Breaking News

ರಾಜ್ಯ

ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಪದ ಬಳಕೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ನಟ ಉಪೇಂದ್ರ ಅವರ ವಿರುದ್ಧ F.I.R.​ ದಾಖಲ

ಬೆಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಪದ ಬಳಕೆ ಮಾಡಿರುವ ಆರೋಪದಡಿ ನಟ, ನಿರ್ದೇಶಕ ಉಪೇಂದ್ರ ವಿರುದ್ಧ ಪ್ರಥಮ ವರ್ತಮಾನ ವರದಿ (ಎಫ್‌ಐಆರ್) ದಾಖಲಾಗಿದೆ. ಜಾತಿಯೊಂದರ ಭಾವನೆಗಳಿಗೆ ಧಕ್ಕೆಯಾಗುವ ಪದ ಬಳಸಿದ್ದಾರೆ ಎಂದು ಚೆನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಧುಸೂದನ್ ಅವರು ದೂರು ನೀಡಿದ್ದರು. ಇತ್ತೀಚಿಗೆ ತಮ್ಮ ಸಾಮಾಜಿಕ ಜಾಲತಾಣ ಖಾತೆಯ ನೇರಪ್ರಸಾರದಲ್ಲಿ ಮಾತನಾಡಿದ್ದ ಉಪೇಂದ್ರ ಸಮುದಾಯವೊಂದರ ಕುರಿತು ಆಕ್ಷೇಪಾರ್ಹ …

Read More »

ಹೊಸಕೋಟೆ ಮತ್ತು ಬೆಳಗಾವಿಯಲ್ಲಿ ವಿದ್ಯುತ್ ಕಂಬ ದುರಸ್ತಿ ಮಾಡುತ್ತಿದ್ದಾಗ ವಿದ್ಯುತ್ ಪ್ರವಹಿಸಿ ಇಬ್ಬರು ಲೈನ್‌ಮ್ಯಾನ್‌ಗಳು ಸಾವನ್ನಪ್ಪಿದ್ದಾರೆ.

(ಬೆ. ಗ್ರಾ)/ಬೆಳಗಾವಿ : ಪ್ರತ್ಯೇಕ ಕಡೆಗಳಲ್ಲಿ ವಿದ್ಯುತ್‌ ಕಂಬದ ಮೇಲೆ ಕೆಲಸ ಮಾಡುವಾಗ ಹೈ ವೋಲ್ಟೇಜ್ ವಿದ್ಯುತ್ ಪ್ರವಹಿಸಿ ಇಬ್ಬರು ಲೈನ್‌ಮ್ಯಾನ್​ಗಳು​ ಸಾವನ್ನಪ್ಪಿದ್ದಾರೆ. ಮೃತರನ್ನು ಕೋಲಾರ ಜಿಲ್ಲೆಯವ ಅನಿಲ್ (35) ಮತ್ತು ಬೆಳಗಾವಿ ಜಿಲ್ಲೆ ಚಿಕ್ಕೋಡಿ ಪಟ್ಟಣದ ಸಿದ್ದರಾಮ ಕುಪವಾಡೆ (38) ಎಂದು ಗುರುತಿಸಲಾಗಿದೆ. ಪ್ರಕರಣ -1: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಮಾಲೂರು ರಸ್ತೆಯ ವಿಜಯನಗರ ಗೇಟ್ ಬಳಿ ಅನಿಲ್ ಕೆಲಸ ಮಾಡುವಾಗ ಘಟನೆ ನಡೆಯಿತು. ಬೆಸ್ಕಾಂನಲ್ಲಿ ಗುತ್ತಿಗೆ …

Read More »

ಸಾಯುವ ಕೊನೆಕ್ಷಣದಲ್ಲಿ ವಿಡಿಯೋ ಮಾಡಿದ ಪ್ರಿಯಕರನೊಬ್ಬ, ಪ್ರಿಯತಮೆಗೆ ತನ್ನ ಅಂತ್ಯಕ್ರಿಯೆಗೆ ಬರುವಂತೆ ಆಹ್ವಾನ ನೀಡಿ ಅಸುನೀಗಿದ್ದಾನೆ.

