Breaking News

ರಾಜ್ಯ

ಅಣ್ಣ ಚಿರು ಸಮಾಧಿ ಬಳಿ ಪತ್ನಿ ಸೀಮಂತ ನೆರವೇರಿಸಿದ ಧ್ರುವ ಸರ್ಜಾ

ಕನ್ನಡ ಚಿತ್ರರಂಗದಲ್ಲಿ ನಟನೆ ಮತ್ತು ಗುಣದಿಂದ ಅಪಾರ ಅಭಿಮಾನಿ ಬಳಗವನ್ನು ಸಂಪಾದಿಸಿರುವ ನಟ ಧ್ರುವ ಸರ್ಜಾ. ಸಿನಿಮಾ ಮತ್ತು ವೈಯಕ್ತಿಕ ವಿಚಾರವಾಗಿ ಸುದ್ದಿಯಲ್ಲಿರುತ್ತಾರೆ. ಕೆಲ ದಿನಗಳ ಹಿಂದೆ ಅಣ್ಣ ಚಿರಂಜೀವಿ ಸರ್ಜಾ ಸಮಾಧಿ ಬಳಿ ಮಲಗಿದ್ದ ಧ್ರುವ ಸರ್ಜಾ ಅವರ ವಿಡಿಯೋ ಎಲ್ಲೆಡೆ ವೈರಲ್​ ಆಗಿತ್ತು. ಇದೀಗ ಆಯಕ್ಷನ್​ ಪ್ರಿನ್ಸ್​ ಮನೆಯಲ್ಲಿ ಸೀಮಂತದ ಸಂಭ್ರಮ ಮನೆ ಮಾಡಿದೆ. ಧ್ರುವ ಸರ್ಜಾ ಅವರು ಪತ್ನಿ ಪ್ರೇರಣಾ ಅವರ ಸೀಮಂತ ಶಾಸ್ತ್ರವನ್ನು ವಿಶೇಷ …

Read More »

ಜವಾನ್’​ ಸಿನಿಮಾ ಬಿಡುಗಡೆಯಾಗಿ ಕೇವಲ ನಾಲ್ಕೇ ದಿನಗಳಲ್ಲಿ 8 ಹೊಸ ದಾಖಲೆಯನ್ನು ಬರೆದಿದೆ.

ಜವಾನ್’​ ಸಿನಿಮಾ ಬಿಡುಗಡೆಯಾಗಿ ಕೇವಲ ನಾಲ್ಕೇ ದಿನಗಳಲ್ಲಿ 8 ಹೊಸ ದಾಖಲೆಯನ್ನು ಬರೆದಿದೆ. ಅವುಗಳ ಬಗ್ಗೆ ತಿಳಿಯಲು ಮುಂದೆ ಓದಿ.. ತಮಿಳು ಖ್ಯಾತ ನಿರ್ದೇಶಕ ಅಟ್ಲೀ ಮತ್ತು ಬಾಲಿವುಡ್​ ಸೂಪರ್​ಸ್ಟಾರ್​ ಶಾರುಖ್​ ಖಾನ್​ ಕಾಂಬೋದಲ್ಲಿ ಮೂಡಿಬಂದ ‘ಜವಾನ್’​ ಸಿನಿಮಾ ಸೆಪ್ಟೆಂಬರ್​ ​ 7, ಗುರುವಾರದಂದು ಬಿಡುಗಡೆಯಾಗಿ ವಿಶ್ವದಾದ್ಯಂತ ಧೂಳೆಬ್ಬಿಸುತ್ತಿದೆ. ಹಿಂದಿ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ತೆರೆಕಂಡ ಚಿತ್ರ ಕಲೆಕ್ಷನ್​ ವಿಚಾರದಲ್ಲಿ ಅಬ್ಬರದ ಓಟ ಮುಂದುವರೆಸಿದೆ. ಶಾರುಖ್​ ಸೇರಿದಂತೆ ನಯನತಾರಾ, …

Read More »

ಬೆಂಗಳೂರು ಬಂದ್ ವೇಳೆ ರಾಪಿಡೊ ಹಾಗೂ ಆಟೊ ಚಾಲಕರ ಮೇಲೆ ನಡೆದ ಹಲ್ಲೆ ಸಂಬಂಧ 12 ಜನರನ್ನು ಬಂಧಿಸಲಾಗಿದೆ

