ಬೆಂಗಳೂರು: ಇತ್ತೀಚೆಗೆ ವ್ಯಕ್ತಿಯೊಬ್ಬರು ಅಕ್ರಮವಾಗಿ ಸದನ ಪ್ರವೇಶಿಸಿದ ಘಟನೆ ನಡೆದಿತ್ತು. ಈ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಆತಂಕಕಾರಿ ಘಟನೆ ವಿಧಾನಸೌಧದ ಆವರಣದಲ್ಲಿ ನಡೆದಿದೆ. ವಿಧಾನಸೌಧದಲ್ಲಿ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್ನಲ್ಲಿ ಚಾಕು ಪತ್ತೆಯಾಗಿದೆ. ತಿಪ್ಪೇರುದ್ರಪ್ಪ ಎಂಬುವರು ಸದನದೊಳಗೆ ಅಕ್ರಮವಾಗಿ ಪ್ರವೇಶಿಸಿ ಭದ್ರತಾ ಲೋಪವಾದ ಹಿನ್ನೆಲೆಯಲ್ಲಿ ಇದೀಗ ವಿಧಾನಸೌಧದಲ್ಲಿ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ. ವಿಧಾನಸೌಧಕ್ಕೆ ಬರುವ ಎಲ್ಲರನ್ನೂ ತೀವ್ರವಾಗಿ ತಪಾಸಣೆ ಮಾಡಲಾಗುತ್ತಿದೆ. ಈ ಸಂದರ್ಭದಲ್ಲಿ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್ನಲ್ಲಿ ಚಾಕು ಪತ್ತೆಯಾಗಿದೆ. …
Read More »ನಾವು ಜೈನ ಮಂದಿರಕ್ಕೆ ರಕ್ಷಣೆ ಕೊಡುತ್ತೇವೆ ಎಂದ ಗೃಹ ಸಚಿವ ಜಿ.ಪರಮೇಶ್ವರ
ಚಿಕ್ಕೋಡಿಯ ಹಿರೇಕೋಡಿಯ ನಂದಿ ಪರ್ವತ ಆಶ್ರಮದ ಆಚಾರ್ಯ ಶ್ರೀ 108 ಕಾಮಕುಮಾರ ರಾಜ ಮಹಾರಾಜರ ಬರ್ಬರ ಹತ್ಯೆ ಹಿನ್ನೆಲೆಯಲ್ಲಿ ಇಲ್ಲಿನ ವರೂರಿನ ನವಗ್ರಹ ತೀರ್ಥ ಕ್ಷೇತ್ರದ ಆಚಾರ್ಯ ಗುಣಧರನಂದಿ ಮಹಾರಾಜರು ಜೈನ್ ಮುನಿಗಳಿಗೆ, ಜೈನ್ ಬಸದಿಗಳಿಗೆ ಸರ್ಕಾರ ರಕ್ಷಣೆ ನೀಡುವಂತೆ ಆಗ್ರಹಿಸಿ ಸಲ್ಲೇಖನ ವ್ರತ ಕೈಗೊಂಡಿದ್ದರು ಈ ಹಿನ್ನೆಲೆಯಲ್ಲಿ ಇಂದು ಗೃಹ ಸಚಿವ ಜಿ.ಪರಮೇಶ್ವರ ಅವರು ನವಗ್ರಹ ಕ್ಷೇತ್ರಕ್ಕೆ ಭೇಟಿ ಕೊಟ್ಟು ಜೈನ್ ಮುನಿಗಳಿಗೆ ರಕ್ಷಣೆ ನೀಡುವ ಭರವಸೆ ನೀಡಿದರು. …
Read More »ನಮಗೆ ಭದ್ರತೆ ಒದಗಿಸುವವರೆಗೂ ನಿರಂತರವಾಗಿ ಅಮರಣಾಂತ ಉಪವಾಸ ಶತಸಿದ್ಧ ಎಂದ ಸ್ವಾಮೀಜಿ