ಬೆಂಗಳೂರು): ರೋಗ ಉಲ್ಬಣಗೊಂಡು ಸಾಯುವ ಕೊನೆಕ್ಷಣದಲ್ಲಿ ವಿಡಿಯೋ ಮಾಡಿದ ಪ್ರಿಯಕರನೊಬ್ಬ, ಪ್ರಿಯತಮೆಗೆ ತನ್ನ ಅಂತ್ಯಕ್ರಿಯೆಗೆ ಬರುವಂತೆ ಆಹ್ವಾನ ನೀಡಿ ಅಸುನೀಗಿದ್ದಾನೆ. ನೆಲಮಂಗಲ ತಾಲೂಕಿನ ದಾಬಸ್ ಪೇಟೆಯ ಕಿರಣ್ (22) ಮೃತಪಟ್ಟ ಯುವಕ. ಆಗಸ್ಟ್ 9ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಘಟನೆಯ ವಿವರ: ಕಿರಣ್ ರೇಬೀಸ್ ರೋಗದಿಂದಾಗಿ ಸಾವು-ಬದುಕಿನ ನಡುವೆ ಹೋರಾಟ ಮಾಡುತ್ತಿದ್ದ. ಯುವಕನಿಗೆ ತನ್ನ ಸಾವಿನ ಕ್ಷಣಗಳು ಸಮೀಪಿಸುತ್ತಿರುವ ಅರಿವಾಗಿತ್ತು. ಹೀಗಾಗಿ, ಪ್ರೀತಿಸಿದ ಹುಡುಗಿಯ ನೆನಪಾಗಿ ಬದುಕಿನ ಕಡೇಯ ಕ್ಷಣಗಳಲ್ಲಿ …

Read More »

ಅತಿಲೋಕ ಸುಂದರಿ ಶ್ರೀದೇವಿ ನೆನೆದ ಗೂಗಲ್​ ಡೂಡಲ್​

ಬಾಲಿವುಡ್​ ಲೇಡಿ ಸೂಪರ್​ ಸ್ಟಾರ್​ ಶ್ರೀದೇವಿ ಹುಟ್ಟಿದ ದಿನವಿಂದು. ಡೂಡಲ್​ನಲ್ಲಿ ಅತಿಲೋಕ ಸುಂದರಿಯ ಚಿತ್ರವನ್ನು ಹಂಚಿಕೊಂಡು, ಗೂಗಲ್​ ಜನ್ಮದಿನದ ಶುಭಕೋರಿದೆ. ಇಂದು ಬಾಲಿವುಡ್​ ನಟಿ ಶ್ರೀದೇವಿ ಹುಟ್ಟಿದ ದಿನ. ಅವರಿಂದು ನಮ್ಮೊಂದಿಗೆ ಇದ್ದಿದ್ದರೆ ತಮ್ಮ 60ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದರು. 90ರ ದಶಕದಲ್ಲಿ ಬಣ್ಣದ ಲೋಕವನ್ನಾಳಿ ಮಿಂಚಿ ಮರೆಯಾದ ಈ ನಟಿಗೆ ಈಗಲೂ ದೊಡ್ಡ ಅಭಿಮಾನಿಗಳ ದಂಡಿದೆ. ಈ ವಿಶೇಷ ದಿನದಂದು ಫ್ಯಾನ್ಸ್ ಅವರನ್ನು ನೆನೆದು ಬೇಸರ ಪಡುತ್ತಿದ್ದಾರೆ. ಇದೀಗ …

Read More »

ಬೆಂಗಳೂರಿನ ಹೋಟೆಲ್​ ಟಾರ್ಗೆಟ್ ಮಾಡಿ ಬಾಂಬ್ ಬೆದರಿಕೆ

ಬೆಂಗಳೂರು : ಸ್ವಾತಂತ್ರ್ಯ ದಿನಾಚರಣೆ ಸಮೀಪದಲ್ಲಿರುವಾಗಲೇ ಕೆಲ ಕಿಡಿಗೇಡಿಗಳು ಬೆಂಗಳೂರಿನ ಹೋಟೆಲ್​ ಟಾರ್ಗೆಟ್ ಮಾಡಿ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದಾರೆ. ಪ್ರತಿಷ್ಠಿತ ಐಶಾರಾಮಿ ಹೋಟೆಲ್​ಗಳಲ್ಲಿ ಒಂದಾದ ಶಾಂಗ್ರೀಲಾಗೆ ಬಾಂಬ್ ಬೆದರಿಕೆ ಇ-ಮೇಲ್ ರವಾನಿಸಲಾಗಿದೆ‌. ಬೆಂಗಳೂರಿನ ಶಾಂಗ್ರೀಲಾ ಹೋಟೆಲ್ ಸೇರಿ ದೇಶದ ಎಲ್ಲಾ ಬ್ರಾಂಚ್​ಗೂ ಬಾಂಬ್ ಬೆದರಿಕೆ ಹಾಕಿದ್ದಾರೆ. luisamaclare@proton.me ಎಂಬ ಇ -ಮೇಲ್ ಐಡಿ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಎಲ್ಲ ಬ್ರಾಂಚ್​ಗಳಲ್ಲೂ ಬಾಂಬ್ ಇಟ್ಟಿರೋದಾಗಿ ತಿಳಿಸಿದ್ದಾರೆ. ಬೆದರಿಕೆ ಸಂದೇಶ ಬಂದ …

