Breaking News

ರಾಜ್ಯ

280 ಸೀರೆ, 09 ಗಡಿಯಾರ, 20  100 pipers 750 ml liquor. ವಶಪಡಿಸಿಕೊಂಡ ಚುನಾವಣಾಧಿಕಾರಿಗಳು

ಖಾನಾಪುರ: ಖಾನಾಪುರ ಪಟ್ಟಣದ ಮುಖ್ಯರಸ್ತೆಯ ಲೋಕಮಾನ್ಯ ಭವನದ ಮುಂದುಗಡೆ ನಿಂತಿದ್ದ ಗೂಡ್ಸ್ ವಾಹನದಲ್ಲಿ ಅಪಾರ ಪ್ರಮಾಣದ ವಸ್ತುಗಳನ್ನು ಪತ್ತೆ ಹಚ್ಚಲಾಗಿದ್ದು, ಚುನಾವಣಾಧಿಕಾರಿಗಳು ಹಾಗೂ ಪೊಲೀಸರು ವಶಪಡಿಸಿಕೊಂಡಿದ್ದಾರೆ. 280 ಸೀರೆಗಳು , 280 × 550 =1,54,000 ರೂ. 09 ಗೋಡೆ ಗಡಿಯಾರ , 9 × 150 = 1,350 ರೂ. 20  100 pipers 750 ml liquor..15 ltr . .20 × 2418 = 48,360ರೂ. ಒಟ್ಟೂ ₹ …

Read More »

ಕಾಂಗ್ರೆಸ್‌ 40 ಕ್ಷೇತ್ರಗಳಲ್ಲಿ ಟಿಕೆಟ್‌ ಕಗ್ಗಂಟು; ಇಲ್ಲಿದೆ ನೋಡಿ ಕೈ ಎರಡನೇ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ

ಬೆಂಗಳೂರು,ಏಪ್ರಿಲ್3:‌ ವಿಧಾನಸಭೆ ಚುನಾವಣೆ ಭರ್ಜರಿ ತಯಾರಿ ನಡೆಸಿರುವ ಕಾಂಗ್ರೆಸ್‌ ಈಗಾಗಲೇ 124 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನ ಬಿಡುಗಡೆ ಮಾಡಿದೆ. ಇನ್ನೂ ಎರಡನೇ ಪಟ್ಟಿ ತಯಾರಿಕೆಯಲ್ಲಿ 40 ಕ್ಷೇತ್ರಗಳ ಅಭ್ಯರ್ಥಿಯೇ ದೊಡ್ಡ ಸವಾಲವಾಗಿದೆ. 124 ಕ್ಷೇತ್ರದಲ್ಲಿ ಸ್ಪರ್ಧಾಳುಗಳನ್ನು ಘೋಷಿಸಿದ್ದ ಸ್ಕ್ರೀನಿಂಗ್ ಕಮಿಟಿ ಉಳಿದ ನೂರು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಎಐಸಿಸಿ ಕೇಂದ್ರ ಚುನಾವಣಾ ಸಮಿತಿಗೆ ಶಿಫಾರಸು ಮಾಡಿದೆ. ಇದರಲ್ಲಿ 40 ಕ್ಷೇತ್ರಗಳಿಗೆ ಎರಡರಿಂದ ಮೂರು ಅಭ್ಯರ್ಥಿಗಳನ್ನ ಎಐಸಿಸಿ ಕೇಂದ್ರ ಚುನಾವಣಾ ಸಮಿತಿಗೆ …

Read More »

ರಾಜ್ಯ ರಾಜಕಾರಣಕ್ಕೆ ಸಂಸದೆ ಸುಮಲತಾ ಅಂಬರೀಶ್ ಎಂಟ್ರಿ?

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಬಿಜೆಪಿ ಇದೀಗ ಚುನಾವಣೆಯ ಚುಕ್ಕಾಣಿ ಹಿಡಿಯಲು ಬಿಗ್ ಪ್ಲಾನ್ ಮಾಡಿದೆ. ಹೌದು, ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲುವ ಉದ್ದೇಶದಿಂದ ಸಂಸದೆ ಸುಮಲತಾ ಅಂಬರೀಶ್ ಅವರನ್ನು ರಾಜ್ಯ ರಾಜಕಾರಣಕ್ಕೆ ಕರೆತರಲು ಸಿದ್ಧತೆ ನಡೆಸಿದೆ. ಪ್ರಮುಖವಾಗಿ ಜೆಡಿಎಸ್ ಭದ್ರಕೋಟೆ ಎಂದು ಪರಿಗಣಿಸಲಾದ ಮಂಡ್ಯ ಜಿಲ್ಲೆಯನ್ನು ವಶಪಡಿಸಿಕೊಳ್ಳಲು ಬಿಜೆಪಿ ಶತಾಯುಗತಾಯ ಪ್ರಯತ್ನಿಸುತ್ತಿದೆ ಎನ್ನಲಾಗಿದೆ. ಮಂಡ್ಯ ವಿಧಾನಸಭೆ ಕ್ಷೇತ್ರದಿಂದ ನಟಿ …

