರೆ. ಇಷ್ಟು ಭ್ರಷ್ಟಾಚಾರ …

Read More »

ಸಿಎಂ ಸಿದ್ದರಾಮಯ್ಯ ಸೇರಿ 139 ಶಾಸಕರೂ ನನ್ನ ಬಲ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್

ರಾಜಕೀಯದಲ್ಲಿ ಎಲ್ಲವೂ ಸಾಧ್ಯ. ರಾಜಕೀಯ ಎಂಬುದು ಸಾಧ್ಯತೆಗಳ ಕಲೆ. ಇಲ್ಲಿ ಎಲ್ಲವೂ ಸಾಧ್ಯ. One man with Courage makes a majority ಎಂಬುದನ್ನು ನಾನು ನಂಬಿದ್ದೇನೆ. ದೃಢವಾದ ನಿಲುವು, ಸಂಕಲ್ಪ ಹೊಂದಿದ್ದರೆ, ಒಬ್ಬನೇ ಸಾಕು. ಆತನ ಜೊತೆ 140 ಜನರೂ ಇರುತ್ತಾರೆ, ಇನ್ನೂ ಜಾಸ್ತಿನೂ ಆಗುತ್ತಾರೆ. ನೋಡೋಣ 2028ರಲ್ಲಿ ಏನಾಗುತ್ತದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಗೆ …

Read More »

ಸಿಎಂ ಕುರ್ಚಿ ಉಳಿಯಬೇಕಿದೆ, ಅದಕ್ಕೆ AICC ಗೆ ಸಾವಿರ ಸಾವಿರ ಕೋಟಿ ಹೋಗ್ತಿದೆ; ಆರ್‌. ಅಶೋಕ್‌

ಬೆಂಗಳೂರು: ರಾಷ್ಟ್ರೀಯ ಕಾಂಗ್ರೆಸ್‌  ಪಕ್ಷಕ್ಕೆ ಕರ್ನಾಟಕವೇ ಆರ್‌ಬಿಐ ಆಗಿದೆ. ಮುಖ್ಯಮಂತ್ರಿಗಳು ಸ್ಥಾನ ಉಳಿಸಿಕೊಳ್ಳಬೇಕಿದೆ. ಹಾಗಾಗಿ ಸಾವಿರ ಸಾವಿರ ಕೋಟಿ ಕೇಂದ್ರ ಕಾಂಗ್ರೆಸ್‌ಗೆ ಹೋಗುತ್ತಿದೆ ಎಂದು ವಿಪಕ್ಷ ನಾಯಕ ಆರ್‌. ಅಶೋಕ್‌ ಆರೋಪಿಸಿದ್ದಾರೆ. ಅಬಕಾರಿ ಇಲಾಖೆ ಅವ್ಯವಹಾರದ  ವಿರುದ್ಧ ‘ದೋಸ್ತಿ’ ಸಮರ ಸಾರಿದೆ. ಸದನದಲ್ಲಿ ಬಿಜೆಪಿ-ಜೆಡಿಎಸ್ ಸದಸ್ಯರು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಸಚಿವ ಆರ್‌.ಬಿ ತಿಮ್ಮಾಪೂರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳ ನಾಯಕರು ಧರಣಿಗಿಳಿದಿದ್ದಾರೆ. ಸದನ ಮುಂದೂಡಿದರೂ ಹೊರಗೆ ಬರದೇ ವಿಪಕ್ಷಗಳ ಸದಸ್ಯರು …

Read More »

ಏಪ್ರಿಲ್-ಮೇ ತಿಂಗಳಲ್ಲಿ ಗ್ರಾಪಂ ಚುನಾವಣೆಗೆ ಸರಕಾರ ಸಜ್ಜು: ಶೀಘ್ರವೇ ಮೀಸಲು ಅಧಿಸೂಚನೆ ಪ್ರಕಟ

ಧಾರವಾಡ: ರಾಜ್ಯದ ಬಹುತೇಕ ಗ್ರಾಮ ಪಂಚಾಯಿತಿಗಳ ಚುನಾಯಿತ ಪ್ರತಿನಿಧಿಗಳ ಅಧಿಕಾರಾವಧಿ ಫೆಬ್ರವರಿ- ಮಾರ್ಚ್ ತಿಂಗಳಲ್ಲಿ ಮುಗಿಯಲಿದೆ. ಹೀಗಾಗಿ 2026ರ ಏಪ್ರಿಲ್‌- ಮೇ ತಿಂಗಳಲ್ಲಿ ಚುನಾವಣೆ ನಡೆಸಲು ಸರಕಾರ ಸಜ್ಜಾಗಿದ್ದು, ಪೂರ್ವಸಿದ್ಧತೆಗೆ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ಕೂಡ ನೀಡಿದೆ. ರಾಜ್ಯದ 5,948 ಗ್ರಾಪಂಗಳ ಪೈಕಿ 5,698 ಗ್ರಾಪಂಗಳಿಗೆ 2020 ಡಿಸೆಂಬರ್‌ನಲ್ಲಿ ಚುನಾವಣೆ ಆಗಿತ್ತು. ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ 2021- 22ರಲ್ಲಿ ನಡೆದಿದ್ದರಿಂದ 2026ರ ಫೆಬ್ರವರಿ ಎರಡನೇ ವಾರಕ್ಕೆ ಈ ಪಂಚಾಯಿತಿ ಚುನಾಯಿತ …

Read More »

ಕರ್ನಾಟಕದಲ್ಲಿ ವಿದ್ಯುತ್‌ ಉತ್ಪಾದನೆ ಶೇ. 5ರಷ್ಟು ಹೆಚ್ಚಳ : ಬೇಡಿಕೆ ಮೀರಿದ ಉತ್ಪಾದನೆ ನೆರೆರಾಜ್ಯಗಳಿಗೆ ಮಾರಾಟ, ರೈತರಿಗೂ ಲಾಭ

ಬೆಂಗಳೂರು : ರಾಜ್ಯದಲ್ಲಿ ವಾರ್ಷಿಕ ವಿದ್ಯುತ್‌ ಉತ್ಪಾದನೆಯು ಶೇ.5ರಷ್ಟು ಹೆಚ್ಚಳವಾಗಿದ್ದು, ಈ ಬಾರಿ ಬೇಸಿಗೆಯಲ್ಲಿ ವಿದ್ಯುತ್‌ಗೆ ಬರವಿಲ್ಲ. ಕಳೆದ ವರ್ಷಕ್ಕೆ ಹೋಲಿಸಿದರೆ ಸುಮಾರು 1,100 ಮೆಗಾ ವ್ಯಾಟ್‌ ವಿದ್ಯುತ್‌ ಉತ್ಪಾದನೆ ಹೆಚ್ಚಳವಾಗಿದ್ದು, ಹೊರ ರಾಜ್ಯಗಳಿಗೂ ಹೆಚ್ಚಿನ ಪ್ರಮಾಣದಲ್ಲಿ ವಿದ್ಯುತ್‌ ಮಾರಾಟ ಮಾಡಲಾಗುತ್ತಿದೆ. 2024ರಲ್ಲಿ ತೀವ್ರ ವಿದ್ಯುತ್‌ ಕ್ಷಾಮ ಎದುರಿಸಿದ್ದ ರಾಜ್ಯದಲ್ಲಿ ಈಗ ವಿದ್ಯುತ್‌ಗೆ ಕೊರತೆಯಿಲ್ಲ. ಸಾಂಪ್ರದಾಯಿಕ ಹಾಗೂ ನವೀಕೃತ ಇಂಧನ ಮೂಲಗಳಿಂದ ರಾಜ್ಯದಲ್ಲಿ ವಿದ್ಯುತ್‌ ಉತ್ಪಾದನೆಯು ಗಣನೀಯವಾಗಿ ಏರಿಕೆಯಾಗಿದ್ದು, ಇಂಧನ …

Read More »

ರಂಜಾನ್ ಹಿನ್ನೆಲೆ ಉರ್ದು ಶಾಲಾ ಸಮಯ ಬದಲಾವಣೆಗೆ ವಿರೋಧ: ಇದ್ಯಾವ ಸಮಾನತೆ ಎಂದ ಯತ್ನಾಳ್​

ಬೆಂಗಳೂರು: ಮುಸ್ಲಿಮರ ಪವಿತ್ರ ಹಬ್ಬ ರಂಜಾನ್ ಹಿನ್ನೆಲೆಯಲ್ಲಿ ಕರ್ನಾಟಕದ ಉರ್ದು ಮಾಧ್ಯಮ ಕಿರಿಯ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳ ಶಾಲಾ ಸಮಯವನ್ನು ಪರಿಷ್ಕರಿಸಿರೋದಕ್ಕೆ ಹಿಂದೂಪರ ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿದೆ. ಹಿಂದೂಗಳ ಯಾವುದೇ ಹಬ್ಬಗಳಿಗೂ ಶಾಲಾ ಸಮಯ ಬದಲಾವಣೆ ಮಾಡಲ್ಲ. ಇದು ಕಾನೂನು ಸಮಾನತೆಯ ಉಲ್ಲಂಘನೆಯಾಗಿದ್ದು, ಈ ಕೂಡಲೇ ಸುತ್ತೋಲೆ ವಾಪಸ್​ ಪಡೆಯಬೇಕು. ನವರಾತ್ರಿ, ಗಣೇಶ ಚತುರ್ಥಿಯಂತಹ ಹಬ್ಬಗಳ ಸಂದರ್ಭ ಶಾಲಾ ಸಮಯದಲ್ಲಿ ಯಾವುದೇ ಬದಲಾವಣೆ ಇರಲ್ಲ. ಹೀಗಾಗಿ ತಾರತಮ್ಯ ಬೇಡ ಎಂಬ ಒತ್ತಾಯ …

Read More »