Read More »

ಸ್ವಾತಂತ್ರ್ಯ ದಿನಾಚರಣೆಗೆ ಕೇವಲ ಎರಡು ದಿನಗಳು ಬಾಕಿ ಉಳಿದಿದ್ದು, ರಾಷ್ಟ್ರ ರಾಜಧಾನಿಯ ಕೆಂಪು ಕೋಟೆಯಲ್ಲಿ ವಿವಿಧ ಸಶಸ್ತ್ರ ಪಡೆಗಳ ಸಂಪೂರ್ಣ ಉಡುಗೆ ಪೂರ್ವಾಭ್ಯಾಸ

ನವದೆಹಲಿ: ಆ.15 ರಂದು ನಡೆಯುವ ಸ್ವಾತಂತ್ರ್ಯ ದಿನಾಚರಣೆಯ ಪೂರ್ವಭಾವಿಯಾಗಿ, ಭಾರತೀಯ ಸಶಸ್ತ್ರ ಪಡೆಗಳ ಡ್ರೆಸ್ ರಿಹರ್ಸಲ್ ಇಂದು ಇಲ್ಲಿನ ರಾಷ್ಟ್ರೀಯ ರಾಜಧಾನಿಯ ಕೆಂಪು ಕೋಟೆಯಲ್ಲಿ ಪ್ರಾರಂಭವಾಗಿದೆ. ಇಂದಿನ ಫುಲ್ ಡ್ರೆಸ್ ರಿಹರ್ಸಲ್‌(ಸಂಪೂರ್ಣ ಉಡುಗೆ ಪೂರ್ವಾಭ್ಯಾಸ)ನಲ್ಲಿ ಮಿಲಿಟರಿ ಬ್ಯಾಂಡ್, ನೌಕಾ ಮತ್ತು ವಾಯುಪಡೆಯ ಘಟಕಗಳು ಸೇರಿದಂತೆ ವಿವಿಧ ತುಕಡಿಗಳು ಭಾಗವಹಿಸಿದ್ದವು. 77ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಭದ್ರತೆ ಬಿಗಿಗೊಳಿಸಲಾಗಿದೆ. ಭಾರತ ಮಂಗಳವಾರ ತನ್ನ 77ನೇ ಸ್ವಾತಂತ್ರ್ಯ ದಿನವನ್ನು ಆಚರಿಸಲಿದೆ. ಈ ಸಂದರ್ಭದಲ್ಲಿ ಪ್ರಧಾನ …

Read More »

ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದುಭೀಕರ ರಸ್ತೆ ಅಪಘಾತ

ಚಿತ್ರದುರ್ಗ: ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದುಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ದಂಪತಿ ಸೇರಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ದುರ್ಘಟನೆ ಚಿತ್ರದುರ್ಗ ಗ್ರಾಮಾಂತರ ಪೊಲೀಸ್​ ಠಾಣೆ ವ್ಯಾಪ್ತಿಯ ಮಲ್ಲಾಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ನಡೆದಿದೆ. ಮೃತರನ್ನು ಸಂಗನಬಸವ (36), ರೇಖಾ (29), ಅಗಸ್ತ್ಯ (7) ಹಾಗೂ ಭೀಮಾಶಂಕರ್ (26) ಎಂದು ಗುರುತಿಸಲಾಗಿದೆ. ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಕುದರಿ ಸಾಲವಡಗಿ ಗ್ರಾಮದ ನಿವಾಸಿಗಳಾದ ಖಾಸಗಿ ಬ್ಯಾಂಕ್​​ ನೌಕರರಾಗಿರುವ …

Read More »

