ನವೆಂಬರ್ 7: ನಾನು ಭ್ರಷ್ಟನಲ್ಲ, ಇಲ್ಲಿ ಲಂಚ ಸ್ವೀಕರಿಸುವುದಿಲ್ಲ ಎಂದು ಬೋರ್ಡ್ ಹಾಕಿಕೊಂಡ ಸರ್ಕಾರಿ ಅಧಿಕಾರಿಯೊಬ್ಬರ ಫೋಟೊ ಸಾಮಾಜಿಕ ಜಾಲತಾಣದಲ್ಲಿ ಇದೀಗ ವೈರಲ್ ಆಗಿದೆ. ಎಲ್ಲೆಡೆ ಲಂಚ, 30 %, 40 % , 45 % ಲಂಚ, ಕಮೀಷನ್ (Corruption) ಎಂಬ ಆರೋಪ-ಪ್ರತ್ಯಾರೋಪಗಳೇ ಕೇಳಿಬರುತ್ತಿರುವ ಈ ಸಂದರ್ಭದಲ್ಲಿ ಮತ್ತು ಅನಾದಿ ಕಾಲದಿಂದಲೂ ಸರ್ಕಾರಿ ಕಛೇರಿಗಳಲ್ಲಿ ಲಂಚ (Bribe) ಇಲ್ಲದೆ ಏನೂ ಕೆಲಸ ಆಗಲ್ಲ, ಒಂದೇ ಒಂದು ಕಡತ ಅಲುಗಾಡಲ್ಲ ಎನ್ನೋ ನೋವು …
Read More »ಮಹಾರಾಷ್ಟ್ರ ಪಂಚಾಯತ್ ಚುನಾವಣೆ ಫಲಿತಾಂಶ: ಮರಾಠಾ vs ಒಬಿಸಿ ಧ್ರುವೀಕರಣ ಸ್ಪಷ್ಟ ಎಂದ ವಿಶ್ಲೇಷಕರು
ನವೆಂಬರ್ 7: ಮಹಾರಾಷ್ಟ್ರದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಆಡಳಿತಾರೂಢ ಮೈತ್ರಿಕೂಟ ಉತ್ತಮ ಫಲಿತಾಂಶ ಕಂಡುಕೊಂಡಿರುವುದು ಜಾತಿ ಆಧಾರದಲ್ಲಿ ಧ್ರುವೀಕರಣದತ್ತ ಬೊಟ್ಟು ಮಾಡಿದೆ. ಮರಾಠಾ (Maratha) ಸಮುದಾಯಕ್ಕೆ ಮೀಸಲಾತಿಗೆ ಆಗ್ರಹಿಸಿ ನಡೆಯುತ್ತಿರುವ ಚಳವಳಿಗಾರರನ್ನು ನಿಭಾಯಿಸುವಲ್ಲಿ ಸರ್ಕಾರಕ್ಕೆ ಹಿನ್ನಡೆಯಾಗಿದೆ ಎಂಬ ಭಾವನೆ ಮೂಡಿರುವಾಗಲೇ ಈ ಫಲಿತಾಂಶ ಹೊರಬಿದ್ದಿದೆ. 2359 ಗ್ರಾಮ ಪಂಚಾಯಿತಿಗಳಿಗೆ ಭಾನುವಾರ ಚುನಾವಣೆ ನಡೆದಿತ್ತು. ಸೋಮವಾರ ಫಲಿತಾಂಶ ಪ್ರಕಟವಾಗಿದ್ದು, ಆಡಳಿತಾರೂಢ ಬಿಜೆಪಿ, ಶಿವಸೇನೆ ಮತ್ತು ಎನ್‌ಸಿಪಿಯ ಖುಷಿಗೆ ಕಾರಣವಾಗಿದೆ. ಬಿಜೆಪಿ 724 ಗ್ರಾಮ ಪಂಚಾಯತಿಗಳಲ್ಲಿ, ಎನ್‌ಸಿಪಿ …
Read More »ಸತೀಶ್ ಜಾರಕಿಹೊಳಿ ಬೆಂಗಳೂರು ಸರ್ಕಾರಿ ನಿವಾಸಕ್ಕೆ ತೆರಳಿದ ಡಿ.ಕೆ .ಶಿ.:
ಬೆಂಗಳೂರು: ಬೆಳಗಾವಿ ರಾಜಕೀಯದಲ್ಲಿ ಹಸ್ತಕ್ಷೇಪ ಎಂದು ಆರೋಪಿಸಿ ಸಚಿವ ಸತೀಶ್ ಜಾರಕಿಹೊಳಿ ಡಿಸಿಎಂ ಡಿಕೆ ಶಿವಕುಮಾರ್ ಮೇಲೆ ಮುನಿಸಿಕೊಂಡಿದ್ದರು. ಇದರ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದರು. ಈ ಮಧ್ಯೆ ಡಿಕೆ ಶಿವಕುಮಾರ್ ಸಚಿವ ಸತೀಶ್ ಜಾರಕಿಹೊಳಿರನ್ನು ಭೇಟಿಯಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ. ಮಂಗಳವಾರ ಸತೀಶ್ ಜಾರಕಿಹೊಳಿ ಬೆಂಗಳೂರು ಸರ್ಕಾರಿ ನಿವಾಸಕ್ಕೆ ತೆರಳಿದ ಡಿಕೆ ಶಿವಕುಮಾರ್, ಕೆಲ ಹೊತ್ತು ಮಾತುಕತೆ ನಡೆಸಿದರು. ಇಬ್ಬರ ನಡುವಿನ ವೈಮನಸ್ಸು ಮಧ್ಯೆ ಪರಸ್ಪರ ಭೇಟಿ ಮಹತ್ವ ಪಡೆದುಕೊಂಡಿದೆ. ಆ …
Read More »ಆರ್ಥಿಕ ಸಂಕಷ್ಟದ ನಡುವೆ ಪಂಚ ಗ್ಯಾರಂಟಿಗಳ ಅನುಷ್ಠಾನ ಮತ್ತು ಬರದ ಸಮಸ್ಯೆಗಳು ಕರ್ನಾಟಕ ಸರ್ಕಾರಕ್ಕೆ ಸವಾಲಾಗಿವೆ.
ಬೆಂಗಳೂರು: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಗ್ಯಾರಂಟಿ ಕೇಂದ್ರೀಕೃತ ಆಡಳಿತ ನಡೆಸುತ್ತಿದೆ. ಪಂಚ ಗ್ಯಾರಂಟಿಯ ಪೈಕಿ ನಾಲ್ಕು ಗ್ಯಾರಂಟಿಗಳು ಈಗಾಗಲೇ ಅನುಷ್ಠಾನವಾಗಿವೆ. ಆರ್ಥಿಕ ತೊಂದರೆಗಳ ಮಧ್ಯೆ ಹಣಕಾಸು ನಿರ್ವಹಿಸಿ ಇವುಗಳನ್ನು ಜಾರಿ ಮಾಡಲಾಗುತ್ತಿದೆ. ಇದರ ನಡುವೆ ಸರ್ಕಾರಕ್ಕೆ ಬರ ಬರೆ ಎಳೆದಿದೆ. ರಾಜ್ಯ ಈ ಬಾರಿ ತೀವ್ರ ಬರಗಾಲಕ್ಕೆ ತುತ್ತಾಗಿದೆ. ಒಟ್ಟು 236 ತಾಲೂಕುಗಳ ಪೈಕಿ 223 ಬರಪೀಡಿತ ತಾಲ್ಲೂಕುಗಳೆಂದು ಘೋಷಿಸಲಾಗಿದೆ. ಸುಮಾರು 30 ಸಾವಿರ ಕೋಟಿ ರೂ.ಗೂ ಅಧಿಕ ಬರ …
Read More »ರಾಜ್ಯದ ಹಲವೆಡೆ ಹಿಂಗಾರು ಮಳೆ ಮಜ್ಜನ; ಯಲಹಂಕದ ಕೋಗಿಲು ಕ್ರಾಸ್ ಜಲಾವೃತ
ಬೆಂಗಳೂರು : ಸೋಮವಾರ ರಾತ್ರಿಯಿಂದ ನಗರದಲ್ಲಿ ಧಾರಾಕಾರವಾಗಿ ಹಿಂಗಾರು ಮಳೆ ಸುರಿಯುತ್ತಿದೆ. ಕೆಲವೆಡೆ ರಸ್ತೆಗಳಲ್ಲಿ ನೀರು ನಿಂತು ಕೆರೆಯಂತಾದವು. ಹಲವು ಅಂಡರ್ಪಾಸ್ಗಳಲ್ಲಿ ಮೊಣಕಾಲುದ್ದ ನೀರು ತುಂಬಿ ವಾಹನ ಸವಾರರು ಪರದಾಡಿದರು. ಮಲ್ಲೇಶ್ವರಂ, ಶಾಂತಿನಗರ, ಮೈಸೂರು ಬ್ಯಾಂಕ್, ಟೌನ್ ಹಾಲ್, ಯಲಹಂಕ ಸೇರಿ ಹಲವೆಡೆ ಮಳೆ ಸುರಿಯುತ್ತಿದೆ. ಸಂಜೆ ಸಾಧಾರಣವಾಗಿ ಆರಂಭವಾದ ಮಳೆ ನಂತರ ಕೊಂಚ ಬಿಡುವು ನೀಡಿತು. ರಾತ್ರಿಯಾಗುತ್ತಿದ್ದಂತೆ ಮತ್ತೆ ಬಿರುಸಾಯಿತು. ನಗರದ ಹಲವೆಡೆ ಬಿಟ್ಟೂಬಿಡದೆ ಮಳೆಯಾಗುತ್ತಿದೆ. ಯಲಹಂಕದಲ್ಲಿ ಮಳೆ-ಕೋಗಿಲು ಕ್ರಾಸ್ …