ಹುಬ್ಬಳ್ಳಿ : ನಮ್ಮ ಭಾರತ ದೇಶದಲ್ಲಿ ಆತಂಕವಾದಿಗೆ ಯಾವ ಶಿಕ್ಷೆಯಾಗುವುದಿಲ್ಲವೋ ಅಂತಹ ಶಿಕ್ಷೆ ಜೈನ ಮುನಿಗೆ ನೀಡಲಾಗಿದೆ. ಕಾಮಕುಮಾರ ನಂದಿ ಮಹಾರಾಜ ಅವರನ್ನು ಈ ರೀತಿ ಚಿತ್ರಹಿಂಸೆ ನೀಡಿ ಕೊಲೆ ಮಾಡಿರುವುದು ನಿಜಕ್ಕೂ ನೋವಿನ ಸಂಗತಿ ಎಂದು ಹುಬ್ಬಳ್ಳಿಯ ವರೂರಿನಲ್ಲಿ ಜೈನ ಮುನಿ ಗುಣಧರನಂದಿ ಮಹಾರಾಜ್ ಸ್ವಾಮೀಜಿ ಹೇಳಿದ್ದಾರೆ. ವರೂರಿನಲ್ಲಿ ಮಾತನಾಡಿದ ಅವರು, ಇಂತಹ ಕ್ರೂರವಾದ ಘಟನೆಯಾದರೂ ಸಹ ಸಿಎಂ ಸಿದ್ದರಾಮಯ್ಯ ಅವರು ಯಾವುದೇ ಸ್ಪಂದನೆ ಮಾಡಿರಲಿಲ್ಲ. ಮಾಧ್ಯಮಗಳ ಸಹಾಯದಿಂದ ಈ …
Read More »ದಂಪತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ:
ಬೆಳಗಾವಿ: ದಂಪತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹುಕ್ಕೇರಿ ತಾಲೂಕಿನ ಮಾವನೂರು ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮಾವನೂರು ಗ್ರಾಮದ ಗಜೇಂದ್ರ ಈರಪ್ಪ ಹುನ್ನೂರಿ(60) ಹಾಗೂ ದ್ರಾಕ್ಷಾಯಿಣಿ ಗಜೇಂದ್ರ ಹುನ್ನೂರಿ(45) ಕೊಲೆಯಾದವರು ಎಂದು ಗುರುತಿಸಲಾಗಿದೆ. ಈ ಕೊಲೆ ಶುಕ್ರವಾರ ನಡೆದಿದೆ ಎಂಬ ಶಂಕೆ ವ್ಯಕ್ತವಾಗಿದೆ. ದಂಪತಿಗೆ ಓರ್ವ ಮಗಳಿದ್ದು, ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ಅಕ್ಕಪಕ್ಕದವರು ಭಾನುವಾರ ಬೆಳಗ್ಗೆ ಶವ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ …
Read More »ಎಂಪಿ ಎಲೆಕ್ಷನ್ವರೆಗೂ ಕಾದು ನೋಡೋಣ.. ವಿಪಕ್ಷದವರ ಟೀಕೆಗೆ ಮಹತ್ವ ಕೊಡಬೇಕಿಲ್ಲ: ಸತೀಶ್ ಜಾರಕಿಹೊಳಿ
ಬೆಳಗಾವಿ: ಈ ಬಜೆಟ್ ಪ್ರಣಾಳಿಕೆ ಬಜೆಟ್ ಎಂದು ಬಿಜೆಪಿ ನಾಯಕರ ಟೀಕೆಗೆ ತಿರುಗೇಟು ನೀಡಿರುವ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ, ಅವರದ್ದು ಹಿಂದಿನ ಬಜೆಟ್ ಹಾಗೇ ಆಗಿದ್ದರೆ, ನಮ್ಮದು ಹಾಗೇ ಅಂದುಕೊಳ್ಳಲಿ ಎಂದಿದ್ದಾರೆ. ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಇಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಬಜೆಟ್ ಬಗ್ಗೆ ವಿಕ್ಷಪದವರಿಂದ ಟೀಕೆ ಸ್ವಾಭಾವಿಕ. ಆದರೆ, ಬಜೆಟ್ ಬಗ್ಗೆ ಜನ ಸಾಮಾನ್ಯರಿಂದ ಮೆಚ್ಚುಗೆ ವ್ಯಕ್ತವಾಗಿದೆ ಎಂದರು. ರಾಜಕೀಯ ಮಾಡುವುದಕ್ಕಾಗಿ ವಿಪಕ್ಷದವರು …