Read More »

ಬಿಜೆಪಿ ಟಿಕೆಟ್‌ಗಾಗಿ CPI ಹುದ್ದೆಗೆ ರಾಜೀನಾಮೆ; ನಾಗಠಾಣ ಮೀಸಲು ಕ್ಷೇತ್ರದಿಂದ ಸ್ಪರ್ಧೆಗೆ ಸಿದ್ಧ

ವಿಜಯಪುರ: ಪೊಲೀಸ್ ಇಲಾಖೆಯಲ್ಲಿ 12 ವರ್ಷಗಳ ಕಾಲ ಸೇವೆ ಸಲ್ಲಿಸಿರುವ ಪೊಲೀಸ್ ಅಧಿಕಾರಿಯೋರ್ವ ಇದೀಗ ಬಿಜೆಪಿ ಟಿಕೆಟ್‌ಗಾಗಿ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿ ಹೊರಬಂದಿದ್ದಾರೆ. ನಾಗಠಾಣ ಎಸ್‌ಸಿ ಮೀಸಲು ಕ್ಷೇತ್ರದ ಬಿಜೆಪಿ ಟಿಕೆಟ್‌ನ ಪ್ರಬಲ ಆಕಾಂಕ್ಷಿಯಾಗಿರುವ ಮಹೀಂದ್ರಕುಮಾರ ನಾಯಿಕ ಟಿಕೆಟ್ ಸಿಗುವ ವಿಶ್ವಾಸದೊಂದಿಗೆ ಕರ್ತವ್ಯಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಬೆಂಗಳೂರಿನ ಡಿಜಿಪಿ ಕೇಂದ್ರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಪಿಐ ನಾಯಕ ರಾಜಕೀಯ ಸೇರಬೇಕೆಂಬ ಉದ್ದೇಶದೊಂದಿಗೆ ಅದರಲ್ಲೂ ಬಿಜೆಪಿಯ ತತ್ವ ಸಿದ್ದಾಂತವನ್ನು ಮೆಚ್ಚಿ ಕರ್ತವ್ಯಕ್ಕೆ …

Read More »

ಔತಣಕೂಟದಲ್ಲಿ ಟಿಶ್ಯೂ ಬದಲು 500 ರೂ. ನೋಟುಗಳನ್ನಿಟ್ಟಿದ್ರಾ ಮುಖೇಶ್ ಅಂಬಾನಿ ? ಇಲ್ಲಿದೆ ವೈರಲ್ ಫೋಟೋ ಹಿಂದಿನ ಅಸಲಿ ಸತ್ಯ

ಉದ್ಯಮಿ ಮುಖೇಶ್ ಅಂಬಾನಿ ಆಯೋಜಿಸಿದ್ದ ಔತಣ ಕೂಟದಲ್ಲಿ 500 ರೂಪಾಯಿಯ ನೋಟುಗಳೊಂದಿಗೆ ಆಹಾರ ಪದಾರ್ಥವನ್ನು ಬಡಿಸಿದಂತೆ ತೋರಿಸುವ ಚಿತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಫೋಟೋವನ್ನು ಶೇರ್ ಮಾಡಿದ ಟ್ವಿಟರ್ ಬಳಕೆದಾರರು ಅಂಬಾನಿಯ ಶ್ರೀಮಂತಿಕೆಯ ಬಗ್ಗೆ ಮಾಹಿತಿ ನೀಡಿ ಅಂಬಾನಿ ಪಾರ್ಟಿಯಲ್ಲಿ ಟಿಶ್ಯೂ ಪೇಪರ್‌ಗಳ ಜಾಗದಲ್ಲಿ 500 ರೂಪಾಯಿ ನೋಟು ಇರಿಸಲಾಗಿತ್ತು ಎಂದು ಹೇಳಿದ್ದಾರೆ.   ರುಚಿಕರವಾದ ಪಾಕಪದ್ಧತಿಯೊಂದಿಗೆ ನಿಜವಾಗಿಯೂ ಸ್ವಲ್ಪ ಹಣವನ್ನು ನೀಡಲಾಗುತ್ತಿದೆಯೇ ? ಎಂಬ ಸಂದೇಹವನ್ನು ನಿವಾರಿಸಲು …

