Breaking News

ರಾಜ್ಯ

ಮಂಡ್ಯದಲ್ಲಿ ಅಂಬಿ ಪುತ್ರನ ಭರ್ಜರಿ ಬೀಗರೂಟ: 50 ಸಾವಿರ ಮಂದಿಗೆ ಸಿದ್ಧತೆ, 7 ಟನ್ ಮಟನ್, 7 ಟನ್ ಚಿಕನ್!

ಮಂಡ್ಯ: ಜೂನ್​ 5 ರಂದು ದಾಂಪತ್ಯಕ್ಕೆ ಕಾಲಿರಿಸಿದ ದಿವಂಗತ ರೆಬಲ್​ ಸ್ಟಾರ್ ಅಂಬರೀಶ್​ ಪುತ್ರ ಅಭಿಷೇಕ್​ ಅಂಬರೀಶ್​ ಮತ್ತು ಅವಿವಾ ಬಿದ್ದಪ್ಪ ಬೀಗರ ಔತಣಕೂಟ ನಾಳೆ ಸಕ್ಕರೆನಾಡು ಮಂಡ್ಯದ ಗೆಜ್ಜಲಗೆರೆ ಕಾಲೋನಿ ಬಳಿ ನಡೆಯಲಿದೆ. ಎಷ್ಟೇ ಸಾವಿರ ಜನ ಬಂದ್ರೂ ಊಟದ ವ್ಯವಸ್ಥೆ ಮಾಡಲು ಸಕಲ ಸಿದ್ಧತೆ ಮಾಡಲಾಗುತ್ತಿದೆ. ಅಂಬರೀಶ್​ಗೆ ಪ್ರಿಯವಾದ ಮಂಡ್ಯ ಶೈಲಿಯ ಬಾಡೂಟವನ್ನು ನಾಳೆ ತಯಾರಿಸಲಾಗುತ್ತದೆ. ಸಿದ್ದತೆ ಪರಿಶೀಲನೆ ಬಳಿಕ ಮಾಹಿತಿ ನೀಡಿದ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್, “ಬೆಳಗ್ಗೆ …

Read More »

ಪ್ರಯಾಣಿಕನ ₹5 ಲಕ್ಷ ಹಣ ಕದ್ದು ಕಾಲ್ಕಿತ್ತ ಕಳ್ಳನ ಬೆನ್ನಟ್ಟಿ ಹಿಡಿದು ಪೊಲೀಸರಿಗೊಪ್ಪಿಸಿದ KSRTC ಸಿಬ್ಬಂದಿ!

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಚಾಲನಾ ಸಿಬ್ಬಂದಿಯ ಸಮಯೋಚಿತ ಸಾಹಸ ಕಾರ್ಯ ಮತ್ತು ಧೈರ್ಯದಿಂದಾಗಿ ಪ್ರಯಾಣಿಕನ 5 ಲಕ್ಷ ರೂಪಾಯಿ ಹಣ ಮರಳಿ ಸಿಕ್ಕಿದೆ. ಹಣ ಕದ್ದು ಓಡುತ್ತಿದ್ದ ಕಳ್ಳನನ್ನು ಬಸ್‌ ಚಾಲಕ ಮತ್ತು ನಿರ್ವಾಹಕ ಇಬ್ಬರೂ ಬೆನ್ನಟ್ಟಿ ಹಿಡಿದಿದ್ದು, ಮೆಚ್ಚುಗೆಗೆ ಕಾರಣವಾಗಿದೆ. ಜುಲೈ 14ರಂದು ಬೆಂಗಳೂರು ಕೇಂದ್ರೀಯ ವಿಭಾಗದ ಘಟಕ-4ರ ಕೆಎ-57 ಎಫ್ 3975 ಸಂಖ್ಯೆಯ ಬೆಂಗಳೂರು- ತಿರುನಲ್ಲಾರ್ ಮಾರ್ಗದ ಬಸ್ಸಿನ ಆಸನ ಸಂಖ್ಯೆ 17- 18 …

Read More »

