ಬೆಂಗಳೂರು: ಅಕ್ಕಿ ಪೂರೈಸಲು ಟೆಂಡರ್ ಮಾಡಿ ಕ್ರಮ ಕೈಗೊಳ್ಳುವಂತೆ ಎನ್‌ಸಿಸಿಎಫ್ ಸೇರಿದಂತೆ ಮೂರು ಸಂಸ್ಥೆಗಳಿಗೆ ಮನವಿ ಮಾಡಿದ್ದೇವೆ. ಒಂದು ವಾರದೊಳಗೆ ಗಿರಣಿಗಳ ಮಾಲೀಕರು ಮತ್ತು ವ್ಯಾಪಾರಿಗಳೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನವಾಗಲಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಅಕ್ಕಿ ಪೂರೈಕೆ ಕುರಿತು ಎನ್‌ಸಿಸಿಎಫ್, ನಾಫೆಡ್ ಮತ್ತು ಕೇಂದ್ರೀಯ ಭಂಡಾರ ಕೊಟ್ಟಿರುವ ದರ ಪಟ್ಟಿ ಕುರಿತು ಸಭೆ ನಡೆಯಿತು. …
Read More »ಜಯದೇವ ಹೃದ್ರೋಗ ಸಂಸ್ಥೆಯಿಂದ 52 ಲಕ್ಷ ರೋಗಿಗಳಿಗೆ ಚಿಕಿತ್ಸೆ ನೀಡಿ ದಾಖಲೆ: ಡಾ.ಸಿ.ಎನ್.ಮಂಜುನಾಥ್
ಬೆಂಗಳೂರು: ಜಯದೇವ ಹೃದ್ರೋಗ ಸಂಸ್ಥೆಯಿಂದ 52 ಲಕ್ಷ ಹೃದಯ ರೋಗಿಗಳಿಗೆ ಚಿಕಿತ್ಸೆ ನೀಡಿ ದಾಖಲೆ ನಿರ್ಮಿಸಲಾಗಿದೆ ಎಂದು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ. ಸಿ.ಎನ್.ಮಂಜುನಾಥ್ ತಿಳಿಸಿದರು. ಜಯನಗರದ ಚಂದ್ರಗುಪ್ತ ಮೌರ್ಯ ಆಟದ ಮೈದಾನದಲ್ಲಿ ಶನಿವಾರ ರಕ್ಷಾ ಫೌಂಡೇಷನ್ನಿಂದ 11ನೇ ವರ್ಷದ ಸಮಾಜ ಸೇವಾ ಕಾರ್ಯಕ್ರಮದಲ್ಲಿ 10 ಸಾವಿರ ಮಕ್ಕಳಿಗೆ 1.5 ಲಕ್ಷ ಉಚಿತ ನೋಟ್ ಪುಸ್ತಕಗಳು, ಕಲಿತಾ ಪರಿಕರಗಳ ವಿತರಣೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ …
Read More »ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ಬೈಕ್ ಡಿಕ್ಕಿ: ಸ್ಥಳದಲ್ಲೇ ಇಬ್ಬರ ಯುವಕರು ಸಾವು
ಮಂಡ್ಯ: ಅಪರಿಚಿತ ವಾಹನಕ್ಕೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಮದ್ದೂರು ಪಟ್ಟಣದ ಬೆಂಗಳೂರು-ಮೈಸೂರು ಹೆದ್ದಾರಿಯ ಫ್ಲೈ ಓವರ್ ಬಳಿ ಇಂದು ನಡೆದಿದೆ. ಮಣಿ (25) ಹಾಗೂ ಜನಾರ್ಧನ ಪೂಜಾರಿ (21) ಮೃತರೆಂದು ಗುರುತಿಸಲಾಗಿದೆ. ಮುಂಜಾನೆ ಬೆಂಗಳೂರಿನಿಂದ ಮೈಸೂರಿಗೆ ತೆರಳುವ ವೇಳೆ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಮಣಿ ಕೋಲಾರ ಜಿಲ್ಲೆಯವರಾಗಿದ್ದು, ಮತ್ತೊಬ್ಬ ಯುವಕ ಜನಾರ್ಧನ್ ಪೂಜಾರಿ ಕೊಪ್ಪಳ ಜಿಲ್ಲೆಯ ಲಿಂಗದಮಂಡಿ ಗ್ರಾಮದ ನಿವಾಸಿ. ಬೆಂಗಳೂರಿನ ಖಾಸಗಿ …
Read More »ಅಕ್ಕಿ, ಮನೆ, ಸಿಲಿಂಡರ್ ಕೊಡಿ ಸಾಕು ಎಂದ ನಾರಿಯರು..
