Breaking News

ರಾಜ್ಯ

ರಾಜ್ಯ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಕಡೆಗಣಿಸುತ್ತಿದೆ ಎಂದು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರ ಪ್ರತಿಭಟನೆ

ರಾಜ್ಯ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಕಡೆಗಣಿಸುತ್ತಿದೆ ಎಂದು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ವಿಶ್ವವಿದ್ಯಾಲಯಗಳಿಗೆ ಸರ್ಕಾರ ಅನುದಾನ ಬಂದ್ ಮಾಡಿರುವುದರಿಂದ ವಿದ್ಯಾರ್ಥಿಗಳು ಜ್ವಲಂತ ಸಮಸ್ಯೆಗಳನ್ನು ಎದುರಿಸುವಂತಾಗಿದೆ. ಈ ಕೂಡಲೇ ಸರ್ಕಾರ ಎಚ್ಚೆತ್ತುಕೊಂಡು ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಬೇಕಾಗುವ ಅನುದಾನ ನೀಡಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಸಚಿವರಿಗೆ ಮುತ್ತಿಗೆ ಹಾಕಬೇಕಾಗುತ್ತದೆ ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಎಚ್ಚರಿಕೆ ನೀಡಿದರು. ವಿದ್ಯಾರ್ಥಿಗಳಿಗೆ …

Read More »

ಲೋಕಸಭಾ ಚುನಾವಣೆಯಲ್ಲಿ ನನಗೆ ಸ್ಪರ್ಧೆ ಮಾಡಿ ಎಂದು ಹೈಕಮಾಂಡ್ ಹೇಳಿಲ್ಲ. ಆದರೆ ಹೆಚ್ಚು ಸ್ಥಾನ ಗೆಲ್ಲಿಸುವಂತೆ ಸೂಚನೆ ನೀಡಿದ್ದಾರೆ :ಸತೀಶ ಜಾರಕಿಹೊಳಿ

ಲೋಕಸಭಾ ಚುನಾವಣೆಯಲ್ಲಿ ನನಗೆ ಸ್ಪರ್ಧೆ ಮಾಡಿ ಎಂದು ಹೈಕಮಾಂಡ್ ಹೇಳಿಲ್ಲ. ಆದರೆ ಹೆಚ್ಚು ಸ್ಥಾನ ಗೆಲ್ಲಿಸುವಂತೆ ತಯಾರಿ ನಡೆಸುವಂತೆ ಎಲ್ಲರಿಗೂ ಸೂಚನೆ ನೀಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಶನಿವಾರ ನಗರದ ಕುಮಾರ ಗಂಧರ್ವ ರಂಗ ಮಂದಿರದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಅತೀ ಹೆಚ್ಚು ಸ್ಥಾನ ಗೆಲ್ಲಿಸಬೇಕು. ಆದ್ದರಿಂದ ಈಗಿನಿಂದಲೇ ತಯಾರಿ ಮಾಡಿಕೊಳ್ಳಬೇಕೆಂದು ಇತ್ತೀಚೆಗೆ ದೆಹಲಿಯಲ್ಲಿ ನಡೆದ ಸಭೆಯಲ್ಲಿ …

Read More »

ಗೃಹಜ್ಯೋತಿ ಯೋಜನೆಗಾಗಿ ಬೆಳಗಾವಿ ಜಿಲ್ಲೆಗೆ ಪ್ರತಿವರ್ಷಕ್ಕೆ 516 ಕೋಟಿ ರೂಪಾಯಿಗಳನ್ನು ಸರಕಾರವು ನೀ ಡಲಿದೆ.:ಸತೀಶ್ ಜಾರಕಿಹೊಳಿ

ಗೃಹಜ್ಯೋತಿ ಯೋಜನೆಗಾಗಿ ಬೆಳಗಾವಿ ಜಿಲ್ಲೆಗೆ ಪ್ರತಿವರ್ಷಕ್ಕೆ 516 ಕೋಟಿ ರೂಪಾಯಿಗಳನ್ನು ಸರಕಾರವು ನೀಡಲಿದೆ. ಗ್ಯಾರಂಟಿ ಯೋಜನೆಗಳ ಮೂಲಕ ಪ್ರತಿ ಕುಟುಂಬಕ್ಕೆ ತಿಂಗಳಿಗೆ 4 ರಿಂದ 5 ಸಾವಿರ ರೂಪಾಯಿ ಖರ್ಚು ಮಾಡಲಿದೆ. ಇದು ಮಕ್ಕಳ ಶಿಕ್ಷಣ ಹಾಗೂ ಕುಟುಂಬ ನಿರ್ವಹಣೆಗೆ ಬಳಕೆಯಾಗಬೇಕು. ಅಂದಾಗ ಮಾತ್ರ ಸರಕಾರದ ಗ್ಯಾರಂಟಿ ಯೋಜನೆಗಳು ಸಾರ್ಥಕವಾಗಲಿವೆ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ನಗರದ ಕುಮಾರ್ ಗಂಧರ್ವ ಕಲಾಮಂದಿರದಲ್ಲಿ …

