Breaking News

ರಾಜ್ಯ

ಗ್ರೂಪ್ ಸಿ ಹುದ್ದೆಗಳಿಗೆ ನವೆಂಬರ್ 4, 5 ರಂದು ಪರೀಕ್ಷೆ: ಕೆಪಿಎಸ್​​ಸಿ

ಬೆಂಗಳೂರು: ಕೆಪಿಎಸ್​​ಸಿ ಅಧಿಸೂಚಿಸಲಾದ ಗ್ರೂಪ್ ‘ಸಿ’ ಹುದ್ದೆಗಳಿಗೆ ನ.4 ಮತ್ತು 5 ರಂದು ಕನ್ನಡ ಭಾಷಾ ಪರೀಕ್ಷೆ/ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿದ್ದು, ಅಭ್ಯರ್ಥಿಗಳ ಹಾಲ್ ​ಟಿಕೆಟ್​ಗಳು ಈಗಾಗಲೇ ಆಯೋಗದ ವೆಬ್​ಸೈಟ್​ನಲ್ಲಿ ಲಭ್ಯ ಇವೆ. ಲೆಕ್ಕ ಸಹಾಯಕರು ಮತ್ತು ಸಹಕಾರ ಸಂಘಗಳ ನಿರೀಕ್ಷಕರ ಹುದ್ದೆಗಳಿಗೆ ಒಂದೇ ಪರೀಕ್ಷೆ ಇರಲಿದೆ ಎಂದು ಕೆಪಿಎಸ್​ಸಿ ತಿಳಿಸಿದೆ. ಈ ಬಗ್ಗೆ ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿಯು ಸಚಿವ ಪ್ರಿಯಾಂಕ ಖರ್ಗೆಗೆ ಪತ್ರ ಬರೆದು, ಕರ್ನಾಟಕ ರಾಜ್ಯ ಲೆಕ್ಕ …

Read More »

ವನ್ಯ ಜೀವಿ ಸಂರಕ್ಷಣಾ ಕಾಯ್ದೆಯಡಿ ನವಿಲು ಗರಿಗೆ ವಿನಾಯಿತಿ ಇದೆ: ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು: 1972ರ ಸೆಕ್ಷನ್ 43ರ ಅಡಿ ನವಿಲು ಗರಿಗಳಿಗೆ ವಿನಾಯಿತಿ ನೀಡಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ನವಿಲು ಗರಿಗಳಿಂದ ತಯಾರಿಸಿದ ಯಾವುದೇ ವಸ್ತುಗಳನ್ನು ರಫ್ತು ಮಾಡುವುದನ್ನು ಭಾರತ ಸರ್ಕಾರ ಮತ್ತು ಅಳಿವಿನಂಚಿನಲ್ಲಿರುವ ಪ್ರಭೇದಗಳಲ್ಲಿ ಅಂತಾರಾಷ್ಟ್ರೀಯ ವ್ಯಾಪಾರದ ಸಮಾವೇಶ – ಸಿಐಟಿಇಎಸ್ ನಿಷೇಧಿಸಿದೆ. ಆದರೆ ನೈಸರ್ಗಿಕವಾಗಿ ನವಿಲುಗಳಿಂದ ಉದುರಿದ ಗರಿಗಳನ್ನು ಸಂಗ್ರಹಿಸುವುದು ಮತ್ತು ದೇಶದೊಳಗೆ ಮಾರಾಟ ಮಾಡುವುದು ಕಾನೂನುಬಾಹಿರವಲ್ಲ. ಆದರೆ, ನವಿಲುಗಳಿಗೆ ಹಿಂಸೆ ನೀಡಿ ಗರಿ ಕಿತ್ತರೆ ಅದು …

Read More »

