Breaking News

ರಾಜ್ಯ

ಎನ್​ಡಿಎ ಮೈತ್ರಿಕೂಟ ಸೇರಿದ ಜೆಡಿಎಸ್​

ನವದೆಹಲಿ: ದೆಹಲಿಯಲ್ಲಿ ಇಂದು (ಶುಕ್ರವಾರ) ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್​ ನಾಯಕ ಹೆಚ್‌.ಡಿ. ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ನಾಯಕ ಹೆಚ್‌.ಡಿ. ಕುಮಾರಸ್ವಾಮಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿ ಔಪಚಾರಿಕ ಮಾತುಕತೆ ನಡೆಸುವ ಮೂಲಕ ರಾಜ್ಯದಲ್ಲಿ ಜೆಡಿಎಸ್​ ಹಾಗೂ ಬಿಜೆಪಿ ಮೈತ್ರಿಯನ್ನು ಖಚಿತ ಪಡಿಸಿದ್ದಾರೆ. ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಗೋವಾ ಸಿಎಂ ಪ್ರಮೋದ್ ಸಾವಂತ್ ಹಾಗೂ ಜೆಡಿಎಸ್​ ಯುವ …

Read More »

ಕಾವೇರಿ ವಿವಾದ: ಕೇಂದ್ರ ಜಲಶಕ್ತಿ ಸಚಿವರನ್ನ ಭೇಟಿಯಾದ ಸಿದ್ದರಾಮಯ್ಯ

ಕಾವೇರಿ ನದಿ ನೀರಿನ ವಿಚಾರಕ್ಕೆ ತಮಿಳುನಾಡು ಪದೇ ಪದೇ ಕ್ಯಾತೆ ತೆಗೆಯುತ್ತಿರುವುದಕ್ಕೆ ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಕಾವೇರಿ ನೀರು ಹರಿಸುವ ಸಂಬಂಧ ಬಗೆಹರಿಸಲು ಸಿದ್ದರಾಮಯ್ಯ ನವದೆಹಲಿಯಲ್ಲಿ ಇಂದು ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿ ಕರ್ನಾಟಕದ ವಾಸ್ತವ ಪರಿಸ್ಥಿತಿಯನ್ನು ಗಮನಕ್ಕೆ ತಂದರು   ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ …

Read More »

ಸಿಲಿಂಡರಗಳನ್ನು ತುಂಬಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿ

ಸಿಲಿಂಡರಗಳನ್ನು ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪುಣೆ-ಬೆಂಗಳೂರ ರಾಷ್ಟ್ರೀಯ ಹೆದ್ದಾರಿಯ ತಾವಂದಿ ಘಾಟನಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ.ತೀರ್ಥಸಿಂಗ್ (41) ಮೃತಪಟ್ಟ ಚಾಲಕ ಮೂಲತ ಪಂಜಾಬ ರಾಜ್ಯದವರು. ಲಾರಿಯಲ್ಲಿ ಖಾಲಿ ಸಿಲಿಂಡರಗಳನ್ನು ಇದ್ದ ಕಾರಣ ಯಾವುದೇ ಅಹಿತಕರ ಘಟನೆ ಸಂಭವಿಸಿಲ್ಲ.ಲಾರಿ ಪಲ್ಟಿಯಾದ ಪರಿಣಾಮ ರಸ್ತೆಯಲ್ಲಿ ಸಿಲಿಂಡರ್ ಗಳು ಚೆಲ್ಲಾಪಿಲ್ಲಿಗಳಾಗಿದವು.6 ಗಂಟೆಗಳ ಕಾಲ ಹೆದ್ದಾರಿಯಲ್ಲಿ ದ್ವಿಮುಖ ಸಂಚಾರವನ್ನು ಬಂದ್ …

Read More »

