ಮುಂಬೈ : ನಟಿ ಶ್ರದ್ಧಾ ಕಪೂರ್ ಬಾಲಿವುಡ್ನ ಬಹುಬೇಡಿಕೆಯ ನಟಿ. ತನ್ನ ಅಮೋಘ ನಟನೆ ಮೂಲಕ ಅಪಾರ ಅಭಿಮಾನಿಗಳನ್ನು ಗಳಿಸಿದ್ದಾರೆ. ಈ ನವರಾತ್ರಿ ಶುಭ ಸಂದರ್ಭದಲ್ಲಿ ಶ್ರದ್ಧಾ ಕಪೂರ್ ತಮ್ಮ ಸಂತಸ ಇಮ್ಮಡಿಗೊಳಿಸಿದ್ದಾರೆ. ಬಾಲಿವುಡ್ ನಟರಲ್ಲಿ ಹಲವರು ದುಬಾರಿ ಬೆಲೆಯ ಐಷಾರಾಮಿ ಕಾರುಗಳನ್ನು ಹೊಂದಿದ್ದಾರೆ. ಬಾಲಿವುಡ್ ಬಾದ್ ಶಾ ಶಾರುಖ್ ಖಾನ್, ಸಲ್ಮಾನ್ ಖಾನ್, ಅಕ್ಷಯ ಕುಮಾರ್ ಸೇರಿದಂತೆ ಹಲವು ನಟರಲ್ಲಿ ಐಷಾರಾಮಿ ಕಾರುಗಳಿವೆ. ಜೊತೆಗೆ ಕೆಲವೇ ಕೆಲವು ಬಾಲಿವುಡ್ ನಟಿಯರು …
Read More »ಏಳು ಜನ್ಮ ಎತ್ತಿ ಬಂದರೂ ರಾಮನಗರ ಜಿಲ್ಲೆ ಛಿದ್ರ ಮಾಡಲು ಸಾಧ್ಯವಿಲ್ಲ, ಅದೇನು ಕಲ್ಲುಬಂಡೆಯೇ?: ಡಿಕೆಶಿಗೆ ಹೆಚ್ಡಿಕೆ ತಿರುಗೇಟು
ಬೆಂಗಳೂರು: ಬಡವರ ಹೊಟ್ಟೆ ಮೇಲೆ ಹೊಡೆಯುವ, ಕಂಡೋರ ಭೂಮಿಗೆ ಬೇಲಿ ಹಾಕುವ, ಬೆಟ್ಟಗುಡ್ಡಗಳನ್ನು ಲೂಟಿ ಮಾಡಿ ವಿದೇಶಗಳಿಗೆ ಸಾಗಿಸಿ ಹಣ ಮಾಡಿಕೊಳ್ಳುವ, ಅದಕ್ಕೆ ಅಡ್ಡ ಬಂದವರ ಜೀವ ತೆಗೆಯುವ ‘ದುಷ್ಟ’ಪ್ರಜ್ಞೆ, ‘ಅತಿ’ ಬುದ್ಧಿವಂತಿಕೆ, ‘ಅಸಾಮಾನ್ಯ’ ಜ್ಞಾನ ಖಂಡಿತವಾಗಿಯೂ ನನಗಿಲ್ಲ. ಅದು ನನಗೆ ಬೇಕಾಗಿಯೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ತಿರುಗೇಟು ನೀಡಿದ್ದಾರೆ. ಡಿಸಿಎಂ ಹೇಳಿಕೆ ಬಗ್ಗೆ ಎಕ್ಸ್ನಲ್ಲಿ …
Read More »ನಾನು ಮದುವೆ ಸಮಯದಲ್ಲಿ ಧರಿಸಿದ್ದ ಹುಲಿ ಉಗುರು ಮಾದರಿಯ ಪೆಂಡೆಂಟ್ ನೈಜವಾದುದ್ದಲ್ಲ: ನಿಖಿಲ್ ಕುಮಾರಸ್ವಾಮಿ
ಬೆಂಗಳೂರು : ತಮ್ಮ ಮದುವೆ ಸಮಯದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದರು ಎಂದು ಕೆಲ ಮಾಧ್ಯಮಗಳಲ್ಲಿ ವರದಿ ಮಾಡಲಾಗಿದೆ. ಇದು ಸತ್ಯಕ್ಕೆ ದೂರ ಎಂದು ನಟ, ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಎಕ್ಸ್ನಲ್ಲಿ ಸ್ಪಷ್ಟನೆ ನೀಡಿರುವ ಅವರು, ವನ್ಯಜೀವಿ ಸಂರಕ್ಷಣಾ ಕಾಯ್ದೆ, ಅದರ ಗಂಭೀರತೆ ಬಗ್ಗೆ ನನಗೆ ಖಂಡಿತಾ ಅರಿವಿದೆ ಎಂದು ಹೇಳಿದ್ದಾರೆ. ನಾನು ಧರಿಸಿದ್ದ ಹುಲಿ ಉಗುರು ಮಾದರಿಯ ಪೆಂಡೆಂಟ್ …