ಟಗರು ಪಲ್ಯ’ ಸಿನಿಮಾ ರಿಲೀಸ್​: ಮಗಳು ಅಮೃತಾ ಜೊತೆ ಸ್ಟೆಪ್​ ಹಾಕಿದ ನೆನಪಿರಲಿ ಪ್ರೇಮ್​

ಟಗರು ಪಲ್ಯ’ ಸಿನಿಮಾ ರಿಲೀಸ್ ಡಾಲಿ ಧನಂಜಯ್‌ ನಿರ್ಮಾಣದ ಗ್ರಾಮೀಣ ಸೊಗಡಿನ ಕಥೆ ಹೊಂದಿರುವ ‘ಟಗರು ಪಲ್ಯ’ ಸಿನಿಮಾ ಇಂದು ರಾಜ್ಯಾದ್ಯಂತ ತೆರೆ ಕಂಡಿದೆ. ಹೆಚ್ಚಿನ ಥಿಯೇಟರ್​ಗಳು ಹೌಸ್​ ಫುಲ್​ ಆಗಿದೆ. ಚಿತ್ರ ವೀಕ್ಷಿಸಿದ ಸಿನಿಪ್ರೇಮಿಗಳಿಂದ ಕಥೆಗೆ ಮೆಚ್ಚುಗೆ ಸಿಕ್ಕಿದ್ದು, ಈ ವರ್ಷದ ಕನ್ನಡದ ಹಿಟ್​ ಸಿನಿಮಾಗಳ ಸಾಲಿನಲ್ಲಿ ‘ಟಗರು ಪಲ್ಯ’ವೂ ಒಂದು ಅಂತಿದ್ದಾರೆ. ಇಂದು ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ವೀರೇಶ್​ ಚಿತ್ರಮಂದಿರದಲ್ಲಿ ‘ಟಗರು ಪಲ್ಯ’ ಹೌಸ್​ಫುಲ್​ ಪ್ರದರ್ಶನ ಕಂಡಿದೆ. …

Read More »

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು: ಹುಲಿ ಉಗುರಿನ ಮಾದರಿ ಪೆಂಡೆಂಟ್ ವಶಕ್ಕೆ

ಬೆಳಗಾವಿ/ಹುಬ್ಬಳ್ಳಿ: ಹುಲಿ ಉಗುರಿನ ಮಾದರಿ ಪೆಂಡೆಂಟ್ ಧರಿಸಿದ್ದ ತಮ್ಮ ಪುತ್ರನ ಫೋಟೋ ವೈರಲ್ ಆದ ಹಿನ್ನೆಲೆಯಲ್ಲಿ ಇಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ನಿವಾಸಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ, ಪೆಂಡೆಂಟ್ ವಶಕ್ಕೆ ಪಡೆದಿದ್ದಾರೆ. ಬೆಳಗಾವಿಯ ಕುವೆಂಪು ನಗರದಲ್ಲಿ ಇರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನಿವಾಸಕ್ಕೆ ಡಿಎಫ್‌ಓ ಶಂಕರ ಕಲ್ಲೋಳಿಕರ್ ಎಸಿಎಫ್ ಸುರೇಶ ತೇಲಿ ನೇತೃತ್ವದ ತಂಡ ತೆರಳಿ ಪರಿಶೀಲನೆ ನಡೆಸಿತು. ಈ ವೇಳೆ ಲಕ್ಷ್ಮೀ ಹೆಬ್ಬಾಳ್ಕರ್, ಮೃಣಾಲ್ ಹೆಬ್ಬಾಳ್ಕರ್ …

Read More »

ಶಾಸಕ ಲಕ್ಷ್ಮಣ್ ಸವದಿ ಪುತ್ರನ ಕೊರಳಿನಲ್ಲೂ ಹುಲಿ ಉಗುರು ಹೋಲುವಂತಹ ಲಾಕೆಟ್

ಚಿಕ್ಕೋಡಿ (ಬೆಳಗಾವಿ): ಹುಲಿ ಉಗುರಿನ ಮಾದರಿಯ ಪೆಂಡೆಂಟ್ ಧರಿಸಿದ್ದ ಆರೋಪದ ಹಿನ್ನೆಲೆಯಲ್ಲಿ ರಾಜ್ಯದ ವಿವಿಧೆಡೆ ಹಲವು ಪ್ರಭಾವಿಗಳ ಮನೆಗಳಿಗೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ, ಪೆಂಡೆಂಟ್ ವಶಕ್ಕೆ ಪಡೆದುಕೊಂಡಿದ್ದಾರೆ. ಮಾಜಿ ಡಿಸಿಎಂ ಹಾಗೂ ಅಥಣಿ ತಾಲೂಕಿನ ವಿಧಾನಸಭಾ ಕ್ಷೇತ್ರದ ಶಾಸಕ ಲಕ್ಷ್ಮಣ್ ಸವದಿ ಪುತ್ರನ ಕೊರಳಿನಲ್ಲೂ ಹುಲಿ ಉಗುರು ಹೋಲುವಂತಹ ಲಾಕೆಟ್​ ಅನ್ನು ಹಾಕಿಕೊಂಡಿರುವ ಪೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಮದುವೆ ಸಂದರ್ಭದಲ್ಲಿ ಹುಲಿ ಉಗುರಿನ ರೀತಿ ಇರುವ …

