ಬೆಂಗಳೂರು: ಎಲ್ಲ ರಂಗದಲ್ಲಿ ವೈಫಲ್ಯ ಕಂಡಿರುವುದೇ ಕಾಂಗ್ರೆಸ್ ಸರ್ಕಾರದ ನೂರು ದಿನಗಳ ಸಾಧನೆಯಾಗಿದೆ. ಇಷ್ಟು ದಿನದಲ್ಲಿ ಜನರ ವಿಶ್ವಾಸ ಗಳಿಸುವುದು ದೂರದ ಮಾತು. ಅವರ ಶಾಸಕರ ವಿಶ್ವಾಸವನ್ನೇ ಕಳೆದುಕೊಂಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ. ಸರ್ಕಾರದ ನೂರು ದಿನದ ಸಂಭ್ರಮವನ್ನು ಟೀಕಿಸಿ ಸರಣಿ ಟ್ಚೀಟ್ ಮಾಡಿರುವ ಬೊಮ್ಮಾಯಿ, ಸಂಪೂರ್ಣ ಬಹುಮತದೊಂದಿಗೆ ಬಂದ ಸರ್ಕಾರ ನೂರು ದಿನಗಳಲ್ಲಿ ಎಡವಿದ್ದೇ ಹೆಚ್ಚು. ಗ್ಯಾರಂಟಿ ನೆಪದಲ್ಲಿ ಒಂದು ವರ್ಷದ ಅಭಿವೃದ್ಧಿಯ ಎಲ್ಲ ಕಾಮಗಾರಿಗಳು …
Read More »ಒಂದು ದಿನ ಮೊದಲೇ ಮುಂಬೈಗೆ ಮಮತಾ: ಇಂಡಿಯಾ ಸಭೆಗೂ ಮುನ್ನ ಬಿಗ್ ಬಿ ಭೇಟಿ
ಮುಂಬೈ: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೊಡೆತಟ್ಟಿ 28 ವಿಪಕ್ಷಗಳು ರೂಪಿಸಿಕೊಂಡಿರುವ I.N.D.I.A ಮೈತ್ರಿಕೂಟದ ಮೂರನೇ ಸಭೆ ಆಗಸ್ಟ್ 31 ಮತ್ತು ಸೆಪ್ಟೆಂಬರ್ 1 ರಂದು ಮುಂಬೈನಲ್ಲಿ ನಡೆಯಲಿದ್ದು, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಒಂದು ದಿನ ಮುಂಚೆ ಅಂದರೆ ಆಗಸ್ಟ್ 30 ರಂದು ಮಹಾರಾಷ್ಟ್ರಕ್ಕೆ ಆಗಮಿಸಲಿದ್ದಾರೆ. ಅಂದು ಬಾಲಿವುಡ್ನ ಖ್ಯಾತ ಹಿರಿಯ ನಟ ಅಮಿತಾಭ್ ಬಚ್ಚನ್ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಲಿದ್ದು, ರಕ್ಷಾ …
Read More »ವಿಷಾಹಾರ ಸೇವನೆ.. ಸಮತಾ ಆಶ್ರಮ ಶಾಲೆಯ 170 ವಿದ್ಯಾರ್ಥಿಗಳು ಅಸ್ವಸ್ಥ
ಸಾಂಗ್ಲಿ(ಮಹಾರಾಷ್ಟ್ರ): ಸಮತಾ ಆಶ್ರಮ ಶಾಲೆಯ ಮಕ್ಕಳು ಭಾನುವಾರ ರಾತ್ರಿ ಊಟ ಮಾಡಿದ ಬಳಿಕ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಸಾಂಗ್ಲಿ – ಜತ್ತ ತಾಲೂಕಿನ ಉಮಡಿಯಲ್ಲಿ ನಡೆದಿದೆ. ಒಟ್ಟು 170 ವಿದ್ಯಾರ್ಥಿಗಳು ಆಹಾರ ಸೇವಿಸಿದ್ದು, ಫುಡ್ ಪಾಯಿಸನ್ ಆಗಿದೆ. ಅಸ್ವಸ್ಥರಾದ ವಿದ್ಯಾರ್ಥಿಗಳನ್ನು ತಕ್ಷಣವೇ ಮದ್ಗ್ಯಾಲ್‌ನಲ್ಲಿರುವ ಗ್ರಾಮೀಣ ಪ್ರಥಮ ಚಿಕಿತ್ಸಾ ಕೇಂದ್ರಕ್ಕೆ ದಾಖಲಿಸಲಾಗಿದೆ. ಪ್ರಥಮ ಚಿಕಿತ್ಸೆ ಬಳಿಕ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಕೆಲ ವಿದ್ಯಾರ್ಥಿಗಳನ್ನು ಸಾಂಗ್ಲಿ ಹಾಗೂ ಮಿರಾಜ್ನಲ್ಲಿರುವ ಸರಕಾರಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ …
Read More »ಅಂಕೋಲಾದ ಕೆಂದಗಿ ಗ್ರಾಮಕ್ಕಿಲ್ಲ ರಸ್ತೆ: ಗಾಯಾಳುವನ್ನ ಜೋಳಿಗೆಯಲ್ಲಿಟ್ಟು 15 ಕಿ.ಮೀ ಸಾಗಿಸಿದ ಗ್ರಾಮಸ್ಥರು
ಕಾರವಾರ : ಭಾರತ ಸ್ವಾತಂತ್ರ್ಯ ಹೊಂದಿ 75 ವರ್ಷ ಕಳೆದರೂ ಇನ್ನೂ ರಸ್ತೆ ಸಂಪರ್ಕವಿಲ್ಲದ ಗ್ರಾಮಗಳು ಬಹಳಷ್ಟಿವೆ ಎಂದರೆ ಅಚ್ಚರಿಯಾಗದೇ ಇರೋದಿಲ್ಲ. ಹೀಗೆ ರಸ್ತೆ ಸಮಸ್ಯೆಯಿದ್ದ ಗ್ರಾಮವೊಂದರಿಂದ ಗಾಯಾಳುವನ್ನು ಜೋಳಿಗೆಯಲ್ಲಿ ಹೊತ್ತುಕೊಂಡು ಬಂದು ಆಸ್ಪತ್ರೆಗೆ ದಾಖಲಿಸಿದ ಘಟನೆ ಅಂಕೋಲಾದಲ್ಲಿ ನಡೆದಿದೆ. ಹಳ್ಳಗಳಿಂದ ಜಲದಿಗ್ಭಂದನಕ್ಕೊಳಗಾಗಿದ್ದ ಗ್ರಾಮದಿಂದ ಸುಮಾರು 15 ಕಿ.ಮೀ ದೂರ ಹರಸಾಹಸಪಟ್ಟು, ಹಳ್ಳ ದಾಟಿಸಿ ರೋಗಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಕೆಂದಗಿ ಗ್ರಾಮದ ಉಮೇಶ್ ಗೌಡ ಎಂಬುವರು …
Read More »‘ಬಿಜೆಪಿಯಲ್ಲಿ ನಾಯಕರೊಂದಿಗೆ ಭಿನ್ನಾಭಿಪ್ರಾಯ ಇರೋದು ಸತ್ಯ,: ಶಂಕರ ಪಾಟೀಲ ಮುನೇನಕೊಪ್ಪ
ಹುಬ್ಬಳ್ಳಿ: ನನಗೆ ಈವರೆಗೂ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಬೇಕೆಂಬ ಆಹ್ವಾನ ಕಾಂಗ್ರೆಸ್ ಮುಖಂಡರಿಂದ ಬಂದಿಲ್ಲ. ಬಿಜೆಪಿಯಲ್ಲಿ ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷ ಸಂಘಟನೆ ಮಾಡುತ್ತೇನೆ ಎಂದು ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಸ್ಪಷ್ಟನೆ ನೀಡಿದ್ದಾರೆ. ಕಳೆದ ಕಲವು ದಿನಗಳಿಂದ ಶಂಕರ ಪಾಟೀಲ ಮುನೇನಕೊಪ್ಪ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎಂಬ ಸುದ್ದಿ ಹಬ್ಬಿದ ಹಿನ್ನೆಲೆಯಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿರುವ ಅವರು, ”ಕಾಂಗ್ರೆಸ್ ಪಕ್ಷದಲ್ಲಿ ನಮ್ಮ ಸ್ನೇಹಿತರು ಇದ್ದಾರೆ, ಬಂಧುಗಳು …
