ಗದಗ: ಹವಾಮಾನ ವೈಪರೀತ್ಯ ಕಾರಣ ಅಮರನಾಥ ಯಾತ್ರೆಗೆ ತೆರಳಿದ್ದ 300 ಜನ ಕನ್ನಡಿಗರು ಸಿಲುಕಿಕೊಂಡಿದ್ದಾರೆ. ನಿನ್ನೆ ರಾತ್ರಿ ಹವಾಮಾನ ವೈಪರೀತ್ಯ ಹಾಗೂ ಅತಿಯಾದ ಚಳಿಯಿಂದಾಗಿ ಸಮಸ್ಯೆಯಾಗಿತ್ತು. ಅಮರನಾಥ ದೇವಸ್ಥಾನದ ಆಡಳಿತ ಮಂಡಳಿ, ಮಿಲಿಟರಿ ಅಧಿಕಾರಿಗಳು ಎಲ್ಲರಿಗೂ ಅಗತ್ಯ ನೆರವನ್ನು ನೀಡಿದ್ದು, ಅವರನ್ನು ನಾನು ಅಭಿನಂದಿಸುತ್ತೇನೆ ಎಂದು ಪ್ರವಾಸೋದ್ಯಮ ಸಚಿವ ಹೆಚ್ ಕೆ ಪಾಟೀಲ್ ಹೇಳಿದರು. ಈ ಬಗ್ಗೆ ನಗರದಲ್ಲಿಂದು ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಹವಾಮಾನ ವೈಪರೀತ್ಯ ಹಾಗೂ ಗುಡ್ಡ ಕುಸಿತದಿಂದಾಗಿ …
Read More »ಜೈನ ಮುನಿ ಕಾಮಕುಮಾರ ನಂದಿ ಮಹಾರಾಜರ ಭೀಕರ ಹತ್ಯೆ ಪ್ರಕರಣವೂ ಜೈನ ಸಮಾಜವನ್ನು ಸಿಡಿದೇಳುವಂತೆ ಮಾಡಿದೆ.
ಬೆಳಗಾವಿ: ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿ ಪರ್ವತ ಆಶ್ರಮದ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜರ ಭೀಕರ ಹತ್ಯೆ ಪ್ರಕರಣವೂ ಜೈನ ಸಮಾಜವನ್ನು ಸಿಡಿದೇಳುವಂತೆ ಮಾಡಿದೆ. ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ಇಂದು ಬೆಳಗಾವಿಯ ಸುವರ್ಣವಿಧಾನಸೌಧ ಮುಂಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಜೈನ ಸಮುದಾಯದವರು ಬೃಹತ್ ಪ್ರತಿಭಟನೆ ನಡೆಸಿದರು. ಹೌದು.. ಜೈನ ಮುನಿಗಳನ್ನು ಆರೋಪಿಗಳು ಬರ್ಬರವಾಗಿ ಹತ್ಯೆ ಮಾಡಿರುವುದು ಬೆಳಗಾವಿ ಜಿಲ್ಲೆ ಅಷ್ಟೇ ಅಲ್ಲದೇ ಇಡೀ ರಾಜ್ಯವನ್ನೇ …
Read More »ಹಿರೇಕೋಡಿಯ ಜೈನಮುನಿ ಹತ್ಯೆ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿ:C.M. ಸಿದ್ದರಾಮಯ್ಯ
ಹಿರೇಕೋಡಿಯ ಜೈನಮುನಿ ಹತ್ಯೆ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿ ಆರೋಪಿಗಳಿಗೆ ನ್ಯಾಯಾಲಯದಲ್ಲಿ ಶಿಕ್ಷೆ ಆಗುವಂತೆ ಕಾನೂನು ಕ್ರಮ ಕೈಗೊಳ್ಳಲು ಹಿರಿಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ. ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಮುಖ್ಯಮಂತ್ರಿಗಳು, ಕಾನೂನುಬಾಹಿರ ಕೃತ್ಯ ಎಸಗುವವರ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ. ಕಾನೂನು ಕೈಗೆತ್ತಿಕೊಳ್ಳುವ ಹಕ್ಕು ಯಾರಿಗೂ ಇಲ್ಲ.ತಪ್ಪು ಯಾರೇ ಮಾಡಿದ್ದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ. ಈಗಾಗಲೇ ನಮ್ಮ ಅಧಿಕಾರಿಗಳು …