ಹೆರಿಗೆಗೆಂದು ತವರಿಗೆ ಬಂದ ಗರ್ಭಿಣಿ ಸಹೋದರಿ ಮೇಲೆ ಆಕೆಯ ಇಬ್ಬರು ಸಹೋದರರ ಅತ್ಯಾಚಾರ

(ಮಹಾರಾಷ್ಟ್ರ): ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ಅತ್ಯಂತ ನೀಚ ಹಾಗೂ ಹೀನ ಕೃತ್ಯವೊಂದು ವರದಿಯಾಗಿದೆ. ಹೆರಿಗೆಗೆಂದು ತವರಿಗೆ ಬಂದ ಏಳು ತಿಂಗಳ ಗರ್ಭಿಣಿ ಸಹೋದರಿ ಮೇಲೆ ಆಕೆಯ ಇಬ್ಬರು ಸಹೋದರರು ಅತ್ಯಾಚಾರ ಎಸಗಿರುವ ಆರೋಪ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ, ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ಇಲ್ಲಿನ ಗಡ್ಚಿರೋಲಿ ಜಿಲ್ಲೆಯ ಗ್ರಾಮವೊಂದರಲ್ಲಿ ಸಂತ್ರಸ್ತೆ ಕೆಲವು ದಿನಗಳ ಹಿಂದೆ ಹೆರಿಗೆಗಾಗಿ ತನ್ನ ಪೋಷಕರ ಮನೆಗೆ ಬಂದಿದ್ದಳು. ಆಗಸ್ಟ್ 10ರಂದು …

Read More »

3 ಮಂದಿ ವಿರುದ್ಧ ದೂರು ದಾಖಲು: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ

ಬೆಳಗಾವಿ: ಆ ಕುಟುಂಬ ಬದುಕು ಕಟ್ಟಿಕೊಳ್ಳಲು ತಮ್ಮ ಹುಟ್ಟೂರು ಬಿಟ್ಟು ಬೆಳಗಾವಿಗೆ ವಲಸೆ ಬಂದಿತ್ತು. ಪ್ರಾಮಾಣಿಕವಾಗಿ ಕಷ್ಟ ಪಟ್ಟು ದುಡಿಯುತ್ತಿದ್ದವರಿಗೆ ಆ ದೇವರು ಮಾತ್ರ ಕೈ ಹಿಡಿಯಲಿಲ್ಲ. ಹೌದು, ವಿಧಿಯಾಟಕ್ಕೆ ಮೂರು ಅಮಾಯಕ ಜೀವಗಳು ಬಲಿಯಾಗಿವೆ. ಇಡೀ ಕುಟುಂಬವೇ ಕಣ್ಣೀರಿನಲ್ಲಿ ಕೈ ತೊಳೆಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಬೆಳಗಾವಿಯ ಶಾಹು ನಗರದ 7ನೇ ಕ್ರಾಸ್ ನ‌ ನಿರ್ಮಾಣ ಹಂತದ ಕಟ್ಟಡದಲ್ಲಿ ಶನಿವಾರ ಬೆಳಗ್ಗೆ ವಿದ್ಯುತ್ ಅವಘಡದಿಂದ ರಾಮದುರ್ಗ ತಾಲೂಕಿನ‌ ಅರಬೆಂಚಿ ತಾಂಡಾದ ಈರಪ್ಪ …

Read More »

ಬಹುಶಃ ನನ್ನ ಕೊನೆಯ ಚುನಾವಣೆ ಮುಗಿದಿದೆ, ಲೋಕಸಭೆಗೆ ಸ್ಪರ್ಧಿಸಲ್ಲ: ಬಸವರಾಜ ರಾಯರಡ್ಡಿ

ಕೊಪ್ಪಳ: ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಇಂದಿನ ರಾಜಕಾರಣ ನನಗೆ ಒಗ್ಗುವುದಿಲ್ಲ. 12 ಚುನಾವಣೆಗಳನ್ನು ಎದುರಿಸಿದ್ದೇನೆ. ಈಗಿನ ರಾಜಕೀಯ ವ್ಯವಸ್ಥೆ ಸರಿಯಿಲ್ಲ. ಬಹುಶಃ ನನ್ನ ಕೊನೆಯ ಚುನಾವಣೆ ಮುಗಿದಿದೆ ಎಂದು ಯಲಬುರ್ಗಾ ಶಾಸಕ ಬಸವರಾಜ ರಾಯರಡ್ಡಿ ಹೇಳಿದ್ದಾರೆ. ಶ್ರಾವಣ ಸಂಭ್ರಮ ಹೆಸರಿನಲ್ಲಿ ಕೊಪ್ಪಳದಲ್ಲಿ ಶನಿವಾರ ಪಕ್ಷದ ಕಾರ್ಯಕರ್ತರು ಹಾಗೂ ನಾಯಕರಿಗೆ ಅವರು ಆಯೋಜಿಸಿದ್ದ ಔತಣ ಕೂಟದ ವೇಳೆ ಮಾಧ್ಯಮದವರ ಜೊತೆ ಅವರು ಮಾತನಾಡಿದರು. ಭ್ರಷ್ಟಾಚಾರದ ವಿಷಯದಲ್ಲಿ ಕರ್ನಾಟಕ ಬ್ರ್ಯಾಂಡ್ ಆಗುತ್ತಿರುವುದು …

Read More »