ನವದೆಹಲಿ: ಪಂಚರಾಜ್ಯ ಚುನಾವಣೆ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ ಚಳಿಗಾಲದ ಸಂಸತ್ ಅಧಿವೇಶನ ಡಿಸೆಂಬರ್ 4 ರಿಂದ ಆರಂಭವಾಗಲಿದೆ. ಡಿಸೆಂಬರ್ 22 ರವರೆಗೆ ಅಂದರೆ 19 ದಿನಗಳ ಕಾಲ ನಡೆಯಲಿದೆ. ಇಷ್ಟು ದಿನಗಳಲ್ಲಿ 15 ಕಲಾಪಗಳನ್ನು ನಡೆಸಲು ಕೇಂದ್ರ ಸರ್ಕಾರ ಯೋಜಿಸಿದೆ. ಈ ಬಗ್ಗೆ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ (ಟ್ವಿಟರ್) ಮಾಹಿತಿ ಹಂಚಿಕೊಂಡಿರುವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು, ಅಮೃತ ಕಾಲದ ಅಧಿವೇಶನದಲ್ಲಿ ಸರ್ಕಾರದ ಕಾರ್ಯಗಳು …
Read More »ಅಕಾಲಿಕ ಮಳೆಗೆ ಭತ್ತದ ಬೆಳೆ ಹಾನಿ ಅಂದಾಜು 70 ಕೋಟಿ ರೂ ಹಾನಿ
ಗಂಗಾವತಿ (ಕೊಪ್ಪಳ) : ಬುಧವಾರ ರಾತ್ರಿಯಿಂದ ಗುರುವಾರ ಬೆಳಗಿನ ಜಾವದವರೆಗೂ ಸುರಿದ ಅಕಾಲಿಕ ಮಳೆ ಹಾಗೂ ಬೀಸಿದ ಭಾರಿ ಗಾಳಿಗೆ ಗಂಗಾವತಿ ಮತ್ತು ಕಾರಟಗಿ ತಾಲೂಕಿನಲ್ಲಿ 3500ಕ್ಕೂ ಅಧಿಕ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿದ್ದ ಭತ್ತದ ಬೆಳೆ ಹಾನಿಯಾಗಿದೆ. ಕೊಯ್ಲಿನ ಹಂತಕ್ಕೆ ಬಂದಿದ್ದ ಸೋನಾಮಸೂರಿ ತಳಿಯ ಭತ್ತದ ಬೆಳೆ ಹೆಚ್ಚಿನ ಹಾನಿಯಾಗಿದೆ. ಕಾರಟಗಿ ತಾಲೂಕು ಒಂದರಲ್ಲಿಯೇ ಅತಿಹೆಚ್ಚು ಹಾನಿಯಾಗಿದ್ದು, ಸುಮಾರು ಮೂರು ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಹಾನಿಯಾಗಿದೆ. ಗಂಗಾವತಿ ತಾಲೂಕಿನಲ್ಲಿ …
Read More »ಬರ ಪರಿಹಾರದ ಬಗ್ಗೆ ಕೇಂದ್ರದ ಮಲತಾಯಿ ಧೋರಣೆಗೆ ಸಚಿವ ಸಂಪುಟ ಸಭೆಯಲ್ಲಿ ತೀವ್ರ ಕಳವಳ: ಹೆಚ್ ಕೆ ಪಾಟೀಲ್
ಬೆಂಗಳೂರು: ಬರ ಪರಿಹಾರಕ್ಕೆ ಕೇಂದ್ರದಿಂದ ಸ್ಪಂದಿಸದೇ ಇರುವ ಬಗ್ಗೆ ಸಚಿವ ಸಂಪುಟದಲ್ಲಿ ಕಳವಳ ವ್ಯಕ್ತವಾಗಿದ್ದು, ಸಚಿವರು ಎಲ್ಲ ತಾಲೂಕು, ಜಿಲ್ಲಾ ಕೇಂದ್ರಗಳಿಗೆ ತೆರಳಿ ಬರ ಪರಿಸ್ಥಿತಿ, ನಿರ್ವಹಣೆ ಬಗ್ಗೆ ಪರಿಶೀಲಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಸಚಿವ ಸಂಪುಟ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಸಚಿವ ಹೆಚ್ ಕೆ ಪಾಟೀಲ್, ಇಂದಿನವರೆಗೆ ಕೇಂದ್ರ ಸರ್ಕಾರದಿಂದ ನಯಾ ಪೈಸೆ ಬರ ಪರಿಹಾರ ಬಂದಿಲ್ಲ. ಸಂಪುಟ ಸಭೆಯಲ್ಲಿ ಬರದ ಬಗ್ಗೆ ಸುದೀರ್ಘ …