ಬೆಳಗಾವಿ ತಾಲೂಕು ಬರಪೀಡಿತ ಪ್ರದೇಶ ಎಂದು ಘೋಷಿಸಲು ೭ ದಿನ ಅವಧಿ ಕೊಟ್ಟ ರೈತ ಸಂಘ

ಬೆಳಗಾವಿ ತಾಲೂಕು ಬರಪೀಡಿತ ಪ್ರದೇಶ ಎಂದು ಘೋಷಿಸದಿದ್ದರೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಅಹೋ ರಾತ್ರಿ ಧರಣಿ ಮಾಡುತ್ತೇವೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಬೆಳಗಾವಿ ಜಿಲ್ಲಾ ಉಪಾಧ್ಯಕ್ಷ ಕಲಗೌಡಾ ಪಾಟೀಲ ಆಗ್ರಹಿಸಿದ್ದಾರೆ .   ಬೆಳಗಾವಿ ತಾಲೂಕಿನ ಅಗಸಗಿ ಮನ್ನಿಕೇರಿ ,ಕಡೋಲಿ ,ಕೆಟನೂರು ಹಂದಿಗನೂರು ,ಶಿವಾಪುರ ಹಳ್ಳಿಗಳ ರೈತರು ಇಂದು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಬೆಳಗಾವಿ ತಾಲೂಕು ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡಿ ಎಂದು ಮನವಿ …

Read More »

ಜೋಕುಮಾರಸ್ವಾಮಿ ಮಳೆ ತರುವ ಸ್ವಾಮಿ

ವಿಜಯಪುರ…ಉತ್ತರ ಕರ್ನಾಟಕದಲ್ಲಿ ಗಣೇಶ ಚತುರ್ಥಿಯೊಂದಿಗೆ ಹಲವು ಆಚರಣೆಗಳು ಗರಿಗೆದರುತ್ತವೆ. ಅಂತಹ ಆಚರಣೆಗಳಲ್ಲಿ ಒಂದು ಜೋಕುಮಾರಸ್ವಾಮಿಯ ಪೂಜೆ. ಗಣೇಶ ಹೋದ ನಂತರ ಹುಟ್ಟುವ ಜೋಕುಮಾರ ಸ್ವಾಮಿ ಮಳೆ ಬೆಳೆ ತರುವುದರ ಜೊತೆಗೆ ಕೆಟ್ಟದ್ದನ್ನು ಹೋಗಲಾಡಿಸಿ ಸುಖ ಸಮೃದ್ಧಿಯನ್ನು ನೀಡುತ್ತಾನೆ ಎಂದೇ ಜನಪದರ ನಂಬಿಕೆ. ಹುಟ್ಟಿದ ಏಳು ದಿನಕ್ಕೆ ಪಟ್ಟಣವ ತಿರುಗ್ಯಾನೆ ದಿಟ ಕಾಣೆ ದೇವಿ ನಿನ್ನಮಾಗ ಒಕ್ಕಲಾರ ಕೇರಿಗೆ ಹೋಗುತ್ತಾನೆ, ನಮ್ಮ ಕುವರ ಒಕ್ಕುಲಾರ ಹೂವ ಮುಡಿದಾನೆ ಒಕ್ಕುಲಾರ ಹುಡುಗಿ ನನಗಿಷ್ಟ …

Read More »

ತಮಿಳುನಾಡಿಗೆ ಕಾವೇರಿ ನೀರು ಬಿಡದಂತೆ ಒತ್ತಾಯಿಸಿ ಶುಕ್ರವಾರ ಕರುನಾಡು ರಕ್ಷಣಾ ವೇದಿಕೆ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿ ಗಳಿಗೆ ಮನವಿ

