ಬೆಂಗಳೂರು: ಕೇಂದ್ರ ಸರ್ಕಾರದ ವಿರುದ್ಧ ತೊಡೆತಟ್ಟಿರುವ ವಿಪಕ್ಷಗಳು ಪಾಟ್ನಾ ಬಳಿಕ ತಮ್ಮ ಎರಡನೇ ಸಭೆಯನ್ನು ಇಲ್ಲಿ ಜುಲೈ 18 ರಂದು ನಡೆಸಲಿದ್ದು, ಅದರ ಸಿದ್ಧತೆ ಪರಿಶೀಲನೆಗೆ ದೆಹಲಿ ನಾಯಕರು ರಾಜ್ಯಕ್ಕೆ ಆಗಮಿಸಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ರಾಜ್ಯ ಉಸ್ತುವಾರಿ ಸುರ್ಜೇವಾಲಾ ಅವರು ಬೆಂಗಳೂರಿನಲ್ಲಿ ನಡೆಯಲಿರುವ ಸಭೆಯ ಸಿದ್ಧತೆಗಳ ವೀಕ್ಷಣೆ ಮಾಡಿದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಬೆಂಗಳೂರಿನ ತಾಜ್ ವೆಸ್ಟೆಂಡ್ನಲ್ಲಿ ಸಭೆ ನಡೆಯಲಿದ್ದು, ಒಟ್ಟು 24 ಪಕ್ಷಗಳ ಪ್ರಮುಖ …
Read More »ಭೀಕರ ಪ್ರವಾಹ.. ಉತ್ತರ ಭಾರತಕ್ಕೆ ಬೈಕ್ ರೈಡ್ ಹೋಗಿದ್ದ ಕಾರವಾರದ ಯುವಕರು ಬದುಕಿ ಬಂದದ್ದೇ ಪವಾಡ!
ಕಾರವಾರ(ಉತ್ತರ ಕನ್ನಡ): ಬೈಕ್ ಏರಿ ಉತ್ತರಭಾರತ ಸುತ್ತುವ ಕನಸಿನೊಂದಿಗೆ ಕಾರವಾರದಿಂದ ತೆರಳಿದ್ದ ಸಾಹಸಿ ಯುವಕರ ತಂಡವೊಂದು ಹಿಮಾಚಲ ಪ್ರದೇಶದ ಬಳಿ ಸಂಭವಿಸಿದ ಪ್ರವಾಹದಿಂದ ಕೂದಲೆಳೆ ಅಂತರದಿಂದ ಪಾರಾಗಿದೆ. ಪ್ರಯಾಣದುದ್ದಕ್ಕೂ ಹಲವು ಅಡೆತಡೆಗಳನ್ನು ಎದುರಿಸಿ ಇದೀಗ ಸುರಕ್ಷಿತವಾಗಿ ಮರಳಿರುವ ಯುವಕರ ತಂಡ ತಮಗಾದ ಭಯಾನಕ ಅನುಭವ ಬಿಚ್ಚಿಟ್ಟಿದ್ದಾರೆ. ಈ ಕುರಿತು ಒಂದು ಸ್ಪೆಷಲ್ ರಿಪೋರ್ಟ್ ಇಲ್ಲಿದೆ ನೋಡಿ. ಬೈಕ್ ಕ್ರೇಜ್ ಇರುವ ಬಹುತೇಕರಿಗೆ ದೂರದ ಊರುಗಳಿಗೆ ಪ್ರವಾಸ ಕೈಗೊಳ್ಳುವ ಹಂಬಲ ಕೂಡ ಇರುತ್ತದೆ. …
Read More »ಚಂದ್ರಯಾನ 3 ತಂಡದಲ್ಲಿದ್ದ ಚಿಕ್ಕಮಗಳೂರಿನ ಡಾ.ನಂದಿನಿ
ಚಿಕ್ಕಮಗಳೂರು: ಇಡೀ ಪ್ರಪಂಚವೇ ಕಾತರದಿಂದ ಕಾಯುತ್ತಿದ್ದ, ಭಾರತದ ಕನಸಿನ ಯೋಜನೆ ಚಂದ್ರಯಾನ 3 ನಿನ್ನೆಯಷ್ಟೆ ಇಸ್ರೋ ಕೇಂದ್ರದಿಂದ ಯಶಸ್ವಿಯಾಗಿ ಬಾಹ್ಯಾಕಾಶ ಕಕ್ಷೆಗೆ ಉಡಾವಣೆಗೊಂಡಿದೆ. ಚಂದ್ರಯಾನ 3 ಯೋಜನೆ ಹಾಗೂ ಇದರ ಯಶಸ್ವಿ ಉಡಾವಣೆಯ ಹಿಂದೆ ಹಲವಾರು ವಿಜ್ಞಾನಿಗಳ ಪರಿಶ್ರಮವಿದೆ. ದೇಶದ ಬೇರೆ ಬೇರೆ ಜಿಲ್ಲೆಗಳ ವಿಜ್ಞಾನಿಗಳು ಈ ಯೋಜನೆಗಾಗಿ ಹಗಲು ಇರುಳು ಕೆಲಸ ಮಾಡಿದ್ದಾರೆ. ಇದೀಗ ಆಂಧ್ರಪ್ರದೇಶದ ಶ್ರೀ ಹರಿಕೋಟಾ ಸತೀಶ್ ಧವನ್ ಉಪಗ್ರಹ ಉಡಾವಣಾ ಕೇಂದ್ರದಲ್ಲಿ ಭಾರತೀಯ ಬಾಹ್ಯಾಕಾಶ ಸಂಸ್ಥೆ …
Read More »”ಜನರು ಲೋಕಸಭಾ ಚುನಾವಣೆಯಲ್ಲಿಯೂ ಬಿಜೆಪಿಗೆ ತಕ್ಕ ಪಾಠ ಕಲಿಸಬೇಕು” : ಎಸ್.ಆರ್. ಹೀರೇಮಠ