Read More »ಸತೀಶ್ ಜಾರಕಿಹೊಳಿ ಹೆಗಲಿಗೆ ಕೈ ಹಾಕಿಕೊಂಡು ಸಂಪುಟ ಸಭೆಗೆ ಬಂದ ಡಿಕೆಶಿ
ಬೆಂಗಳೂರು: ಗುರುವಾರ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಗೆ ಕೆಂಗಲ್ ಗೇಟ್ ಮೂಲಕ ಆಗಮಿಸಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಚಿವರಾದ ಕೆ.ಎನ್.ರಾಜಣ್ಣ ಹಾಗೂ ಸತೀಶ್ ಜಾರಕಿಹೊಳಿ ಹೆಗಲಿಗೆ ಕೈ ಹಾಕುತ್ತಾ ಬಂದು ಗಮನ ಸೆಳೆದರು. ಇತ್ತೀಚೆಗೆ ಕೆ.ಎನ್.ರಾಜಣ್ಣ ಲೋಕಸಭೆ ಚುನಾವಣೆಯ ದೃಷ್ಟಿಯಿಂದ ರಾಜ್ಯದಲ್ಲಿ ಮೂರು ಡಿಸಿಎಂ ಆಗಬೇಕು ಎಂದು ಹೈಕಮಾಂಡ್ ನಾಯಕರನ್ನು ಒತ್ತಾಯಿಸಿದ್ದರು. ಐದು ವರ್ಷ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಬೇಕೆಂಬ ಅಪೇಕ್ಷೆ ಇದೆ ಎಂದಿದ್ದರು. ಸಿಎಂ ಸ್ಥಾನಕ್ಕೆ ಡಾ.ಜಿ.ಪರಮೇಶ್ವರ್ …
Read More »ಹಳೆ ಜಾತಿ ಗಣತಿ ವರದಿ ಕೈಬಿಡಿ, ಹೊಸದಾಗಿ ಸಮೀಕ್ಷೆ ನಡೆಸಿ: ವೀರಶೈವ ಮಹಾಸಭೆ ಆಗ್ರಹ
ಬೆಂಗಳೂರು: ಹಲವು ಲೋಪದೋಷಗಳಿಂದ ಕೂಡಿರುವ ಜಾತಿ ಗಣತಿ ಸಮೀಕ್ಷಾ ವರದಿಯನ್ನು ಸ್ವೀಕರಿಸದೆ ಹೊಸದಾಗಿ ವೈಜ್ಞಾನಿಕತೆಯಿಂದ ಕೂಡಿದ ಜಾತಿ ಗಣತಿ ಸಮೀಕ್ಷೆ ನಡೆಸಬೇಕೆಂದು ಅಖಿಲ ಭಾರತ ವೀರಶೈವ ಮಹಾಸಭೆಯು ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ. ಹಿಂದುಳಿದ ವರ್ಗಗಳ ಆಯೋಗ ನಡೆಸಿದ ಜಾತಿ ಗಣತಿ ವರದಿ ಈ ತಿಂಗಳ ಅಂತ್ಯದೊಳಗೆ ಸಲ್ಲಿಕೆಯಾಗುತ್ತಿರುವ ಸಾಧ್ಯತೆಗಳ ಹಿನ್ನೆಲೆಯಲ್ಲಿ ಗುರುವಾರ ಅಖಿಲ ಭಾರತ ವೀರಶೈವ ಮಹಾಸಭೆ ಪದಾಧಿಕಾರಿಗಳು ಸಭೆ ನಡೆಸಿದರು. ಅಖಿಲ ಭಾರತ ವೀರಶೈವ ಮಹಾಸಭೆ ಅಧ್ಯಕ್ಷರಾದ ಮಾಜಿ ಸಚಿವ …
Read More »ವಿರುಷ್ಕಾ’ ಜೋಡಿ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂಬ ವದಂತಿ ಹರಡಿದೆ.
