ಹ್ಯಾಂಗ್‌ಝೌ (ಚೀನಾ): ಎರಡು ಬಾರಿಯ ವಿಶ್ವ ಚಾಂಪಿಯನ್ ನಿಖತ್ ಜರೀನ್ ಹ್ಯಾಂಗ್‌ಝೌನಲ್ಲಿ ನಡೆದ ಏಷ್ಯನ್ ಗೇಮ್ಸ್ ಬಾಕ್ಸಿಂಗ್ ಸ್ಪರ್ಧೆಯಲ್ಲಿ ದಕ್ಷಿಣ ಕೊರಿಯಾದ ಚೊರೊಂಗ್ ಬಾಕ್ ವಿರುದ್ಧ 5-0 ಅಂತರದಿಂದ ಜಯಗಳಿಸಿ ಕ್ವಾರ್ಟರ್‌ಫೈನಲ್ ಪ್ರವೇಶಿಸಿದರು. ಮಹಿಳೆಯರ 50 ಕೆಜಿ ವರ್ಗದ 16 ರ ಸುತ್ತಿನಲ್ಲಿ ನಿಖತ್ ತನ್ನ ಕೊರಿಯಾದ ಎದುರಾಳಿಯ ಮೇಲೆ ಪ್ರಾಬಲ್ಯ ಸಾಧಿಸಿದರು. ಅಂತಿಮವಾಗಿ ಅವರು 5-0 ಪಾಯಿಂಟ್‌ಗಳಿಂದ ಪಂದ್ಯವನ್ನು ಗೆದ್ದರು. ಏಷ್ಯನ್ ಗೇಮ್ಸ್‌ನಲ್ಲಿ ಪುರುಷರ 57-63.5 ಸುತ್ತಿನ 16 ಪಂದ್ಯಗಳಲ್ಲಿ, …
Read More »ಬುಧವಾರ ಒಂದೇ ದಿನ 24,500 ಆಸ್ತಿ ನೋಂದಣಿ.. 244 ಕೋಟಿ ರೂ. ಆದಾಯ ಸಂಗ್ರಹ
ಬೆಂಗಳೂರು : ಬುಧವಾರ ಒಂದೇ ದಿನ ಆಸ್ತಿ ನೋಂದಣಿ ಸೇರಿದಂತೆ 24,500 ದಸ್ತಾವೇಜು ಪ್ರಕ್ರಿಯೆ ನಡೆದಿದ್ದು, 244 ಕೋಟಿ ರೂ. ಆದಾಯ ಸಂಗ್ರಹವಾಗಿದೆ. ಮುದ್ರಾಂಕ ಮತ್ತು ನೋಂದಣಿ ಇಲಾಖೆ ಇತಿಹಾಸದಲ್ಲೇ ಒಂದೇ ದಿನ ಇಷ್ಟು ದೊಡ್ಡ ಪ್ರಮಾಣದಲ್ಲಿ ಆಸ್ತಿ ನೋಂದಣಿ- ದಸ್ತಾವೇಜು ಪ್ರಕ್ರಿಯೆ ನಡೆದಿರುವುದು ಹಾಗೂ ಗರಿಷ್ಠ ಶುಲ್ಕ ಸಂಗ್ರಹ ಆಗಿರುವುದು ಹೊಸ ದಾಖಲೆಯಾಗಿದೆ. ಕಳೆದ ಸೋಮವಾರವಷ್ಟೇ 15936 ನೋಂದಣಿ ದಸ್ತಾವೇಜು ಪ್ರಕ್ರಿಯೆ ನಡೆದಿದ್ದು, 158.28 ಕೋಟಿ ರೂ. ಆದಾಯ …
Read More »ಕಳಸ ಸರ್ಕಾರಿ ಆಸ್ಪತ್ರೆಗೆ ಇಲ್ಲ ಒಬ್ಬನೇ ಒಬ್ಬ ಡಾಕ್ಟರ್
ಚಿಕ್ಕಮಗಳೂರು: ಜಿಲ್ಲೆಯ ಕಳಸ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸಲು ಒಬ್ಬನೇ ಒಬ್ಬ ವೈದ್ಯನಿಲ್ಲದೆ ರೋಗಿಗಳು ಪರದಾಡುತ್ತಿದ್ದಾರೆ. ಕಳಸ ಗುಡ್ಡಗಾಡು ಪ್ರದೇಶದ ಅತಿ ಹೆಚ್ಚು ಬಡವರು ಹಾಗೂ ಕೂಲಿ ಕಾರ್ಮಿಕರ ಹೊಂದಿರುವಂತಹ ತಾಲೂಕಾಗಿದೆ. ಕಳಸ ತಾಲೂಕು ಕೇಂದ್ರವಾಗಿ ಕೆಲವು ವರ್ಷಗಳೇ ಕಳೆಯುತ್ತಾ ಬಂದರೂ ಇಲ್ಲಿನ ಸಮಸ್ಯೆಗಳಿಗೆ ಮಾತ್ರ ಪರಿಹಾರ ಸಿಕ್ಕಿಲ್ಲ ಎಂದು ಸಾರ್ವಜನಿಕರು ಕಿಡಿಕಾರುತ್ತಿದ್ದಾರೆ. ಅತಿ ಹೆಚ್ಚು ಕೂಲಿ ಕಾರ್ಮಿಕರು, ತೋಟದಲ್ಲಿ ಕೆಲಸ ಮಾಡುವ ಬಡವರು ಈ ತಾಲೂಕು ಕೇಂದ್ರದಲ್ಲಿ ಹೆಚ್ಚಾಗಿ …
Read More »ಲೋಕಸಭೆ ಚುನಾವಣೆಗಾಗಿ ಬಿಜೆಪಿ-ಜೆಡಿಎಸ್ ಮೈತ್ರಿ.. ದಳ ಅವಕಾಶವಾದಿ ಪಕ್ಷ: ಕಾಂಗ್ರೆಸ್ ಟೀಕೆ