ತಮಿಳುನಾಡಿಗೆ ಕಾವೇರಿ ನೀರು ಬಿಡದಂತೆ ಒತ್ತಾಯಿಸಿ ಶುಕ್ರವಾರ ಕರುನಾಡು ರಕ್ಷಣಾ ವೇದಿಕೆ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿ ಗಳಿಗೆ ಮನವಿ ಸಲ್ಲಿಸಲಾಯಿತು ಕರುನಾಡು ರಕ್ಷಣಾ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ಬಾಬು ಕೊಡಗನ್ನವರ ಮಾತುನಾಡಿ, ರಾಜ್ಯದಲ್ಲಿ ಈ ವರ್ಷ ಎಂದೂ ಕಾಣದಷ್ಟು ಬರಗಾಲದ ಸ್ಥಿತಿ ನಿರ್ಮಾಣವಾಗಿದೆ. ವಾಡಿಕೆಗಿಂತಲೂ ಕಡಿಮೆ ಮಳೆಯಾಗಿದೆ. ವಿಶೇಷವಾಗಿ ಕಾವೇರಿ ಕಣಿವೆ ಭಾಗದಲ್ಲಿ ತೀವ್ರ ಸ್ವರೂಪದ ಬರದ ಸ್ಥಿತಿ ನಿರ್ಮಾಣವಾಗಿದೆ. ಪರಿಸ್ಥಿತಿ ಹೀಗಿರುವಾಗ ತಮಿಳುನಾಡಿಗೆ ನೀರು ಬಿಡುವುದಾದರೂ ಹೇಗೆ …

Read More »

ನಾನು 1966ರಲ್ಲಿ ಪ್ರಯತ್ನಿಸಿ ವಿಫಲನಾಗಿದ್ದೆ’: ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರಕ್ಕೆ ದೇವೇಗೌಡ ಮೆಚ್ಚುಗೆ

ನವದೆಹಲಿ/ಬೆಂಗಳೂರು: ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರವನ್ನು ಸ್ವಾಗತಿಸಿರುವ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರು, “ಇದು ದೇಶದ ಮಹಿಳೆಯ ಹಿತದೃಷ್ಟಿಯಿಂದ ಕೈಗೊಂಡ ಸಮಯೋಚಿತ ನಿರ್ಧಾರ” ಎಂದರು. ಶುಕ್ರವಾರ ಮಹಿಳಾ ಮೀಸಲಾತಿ ಮಸೂದೆ ರಾಜ್ಯಸಭೆಯಲ್ಲಿ ಅಂಗೀಕಾರಗೊಂಡ ಕೆಲವೇ ಹೊತ್ತಲ್ಲಿ ನವದೆಹಲಿಯ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. “ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗ ಮೀಸಲಾತಿ ದೊರಕಿದ್ದು, ಇದು ಅವರ ಸಮಯ” ಎಂದು ಬಣ್ಣಿಸಿದರು. “ನಾನು ಪ್ರಧಾನಿಯಾಗಿದ್ದಾಗ 1966ರಲ್ಲಿ ಈ ಮಸೂದೆಯನ್ನು …

Read More »

ಮೂರು ಡಿಸಿಎಂ ಹುದ್ದೆ ವಿಚಾರ.. ಸಚಿವ ರಾಜಣ್ಣ ಹೇಳುವುದರಲ್ಲಿ ತಪ್ಪಿಲ್ಲ: ಸಚಿವ ಜಿ ಪರಮೇಶ್ವರ್

ಬೆಂಗಳೂರು: ಮೂವರು ಡಿಸಿಎಂ ಹುದ್ದೆ ಸೃಷ್ಟಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಕೆ ಎನ್​ ರಾಜಣ್ಣ ತಮ್ಮ ಅಭಿಪ್ರಾಯ ಹೇಳೋದರಲ್ಲಿ ತಪ್ಪಿಲ್ಲ ಎ‌ಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಸಮರ್ಥಿಸಿಕೊಂಡಿದ್ದಾರೆ. ಸದಾಶಿವನಗರ ನಿವಾಸದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆ ದೃಷ್ಟಿಯಿಂದ ಅವರು ಹೇಳಿದ್ದಾರೆ. ಪಕ್ಷ ಇನ್ನಷ್ಟು ಸದೃಢವಾಗಬೇಕು, ಆ‌ ನಿರ್ದಿಷ್ಟ ಸಮುದಾಯಗಳನ್ನು ಸೆಳೆಯಬೇಕು ಎಂಬ ದೃಷ್ಟಿಯಿಂದ ಹೇಳಿದ್ದಾರೆ ಎಂದು ತಿಳಿಸಿದರು. ರಾಜಣ್ಣ ಅವರು ತಪ್ಪು ಮಾಡಿದರು, ತಪ್ಪು ಹೇಳಿದರು …

