Breaking News

ರಾಜ್ಯ

ಪಟಾಕಿ ಗೋದಾಮಿನಲ್ಲಿ ಬೆಂಕಿ ಅವಘಡ ಸಂಬಂಧ ಎಲ್ಲ ಆಯಾಮದಲ್ಲೂ ತನಿಖೆ: ಸಚಿವ ಶಿವಾನಂದ ಪಾಟೀಲ್

ಹಾವೇರಿ: “ನಗರದ ಸಮೀಪದ ಆಲದಕಟ್ಟಿ ಗ್ರಾಮದಲ್ಲಿ ನಡೆದ ಪಟಾಕಿ ದುರಂತಕ್ಕೆ ಹಲವು ವೈಫಲ್ಯಗಳು ಕಾರಣ” ಎಂದು ಜವಳಿ ಮತ್ತು ಸಕ್ಕರೆ ಹಾಗೂ ಹಾವೇರಿ ಜಿಲ್ಲೆಯ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ಹೇಳಿದರು. ಇಂದು ಆಲದಕಟ್ಟಿಯ ಪಟಾಕಿ ಗೋದಾಮಿನಲ್ಲಿ ಬೆಂಕಿ ಅವಘಡ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಘಟನೆ ಸಂಬಂಧ ಎಲ್ಲ ಆಯಾಮದಲ್ಲೂ ತನಿಖೆ ನಡೆಸಲಾಗುತ್ತದೆ. ಈ ದುರಂತ ನಡೆದಿರುವುದು ದುರಾದೃಷ್ಟಕರ, ಆಗಬಾರದಾಗಿತ್ತು ಆಗಿದೆ. …

Read More »

ಕರ್ನಾಟಕದ ಗ್ಯಾರಂಟಿ ಯೋಜನೆಗಳನ್ನು ಇಡೀ ದೇಶಕ್ಕೆ ವಿಸ್ತರಿಸುವ ಚಿಂತನೆ ಇದೆ: ರಾಹುಲ್ ಗಾಂಧಿ

ಮೈಸೂರು : “ಮಹಿಳೆಯರ ಆರ್ಥಿಕ ಹೊರೆ ಇಳಿಸಲು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದೇವೆ. ಕರ್ನಾಟಕದಲ್ಲಿ ಜಾರಿಗೊಳಿಸಿರುವ ಈ ಯೋಜನೆಗಳನ್ನು ಇಡೀ ದೇಶಕ್ಕೆ ವಿಸ್ತರಿಸುವ ಚಿಂತನೆ ಇದೆ. ಇವು ಇಡೀ ದೇಶಕ್ಕೆ ದಿಕ್ಸೂಚಿ” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು. ನಗರದ ಮಹಾರಾಜ ಕಾಲೇಜು ಮೈದಾನದಲ್ಲಿಂದು ಹಮ್ಮಿಕೊಂಡಿದ್ದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಭರವಸೆ ನೀಡಿತ್ತು. ಅಧಿಕಾರಕ್ಕೆ ಬಂದ …

Read More »

9 ಅಡಿ ಉದ್ದದ ಅತಿ ದೊಡ್ಡ ಬಿಳಿ ಹೆಬ್ಬಾವು ಕುಮಟಾದಲ್ಲಿ ಪತ್ತೆ!

ಕಾರವಾರ (ಉತ್ತರ ಕನ್ನಡ) : ಸಾಮಾನ್ಯವಾಗಿ ಕಂದು ಬಣ್ಣದ ಹೆಬ್ಬಾವುಗಳು ಎಲ್ಲೆಂದರಲ್ಲಿ ಕಾಣಸಿಗುತ್ತವೆ. ಆದರೆ ಕುಮಟಾದಲ್ಲಿ 2ನೇ ಬಾರಿಗೆ ಬಿಳಿ ಹೆಬ್ಬಾವು ಪ್ರತ್ಯಕ್ಷವಾಗಿದೆ. ಭಾರತದಲ್ಲಿ ಈವರೆಗೆ ಸಿಕ್ಕ ಬಿಳಿ ಹೆಬ್ಬಾವಿನ ಪೈಕಿ ಇದು ಅತಿ ದೊಡ್ಡದೆಂದು ಉರಗ ತಜ್ಞರು ಹೇಳುತ್ತಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಕುಮಟಾದ ಹೆಗಡೆ ಗ್ರಾಮದ ಗಾಂಧಿ ನಗರದ ದೇವಿ ನಾರಾಯಣ ಮುಕ್ರಿ ಎಂಬವರ ಮನೆಯ ಅಂಗಳದಲ್ಲಿ ಮಂಗಳವಾರ ಈ ಬಿಳಿ ಹೆಬ್ಬಾವು ಕಾಣಿಸಿಕೊಂಡಿದೆ. ಇದೇ ಮೊದಲ ಬಾರಿ‌ಗೆ ಶುಭ್ರ …

