ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಕೈ ಹೊಸೂರ್ ಗ್ರಾಮದಲ್ಲಿ ಶ್ರೀ ಹನುಮಾನ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಈ ಸಂದರ್ಭದಲ್ಲಿ ಸಿದ್ದಲಿಂಗಪ್ಪ ಬಡಕೂರಿ, ಸಿಂಗಪ್ಪ ಮರಕಟ್ಟಿ, …
Read More »ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್ಗೆ ಯಾವುದೇ ತೊಂದರೆ ಇಲ್ಲ: ಸಚಿವ ಪರಮೇಶ್ವರ್
ಬೆಂಗಳೂರು: ಬಿಜೆಪಿ ಜೊತೆಗಿನ ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್ಗೆ ಯಾವುದೇ ರೀತಿಯ ತೊಂದರೆ ಆಗುವುದಿಲ್ಲ. ನಾವು ಈ ಬಾರಿ ಲೋಕಸಭೆ ಚುನಾವಣೆಯಲ್ಲಿ 20ಕ್ಕಿಂತ ಹೆಚ್ಚು ಸ್ಥಾನ ಗೆಲ್ಲುವ ವಿಶ್ವಾಸ ಇದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ನಾವು ಕಾಂಗ್ರೆಸ್ ಶೇ.45ರಷ್ಟು ಮತ ಪ್ರಮಾಣ ಗಳಿಸಿದ್ದೆವು. ಅದನ್ನು ಲೋಕಸಭೆ ಚುನಾವಣೆಯಲ್ಲೂ ಉಳಿಸುವ ಸಾಧ್ಯತೆ ಇದೆ. ಅದರಿಂದ ನಮಗೇನು ತೊಂದರೆ ಆಗಲ್ಲ. ಅವರು ಮೈತ್ರಿ ಮಾಡಿಕೊಳ್ಳಲಿ. …
Read More »ಉತ್ತರಕನ್ನಡ ಜಿಲ್ಲೆಯ 34 ಜನರಲ್ಲಿ ಇಲಿಜ್ವರ ಪತ್ತೆ
ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಜೊತೆಗೆ ಇಲಿ ಜ್ವರವೂ ಜನರಲ್ಲಿ ತೀವ್ರಗತಿಯಲ್ಲಿ ಹರಡುತ್ತಿದೆ. ಕೆಲವೇ ದಿನಗಳಲ್ಲಿ ಸುಮಾರು 34 ಜನರಲ್ಲಿ ಕಾಣಿಸಿಕೊಂಡಿರುವ ಇಲಿ ಜ್ವರ ಜಿಲ್ಲೆಯಲ್ಲಿ ಆತಂಕ ಸೃಷ್ಟಿಸಿದೆ. ಇಲಿ ಜ್ವರದ ಬಗ್ಗೆ ಸಕಾಲದಲ್ಲಿ ಆರೋಗ್ಯ ಇಲಾಖೆ ಜಾಗೃತಿ ಮೂಡಿಸದೆ ಇದ್ದಿದ್ದರಿಂದ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಾಗಿದೆ ಎಂದು ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಕುರಿತು ಒಂದು ವರದಿ ಇಲ್ಲಿದೆ. ಉತ್ತರಕನ್ನಡ ಜಿಲ್ಲಾದ್ಯಂತ ಕಳೆದ ಎರಡು ತಿಂಗಳಿನಿಂದ ಜ್ವರದ ಪ್ರಕರಣಗಳು …
Read More »ಜಾಮೀನಿನ ಮೇಲೆ ಹೊರಬಂದು ಮತ್ತೆ ಡ್ರಗ್ಸ್ ಮಾರಾಟ: ಮಂಗಳೂರಲ್ಲಿ ಇಬ್ಬರು ಅರೆಸ್ಟ್
ಮಂಗಳೂರು: ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡಿ ಬಂಧಿತನಾಗಿದ್ದ ಆರೋಪಿ ನ್ಯಾಯಾಲಯದಿಂದ ಜಾಮೀನು ಪಡೆದ 15 ದಿನದಲ್ಲಿ ಮತ್ತೆ ಎಂಡಿಎಂಎ ಮಾರಾಟ ಮಾಡಿ, ಮಂಗಳೂರಿನ ಸಿಸಿಬಿ ಪೊಲೀಸರಿಂದ ಬಂಧಿತನಾಗಿದ್ದಾನೆ. ಉಪ್ಪಿನಂಗಡಿಯ ಅಬ್ದುಲ್ ಅಜೀಜ್ ಯಾನೆ ಅಜೀಜ್ ಎಂಬಾತನ ವಿರುದ್ಧ ಈ ಹಿಂದೆ ಉಪ್ಪಿನಂಗಡಿ, ವಿಟ್ಲ ಹಾಗೂ ಉರ್ವಾ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಮಾರಾಟಕ್ಕೆ ಸಂಬಂಧಿಸಿದ ಮೂರು ಪ್ರಕರಣ ದಾಖಲಾಗಿತ್ತು. ಇತ್ತೀಚೆಗೆ ಸುಮಾರು 15 ದಿನಗಳ ಹಿಂದೆ ನ್ಯಾಯಾಲಯದಿಂದ ಜಾಮೀನು …