Read More »

ಮಲಗಿದ್ದ ವ್ಯಕ್ತಿಯ ಮೇಲೆ ಆರ್.ಪಿ.ಎಫ್ ಪೊಲೀಸರ ದರ್ಪ

ಇಬ್ಬರು ಪೊಲೀಸರು ರೈಲ್ವೆ ಆವರಣದಲ್ಲಿ ಮಲಗಿದ್ದ ಕೂಲಿಯೊಬ್ಬನ ಮೇಲೆ ದರ್ಪ ತೋರಿದ ಘಟನೆ ನಡೆದಿದ್ದು, ವಿಡಿಯೋ ವೈರಲ್ ಆಗಿದೆ.     ಕರ್ತವ್ಯದಲ್ಲಿದ್ದ ಪೊಲೀಸರು ಮಲಗಿದ್ದ ವ್ಯಕ್ತಿಯ ಮೇಲೆ ದರ್ಪ ತೋರಿರುವ ಘಟನೆ ಮಥುರಾ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ ಎಂದು ವರದಿಯಾಗಿದೆ. ನಿದ್ರಿಸುತ್ತಿದ್ದ ವ್ಯಕ್ತಿಯ ಮುಖದ ಮೇಲೆ ಒಬ್ಬ ಪೊಲೀಸ್​ ಟಾರ್ಚ್‌ಲೈಟ್ ಬಿಟ್ಟರೆ ಮತ್ತೊಬ್ಬ ಪೊಲೀಸ್​ ದುರಹಂಕಾರದಿಂದ ಆ ವ್ಯಕ್ತಿಯ ಕಾಲಿಗೆ ತನ್ನ ಶೂ ಉಜ್ಜಿದ್ದನ್ನು ವಿಡಿಯೋದಲ್ಲಿ ನೋಡಬಹುದು.   …

Read More »

ರಾತ್ರೋ ರಾತ್ರಿ ಬೆಂಗಳೂರಿನಿಂದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬೆಳಗಾವಿಯಲ್ಲಿ

ಬೆಳಗಾವಿ: ವಿಧಾನಸಭಾ ಚುನಾವಣೆ ಘೋಷಣೆಯಾಗುತ್ತಿದ್ದಂತೆ ರಾಜಕೀಯ ಪಕ್ಷಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಕಸರತ್ತು ಮುಂದುವರೆದಿದ್ದು, ಆಡಳಿತಾರೂಢ ಬಿಜೆಪಿಗೆ ಬಂಡಾಯದ ಭೀತಿ ಆರಂಭವಾಗಿದೆ. ಶಿವಮೊಗ್ಗ ನಗರ ಹಾಗೂ ಬೆಳಗಾವಿಯಲ್ಲಿ ಟಿಕೆಟ್ ಗೊಂದಲ ಶುರುವಾಗಿದ್ದು, ಟಿಕೆಟ್ ಕೈ ತಪ್ಪಿದರೆ ಬಂಡಾಯ ಸಾರುವ ಬಗ್ಗೆ ಆಕಾಂಕ್ಷಿಗಳು ಸಂದೇಶ ರವಾನಿಸಿದ್ದಾರೆ ಎನ್ನಲಾಗಿದೆ. ಬೆಳಗಾವಿಯಲ್ಲಿ ಬಿಜೆಪಿ ಟಿಕೆಟ್ ಹಂಚಿಕೆಯಲ್ಲಿ ಸಾಕಷ್ಟು ಗೊಂದಲವಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಜಿಲ್ಲಾ ಬಿಜೆಪಿ ಕೋರ್ ಕಮಿಟಿ ಸಭೆ ಇದೀಗ ಬೆಳಗಾವಿಗೆ ಶಿಫ್ಟ್ ಆಗಿದೆ. ಇಂದು …

Read More »