Read More »

ಬಲಗೈಯ ಹಸ್ತ, ಎಡಗಾಲನ್ನು ಕಟ್್ ಮಾಡಿ ಭೀಕರವಾಗಿ ಹತ್ಯೆ

ಓರ್ವನನ್ನು ಭೀಕರವಾಗಿ ಹತ್ಯೆಗೈದ ದುಷ್ಕರ್ಮಿಗಳು ಬಲಗೈಯ ಹಸ್ತ, ಎಡಗಾಲನ್ನು ಕಟ್್ ಮಾಡಿಕೊಂಡು ತೆಗೆದುಕೊಂಡು ಹೋದ ಘಟನೆ ವಿಜಯಪುರ ನಗರದ ಕನಕದಾಸ ಬಡಾವಣೆಯಲ್ಲಿ ಘಟನೆ ನಡೆದಿದೆ.   ಹತ್ಯೆಯಾಗಿರುವ ದುರ್ದೈವಿ ಹೆಸರು, ಮಾಹಿತಿ ಲಭ್ಯವಾಗಿಲ್ಲ. ಕಲ್ಲಿನಿಂದ ತಲೆಗೆ ಹೊಡೆದು ಹತ್ಯೆ ಮಾಡಲಾಗಿದೆ‌. ಅಲ್ಲದೇ, ಮುಖದ ಚಹರೆ ಸಿಗದಂತೆ ದುಷ್ಕರ್ಮಿಗಳು ಸುಟ್ಟು ಹಾಕಿದ್ದಾರೆ. ಜಲನಗರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More »

ಬುದ್ದಿವಂತರ ಜಿಲ್ಲೆಯ ಉಸ್ತುವಾರಿ ಜವಾಬ್ದಾರಿ ಸಿಕ್ಕಿದೆ. ನನ್ನ ಅದೃಷ್ಟ. : ಲಕ್ಷ್ಮಿ ಹೆಬ್ಬಾಳ್ಕರ್

ಉಡುಪಿ ಸಣ್ಣಪುಟ್ಟ ವ್ಯಾಜ್ಯಗಳನ್ನು ಕೆಳಹಂತದ ಕೋರ್ಟ್ ನಲ್ಲೆ ಇತ್ಯರ್ಥಗೊಳಿಸುವ ಮೂಲಕ ನ್ಯಾಯಾಧೀಶರು ಹಾಗೂ ವಕೀಲರು ಬಡ ಕಕ್ಷಿದಾರರ ಹಿತ ಕಾಯಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ಬ್ರಹ್ಮಾವರದಲ್ಲಿ ನೂತನವಾಗಿ ನಿರ್ಮಿಸಲಾದ ಸಂಚಾರಿ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ ಕೋರ್ಟ್ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಸಚಿವರು, ಇಡೀ ವಿಶ್ವಕ್ಕೆ ನಮ್ಮ ದೇಶದ ಕಾನೂನು ಮಾದರಿಯಾಗಿದ್ದು, …

Read More »

40 ಕೋಟಿ ಪಾಲಿಕೆ ಅನುದಾನ ಹಂಚಿಕೆಯಲ್ಲಿ ತಾರತಮ್ಯ: ಕೋರ್ಟ್ ಮೆಟ್ಟಿಲು ಏರಲು ಸಿದ್ಧ…!

ಅಧಿಕಾರದ ಚುಕ್ಕಾಣಿ ಹಿಡಿಯಲು ರಾಜಕಾರಣ ಮಾಡುವುದು ಸಹಜ. ಆದರೆ ಚುನಾಯಿತರಿಗೆ ಅನುದಾನ ನೀಡುವಲ್ಲಿ ತಾರತಮ್ಯ ಮಾಡಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ಈ ಪ್ರಕರಣ ವಿರುದ್ಧ ಚುನಾಯಿತ ಪ್ರತಿನಿಧಿಗಳು ಜಿಲ್ಲಾಧಿಕಾರಿಗೆ‌ ದೂರು ಸಲ್ಲಿಸಿದ್ದಾರೆ. ಅಷ್ಟಕ್ಕೂ ಏನಿದು ಸ್ಟೋರಿ ಅಂತೀರಾ ತೋರಿಸ್ತಿವಿ ನೋಡಿ..: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯರ ಅನುದಾನ ಹಂಚಿಕೆಯಲ್ಲಿ ತಾರತಮ್ಯದ ಆರೋಪವೊಂದು ಗಂಭೀರವಾಗಿ ಕೇಳಿಬಂದಿದೆ. ಹೌದು.. ಬಿಜೆಪಿ ತೆಕ್ಕೆಯಲ್ಲಿರೋ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಅನುದಾನ ತಾರತಮ್ಯ ಕೇಳಿ ಬಂದಿದ್ದು, 15 …

Read More »

ವಿಶ್ವ ಆರ್ಚರಿ ಚಾಂಪಿಯನ್​ಶಿಪ್​ನಲ್ಲಿ ಪ್ರಶ್ತಿ ಗೆದ್ದ ಭಾರತೀಯ ವನಿತೆಯರ ತಂಡಕ್ಕೆ ಪ್ರಧಾನಿ ಮೋದಿ ಮತ್ತು ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಭಕೋರಿದ್ದಾರೆ.

