ಬೆಂಗಳೂರು: ಚಿತ್ರರಂಗದ ಬೇಡಿಕೆಯಂತೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫಿಲ್ಮ್ ಸಿಟಿಯನ್ನು ಮೈಸೂರಿನಲ್ಲೇ ಸ್ಥಾಪಿಸುವುದಾಗಿ ಬಜೆಟ್ನಲ್ಲಿ ಘೋಷಣೆ ಮಾಡಿದ್ದಾರೆ. ಈ ಹಿಂದಿನ ಸರ್ಕಾರದಲ್ಲಿ ಈ ಫಿಲ್ಮ್ ಸಿಟಿಯನ್ನು ಬೆಂಗಳೂರಿಗೆ ವರ್ಗಾಯಿಸುವ ಉದ್ದೇಶ ಹೊಂದಿತು. ಇದೀಗ ಮತ್ತೆ ಮೈಸೂರು ಜಿಲ್ಲೆಯಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಚಿತ್ರನಗರಿ ಸ್ಥಾಪನೆ ಮಾಡುವ ಘೋಷಣೆ ಮಾಡಿದ್ದಾರೆ. ಇದರ ಜೊತೆಗೆ ಕನ್ನಡ ಚಿತ್ರರಂಗದ ಇತಿಹಾಸ, ಅದು ಬೆಳೆದು ಬಂದ ಇತಿಹಾಸ ತಿಳಿಸುವ ಸಂಗ್ರಹಾಯಲವನ್ನು ಬೆಂಗಳೂರಿನ ಕಂಠೀರವದಲ್ಲಿರುವ ಡಾ ರಾಜ್ ಕುಮಾರ್ …
Read More »ಅಶೋಕ್ ಮಣ್ಣಿಕೇರಿ ಅನುಮಾನಸ್ಪದ ಸಾವು ಪ್ರಕರಣಕ್ಕೆ ಹೊಸ ಟ್ವಿಸ್ಟ್
ಬೆಳಗಾವಿ: ನಗರದಲ್ಲಿ ತಹಶೀಲ್ದಾರ್ (Tahsildar) ಅಶೋಕ್ ಮಣ್ಣಿಕೇರಿ ಅನುಮಾನಸ್ಪದ ಸಾವು ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ತಮ್ಮ ಸಾವಿಗೂ ಮುನ್ನ ಬರೆದಿಟ್ಟ ಡೆತ್ ನೋಟ್ (Death Note) ಪತ್ತೆಯಾಗಿದೆ. ಬೆಳಗಾವಿ (Belagavi) ನಗರದ ಎಸಿ ಕಚೇರಿಯ ಲಾಕರ್ ಪರಿಶೀಲನೆ ವೇಳೆಯಲ್ಲಿ ಡೆತ್ ನೋಟ್ ಪತ್ತೆಯಾಗಿದೆ. ಜೂನ್ 20ರಂದು ಬರೆದಿಟ್ಟಿದ್ದ ಪತ್ರ ಪೊಲೀಸ್ ಪರಿಶೀಲನೆ ವೇಳೆ ಪತ್ತೆಯಾಗಿದ್ದು, ಸಾವಿಗೆ ಪತ್ನಿಯ ಕಿರುಕುಳವೇ (Harassment) ಕಾರಣ ಎಂದು ನೋಟ್‌ನಲ್ಲಿ ಉಲ್ಲೇಖಿಸಲಾಗಿದೆ. ತಹಶೀಲ್ದಾರ್ ಹುದ್ದೆಗೆ …
Read More »ಡಿ.ಕೆ.ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಹೈಕೋರ್ಟ್ನಲ್ಲಿ ಇಂದು ವಿಚಾರಣೆ
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಸಿಬಿಐ ದಾಖಲಿಸಿರುವ ಪ್ರಥಮ ವರ್ತಮಾನ ವರದಿ (ಎಫ್‌ಐಆರ್) ರದ್ದು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಹೈಕೋರ್ಟ್ನಲ್ಲಿ ಇಂದೂ ಕೂಡ ನಡೆಯಲಿದೆ. ಪ್ರಕರಣ ಸಂಬಂಧ ಡಿ.ಕೆ. ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಗುರುವಾರ ನಡೆಸಿದ ನ್ಯಾಯಮೂರ್ತಿ ಕೆ. ನಟರಾಜನ್ ಅವರಿದ್ದ ಪೀಠ, ಡಿಕೆಶಿ ಪರ ಸುದೀರ್ಘ ವಾದ ಆಲಿಸಿದ್ದು, ಸಿಬಿಐ ವಾದ ಆಲಿಸಲು ಶುಕ್ರವಾರಕ್ಕೆ ಮುಂದೂಡಿತ್ತು. ವಿಚಾರಣೆ ವೇಳೆ ಅರ್ಜಿದಾರರ …
