ಟೆಕ್ ದಿಗ್ಗಜ ‘ಗೂಗಲ್’ ಇಂದು ತನ್ನ 25ನೇ ವರ್ಷದ ಹುಟ್ಟುಹಬ್ಬವನ್ನು ವಿಶೇಷ ಡೂಡಲ್ ಮೂಲಕ ಆಚರಿಸಿಕೊಂಡಿದೆ. Google 25th Birthday: ಜಾಗತಿಕ ಟೆಕ್ ದೈತ್ಯ, ಎಲ್ಲರ ನೆಚ್ಚಿನ ಸರ್ಚ್ ಇಂಜಿನ್ ‘ಗೂಗಲ್’ಗೆ ಇಂದು 25 ವರ್ಷ ತುಂಬಿದ್ದು, ಡೂಡಲ್ ಮೂಲಕ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದೆ. “ವಾಕ್ ಡೌನ್ ಮೆಮೊರಿ ಲೇನ್” ಮೂಲಕ ಕಂಪನಿಯು ತನ್ನ ಜನ್ಮದಿನದಂದು ವಿಭಿನ್ನ ಡೂಡಲ್‌ಗಳನ್ನು ಪ್ರದರ್ಶಿಸಿತು. ಹೊಸ ಹೊಸ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸುವ ಮಾಡುವ ಮೂಲಕ ವಿಶ್ವದ …
Read More »ಕಾವೇರಿ ನೀರು ನಿಯಂತ್ರಣಾ ಸಮಿತಿ ಆದೇಶವನ್ನು ಸುಪ್ರೀಂ ಕೋರ್ಟ್‌ನಲ್ಲಿ ಚಾಲೆಂಜ್ ಮಾಡ್ತೀವಿ: ಸಿದ್ದರಾಮಯ್ಯ
ಚಾಮರಾಜನಗರ : ಕಾವೇರಿ ನದಿ ನೀರು ನಿಯಂತ್ರಣಾ ಸಮಿತಿಯು (CWRC) ತಮಿಳುನಾಡಿಗೆ 18 ದಿನಗಳಲ್ಲಿ 3 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ನೀಡಿರುವ ಆದೇಶವನ್ನು ಸುಪ್ರೀಂ ಕೋರ್ಟ್‌ನಲ್ಲಿ ಚಾಲೆಂಜ್ ಮಾಡುವುದಾಗಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಹನೂರು ತಾಲೂಕಿನ ಮಾದಪ್ಪನ ಸನ್ನಿಧಾನದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾವೇರಿ ನದಿ ನೀರು ಹಂಚಿಕೆ ವಿಚಾರವನ್ನು ಸುಪ್ರೀಂ ಕೋರ್ಟ್‌ನಲ್ಲಿ ಚಾಲೆಂಜ್ ಮಾಡುತ್ತೇವೆ. ಸದ್ಯ ನಮ್ಮ ಬಳಿ ನೀರು ಇಲ್ಲ, ಈಗಾಗಲೇ ಕಾನೂನು …
Read More »ಕ್ಷುಲ್ಲಕ ಕಾರಣಕ್ಕೆ ಇಬ್ಬರ ಭೀಕರ ಕೊಲೆ: ಬೆಳಗಾವಿ-ಹುಬ್ಬಳ್ಳಿಯಲ್ಲಿ ಪ್ರತ್ಯೇಕ ಘಟನೆ
ಬೆಳಗಾವಿ: ಕ್ಷುಲ್ಲಕ ಕಾರಣಕ್ಕೆ ದುಷ್ಕರ್ಮಿಗಳು ಗುಂಪು ತಲವಾರ್ನಿಂದ ಬಾಲಕನೋರ್ವನನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಚನ್ನಮ್ಮ ಕಿತ್ತೂರು ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ. ಮಲ್ಲಾಪೂರ ಗ್ರಾಮದ ಪ್ರಜ್ವಲ್ ಸುಂಕದ (16) ಮೃತ ಬಾಲಕ. ನಾಲ್ವರು ಬಾಲಕರು ಸೇರಿಕೊಂಡು ಮಂಗಳವಾರ ಪ್ರಜ್ವಲ್ ಮೇಲೆ ಮಚ್ಚಿನಿಂದ ಭೀಕರವಾಗಿ ಹಲ್ಲೆ ಮಾಡಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ತಡರಾತ್ರಿ ಮೃತಪಟ್ಟಿದ್ದಾನೆ. ಕೊಲೆಗೆ ನಿಖರ ಕಾರಣ …
Read More »ಬೆಳಗಾವಿ: ಹಣಕಾಸು ವಿಚಾರವಾಗಿ ಇಬ್ಬರು ಸೈನಿಕರ ಜಗಳ, ಗುಂಡಿನ ದಾಳಿಯಿಂದ ಓರ್ವನಿಗೆ ಗಾಯ
ಬೆಳಗಾವಿ: ಸೈನಿಕರಿಬ್ಬರ ನಡುವೆ ಹಣಕಾಸಿನ ವಿಚಾರಕ್ಕೆ ಗಲಾಟೆ ನಡೆದು ಓರ್ವ ಸೈನಿಕ ಮತ್ತೊಬ್ಬ ಸೈನಿಕನಿಗೆ ಬಂದೂಕಿನಿಂದ ಗುಂಡು ಹಾರಿಸಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಗೋಕಾಕ ತಾಲ್ಲೂಕಿನ ರಾಜನಕಟ್ಟೆ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ನಂಜುಂಡಿ ಲಕ್ಷ್ಮಣ ಬೂದಿಹಾಳ (32) ಗುಂಡು ಹಾರಿಸಿದ ಆರೋಪಿ. ಬಸಪ್ಪ ಮೈಲಪ್ಪ ಬಂಬರಗಾ (32) ಗಾಯಗೊಂಡಾತ. ಇಬ್ಬರೂ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದು, ಇಬ್ಬರೂ ಕೂಡ ರಾಜನಕಟ್ಟೆ ಗ್ರಾಮದವರೇ ಆಗಿದ್ದಾರೆ. ಹಣಕಾಸಿನ ವಿಚಾರಕ್ಕೆ ಇಬ್ಬರ ನಡುವೆ ವೈಷಮ್ಯ …
Read More »ಪೊಲೀಸ್ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಬೇಕು ಎಂದ C.M.: ಸಿದ್ದರಾಮಯ್ಯ
ಮೈಸೂರು: ಪೊಲೀಸ್ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಪೊಲೀಸ್ ಕವಾಯತು ಮೈದಾನದಲ್ಲಿ ಹಮ್ಮಿಕೊಂಡಿದ್ದ 37ನೇ ತಂಡದ ಪತ್ರಾಂಕಿತ ಪ್ರಶಿಕ್ಷಣಾರ್ಥಿಗಳ ನಿರ್ಗಮಿತ ಪಥ ಸಂಚಲನ ಕಾರ್ಯಕ್ರಮದಲ್ಲಿ ಪ್ರಶಿಕ್ಷಣಾರ್ಥಿಗಳಿಂದ ಗೌರವ ವಂದನೆ ಸ್ವೀಕರಿಸಿ ಮಾತನಾಡಿದ ಅವರು, ಕರ್ನಾಟಕ ಪೊಲೀಸ್ ಅಕಾಡೆಮಿ ಪ್ರತಿಷ್ಠಿತ ತರಬೇತಿ ನೀಡುವ ಅಕಾಡೆಮಿಯಾಗಿದೆ. ತರಬೇತಿ ಸಂದರ್ಭದಲ್ಲಿ ದೈಹಿಕವಾಗಿ ಸದೃಡವಾಗುವ ಜೊತೆಗೆ ಸಾಮಾಜಿಕ ಜವಾಬ್ದಾರಿಯನ್ನು ತಿಳಿಸಲಾಗುತ್ತದೆ. ತರಬೇತಿಯ ನಂತರ ನೀವು ಸಮಾಜ …
Read More »ಪ್ರಥಮ ಬಾರಿಗೆ 16 ಕೋಟಿ ನಿವ್ವಳ ಲಾಭ ಗಳಿಸಿದ ಓಯೋ
ನವದೆಹಲಿ: ಜಾಗತಿಕ ಟ್ರಾವೆಲ್ ಟೆಕ್ ಬ್ರಾಂಡ್ ಓಯೋ ಇದೇ ಮೊದಲ ಬಾರಿಗೆ ಲಾಭ ಗಳಿಸಿರುವುದಾಗಿ ವರದಿ ಮಾಡಿದೆ. 2024ರ ಹಣಕಾಸು ವರ್ಷದ ಎರಡನೇ ತ್ರೈಮಾಸಿಕದಲ್ಲಿ ಮೊದಲ ಬಾರಿಗೆ ತೆರಿಗೆ ನಂತರ 16 ಕೋಟಿ ರೂ. ಲಾಭ ಮಾಡಿರುವುದಾಗಿ ಓಯೋ ಹೇಳಿದೆ. ಕಂಪನಿಯ ಉನ್ನತ ಆಡಳಿತ ಮಂಡಳಿಗೆ ಬರೆದ ಪತ್ರದಲ್ಲಿ, ಓಯೋ ಸಂಸ್ಥಾಪಕ ರಿತೇಶ್ ಅಗರ್ವಾಲ್ ಅವರು 2024 ರ ಎರಡನೇ ತ್ರೈಮಾಸಿಕವು ಕಂಪನಿಯ ಮೊದಲ ಲಾಭದಾಯಕ ತ್ರೈಮಾಸಿಕವಾಗಿದ್ದು, ತೆರಿಗೆ ನಂತರದ ಲಾಭವು …
Read More »ಗೃಹಲಕ್ಷ್ಮೀ, ಗೃಹಜ್ಯೋತಿ ಜಾಹೀರಾತುಗಳಲ್ಲಿ ಸಿಎಂ, ಡಿಸಿಎಂ ಫೋಟೋ ಬಳಕೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಾದ ಗೃಹಲಕ್ಷ್ಮಿ ಮತ್ತು ಗೃಹಜೋತಿ ಯೋಜನೆಗಳ ಜಾಹೀರಾತು ಮತ್ತು ಒಪ್ಪಿಗೆ ಆದೇಶಗಳಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಮಂತ್ರಿಗಳ ಭಾವಚಿತ್ರ, ಹೆಸರು ಬಳಕೆಗೆ ನಿರ್ಬಂಧ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿ ಆದೇಶಿಸಿದೆ. ಬೆಳಗಾವಿಯ ಸಾಮಾಜಿಕ ಕಾರ್ಯಕರ್ತ ಭೀಮಪ್ಪ ಗಡಾದ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ …
Read More »ಕಾವೇರಿ ವಿಚಾರ ಬಂದ್ರೆ ನಮ್ಮ ರಾಜ್ಯದಲ್ಲಿ ಒಗ್ಗಟ್ಟಿಲ್ಲ – ಹೆಚ್ ಡಿ ದೇವೇಗೌಡ ಬೇಸರ
ಹಾಸನ: ಕಾವೇರಿ ನೀರನ್ನು ತಮಿಳುನಾಡಿಗೆ ಬಿಡದಂತೆ ರಾಜ್ಯದಲ್ಲಿ ಇಂದು ಬಂದ್ಗೆ ಕರೆ ನೀಡಿದ್ದರೂ, ನಮ್ಮಲ್ಲಿ ಒಗ್ಗಟ್ಟಿಲ್ಲ. ಇದು ನಮ್ಮ ರಾಜ್ಯದಲ್ಲಿರುವ ಸ್ಥಿತಿ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಬೇಸರ ವ್ಯಕ್ತಪಡಿಸಿದರು. ಕಾವೇರಿ ನೀರು ಬಿಡದಂತೆ ಬೆಂಗಳೂರು ಬಂದ್ಗೆ ಸಂಬಂಧಿಸಿದಂತೆ ನಗರದ ಸಂಸದರ ನಿವಾಸದಲ್ಲಿ ಕರ್ನಾಟಕ ಬಂದ್ ವಿಚಾರವಾಗಿ ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಮಾತನಾಡಿದ ಅವರು, ಕೆಲವರು ಇಂದು ಬಂದ್ ಮಾಡಿದ್ದಾರೆ. ಇನ್ನೂ ಕೆಲವರು ಶುಕ್ರವಾರ ಮಾಡ್ತಾರಂತೆ ಮತ್ತೆ ಕೆಲವರು …