ಗಂಗಾವತಿ (ಕೊಪ್ಪಳ) : `ಬಸ್ಸಿನಲ್ಲಿ ಹೆಣ್ಮಕ್ಕಳು ಫ್ರಿಯಾಗಿ ಓಡಾಡಾಕ ಶುರುವಾದಾಗಿನಿಂದ ಒಂದೂ ಬಸ್ ಖಾಲಿ ಇರವಲ್ವು. ಮನಿ ಬಿಟ್ಟು ಬಂದು ಗುಡಿಗೆ ಹೋಗಣಾಂದ್ರ ಹೈರಾಣ ಆಗಿವಿ. ಈ ಫ್ರೀ ಬಸ್ ಬಿಟ್ಟು ಸರ್ಕಾರದೋರು ಜನರಿಗೆ ಬೇಕಾದ ಅಕ್ಕಿ, ಸಿಲಿಂಡರ್, ಮನೆ ಕೊಡ್ಲಿ’.. ಹೀಗೆಂದು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಮಹಿಳೆಯರ ಉಚಿತ ಸಾರಿಗೆ ಪ್ರಯಾಣಕ್ಕೆ ಅವಕಾಶ ಇರುವ ಶಕ್ತಿ ಯೋಜನೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶನಿವಾರ ಆಗಿದ್ದರಿಂದ ಗಂಗಾವತಿ ತಾಲ್ಲೂಕಿನ ಹಲವು …
Read More »ಮೂಢನಂಬಿಕೆಗೆ ಸಿಎಂ ಸೆಡ್ಡು.. ವಿಧಾನಸೌಧದಲ್ಲಿ ಐದು ವರ್ಷಗಳಿಂದ ಮುಚ್ಚಿದ್ದ ದಕ್ಷಿಣ ದ್ವಾರವನ್ನು ತೆರೆಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಸ್ತು ದೋಷವನ್ನು ಧಿಕ್ಕರಿಸಿ ವಿಧಾನಸೌಧದ ಸಿಎಂ ಕಚೇರಿ ಪ್ರವೇಶಿಸಿದ ಪ್ರಸಂಗ ಶನಿವಾರ ನಡೆಯಿತು. ವಾಸ್ತುದೋಷದ ಕಾರಣದಿಂದ ಸುಮಾರು ಎರಡು ದಶಕಗಳಿಂದ ಮುಚ್ಚಿದ್ದ ವಿಧಾನಸೌಧದ ಮುಖ್ಯಮಂತ್ರಿ ಕಚೇರಿಯ ದಕ್ಷಿಣದ ದ್ವಾರವನ್ನು ಸಿಎಂ ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ತೆಗೆಸುವ ಮೂಲಕ ಮತ್ತೊಮ್ಮೆ ಮೂಢನಂಬಿಕೆಯನ್ನು ವಿರೋಧಿಸಿದ್ದಾರೆ. ಅನ್ನಭಾಗ್ಯ ಸಂಬಂಧ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲು ವಿಧಾನಸೌಧಕ್ಕೆ ಆಗಮಿಸಿದ ಮುಖ್ಯಮಂತ್ರಿಗಳು ದಕ್ಷಿಣ ದ್ವಾರ ಬಂದ್ ಆಗಿರುವುದನ್ನು ಗಮನಿಸಿದರು. ವಾಸ್ತು ಕಾರಣದಿಂದ …
Read More »ಮಂದಿರದ ದುರಸ್ಥಿ ಕಾರ್ಯದಲ್ಲಿ ತೊಡಗಿಕೊಂಡಿರುವ ಶ್ರೀರಾಮ ಭಕ್ತ ಸಮೂಹ