ಬೆಂಗಳೂರು: ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಖಾಸಗಿ ಸಾರಿಗೆ ಮಾಲೀಕರ ಒಕ್ಕೂಟ ಕರೆ ನೀಡಿದ್ದ ಬೆಂಗಳೂರು ಬಂದ್ ವೇಳೆ ರಾಪಿಡೊ ಹಾಗೂ ಆಟೊ ಚಾಲಕರ ಮೇಲೆ ನಡೆದ ಹಲ್ಲೆಗೆ ಸಂಬಂಧಿಸಿದಂತೆ ದೂರು ನೀಡಿದರೆ ಪ್ರಕರಣ ದಾಖಲಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ದಯಾನಂದ ತಿಳಿಸಿದ್ದಾರೆ. ಇಂದು ಬಂದ್ ವೇಳೆ ನಗರದ ಕೆಲವೆಡೆ ಬೈಕ್ ಟಾಕ್ಸಿಗಳ ಮೇಲೆ ಹಾಗೂ ಆಟೊ ಚಾಲಕರ ಮೇಲೆ ಪ್ರತಿಭಟನಾಕಾರರು ಹಲ್ಲೆ ನಡೆಸಿ, ಅಲ್ಲದೇ ವಾಹನಗಳನ್ನ ಜಖಂಗೊಳಿಸಿದ್ದರು. ಈ …

Read More »

ಪ್ರಜ್ವಲ್​ ರೇವಣ್ಣ ವಿರುದ್ಧದ ನನ್ನ ಹೋರಾಟ ನಿಲ್ಲುವುದಿಲ್ಲ ಎಂದು ವಕೀಲ ಜಿ.ದೇವರಾಜೇಗೌಡ ಹೇಳಿದ್ದಾರೆ.

ಹಾಸನ: ಸುಪ್ರೀಂಕೋರ್ಟ್‌ನಲ್ಲಿ ತಡೆಯಾಜ್ಞೆ ಸಿಗುವವರೆಗೂ ಪಾರ್ಲಿಮೆಂಟ್‌ನಲ್ಲಿ ಪ್ರಜ್ವಲ್ ರೇವಣ್ಣ ಭಾಗವಹಿಸು ಹಾಗಿಲ್ಲ. ನನ್ನಿಂದ ವಿಚ್ಛೇದನ ಪಡೆದ ಮಹಿಳೆಯನ್ನು ಕರೆದುಕೊಂಡು ಹೇಳಿಕೆ ನೀಡಿರುವವರನ್ನು ರಾಜಕೀಯವಾಗಿ ಮುಗಿಸುವವರೆಗೂ ಆ ಬ್ರಹ್ಮ ಬಂದರೂ ನಾನು ಕಾನೂನು ಹೋರಾಟವನ್ನು ನಿಲ್ಲಿಸುವುದಿಲ್ಲ ಎಂದು ವಕೀಲರಾದ ಜಿ. ದೇವರಾಜೇಗೌಡ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿ, ನೀಡಿರುವ ತೀರ್ಪುನ್ನು ಅಮಾನತು ಮಾಡುವಂತೆ ಪ್ರಜ್ವಲ್‌ ರೇವಣ್ಣ ಹೈಕೋರ್ಟ್ ಮೆಟ್ಟಿಲೇರಿದ್ದು, ಇದರ ವಿರುದ್ಧ ನಾವು ತಕರಾರು ಸಲ್ಲಿಸಿದ್ದೆವು. ಯಾರೇ ಆಗಲಿ ನ್ಯಾಯಾಲಯವನ್ನು ಗೌರವವಾಗಿ …

Read More »