Read More »ಮಹಿಳಾ ಮೀಸಲಾತಿ.. ದಿಕ್ಕು ತಪ್ಪಿಸುವ ತಂತ್ರ ಅನುಸರಿಸಿದ ಸರ್ಕಾರ: ರಾಹುಲ್ ಗಾಂಧಿ
ನವದೆಹಲಿ: ಮಹಿಳಾ ಮೀಸಲಾತಿ ಮಸೂದೆಯನ್ನು ತಕ್ಷಣವೇ ಜಾರಿಗೆ ತರಬೇಕು ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಬಲವಾಗಿ ಪ್ರತಿಪಾದಿಸಿದರು. ಜನಗಣತಿ ಮತ್ತು ಸೀಮಾರೇಖೆಯ ಷರತ್ತುಗಳನ್ನು ಸೇರಿಸುವುದನ್ನು ಟೀಕಿಸಿದರು. ಈ ಷರತ್ತುಗಳು ಮಸೂದೆಯ ಅನುಷ್ಠಾನವನ್ನು ಅನಗತ್ಯವಾಗಿ ವಿಳಂಬಗೊಳಿಸುತ್ತವೆ ಎಂದು ಕಿಡಿಕಾರಿದರು. ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ”ಸರ್ಕಾರ ಜಾತಿವಾರು ಜನಗಣತಿ ನಡೆಸಬೇಕು. ಹಿಂದಿನ ಯುಪಿಎ ಸರ್ಕಾರದ ಅವಧಿಯಲ್ಲಿ ನಡೆದ ಜಾತಿ ಗಣತಿ ಮಾಹಿತಿ ಬಿಡುಗಡೆ ಮಾಡಬೇಕು” ಎಂದು ಒತ್ತಾಯಿಸಿದರು. ”ಮಹಿಳೆಯರಿಗೆ ಇಂದೇ …
Read More »ಪ್ರಮೋದ್ ಮುತಾಲಿಕ್ ವಿರುದ್ಧ ದೂರು ನೀಡಿದ ಮುಸ್ಲಿಂ ಮುಖಂಡರು
ಹುಬ್ಬಳ್ಳಿ: ಅನ್ಯ ಧರ್ಮಗಳ ಭಾವನೆಗಳಿಗೆ ಧಕ್ಕೆ ಉಂಟಾಗುವಂತೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆಂಬ ಆರೋಪದ ಮೇಲೆ ಶ್ರೀರಾಮಸೇನೆ ಸಂಘಟನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹಾಗೂ ಅವರ ಕಾರ್ಯಕರ್ತರನ್ನು ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ ಮುಸ್ಲಿಂ ನಾಯಕರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಇಂದು ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ್ ಅವರಿಗೆ ದೂರು ನೀಡಿದರು. ಹುಬ್ಬಳ್ಳಿ ರಾಣಿ ಚೆನ್ನಮ್ಮ ಈದ್ಗಾ ಮೈದಾನದ ಗಣೇಶ ವಿಸರ್ಜನೆ ಕಾರ್ಯಕ್ರಮಕ್ಕೆ ಗುರುವಾರ ಭೇಟಿ ನೀಡಿದ್ದ ಪ್ರಮೋದ್ ಮುತಾಲಿಕ್, …
Read More »ಈಗ ಬಿಜೆಪಿಗೆ, ರಾಜ್ಯಕ್ಕೆ ಅನಂತಕುಮಾರ್ ಅಗತ್ಯವಿತ್ತು: ಬಸವರಾಜ ಬೊಮ್ಮಾಯಿ
ಬೆಂಗಳೂರು : ಕೇಂದ್ರ ಸರ್ಕಾರದ ಮಟ್ಟದಲ್ಲಿ ಕರ್ನಾಟಕದ ವಿಚಾರ ಬಂದಾಗ ಅನಂತಕುಮಾರ್ ಅವರು ಆಪದ್ಬಾಂಧವರಾಗಿದ್ದರು. ಈಗ ರಾಜ್ಯಕ್ಕೆ ಮತ್ತು ಬಿಜೆಪಿಗೆ ಅವರ ಅಗತ್ಯವಿತ್ತು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ. ಕೇಂದ್ರದ ಮಾಜಿ ಸಚಿವ ದಿ ಅನಂತಕುಮಾರ್ ಜನ್ಮದಿನದ ಅಂಗವಾಗಿ ಏರ್ಪಡಿಸಿದ್ದ ಅನಂತಕುಮಾರ್ 64 ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಅನಂತಕುಮಾರ್ ಅವರು ಅನಂತವಾದ ಬದುಕನ್ನು ಅಲ್ಪ ಸಮಯದಲ್ಲಿ ಇದ್ದು, ಯಶಸ್ಸು ಸಾಧನೆಗಳನ್ನು ಮಾಡಿ ಅತಿ ಚಿಕ್ಕ ವಯಸ್ಸಿನಲ್ಲಿ …