ನವದೆಹಲಿ: ಮುಂದಿನ ಲೋಕಸಭೆ ಚುನಾವಣೆಗೆ ಜನತಾ ದಳ (ಜಾತ್ಯತೀತ) ಮತ್ತು ಬಿಜೆಪಿ ಮಾಡಿಕೊಂಡಿರುವ ಮೈತ್ರಿಗೆ ಆರಂಭದಲ್ಲೇ ವಿಘ್ನ ಶುರುವಾಗಿದೆ. ಮೈತ್ರಿ ಪ್ರಕಟವಾದ ಕೆಲವೇ ದಿನಗಳಲ್ಲಿ ಹಲವಾರು ಮುಸ್ಲಿಂ ನಾಯಕರು ಜೆಡಿಎಸ್ ತೊರೆದಿದ್ದಾರೆ ಎಂದು ಕಾಂಗ್ರೆಸ್ ಬುಧವಾರ ಹೇಳಿದೆ. ಈ ಹೊಂದಾಣಿಕೆ ಮುಂದಿನ ಲೋಕಸಭೆ ಚುನಾವಣೆಗೆ ಮಾತ್ರ ಸೀಮಿತವಾಗಿದ್ದು, ಕಾಂಗ್ರೆಸ್ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಜೆಡಿಎಸ್-ಬಿಜೆಪಿ ಮೈತ್ರಿ ಚುನಾವಣೆಯಲ್ಲೂ ಯಾವುದೇ ಸಾಧನೆ ಮಾಡಲು ಸಾಧ್ಯವಿಲ್ಲ ಎಂದು ಎಐಸಿಸಿ ಕರ್ನಾಟಕ ಉಸ್ತುವಾರಿ ಕಾರ್ಯದರ್ಶಿ …
Read More »ಚಿಕ್ಕೋಡಿ: ಹಿಮ್ಮುಖವಾಗಿ ಟ್ರ್ಯಾಕ್ಟರ್ ಚಲಾಯಿಸಿ ವಿಶಿಷ್ಟ ರೀತಿಯಲ್ಲಿ ಹರಕೆ ತೀರಿಸಿದ ಭಕ್ತ
ಚಿಕ್ಕೋಡಿ(ಬೆಳಗಾವಿ): ದೇವರಿಗೆ ಹರಕೆ ತೀರಿಸುವುದು ಎಂದರೆ ಉರುಳು ಸೇವೆ ಮಾಡುವುದು, ಪಾದಯಾತ್ರೆ ಮಾಡುವುದು, ಉಪವಾಸ, ಬರಿಗಾಲಲ್ಲಿ ಬೆಟ್ಟ ಹತ್ತುವುದನ್ನು ನೋಡಿದ್ದೇವೆ. ಆದ್ರೆ ಇಲ್ಲೋರ್ವ ಭಕ್ತ ತನ್ನ ಹರಕೆಯನ್ನು ವಿಶಿಷ್ಟವಾಗಿ ತೀರಿಸುವ ಮೂಲಕ ಗಮನ ಸೆಳೆದಿದ್ದಾನೆ. ಈ ಯುವಕ ಬರೋಬ್ಬರಿ 48 ಕಿ.ಮೀ ದೂರ ಟ್ರ್ಯಾಕ್ಟರ್ಗೆ ಟ್ರಾಲಿ ಜೋಡಿಸಿಕೊಂಡು ರಿವರ್ಸ್ ಡ್ರೈವ್ ಮಾಡಿಕೊಂಡು ಹೋಗಿ ಹರಕೆ ತೀರಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಶಿರಹಟ್ಟಿ ಗ್ರಾಮದ ನಿವಾಸಿ 25 ವರ್ಷದ ಮಹೇಶ ಅಥಣಿ …
Read More »ಮದ್ಯದ ಅಂಗಡಿಗಳನ್ನು ತೆರೆಯಲು ಪರವಾನಗಿ ನೀಡುವುದನ್ನು ವಿರೋಧಿಸಿ ಎಐಎಂಎಸ್‌ಎಸ್ ಪ್ರತಿಭಟನೆ
ಬೆಂಗಳೂರು : ರಾಜ್ಯದಲ್ಲಿ ಹೊಸದಾಗಿ 1000ಕ್ಕೂ ಹೆಚ್ಚು ಮದ್ಯದ ಅಂಗಡಿಗಳಿಗೆ ಪರವಾನಗಿ ನೀಡಲು ಅಬಕಾರಿ ಇಲಾಖೆ ಸಲ್ಲಿಸಿರುವ ಪ್ರಸ್ತಾವನೆಯನ್ನು ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಂಎಸ್‌ಎಸ್)ಯು ಖಂಡಿಸಿದ್ದು, ಬೆಂಗಳೂರು ಜಿಲ್ಲಾ ಸಮಿತಿಯಿಂದ ಬುಧವಾರ ನಗರದ ಫ್ರೀಡಂಪಾರ್ಕನಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಐಎಂಎಸ್‌ಎಸ್ ಜಿಲ್ಲಾ ಕಾರ್ಯದರ್ಶಿ ಎ ಶಾಂತ ಅವರು, ಈಗಾಗಲೇ ಮದ್ಯಪಾನದಂತಹ ದುಶ್ಚಟದಿಂದಾಗಿ ಲಕ್ಷಾಂತರ ಕುಟುಂಬಗಳು ಬೀದಿಗೆ ಬಿದ್ದಿವೆ. ಇಂತಹ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಗಳು ಹಾಗೂ …