Read More »

ಅದ್ಧೂರಿಯಾಗಿ ಗೃಹಲಕ್ಷ್ಮಿ ಯೋಜನೆ ಉದ್ಘಾಟಿಸಿ ‘ಕೈ’ ಪಕ್ಷಕ್ಕೆ ಮತ್ತಷ್ಟು ಹತ್ತಿರವಾದ ಎಸ್‌.ಟಿ.ಸೋಮಶೇಖರ್

ಬೆಂಗಳೂರು : ಬಿಜೆಪಿಯಿಂದ ಅಂತರ ಕಾಯ್ದುಕೊಂಡಿರುವ ಯಶವಂತಪುರ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಅವರಿಂದು ಕಾಂಗ್ರೆಸ್ ಸರ್ಕಾರದ ಪ್ರಮುಖ ಯೋಜನೆ ಗೃಹಲಕ್ಷ್ಮಿ ಜಾರಿಗೆ ಅದ್ಧೂರಿ ಕಾರ್ಯಕ್ರಮ ಮಾಡಿದರು. “ಗೃಹಲಕ್ಷ್ಮಿ ಯೋಜನೆ ಜಾರಿಗೆ ನನ್ನದೂ ಕೂಡಾ ಒಂದು ಅಳಿಲು ಸೇವೆ. ನನ್ನ ಕ್ಷೇತ್ರದಲ್ಲಿ ಯೋಜನೆ ಬಗ್ಗೆ ಮಾಹಿತಿ ನೀಡಲು ಏನೆಲ್ಲ ಕ್ರಮ ವಹಿಸಬಹುದೋ ಅದನ್ನು ಮಾಡುತ್ತಿದ್ದೇನೆ ಅಷ್ಟೇ” ಎಂದು ಸಮರ್ಥನೆ ನೀಡಿದರು. ಯಶವಂತಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ರಾಮೋಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಗೃಹಲಕ್ಷ್ಮಿ ಯೋಜನೆಯ …

Read More »

ಕಳ್ಳರೆಂದು ಬಾವಿಸಿ ಮೂವರು ಯುವಕರನ್ನು ಕಂಬಕ್ಕೆ ಕಟ್ಟಿ ಹಲ್ಲೆ

ಬೆಳಗಾವಿ: ಶೈಕ್ಷಣಿಕ ಜಿಲ್ಲೆಯಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದೆ. ಆದರೆ ಕಳ್ಳರೆಂದು ತಪ್ಪಾಗಿ ಭಾವಿಸಿ ಮೂರು ಜನ ಯುವಕರನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಗ್ರಾಮಸ್ಥರು ಹಲ್ಲೆ ಮಾಡಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ಚಿಕ್ಕೋಡಿ ತಾಲೂಕಿನ ಜೋಡಕುರಳಿ ಗ್ರಾಮದಲ್ಲಿ ಕಳ್ಳರೆಂದು ಭಾವಿಸಿ ಮೂವರು ಯುವಕರನ್ನು ಕಂಬಕ್ಕೆ ಕಟ್ಟಿ ಮನಬಂದಂತೆ ಹಲ್ಲೆ ನಡೆಸಿದ್ದಾರೆ. ಬೆಳ್ಳಂಬೆಳಗ್ಗೆ ಜೋಡಕುರಳಿ ಗ್ರಾಮಕ್ಕೆ ನಾಲ್ವರು ಯುವಕರು ಬಂದಿದ್ದರು. ಈ ವೇಳೆ ಯುವಕರನ್ನು ಯಾರು ಎಂದು ವಿಚಾರಿಸುತ್ತಿದ್ದಾಗ ಸರಿಯಾಗಿ ಮಾಹಿತಿ ನೀಡಿದೇ ಯುವಕನೊಬ್ಬ …

