Breaking News

ರಾಜ್ಯ

ಶಾಂತಿ ಕದಡುವ ಸಂಘಟನೆಯ ಮೇಲೆ ಕಠಿಣ ಕ್ರಮ : ಸಿಎಂ ವಾರ್ನಿಂಗ್

ಬೆಂಗಳೂರು, ಮೇ 27- ಸಮಾಜದಲ್ಲಿ ಶಾಂತಿ ಹಾಗೂ ಸಾಮರಸ್ಯ ಕದಡುವ ಕೆಲಸ ಮಾಡುವ ಯಾವುದೇ ಸಂಘಟನೆಯ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರ 59 ನೇ ಪುಣ್ಯ ತಿಥಿಯ ಅಂಗವಾಗಿ ಇಂದು ವಿಧಾನಸೌಧದ ಬಳಿ ನೆಹರು ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಘ ಪರಿವಾರ ನಿಷೇಧ ಮಾಡುವ ಬಗ್ಗೆ ಸರ್ಕಾರ ಹೇಳಿಲ್ಲ. ಕಾನೂನು …

Read More »

ಸಂಪುಟ ವಿಸ್ತರಣೆ ಬೆನ್ನಲ್ಲೇ ಭುಗಿಲೆದ್ದ ಅಸಮಾಧಾನ

ಬೆಂಗಳೂರು,ಮೇ 27- ಸಚಿವ ಸಂಪುಟದಲ್ಲಿ ಅವಕಾಶ ವಂಚಿತರು ಅಸಮಾಧಾನಗೊಂಡಿದ್ದು, ಹೈಕಮಾಂಡ್ ನಾಯಕರ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಸಚಿವಾಕಾಂಕ್ಷಿಗಳ ಬೆಂಬಲಿಗರು ಮೈಸೂರು ಸೇರಿಂತೆ ಕೆಲವು ಕಡೆ ರಸ್ತೆಗಿಳಿದು ಪ್ರತಿಭಟನೆಯನ್ನೂ ನಡೆಸಿದ್ದಾರೆ.ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಹಿಡಿದಿರುವ ಕಾಂಗ್ರೆಸ್ ಸಂಪುಟದಲ್ಲಿರುವ ಎಲ್ಲಾ 34 ಸ್ಢಾನಗಳಿಗೂ ಸಚಿವರನ್ನು ನಿಯೋಜಿಸುವ ದಿಟ್ಟ ನಿರ್ಧಾರ ಕೈಗೊಂಡಿದೆ. ಸಚಿವ ಸ್ಥಾನದ ಮೇಲೆ ಸುಮಾರು 70ಕ್ಕೂ ಹೆಚ್ಚು ಮಂದಿ ಕಣ್ಣಿಟ್ಟಿದ್ದರು, ಅವರಲ್ಲಿ ಬಹುತೇಕರು ದೆಹಲಿಗೆ ತೆರಳಿ ಲಾಬಿ ನಡೆಸಿದ್ದರು. ಮುಖ್ಯಮಂತ್ರಿ …

Read More »

ಅಂಡರ್‌ಪಾಸ್‌ನಲ್ಲಿ ಯುವತಿ ಸಾವು : ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡ ಲೋಕಾಯುಕ್ತ

ಬೆಂಗಳೂರು,ಮೇ.27- ಅಂಡರ್‍ಪಾಸ್‍ನಲ್ಲಿ ಕ್ಯಾಬ್ ಮುಳುಗಿ ಯುವತಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಸಿದಂತೆ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.ಕಳೆದ ಮೇ 21ರಂದು ಬೆಂಗಲೂರಿನಲ್ಲಿ ಸುರಿದ ರಭಸ ಮಳೆಗೆ ಕೆಆರ್ ಸರ್ಕಲ್ ಅಂಡರ್‍ಪಾಸ್‍ನಲ್ಲಿ ಕ್ಯಾಬ್ ಮುಳುಗಿ ಇನ್ಫೋಸಿಸ್ ಭಾನುರೇಖ (23) ಸಾವನ್ನಪ್ಪಿದ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಪ್ರಕರಣ ದಾಖಲಿಸಿ ಜೂನ್ 5ರೊಳಗೆ ಪ್ರತಿಕ್ರಿಯೆ ನೀಡುವಂತೆ ಪೂರ್ವ ವಲಯದ ಮುಖ್ಯ ಆಯುಕ್ತರು ಮತ್ತು ವಲಯ ಆಯುಕ್ತರು ಸೇರಿದಂತೆ ಎಂಟು ಬಿಬಿಎಂಪಿ ಅಧಿಕಾರಿಗಳಿಗೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸï.ಪಾಟೀಲ್ …