Read More »ಹಾಲಿನ ದರ ಏರಿಕೆಯ ಸುಳಿವು ನೀಡಿದ ಸಚಿವ K.N ರಾಜಣ್ಣ
ಮೈಸೂರು : ಜನಸಾಮಾನ್ಯರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಸಹಕಾರ ಸಚಿವ K. N ರಾಜಣ್ಣ ಹಾಲಿನ ದರ ಏರಿಕೆಯ ಸುಳಿವು ನೀಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಹಾಲು ಉತ್ಪಾದಕರಿಗೆ ಸಹಾಯಧನ ಹೆಚ್ಚಿಸಲು ಚಿಂತನೆ ನಡೆಸಲಾಗುತ್ತಿದೆ. ಹಾಲಿನ ದರ ಎಂದ ಕೂಡಲೇ ಎಲ್ಲರೂ ಗಾಬರಿಯಾಗುತ್ತಾರೆ ಎಂದರು. ಹಾಲು ಉತ್ಪಾದಕರಿಗೆ ಸಹಾಯಧನ ಹೆಚ್ಚಿಸುವ ಅನಿವಾರ್ಯತೆ ಇದೆ. ಈ ಬಗ್ಗೆ ಸದ್ಯದಲ್ಲೇ ಅಧಿಕೃತವಾಗಿ ಮಾಹಿತಿ ನೀಡಲಿದ್ದೇವೆ ಎಂದರು. ಇನ್ನೂ,. ನಂದಿನಿ ಹಾಲಿನ ದರವನ್ನು …
Read More »ಹಲ್ಲಿಬಿದ್ದ ಬಿಸಿಯೂಟ ಸೇವಿಸಿ 27 ಕ್ಕೂ ಹೆಚ್ಚು ಬಾಲಕಿಯರು ಅಸ್ವಸ್ಥ
ಯಾದಗಿರಿ : ಹಲ್ಲಿಬಿದ್ದ ಬಿಸಿಯೂಟ ಸೇವಿಸಿ 27 ಕ್ಕೂ ಹೆಚ್ಚು ಬಾಲಕಿಯರು ಅಸ್ವಸ್ಥಗೊಂಡ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ನಡೆದಿದೆ. ಶಾಲೆಯಲ್ಲಿ ಬೆಳಗ್ಗೆ ಮಾಡಿದ್ದ ಉಪ್ಪಿಟ್ಟು ತಿಂದ ಮಕ್ಕಳಿಗೆ ಹೊಟ್ಟೆನೋವು ವಾಂತಿಭೇದಿ ಕಾಣಿಸಿಕೊಂಡಿದೆ. ನಂತರ ಕೆಂಭಾವಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲಾಗಿದೆ. ಘಟನೆ ಹಿನ್ನೆಲೆ ಪೋಷಕರು ಶಾಲೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Read More »ರಾಜ್ಯಾದ್ಯಂತ ಮಳೆ 21 ಜನರು ಸಾವನ್ನಪ್ಪಿದ್ದಾರೆ ಎಂದ ಕೃಷ್ಣಬೈರೇಗೌಡ
ಕುಮಟಾ: ರಾಜ್ಯಾದ್ಯಂತ ಮಳೆಯ ಅವಾಂತರದಲ್ಲಿ ಈವರೆಗೆ 21 ಜನರು ಸಾವನ್ನಪ್ಪಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವರು, ಮಳೆ ಅವಾಂತರದಲ್ಲಿ ಮೃತಪಟ್ಟವರ ಕುಟುಂಬ ಸದಸ್ಯರನ್ನು ಭೇಟಿಯಾಗಿ ಸಾಂತ್ವನ ಹೇಳಿದರು. ಈ ವೇಳೆ ಕುಮಟಾ ತಾಲೂಕಿನ ಬೆಟ್ಕುಳಿ ಗ್ರಾಮದಲ್ಲಿ ಮಾತನಾಡಿದ ಸಚಿವರು, ಮಳೆಯಿಂದಾಗಿ ರಾಜ್ಯದಲ್ಲಿ ಈವರೆಗೆ 21 ಜನ ಮೃತಪಟ್ಟಿದ್ದು, 40 ಜಾನುವಾರುಗಳು ಮೃತಪಟ್ಟಿವೆ ಎಂದರು.
Read More »ಸಿಎಂ ಸಿದ್ದರಾಮಯ್ಯ ಬಜೆಟ್ ಕೊಂಡಾಡಿದ ಲಕ್ಷ್ಮಿ ಹೆಬ್ಬಾಳಕರ್, ಈಶ್ವರ ಖಂಡ್ರೆ !