Read More »ಹುಲಿ ಉಗುರು ಪ್ರಕರಣ.. ಯಾರೇ ಪ್ರಭಾವಿಗಳಿದ್ದರೂ ಬಿಡಲ್ಲ: ಸಚಿವ ಈಶ್ವರ ಖಂಡ್ರೆ
ಕಲಬುರಗಿ: ವನ್ಯಜೀವಿ ಸಂರಕ್ಷಣೆ ಕಾಯ್ದೆ ಅಡಿ ವನ್ಯ ಪ್ರಾಣಿಗಳ ಚರ್ಮ, ದಂತ, ಕೊಂಬು ಸಂಗ್ರಹ ಅಥವಾ ಸಾಗಾಣಿಕೆಗೆ ಅವಕಾಶ ಇಲ್ಲ. ಅದು ಶಿಕ್ಷಾರ್ಹ ಅಪರಾಧವಾಗಿದೆ. ಅಂತಹ ಯಾವುದೇ ಪ್ರಕರಣಗಳಲ್ಲಿ ಭಾಗಿಯಾದರೆ, ಅವರ ಹಿಂದೆ ಎಂತಹ ಪ್ರಭಾವಿಗಳಿದ್ದರೂ ಬಿಡುವುದಿಲ್ಲ. ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಖಾತೆ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. ಇತ್ತೀಚೆಗೆ ಹುಲಿ ಉಗುರು ಧರಿಸಿರುವ ಪ್ರಕರಣಗಳು ಹೆಚ್ಚುತ್ತಿರುವ ಕುರಿತು ಕಲಬುರಗಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಲವರು ಹುಲಿ …
Read More »ಒಂದು ಕೆಜಿ ಅಧಿಕ ತೂಕದ 80 ಲಕ್ಷ ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಜಪ್ತಿ
ದೇವನಹಳ್ಳಿ (ಬೆಂಗಳೂರು) : ವಿಮಾನದ ವಾಶ್ ರೂಮ್ನಲ್ಲಿ ಅಡಗಿಸಿಟ್ಟು ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಒಂದು ಕೆಜಿ ಅಧಿಕ ತೂಕದ 80 ಲಕ್ಷ ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಅಕ್ಟೋಬರ್ 24ರಂದು ಅಬುಧಾಬಿಯಿಂದ ಬಂದ ಇವೈ 238 ವಿಮಾನವನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ಈ ವೇಳೆ ವಿಮಾನದ ವಾಶ್ ರೂಮ್ನಲ್ಲಿ ಕಪ್ಪು ಬಣ್ಣದ ಚೀಲದಲ್ಲಿ ಚಿನ್ನವನ್ನು ಅಡಗಿಸಿ ಇಟ್ಟಿರುವುದು ಪತ್ತೆಯಾಗಿದೆ. ಒಟ್ಟು 1331.66 …
Read More »ಮಂಗಳೂರು ದಸರಾ ಸಂಪನ್ನ: ಶ್ರೀ ಶಾರದೆ, ನವದುರ್ಗೆಯರ ವೈಭವದ ಮೆರವಣಿಗೆ