ಮೈಸೂರು: ”ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪಾಠ ಕಲಿಸಿದಂತೆ, ಮುಂದಿನ ಲೋಕಸಭಾ ಚುನಾವಣೆಯಲ್ಲಿಯೂ ಕೂಡಾ ಬಿಜೆಪಿಗೆ ತಕ್ಕ ಪಾಠ ಕಲಿಸಬೇಕು” ಎಂದು ಜನಾಂದೋಲನ ಮಹಾಮೈತ್ರಿ ಅಧ್ಯಕ್ಷ ಎಸ್. ಆರ್. ಹಿರೇಮಠ ಕೇಂದ್ರ ಸರ್ಕಾರದ ವಿರುದ್ಧ ಗರಂ ಆದರು. ಜಿಲ್ಲಾ ಪತ್ರಕರ್ತರ ಭವನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ”ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಬಿಜೆಪಿ ಹಾಗೂ ಸಂಘ ಪರಿವಾರದ ಶಕ್ತಿಗಳ ಡಬಲ್ ಎಂಜಿನ್ ಸರಕಾರವನ್ನು ಸೋಲಿಸುವ ಮೂಲಕ ಐತಿಹಾಸಿಕ ನಿರ್ಣಯ …
Read More »ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷ ಈಗಿನಿಂದಲೇ ಸಿದ್ಧತೆ ಆರಂಭ
ಬೆಂಗಳೂರು: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷ ಈಗಿನಿಂದಲೇ ಸಿದ್ಧತೆ ಆರಂಭಿಸಿದೆ. ರಾಜ್ಯದಲ್ಲಿ ಈ ಬಾರಿ ಸುಮಾರು 20 ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುವ ಗುರಿಯನ್ನು ಕಾಂಗ್ರೆಸ್ ಪಕ್ಷ ಹೊಂದಿದೆ. ಹೆಚ್ಚಿನ ಕ್ಷೇತ್ರ ಗೆಲ್ಲುವ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಸಚಿವರ ಮೇಲೆ ಹೆಚ್ಚಿನ ಒತ್ತಡ ಹಾಕಲು ಹೈಕಮಾಂಡ್ ಮುಂದಾಗಿದೆ. ಮುಖ್ಯಮಮತ್ರಿ ಸಿದ್ದರಾಮಯ್ಯ ಸರ್ಕಾರದ ಸಚಿವರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಮಂತ್ರಿಗಳಿಗೆ ಲೋಕಸಭೆ ಚುನಾವಣೆಯಲ್ಲಿ ತಮ್ಮ ಜಿಲ್ಲೆಯ ವ್ಯಾಪ್ತಿಯಲ್ಲಿನ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು …
Read More »ಸರ್ಕಾರಿ ವ್ಯಾಜ್ಯಗಳ ನಿರ್ವಹಣೆಗೆ ನೂತನ ಕಾನೂನು ತರುತ್ತೇವೆ: ಸಚಿವ ಹೆಚ್ ಕೆ ಪಾಟೀಲ್
ದಾವಣಗೆರೆ: ಸರ್ಕಾರಿ ವ್ಯಾಜ್ಯಗಳ ನಿರ್ವಹಣೆಗೆ ನೂತನ ಕಾನೂನು ತರುತ್ತೇವೆ ಎಂದು ಕಾನೂನು ಮತ್ತು ಸಂಸದೀಯ ಸಚಿವ ಹೆಚ್ ಕೆ ಪಾಟೀಲ್ ತಿಳಿಸಿದರು. ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಪೀಠಕ್ಕೆ ಭೇಟಿ ನೀಡಿ ಪ್ರಸನ್ನಾನಂದ ಪುರಿ ಶ್ರೀಯವರನ್ನು ಭೇಟಿಯಾದ ಬಳಿಕ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಸಚಿವರು, ಸರ್ಕಾರಿ ವ್ಯಾಜ್ಯಗಳ ನಿರ್ವಹಣೆಗೆ ಕಾನೂನು ತರುತ್ತಿದ್ದೇವೆ. ಬಡವರ ಪ್ರಕರಣಗಳು ಕೋರ್ಟ್ನಲ್ಲಿ ವಿಳಂಭವಾಗುತ್ತಿವೆ. ಈ ಕೇಸ್ಗಳು ಅದಷ್ಟು ಬೇಗ ಇತ್ಯರ್ಥವಾಗಬೇಕು. ಹೀಗಾಗಿ ಅದರ ಬಗ್ಗೆ ಕಾನೂನು ತರಲು ಮುಂದಾಗಿದ್ದೇವೆ …
