ಧಾರವಾಡ: ಇಂದು ಪೊಲೀಸ್ ಹುತಾತ್ಮರ ದಿನಾಚರಣೆ ನಿಮಿತ್ತ ಧಾರವಾಡ ಜಿಲ್ಲಾ ಡಿಎಆರ್ ಮೈದಾನದಲ್ಲಿ ಪೊಲೀಸ್ ವತಿಯಿಂದ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ವೇಳೆ, ಹುತಾತ್ಮ ಪೊಲೀಸ್ ಸ್ಮಾರಕಕ್ಕೆ ಗೌರವ ನಮನ ಸಲ್ಲಿಸುವಾಗ ಮೃತ ಹುತಾತ್ಮ ಪೊಲೀಸ್ ಕಾನ್ಸ್ಟೇಬಲ್ ಹುಚ್ಚಪ್ಪ ಮಲ್ಲಣ್ಣನವರ್ ಕುಟುಂಬಸ್ಥರು ಕಣ್ಣೀರು ಹಾಕಿದರು. ಗೌರವ ನಮನ ಸಲ್ಲಿಸುವ ವೇಳೆ ಮೃತ ಪೊಲೀಸ್ ತಾಯಿ ನೀಲವ್ವ, ತಂದೆ ಹನುಮಪ್ಪ, ತಂಗಿ, ಅಕ್ಕ, ಮಾವ ಮತ್ತು ತಮ್ಮ ಮಲ್ಲಿಕಾರ್ಜುನ ಮೃತ ಹುಚ್ಚಪ್ಪನನ್ನು ನೆನೆದು …
Read More »ದಸರಾ ಹಬ್ಬದ ಪ್ರಯುಕ್ತ ನಡೆದ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಹಿರೇಮಠದ ಸಮಾರಂಭದಲ್ಲಿ ಶಾಸಕ ಬಿ ಎಸ್ ವಿಜಯೇಂದ್ರ ಭಾಗವಹಿಸಿದ್ದರು.
ಚಿಕ್ಕೋಡಿ: ಆದಷ್ಟು ಬೇಗನೆ ಬಿಜೆಪಿ ಪಕ್ಷಕ್ಕೆ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕ ನೇಮಕಾತಿ ಮಾಡಲಾಗುವುದು ಎಂದು ಶಿಕಾರಿಪುರದ ಶಾಸಕ ಬಿ ವೈ ವಿಜಯೇಂದ್ರ ಹೇಳಿದರು. ದಸರಾ ಹಬ್ಬದ ಪ್ರಯುಕ್ತ ಹುಕ್ಕೇರಿ ಹಿರೇಮಠದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು, ಚಂದ್ರಶೇಖರ ಶಿವಾಚಾರ್ಯರ ಶ್ರೀಗಳ ಆಶೀರ್ವಾದ ಪಡೆದ ಬಳಿಕ ಮಾಧ್ಯಮಗಳ ಜತೆ ಮಾತನಾಡಿದರು.ಯಡಿಯೂರಪ್ಪ ಹಿರಿಯರು ಇದ್ದಾರೆ. ಅವರು ಯಾವಾಗ ಬೇಕಾದರೂ ರಾಜ್ಯ ಪ್ರವಾಸ ಮಾಡಬಹುದು. ಅವರಿಗೆ ನೀವು ಪ್ರವಾಸ ಮಾಡಬೇಡಿ ಎಂದು ಯಾರೂ ಹೇಳಿಲ್ಲ. ಯಡಿಯೂರಪ್ಪ …
Read More »ಆಸ್ತಿ ತೆರಿಗೆ ಠರಾವ್ ತಿರುಚಿದವರ ವಿರುದ್ಧ ತನಿಖೆಗೆ ನಿರ್ಧಾರ: ಪಾಲಿಕೆ ಸಭೆ ಸಚಿವ ಸತೀಶ ಜಾರಕಿಹೊಳಿ ಬಂದ 10 ನಿಮಿಷಕ್ಕೆ ಅಂತ್ಯ