Read More »ರೈತರೇ ಗಮನಿಸಿ : `ಬರ ಪರಿಹಾರ’ ಪಡೆಯಲು `FID’ ಗುರುತಿನ ಸಂಖ್ಯೆ ಕಡ್ಡಾಯ
ಬೆಂಗಳೂರು : ಬೆಳೆ ವಿಮೆ ನೋಂದಣಿಗೆ, ಕನಿಷ್ಟ ಬೆಂಬಲ ಬೆಲೆಯಲ್ಲಿ ಕೃಷಿ ಉತ್ಪನ್ನ ಮಾರಾಟ ಮಾಡಲು, ಬೆಳೆ ಸಾಲ ಪಡೆಯಲು, ಬೆಳೆ ಹಾನಿಗೆ ಪರಿಹಾರ ಪಡೆಯಲು ಹಾಗೂ ಇತರೆ ಸೌಲಭ್ಯ ಪಡೆಯಲು ರೈತರ ಗುರುತಿನ ಸಂಖ್ಯೆ (ಎಫ್‍ಐಡಿ) ಕಡ್ಡಾಯವಾಗಿದೆ. ಎಫ್‍ಐಡಿ ಮಾಡಿಸದ ರೈತರು ಕೂಡಲೇ ಕೃಷಿ ಅಥವಾ ತೋಟಗಾರಿಕೆ ಇಲಾಖೆ ಕಚೇರಿಯಲ್ಲಿ ತಮ್ಮ ಆಧಾರ್ ಕಾರ್ಡ್, ಪಹಣಿ, ಬ್ಯಾಂಕ್ ಪಾಸ್ ಬುಕ್, ಮೊಬೈಲ್ ಸಂಖ್ಯೆಯೊಂದಿಗೆ ತೆರಳಿ ನೋಂದಣಿ ಮಾಡಿಸಿ ಎಫ್‍ಐಡಿ …
Read More »ಹೆಚ್.ಡಿ.ದೇವೇಗೌಡರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪ್ರದಾನ
ಬೆಂಗಳೂರು: ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಬಹುಮುಖ್ಯ ದತ್ತಿ ಪ್ರಶಸ್ತಿಯಾದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪದ್ಮನಾಭನಗರದ ತಮ್ಮ ನಿವಾಸದಲ್ಲಿ ಇಂದು ಸಂಜೆ ನಡೆದ ಸರಳ ಸಮಾರಂಭದಲ್ಲಿ ಸರ್ವೋಚ್ಚ ನ್ಯಾಯಾಲಯದ ವಿಶ್ರಾಂತ ಮುಖ್ಯ ನ್ಯಾಯಮೂರ್ತಿಗಳಾದ ಎಂ.ಎನ್. ವೆಂಕಟಾಚಲಯ್ಯ ಅವರು ಹಾಗೂ ಪರಿಷತ್ತಿನ ಅಧ್ಯಕ್ಷ ನಾಡೋಜ ಮಹೇಶ್ ಜೋಶಿ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಹೆಚ್.ಡಿ.ದೇವೇಗೌಡರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪ್ರದಾನಪ್ರಶಸ್ತಿ ಪ್ರದಾನ ಮಾಡಿ …
Read More »ಹಾಲಿ, ಮಾಜಿ ಶಾಸಕರು ಸೇರಿದಂತೆ ಬಿಜೆಪಿ, ಜೆಡಿಎಸ್ನ ಹಲವರು ಕಾಂಗ್ರೆಸ್ಗೆ ಬರ್ತಾರೆ: ಸಿಎಂ
ಬೆಂಗಳೂರು: ಬಿಜೆಪಿ ಮತ್ತು ಜೆಡಿಎಸ್ನಿಂದ ಬಹಳಷ್ಟು ಜನ ಕಾಂಗ್ರೆಸ್ಗೆ ಬರುತ್ತಾರೆ. ಹಾಲಿ ಶಾಸಕರುಗಳೂ ಹಾಗೂ ಮಾಜಿಗಳು ಬರ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಗೃಹ ಕಚೇರಿಯಲ್ಲಿಂದು ಮಾತನಾಡಿದ ಅವರು, ಬರುವವರನ್ನೆಲ್ಲರನ್ನೂ ನಮ್ಮ ಪಕ್ಷಕ್ಕೆ ಸೇರಿಸಿಕೊಳ್ಳುತ್ತೇವೆ. ನೋ ಆಪರೇಷನ್, ಪಕ್ಷದ ಸಿದ್ಧಾಂತ ಒಪ್ಪಿ ಬರುವವರು ಬಿಜೆಪಿಯವರಾಗಿರಲಿ ಅಥವಾ ಜೆಡಿಎಸ್ನವರಾಗಿರಲಿ, ಅವರನ್ನು ಕಾಂಗ್ರೆಸ್ಗೆ ಸೇರಿಸಿಕೊಳ್ಳುತ್ತೇವೆ ಎಂದರು. ಪ್ರಧಾನಿ ಮೋದಿಗೆ ಸಿಎಂ ತಿರುಗೇಟು: ಮಧ್ಯಪ್ರದೇಶ ಚುನಾವಣಾ ರ‍್ಯಾಲಿಯಲ್ಲಿ ಪ್ರಧಾನಿ ಮೋದಿ ಕರ್ನಾಟಕ ಸರ್ಕಾರದ ವಿರುದ್ಧ ಮಾಡಿದ ಭಾಷಣಕ್ಕೆ …
Read More »ಹಿರಿಯ ಭೂ ವಿಜ್ಞಾನಿ ಪ್ರತಿಮಾ ಹತ್ಯೆ ಪ್ರಕರಣ: ಮಾಜಿ ಕಾರು ಚಾಲಕನ ಬಂಧನ
ಬೆಂಗಳೂರು: ಹಿರಿಯ ಭೂ ವಿಜ್ಞಾನಿ ಪ್ರತಿಮಾ ಕೆ.ಎಸ್. (45) ಹತ್ಯೆ ಪ್ರಕರಣ ಸಂಬಂಧ ಈ ಹಿಂದೆ ಪ್ರತಿಮಾ ಅವರ ಕಾರು ಚಾಲಕನಾಗಿದ್ದ ಕಿರಣ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ರಾಹುಲ್ ಕುಮಾರ್ ಶಹಾಪುರ್ ಅವರು ಪತ್ರಿಕಾಗೋಷ್ಟಿ ನಡೆಸಿ ಮಾಹಿತಿ ನೀಡಿದರು. ಆರೋಪಿ ಕಿರಣ್ ಕಳೆದ ಎಂಟು ವರ್ಷಗಳಿಂದ ಗಣಿ ಇಲಾಖೆ ಪ್ರಧಾನ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇರೆಗೆ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಕಳೆದ ನಾಲ್ಕು …
Read More »ನಾನು 2028ಕ್ಕೆ ಸಿಎಂ ಸ್ಥಾನಕ್ಕಾಗಿ ಕ್ಲೈಮ್ ಮಾಡುತ್ತೇನೆ: ಸತೀಶ್ ಜಾರಕಿಹೊಳಿ
ಬೆಂಗಳೂರು: ಈಗ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ. ನಾನು 2028ಕ್ಕೆ ಸಿಎಂ ಸ್ಥಾನಕ್ಕಾಗಿ ಕ್ಲೈಮ್ ಮಾಡುತ್ತೇನೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ. ವಿಕಾಸಸೌಧದಲ್ಲಿ ಇಂದು ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬೇರೆಯವರು ಕೇಳುವುದು, ಬಿಡುವುದು ಅವರವರ ಇಷ್ಟಕ್ಕೆ ಬಿಟ್ಟದ್ದು. ನಾವು 28ಕ್ಕೆ ಕ್ಲೈಂ ಮಾಡ್ತೇವೆ. ಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ ಅಂತ ಹೇಳಿದ್ದಾರೆ, ಬೇರೆಯವರು ಹೇಳುವ …
Read More »
Laxmi News 24×7