Read More »

ವೈದ್ಯಕೀಯ ವಿದ್ಯಾರ್ಥಿಗಳಿಗೆ ಗುಡ್​ನ್ಯೂಸ್.. ನೀಟ್​ ಪರೀಕ್ಷೆ ಕಟ್​ ಆಫ್​ ಅಂಕ ರದ್ದು

ಹೈದರಾಬಾದ್: ಮಹತ್ವದ ಬೆಳವಣಿಗೆಯೊಂದರಲ್ಲಿ ವೈದ್ಯಕೀಯ ಕೌನ್ಸೆಲಿಂಗ್ ಸಮಿತಿ (ಎಂಸಿಸಿ) ಮೂರನೇ ಸುತ್ತಿನ ನೀಟ್ ಪಿಜಿ ವೈದ್ಯಕೀಯ ಕೌನ್ಸೆಲಿಂಗ್‌ಗೆ ಇದ್ದ ಅರ್ಹತಾ ಅಂಕಗಳು (ಕಟ್​​ ಆಫ್​) ರದ್ದುಗೊಳಿಸುವುದಾಗಿ ಘೋಷಿಸಿದೆ. ಇದರಿಂದಾಗಿ ಪ್ರಸಕ್ತ ವರ್ಷ ನೀಟ್‌ ಪರೀಕ್ಷೆ ಬರೆಯುವ ಅಭ್ಯರ್ಥಿಗಳೆಲ್ಲರೂ ಕೌನ್ಸೆಲಿಂಗ್‌ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಅರ್ಹತೆ ಪಡೆಯಲಿದ್ದಾರೆ. ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಈ ಕ್ರಮಕ್ಕೆ ಅನುಮೋದನೆ ನೀಡಿದ್ದು, ಕಟ್​ ಆಫ್​ ಅಂಕಗಳನ್ನು ಶೂನ್ಯಕ್ಕೆ ಇಳಿಸಿದ್ದರಿಂದ ಸ್ನಾತಕೋತ್ತರ ವೈದ್ಯಕೀಯ ಮತ್ತು ದಂತ …

Read More »

ತಡರಾತ್ರಿ ಪಾರ್ಟಿ ವೇಳೆ ಗುಂಡೇಟಿಗೆ ವಿದ್ಯಾರ್ಥಿನಿ ಬಲಿ: ಸ್ನೇಹಿತನ ಬಂಧನ

ಲಖನೌ (ಉತ್ತರ ಪ್ರದೇಶ): ಉತ್ತರ ಪ್ರದೇಶ ರಾಜಧಾನಿ ಲಖನೌದಲ್ಲಿ ತಡರಾತ್ರಿ ಪಾರ್ಟಿಯ ಸಂದರ್ಭದಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಗುಂಡೇಟಿಗೆ ಬಲಿಯಾಗಿರುವ ಘಟನೆ ನಡೆದಿದೆ. ಇದು ಆಕಸ್ಮಿಕವಾಗಿ ನಡೆದ ಗುಂಡಿನ ದಾಳಿಯೋ ಅಥವಾ ಪಿತೂರಿಯ ಭಾಗವಾಗಿ ಗುಂಡಿನ ದಾಳಿ ನಡೆಸಲಾಗಿದೆಯೋ ಎಂದು ಕುರಿತು ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ. ಕೊಲೆಯಾದ ವಿದ್ಯಾರ್ಥಿನಿಯನ್ನು ನಿಷ್ಠಾ ತ್ರಿಪಾಠಿ (23) ಎಂದು ಗುರುತಿಸಲಾಗಿದೆ. ಹರ್ದೋಯ್‌ ಜಿಲ್ಲೆಯ ಮೂಲದ ನಿಷ್ಠಾ ಲಖನೌದ ಬಿಬಿಡಿ ವಿಶ್ವವಿದ್ಯಾಲಯದಲ್ಲಿ ಬಿ.ಕಾಂ ವ್ಯಾಸಂಗ ಮಾಡುತ್ತಿದ್ದರು. ಇಲ್ಲಿನ ಚಿನ್ಹಾಟ್ …

Read More »