Breaking News

ರಾಜ್ಯ

ಸಿಎಂ ಬದಲಾವಣೆ ಚರ್ಚೆ: ಹೈಕಮಾಂಡ್​​ ನಿರ್ಧಾರ ಅಂತಿಮ:ಡಾ.ಜಿ.ಪರಮೇಶ್ವರ್

ಬೆಂಗಳೂರು: “ಸಿಎಂ ಬದಲಾವಣೆ ವಿಚಾರದಲ್ಲಿ ಪಕ್ಷದ ಹೈಕಮಾಂಡ್​​ ನಿರ್ಧಾರವೇ ಅಂತಿಮ. ಸಂದರ್ಭ ಬಂದಾಗ ಅವರು ಸಿಎಲ್​ಪಿ ಸಭೆ ಕರೆಯುತ್ತಾರೆ” ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಸದಾಶಿವನಗರದಲ್ಲಿ ಇಂದು ಮಾತನಾಡಿದ ಅವರು, “ಹೈಕಮಾಂಡ್​ ಸಂದರ್ಭ ಬಂದಾಗ ಸಿಎಲ್​ಪಿ ಕರೆಯುತ್ತಾರೆ. ಆಗ ಶಾಸಕರ ಅಭಿಪ್ರಾಯ ಪಡೆಯುತ್ತಾರೆ. ವೀಕ್ಷಕರು ಹೈಕಮಾಂಡ್​ಗೆ ವರದಿ ಕೊಡುತ್ತಾರೆ. ಆ ನಂತರ ಯಾರು?, ಏನು? ಎಂಬ ಘೋಷಣೆ ಆಗುತ್ತದೆ. ಇದು ನಮ್ಮಲ್ಲಿರುವ ಪದ್ಧತಿ. ಇದನ್ನು ಶಾರ್ಟ್ ಕಟ್ ಆಗಿ ಹೇಗೆ …

Read More »

ಖಾದ್ಯ ತೈಲ ಘಟಕ ನೋಂದಣಿ ಕಡ್ಡಾಯ; ಆದೇಶ ಪಾಲಿಸದಿದ್ರೆ ಕಠಿಣ ಕ್ರಮ- ಪ್ರಲ್ಹಾದ್ ಜೋಶಿ

ಖಾದ್ಯ ತೈಲ ಘಟಕ ನೋಂದಣಿ ಕಡ್ಡಾಯ; ಆದೇಶ ಪಾಲಿಸದಿದ್ರೆ ಕಠಿಣ ಕ್ರಮ- ಪ್ರಲ್ಹಾದ್ ಜೋಶಿ ನವದೆಹಲಿ/ಹುಬ್ಬಳ್ಳಿ: ಖಾದ್ಯ ತೈಲ ವಲಯದಲ್ಲಿ ಹೆಚ್ಚಿನ ನಿಯಂತ್ರಣ, ಮೇಲ್ವಿಚಾರಣೆ ಮತ್ತು ಪಾರದರ್ಶಕತೆಗಾಗಿ ಕೇಂದ್ರ ಸರ್ಕಾರ 2011ರ VOPPA ಆದೇಶಕ್ಕೆ ತಿದ್ದುಪಡಿ ತಂದಿದ್ದು, ಪಾಲಿಸದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದರು. ತರಕಾರಿ ತೈಲ ಉತ್ಪನ್ನಗಳು, ಉತ್ಪಾದನೆ ಮತ್ತು ಲಭ್ಯತೆ (ನಿಯಂತ್ರಣ) ಆದೇಶ-2011 (VOPPA)ಕ್ಕೆ …

Read More »

ಸೂರ್ಯನಿಗೂ ಚಂದ್ರನಿಗೂ ಮತ್ತು ಅಮಾವಾಸ್ಯೆ – ಹುಣ್ಣಿಮೆಗೂ ವ್ಯತ್ಯಾಸ ತಿಳಿದು ಮಾತನಾಡಲಿ: ತೇಜಸ್ವಿ ಸೂರ್ಯ