ಖಾನಾಪೂರ ತಾಲೂಕಿನ ನಂದಗಡದ ಮುಖ್ಯ ರಸ್ತೆಯ ಮಧ್ಯದಲ್ಲಿ ಇರುವ ಶ್ರೀ ರಾಮ ಮಂದಿರದಲ್ಲಿ ಶ್ರಮದಾನ ಮಾಡುವ ಮುಖಾಂತರ ಮಂದಿರದ ದುರಸ್ಥಿ ಕಾರ್ಯ ನಿರ್ವಹಿಸಿ ಮಂದಿರದ ಅಕ್ಕ ಪಕ್ಕದ ಪರಿಸರ, ಅದರಂತೆಯೇ ಮೇಲ್ಚಾವಣಿಗೆ ಪತ್ರೆ ಹಾಕಿ ದುರಸ್ಥಿ ಕೆಲಸಕ್ಕೆ ಮೊದಲಿಗೆ ಪೂಜೆ ಸಲ್ಲಿಸಿದ ನಂತರ ಚಾಲನೆ ನೀಡಲಾಯಿತು. ಈ ಕುರಿತು ಮೊದಲಿಗೆ ಸಾರ್ವಜನಿಕವಾಗಿ ಚರ್ಚೆ ನಡೆಸಿ ಅವರಿಂದ ಸಲಹೆ ಸೂಚನೆಗಳನ್ನು ಪಡೆದುಕೊಂಡು ಇದಕ್ಕಾಗಿ ತಗಲುವ ಸಾಮಾಗ್ರಿಗಳ ಬಗ್ಗೆ ವ್ಯವಸ್ಥೆ ಮಾಡಿಕೊಂಡು …
Read More »ಬಿಜೆಪಿ ತಳಪಾಯವೇ ಕುಸಿದು ಹೋಗುತ್ತಿದೆ ಅದನ್ನು ಗಟ್ಟಿ ಮಾಡೋ ಕೆಲಸ ಆಗ್ತಿಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ ಹೇಳಿದರು.
ಬಿಜೆಪಿ ತಳಪಾಯವೇ ಕುಸಿದು ಹೋಗುತ್ತಿದೆ ಅದನ್ನು ಗಟ್ಟಿ ಮಾಡೋ ಕೆಲಸ ಆಗ್ತಿಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ ಹೇಳಿದರು. ನಗರದಲ್ಲಿ ಮಾದ್ಯಮ ವರದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿಯ ಅಡಿಪಾಯವೇ ಡಿಸ್ಟರ್ಬ್ ಆಗಿ ಕುಸಿದು ಹೋಗುತ್ತಿದೆ. ಇದು ಲೋಕಸಭೆ ಚುನಾವಣೆಯಲ್ಲಿ ಪರಿಣಾಮ ಬೀರತ್ತೆ . ಲೋಕಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸತ್ತೆ ಎಂದರು. ನಾನು ಹಿಂದೆ ಹೇಳಿರೋದು ಎಲ್ಲವೂ ನಿಜ ಆಗ್ತಿದೆ ಎಂದ ಕಟೀಲು. ಬಿಜೆಪಿ ಸೋಲಿಗೆ ಕಾರಣ ಯಾರೂ …
Read More »ಸಣ್ಣ ಕಾರಣಕ್ಕೆ ಮಹಿಳಾ ಪ್ರಯಾಣಿಕರು ಕಂಡಕ್ಟರ್ನ ಕತ್ತು ಹಿಡಿದು ಎಳೆದಾಡಿದ
ರಾಜ್ಯ ಸರ್ಕಾರವು ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಸ್ತ್ರೀ ಶಕ್ತಿ ಯೋಜನೆ ಸೌಂದತ್ತಿಯಲ್ಲಿ ವಿಪರಿತ ಪರಿಣಾಮವನ್ನು ಕಂಡಿದೆ. ಸಣ್ಣ ಕಾರಣಕ್ಕೆ ಮಹಿಳಾ ಪ್ರಯಾಣಿಕರು ಕಂಡಕ್ಟರ್ನ ಕತ್ತು ಹಿಡಿದು ಎಳೆದಾಡಿದ ಘಟನೆ ನಡೆದಿದ್ದು, ವಿಡಿಯೋ ವೈರಲ್ ಆಗಿದೆ. ಹೌದು, ರಾಜ್ಯ ಸರ್ಕಾರದ ಸ್ತ್ರೀ ಶಕ್ತಿ ಯೋಜನೆಯಿಂದಾಗಿ ಮಹಿಳೆಯರ ಬಸ್ ಪ್ರಯಾಣ ಹೆಚ್ಚಿದ್ದು, ಬೆಳಗಾವಿ ಜಿಲ್ಲೆಯ ಸೌಂದತ್ತಿ ಯಲ್ಲಮ್ಮ ಬೆಟ್ಟದಲ್ಲಿ ಜೂನ್ 23 ರಂದು ಮಧ್ಯಾಹ್ನ ಸಣ್ಣ ವಿಚಾರಕ್ಕೆ ಮಹಿಳಾ ಪ್ರಯಾಣಿಕರು-ಕಂಡಕ್ಟರ್ ನಡುವೆ …