Read More »ಕಾವೇರಿ ನೀರು ವಿಚಾರವಾಗಿ ಕಮಲ-ದಳ ಜಂಟಿ ಹೋರಾಟ; ಸರ್ಕಾರಕ್ಕೆ ಬಿಎಸ್ವೈ, ಹೆಚ್ಡಿಕೆ ಎಚ್ಚರಿಕೆ ಸಂದೇಶ
ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ವಿಚಾರವಾಗಿ ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಜಂಟಿ ಪ್ರತಿಭಟನೆ ನಡೆಸಿದರು. ಪ್ರತಿಪಕ್ಷ ನಾಯಕರು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಡಿಎಂಕೆ ಏಜೆಂಟ್ ಎಂದು ವಾಗ್ದಾಳಿ ನಡೆಸಿದರು. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಬಳಿಕ ಇದು ಮೊದಲ ಜಂಟಿ ಹೋರಾಟವಾಗಿದ್ದು, ಧರಣಿಯಲ್ಲಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ, ಹೆಚ್ …
Read More »ಇನ್ಸ್ಟಾಗ್ರಾಮ್ನಲ್ಲಿ ಚಾಟಿಂಗ್ ಮಾಡುತ್ತಿದ್ದಾಗ ವಾಗ್ವಾದ ಬಾಲಕನ ಜೀವ ತೆಗೆಯುವ ಮಟ್ಟಕ್ಕೂ ಹೋಗಿರುವ ಘಟನೆ ಕಿತ್ತೂರು ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ.
ಬೆಳಗಾವಿ: ಇನ್ಸ್ಟಾಗ್ರಾಮ್ನಲ್ಲಿ ಚಾಟಿಂಗ್ ಮಾಡುತ್ತಿದ್ದಾಗ ಒಂದೇ ಊರಿನ ಬಾಲಕರ ನಡುವೆ ವಾಗ್ವಾದ ನಡೆದಿದೆ. ಈ ವಾಗ್ವಾದ ಓರ್ವ ಬಾಲಕನ ಜೀವ ತೆಗೆಯುವ ಮಟ್ಟಕ್ಕೂ ಹೋಗಿರುವ ಘಟನೆ ಕಿತ್ತೂರು ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ. ಪ್ರಜ್ವಲ್ ಸುಂಕದ(16) ಮೃತ ಬಾಲಕ. ಮಲ್ಲಪ್ಪ ಹಾಗೂ ಮಲ್ಲವ್ವ ದಂಪತಿಯ ಎರಡನೇ ಮಗನಾದ ಪ್ರಜ್ವಲ್, ಈಗತಾನೇ ಕಾಲೇಜು ಮೆಟ್ಟಿಲು ಹತ್ತಿದ್ದ. ಇತ್ತೀಚೆಗೆ ತಮ್ಮದೇ ಊರಿನ ಗೆಳೆಯರ ಜೊತೆಗೆ ಇನ್ಸ್ಟಾಗ್ರಾಮ್ನಲ್ಲಿ ಜಗಳವಾಗಿತ್ತು. ಇದು ಕೇವಲ ವಾಗ್ವಾದಕ್ಕೆ ಸಿಮೀತವಾಗದೇ ಆತನ …
Read More »ಬೆಳಗಾವಿಯಲ್ಲಿ ಅಕ್ಕಲಕೋಟ ಸ್ವಾಮಿ ಸಮರ್ಥ ಮಹಾರಾಜರ ಮಂದಿರದ ಪ್ರತಿರೂಪ ನಿರ್ಮಿಸಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ.