ಬೆಂಗಳೂರು: “ಸೂರ್ಯನಿಗೂ ಚಂದ್ರನಿಗೂ, ಅಮಾವಾಸ್ಯೆಗೂ ಹುಣ್ಣಿಮೆಗೂ ವ್ಯತ್ಯಾಸ ತಿಳಿದುಕೊಂಡು ಸಿಎಂ ಮುಂದೆ ಆ ಥರ ಹೇಳಿಕೆ ಕೊಡಲಿ” ಎಂದು ಸಂಸದ ತೇಜಸ್ವಿ ಸೂರ್ಯ ತಿರುಗೇಟು ನೀಡಿದರು. ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, “ಸಿದ್ದರಾಮಯ್ಯ ಅವರು ಹಲವು ಬಾರಿ ನನ್ನ ಬಗ್ಗೆ ವೈಯಕ್ತಿಕ ಟೀಕೆ ಮಾಡಿದ್ದಾರೆ. ಅವರ ಸ್ಥಾನಕ್ಕೆ ಶೋಭೆ ತರದ ಹಾಗೆ ವೈಯಕ್ತಿಕ ಟೀಕೆ ಮಾಡ್ತಾರೆ. ಹಿಂದೆ ಚುನಾವಣೆ ವೇಳೆಯೂ ಟೀಕಿಸಿದ್ರು. ಅವರು ಹಿರಿಯರು, ಅವರಿಗೆ ಅಮಾವಾಸ್ಯೆಗೂ ಹುಣ್ಣಿಮೆಗೂ ವ್ಯತ್ಯಾಸ …

Read More »

ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲಿಗೆ ಬೀಗಮುದ್ರೆ ಈ ವರ್ಷ 25 ಲಕ್ಷಕ್ಕೂ ಅಧಿಕ ಭಕ್ತರಿಂದ ದರ್ಶನ

ಹಾಸನ: ಕಳೆದ 15 ದಿನಗಳಿಂದ ದರ್ಶನ ನೀಡಿದ ಹಾಸನದ ಪ್ರಸಿದ್ಧ ಹಾಸನಾಂಬೆ ದೇವಿಯ ಗರ್ಭಗುಡಿಯ ಬಾಗಿಲನ್ನು ಶಾಸ್ತ್ರೋಕ್ತವಾಗಿ ಮುಚ್ಚಲಾಯಿತು. ಜಿಲ್ಲಾಡಳಿತ ಮತ್ತು ಜಿಲ್ಲಾ ಉಸ್ತುವಾರಿ ಸಮ್ಮುಖದಲ್ಲಿ ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸುವ ಮೂಲಕ ಗರ್ಭಗುಡಿಯ ಬಾಗಿಲಿಗೆ ಬೀಗಮುದ್ರೆ ಹಾಕಲಾಯಿತು. ಈ ಕ್ಷಣಕ್ಕೆ ಸಾಕ್ಷಿಯಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ, ಜಿಲ್ಲಾಧಿಕಾರಿ ಕೆ.ಎಸ್. ಲತಾ ಕುಮಾರಿ, ಶಾಸಕರುಗಳಾದ ಕೆ.ಎಂ. ಶಿವಲಿಂಗೇಗೌಡ, ಸಿಮೆಂಟ್ ಮಂಜು, ಸ್ವರೂಪ ಪ್ರಕಾಶ್, ಸಂಸದ ಶ್ರೇಯಸ್ ಪಟೇಲ್, ಮಾಜಿ …

Read More »

ಸತೀಶ್ ಜಾರಕಿಹೊಳಿ ಸಿಎಂ ಆದರೆ ನಮ್ಮ ಬೆಂಬಲವಿದೆ:ಶ್ರೀರಾಮುಲು

ಹುಬ್ಬಳ್ಳಿ : ಪ್ರಿಯಾಂಕ್ ಖರ್ಗೆ ಅವರು ಇವತ್ತು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಅವರ ವಿರುದ್ದ ಯಾರೇ ಮಾತನಾಡಿದ್ರೂ ಅವರನ್ನು ಜೈಲಿಗೆ ಹಾಕಿಸುತ್ತಾರೆ. ಅವರಿಗೆ ತೊಂದರೆ ಮಾಡುತ್ತಿದ್ದಾರೆ. ಆರ್​ಎಸ್​ಎಸ್​​ ಬೆಂಬಲಿಸುವವರ ಮೇಲೆ ಕ್ರಮ ಕೈಗೊಳ್ಳುತ್ತಿದ್ದಾರೆ. ಮುಂದಕ್ಕೆ ಈ ರಾಜ್ಯದ ಉಪಮುಖ್ಯಮಂತ್ರಿಗಳಾಗಬೇಕು ಎಂಬ ಕನಸಿಟ್ಟುಕೊಂಡು ಈ ರೀತಿಯ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಆರೋಪಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ …

Read More »