Read More »

ಸುಳ್ಯ ನಗರ ಪಂಚಾಯತ್ ಸಿಬ್ಬಂದಿ ಕೊರಳಲ್ಲಿ ಹುಲಿ ಉಗುರು ಮಾದರಿ ಪೆಂಡೆಂಟ್.. ಅರಣ್ಯಾಧಿಕಾರಿಗಳಿಂದ ತನಿಖೆ

ಸುಳ್ಯ (ದಕ್ಷಿಣ ಕನ್ನಡ): ಕೊರಳಲ್ಲಿ ಹುಲಿ ಉಗುರು ಮಾದರಿಯ ಪೆಂಡೆಂಟ್ ಧರಿಸಿರುವ ಪ್ರಕರಣಗಳು ಸದ್ಯ ಸದ್ದು ಮಾಡುತ್ತಿವೆ. ಸುಳ್ಯ ನಗರ ಪಂಚಾಯತ್ ಸಿಬ್ಬಂದಿಯೊಬ್ಬರು ಇದೇ ಮಾದರಿಯ ಪೆಂಡೆಂಟ್ ಧರಿಸಿರುವ ಚಿತ್ರವು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಕುರಿತು ಅರಣ್ಯ ಅಧಿಕಾರಿಗಳು ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಸುಳ್ಯ ನಗರ ಪಂಚಾಯತ್ ಸಿಬ್ಬಂದಿ ಶಶಿಕಲಾ ಅವರು ಪೆಂಡೆಂಟ್ ಧರಿಸಿರುವ ಫೋಟೋ ವೈರಲ್ ಆಗುತ್ತಿದ್ದು, ಅರಣ್ಯಾಧಿಕಾರಿಗಳು ಈ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಈಟಿವಿ ಭಾರತದ …

Read More »

ಬಿ.ಎಸ್​.ಯಡಿಯೂರಪ್ಪಗೆ ‘Z​’ ಶ್ರೇಣಿಯ ಭದ್ರತೆ: ಶೀಘ್ರವೇ ಸಿಆರ್​ಪಿಎಫ್​ ಕಮಾಂಡೋ ಸೆಕ್ಯೂರಿಟಿ

ನವದೆಹಲಿ: ಕರ್ನಾಟಕ ಬಿಜೆಪಿಯ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರ ಭದ್ರತೆಯನ್ನು ಹೆಚ್ಚಿಸಲಾಗಿದೆ. ಕೇಂದ್ರೀಯ ಮೀಸಲು ಪೊಲೀಸ್​ ಪಡೆಯ (ಸಿಆರ್​ಪಿಎಫ್​) ಸಿಬ್ಬಂದಿಯನ್ನು ಒಳಗೊಂಡಿರುವ ‘ಝೆಡ್​’ ಶ್ರೇಣಿಯ ಭದ್ರತೆ ಕಲ್ಪಿಸಿ ಕೇಂದ್ರ ಗೃಹ ಸಚಿವಾಲಯ ಗುರುವಾರ ಆದೇಶಿಸಿದೆ. ಕರ್ನಾಟಕದಲ್ಲಿ ಮಾತ್ರವೇ ಉನ್ನತ ಭದ್ರತೆಯ ಸೌಲಭ್ಯವನ್ನು ಬಿಎಸ್​ವೈ ಹೊಂದಿರಲಿದ್ದು, ಸಿಆರ್​ಪಿಎಫ್​ ಸಿಬ್ಬಂದಿ ಶೀಘ್ರವೇ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ. ಬಿ.ಎಸ್.ಯಡಿಯೂರಪ್ಪನವರಿಗೆ ಬೆದರಿಕೆ ಇರುವ ಕುರಿತ ಮಾಹಿತಿಯನ್ನು ಗುಪ್ತಚರ ವಿಭಾಗವು ಕೇಂದ್ರ ಗೃಹ ಇಲಾಖೆಯೊಂದಿಗೆ ಹಂಚಿಕೊಂಡಿದೆ. ಇದರ …

Read More »