ದೆಹಲಿಯಲ್ಲಿ ಪಟಾಕಿಗಳ ತಯಾರಿಕೆ, ಸಂಗ್ರಹ ಮತ್ತು ಮಾರಾಟ ನಿಷೇಧ: ಗೋಪಾಲ್ ರೈ

ನವದೆಹಲಿ: ದೆಹಲಿಯಲ್ಲಿ ದೀಪಾವಳಿಯಂದು ಪಟಾಕಿ ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗುವುದು. ಇನ್ನು ಮುಂದೆ ಪಟಾಕಿಗಳ ತಯಾರಿಕೆ, ಸಂಗ್ರಹಣೆ ಮತ್ತು ಮಾರಾಟವನ್ನು ನಿಷೇಧಿಸಲಾಗಿದೆ ಎಂದು ದೆಹಲಿಯ ಪರಿಸರ ಸಚಿವ ಗೋಪಾಲ್ ರೈ ತಿಳಿಸಿದರು. ಪಟಾಕಿಗಳ ತಯಾರಿಕೆ, ಸಂಗ್ರಹಣೆ, ಮಾರಾಟ ಮತ್ತು ವಿತರಣೆಗೆ ಯಾರಿಗೂ ಪರವಾನಗಿ ನೀಡದಂತೆ ಗೋಪಾಲ್ ರೈ ದೆಹಲಿ ಪೊಲೀಸರಿಗೆ ನಿರ್ದೇಶನ ನೀಡಿದರು.       ಜನರಲ್ಲಿನ ಜಾಗೃತಿ ಮತ್ತು ದೆಹಲಿ ಸರ್ಕಾರದ ಕ್ರಮಗಳಿಂದ ದೆಹಲಿಯಲ್ಲಿ ಮಾಲಿನ್ಯವು ನಿರಂತರವಾಗಿ ಕಡಿಮೆಯಾಗುತ್ತಿದೆ. ಆದರೆ, …

Read More »

*ಮಿನಿ ವಿಧಾನ ಸೌಧ ನಿರ್ಮಾಣಕ್ಕೆ ಅನುಮೋದನೆ ಶೀಘ್ರ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ ಪುರಸಭೆ ಸದಸ್ಯರ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ *ಮೂಡಲಗಿ :* ಮೂಡಲಗಿ ಪಟ್ಟಣದ ಬಸವೇಶ್ವರ ನಗರದ ಬಳಿ ನಿರ್ಮಿಸಲು ಉದ್ಧೇಶಿಸಿರುವ ಮಿನಿ ವಿಧಾನ ಸೌಧ ನಿರ್ಮಾಣಕ್ಕೆ ಸರ್ಕಾರದ ಅನುಮೋದನೆಯೊಂದೇ ಬಾಕಿ ಇದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಸೋಮವಾರ ಸಂಜೆ ಮೂಡಲಗಿ ಪುರಸಭೆ ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು, ಮಿನಿ ವಿಧಾನ ಸೌಧ ನಿರ್ಮಾಣಕ್ಕೆ ಇಷ್ಟರಲ್ಲೇ ಸರ್ಕಾರದ ಅನುಮೋದನೆ ದೊರೆಯಲಿದೆ ಎಂದು ಹೇಳಿದರು. ಪಟ್ಟಣದ ತಹಶೀಲ್ದಾರ …

Read More »

ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ .. ಭಯ ಬೇಡ, ಜಾಗ್ರತೆಯಿರಲಿ ಎಂದ ಸಿಎಂ

ಬೆಂಗಳೂರು : ರಾಜ್ಯಾದ್ಯಂತ ಕಳೆದ ಕೆಲವು ದಿನಗಳ ಅವಧಿಯಲ್ಲಿ ಸುಮಾರು 7 ಸಾವಿರಕ್ಕೂ ಅಧಿಕ ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ. ಈ ಸಂಬಂಧ ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದರಲ್ಲಿ 4 ಸಾವಿರಕ್ಕೂ ಅಧಿಕ ಪ್ರಕರಣಗಳು ಬೆಂಗಳೂರು ನಗರವೊಂದರಲ್ಲೇ ಕಂಡುಬಂದಿದೆ. ಡೆಂಗ್ಯೂ ಕ್ಷಿಪ್ರಗತಿಯಲ್ಲಿ ವ್ಯಾಪಿಸುತ್ತಿರುವ ಬಗ್ಗೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಮಾತನಾಡಿ, ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ ಎಂದು …

Read More »