ಯತೀಂದ್ರ ಹೇಳಿಕೆ ವೈಯಕ್ತಿಕ ಅಭಿಪ್ರಾಯ; ಪಕ್ಷದ ತೀರ್ಮಾನವೇ ಅಂತಿಮ: ಸಚಿವ ಸತೀಶ ಜಾರಕಿಹೊಳಿ

ಬೆಳಗಾವಿ: ನಾವು 2028ಕ್ಕೆ ಸಿಎಂ ಕ್ಲೈಮ್ ಮಾಡುತ್ತೇವೆ ಅಂತಾ ಈ ಮುಂಚೆಯೇ ಹೇಳಿದ್ದೇವೆ. ಅದನ್ನು ಪಕ್ಷ ತೀರ್ಮಾನ ಮಾಡಬೇಕು. ಇನ್ನು ಯತೀಂದ್ರ ಅವರು ತಮ್ಮ ವೈಯಕ್ತಿಕ ಅಭಿಪ್ರಾಯ ತಿಳಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಬೆಳಗಾವಿ ತಾಲೂಕಿನ ಕಾಕತಿಯಲ್ಲಿ ಕಾಕತಿ ಉತ್ಸವದ ಮೆರವಣಿಗೆಗೆ ಚಾಲನೆ ನೀಡಿ ಮಾಧ್ಯಮಗಳ ಜೊತೆಗೆ ಅವರು ಮಾತನಾಡಿದರು. ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅವರು ತಮ್ಮ ವೈಯಕ್ತಿಕ ಅಭಿಪ್ರಾಯ ಹೇಳಿದ್ದಾರೆ. ಅಂತಿಮವಾಗಿ …

Read More »

ಸಿದ್ದರಾಮಯ್ಯರ ಸ್ಥಾನ ತುಂಬುವ ಶಕ್ತಿ ಸತೀಶ್​ ಜಾರಕಿಹೊಳಿ‌ ಅವರಿಗಿದೆ ;ಡಾ.ಯತೀಂದ್ರ ಸಿದ್ದರಾಮಯ್ಯ

ಚಿಕ್ಕೋಡಿ(ಬೆಳಗಾವಿ): “ನಮ್ಮ ತಂದೆ ರಾಜಕೀಯದ ಕೊನೆಯ ಘಟ್ಟದಲ್ಲಿದ್ದಾರೆ” ಎಂದು ವಿಧಾನ ಪರಿಷತ್​ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಕಪ್ಪಲಗುದ್ದಿ ಗ್ರಾಮದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅವರು ಮಾತನಾಡಿದರು. “ನಮ್ಮ ತಂದೆಯವರು ರಾಜಕೀಯದ ಕೊನೆಯ ಘಟ್ಟದಲ್ಲಿದ್ದಾರೆ. ಈ ಸಮಯದಲ್ಲಿ ವೈಚಾರಿಕವಾಗಿ, ಪ್ರಗತಿಪರವಾದ ಸಿದ್ಧಾಂತ ಇಟ್ಟುಕೊಂಡಿರುವ ಅವರಿಗೆ ಮಾರ್ಗದರ್ಶನ ನೀಡಲು ನಾಯಕರು ಬೇಕು. ಆ ಜವಾಬ್ದಾರಿಯನ್ನು ಸಚಿವ ಸತೀಶ್ ಜಾರಕಿಹೊಳಿ ವಹಿಸಿಕೊಳ್ಳುತ್ತಾರೆ. ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳ ಮೇಲೆ ನಂಬಿಕೆ …

Read More »

ಸಂಗೊಳ್ಳಿ ರಾಯಣ್ಣನ ಗಲ್ಲಿಗೇರಿಸಿದ ಮರ ಇದೇ ನೋಡಿ

ಬೆಳಗಾವಿ: ಬ್ರಿಟಿಷರ ಎದೆಯಲ್ಲಿ ನಡುಕ ಹುಟ್ಟಿಸಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನನ್ನು ಮೋಸದಿಂದ ಹಿಡಿದು ಗಲ್ಲಿಗೇರಿಸಲಾಗಿತ್ತು. ಅವರ ಜೊತೆಗೆ ಇನ್ನೂ ಆರು ಜನರು ಗಲ್ಲು ಶಿಕ್ಷೆಗೆ ಗುರಿಯಾಗಿದ್ದರು. ಮತ್ತೆ ಆರು ಮಂದಿ ಜೀವಾವಧಿ(ಕರಿನೀರಿನ) ಶಿಕ್ಷೆಗೆ ಒಳಗಾಗಿದ್ದರು. ಕಿತ್ತೂರು ನಾಡಿನ ಈ ಹುತಾತ್ಮ ವೀರರು ಬೆಳಕಿಗೆ ಬಾರದೇ ಇರುವುದು ಇತಿಹಾಸಪ್ರಿಯರ ನೋವಿಗೆ ಕಾರಣವಾಗಿದೆ. ಕಿತ್ತೂರು ಪುಟ್ಟ ಸಂಸ್ಥಾನ ಆದರೂ ಸೂರ್ಯ ಮುಳುಗದ ಸಾಮ್ರಾಜ್ಯ ಎಂದು ಸೊಕ್ಕಿನಿಂದ ಮೆರೆಯುತ್ತಿದ್ದ ಆಂಗ್ಲರಿಗೆ ಮೊಟ್ಟ ಮೊದಲ ಬಾರಿ ಸೋಲಿನ …