ಗೋವಿಂದ ಗೋವಿಂದ ಕೋಟಿ ಕೋಟಿ ಗೋವಿಂದ – ಸದನದಲ್ಲಿ ದೋಸ್ತಿ ನಾಯಕರಿಂದ ಅಹೋರಾತ್ರಿ ಪ್ರತಿಭಟನೆ

ಬೆಂಗಳೂರು: ಅಬಕಾರಿ ಸಚಿವ ಆರ್‌ಬಿ ತಿಮ್ಮಾಪೂರ (RB Timmapur) ರಾಜೀನಾಮೆಗೆ ಆಗ್ರಹಿಸಿ ಸದನದಲ್ಲಿ ಬಿಜೆಪಿ-ಜೆಡಿಎಸ್ (BJP-JDS) ಶಾಸಕರು ಅಹೋರಾತ್ರಿ ಧರಣಿ ನಡೆಸಿದ್ದಾರೆ. ತಮಟೆ, ಭಜನೆ ಮಾಡಿ ಅಹೋರಾತ್ರಿ ಪ್ರತಿಭಟಿಸಿದ ಶಾಸಕರು ಅಬಕಾರಿ ಇಲಾಖೆಯಲ್ಲಿ (Excise Department) 6 ಸಾವಿರ ಕೋಟಿ ರೂ. ಹಗರಣ ನಡೆದಿದೆ. ಅಸ್ಸಾಂ, ತಮಿಳುನಾಡು, ಕೇರಳ ಚುನಾವಣೆಗೆ ಈ ಹಣಕ ಬಳಕೆ ಮಾಡಲಾಗುತ್ತದೆ. ತಿಮ್ಮಾಪೂರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವವರೆಗೂ ಪ್ರತಿಭಟನೆ ನಡೆಸುತ್ತೇವೆ ಎಂದು ಪಟ್ಟು ಹಿಡಿದಿದ್ದಾರೆ. ಮೊಗಸಾಲೆ …

Read More »

ಮಧ್ಯಾಹ್ನದ ಬಿಸಿಯೂಟ ಸೇವಿಸಿ ಸರ್ಕಾರಿ ಶಾಲೆಯ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಬೀದರ್: ಶಾಲೆಯಲ್ಲಿ ನೀಡಿದ ಮಧ್ಯಾಹ್ನದ ಬಿಸಿಯೂಟ  ಸೇವಿಸಿ ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿಗಳು  ಅಸ್ವಸ್ಥಗೊಂಡಿರುವ ಆಘಾತಕಾರಿ ಘಟನೆ ಬೀದರ್  ಜಿಲ್ಲೆಯ ಔರಾದ್  ತಾಲೂಕಿನ ಜಮಲಪೂರ್ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಮಧ್ಯಾಹ್ನ ಶಾಲೆಯಲ್ಲಿ ಎಂದಿನಂತೆ ಮಕ್ಕಳಿಗೆ ಬಿಸಿಯೂಟ ಬಡಿಸಲಾಗಿತ್ತು. ಊಟ ಸೇವಿಸಿದ ಕೆಲವೇ ನಿಮಿಷಗಳಲ್ಲಿ ಮಕ್ಕಳಿಗೆ ವಾಂತಿ ಮತ್ತು ಬೇಧಿ ಕಾಣಿಸಿಕೊಂಡಿದೆ. ತೀವ್ರ ಅಸ್ವಸ್ಥಗೊಂಡ ಮಕ್ಕಳನ್ನು ಕಂಡು ಶಿಕ್ಷಕರು ಹಾಗೂ ಪೋಷಕರು ಗಾಬರಿಗೊಂಡಿದ್ದು, ತಕ್ಷಣವೇ ಎಲ್ಲರನ್ನೂ ಔರಾದ್ ತಾಲೂಕು …

Read More »

ವಸತಿ ಶಾಲೆ ಅರ್ಜಿ ಸಲ್ಲಿಸಲು ಫೆ.7ರವರೆಗೆ ಅವಕಾಶ – ಕೆಇಎ

ಬೆಂಗಳೂರು : 2026ನೇ ಸಾಲಿಗೆ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಾತಿಗೆ ಹತ್ತಿರದ ವಸತಿ ಶಾಲೆ/ಕಾಲೇಜುಗಳ ಮೂಲಕ ಆನ್ ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಫೆ.7ರವರೆಗೆ ಅವಕಾಶವನ್ನು ವಿಸ್ತರಿಸಲಾಗಿದೆ ಎಂದು ಕೆಇಎ (KEA) ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಅವರು ತಿಳಿಸಿದ್ದಾರೆ. ಪರಿಶಿಷ್ಟ ಜಾತಿಗೆ ಸೇರಿದವರು ಒಳಮೀಸಲಾತಿ ವಿವರಗಳನ್ನು ಹಾಗೂ ಜಾತಿ ಪ್ರಮಾಣ ಪತ್ರದಲ್ಲಿ ಮುದ್ರಿತಗೊಂಡಿರುವ ಆರ್ .ಡಿ. ಸಂಖ್ಯೆಯನ್ನು ಆನ್ ಲೈನ್ ಅರ್ಜಿಯಲ್ಲಿ ಕಡ್ಡಾಯವಾಗಿ ನಮೂದಿಸಬೇಕು ಎಂದು ಅವರು ತಿಳಿಸಿದ್ದಾರೆ.

Read More »