Read More »ಗೃಹಲಕ್ಷ್ಮಿ ಯೋಜನೆಗೆ ಜೂನ್ 27ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ – ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಮೈಸೂರು: ಜೂನ್ 27ರಂದು ಸಚಿವ ಸಂಪುಟ ಸಭೆ ನಡೆಯಲಿದೆ. ಆ ಸಭೆಯಲ್ಲಿ ಗೃಹಲಕ್ಷ್ಮಿಗೆ ಅರ್ಜಿ ಸಲ್ಲಿಸಲು ಸಿದ್ಧಪಡಿಸಲಾಗಿರುವ ಆಯಪ್ಅನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ತೋರಿಸಿ ನಂತರ ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಚಾಮುಂಡಿ ಬೆಟ್ಟದಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿಯ ದರ್ಶನ ಪಡೆದು ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ಆಗಸ್ಟ್ 17ರ ನಂತರದಿಂದ ಫಲನಾಭವಿಗಳ ಹಣ …
Read More »ಡಿಸೆಂಬರ್ ವೇಳೆಗೆ ಬಿಬಿಎಂಪಿ ಚುನಾವಣೆ.. ವಾರ್ಡ್ ವಿಂಗಡಣೆ ಅಧಿಕಾರಿಗಳದ್ದೇ ಅಂತಿಮ ನಿರ್ಧಾರ: ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು: ಡಿಸೆಂಬರ್ ವೇಳೆಗೆ ಬಿಬಿಎಂಪಿ ಚುನಾವಣೆ ನಡೆಯಲಿದೆ. 243 ವಾರ್ಡಗಳಿಗೂ ಚುನಾವಣೆ ಮಾಡುತ್ತೇವೆ. ನಾವು ರಾಜಕಾರಣ ಮಾಡುವುದಿಲ್ಲ ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಬಸವನಗುಡಿ, ಬುಲ್ ಟೆಂಪಲ್ ರಸ್ತೆಯ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಮುನ್ನ ಬಿಬಿಎಂಪಿ ಚುನಾವಣೆ ಆಗಲಿದೆ. ಬಿಬಿಎಂಪಿಯಲ್ಲಿ ಕಾಂಗ್ರೆಸ್ ಮೇಯರ್ ಇಟ್ಟುಕೊಂಡೇ ಲೋಕಸಭೆ ಚುನಾವಣೆಗೆ ಹೋಗುತ್ತೇವೆ ಎಂದು ಹೇಳಿದರು. ಚುನಾವಣೆ ಬೇಗ …
Read More »
Laxmi News 24×7