ವಿಜುಗೌಡ ಪಾಟೀಲ್ ನಿವಾಸದಲ್ಲಿ ಅರಣ್ಯಾಧಿಕಾರಿಗಳಿಂದ ತಪಾಸಣೆ

ವಿಜಯಪುರ: ಹುಲಿ ಉಗುರಿನ ಮಾದರಿಯ ಪೆಂಡೆಂಟ್‌ ಧರಿಸಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆದ ಬಳಿಕ ಕೇಳಿ ಬಂದ ದೂರಿನ ಹಿನ್ನೆಲೆಯಲ್ಲಿ ಜಿಲ್ಲಾ ಬಿಜೆಪಿ ಮುಖಂಡ ವಿಜುಗೌಡ ಪಾಟೀಲ ಅವರ ನಿವಾಸಕ್ಕೆ ಇಂದು ಬೆಳಿಗ್ಗೆ (ಗುರುವಾರ) ಭೇಟಿ ನೀಡಿದ ಅರಣ್ಯಾಧಿಕಾರಿಗಳು, ಕೆಲಹೊತ್ತು ಶೋಧ ನಡೆಸಿದ್ದಾರೆ. ಜಿಲ್ಲಾ ಉಪ ಅರಣ್ಯಾಧಿಕಾರಿ ಶಿವಶರಣಯ್ಯ, ಸಹಾಯಕ ಅರಣ್ಯಾಧಿಕಾರಿ ಭಾಗ್ಯವಂತ ಮಸೂದೆ, ವಲಯ ಅರಣ್ಯಾಧಿಕಾರಿ ಸಂತೋಷ ಆಜೂರ ಹಾಗೂ ಸಿಬ್ಬಂದಿ ಪರಿಶೀಲಿಸಿದರು. ವಿಜುಗೌಡ, ಪುತ್ರ ಶಾಶ್ವತಗೌಡ ಹಾಜರಿದ್ದು …

Read More »

ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡುವ ಸಂದರ್ಭದಲ್ಲಿ ಅರ್ಹರಿಗೆ ಪ್ರಶಸ್ತಿ ನೀಡಬೇಕು.

ಬೆಂಗಳೂರು : ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡುವ ಸಂದರ್ಭದಲ್ಲಿ ಅರ್ಹರಿಗೆ ಪ್ರಶಸ್ತಿ ನೀಡಬೇಕು. ಇದರಲ್ಲಿ ಪ್ರಾದೇಶಿಕ ನ್ಯಾಯವನ್ನು ಕಡ್ಡಾಯವಾಗಿ ಪಾಲಿಸಬೇಕು. ಎಲ್ಲಾ ಜಾತಿ, ಧರ್ಮ, ಲಿಂಗದವರಿಗೂ ಪ್ರಾತಿನಿಧ್ಯ ದೊರಕಬೇಕು ಎಂದು ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಯ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಸಿಎಂ ಮಾತನಾಡಿದರು. ಈ ವೇಳೆ ಕರ್ನಾಟಕ ಎಂದು …

Read More »

ವಿದ್ಯುತ್, ಕಲ್ಲಿದ್ದಲು ಖರೀದಿಯಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ: ಸಚಿವ ಕೆ.ಜೆ.ಜಾರ್ಜ್

ನವದೆಹಲಿ/ಬೆಂಗಳೂರು: ವಿದ್ಯುತ್ ಹಾಗೂ ಕಲ್ಲಿದ್ದಲು ಖರೀದಿಯಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ. ದೆಹಲಿಯಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿದ ಅವರು, ನಿಯಮದ ಪ್ರಕಾರ ವಿದ್ಯುತ್ ಖರೀದಿ ಮತ್ತು ಕಲ್ಲಿದ್ದಲು ಆಮದು ಪ್ರಕ್ರಿಯೆ ನಡೆಯುತ್ತಿದೆ. ಇದರಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ. ಈ ಬಗ್ಗೆ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಮಾಡಿರುವ ಆರೋಪ ಸತ್ಯಕ್ಕೆ ದೂರವಾಗಿದ್ದು, ರಾಜ್ಯ ಸರ್ಕಾರ ತಳ್ಳಿ ಹಾಕುತ್ತದೆ ಎಂದರು. ಈ ಹಿಂದಿನ ವರ್ಷಗಳಿಗೆ ಹೋಲಿಸಿದರೆ ಈ ವರ್ಷ …

Read More »