ಬೆಳಗಾವಿಯ ಅನಗೋಳ ಕೆರೆ ಬಳಿ ವ್ಯಕ್ತಿಯ ಬರ್ಬರ ಹತ್ಯೆ

ಬೆಳಗಾವಿ: ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು ಕೆರೆ ಹತ್ತಿರ ಶವ ಬಿಸಾಕಿ ಹೋಗಿರುವ ಘಟನೆ ನಗರದ ಅನಗೋಳದಲ್ಲಿ ನಡೆದಿದೆ. ಅನಗೋಳದ ಹೊರ ವಲಯದ ಕೆರೆ ಹತ್ತಿರ ವ್ಯಕ್ತಿಯ ಶವ ಪತ್ತೆಯಾಗಿದ್ದು, ಕೃಷಿ ಕೆಲಸಕ್ಕೆ ಹೊರಟಿದ್ದ ರೈತರು ಮೃತದೇಹ ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬೆಳಗಾವಿ ತಾಲೂಕಿನ ಯಳ್ಳೂರ ಗ್ರಾಮದ ಸಂಜಯ್ ತುಕಾರಾಮ್ ಪಾಟೀಲ (34) ಕೊಲೆಯಾದ ವ್ಯಕ್ತಿ. ಟಿಳಕವಾಡಿ ಪೊಲೀಸರಿಂದ ತನಿಖೆ: ಕೆಲಸಕ್ಕೆ ಹೋಗಿ ಬರುವುದಾಗಿ ಮೊನ್ನೆ ಮನೆಯಿಂದ ಹೊರಬಂದಿದ್ದ ಸಂಜಯ್ ಪಾಟೀಲ …

Read More »

ಹೆಡ್ಗೇವಾರ್ ಮತ್ತು ಸಾವರ್ಕರ್ ಪಠ್ಯಕ್ಕೆ ಕೊಕ್ : ಜನರ ಬಳಿ ಹೋಗಲು ಬಿಜೆಪಿ ನಿರ್ಧಾರ

ಬೆಂಗಳೂರು : ಹೆಡ್ಗೇವಾರ್, ಸಾವರ್ಕರ್ ಪಠ್ಯ ಕೈಬಿಟ್ಟು ಟಿಪ್ಪು ಮತ್ತು ನೆಹರೂ ಪತ್ರವನ್ನು ಪಠ್ಯದಲ್ಲಿ ಸೇರಿಸುವ ರಾಜ್ಯ ಸಚಿವ ಸಂಪುಟದ ನಿರ್ಧಾರವನ್ನು ಬಿಜೆಪಿ ಖಂಡಿಸಿದೆ. ಈ ಸಂಬಂಧ ಬಿಜೆಪಿ ಸಾವರ್ಕರ್ ಪಾಠ ತೆರವು ವಿಷಯವನ್ನು ನಾವು ಜನರ ಬಳಿ ತೆಗೆದುಕೊಂಡು ಹೋಗುತ್ತೇವೆ. ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, ಲೋಕಸಭೆ ಚುನಾವಣೆಗೆ ತೆಗೆದುಕೊಂಡು ಹೋಗುತ್ತೇವೆ. ಪೋಷಕರ ಬಳಿ ತೆಗೆದುಕೊಂಡು ಹೋಗುತ್ತೇವೆ, ವಿದ್ಯಾರ್ಥಿಗಳ ಮುಂದೆಯೂ ಇಡುತ್ತೇವೆ ಎಂದು ಬಿಜೆಪಿ ಹೇಳಿದೆ. ಸಚಿವ ಸಂಪುಟ ನಿರ್ಣಯದ …

Read More »

‘ಪುಕ್ಸಟ್ಟೆ ಅಕ್ಕಿ ಕೊಡುವಂತೆ ನಾವು ಕೇಳಿಲ್ಲ’- ಕೇಂದ್ರದ ವಿರುದ್ಧ ಡಿ.ಕೆ.ಶಿವಕುಮಾರ್ ವಾಗ್ದಾಳಿ

ಮೈಸೂರು : “ಕೇಂದ್ರ ಸರ್ಕಾರ ಅಕ್ಕಿ ಕೊಡುವುದಿಲ್ಲ ಎಂದು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದೆ. ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ. ತಾರತಮ್ಯವನ್ನು ನಾವು ಒಪ್ಪಿಕೊಳ್ಳುವುದಿಲ್ಲ. ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರದ ಧೋರಣೆಯನ್ನು ಖಂಡಿಸಿ, ಹೋರಾಟ ಮಾಡಲು ಕಾರ್ಯಕ್ರಮ ರೂಪಿಸುತ್ತೇವೆ” ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಇಂದು ಮಾತನಾಡಿದ ಅವರು, “ಕೇಂದ್ರಕ್ಕೆ ಅಕ್ಕಿ ಕೊಡುವಂತೆ ನಾವು ಪುಕ್ಸಟ್ಟೆ ಕೇಳಿಲ್ಲ. ನೀವು ಯಾವ ರೀತಿ ಅಕ್ಕಿ ಕೊಡುತ್ತಿದ್ದಿರೋ ಅದೇ …