ವಿರುಷ್ಕಾ’ ಜೋಡಿ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂಬ ವದಂತಿ ಹರಡಿದೆ. ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಎರಡನೇ ಮಗುವಿಗೆ ತಾಯಿಯಾಗುತ್ತಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಕಳೆದ ಕೆಲವು ದಿನಗಳಿಂದ ಹರಿದಾಡುತ್ತಿದೆ. ಈ ಸುದ್ದಿಯನ್ನು ತಾರಾ ದಂಪತಿ ಖಚಿತಪಡಿಸಿಲ್ಲ. ಆದ್ರೀಗ ವಿರುಷ್ಕಾ ಜೋಡಿಯ ವಿಡಿಯೋವೊಂದು ಆನ್ಲೈನ್ನಲ್ಲಿ ಕಾಡ್ಗಿಚ್ಚಿನಂತೆ ವೈರಲ್ ಆಗಿದೆ. ಇದರಲ್ಲಿ ಅನುಷ್ಕಾ ಶರ್ಮಾ ಪ್ರೆಗ್ನೆಂಟ್ ಎಂಬುದು ನೆಟ್ಟಿಗರ ಗುಮಾನಿ.
Read More »ಟಿಪ್ಪು ಜಯಂತಿ: ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ
ಮಂಡ್ಯ: ಟಿಪ್ಪು ವಕ್ಫ್ ಬೋರ್ಡ್ನಿಂದ ಇಂದು ಟಿಪ್ಪು ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಬೆಳಿಗ್ಗೆ 6 ರಿಂದ 11 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ ಆದೇಶ ಹೊರಡಿಸಿದ್ದಾರೆ. ಶ್ರೀರಂಗಪಟ್ಟಣ ಸೂಕ್ಷ್ಮ ಪ್ರದೇಶವಾಗಿದ್ದು ಬೆಳಿಗ್ಗೆ 11 ಗಂಟೆಯವರೆಗೆ 144 ಸೆಕ್ಷನ್ ಜಾರಿಯಲ್ಲಿರಲಿದೆ. ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡಲು ಮತ್ತು ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ನಿಷೇಧಾಜ್ಞೆ ಜಾರಿಗೊಳಿಸಲಾಗುತ್ತಿದೆ. ನಗರದಲ್ಲಿ ಮೆರವಣಿಗೆ, ಪ್ರತಿಭಟನೆ, ಸಭೆ-ಸಮಾರಂಭ, ರ್ಯಾಲಿ, ಪಟಾಕಿ ಸಿಡಿಸುವುದು, …
Read More »ಮನೆಯಲ್ಲಿ ಮಿನಿ ಡ್ರಗ್ಸ್ ಫ್ಯಾಕ್ಟರಿ! ನೈಜೀರಿಯಾ ವ್ಯಕ್ತಿ ಬಂಧನ
ಬೆಂಗಳೂರು: ಅಡುಗೆ ಮಾಡುವ ಪ್ರೆಷರ್ ಕುಕ್ಕರ್ನಲ್ಲಿ ಸಿಂಥೆಟಿಕ್ ಡ್ರಗ್ಸ್ ತಯಾರಿಸಿ ದೇಶ, ವಿದೇಶಗಳಿಗೆ ಮಾರಾಟ ಮಾಡುತ್ತಿದ್ದ ವಿದೇಶಿ ಪ್ರಜೆಯನ್ನು ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳದ ಪೊಲೀಸರು ಬಂಧಿಸಿದ್ದಾರೆ. ನೈಜೀರಿಯಾ ಮೂಲದ ಬೆಂಜಮಿನ್ ಬಂಧಿತ ಆರೋಪಿ. ಈತನಿಂದ ₹10 ಕೋಟಿ ಮೌಲ್ಯದ ಎಂಡಿಎಂಎ ಹಾಗೂ ಅದರ ತಯಾರಿಕೆಗೆ ಬಳಸುತ್ತಿದ್ದ ರಾಸಾಯನಿಕ ವಸ್ತುಗಳು ಮತ್ತು ರಾಸಾಯನಿಕ ಆಮ್ಲ ಸೇರಿದಂತೆ ಮತ್ತಿತರ ಉಪಕರಣಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿ ಅವಲಹಳ್ಳಿಯ ತನ್ನ ಮನೆಯಲ್ಲಿಯೇ ಕಚ್ಚಾ ಪದಾರ್ಥಗಳನ್ನು …