Read More »

ಬೆಳಗಾವಿ ಹಾಲು ಉತ್ಪಾದಕರ ಸಂಘದಲ್ಲಿದೆ ವಿವಿಧ ಉದ್ಯೋಗ; 46 ಹುದ್ದೆ ನೇಮಕಾತಿ

ಬೆಮುಲ್​ನ ವಿವಿಧ ವೃಂದದಲ್ಲಿ ಖಾಲಿ ಇರುವ ಒಟ್ಟು 46 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಹಾಲು ಉತ್ಪಾದಕರ ಸಂಘದಿಂದ ಬೆಳಗಾವಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತಕ್ಕೆ ನೇರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಬೆಮುಲ್​ನ ವಿವಿಧ ವೃಂದದಲ್ಲಿ ಖಾಲಿ ಇರುವ ಒಟ್ಟು 46 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಸಿಸ್ಟೆಂಟ್​ ಮ್ಯಾನೇಜರ್​, ಟೆಕ್ನಿಕಲ್​ ಆಫೀಸರ್​ ಸೇರಿದಂತೆ ಹಲವು ಹುದ್ದೆಗಳ ನೇಮಕಾತಿ ನಡೆಯಲಿದ್ದು, ಅಭ್ಯರ್ಥಿಗಳು ಆನ್​ಲೈನ್​ ಮೂಲಕ …

Read More »

ಗುದ್ದಲಿಯಿಂದ ಹೊಡೆದು ಅಣ್ಣ, ಅತ್ತಿಗೆಯನ್ನೇ ಕೊಂದು ಪೊಲೀಸ್​ ಠಾಣೆಗೆ ಬಂದ ತಮ್ಮ

ಮೈಸೂರು : ಗೋಮಾಳದ ಜಾಗದಲ್ಲಿ ತನಗೂ ಪಾಲು ಬೇಕು ಎಂದು ಜಗಳ ತೆಗೆದು, ಸಹೋದರನೊಬ್ಬ ಜಮೀನಿನಲ್ಲೇ ಅಣ್ಣ, ಅತ್ತಿಗೆಯನ್ನು ಗುದ್ದಲಿಯಿಂದ ತಲೆಗೆ ಹೊಡೆದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಟಿ ನರಸೀಪುರ ತಾಲೂಕಿನ ನುಗ್ಗೆನಹಳ್ಳಿ ಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಕೊಲೆ ಬಳಿಕ ಆರೋಪಿ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಟಿ. ನರಸೀಪುರ ತಾಲೂಕಿನ ನುಗ್ಗೆನಹಳ್ಳಿ ಕೊಪ್ಪಲು ಗ್ರಾಮದ ಸಮೀಪದ ಜೀನುಗುಡ್ಡ ಬಳಿ ಸುಮಾರು 170 ಎಕರೆ ಗೋಮಾಳವಿದೆ. …

Read More »

ಶ್ರೀರಾಘವೇಂದ್ರಸ್ವಾಮಿಗಳ 352ನೇ ಆರಾಧನ ಮಹೋತ್ಸವಕ್ಕೆ ಶ್ರೀ ಸುಬುಧೇಂದ್ರ ತೀರ್ಥರು ಚಾಲನೆ ನೀಡಿದರು.

ರಾಯಚೂರು: ಮಂತ್ರಾಲಯ ಶ್ರೀರಾಘವೇಂದ್ರಸ್ವಾಮಿ‌ಗಳ 352ನೇ ಆರಾಧನೆ ಮಹೋತ್ಸವಕ್ಕೆ ಶ್ರೀಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಮಂಗಳವಾರ ಚಾಲನೆ ನೀಡಿದರು. ಶ್ರೀಮಠದ ಮುಂಭಾಗದಲ್ಲಿ ಗೋ ಪೂಜೆ, ಧಾನ್ಯ ಪೂಜೆ, ಆಶ್ವ, ಒಂಟೆ ಪೂಜೆ ಹಾಗೂ ಧ್ವಜಾರೋಹಣ ನೆರವೇರಿಸಿ ಏಳು ದಿನಗಳ ಸಪ್ತ ಮಹೋತ್ಸವಕ್ಕೆ ಅದ್ಧೂರಿಯಾಗಿ ಚಾಲನೆ ನೀಡಲಾಯಿತು. ಬೆಳಗ್ಗೆ ರಾಯರ ಮೂಲ‌ ಬೃಂದಾವನಕ್ಕೆ ಅಭಿಷೇಕ ಹಾಗೂ ವಿಶೇಷ ಪೂಜೆ ಕೈಂಕರ್ಯಗಳು ಜರುಗಿದವು. ಪೀಠಾಧಿಪತಿ ಶ್ರೀಸುಬುಧೇಂದ್ರ ತೀರ್ಥರಿಂದ ಮೂಲ ರಾಮದೇವರ ಪೂಜೆ ನೆರವೇರಿಸಲಾಯಿತು. …