Read More »ಜುಲೈ ಅಂತ್ಯದೊಳಗೆ ಮಳೆಯಾಗುವ ಮುನ್ಸೂಚನೆ: ಕೃಷ್ಣ ಬೈರೇಗೌಡ
ಕಾರವಾರ: ರಾಜ್ಯದಲ್ಲಿ ಮುಂಗಾರು ಪ್ರವೇಶವಾಗಿದೆ. ಜುಲೈ ಅಂತ್ಯದೊಳಗೆ ಬಹುತೇಕ ಕಡೆ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಸದ್ಯಕ್ಕೆ ಮೋಡ ಬಿತ್ತನೆ ಮಾಡುವ ಚಿಂತನೆ ಸರ್ಕಾರದ ಮುಂದೆ ಇಲ್ಲ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಉತ್ತರಕನ್ನಡದ ಕುಮಟಾದಲ್ಲಿ ನೆರೆಪೀಡಿತ ಪ್ರದೇಶಗಳ ಪರಿಶೀಲನೆ ಹಾಗೂ ಬೆಟ್ಕುಳಿ ಗ್ರಾಮದಲ್ಲಿ ನೆರೆಗೆ ಮೃತಪಟ್ಟ ಕುಟುಂಬದವರನ್ನು ಭೇಟಿ ಮಾಡಿ ಸಾಂತ್ವನ ಹೇಳಿ ಮಾತನಾಡಿದ ಅವರು, ಕಾರವಾರ, ಬೆಳಗಾವಿ ಭಾಗದಲ್ಲಿ ಮಳೆಯಾಗಿದೆ. ಆದರೆ ಕೆಲ ಜಿಲ್ಲೆಗಳಲ್ಲಿ ಇನ್ನೂ ಮಳೆಯಾಗಿಲ್ಲ. …
Read More »ಆನ್ಲೈನ್ ಬೆಟ್ಟಿಂಗ್ ಗೀಳು: ಅಣ್ಣನ ಮನೆಗೆ ಕನ್ನ ಹಾಕಿದ ತಮ್ಮನ ಬಂಧನ
ಬೆಂಗಳೂರು: ಆನ್ ಲೈನ್ ಬೆಟ್ಟಿಂಗ್ ವ್ಯಾಮೋಹಕ್ಕೆ ಬಿದ್ದು ಅಣ್ಣನ ಮನೆಯಲ್ಲಿ ಚಿನ್ನಾಭರಣ ಕಳ್ಳತನ ಮಾಡಿದ್ದ ತಮ್ಮನನ್ನ ಸಿದ್ದಾಪುರ ಪೊಲೀಸರು ಬಂಧಿಸಿದ್ದಾರೆ. ಮನೆಯಲ್ಲಿ ಚಿನ್ನಾಭರಣ ಕಳ್ಳತನವಾಗಿರುವ ಬಗ್ಗೆ ಮೀಜಾನ್ ಎಂಬುವರು ಜುಲೈ 4ರಂದು ನೀಡಿದ ದೂರು ಆಧರಿಸಿ ತನಿಖೆ ನಡೆಸಿದ ಪೊಲೀಸರಿಗೆ ತಮ್ಮನೇ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದ್ದು, ಈ ಸಂಬಂಧ ಮೊಹಮ್ಮದ್ ಪರ್ವೀನ್ (22) ಎಂಬುವನನ್ನ ಬಂಧಿಸಿ ಜೈಲಿಗಟ್ಟಿದ್ದಾರೆ. ಸೋಮೇಶ್ವರ ನಗರದಲ್ಲಿ ದೂರುದಾರ ಮಿಜಾನ್ ವಾಸವಾಗಿದ್ದ. ಈತನೊಂದಿಗೆ ತಾಯಿ – ತಮ್ಮ …
Read More »ಇಂದಿರಾ ಕ್ಯಾಂಟೀನ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಡಿ.ಕೆ.ಶಿ.