Read More »ತೆಲಂಗಾಣದಲ್ಲಿಂದು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಮತಬೇಟೆ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಇಂದು ವಿಧಾನಸಭಾ ಚುನಾವಣಾ ಪ್ರಚಾರಕ್ಕಾಗಿ ತೆಲಂಗಾಣಕ್ಕೆ ತೆರಳಲಿದ್ದಾರೆ. ಚುನಾವಣಾ ರ‍್ಯಾಲಿಯಲ್ಲಿ ಭಾಗವಹಿಸಲಿರುವ ಅವರು ಕಾಂಗ್ರೆಸ್ ಪರ ಮತಯಾಚನೆ ಮಾಡುವರು. ಬೆಳಿಗ್ಗೆ 11.30ಗಂಟೆಗೆ ಸಿದ್ದರಾಮಯ್ಯ ಬೆಂಗಳೂರಿನಿಂದ ಹೈದರಾಬಾದ್ಗೆ ಹೊರಡಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಕಾಮರೆಡ್ಡಿ ಜಿಲ್ಲೆಗೆ ತೆರಳುವರು. ಕಾಮರೆಡ್ಡಿ ನಗರದಲ್ಲಿ 2 ಗಂಟೆಗೆ ಬೃಹತ್ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡು ಮತಯಾಚಿಸುವರು. ಸಂಜೆ 6.30ಕ್ಕೆ ಬೆಂಗಳೂರಿಗೆ ವಾಪಸಾಗಲಿದ್ದಾರೆ. ಡಿ.ಕೆ.ಶಿವಕುಮಾರ್ ಕ್ಯಾಂಪೇನ್: ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ತೆಲಂಗಾಣದ ಕೋದಡ್ನಲ್ಲಿ ಪ್ರಚಾರ ನಡೆಸಲಿದ್ದಾರೆ. ಶುಕ್ರವಾರ …
Read More »ಲೋಕಾಯುಕ್ತರಿಗೆ ದೂರು ನೀಡಬೇಕೇ? ಜಸ್ಟ್ ಇಷ್ಟು ಮಾಡಿ ಸಾಕು
ಸರ್ಕಾರಿ ಕಚೇರಿಗಳಲ್ಲಿ ಅಧಿಕೃತವಾಗಿ ಕೆಲಸಗಳನ್ನು ಮಾಡಿಕೊಡುವಲ್ಲಿ ವಿಳಂಬ ಹಾಗೂ ಲಂಚದ ಬೇಡಿಕೆ, ಇನ್ನಿತರೆ ತೊಂದರೆ ನೀಡುತ್ತಿರುವ ಅಧಿಕಾರಿ-ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನೀಡಬಹುದಾಗಿದೆ. ವಿಜಯಪುರ: ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಿಂದ (Karnataka Lokayukta) ನವೆಂಬರ್ 9 ರಂದು ವಿಜಯಪುರ ಜಿಲ್ಲೆಯ (Vijayapura News) ದೇವರ ಹಿಪ್ಪರಗಿ ತಾಲೂಕಾ ಕೇಂದ್ರದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರ ಕಾರ್ಯಕ್ರಮ ನಡೆಯಲಿದೆ. ವಿಜಯಪುರ ಜಿಲ್ಲೆಯ ವ್ಯಾಪ್ತಿಯ ಸಾರ್ವಜನಿಕರು ತಮ್ಮಸಮಸ್ಯೆಯನ್ನ ಲಿಖಿತವಾಗಿ ಅಧಿಕಾತಿಗಳಿಗೆ ನೀಡಿ ಚರ್ಚಿಸಬಹುದಾಗಿದೆ. …
Read More »
Laxmi News 24×7