ಮಂಗಳೂರು: ಪ್ರಸಿದ್ಧ ಮಂಗಳೂರು ದಸರಾ ಹಿನ್ನೆಲೆಯಲ್ಲಿ ಮಂಗಳವಾರ ಶ್ರೀ ಶಾರದಾಮಾತೆ, ನವದುರ್ಗೆಯರು ಹಾಗೂ ಶ್ರೀ ಮಹಾಗಣಪತಿ ದೇವರ ಆರಾಧನೆ ಸಂಪನ್ನಗೊಂಡು ಇದೀಗ ವೈಭವದ ಮೆರವಣಿಗೆ ಆರಂಭಗೊಂಡಿದೆ. ಕಳೆದ 9 ದಿನಗಳಿಂದ ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ ಶ್ರೀ ದೇವರ ಆರಾಧನೆ ಅದ್ಧೂರಿಯಾಗಿ ನಡೆದುಕೊಂಡು ಬಂದಿತ್ತು. ಮೊಗ್ಗು ಮಲ್ಲಿಗೆಯ ಶಾರದಾ ಜಲ್ಲಿ, ವಿಶೇಷ ಪಟ್ಟೆ ಸೀರೆ, ವಿವಿಧ ಆಭರಣಗಳೊಂದಿಗೆ ಅಲಂಕೃತಳಾದ ಶಾರದಾ ಮಾತೆಗೆ ಮಧ್ಯಾಹ್ನದ ಬಳಿಕ ನಿಮಜ್ಜನಾ ಪೂಜೆ ನೆರವೇರಿತು. ಸಂಜೆಯಾಗುತ್ತಿದ್ದಂತೆ ಶೋಭಾಯಾತ್ರೆಗೆ ಸಿದ್ಧತೆ …
Read More »ಒಂದೇ ಜಾತಿಗೆ ರಾಣಿ ಚನ್ನಮ್ಮಳನ್ನು ಸೀಮಿತಗೊಳಿಸಬೇಡಿ: ಸಂಶೋಧಕ ಸಂತೋಷ ಹಾನಗಲ್
ಬೆಳಗಾವಿ: “ವೀರರಾಣಿ ಕಿತ್ತೂರು ಚನ್ನಮ್ಮಾಜಿಯನ್ನು ಒಂದೇ ಜಾತಿ ಮತ್ತು ಸಮುದಾಯಕ್ಕೆ ಸೀಮಿತಗೊಳಿತ್ತಿರುವ ವಿಚಾರ ಕಳೆದ ಐದು ವರ್ಷಗಳಿಂದ ಶುರುವಾಗಿದೆ. ಮೊಳಕೆಯೊಡೆಯುವ ಮೊದಲೇ ಚಿವುಟಿ ಹಾಕುವ ಅವಶ್ಯಕತೆಯಿದೆ” ಎಂದು ಸಂಶೋಧಕ ಸಂತೋಷ ಹಾನಗಲ್ ಅಭಿಪ್ರಾಯ ವ್ಯಕ್ತಪಡಿಸಿದರು. ಕಿತ್ತೂರು ಉತ್ಸವದ ಅಂಗವಾಗಿ ಮಂಗಳವಾರ ನಡೆದ ವಿಚಾರಗೋಷ್ಠಿಯಲ್ಲಿ ಮಾತನಾಡಿದ ಅವರು, “ರಾಣಿ ಚನ್ನಮ್ಮಾಜಿ ಜತೆ ಸೇರಿಕೊಂಡು ಎಲ್ಲ ಸಮುದಾಯದ ವೀರರು ಸಂಸ್ಥಾನದ ಉಳಿವಿಗಾಗಿ ಹೋರಾಡಿದ್ದಾರೆ. ಅವರೆಲ್ಲ ಇಡೀ ದೇಶಕ್ಕೆ ಸೇರಿದ ಮಹಾಪುರುಷರು. ಅಂತಹವರನ್ನು ಒಂದೇ ಜಾತಿ, …
Read More »ಇಂದು ದಸರಾ ಜಂಬೂ ಸವಾರಿ ವೈಭವ: ಅಂಬಾರಿ ಹೊರಡುವ ಮಾರ್ಗದಲ್ಲಿ ಭಾರಿ ಭದ್ರತೆ
ಮೈಸೂರು: ವಿಶ್ವವಿಖ್ಯಾತ ಸಾಂಪ್ರದಾಯಿಕ ಮೈಸೂರು ದಸರಾ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ವಿಜಯದಶಮಿ ಮೆರವಣಿಗೆಗೆ ಸಕಲ ಸಿದ್ಧತೆಗಳು ಭರದಿಂದ ಸಾಗಿವೆ. ಚಿನ್ನದ ಅಂಬಾರಿಯಲ್ಲಿ ಆಸೀನಳಾಗುವ ನಾಡದೇವತೆ ಶ್ರೀ ಚಾಮುಂಡೇಶ್ವರಿಗೆ ಗಣ್ಯರು ಪುಷ್ಪಾರ್ಚನೆ ಮಾಡುವ ಮೂಲಕ ವೈಭವದ ಜಂಬೂ ಸವಾರಿ ಮೆರವಣಿಗೆಗೆ ವಿಧ್ಯುಕ್ತ ಚಾಲನೆ ಸಿಗಲಿದೆ. ಜಂಬೂ ಸವಾರಿಗೆ ಸಕಲ ಸಿದ್ಧತೆಜಂಬೂಸವಾರಿ ಮೆರವಣಿಗೆಗೆ 47 ಸ್ತಬ್ಧಚಿತ್ರಗಳು ಹಾಗೂ ಕಲಾತಂಡಗಳು ಸಿದ್ಧವಾಗಿವೆ. ಮಧ್ಯಾಹ್ನ 1.46 ರಿಂದ 2.08 ರ ಶುಭ ಮಕರ ಲಗ್ನದಲ್ಲಿ ಸಿಎಂ …