ನಾನು ಬಿಜೆಪಿ ಸೇರಲು ಹೋಗಿದ್ದೆ ಎಂಬ ಕುಮಾರಸ್ವಾಮಿ ಹೇಳಿಕೆ ನಗೆಪಾಟಲಿನದು.: ಸಿದ್ದರಾಮಯ್ಯ

ಮೈಸೂರು : ನನ್ನ ಇಡೀ ರಾಜಕಾರಣ ಕೋಮುವಾದಿ ಪಕ್ಷಗಳ ವಿರುದ್ಧವೇ ನಡೆದಿದೆ.   ಹೀಗಿರುವಾಗ ನಾನು ಬಿಜೆಪಿಗೆ ಹೋಗುತ್ತೇನೆಂದರೆ ಯಾರಾದರೂ ನಂಬುತ್ತಾರೆಯೇ?. ಅದು ನಂಬುವ ಮಾತೇ? ನಾನು ಬಿಜೆಪಿಗೆ ಸೇರಲು ಹೋಗಿದ್ದೆ ಎಂಬ ಕುಮಾರಸ್ವಾಮಿ ಹೇಳಿಕೆ ನಗೆಪಾಟಲಿನದು. ನನ್ನ ಹೆಣವೂ ಬಿಜೆಪಿಗೆ ಹೋಗುವುದಿಲ್ಲ ಎಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಮೈಸೂರಿನ ಆದಿಚುಂಚನಗಿರಿ ಶಾಖಾಮಠದ ಕಾರ್ಯಕ್ರಮದಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ …

Read More »

ಮಳೆ ನಮ್ಮನ್ನು ಉಳಿಸಿದೆ’: ಭಾರತ – ಪಾಕ್ ಹಣಾಹಣಿ ಬಗ್ಗೆ ಶೋಯೆಬ್ ಅಖ್ತರ್ ಹೇಳಿಕೆ

ಕೊಲಂಬೊ (ಶ್ರೀಲಂಕಾ): ಏಷ್ಯಾಕಪ್​​​ನಲ್ಲಿ ಭಾರತ ಮತ್ತು ಪಾಕಿಸ್ತಾನ ಪಂದ್ಯಕ್ಕೆ ಮಳೆ ಎರಡನೇ ಬಾರಿಗೆ ಅಡ್ಡಿ ಮಾಡಿದೆ. ಲೀಗ್​ ಹಂತದಲ್ಲಿ ಸಾಂಪ್ರದಾಯಿಕ ಎದುರಾಳಿಗಳ ನಡುವಿನ ಪಂದ್ಯದಲ್ಲಿ ಕೇವಲ ಒಂದು ಇನ್ನಿಂಗ್ಸ್​ ಮಾತ್ರ ಆಡಲು ಸಾಧ್ಯವಾಯಿತು. ಸೂಪರ್​ ಫೋರ್​ ಹಂತದ ಪಂದ್ಯ ನಿನ್ನೆ (ಭಾನುವಾರ) ಕೊಲಂಬೊದ ಆರ್​. ಪ್ರೇಮದಾಸ ಕ್ರೀಡಾಂಗಣದಲ್ಲಿ 24.1 ಓವರ್​ ವರೆಗೆ ಸುಸೂತ್ರವಾಗಿ ನಡೆದಿತ್ತು. ಆದರೆ ಈ ವೇಳೆ ಬಂದ ಮಳೆ ಸುಮಾರು ಎರಡು ಗಂಟೆಗೂ ಹೆಚ್ಚು ಕಾಲ ಎಡೆಬಿಡದೇ ಸುರಿದ …

Read More »

ಸಂಸದ ಸ್ಥಾನ ಅಸಿಂಧು ಆದೇಶಕ್ಕೆ ತಡೆ ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ವಜಾ

ಬೆಂಗಳೂರು : ಚುನಾವಣಾ ಅಕ್ರಮ ಆರೋಪದ ಮೇಲೆ ಹಾಸನ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆ ಆಗಿರುವುದನ್ನು ಅಸಿಂಧುಗೊಳಿಸಿ ಹೊರಡಿಸಿರುವ ಆದೇಶಕ್ಕೆ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವವರೆಗೂ ತಡೆಯಾಜ್ಞೆ ನೀಡುವಂತೆ ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ.   ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿ, ತೀರ್ಪು ಕಾಯ್ದಿರಿಸಿದ್ದ ನ್ಯಾಯಮೂರ್ತಿ ಕೆ. ನಟರಾಜನ್ ಅವರ ಪೀಠ ಸೋಮವಾರ ಅರ್ಜಿ ವಜಾಗೊಳಿಸಿದೆ. ವಿವರವಾದ ಆದೇಶದ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಿದೆ. …

Read More »