Read More »

ಭಾರಿ ಮಳೆಗೆ ಬೆಳೆ ನಾಶ; ಕೆರೆಯಲ್ಲಿ ಮುಳುಗಿ ಮೂವರು ಸಾವು

ತುಮಕೂರು: ಜಿಲ್ಲೆಯ ವಿವಿಧೆಡೆ ಮಂಗಳವಾರ ಸುರಿದ ಭಾರಿ ಮಳೆಗೆ ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ಇನ್ನೊಂದೆಡೆ, ಹಳ್ಳ-ಕೊಳ್ಳಗಳಲ್ಲಿ ಯಥೇಚ್ಛವಾಗಿ ನೀರು ಹರಿದು ಹೋಗುತ್ತಿರುವುದರಿಂದ ಗ್ರಾಮಗಳ ರಸ್ತೆ ಸಂಪರ್ಕ ಕಡಿತಗೊಂಡಿದೆ. ಗುಬ್ಬಿ, ತಿಪಟೂರು, ತುರುವೇಕೆರೆ ಸೇರಿದಂತೆ ಇತರೆ ಭಾಗದಲ್ಲಿ ವ್ಯಾಪಕ ಮಳೆಯಾದ ಹಿನ್ನೆಲೆಯಲ್ಲಿ ಇಲ್ಲಿನ ಕೆರೆಗಳೆಲ್ಲ ಭರ್ತಿಯಾಗಿದ್ದು, ನೀರು ತುಂಬಿ ಹೊರ ಹೊರಹೋಗುತ್ತಿರುವ ದೃಶ್ಯ ಸರ್ವೇಸಾಮಾನ್ಯವಾಗಿದೆ. ನೀರಿನ ರಭಸಕ್ಕೆ ತೇಲಿ ಹೋದ ಕಾರು: ಗುಬ್ಬಿ ತಾಲೂಕಿನ ಭಾಗದಲ್ಲಿ ಹಳ್ಳಗಳಲ್ಲಿ ನೀರು ಉಕ್ಕಿ ಹರಿಯುತ್ತಿರುವುದರಿಂದ ಅಕ್ಕಪಕ್ಕದ …

Read More »

ಹೋರಿ ತಿವಿದು ವೃದ್ಧ ಸಾವು, ಇಬ್ಬರು ಗಂಭೀರ

ಹಾವೇರಿ: ಕೊಬ್ಬರಿ ಹೋರಿ ತಿವಿದು ಓರ್ವ ವಯೋವೃದ್ಧ ವ್ಯಕ್ತಿ ಸಾವನ್ನಪ್ಪಿದ ಘಟನೆ ಜಿಲ್ಲೆಯಲ್ಲಿ ಇಂದು ನಡೆಯಿತು. ಮೃತರನ್ನು 70 ವರ್ಷದ ಚಂದ್ರಶೇಖರ್​​​ ಕೊಡಿಹಳ್ಳಿ ಎಂದು ಗುರುತಿಸಲಾಗಿದೆ. ಚಂದ್ರಶೇಖರ ಕೋಡಹಳ್ಳಿ ಅವರು ಹಾವೇರಿಯ ದಾನೇಶ್ವರಿನಗರದ ನಿವಾಸಿ. ಘಟನೆಯಲ್ಲಿ ಇನ್ನಿಬ್ಬರಿಗೆ ಗಂಭೀರ ಗಾಯವಾಗಿದ್ದು, ಹುಬ್ಬಳ್ಳಿಯ ಕಿಮ್ಸ್​ಗೆ ರವಾನಿಸಲಾಗಿದೆ. ಹೋರಿ ಬೆದರಿಸುವ ಸ್ಪರ್ಧೆಯನ್ನು ನೋಡಿ ವಾಪಸ್ ಮನೆಗೆ ಹೋಗುತ್ತಿದ್ದ ವೇಳೆ, ಹಿಂದಿನಿಂದ ಹೋರಿ ತಿವಿದು ಘಟನೆ ನಡೆದಿದೆ. ಹಾವೇರಿ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ …

Read More »