Read More »ಚೆನ್ನೈನ ಅವಡಿ ಬಳಿ ಹಳಿ ತಪ್ಪಿದ ವಿದ್ಯುತ್ ಚಾಲಿತ ರೈಲು: ತಪ್ಪಿದ ಭಾರಿ ದುರಂತ
ಚೆನ್ನೈ (ತಮಿಳುನಾಡು): ಇಂದು ಬೆಳಗ್ಗೆ ತಮಿಳುನಾಡು ರಾಜ್ಯದ ಚೆನ್ನೈನ ಅವಡಿ ರೈಲು ನಿಲ್ದಾಣದ ಬಳಿ ವಿದ್ಯುತ್ ಚಾಲಿತ ರೈಲು (electric train) ಹಳಿ ತಪ್ಪಿದೆ. ಅದೃಷ್ಟವಶಾತ್ ಪ್ರಯಾಣಿಕರಿಲ್ಲದ ಕಾರಣ ಯಾವುದೇ ಅನಾಹುತ ಸಂಭವಿಸಿಲ್ಲ. ರೈಲ್ವೆ ಹಳಿ ಬಿರುಕು ಬಿಟ್ಟಿದ್ದರಿಂದ ಈ ಅವಘಡ ಸಂಭವಿಸಿರಬಹುದು ಎಂದು ಹೇಳಲಾಗುತ್ತಿದೆ. ತಿರುವಳ್ಳೂರಿನಿಂದ ಪುರಟ್ಚಿ ತಲೈವರ್ ಡಾ. ಎಂಜಿಆರ್ ಸೆಂಟ್ರಲ್ ರೈಲು ನಿಲ್ದಾಣದವರೆಗೆ ರೈಲ್ವೆ ಹಳಿಯ (ಟ್ರ್ಯಾಕ್) ನಿರ್ವಹಣಾ ಕಾರ್ಯ ನಡೆಯುತ್ತಿದೆ. ಈ ವೇಳೆ, ಇಂದು (ಅ.24) …
Read More »“ಬರ ವಿಚಾರವನ್ನು ಕುಮಾರಸ್ವಾಮಿ ಸರಿಯಾಗಿ ತಿಳಿದುಕೊಂಡಿಲ್ಲ. ಸುಮ್ಮನೆ ಆರೋಪ ಮಾಡುತ್ತಿದ್ದಾರೆ” ಎಂದ ಮುಖ್ಯಮಂತ್ರಿ
ಮೈಸೂರು: “ಬರ ವಿಚಾರವನ್ನು ಕುಮಾರಸ್ವಾಮಿ ಸರಿಯಾಗಿ ತಿಳಿದುಕೊಂಡಿಲ್ಲ. ಸುಮ್ಮನೆ ಆರೋಪ ಮಾಡುತ್ತಿದ್ದಾರೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸೋಮವಾರ ದಸರಾ ಏರ್ ಶೋ ವೀಕ್ಷಣೆ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, “ರಾಜ್ಯದಲ್ಲಿ ಈಗಾಗಲೇ ಬರಗಾಲ ಕಾಮಗಾರಿಗಳು ಆರಂಭವಾಗಿವೆ. ಕುಡಿಯುವ ನೀರು, ಮೇವು ಕೊಡುವ ಕೆಲಸ ಮಾಡುತ್ತಿದ್ದೇವೆ. ಕುಡಿಯುವ ನೀರಿಗೆ ಎಷ್ಟೇ ಹಣ ಖರ್ಚಾದರೂ ತೊಂದರೆ ಆಗಬಾರದು ಎಂದು ಸೂಚಿಸಿದ್ದೇನೆ. ಸದ್ಯಕ್ಕೆ ಮೇವಿಗೆ ಕೊರತೆ ಇಲ್ಲ. ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ …
Read More »
Laxmi News 24×7