Read More »

ಸರಕಾರದ ಸಚಿವರುಗಳಿಗೆ ಖಾತೆ ಹಂಚಿಕೆ ಇನ್ನೂ ಆಗಿಲ್ಲ. ಹರಿದಾಡುತ್ತಿರುವದು ಪಟ್ಟಿ ನಕಲಿ ಎಂದ

ಬೆಂಗಳೂರು: ಕಾಂಗ್ರೆಸ್ ಸರಕಾರದ ಸಚಿವರುಗಳಿಗೆ ಖಾತೆ ಹಂಚಿಕೆ ಇನ್ನೂ ಆಗಿಲ್ಲ. ಈಗ ಹರಿದಾಡುತ್ತಿರುವ ಪಟ್ಟಿ ನಕಲಿ ಎಂದು ಕಾಂಗ್ರೆಸ್ ಸ್ಪಷ್ಟಪಡಿಸಿದೆ. ಈ ಕುರಿತು ಇದೀಗ ಕಾಂಗ್ರೆಸ್ ಟ್ವೀಟ್ ಮಾಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲವು ಮಾಧ್ಯಮಗಳಲ್ಲಿ ಖಾತೆ ಹಂಚಿಕೆಯಾಗಿರುವ ಬಗ್ಗೆ ನಕಲಿ ಪಟ್ಟಿ ವೈರಲ್ ಆಗಿದೆ. ಇನ್ನೂ ಸಹ ಖಾತೆ ಹಂಚಿಕೆಯಾಗಿರುವುದಿಲ್ಲ, ಯಾರೂ ಸಹ ಊಹಾಪೋಹಗಳಿಗೆ ಕಿವಿಗೊಡಬೇಡಿ ಹಾಗೂ ನಕಲಿ ಸುದ್ದಿಗಳನ್ನು ಹಂಚಬೇಡಿ. ಸರ್ಕಾರ ಅಧಿಕೃತವಾಗಿ ಖಾತೆ ಹಂಚಿಕೆಯ ಪಟ್ಟಿಯನ್ನು ಶೀಘ್ರದಲ್ಲೇ …

Read More »

2022-23 ಆದಾಯ ತೆರಿಗೆ ಪಾವತಿ ವೇಳೆ ಈ ತಪ್ಪು ಬೇಡ!

ಬೆಂಗಳೂರು: ಕಳೆದ ಆರ್ಥಿಕ ವರ್ಷದ ಆದಾಯ ತೆರಿಗೆ ಪಾವತಿ ಮಾಡುವ ಸಮಯ ಬಂದಿದೆ. ಆದಾಯ ತೆರಿಗೆ ಇಲಾಖೆ ಈಗಾಗಲೇ ಪಾವತಿ ದಾಖಲಾತಿಗಳನ್ನು ಲಭ್ಯವಾಗುವಂತೆ ಮಾಡಿದೆ. ಈ ಹಿನ್ನಲೆ 2022-2023ರ ಆರ್ಥಿಕ ವರ್ಷದ ಆದಾಯ ತೆರಿಗೆ ಪಾವತಿಯಲ್ಲಿ ಯಾವುದೇ ತಪ್ಪುಗಳು ಆಗದಂತೆ ಮುನ್ನೆಚ್ಚರಿಕೆ ತೆಗೆದುಕೊಳ್ಳುವುದು ಅವಶ್ಯವಾಗಿದೆ. ಐಟಿ ಇಲಾಖೆಯ ಮಾಹಿತಿ ಅನುಸಾರ, ಜುಲೈ 31ರೊಳಗೆ ಲೆಕ್ಕ ಪರಿಶೋಧನೆಯ ಅಗತ್ಯವಿಲ್ಲದ ವ್ಯಕ್ತಿಗಳು ಜುಲೈ 31ರೊಳಗೆ ರಿಟರ್ನ್ಸ್ ಸಲ್ಲಿಸಬೇಕು. ಫಾರ್ಮ್​ 16 ಅನ್ನು ಈಗಾಗಲೇ ಕೆಲವು …