ನವದೆಹಲಿ : ಬರ್ಲಿನ್‌ನಲ್ಲಿ ನಡೆದ ವಿಶ್ವ ಆರ್ಚರಿ ಚಾಂಪಿಯನ್‌ಶಿಪ್ 2023 ರಲ್ಲಿ ಚಿನ್ನದ ಪದಕ ಗೆದ್ದ ಜ್ಯೋತಿ ಸುರೇಖಾ ವೆನ್ನಮ್, ಪರ್ನೀತ್ ಕೌರ್ ಮತ್ತು ಅದಿತಿ ಗೋಪಿಚಂದ್ ಸ್ವಾಮಿ ಅವರ ಭಾರತೀಯ ವನಿತೆಯ ತಂಡಕ್ಕೆ ಪ್ರಧಾನಿ ಮೋದಿ ಮತ್ತು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಭಿನಂದಿಸಿದ್ದಾರೆ.       ಟ್ವಿಟ್​ ಮಾಡಿರುವ ಮೋದಿ,”ನಮ್ಮ ಅಸಾಧಾರಣ ಸಂಯುಕ್ತ ಮಹಿಳಾ ತಂಡವು ಬರ್ಲಿನ್‌ನಲ್ಲಿ ನಡೆದ ವಿಶ್ವ ಆರ್ಚರಿ ಚಾಂಪಿಯನ್‌ಶಿಪ್‌ನಲ್ಲಿ …

Read More »

ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವು

ಚಿಕ್ಕೋಡಿ: ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವು ಸಂಭವಿಸಿದೆ ಎಂದು ಆರೋಪಿಸಿ ಕುಟುಂಬಸ್ಥರು ಸಂಕೇಶ್ವರ ಪೊಲೀಸ್ ಠಾಣೆ ಎದುರು ಬಾಣಂತಿ ಶವ ಇಟ್ಟು ದರಣಿ ನಡೆಸಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕೋಣಕೇರಿ ಗ್ರಾಮಸ್ಥೆ ಕಿರಣ ಮಹಾದೇವ ಟಿಕ್ಕೆ ಅವರನ್ನು ಹುಕ್ಕೇರಿ ತಾಲೂಕಿನ ನಿಡಸೋಸಿ ಸರ್ಕಾರಿ ಆರೋಗ್ಯ ಕೇಂದ್ರಕ್ಕೆ ಕಳೆದ ಹನ್ನೆರಡು ದಿನಗಳ ಹಿಂದೆ ಹೆರಿಗೆಗಾಗಿ ದಾಖಲಿಸಲಾಗಿತ್ತು. ನಂತರ ಶಸ್ತ್ರ ಚಿಕಿತ್ಸೆ ಮಾಡುವ ಮುಖಾಂತರ ಹೆರಿಗೆಯನ್ನು ಮಾಡಿಸಲಾಗಿತ್ತು, ಮೃತ ಕಿರಣಿ ಗಂಡು ಮಗುವಿಗೆ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ ಸವದತ್ತಿ ತಾಲೂಕಿನ ತಡಸಲೂರ ಗ್ರಾಮದಲ್ಲಿ

ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲೂಕಿನ ತಡಸಲೂರ ಗ್ರಾಮದಲ್ಲಿ ಶ್ರೀ ಹನುಮಾನ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ …

Read More »

ಕಲಬುರಗಿಯಲ್ಲಿಂದು ಗೃಹಜ್ಯೋತಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ,

ಕಲಬುರಗಿ, ಆ.05: ಕಾಂಗ್ರೆಸ್ ಪಕ್ಷ ಚುನಾವಣೆಗೆ ಮುನ್ನ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಿತ್ತು. ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳು ಮ್ಯಾಜಿಕ್ ಮಾಡಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಪೂರ್ಣ ಬಹುಮತ ಬಂದಿದೆ. ಇದೀಗ ಸರ್ಕಾರ ತಾನು ನೀಡಿರುವ ಗ್ಯಾರಂಟಿಗಳನ್ನು ಒಂದೊಂದಾಗಿ ಜಾರಿಗೊಳಿಸುತ್ತಿದೆ. ಇಂದು ಕಲಬುರಗಿಯಲ್ಲಿ 200 ಯುನಿಟ್ ವಿದ್ಯುತ್ ನ್ನು ಉಚಿತವಾಗಿ ನೀಡುವ ಗೃಹ ಜೋತಿ ಯೋಜನೆಗೆ(Gruha Jyothi Scheme) ಅಧಿಕೃತವಾಗಿ ಚಾಲನೆ ಸಿಗಲಿದೆ. ಬೆಳಗ್ಗೆ 11 ಗಂಟೆಗೆ ವೇದಿಕೆ ಮೇಲೆ 10 ಜನರಿಗೆ …

Read More »