Read More »

ಮನೆಯ ಯಜಮಾನಿಯರ ಖಾತೆಗೆ ಒಂದೇ ಸಮಯಕ್ಕೆ ಬರಲಿದೆ 2000 ರೂಪಾಯಿ

ಬೆಂಗಳೂರು: ಬುಧವಾರ ಕಾಂಗ್ರೆಸ್ ಸರ್ಕಾರದ ಬಹುನಿರೀಕ್ಷಿತ ನಾಲ್ಕನೇ ಗ್ಯಾರಂಟಿ ಗೃಹಲಕ್ಷ್ಮಿ ಯೋಜನೆ ಲೋಕಾರ್ಪಣೆಯಾಗಲಿದೆ. ಮೈಸೂರಲ್ಲಿ ರಾಹುಲ್ ಗಾಂಧಿ ಸಮ್ಮುಖದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಹತ್ವಾಕಾಂಕ್ಷೆಯ ಯೋಜನೆಗೆ ಚಾಲನೆ ನೀಡಲಿದ್ದಾರೆ. ಕೊನೆಗೂ ಹಲವು ದಿನಾಂಕಗಳ ಬಳಿಕ ಬೆಳಗ್ಗೆ ಮೈಸೂರಿನಲ್ಲಿ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆ ಗೃಹಲಕ್ಷ್ಮಿ ಜಾರಿಯಾಗಲಿದೆ. ಸಮಾವೇಶದಲ್ಲಿ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಜನ‌ ಸೇರಿಸುವ ಮೂಲಕ ಶಕ್ತಿ ಪ್ರದರ್ಶನ ಮಾಡಲಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವದ ಐದು …

Read More »

ಮೈಸೂರು ಮಣಿಸಿ ಮಹಾರಾಜ ಟ್ರೋಫಿ ಚಾಂಪಿಯನ್ ಪಟ್ಟ ಅಲಂಕರಿಸಿದ ಹುಬ್ಬಳ್ಳಿ

ಬೆಂಗಳೂರು : ರೋಚಕ ಫೈನಲ್ ಕಾದಾಟದಲ್ಲಿ ಮೈಸೂರು ವಾರಿಯರ್ಸ್ ತಂಡವನ್ನು 8 ರನ್‌ಗಳಿಂದ ಸೋಲಿಸಿದ ಹುಬ್ಬಳ್ಳಿ ಟೈಗರ್ಸ್ ಮಹಾರಾಜ ಟ್ರೋಫಿಯ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಮೈಸೂರು ಬೌಲರ್‌ಗಳ ವಿರುದ್ಧ ಬ್ಯಾಟಿಂಗ್​ನಲ್ಲಿ ಮೇಲುಗೈ ಸಾಧಿಸಿದ ಮೊಹಮ್ಮದ್ ತಾಹಾ, ಮನೀಶ್ ಪಾಂಡೆ ಹಾಗೂ ಮನ್ವಂತ್ ಕುಮಾರ್ ಉತ್ತಮ ಬೌಲಿಂಗ್ ನೆರವಿನಿಂದ ಹುಬ್ಬಳ್ಳಿ ಗೆದ್ದು ಬೀಗಿತು. ಮಹಾರಾಜ ಟ್ರೋಫಿ ಫೈನಲ್​ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತ ಹುಬ್ಬಳ್ಳಿ ಟೈಗರ್ಸ್ ಮೊದಲು ಬ್ಯಾಟ್ ಮಾಡಿತು. ಎರಡನೇ …

Read More »