ಇಂಫಾಲ (ಮಣಿಪುರ): ಈಶಾನ್ಯ ರಾಜ್ಯ ಮಣಿಪುರದಲ್ಲಿ ಭಾನುವಾರ ಮತ್ತೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಇಂಫಾಲ ಪೂರ್ವ ಜಿಲ್ಲೆಯಲ್ಲಿ ದುಷ್ಕರ್ಮಿಗಳು ಹೊಸದಾಗಿ ಐದು ಮನೆಗಳಿಗೆ ಬೆಂಕಿ ಹಚ್ಚಿದ್ದಾರೆ. ಇದರಿಂದ ಸ್ಥಳೀಯ ನಿವಾಸಿಗಳು ಹಾಗೂ ಭದ್ರತಾ ಪಡೆಗಳ ಸಿಬ್ಬಂದಿ ನಡುವೆ ಘರ್ಷಣೆ ಕೂಡ ಭುಗಿಲೆದ್ದಿದೆ. ಮೇ 3ರಿಂದ ಮಣಿಪುರ ರಾಜ್ಯಾದ್ಯಂತ ನಿರಂತರವಾಗಿ ಹಿಂಸಾಚಾರ ನಡೆಯುತ್ತಿದೆ. ಆಗಸ್ಟ್ 29ರಂದು ರಾಜ್ಯ ವಿಧಾನಸಭೆಯ ಅಧಿವೇಶನ ಕರೆಯಲಾಗಿದೆ. ಇದರ ನಡುವೆ ಇಂಫಾಲ ಪೂರ್ವ ಜಿಲ್ಲೆಯ ನ್ಯೂ ಲಂಬುಲೇನ್ ಪ್ರದೇಶದಲ್ಲಿ …
Read More »ಸಾಲಾಬಾಧೆಯಿಂದ ಹಾವೇರಿಯಲ್ಲಿ ಇಬ್ಬರು ರೈತರು ಆತ್ಮಹತ್ಯೆ.
ಹಾವೇರಿ : ಜಿಲ್ಲೆಯಲ್ಲಿ ರವಿವಾರ ಇಬ್ಬರು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಜಿಲ್ಲೆ ರಾಣೆಬೆನ್ನೂರು ತಾಲೂಕಿನ ತುಮ್ಮಿನಕಟ್ಟಿಯಲ್ಲಿ ಗಿರೀಶ್ ಮುರ್ಡೆಪ್ಪನವರ್ ಮೃತಪಟ್ಟಿದ್ದರೆ, ಮತ್ತೊಂದು ಕಡೆ ಬ್ಯಾಡಗಿ ತಾಲೂಕಿನ ಶೀಡೆನೂರು ಗ್ರಾಮದ ನಾಗೇಶಪ್ಪ ಕೊಡಗದ್ದಿ (50) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಿರೀಶ್ ಬ್ಯಾಂಕ್‌ನಲ್ಲಿ ನಾಲ್ಕು ಲಕ್ಷ ರೂಪಾಯಿ ಸಾಲ ಮತ್ತು ಸೊಸೈಟಿಯಲ್ಲಿ ಎರಡು ಲಕ್ಷ ಮತ್ತು ಕೈಗಡ ಒಂದೂವರೆ ಲಕ್ಷ ಸಾಲ ಮಾಡಿದ್ದ. ತಮ್ಮ ಮನೆಯಲ್ಲಿ ಗಿರೀಶ್ ಸಾವಿಗೆ ಶರಣಾಗಿದ್ದಾರೆ. ಈ ಕುರಿತಂತೆ ಹಲಗೇರಿ …
Read More »ರಾಜೀವ್ ಗಾಂಧಿ ವಿವಿಗೆ ಸೇರಿದ ಮೆಡಿಕಲ್ ಕಾಲೇಜು ಸ್ಥಳಾಂತರ ಮಾಡುವುದು ಬೇಡ.:H.D.K.