ಬೆಳಗಾವಿ: ಇಂದು ನಡೆದ ಬೆಳಗಾವಿ ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಆಸ್ತಿ ಕರ ಹೆಚ್ಚಳ ವಿಚಾರದಲ್ಲಿ ಸಾಕಷ್ಟು ಸದ್ದು ಗದ್ದಲ ನಡೆಯಿತು. ಆಡಳಿತ ಮತ್ತು ವಿಪಕ್ಷ ಸದಸ್ಯರ ನಡುವೆ ವಾಕ್ಸಮರಕ್ಕೆ ಪಾಲಿಕೆ ಸಾಕ್ಷಿಯಾಯಿತು. ಪಾಲಿಕೆ ಆಯುಕ್ತರ ವಿರುದ್ಧ 2024/25ನೇ ಸಾಲಿಗೆ ಆಸ್ತಿ ಕರ ಹೆಚ್ಚಿಸುವ ಠರಾವು ತಿರುಚಿದ್ದಿರಿ ಎಂದು ಆಡಳಿತ ಸದಸ್ಯರು ಆರೋಪಿಸಿದರೆ, ಇದಕ್ಕೆ ಮೇಯರ್ ಅವರು ಕೂಡ ಸಹಿ ಮಾಡಿದ್ದಾರಲ್ಲ ಎಂದು ವಿಪಕ್ಷ ಸದಸ್ಯರು ಹರಿಹಾಯ್ದರು. ಹೌದು ಇಂದು ಮಧ್ಯಾಹ್ನ …
Read More »ಮಾಜಿ ಸಿಎಂ ಬೊಮ್ಮಾಯಿ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ತೆರಳಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅನಾರೋಗ್ಯದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಜಿ. ಪರಮೇಶ್ವರ್ ಅವರು ಇಂದು ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಗೆ ಭೇಟಿ ನೀಡಿ ಬಸವರಾಜ ಬೊಮ್ಮಾಯಿ ಅವರ ಆರೋಗ್ಯ ವಿಚಾರಿಸಿ ಬೇಗ ಗುಣಮುಖರಾಗುವಂತೆ ಹಾರೈಸಿದರು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ …
Read More »ರಾಜ್ಯದ ರಸ್ತೆ ಸಾರಿಗೆ ನಿಗಮಗಳಿಗೆ 5600 ಬಸ್ ಖರೀದಿ: ಮುಖ್ಯಮಂತ್ರಿ
ಬೆಂಗಳೂರು: ಶಕ್ತಿ ಯೋಜನೆಗೆ ರಾಜ್ಯಾದ್ಯಂತ ಅಪಾರ ಸ್ಪಂದನೆ ಮತ್ತು ಸಾರ್ವಜನಿಕರ ಮೆಚ್ಚುಗೆ ವ್ಯಕ್ತ ಆಗಿರುವ ಹಿನ್ನೆಲೆಯಲ್ಲಿ 5,675 ಹೊಸ ಬಸ್ ಖರೀದಿಯ ಗುರಿ ಹೊಂದಲಾಗಿದ್ದು, ಈ ಕುರಿತು ಶೀಘ್ರವೇ ಕ್ರಮಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಸಾರಿಗೆ ಇಲಾಖೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಪ್ರಸಕ್ತ ಆಯವ್ಯಯದಲ್ಲಿ ಹೊಸ ಬಸ್‌ಗಳ ಖರೀದಿಗೆ 500 ಕೋಟಿ ರೂ. ಒದಗಿಸಲಾಗಿದ್ದು, ಖರೀದಿ ಪ್ರಕ್ರಿಯೆಯನ್ನು ಶೀಘ್ರವೇ ಪೂರ್ಣಗೊಳಿಸಲು ಸೂಚಿಸಿದರು. ಶಕ್ತಿ ಯೋಜನೆಯಿಂದ ರಾಜ್ಯ …
Read More »ನನ್ನ ಹಾಗೂ ಸತೀಶ್ ಜಾರಕಿಹೊಳಿ ಅವರ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದ ಲಕ್ಷ್ಮೀ ಹೆಬ್ಬಾಳ್ಕರ್