ಕಾಂಗ್ರೆಸ್&ಬಿಜೆಪಿ ಬೆಳಗಾವಿ ಜಿಲ್ಲೆಯಲ್ಲಿ ಈ ಬಾರಿ ಟಿಕೆಟ್ ಹಂಚಿಕೆಯಲ್ಲೂ ತೀವ್ರ ಗೊಂದಲ

ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ಅತ್ಯಂತ ಪ್ರಮುಖ ಪಾತ್ರವಹಿಸುವ ಬೆಳಗಾವಿ ಜಿಲ್ಲೆಯಲ್ಲಿ ಈ ಬಾರಿ ಟಿಕೆಟ್ ಹಂಚಿಕೆಯಲ್ಲೂ ತೀವ್ರ ಗೊಂದಲ ಕಾಣಿಸಿದೆ. ಬೆಳಗಾವಿ ಉತ್ತರ, ರಾಯಬಾಗ ಮತ್ತು ಗೋಕಾಕ ಕ್ಷೇತ್ರ ಕಾಂಗ್ರೆಸ್ ಗೆ ಕಗ್ಗಂಟಾಗಿದ್ದರೆ, ಅಥಣಿ, ಬೆಳಗಾವಿ ಉತ್ತರ, ಖಾನಾಪುರ, ಬೈಲಹೊಂಗಲ ಕ್ಷೇತ್ರಗಳು ಬಿಜೆಪಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಬೆಳಗಾವಿ ಉತ್ತರದ ಕಾಂಗ್ರೆಸ್ ಟಿಕೆಟ್ ಗೆ ಆಸೀಫ್ (ರಾಜು) ಸೇಠ್ ಮತ್ತು ಅಜೀಂ ಪಟವೇಗಾರ ಮಧ್ಯೆ ಪೈಪೋಟಿ ನಡೆದಿದೆ. ರಾಯಬಾಗದಲ್ಲಿ ಶಂಬು ಕಲ್ಲೋಳ್ಕರ್ …

Read More »

ಚುನಾವಣಾ ಅಧಿಕಾರಿಯ ದೂರಿನ ಹಿನ್ನೆಲೆಯಲ್ಲಿ ಮಾಜಿ ಸಚಿವರ ಮೇಲೆ ಎಫ್​ಐಆರ್​!

ಬೆಂಗಳೂರು: ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಮೇಲೆ ಎಫ್​ಐಆರ್​ ದಾಖಲಾಗಿದೆ. ಚುನಾವಣಾ ಅಧಿಕಾರಿ ಲಕ್ಷ್ಮಣ್ ದೂರು ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಕೃಷ್ಣಯ್ಯ ಶೆಟ್ಟಿ ಗಾಂಧಿನಗರದ ಟಿಕೆಟ್ ಆಕಾಂಕ್ಷಿಯಾಗಿದ್ದು ಗಾಂಧಿನಗರ ಕ್ಷೇತ್ರದ ಹೆಸರು ಮತ್ತು ಕೃಷ್ಣಯ್ಯ ಶೆಟ್ಟಿ ಹೆಸರಲ್ಲಿ ಪುಡ್ ಕಿಟ್ ತಯಾರಿ ಮಾಡಲಾಗುತ್ತಿತ್ತು.   ಈ ವೇಳೆ ಚುನಾವಣಾ ಅಧಿಕಾರಿಗಳು ಹಾಗೂ ಪೊಲೀಸರು ಖಚಿತ ಮಾಹಿತಿ ಆಧರಿಸಿ ದಾಳಿ ಮಾಡಿದ್ದರು. ದಾಳಿಯ ಸಂದರ್ಭ …

Read More »

ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಇಲ್ಲ; ಸಿಎಂ ಬಸವರಾಜ ಬೊಮ್ಮಾಯಿ‌

ಬೆಂಗಳೂರು: ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆಯಿಲ್ಲ. ನರೇಂದ್ರ ಮೋದಿಯವರು ದೇಶದ ಆಡಳಿತದ ಚುಕ್ಕಾಣಿ ಹಿಡಿದ ಬಳಿಕ ಈ ಧೋರಣೆ ಬದಲಾಗಿದೆ. ಆದರೆ, ಆಡಳಿತ ವಿರೋಧಿ ಅಲೆಯಿದೆ ಮನಸ್ಥಿತಿಯಿಂದ ಮತಪೂರ್ವ ಸಮೀಕ್ಷೆ ನಡೆಸುವ ಸಂಸ್ಥೆಗಳು ಹೊರಬಂದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಪ್ರತಿಪಾದಿಸಿದರು.   ಬಿಜೆಪಿ ಮಾಧ್ಯಮ ಕೇಂದ್ರಕ್ಕೆ ಸೋಮವಾರ ಚಾಲನೆ ನೀಡಿದ ನಂತರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಸಕಾರಾತ್ಮಕ ನೆಲೆಯಲ್ಲಿ ಈ ಚುನಾವಣೆಯನ್ನು ಪಕ್ಷ ಎದುರಿಸಲಿದೆ. ಪ್ರಗತಿ ವರದಿ ಮುಂದಿಟ್ಟು ಜನರ …

Read More »