Read More »ಮುಕ್ತ ವಿವಿಯ ಪ್ರಶ್ನೆಪತ್ರಿಕೆ ಸೋರಿಕೆಯ ಪ್ರಕರಣ : ಇಬ್ಬರು ವಿದ್ಯಾರ್ಥಿಗಳ ಬಂಧನ
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಅಂತಿಮ ವರ್ಷದ ಬಿಕಾಂ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ವಿದ್ಯಾರ್ಥಿ ನೀಡಿದ ದೂರಿನ ಮೇಲೆ ಇಬ್ಬರು ವಿದ್ಯಾರ್ಥಿಗಳನ್ನು ಜಯಲಕ್ಷ್ಮಿಪುರಂ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ಈ ಪರೀಕ್ಷೆಯನ್ನು ಮರು ಪರೀಕ್ಷೆ ನಡೆಸಲು ಮುಕ್ತ ವಿವಿ ನಿರ್ಧರಿಸಿದೆ. ಬಿಕಾಂ ಅಂತಿಮ ವರ್ಷದ ಇಬ್ಬರು ವಿದ್ಯಾರ್ಥಿಗಳು ಬಂಧಿತರಾಗಿದ್ದು, ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ. ಸೆ. 4ರಿಂದ ಪದವಿ ವಿಭಾಗದ ಪರೀಕ್ಷೆಗಳು ಆರಂಭವಾಗಿವೆ. ಪ್ರಶ್ನೆಪತ್ರಿಕೆ ಸೋರಿಕೆ ಬಗ್ಗೆ …
Read More »ಎನ್ಡಿಎ ಮೈತ್ರಿಕೂಟ ಸೇರಿದ ಜೆಡಿಎಸ್
ನವದೆಹಲಿ: ದೆಹಲಿಯಲ್ಲಿ ಇಂದು (ಶುಕ್ರವಾರ) ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ. ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿ ಔಪಚಾರಿಕ ಮಾತುಕತೆ ನಡೆಸುವ ಮೂಲಕ ರಾಜ್ಯದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಯನ್ನು ಖಚಿತ ಪಡಿಸಿದ್ದಾರೆ. ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಗೋವಾ ಸಿಎಂ ಪ್ರಮೋದ್ ಸಾವಂತ್ ಹಾಗೂ ಜೆಡಿಎಸ್ ಯುವ …
Read More »ಕಾವೇರಿ ವಿವಾದ: ಕೇಂದ್ರ ಜಲಶಕ್ತಿ ಸಚಿವರನ್ನ ಭೇಟಿಯಾದ ಸಿದ್ದರಾಮಯ್ಯ
ಕಾವೇರಿ ನದಿ ನೀರಿನ ವಿಚಾರಕ್ಕೆ ತಮಿಳುನಾಡು ಪದೇ ಪದೇ ಕ್ಯಾತೆ ತೆಗೆಯುತ್ತಿರುವುದಕ್ಕೆ ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಕಾವೇರಿ ನೀರು ಹರಿಸುವ ಸಂಬಂಧ ಬಗೆಹರಿಸಲು ಸಿದ್ದರಾಮಯ್ಯ ನವದೆಹಲಿಯಲ್ಲಿ ಇಂದು ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿ ಕರ್ನಾಟಕದ ವಾಸ್ತವ ಪರಿಸ್ಥಿತಿಯನ್ನು ಗಮನಕ್ಕೆ ತಂದರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ …
Read More »
Laxmi News 24×7