ಬೆಳಗಾವಿ: ನನ್ನ ಮೌನವೂ ವೀಕ್ನೆಸ್ ಅಲ್ಲ ಎನ್ನುವ ಮೂಲಕ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾಂಗ್ರೆಸ್ ಬಂಡಾಯದ ಬೆಂಕಿಗೆ ಮತ್ತಷ್ಟು ತುಪ್ಪ ಸುರಿದಿದ್ದಾರೆ. ಮೊನ್ನೆಯಷ್ಟೇ ಖಾಸಗಿ ಮಾಧ್ಯಮದ ಜೊತೆ ಮಾತನಾಡುತ್ತಿದ್ದ ವೇಳೆ ನನ್ನ ಮೌನ ನನ್ನ ವೀಕ್ನೆಸ್ ಅಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದರು. ಈ ವಿಚಾರದ ಬಗ್ಗೆ ಇಂದು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಈ ರೀತಿ ಉತ್ತರಿಸಿದರು. ಜಿಲ್ಲಾ ಕಾಂಗ್ರೆಸ್ನಲ್ಲಿ …
Read More »ಜಯಪ್ರದಾಗೆ 6 ತಿಂಗಳ ಜೈಲು ಶಿಕ್ಷೆ ಖಚಿತಪಡಿಸಿದ ಮದ್ರಾಸ್ ಹೈಕೋರ್ಟ್: 15 ದಿನದಲ್ಲಿ ಶರಣಾಗಲು ಆದೇಶ
ಚೆನ್ನೈ (ತಮಿಳುನಾಡು): ಖ್ಯಾತ ನಟಿ ಜಯಪ್ರದಾ ಅವರಿಗೆ ಕೆಳ ಹಂತದ ನ್ಯಾಯಾಲಯ ವಿಧಿಸಿದ್ದ 6 ತಿಂಗಳ ಜೈಲು ಶಿಕ್ಷೆಯನ್ನು ಮದ್ರಾಸ್ ಹೈಕೋರ್ಟ್ ಇಂದು (ಶುಕ್ರವಾರ) ಖಚಿತಪಡಿಸಿತು. 15 ದಿನದಲ್ಲಿ ಎಗ್ಮೋರ್ ಕೋರ್ಟ್‌ಗೆ ಶರಣಾಗುವಂತೆ ಹಾಗೂ 20 ಲಕ್ಷ ರೂ. ಠೇವಣಿ ಇಡುವಂತೆ ಸೂಚಿಸಿದೆ. ಕನ್ನಡ, ತೆಲುಗು ಹಾಗೂ ತಮಿಳು ಸೇರಿದಂತೆ ವಿವಿಧ ಭಾಷೆಗಳ ಸಿನಿಮಾಗಳಲ್ಲಿ ಅಭಿನಯಿಸಿರುವ ಜಯಪ್ರದಾ, ಸಂಸತ್ ಸದಸ್ಯರಾಗಿದ್ದರು. ಚೆನ್ನೈನಲ್ಲಿ ರಾಮಕುಮಾರ್, ರಾಜ್ಬಾಬು ಎಂಬವರೊಂದಿಗೆ ಸೇರಿ ಚಿತ್ರಮಂದಿರವನ್ನು ನಡೆಸುತ್ತಿರುವ ಇವರು, …
Read More »ಹೋರಾಟಗಾರರ ಮೇಲಿನ ಪ್ರಕರಣ ಹಿಂಪಡೆಯುವ ವಿಚಾರ: ಕಡತ ಕ್ಯಾಬಿನೆಟ್ ಮುಂದಿಡಲು ಸಿಎಂ ಸೂಚನೆ
ಬೆಂಗಳೂರು: ಕಾವೇರಿ, ಮೇಕೆದಾಟು ಪಾದಯಾತ್ರೆ ಸೇರಿದಂತೆ ನಾಡಿನ ಹಿತರಕ್ಷಣೆಯ ಹೋರಾಟಗಳಲ್ಲಿ ಭಾಗವಹಿಸಿದ ಹೋರಾಟಗಾರರ ಮೇಲೆ ದಾಖಲಿಸಿರುವ ಪ್ರಕರಣಗಳನ್ನು ಹಿಂಪಡೆಯುವ ಸಂಬಂಧ ಕಡತವನ್ನು ಸಂಪುಟ ಸಭೆ ಮುಂದೆ ತರಲು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಈ ಕುರಿತು ಎಂಎಲ್ಸಿ ದಿನೇಶ್ ಗೂಳಿಗೌಡ ಸಿಎಂಗೆ ಪತ್ರ ಬರೆದು ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿರುವ ಸಿಎಂ, ಪ್ರಕರಣಗಳನ್ನು ಹಿಂಪಡೆಯುವ ವಿಚಾರವಾಗಿ ಸಚಿವ ಸಂಪುಟ ಉಪ ಸಮಿತಿಯ ಮುಂದೆ ಕಡತ …