Read More »ಬೆಂಗಳೂರು ಬಂದ್ : ವ್ಯಾಪಾರ ವಹಿವಾಟು ಸ್ಥಗಿತದಿಂದ ಅಂದಾಜು 200 ಕೋಟಿ ನಷ್ಟ: ಎಫ್‌ಕೆಸಿಸಿಐ
ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ನಡೆದ ಬೆಂಗಳೂರು ಬಂದ್ಗೆ ಭಾರಿ ಬೆಂಬಲ ವ್ಯಕ್ತವಾಗಿದೆ. ಆದರೆ, ಬೆಂಗಳೂರು ಬಂದ್ನಿಂದ ಸರ್ಕಾರದ ಬೊಕ್ಕಸಕ್ಕೆ ನೂರಾರು ಕೋಟಿ ರೂ. ನಷ್ಟ ಸಂಭವಿಸಿದೆ. ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ರೈತ ಸಂಘಟನೆಗಳು ಸೇರಿದಂತೆ ವಿವಿಧ ಸಂಘ, ಸಂಸ್ಥೆಗಳು ಬೆಂಗಳೂರು ಬಂದ್ಗೆ ಕರೆ ನೀಡಿದ್ದವು. ಬಹುತೇಕ ಕಡೆ ಅಂಗಡಿ ಮುಂಗಟ್ಟು, ವ್ಯಾಪಾರ ವಹಿವಾಟು, ಹೋಟೆಲ್ಗಳನ್ನು ಮುಚ್ಚಿ ಪ್ರತಿಭಟನೆಯಲ್ಲಿ ಭಾಗಿಯಾದರು. ಬಂದ್ ಹಿನ್ನೆಲೆ ನಗರದಲ್ಲಿ …
Read More »ಜನತಾ ದರ್ಶನಕ್ಕೆ ಜನಸಾಗರ: ಸಮಸ್ಯೆ ಆಲಿಸಿದ ಅಧಿಕಾರಿಗಳು, ಶಾಸಕರು
ಬೆಳಗಾವಿ : ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರ ಅನುಪಸ್ಥಿತಿಯಲ್ಲಿ ನಡೆದ ಜನತಾ ದರ್ಶನದಲ್ಲಿ ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ್ದ ಮಹಿಳೆಯರು, ವೃದ್ಧರು, ಅಂಗವಿಕಲರು ಸೇರಿ ನೂರಾರು ಜನರು ತಮ್ಮ ಸಮಸ್ಯೆಗಳನ್ನು ಅಧಿಕಾರಿಗಳ ಬಳಿ ತೋಡಿಕೊಂಡರು. ಜಿಲ್ಲಾಧಿಕಾರಿ, ಜಿಲ್ಲೆಯ ಶಾಸಕರು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆ ಆಲಿಸಿದರು. ವಿಠಲ ದೇಸಾಯಿ ಸಾರ್ವಜನಿಕರಿಂದ ಅರ್ಜಿ ಸ್ವೀಕರಿಸಲು ಜಿಲ್ಲಾಡಳಿತದಿಂದ 8 ಕೇಂದ್ರಗಳನ್ನು ತೆರೆಯಲಾಗಿತ್ತು. ಅರ್ಜಿ ಸಲ್ಲಿಸಿದ ಬಳಿಕ ವೇದಿಕೆಗೆ ಆಗಮಿಸಿದ ಜನರು, …
Read More »
Laxmi News 24×7