Read More »ನನಗೆ 82 ಅಥವಾ 92 ವರ್ಷಗಳೇ ಆಗಿರಲಿ ಏನೀಗ. ನಾನೇ ಎನ್ಸಿಪಿ ಅಧ್ಯಕ್ಷ: ಶರದ್ ಪವಾರ್
ನವದೆಹಲಿ: ನಾನೂ ಈಗಲೂ ಎನ್ಸಿಪಿಯ ಅಧ್ಯಕ್ಷ. ನನಗೆ 82 ಅಥವಾ 92 ವರ್ಷಗಳೇ ಆಗಿರಲಿ ಏನೀಗ. ನಾನು ಈಗಲೂ ಸಮರ್ಥನಾಗಿದ್ದೇನೆ ಎಂದು ಹೇಳುವ ಮೂಲಕ ಶರದ್ ಪವಾರ್, ತಮ್ಮ ಸಹೋದರನ ಮಗ ಅಜಿತ್ ಪವಾರ್ಗೆ ತಿರುಗೇಟು ನೀಡಿದ್ದಾರೆ. ಪಕ್ಷ ಇಬ್ಭಾಗವಾಗಿದ್ದು, ತಮ್ಮದೇ ನಿಜವಾದ ಪಕ್ಷ ಎಂದು ಅಜಿತ್ ಪವಾರ್ ಹೇಳಿಕೊಳ್ಳುತ್ತಿರುವ ಬೆನ್ನಲೇ, ಶರದ್ ಪವಾರ್ ದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಸಿದರು. ಈ ಸಭೆಯ ಬಳಿಕ ಮಾತನಾಡಿದ ಪವಾರ್, ನಾನೇ …
Read More »ತಮ್ಮ 14ನೇ ಬಜೆಟ್ ಮಂಡನೆ ಮಾಡಲಿದ್ದಾರೆ. ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಪಂಚ ಗ್ಯಾರಂಟಿಗಳಿಗೆ ಹಣ ಹೊಂದಿಸುವ ಹೊಣೆಗಾರಿಕೆಯೊಂದಿಗೆ ಸಿಎಂ ಸಿದ್ದರಾಮಯ್ಯ ಮಧ್ಯಾಹ್ನ 12 ಗಂಟೆಗೆ ತಮ್ಮ 14ನೇ ಬಜೆಟ್ ಮಂಡನೆ ಮಾಡಲಿದ್ದಾರೆ. ಸುಮಾರು 3.30 ಲಕ್ಷ ಕೋಟಿ ಆಸುಪಾಸಿನ ಬಜೆಟ್ ಮಂಡನೆ ಮಾಡಲಿದ್ದು, ಬಹುತೇಕ ಗ್ಯಾರಂಟಿ ಕೇಂದ್ರೀಕೃತ ಬಜೆಟ್ ಆಗಿರಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೂತನ ಕಾಂಗ್ರೆಸ್ ಸರ್ಕಾರದ 2023-24 ಸಾಲಿನ ನೂತನ ಬಜೆಟ್ ಮಂಡನೆ ಮಾಡಲಿದ್ದಾರೆ. 9 ತಿಂಗಳ ಬಜೆಟ್ ಮಂಡನೆ ಮಾಡುವ ಮೂಲಕ ತಮ್ಮ 14ನೇ ಆಯವ್ಯಯ ಮಂಡಿಸಲಿದ್ದಾರೆ. …
Read More »ವಿಧಾನಸಭೆಯಲ್ಲಿ ಕೋಲಾಹಲ ಸೃಷ್ಟಿಸಿದ ಚಾಲಕನ ಆತ್ಮಹತ್ಯೆ ಯತ್ನ
ಬೆಂಗಳೂರು: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿನ ಕೆಎಸ್ಆರ್ಟಿಸಿ ಚಾಲಕ ಕಂ ನಿರ್ವಾಹಕರೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಪ್ರಕರಣ ವಿಧಾನಸಭೆಯಲ್ಲಿ ಇಂದು ಪ್ರತಿಧ್ವನಿಸಿತು. ಆಡಳಿತ ಹಾಗೂ ಪ್ರತಿಪಕ್ಷಗಳಾದ ಬಿಜೆಪಿ, ಜೆಡಿಎಸ್ ಸದಸ್ಯರ ನಡುವೆ ಏರು ಧ್ವನಿಯಲ್ಲಿ ಮಾತಿನ ಚಕಮಕಿ ನಡೆದು ಇಡೀ ಸದನ ರಣರಂಗದಂತೆ ನಿರ್ಮಾಣವಾದ ಪ್ರಸಂಗ ನಡೆಯಿತು. ಅಲ್ಲದೇ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ಅಲ್ಲಿಯವರೆಗೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯ ಸ್ವಾಮಿ ರಾಜೀನಾಮೆ ನೀಡಬೇಕು. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು …
Read More »ಸ್ಮಾರ್ಟ್ ಸಿಟಿ ಕಾಮಗಾರಿಯ ನಿರ್ಲಕ್ಷ್ಯ ವಿದ್ಯುತ್ ತಗುಲಿ ಹಸು ಕರು ಸಾವು
ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಸ್ಮಾರ್ಟ್ ಸಿಟಿಯಲ್ಲಿ ಮತ್ತೊಂದು ಅವಘಡ ಸಂಭವಿಸಿದ್ದು, ವಿದ್ಯುತ್ ಫೀಡರ್ ಪಿಲ್ಲರ್ ತಗಲಿ ಹಸು-ಕರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಇಂದು ಬೆಳಗಿನ ಜಾವ ಅಕ್ಕಿಹೊಂಡದ ಬಳಿ ನಡೆದಿದೆ. ಸ್ಮಾರ್ಟ್ ಸಿಟಿ ಯೋಜನೆಗಳಿಂದಾಗಿ ಒಂದಲ್ಲಾ ಒಂದು ಯಡವಟ್ಟುಗಳು ಆಗುತ್ತಿವೆ ಎಂದು ಅಲ್ಲಿನ ಸಾರ್ವಜನಿಕರು ಆರೋಪಿಸಿದ್ದಾರೆ. ಅದರಂತೆ ಅಕ್ಕಿಹೊಂಡದಲ್ಲಿ ಕೂಡಾ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಸುತ್ತಿರುವವರ ನಿರ್ಲಕ್ಷ್ಯದಿಂದಾಗಿ ಈ ಅವಘಡ ಸಂಭವಿಸಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲ ದಿನಗಳಿಂದ ಇಲ್ಲಿ ಸ್ಮಾರ್ಟ್ …
Read More »(ನರೇಗಾ) ಯೋಜನೆಯಲ್ಲಿ ಬೆಳಗಾವಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ
ಬೆಳಗಾವಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ (ನರೇಗಾ) ಮಾನವ ದಿನ ಸೃಜನೆಯಲ್ಲಿ ಬೆಳಗಾವಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ. ಜೊತೆಗೆ ಈ ಸಾಲಿನ ಆರ್ಥಿಕ ವರ್ಷದ ಕೇವಲ ಮೂರು ತಿಂಗಳಲ್ಲಿ 61.41 ಲಕ್ಷದಷ್ಟು ಮಾನವ ದಿನ ಸೃಜನೆ ಮಾಡಿರುವುದು ದಾಖಲೆಯಾಗಿದೆ ಎಂದು ಬೆಳಗಾವಿ ಜಿಪಂ ಸಿಇಒ ಹರ್ಷಲ್ ಭೊಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬೆಳಗಾವಿ ಜಿಲ್ಲೆಗೆ 2023-24ನೇ ಸಾಲಿಗೆ 1.40 ಕೋಟಿ ಮಾನವ ದಿನಗಳ ಸೃಜನೆಯ …
Read More »ಕನ್ನಡ ಭಾಷಾ ಪದ ಪ್ರಯೋಗದ ಬಗ್ಗೆ ಬಿಜೆಪಿ ಹಿರಿಯ ಶಾಸಕ ಬಸನಗೌಡ ಯತ್ನಾಳ್ ಹಾಸ್ಯ
ಬೆಂಗಳೂರು: ವಿಧಾನಸಭೆಯ ಅಧ್ಯಕ್ಷ ಯು ಟಿ ಖಾದರ್ ಅವರ ಕನ್ನಡ ಭಾಷಾ ಪದ ಪ್ರಯೋಗದ ಬಗ್ಗೆ ಬಿಜೆಪಿ ಹಿರಿಯ ಶಾಸಕ ಬಸನಗೌಡ ಯತ್ನಾಳ್ ಹಾಸ್ಯ ಮಾಡಿದ್ದು, ಅದನ್ನು ಸಭಾಧ್ಯಕ್ಷರು ಸ್ಪರ್ಧಾತ್ಮಕವಾಗಿ ಪರಿಗಣಿಸಿದ ಪ್ರಸಂಗ ಇಂದು ನಡೆಯಿತು. ವಿಧಾನಸಭೆಯ ಉಪಾಧ್ಯಕ್ಷರಾಗಿ ರುದ್ರಪ್ಪ ಲಮಾಣಿ ಅವಿರೋಧವಾಗಿ ಆಯ್ಕೆಯಾದ ಮೇಲೆ ಅವರನ್ನು ಅಭಿನಂದಿಸುವ ಸಂದರ್ಭದಲ್ಲಿ ಸಭಾಧ್ಯಕ್ಷರು ಹಳ್ಳಿ ಎಂಬ ಪದವನ್ನು ಹಲ್ಲಿ ಎಂದು ಉಚ್ಛಾರಣೆ ಮಾಡಿದರು. ಅದನ್ನು ಬಸನಗೌಡ ಯತ್ನಾಳ್ ಉಲ್ಲೇಖಿಸಿ ಹಳ್ಳಿ, ಹಳ್ಳಿ ಎಂದು …
Read More »ಅಕ್ರಮಕ್ಕೆ ಸಹಕರಿಸುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮ: ಕೃಷ್ಣ ಬೈರೇಗೌಡ
ಬೆಂಗಳೂರು : ರಾಜ್ಯದಲ್ಲಿ ಅಕ್ರಮವಾಗಿ ಒತ್ತುವರಿಯಾಗಿರುವ ಮತ್ತು ಕಬಳಿಕೆಯಾಗಿರುವ ಕಂದಾಯ ಭೂಮಿಯನ್ನು ವಾಪಸ್ ಪಡೆದುಕೊಳ್ಳಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ. ಅಕ್ರಮಕ್ಕೆ ಸಹಕರಿಸುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮ ವಹಿಸಲಿದ್ದು, ವ್ಯವಸ್ಥೆ ಬಿಗಿ ಮಾಡಲಿದ್ದೇವೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಇಂದು ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್ ಸದಸ್ಯ ಟಿಎ ಶರವಣ ಪ್ರಶ್ನೆಗೆ ಉತ್ತರಿಸಿದ ಸಚಿವ ಕೃಷ್ಣ ಬೈರೇಗೌಡ, ಕಂದಾಯ ಭೂಮಿ ಕಬಳಿಕೆದಾರರು, ಒತ್ತುವರಿದಾರರು ಯಾವ ಸರ್ಕಾರ ಬಂದರೂ ಹೋದರೂ …
Read More »
Laxmi News 24×7