Read More »ನಮ್ಮಲ್ಲಿ ಯಾವುದೇ ಅಸಮಾಧಾನವಿಲ್ಲ. ನಾನು ಬಿಜೆಪಿಗೆ ಸತ್ತರೂ ಹೋಗಲಾರೆ-ಕಾಂಗ್ರೆಸ್ ಶಾಸಕ ರಾಜು ಕಾಗೆ
ಬೆಳಗಾವಿ: ನಾವು ಸಾಯುವವರೆಗೂ ಬಿಜೆಪಿಗೆ ಮರಳಿ ಹೋಗುವ ಪ್ರಶ್ನೆಯೇ ಇಲ್ಲ. ಇದು ನೂರಕ್ಕೆ ನೂರು ಸತ್ಯ. ಸತ್ತರೆ ನನ್ನ ಹೆಣವೂ ಬಿಜೆಪಿಗೆ ಹೋಗುವುದಿಲ್ಲ ಎಂದು ಕಾಂಗ್ರೆಸ್ ಶಾಸಕ ರಾಜು ಕಾಗೆ ಹೇಳಿಕೆ ನೀಡಿದರು. ಬೆಳಗಾವಿಯಲ್ಲಿ ಶುಕ್ರವಾರ ಮಾಧ್ಯಮಗಳ ಜತೆ ಮಾತನಾಡುತ್ತಿದ್ದ ಅವರು, ಮರಳಿ ಬಿಜೆಪಿ ಸೇರ್ಪಡೆಯಾಗುತ್ತೀರಾ ಎಂಬ ಪ್ರಶ್ನೆಗೆ ಈ ರೀತಿ ಉತ್ತರಿಸಿದರು. ಮೈಸೂರು ಪ್ರವಾಸ ವಿಚಾರಕ್ಕೆ ಪ್ರತಿಕ್ರಿಯಿಸಿ, ಏನೂ ಇಲ್ಲ, ಪ್ರವಾಸಕ್ಕೆ ಹೋಗಿದ್ದೆವು. ಜೀವನದಲ್ಲಿ ಎಂದೂ ಮೈಸೂರಿಗೆ ಹೋಗಿರಲಿಲ್ಲ. ಹಾಗಾಗಿ, …
Read More »ನನಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನ ನೀಡುತ್ತಾರೆಂಬುದು ಊಹಾಪೋಹ ಅಷ್ಟೇ: ಲಕ್ಷ್ಮಣ್ ಸವದಿ
ಚಿಕ್ಕೋಡಿ(ಬೆಳಗಾವಿ): “ನನಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನದ ನೀಡುತ್ತಾರೆಂಬ ವಿಚಾರ ಊಹಾಪೋಹ ಅಷ್ಟೇ. ಈ ಬಗ್ಗೆ ನನಗೆ ಮಾಹಿತಿಯೂ ಇಲ್ಲ” ಎಂದು ಅಥಣಿ ಶಾಸಕ ಲಕ್ಷ್ಮಣ್ ಸವದಿ ಹೇಳಿದರು. ಅಥಣಿ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಇದೆಲ್ಲಾ ಮಾಧ್ಯಮಗಳಲ್ಲಿ ಮಾತ್ರ ಚರ್ಚೆಯಾಗುತ್ತಿದೆ. ನಾನು ತಾಲೂಕಿನ ಅಭಿವೃದ್ಧಿ ವಿಚಾರವಾಗಿ ಸಿಎಂ ಮತ್ತು ಡಿಸಿಎಂ ಭೇಟಿಗೆ ಹೋಗಿದ್ದೆ. ಅವರೊಂದಿಗೆ ಯಾವುದೇ ರಾಜಕೀಯ ಚರ್ಚೆ ಮಾಡಿಲ್ಲ” ಎಂದರು. “ಪದಾಧಿಕಾರಿಗಳ ಪುನರ್‌ರಚನೆಯನ್ನು ಕೇಂದ್ರದ ವರಿಷ್ಠರು ಹಾಗೂ …
Read More »
Laxmi News 24×7