Read More »ಜು. 19 ರಿಂದ ‘ಗೃಹಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವದ ಐದು ಗ್ಯಾರಂಟಿಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಯಡಿ ಫಲಾನುಭವಿಗಳ ನೋಂದಣಿಗೆ ಕಾರ್ಯ ಜು.19ರಿಂದ ಆರಂಭವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು. ವಿಧಾನಸೌಧದಲ್ಲಿ ಇಂದು ಮಾಧ್ಯಮಗೋಷ್ಟಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ರಾಜ್ಯ ಸರ್ಕಾರ ಘೋಷಿಸಿರುವ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಮನೆ ಯಜಮಾನಿಗೆ ಮಾಸಿಕ 2 …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ
ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ವೆಂಕಟಾಪುರ ಗ್ರಾಮದಲ್ಲಿ ಶ್ರೀ ಹನುಮಾನ್ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ …
Read More »ಐದು ಭಾಗ್ಯಗಳ ವಿವರ ನೀಡುವ ಬದಲು ಮೋದಿ ವಿರುದ್ಧ ಸಿಎಂ ವಾಗ್ದಾಳಿ ನಡೆಸಿದ್ದು ವಿಪರ್ಯಾಸ: ಕೋಟಾ ಶ್ರೀನಿವಾಸ್ ಪೂಜಾರಿ
ಬೆಂಗಳೂರು: ಮುಖ್ಯಮಂತ್ರಿಗಳು ತಮ್ಮ ಭಾಷಣದಲ್ಲಿ ಐದು ಭಾಗ್ಯಗಳ ಕುರಿತು ವಿವರಣೆ ನೀಡುವ ಬದಲು ಕೇಂದ್ರ ಸರ್ಕಾರ ಹಾಗೂ ಮೋದಿ ವಿರುದ್ಧ ವಾಗ್ದಾಳಿ ನಡೆಸಲು ಸಮಯವನ್ನು ಬಳಸಿಕೊಂಡಿದ್ದು ವಿಪರ್ಯಾಸ ಎಂದು ವಿಧಾನ ಪರಿಷತ್ ಬಿಜೆಪಿ ಹಿರಿಯ ಸದಸ್ಯ ಕೋಟಾ ಶ್ರೀನಿವಾಸ್ ಪೂಜಾರಿ ಅಭಿಪ್ರಾಯಪಟ್ಟಿದ್ದಾರೆ. ವಿಧಾನ ಪರಿಷತ್ನಲ್ಲಿ ರಾಜ್ಯಪಾಲರ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಉತ್ತರ ನೀಡಿದ ಸಂದರ್ಭ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಾರೆ ಎಂದು ಆರೋಪಿಸಿ ಸಭಾತ್ಯಾಗ ಮಾಡಿದ ಬಳಿಕ …
Read More »‘ಚಂದ್ರನ ಅನ್ವೇಷಣೆಯಲ್ಲಿ ಇಸ್ರೋ ಮತ್ತೊಂದು ಮೈಲಿಗಲ್ಲು ಸಾಧಿಸಿದೆ”: ಶುಭಕೋರಿದ ಸಿಎಂ
ಬೆಂಗಳೂರು: ”ಚಂದ್ರಯಾನ-3ರ ಇಂದಿನ ಯಶಸ್ವಿ ಉಡಾವಣೆಯ ಮೂಲಕ ಚಂದ್ರನ ಅನ್ವೇಷಣೆಯಲ್ಲಿ ವಿಶ್ವದಲ್ಲೇ ಮತ್ತೊಂದು ವಿಶಿಷ್ಟ ಮೈಲಿಗಲ್ಲನ್ನು ಇಸ್ರೋ ಸಾಧಿಸಿದೆ” ಎಂದು ಸಣ್ಣ ನೀರಾವರಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವರಾದ ಎನ್.ಎಸ್.ಭೋಸರಾಜು ಹರ್ಷ ವ್ಯಕ್ತಪಡಿಸಿದರು. ಚಂದ್ರಯಾನ-3ರ ಉಡಾವಣೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ”ನಿರಂತರ ಹೊಸ ಆವಿಷ್ಕಾರಗಳು ಮತ್ತು ಸಂಶೋಧನೆಯ ಮೂಲಕ ಬಾಹ್ಯಾಕಾಶ ಪರಿಶೋಧನೆಯಲ್ಲಿ ಭಾರತ ದೇಶ ವಿಶ್ವದಲ್ಲೇ ಮುಂಚೂಣಿ ಸ್ಥಾನ ಹೊಂದುವಲ್ಲಿ ಇಸ್ರೋ ಕೊಡುಗೆ ಅಪಾರ. ಚಂದ್ರಯಾನ …
Read More »
Laxmi News 24×7