Read More »

ಉತ್ತರ ಕನ್ನಡ ಜಿಲ್ಲೆಯಲ್ಲಿ ದಿನ ಕಳೆದಂತೆ ಬಿಸಿಲು ಕೆಂಡದಂತಾಗಿದೆ. ಗ್ರಾಮಗಳಲ್ಲಿ ನೀರಿನ ಕೊರತೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ದಿನ ಕಳೆದಂತೆ ಬಿಸಿಲು ಕೆಂಡದಂತಾಗಿದೆ. ಹೀಗಾಗಿ, ಅಂತರ್ಜಲ ಮಟ್ಟ ತಳ ತಲುಪಿದ್ದು, ನೀರಿಗಾಗಿ ಹಾಹಾಕಾರ ಶುರುವಾಗಿದೆ. ಜಿಲ್ಲೆಯಲ್ಲಿ ನೂರಕ್ಕೂ ಹೆಚ್ಚು ಗ್ರಾಮಗಳಲ್ಲಿ ನೀರಿನ ಕೊರತೆ ಎದುರಾಗಿರುವ ಕಾರಣ ಕೆಲವೆಡೆ ಟ್ಯಾಂಕರ್‌ಗಳ ಮೂಲಕ ನೀರು ಪೂರೈಸಿ ದಾಹ ತೀರಿಸುವ ಪರಿಸ್ಥಿತಿ ಬಂದೊದಗಿದೆ. ಜಿಲ್ಲೆಯಲ್ಲಿ ಕಳೆದೊಂದು ತಿಂಗಳಿಂದ ಬೀಸಿಲಿನ ತಾಪಕ್ಕೆ ಜನ ನಿತ್ಯವೂ ಬಸವಳಿಯುತ್ತಿದ್ದಾರೆ. ಕಳೆದೆರಡು ದಿನದ ಹಿಂದೆ ಕೆಲ ಗಂಟೆಗಳ ಕಾಲ ಮಳೆ ಸುರಿದಿತ್ತಾದರೂ ಮತ್ತೆ …

Read More »

ಸಂಸತ್ ಭವನದ ಉದ್ಘಾಟನೆ ವಿವಾದ: ಸಿಎಂ ಅರವಿಂದ್ ಕೇಜ್ರಿವಾಲ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ದೂರು ದಾಖಲು

ನವದೆಹಲಿ: ಹೊಸ ಸಂಸತ್ ಭವನದ ಉದ್ಘಾಟನಾ ಸಮಾರಂಭದ ಬಗ್ಗೆ ವಿವಾದ ಹೆಚ್ಚಾಗುತ್ತಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ ವಿಷಯದಲ್ಲಿ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡುವ ಮೂಲಕ ಈಗ ವಿವಾದಕ್ಕೆ ಸಿಲುಕಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಜಾತಿಯನ್ನು ಉಲ್ಲೇಖಿಸಿ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಆರೋಪದ ಮೇಲೆ ಅರವಿಂದ್ ಕೇಜ್ರಿವಾಲ್ ಮತ್ತು ಖರ್ಗೆ ಸೇರಿದಂತೆ ಇತರ ಕೆಲವು ನಾಯಕರ ವಿರುದ್ಧ ದೆಹಲಿಯ ಕೊನಾಟ್ …

Read More »

ಸರ್ಕಾರದ ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಯಾರಿಗೆ ಯಾವ ಖಾತೆ?*

ಬೆಂಗಳೂರು; ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆಯಾಗಿದ್ದು, ಖಾತೆ ಹಂಚಿಕೆ ಕೂಡ ಮಾಡಲಾಗಿದೆ. ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದ್ದು, ಸಿಎಂ ಸಿದ್ದರಾಮಯ್ಯ ಬಳಿಯಲ್ಲಿಯೇ ಹಣಕಾಸು, ಸಂಪುಟ ವ್ಯವಹಾರ ಹಾಗೂ ಗುಪ್ತಚರ ಇಲಾಖೆ ಉಳಿಸಿಕೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯ- ಹಣಕಾಸು, ಸಂಪುಟ ವ್ಯವಹಾರ, ಗುಪ್ತಚರ ಇಲಾಖೆ ಡಿಸಿಎಂ ಡಿ.ಕೆ.ಶಿವಕುಮಾರ್ – ಜಲಸಂಪನ್ಮೂಲ, ಬೆಂಗಳೂರು ನಗರಾಭಿವೃದ್ಧಿ ಡಾ.ಜಿ.ಪರಮೇಶ್ವರ್ – ಗೃಹ ಖಾತೆ ಹೆಚ್.ಕೆ.ಪಾಟೀಲ್ – ಕಾನೂನು ಮತ್ತು …