ಬೆಂಗಳೂರು : ಡಿಸಿಎಂ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ. ಶಿವಕುಮಾರ್ ಅವರು ಇಂದು (ಭಾನುವಾರ) ಬೆಳಗ್ಗೆ ನಗರ ಪ್ರದಕ್ಷಣೆ ಹಮ್ಮಿಕೊಂಡು ಮೊದಲಿಗೆ ಇಂದಿರಾ ಗಾಂಧಿ ಕ್ಯಾಂಟೀನ್ ಪರಿಸ್ಥಿತಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಪಾಲಿಕೆಯ ಯಾವುದೇ ಅಧಿಕಾರಿಗಳು ಹಾಗು ಸಿಬ್ಬಂದಿಗೆ ಮುನ್ಸೂಚನೆ ನೀಡಿರಲಿಲ್ಲ. ಮೊದಲು ದಾಸರಹಳ್ಳಿ ವಲಯದ ವಾರ್ಡ್ ಸಂಖ್ಯೆ 39ರ ಚೊಕ್ಕಸಂದ್ರದ ಇಂದಿರಾ ಗಾಂಧಿ ಕ್ಯಾಂಟೀನ್ಗೆ ಬೆಳಗ್ಗೆ 9:10ಕ್ಕೆ ಭೇಟಿ ನೀಡಿ, ತಿಂಡಿ ಕೇಳಿದರು. ಆದರೆ ಅದಾಗಲೇ ಅಲ್ಲಿ ತಿಂಡಿ …
Read More »ಕಲಘಟಗಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಸಿ.ಎಂ.ನಿಂಬಣ್ಣವರ್ ವಿಧಿವಶರಾಗಿದ್ದಾರೆ.
ಹುಬ್ಬಳ್ಳಿ: ಕಲಘಟಗಿ ಕ್ಷೇತ್ರದ ಮಾಜಿ ಶಾಸಕ ಸಿ.ಎಂ.ನಿಂಬಣ್ಣವರ್ (76) ಅನಾರೋಗ್ಯದಿಂದ ಇಂದು ಬೆಳಿಗ್ಗೆ ಬೆಂಗಳೂರಿನಲ್ಲಿ ನಿಧನರಾದರು. ಪುತ್ರಿಯ ಮನೆಗೆ ತೆರಳಿದ್ದ ಸಂದರ್ಭದಲ್ಲಿ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದಿತ್ತು ಎನ್ನಲಾಗಿದೆ. ಮೃತದೇಹವನ್ನು ಸಂಜೆ ಅಥವಾ ನಾಳೆ ಬೆಳಿಗ್ಗೆ ಕಲಘಟಗಿಗೆ ತರುವ ಸಾಧ್ಯತೆ ಇದೆ. ಸಿ.ಎಂ.ನಿಂಬಣ್ಣವರ್ 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಗೆಲುವು ದಾಖಲಿಸಿದ್ದರು. ಮಾಜಿ ಶಾಸಕರ ಅಗಲಿಕೆಗೆ ರಾಜಕೀಯ ಮುಖಂಡರು, ಕಾರ್ಯಕರ್ತರು ಹಾಗೂ ಅವರ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.
Read More »ಜೈನ ಸಂಪ್ರದಾಯದಂತೆ ನೆರವೇರಿದ ಕಾಮಕುಮಾರ ನಂದಿ ಮಹಾರಾಜ ಅವರ ಅಂತ್ಯಕ್ರಿಯೆ
ಚಿಕ್ಕೋಡಿ(ಬೆಳಗಾವಿ): ಕಳೆದ 15 ವರ್ಷಗಳಿಂದ ‘ಅಹಿಂಸೆ ಪರಮೋಧರ್ಮ’ ಎಂದು ಶಾಂತಿ ಮಂತ್ರ ಸಾರುತ್ತ ಧರ್ಮ ಪ್ರಚಾರ ಮಾಡಿದ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಜೈನ ಆಶ್ರಮದ ಕಾಮಕುಮಾರ ನಂದಿ ಮಹಾರಾಜ (51) ಅವರು ಕಳೆದ ಎರೆಡು ದಿನಗಳ ಹಿಂದೆ ಭೀಕರವಾಗಿ ಹತ್ಯೆಗೀಡಾಗಿದ್ದರು. ನಂದಿ ಪರ್ವತ ಆಶ್ರಮದಲ್ಲಿ ಜೈನ ಸಂಪ್ರದಾಯದಂತೆ ಅವರ ಅಂತ್ಯಕ್ರಿಯೆಯನ್ನು ಇಂದು ಶಾಸ್ತ್ರೋಕ್ತವಾಗಿ ನೆರವೇರಿಸಲಾಯಿತು. ಜೈನ ಮಠಗಳ ಮಹಾಸ್ವಾಮಿಗಳಾದ ನಾಂದಣಿ ಮಠದ ಜಿನಸೇನ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿ ಹಾಗೂ …
Read More »
Laxmi News 24×7