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಡಿಸಿರುವ ಬಜೆಟ್ ಬಗ್ಗೆ ಅವರ ಸಂಪುಟ ಸಚಿವರು ಅಪಾರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಚಿವರಾದ ಎಂ ಬಿ ಪಾಟೀಲ್, ಲಕ್ಷ್ಮಿ ಹೆಬ್ಬಾಳ್ಕರ್, ಈಶ್ವರ್ ಖಂಡ್ರೆ, ಶಿವರಾಜ್ ತಂಗಡಗಿ ಸೇರಿದಂತೆ ಹಲವು ಸಚಿವರು ತಮ್ಮ ಮೆಚ್ಚುಗೆಯನ್ನು ಮಾಧ್ಯಮ ಪ್ರಕಟಣೆ ಮೂಲಕ ವ್ಯಕ್ತಪಡಿಸಿದ್ದಾರೆ. ಸಂಪೂರ್ಣ ಜನಪರ ಬಜೆಟ್ – ಎಂ ಬಿ ಪಾಟೀಲ್: ಮುಖ್ಯಮಂತ್ರಿ ಸಿದ್ದರಾಮಯ್ಯನವರು ದಾಖಲೆಯ 14ನೇ ಬಾರಿಗೆ ಮಂಡಿಸಿರುವ ಬಜೆಟ್ ಮಹಿಳೆಯರು, ದಲಿತರು, ರೈತರು ಅಲ್ಪಸಂಖ್ಯಾತರು, ಬಹುಸಂಖ್ಯಾತರು ಮತ್ತು …
Read More »ವಿಧಾನಸಭೆ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳ ಜೊತೆ ಕಾಂಗ್ರೆಸ್ ಸಭೆ
ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪರಾಜಿತ ಅಭ್ಯರ್ಥಿಗಳ ಜೊತೆ ಶುಕ್ರವಾರ ಕಾಂಗ್ರೆಸ್ ಮಹತ್ವದ ಸಭೆ ನಡೆಸಿತು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಸೇರಿದಂತೆ ಸಂಪುಟ ಸದಸ್ಯರು ಹಾಗೂ ಶಾಸಕರು ಭಾಗಿಯಾಗಿದ್ದರು. ಸಭೆಯ ಬಳಿಕ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಪರಾಜಿತ ಅಭ್ಯರ್ಥಿಗಳನ್ನು ಕರೆಸಿ ಅವರಿಗೆ ಆದ ಸಮಸ್ಯೆಯನ್ನ ಕೇಳಿದ್ದೇವೆ. ಮುಂಬರುವ ದಿನಗಳಲ್ಲಿ ಇವರಿಗೆ ಶಕ್ತಿ ತುಂಬುವ …
Read More »ವಿಶೇಷ ವ್ಯಕ್ತಿ ವಿಪಕ್ಷ ನಾಯಕ ಆಗ್ತಾರೆ: ನಿರಾಣಿ
ಬೆಳಗಾವಿ : ವಿರೋಧ ಪಕ್ಷದ ನಾಯಕನನ್ನಾಗಿ ವಿಶೇಷ ವ್ಯಕ್ತಿಯನ್ನು ಆಯ್ಕೆ ಮಾಡುವ ಹಿನ್ನೆಲೆಯಲ್ಲಿ ವಿಳಂಬವಾಗಿದೆ. ಹೀಗಾಗಿ ಕಾದು ನೋಡಿ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ. ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ವಿಪಕ್ಷ ನಾಯಕನ ಆಯ್ಕೆ ಕುರಿತು ಮಾತನಾಡಿ, ವಿರೋಧ ಪಕ್ಷ ನಾಯಕನ ಸ್ಥಾನ ಯಾರಿಗೆ ಕೊಟ್ಟರೂ ಅವರು ನಮ್ಮ ಪಕ್ಷದವರೇ. ನಮ್ಮ ಪಕ್ಷದ ಹಿರಿಯರು, ರಾಜ್ಯ, ರಾಷ್ಟ್ರ ನಾಯಕರು ಸೇರಿ ಯಾರನ್ನು ವಿಪಕ್ಷ ನಾಯಕನಾಗಿ …
Read More »ಜುಲೈ 16 ರಿಂದ ಗೃಹ ಲಕ್ಮಿ ಕಾರ್ಯಕ್ರಮಕ್ಕೆ ಅರ್ಜಿ ನೋಂದಣಿ ಶುರು
ಬೆಂಗಳೂರು: ಜುಲೈ 16 ರಿಂದ ಗೃಹ ಲಕ್ಮಿ ಕಾರ್ಯಕ್ರಮಕ್ಕೆ ಅರ್ಜಿ ನೋಂದಣಿ ಶುರುವಾಗಲಿದ್ದು, ಆಗಸ್ಟ್ 15 ಇಲ್ಲವೇ 16ರಂದು ನಿಮ್ಮ ಖಾತೆಗೆ ಹಣ ಬರಲಿದೆ ಅಂತ ಸಿಎಂಸಿದ್ದರಾಮಯ್ಯ ಅವರು ಹೇಳಿದ್ದಾರೆ. ಅವರು ಶುಕ್ರವಾರ ಬಜೆಟ್ ಮಂಡನೆ ಮುಗಿಸಿದ ಬೆನ್ನಲೇ ಪತ್ರಿಕಾ ಗೋಷ್ಠಿ ಉದ್ದೇಶಿಸಿ ಮಾತನಾಡಿದರು. ಇದೇ ವೇಳೆ ಅವರು ಮಾತನಾಡಿ, ಈ ಬಜೆಟ್ ಐದು ಗ್ಯಾರಂಟಿಗಳು ಮತ್ತು ನಮ್ಮ ಚುನಾವಣಾ ಪ್ರಣಾಳಿಕೆಗಳಲ್ಲಿ ತಿಳಿಸಿದ್ದ ಭರವಸೆಗಳನ್ನು ಒಳಗೊಂಡಿದೆ. ಇದು ಗ್ಯಾರಂಟಿ ಬಜೆಟ್ …
Read More »
Laxmi News 24×7