Read More »ಇಸ್ರೋ ಮಹತ್ವದ ಘೋಷಣೆ: ಸೂರ್ಯನ ಅಧ್ಯಯನಕ್ಕೆ ಬಾಹ್ಯಾಕಾಶದಲ್ಲಿ ಆದಿತ್ಯ-L1 ವೀಕ್ಷಣಾಲಯ; ಸೆ.2ರಂದು ಉಡ್ಡಯನ
ಬೆಂಗಳೂರು: ಚಂದ್ರನ ದಕ್ಷಿಣ ಧ್ರುವದ ಮೇಲೆ ಯಶಸ್ವಿಯಾಗಿ ಇಳಿದಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಇದೀಗ ಸೂರ್ಯನ ಅಧ್ಯಯನಕ್ಕೆ ಮುಂದಾಗಿದೆ. ಆದಿತ್ಯ ಎಲ್-1 ವೀಕ್ಷಣಾಲಯ ಹೊತ್ತ ರಾಕೆಟ್ ಅನ್ನು ಸೆಪ್ಟೆಂಬರ್ 2ರಂದು ಬೆಳಗ್ಗೆ 11:50 ನಿಮಿಷಕ್ಕೆ ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಉಡಾವಣೆ ಮಾಡಲಾಗುವುದು ಎಂದು ಇಸ್ರೋ ಇಂದು (ಸೋಮವಾರ) ಘೋಷಿಸಿದೆ. ಸೂರ್ಯನ ಅಧ್ಯಯನ ಮಾಡುವ ಭಾರತದ ಮೊಟ್ಟ ಮೊದಲ ಬಾಹ್ಯಾಕಾಶ ವೀಕ್ಷಣಾಲಯ ಇದಾಗಿದೆ. ಈ ಮಿಷನ್ ಭೂಮಿಯಿಂದ 1.5 ಮಿಲಿಯನ್ ಕಿಲೋಮೀಟರ್ …
Read More »ಕಾಂಗ್ರೆಸ್ ಕಾರ್ಯಕರ್ತೆಯ ಅವಹೇಳನ ಆರೋಪ; ಸೂಲಿಬೆಲೆ ವಿರುದ್ಧ ಎಫ್ಐಆರ್
ಶಿವಮೊಗ್ಗ : ಸಾಮಾಜಿಕ ಜಾಲತಾಣದಲ್ಲಿ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರು ಅವಹೇಳನಕಾರಿ ಕಾಮೆಂಟ್ ಮಾಡಿದ್ದಾರೆ ಎಂದು ಕೆಪಿಸಿಸಿ ಸಾಮಾಜಿಕ ಜಾಲತಾಣದ ಉಪಾಧ್ಯಕ್ಷೆ ಸೌಗಂಧಿಕ ರಘುನಾಥ್ ಅವರು ಆರೋಪಿಸಿ ದೂರು ನೀಡಿದ್ದರು. ಈ ದೂರಿನ ಮೇರೆಗೆ ಸೂಲಿಬೆಲೆ ವಿರುದ್ಧ ವಿನೋಬಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದೆ ತಿಂಗಳ 23 ರಂದು ಚಂದ್ರಯಾನ -3 ಯಶಸ್ವಿಗೆ ಪೂಜೆ ಮಾಡಿಸಿ ಫೋಟೋ ಹಾಕಿ ಎಂದು ಪೋಸ್ಟ್ ಹಾಕಿದ್ದ ಸೂಲಿಬೆಲೆ ಪೋಸ್ಟ್ಗೆ ಸೌಗಂಧಿಕ ರಘುನಾಥ್ …
Read More »ಯಾದಗಿರಿ: ಕಲುಷಿತ ನೀರು ಸೇವಿಸಿ ಮಕ್ಕಳು ಸೇರಿ 24 ಜನರು ಅಸ್ವಸ್ಥ
ಯಾದಗಿರಿ: ಕಲುಷಿತ ನೀರು ಸೇವಿಸಿ 22 ಮಕ್ಕಳು, ಇಬ್ಬರು ವಯಸ್ಕರು ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ ಸುರಪುರ ತಾಲೂಕಿನ ಚಿಕ್ಕನಹಳ್ಳಿ ಗ್ರಾಮದಲ್ಲಿ ಇಂದು ನಡೆದಿದೆ. ಅಸ್ವಸ್ಥರನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಗ್ರಾಮಸ್ಥರಾದ ಯಲ್ಲಪ್ಪ ಛಲುವಾದಿ ಮಾತನಾಡಿ, “ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯ ಎದುರಿನ ಕೈ ಪಂಪ್ (ಕೊಳವೆಬಾವಿ) ನೀರನ್ನು ಬಿಸಿಯೂಟ ಸೇವಿಸಿದ ಬಳಿಕ ಮಕ್ಕಳು ತಟ್ಟೆ ತೊಳೆಯಲು ಮತ್ತು ಕುಡಿಯಲು ಬಳಸಿದ್ದಾರೆ. ಇದರಿಂದಾಗಿ ಅಸ್ವಸ್ಥಗೊಂಡಿರುವ ಅನುಮಾನವಿದೆ” ಎಂದು ಶಂಕೆ ವ್ಯಕ್ತಪಡಿಸಿದರು. …
Read More »ಇಂಡೋನೇಷ್ಯಾದ ಬಾಲಿ, ಜಾವಾ ದ್ವೀಪಗಳಲ್ಲಿ ಪ್ರಬಲ ಭೂಕಂಪ: ಯಾವುದೇ ಸಾವು- ನೋವುಗಳು ವರದಿಯಾಗಿಲ್ಲ
ಡೆನ್‌ಪಾಸರ್ (ಇಂಡೋನೇಷ್ಯಾ): ಇಂಡೋನೇಷ್ಯಾದ ರೆಸಾರ್ಟ್ ದ್ವೀಪವಾದ ಬಾಲಿ ಮತ್ತು ದೇಶದ ಇತರ ಭಾಗಗಳಲ್ಲಿ ಮಂಗಳವಾರ ಪ್ರಬಲ ಭೂಕಂಪ ಸಂಭವಿಸಿದೆ. ಭೂಮಿ ಕಂಪಿಸಿದ್ದರಿಂದ ಜನರು ಭಯಭೀತರಾಗಿದ್ದಾರೆ. ಆದರೆ, ಸದ್ಯ ಯಾವುದೇ ಸಾವುನೋವಿನ ಕುರಿತು ವರದಿಯಾಗಿಲ್ಲ. 513.5 ಕಿಲೋಮೀಟರ್ ಆಳದಲ್ಲಿ 7.1 ತೀವ್ರತೆಯ ಭೂಕಂಪ ಸಂಭಸಿದೆ. ಬಾಲಿಯ ಪಕ್ಕದಲ್ಲಿರುವ ಲೊಂಬಾಕ್ ದ್ವೀಪದ ಕರಾವಳಿಯ ಸಮೀಪವಿರುವ ಸಣ್ಣ ದ್ವೀಪವಾದ ಗಿಲಿ ಏರ್‌ನಿಂದ ಈಶಾನ್ಯಕ್ಕೆ 181 ಕಿಲೋಮೀಟರ್ ದೂರದಲ್ಲಿ ಭೂಕಂಪನದ ಪಾಯಿಂಟ್ ಇದೆ ಎಂದು ಅಮೆರಿಕದ ಜಿಯೋಲಾಜಿಕಲ್ …
Read More »ಸಚಿವ ಜಮೀರ್ ಅಹಮದ್ ಖಾನ್ ಮದರಸಾಗಳಲ್ಲಿ ಮುಖ್ಯವಾಗಿ ಕನ್ನಡ ಕಲಿಸಬೇಕೆಂದು ನಿರ್ದೇಶನ ನೀಡಿದ್ದಾರೆ.
ಬೆಂಗಳೂರು: ಮದರಸಾಗಳಲ್ಲಿ ಕಡ್ಡಾಯವಾಗಿ ಕನ್ನಡ ಕಲಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಸೂಚನೆ ನೀಡಿದ್ದಾರೆ. ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯ ಸಭಾಂಗಣದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಪಾಲ್ಗೊಂಡು ಸಚಿವರು ಮಾತನಾಡಿದರು. ಮದರಸಾಗಳಲ್ಲಿ ಪ್ರಮುಖವಾಗಿ ಕನ್ನಡ ಕಡ್ಡಾಯವಾಗಿ ಕಲಿಸಲೇಬೇಕು. ಉಳಿದಂತೆ ಇಂಗ್ಲಿಷ್ ಸೇರಿ ಇತರ ಭಾಷೆ ಕಲಿಸಲು ಕ್ರಮ ಕೈಗೊಳ್ಳಿ ಎಂದು ನಿರ್ದೇಶನ ನೀಡಿದರು. ರಾಜ್ಯದಲ್ಲಿ 1265 ವಕ್ಫ್ ಮಂಡಳಿಯಲ್ಲಿ ನೋಂದಣಿಯಾದ ಮದರಸಾಗಳಿದ್ದು, ಆ ಪೈಕಿ 100 …
Read More »
Laxmi News 24×7