Read More »

ಹೊರ ರಾಜ್ಯಗಳಿಂದ ಅಕ್ಕಿ ತರಲು ತೀರ್ಮಾನ : ಜುಲೈ 1ಕ್ಕೆ ಅನ್ನಭಾಗ್ಯ ಯೋಜನೆ ಜಾರಿಗೆ ಪ್ರಯತ್ನ

ಬೆಂಗಳೂರು : ಅನ್ನಭಾಗ್ಯ ಯೋಜನೆಗೆ ಬೇಕಾದ ಅಕ್ಕಿಯನ್ನು ಹೊರರಾಜ್ಯಗಳಿಂದ ತರಲು ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಜ್ಜಾಗಿದ್ದಾರೆ. ಯೋಜನೆಗೆ ಅಗತ್ಯವಾದ ಅಕ್ಕಿಯನ್ನು ತೆರೆದ ಮಾರುಕಟ್ಟೆಯಲ್ಲಿ ಒದಗಿಸಲು ಕೇಂದ್ರ ಸರ್ಕಾರ ನಿರಾಕರಿಸಿದ ಹಿನ್ನೆಲೆಯಲ್ಲಿ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಸಿದ್ದರಾಮಯ್ಯ ತಮ್ಮ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಯನ್ನು ಜುಲೈ ಒಂದರಂದೇ ಜಾರಿಗೆ ತರಲು ಎಲ್ಲ ಕಸರತ್ತು ನಡೆಸಿದ್ದಾರೆ. ವಿಧಾನಸೌಧದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅನ್ನಭಾಗ್ಯ ಯೋಜನೆಗೆ ಅಗತ್ಯವಾದ ಅಕ್ಕಿ ಯಾವ ಯಾವ …

Read More »

ಪಂಚಮಸಾಲಿ ಮೀಸಲಾತಿ ವಿಚಾರ: ಆದಷ್ಟು ಬೇಗ ಸಿಎಂ ಸಿದ್ದರಾಮಯ್ಯ ಆಡಳಿತಾತ್ಮಕ ಸಭೆ ಕರೆದು ತೀರ್ಮಾನಿಸಲಿ

ಬೆಳಗಾವಿ: ಈ ಬಾರಿ ನಮ್ಮ ಪಂಚಮಸಾಲಿ ಸಮಾಜ ಬಹುತೇಕ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಿರುವ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಮಗೆ ನ್ಯಾಯ ಕೊಡಿಸುವ ವಿಶ್ವಾಸವಿದೆ‌. ಆ ನಿಟ್ಟಿನಲ್ಲಿ ಆದಷ್ಟು ಬೇಗನೆ ಮುಖ್ಯಮಂತ್ರಿಗಳು ಆಡಳಿತಾತ್ಮಕ ಸಭೆ ಕರೆದು ತಮ್ಮ ಜೊತೆ ಮಾತುಕತೆ ನಡೆಸಬೇಕು ಎಂದು ಕೂಡಲ ಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಒತ್ತಾಯಿಸಿದ್ದಾರೆ. ಇಂದು ನಗರದ ಗಾಂಧಿ ಭವನದಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಪಂಚಮಸಾಲಿ ಮೀಸಲಾತಿ …

Read More »