ಬೆಳಗಾವಿ: ಇಲ್ಲಿಯ ಸೋಮನಾಥ ನಗರದ ಜೈ ಕಿಸಾನ್ ಹೋಲ್ಸೇಲ್ ಬಾಜಿ ಮಾರ್ಕೆಟ್ ಸಾರ್ವಜನಿಕ ಗಣೇಶೋತ್ಸವ ಮಂಡಳಿಯು 35ನೇ ವರ್ಷದ ಗಣೇಶೋತ್ಸವ ನಿಮಿತ್ತ ಈ ಬಾರಿ ಮಹಾರಾಷ್ಟ್ರದ ಅಕ್ಕಲಕೋಟ ಸ್ವಾಮಿ ಸಮರ್ಥ ಮಹಾರಾಜರ ಮಂದಿರದ ಪ್ರತಿರೂಪವನ್ನು ನಿರ್ಮಿಸಿ ಗಣೇಶನ ಮೂರ್ತಿ ಪ್ರತಿಷ್ಠಾಪಿಸಿದೆ. ಮಂದಿರದ ಒಳಗಡೆ ಸ್ವಾಮಿ ಸಮರ್ಥ ಮಹಾರಾಜರ ಮೂರ್ತಿ ಹಾಗೂ ಅವರ ಜೀವನದ ವಿವಿಧ ಕಾಲಘಟ್ಟದ ಭಾವಚಿತ್ರಗಳು ಕಣ್ಮನ ಸೆಳೆಯುತ್ತಿವೆ. ಇನ್ನು ರಾತ್ರಿ ಹೊತ್ತು ಇಡೀ ಮಂದಿರವು ವಿದ್ಯುತ್ ದೀಪಗಳಿಂದ …
Read More »ರೈಲಿನಲ್ಲಿ ದರೋಡೆ ನಡೆಸುತ್ತಿದ್ದ ಚಾಕೊಲೇಟ್ ಗ್ಯಾಂಗ್ ಬಂಧನ
ಬೆಳಗಾವಿ: ರೈಲಿನಲ್ಲಿ ಆಕ್ಟೀವ್ ಆಗಿದ್ದ ಚಾಕೊಲೇಟ್ ಗ್ಯಾಂಗ್ ಅನ್ನು ಹೆಡೆಮುರಿ ಕಟ್ಟುವಲ್ಲಿ ಗೋವಾದ ಆರ್ ಪಿ ಎಫ್ ಪೊಲೀಸರು ಯಶಸ್ವಿಯಾಗಿದ್ದಾರೆ. ದಿನನಿತ್ಯ ಗೋವಾ-ಬೆಳಗಾವಿ ಮಾರ್ಗವಾಗಿ ಸಂಚರಿಸುವ ರೈಲಿನಲ್ಲಿ ಪ್ರಯಾಣಿಕರ ಸೋಗಿನಲ್ಲಿ ಬಂದು ಪ್ರಯಾಣಿಕರ ಜೊತೆಗೆ ಸಲುಗೆ ಬೆಳಸಿ ದರೋಡೆ ಮಾಡ್ತಿದ್ದ ಗ್ಯಾಂಗ್ ಗೋವಾ ಮತ್ತು ಕರ್ನಾಟಕ ರೈಲ್ವೆ ಪೊಲೀಸರಿಗೆ ದೊಡ್ಡ ತಲೆ ನೋವಾಗಿದ್ದರು. ಕಳೆದ 20 ದಿನಗಳ ಹಿಂದೆ ಗೋವಾ-ಬೆಳಗಾವಿ ಮಾರ್ಗದಲ್ಲಿ ಮಧ್ಯಪ್ರದೇಶ ಮೂಲದ ಎಂಟು ಜನ ಪ್ರಯಾಣಿಕರಿಗೆ ತಮ್ಮ ಕೈಚಳಕ …
Read More »
Laxmi News 24×7