ರಾಮನಗರ : ರೇಷ್ಮೆನಗರಿ ರಾಮನಗರದಲ್ಲಿ ರಾಜೀವ್ ಗಾಂಧಿ ವಿವಿಗೆ ಸೇರಿದ ಮೆಡಿಕಲ್ ಕಾಲೇಜು ಸ್ಥಳಾಂತರ ಮಾಡುವುದು ಬೇಡ. ಮೈತ್ರಿ ಸರ್ಕಾರದ ಅವಧಿಯಲ್ಲಿ ಕನಕಪುರಕ್ಕೆ ನಾನೇ ಮೆಡಿಕಲ್ ಕಾಲೇಜಿಗೆ 100 ಕೋಟಿ ಹಣ ಕೊಟ್ಟಿದ್ದೆ. ಡಿ ಕೆ ಶಿವಕುಮಾರ್ ಆಗ ವೈದ್ಯಕೀಯ ಸಚಿವರಾಗಿದ್ದರು. ಟೆಂಡರ್ ಕೊಟ್ಟಿದ್ದೂ ಕೂಡಾ ಇನ್ನೂ ಜೀವಂತವಾಗಿದೆ. ಆ ಬಳಿಕ ಬಿಜೆಪಿ ಸರ್ಕಾರ ಬಂದು ಕನಕಪುರಕ್ಕೆ ಕೊಟ್ಟಿದ್ದ ಕಾಲೇಜನ್ನು ಚಿಕ್ಕಬಳ್ಳಾಪುರಕ್ಕೆ ತೆಗೆದುಕೊಂಡು ಹೋಯಿತು. ಈಗ ನಿಮ್ಮದೇ ಸರ್ಕಾರ ಇದೆ. ನಾನು …
Read More »ಜಪ್ತಿ ಮಾಡಿದ ಡ್ರಗ್ಸ್ ಮಾರಾಟಕ್ಕೆ ಯತ್ನ ಆರೋಪ: ಹೈದರಾಬಾದ್ನಲ್ಲಿ ಎಸ್‌ಐ ಅರೆಸ್ಟ್
ಹೈದರಾಬಾದ್ (ತೆಲಂಗಾಣ): ತೆಲಂಗಾಣ ರಾಜಧಾನಿ ಹೈದರಾಬಾದ್ನಲ್ಲಿ ಡ್ರಗ್ಸ್ ಪ್ರಕರಣದಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ವೊಬ್ಬರು ಸಿಕ್ಕಿ ಬಿದ್ದಿದ್ದಾರೆ. ಪೊಲೀಸ್ ದಾಳಿ ವೇಳೆ ವಶಪಡಿಸಿಕೊಂಡ ಡ್ರಗ್ಸ್ ಕದ್ದು ಅದನ್ನೇ ಮಾರಾಟ ಮಾಡಲು ಎಸ್‌ಐ ಯತ್ನಿಸುತ್ತಿದ್ದ. ಆರೋಪಿ ಮನೆಯಲ್ಲಿ ಪತ್ತೆಯಾದ ಸುಮಾರು 1,775 ಗ್ರಾಂ ಎಂಡಿಎಂಎ ಡ್ರಗ್ಸ್ಅನ್ನು ತಮ್ಮ ಬಳಿ ಈ ಎಸ್‌ಐ ಇಟ್ಟುಕೊಂಡಿದ್ದ ಎಂದು ವರದಿಯಾಗಿದೆ. ಸೈಬರಾಬಾದ್ ಪೊಲೀಸ್ ಕಮಿಷನರೇಟ್‌ನ ಸೈಬರ್ ಕ್ರೈಂ ವಿಭಾಗದಲ್ಲಿ (ಸಿಸಿಎಸ್) ಕಾರ್ಯನಿರ್ವಹಿಸುತ್ತಿದ್ದ ಕೆ.ರಾಜೇಂದರ್ ಎಂಬಾತನೇ ಬಂಧಿತ ಎಸ್‌ಐ. ರಾಜೇಂದರ್ …
Read More »ಶಾಲಾ ಕೊಠಡಿ ಕಾಮಗಾರಿಗೆ ಪಂಚರು ಗ್ರಾಮಸ್ಥರ ಸಮ್ಮುಖದಲ್ಲಿ ಶಾಲಾ ಕಟ್ಟಡ ಕಾಮಗಾರಿಗೆ ಪೂಜೆ
ಶಾಲಾ ಕೊಠಡಿ ಕಾಮಗಾರಿಗೆ ಪಂಚರು ಗ್ರಾಮಸ್ಥರ ಸಮ್ಮುಖದಲ್ಲಿ ಶಾಲಾ ಕಟ್ಟಡ ಕಾಮಗಾರಿಗೆ ಪೂಜೆ ಸಲ್ಲಿಸಿದರು. ಅಥಣಿ ತಾಲ್ಲೂಕಿನ ಸಪ್ತಸಾಗರ ಗ್ರಾಮದ ಹಾಳದಲ್ಲಿ ಸರಕಾರಿ ಪ್ರೌಢಶಾಲೆಗೆ ಅವಶ್ಯಕತೆವಿರುವ ಒಂದು ಕೊಠಡಿ ಮಂಜೂರುಗೊಂಡಿರುವದರಿಂದ ಅದಕ್ಕೆ ಸ್ಥಳಾವಕಾಶದ ಕೊರತೆ ಇತ್ತು. ಸ್ಥಳಕ್ಕೆ ಭೂಮಿ ಅವಶ್ಯವಿರುವದರಿಂದ ಭಾನುವಾರದಂದು ಗ್ರಾಮಸ್ಥರ ಸಮ್ಮುಖದಲ್ಲಿ ಸಭೆ ಕರೆದು ಭೂಮಿಯನ್ನ ಗ್ರಾಮದ ಬ್ರಹ್ಮದೇವರ ಗಡ್ಡೆ ಶ್ರೀವಿಠ್ಠಲ ದೇವರ ತರ್ಪಿ ಇರುವ ಐದು ಜನರ ಪಂಚರ ಹೆಸರಿನಲ್ಲಿರುವ ದೇವಸ್ಥಾನ ಭೂಮಿಯಲ್ಲಿ ಕಟ್ಟಡಕ್ಕೆ ಒಕ್ಕೋರಲ …