ಲೋಕಸಭಾ ಚುನಾವಣೆಯ ಹೊಸ್ತಿಲಲ್ಲಿ ಕೇಂದ್ರ ಸರ್ಕಾರಕ್ಕೆ ಮತ್ತೊಂದು ಧರ್ಮ ಸಂಕಟ

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಹೊಸ್ತಿಲಲ್ಲಿ ಕೇಂದ್ರ ಸರ್ಕಾರಕ್ಕೆ ಮತ್ತೊಂದು ಧರ್ಮ ಸಂಕಟ ಎದುರಾಗಿದೆ. ವೀರಶೈವ ಲಿಂಗಾಯತ ಸಮುದಾಯವನ್ನು ಒಬಿಸಿ ಪಟ್ಟಿಗೆ ಸೇರಿಸಬೇಕೆಂದು ವೀರಶೈವ ಲಿಂಗಾಯತ ಸಮುದಾಯದ ಎಲ್ಲ ಉಪಪಂಗಡಗಳು ಹಕ್ಕೊತ್ತಾಯ ಮಂಡಿಸಿವೆ. ಹುಬ್ಬಳ್ಳಿಯ ಮೂರು ಸಾವಿರ ಮಠದಲ್ಲಿಂದು ಬೃಹತ್ ಸಭೆ ನಡೆಸಿದ ಮಠಾಧೀಶರು, ಎಲ್ಲ ವೀರಶೈವ ಲಿಂಗಾಯತರನ್ನು ಒಬಿಸಿ ಪಟ್ಟಿಗೆ ಸೇರಿಸಬೇಕೆಂದು ಒತ್ತಾಯಿಸಿದರು. ಮಠಾಧೀಶರ ಸಭೆಯ ನೇತೃತ್ವವನ್ನು ಮೂರು ಸಾವಿರ ಮಠದ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ವಹಿಸಿದ್ದರು. ಕಾಶಿ ಪೀಠದ ಚಂದ್ರಶೇಖರ …

Read More »

ರಾಜ್ಯಕ್ಕೆ ಅಕ್ಕಿ ಕೊಡದ ವಿಚಾರ : ಕೇಂದ್ರದ ನಡೆಯ ಹಿಂದೆ ದುರುದ್ದೇಶ ಇದೆ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಕೇಂದ್ರದ ನಡೆಯ ಹಿಂದೆ ದುರುದ್ದೇಶ ಇದೆ. ದುಡ್ಡುಕೊಟ್ಟು ಅಕ್ಕಿ ಖರೀದಿ ಮಾಡ್ತೀವಿ ಎಂದು ಹೇಳಿದ್ರು, ಒಪ್ಪದಿರಲು ಕಾರಣವೇನು? ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ. ವಿಧಾನಸೌಧದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇದಕ್ಕೆ ಕೇಂದ್ರ ಸರ್ಕಾರ ಮತ್ತು ಬಿಜೆಪಿಯ ನಾಯಕರೇ ಉತ್ತರ ಕೊಡಬೇಕು. ಬಡವರಿಗೆ ಹಾಗೂ ದುಡಿಯುವ ಕೈಗಳನ್ನು ಚೆನ್ನಾಗಿ ನೋಡಿಕೊಳ್ಳುತ್ತೇವೆ ಎಂದಾಗ, ಇದಕ್ಕೆ ಕೇಂದ್ರ ಸರ್ಕಾರ ಏಕೆ ಅಡ್ಡಗಾಲು ಹಾಕುತ್ತಿದೆ. …

Read More »

ಶುಭ ಶುಕ್ರವಾರ.. ನಾಳೆಯಿಂದ ಗೃಹ ಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆಗೆ ಅವಕಾಶ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು : ಈ ಬಾರಿ ನಡೆದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬರೋಬ್ಬರಿ 135 ಸ್ಥಾನಗಳೊಂದಿಗೆ ಪೂರ್ಣ ಬಹುಮತ ಪಡೆದು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್​ ಇದೀಗ ತಾನು ಘೋಷಿಸಿದ್ದ ಪಂಚ ಗ್ಯಾರಂಟಿ ಯೋಜನೆಗಳನ್ನು ಒಂದೊಂದಾಗಿ ಜಾರಿಗೆ ತರುತ್ತಿದೆ. ಮೊದಲ ಗ್ಯಾರಂಟಿಯಾಗಿ ಮಹಿಳೆಯರಿಗೆ ಶಕ್ತಿ ಯೋಜನೆಯನ್ನು ಈಗಾಗಲೇ ಜಾರಿಗೊಳಿಸಿದೆ. ಕಳೆದ ಭಾನುವಾರ (ಜೂನ್ 11) ದಿಂದ ಇದು ಜಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಮಹಿಳೆಯರು ಸರ್ಕಾರಿ ಬಸ್​ಗಳಲ್ಲಿ ಉಚಿತವಾಗಿ ಸಂಚರಿಸುತ್ತಿದ್ದಾರೆ. ಇದೀಗ ಗೃಹಲಕ್ಷ್ಮಿ ಯೋಜನೆಗೆ ಮುಂದಾಗಿದೆ. …

Read More »