Read More »

ಸುಭದ್ರ ಸರ್ಕಾರಕ್ಕೆ ಎದೆಗಾರಿಕೆಯ ಮುನ್ನುಡಿ ಬರೆದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಚುನಾವಣಾ ಫಲಿತಾಂಶ ಪ್ರಕಟವಾಗಿ ಹದಿನೈದು ದಿನಗಳ ಒಳಗಾಗಿ ಸಂಪೂರ್ಣ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಸಿದ್ದರಾಮಯ್ಯ ಅವರು, “ನಾಡಿನ ಜನತೆ ಸುಭದ್ರ ಮತ್ತು ಸ್ವಚ್ಚ ಆಡಳಿತಕ್ಕಾಗಿ ನಮಗೆ ಪೂರ್ಣ ಬಹುಮತ ನೀಡಿದ್ದಾರೆ. ಜನರ ನಿರೀಕ್ಷೆಯಂತೆ ಸರ್ಕಾರ ನಡೆಯಲಿದೆ” ಎಂದು ವಾಗ್ದಾನ ಮಾಡಿದ್ದರು. ಈ ವಾಗ್ದಾನದ ಮೊದಲ ಹೆಜ್ಜೆಯಾಗಿ ಸಂಪೂರ್ಣ ಸಂಪುಟ ಹೆಚ್ಚಿನ ಭಿನ್ನಾಭಿಪ್ರಾಯಗಳು ಇಲ್ಲದ ರೀತಿಯಲ್ಲಿ ಅಸ್ತಿತ್ವಕ್ಕೆ ಬಂದಿದೆ. ಏಕ …

Read More »

ಪ್ರಮಾಣವಚನ ಸ್ವೀಕರಿಸಿರುವ ಸತೀಶ್ ಜಾರಕಿಹೊಳಿ ಮತ್ತು ಲಕ್ಷ್ಮೀ ಹೆಬ್ಬಾಳಕರ್ ಸ್ವಾಗತಿಸಲು ಇಡೀ ಬೆಳಗಾವಿ ಮಹಾನಗರ ಸಜ್ಜ

ರಾಜ್ಯ ಕಾಂಗ್ರೆಸ್ ನೇತೃತ್ವದ ಸರಕಾರದ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿರುವ ಸತೀಶ್ ಜಾರಕಿಹೊಳಿ ಮತ್ತು ಲಕ್ಷ್ಮೀ ಹೆಬ್ಬಾಳಕರ್ ಸಚಿವರಾದ ನಂತರ ಮೊದಲ ಬಾರಿಗೆ ಭಾನುವಾರ ಬೆಳಗಾವಿಗೆ ಆಗಮಿಸಲಿದ್ದಾರೆ. ಒಟ್ಟಾಗಿ ಆಗಮಿಸುತ್ತಿರುವ ಸಚಿವ ದ್ವಯರನ್ನು ಸ್ವಾಗತಿಸಲು ಇಡೀ ಬೆಳಗಾವಿ ಮಹಾನಗರ ಸಜ್ಜಾಗಿದ್ದು, ವಿಮಾನ ನಿಲ್ದಾಣದಿಂದಲೇ ಬೃಹತ್ ರ್ಯಾಲಿ ಮೂಲಕ ನಗರಕ್ಕೆ ಕರೆತರಲು ಕಾರ್ಯಕರ್ತರು, ಅಭಿಮಾನಿಗಳು ನಿರ್ಧರಿಸಿದ್ದಾರೆ. ಮೇ 20ರಂದು ಸತೀಶ್ ಜಾರಕಿಹೊಳಿ ಹಾಗೂ ಮೇ 27ರಂದು ಲಕ್ಷ್ಮೀ ಹೆಬ್ಬಾಳಕರ್ ಸಂಪುಟ ದರ್ಜೆ …

Read More »