Read More »ಅನ್ಯಕೋಮಿನ 10 ರಿಂದ 12 ಜನ ಯುವಕರ ತಂಡ ಹಿಂದೂ ಯುವಕನ ಮೇಲೆ ದಾಳಿ
ಬೆಳಗಾವಿ, ಆ.27: ರಾಜ್ಯದಲ್ಲಿ ನೈತಿಕ ಪೊಲೀಸ್ ಗಿರಿ(Moral Policing) ಪ್ರಕರಣಗಳು ಹೆಚ್ಚುತ್ತಲೇ ಇವೆ. ಅನ್ಯಕೋವಿನ ವಿದ್ಯಾರ್ಥಿನಿಯನ್ನು ಪ್ರೀತಿಸುತ್ತಿದ್ದಾನೆ ಎಂದು ಆರೋಪಿಸಿ ಅದೇ ಸಮುದಾಯದ ವಿದ್ಯಾರ್ಥಿಗಳು ಕಿಡ್ನಾಪ್ ಮಾಡಿ ಹಲ್ಲೆ ನಡೆಸಿದ್ದ ಘಟನೆ ಮಂಗಳೂರಿನಲ್ಲಿ ನಡೆದಿತ್ತು(Group Attack). ಈಗ ಬೆಳಗಾವಿ ನಗರದ ಖಂಜರ್ ಗಲ್ಲಿ ದರ್ಗಾ ಬಳಿ ನೈತಿಕ ಪೊಲೀಸ್ಗಿರಿ ಪ್ರಕರಣ ಕಂಡು ಬಂದಿದೆ. ಅನ್ಯಕೋವಿನ ಯುವತಿ ಜೊತೆ ಬಂದಿದ್ದ ಹಿಂದೂ ಯುವಕನ ಮೇಲೆ 10ರಿಂದ 12 ಯುವಕರ ಗುಂಪು ಹಲ್ಲೆ ನಡೆಸಿದೆ. …
Read More »ಬೆಳಗಾವಿಯ ಪೋಸ್ಟ್ ಮೆಟ್ರಿಕ್ ಹಾಸ್ಟೆಲ್ ಊಟದಲ್ಲಿ ಹುಳು: ವಿದ್ಯಾರ್ಥಿಗಳಿಂದ ದೂರು
: ಬೆಳಗಾವಿಯ (Belagavi) ಬೈಲಹೊಂಗಲ ತಾಲೂಕಿನ ಸರ್ಕಾರಿ ವಸತಿ ನಿಲಯದ ಊಟದಲ್ಲಿ ಹುಳುಗಳು ಪತ್ತೆಯಾಗಿವೆ. ತಾಲೂಕಿನ ಎಸ್ಸಿ ಎಸ್ಟಿ (SC, ST) ಪೋಸ್ಟ್ ಮೆಟ್ರಿಕ್ ಬಾಲಕರ ವಸತಿ ನಿಲಯದಲ್ಲಿ (Post-matric SC-ST boys hostel) ನೀಡುವ ಆಹಾರದಲ್ಲಿ ಹುಳುಗಳು ಪತ್ತೆಯಾಗಿವೆ. ಅದಷ್ಟೇ ಅಲ್ಲದೆ ಹಾಸ್ಟೆಲ್ನಲ್ಲಿ ಹಸಿ ರೊಟ್ಟಿ, ಅರೆಬೆಂದ ಇಡ್ಲಿ, ಮಸಾಲೆಗಳಿಲ್ಲದ ಸಾರನ್ನು ನೀಡಲಾಗುತ್ತದೆ ಎಂದು ವಿದ್ಯಾರ್ಥಿಗಳು ದೂರಿದ್ದಾರೆ. ಅರೆ ಬೆಂದ ಹುಳು ಮಿಶ್ರಿತ ಆಹಾರ ಸೇವನೆಯಿಂದ ವಿದ್ಯಾರ್ಥಿಗಳು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. …
Read More »ಪ್ರಲ್ಹಾದ್ ಜೋಶಿ ಅವರು ನಮಗೆ ಭ್ರಷ್ಟಾಚಾರಿಗಳು ಅಂತಾರೆ. ಅನಿಲ್ ಅಂಬಾನಿ ಕಂಪನಿ ಅವರು ಒಂದು ಸೈಕಲ್ ನೂ ಮಾಡಿಲ್ಲ. ಅವರಿಗೆ ಹೆಲಿಕಾಪ್ಟರ್ ಮಾಡಲು ಕೊಟ್ಟಿದ್ದಾರೆ.
ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಮಾಡಿದ ಸಾಧನೆ ಪ್ರಚಾರ ಗಿಟ್ಟಿಸಿಕೊಳ್ಳೋದು, ಅದನ್ನು ಬಿಟ್ಟು ದೇಶಕ್ಕೆ ಯಾವುದೇ ಲಾಭವಾಗಿಲ್ಲ ಎಂದು ಸಚಿವ ಸಂತೋಷ ಲಾಡ್ ಕಿಡಿಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅವರು 10 ವರ್ಷ ಆಯ್ತು ಲೋಕ್ ಪಾಲ್ ಬಗ್ಗೆ ಪಾರ್ಲಿಮೆಂಟ್ ನಲ್ಲಿ ಮಾತನಾಡುತ್ತಿಲ್ಲ, ಆದರೆ ಕಾಂಗ್ರೆಸ್ ಪಕ್ಷದ ಬಗ್ಗೆ ಬಹಳ ಮಾತನಾಡುತ್ತಿದ್ದಾರೆ. ಈಗಾಗಲೇ ಕ್ಯಾಗ್ ರಿಪೋರ್ಟ್ ಬಂದಾಗಿದೆ. ರೆಫೈಲ್ ಡೀಲ್ ಮುಚ್ಚಿ ಹೋಗಿದೆ ನಾನು ಮಾತನಾಡಲ್ಲ, ಈಗಿರುವ …
Read More »ಸಮಾಜ ಸೇವಕಿ ಪುಷ್ಪಾ ಬಾಳಾಸಾಹೇಬ್ ಕೋರೆ ನಿಧನ
ಕಾಗವಾಡ ತಾಲೂಕಿನ ಶೇಡಬಾಳ ಸ್ಟೇಷನ್ ಗ್ರಾಮದ ಹಿರಿಯ ಸಮಾಜ ಸೇವೆಗೆ ಶ್ರೀಮತಿ ಪುಷ್ಪಾ ಬಾಳಾಸಾಹೇಬ್ ಕೋರೆ, ಅವರು ನಿಧನರಾಗಿದ್ದಾರೆ ತಮ್ಮ 56 ವಯಸ್ಸಿನಲ್ಲಿ ಶನಿವಾರ ಸಂಜೆ ಆಕಸ್ಮಿಕವಾಗಿ ನಿಧನ ಹೊಂದಿದರು ಮೃತರು ಶೀಡಬಾಳ ಪೋಸ್ಟ್ ಕಚೇರಿಯ ನಿವೃತ್ತ ಪೋಸ್ಟ್ ಮಾಸ್ಟರ್ ಬಾಳಾಸಾಹೇಬ್ ಕೋರೆ ಇವರ ಧರ್ಮಪತ್ನಿಯಾಗಿದ್ದರು, ಇಬ್ಬರ ಪುತ್ರಿಯರು ಮೊಮ್ಮಕ್ಕಳು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
Read More »ಕಾಂಗ್ರೆಸ್ ಪಕ್ಷಕ್ಕೆ ಇನ್ನೊಂದು ಹೆಸರೇ ಭ್ರಷ್ಟಾಚಾರ: ಪ್ರಲ್ಹಾದ್ ಜೋಶಿ
ಕೋವಿಡ್ ಸೇರಿದಂತೆ ಇತರ ಹಗರಣಗಳ ತನಿಖೆಗೆ ಕಾಂಗ್ರೆಸ್ ಸರ್ಕಾರ ನೇಮಿಸಿದರುವ ನ್ಯಾಯಾಧೀಶ ಕಾಂಗ್ರೆಸ್’ನವರೇ ಅಗಿದ್ದಾರೆ. ದಿನಂಪ್ರತಿ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಮಾತನಾಡುವುದೇ ಕಾಯಕವಾಗಿದೆ. ಅಂತವರಿಂದ ತನಿಖೆ ಮಾಡಿಸುವ ಬದಲು ನೇರವಾಗಿ ಎಫ್ಐಆರ್ ಮಾಡಲಿ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಇನ್ನೊಂದು ಹೆಸರೇ ಭ್ರಷ್ಟಾಚಾರ. ಯುಪಿಐ ಅವಧಿಯಲ್ಲಿ 12 ಲಕ್ಷ ಕೋಟಿ ಭ್ರಷ್ಟಾಚಾರ ಆಗಿದೆ. …
Read More »
Laxmi News 24×7