Breaking News

ರಾಜ್ಯ

ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ದೆಹಲಿಯಲ್ಲಿ ಕಾಂಗ್ರೆಸ್ ಚುನಾವಣಾ ಸಮಿತಿಯ ಸಭೆ

ನವದೆಹಲಿ: ಕಳೆದ ಎರಡು ದಿನಗಳಿಂದ ವಿಧಾನಸಭಾ ಚುನಾವಣೆಗಾಗಿ ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಸಂಬಂಧ ದೆಹಲಿಯಲ್ಲಿ ಕಾಂಗ್ರೆಸ್ ಚುನಾವಣಾ ಸಮಿತಿಯ ಸಭೆ ನಡೆಯುತ್ತಿದೆ. ಅಂತಿಮವಾಗಿ ಪಟ್ಟಿ ಫೈನಲ್ ಮಾಡಲಾಗಿದ್ದು, ಇಂದು ಬೆಳಿಗ್ಗೆ 11 ಗಂಟೆಯೊಳಗೆ ಘೋಷಣೆಯಾಗಲಿದೆ.   ಈ ಬಗ್ಗೆ ಎಐಸಿಸಿ ಚುನಾವಣಾ ಸಮಿತಿಯ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು, ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಫೈನಲ್ ಆಗಿದೆ. ಗುರುವಾರ …

Read More »

ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಮೊಮ್ಮಗ ಬಿಜೆಪಿ ಸೇರ್ಪಡೆ

ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ ಆಗುತ್ತಿದ್ದಂತೆಯೇ ಹಲವರು ತಮ್ಮ ತಮ್ಮ ಇಷ್ಟದ ಪಕ್ಷಗಳನ್ನು ಸೇರ್ಪಡೆಯಾಗುತ್ತಿದ್ದಾರೆ. ಇದೀಗ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಸೋದರ ಸಂಬಂಧಿ ಶಶಿಭೂಷಣ ಹೆಗಡೆ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಸೋಮವಾರದಂದು ಬೆಂಗಳೂರಿನ ಬಿಜೆಪಿ ಕಾರ್ಯಾಲಯದಲ್ಲಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ, ಭಗವಂತರಾವ್ ಖೂಬಾ, ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಸಮ್ಮುಖದಲ್ಲಿ ಶಶಿಭೂಷಣ ಸೇರ್ಪಡೆಗೊಂಡಿದ್ದಾರೆ.

Read More »

ಕೋಮು ದ್ವೇಷ ಭಾಷಣ: ವಿ.ಮುನಿರತ್ನ ವಿರುದ್ಧ FIR ದಾಖಲು

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ( Karnataka Assembly Election 2023 ) ಘೋಷಣೆಯ ನಂತ್ರ ನೀತಿ ಸಂಹಿತೆ ಜಾರಿಯಲ್ಲಿದೆ. ಈ ವೇಳೆಯಲ್ಲಿ ದ್ವೇಷ ಭಾಷಣ ಸೇರಿದಂತೆ ವಿವಿಧ ವಿಷಯಗಳಿಗೆ ಸಂಹಿತೆಯ ಕಾನೂನು ಅಡೆತಡೆ ಇದೆ. ಹೀಗಿದ್ದೂ ಕೋಮು ದ್ವೇಷ ಭಾಷಣ ಮಾಡಿದಂತ ಸಚಿವ ವಿ.ಮುನಿರತ್ನ ( Minister V Munirathna ) ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಈ ಬಗ್ಗೆ ಬೆಂಗಳೂರು ನಗರ ಚುನಾವಣಾಧಿಕಾರಿಗಳು ಮಾಹಿತಿ ನೀಡಿದ್ದು, ಅಖಿಲ ಭಾರತ …

Read More »

2023-24ನೇ ಸಾಲಿನ ಶಾಲಾ ‘ಶೈಕ್ಷಣಿಕ ವೇಳಾಪಟ್ಟಿ’ ಪ್ರಕಟ : ಮೇ.29ರಿಂದ ಶಾಲೆ ಆರಂಭ

ಬೆಂಗಳೂರು: 2023-24ನೇ ಸಾಲಿನ ವಾರ್ಷಿಕ ಶೈಕ್ಷಣಿಕ ವೇಳಾಪಟ್ಟಿಯನ್ನು ( Annual Academic Schedule ) ಸಾರ್ವಜನಿಕ ಶಿಕ್ಷಣ ಇಲಾಖೆಯು ( School Education Department ) ಪ್ರಕಟಿಸಿದೆ. ಅದರಂತೆ ಈ ಬಾರಿ ಬೇಸಿಗೆ ರಜೆಯ ( Summer Holiday ) ಮುಕ್ತಾಯದ ನಂತ್ರ ಮೇ.29ರಿಂದಲೇ ಶಾಲೆಗಳು ಆರಂಭಗೊಳ್ಳಲಿವೆ ( School Open ). ಅ.8ರಿಂದ ದಸರಾ ಹಾಗೂ ದಿನಾಂಕ 11-04-2024ರಿಂದ ಬೇಸಿಗೆ ರಜೆ ಆರಂಭಗೊಳ್ಳಲಿದೆ. ಈ ಕುರಿತಂತೆ ಸಾರ್ವಜನಿಕ ಶಿಕ್ಷಣ …

Read More »

ಕರ್ನಾಟಕ ವಿಧಾನಸಭೆ ಚುನಾವಣೆ : ಇಂದು ಬೆಳಗ್ಗೆ 11 ಗಂಟೆಗೆ ಕಾಂಗ್ರೆಸ್ ಅಭ್ಯರ್ಥಿಗಳ 2 ನೇ ಪಟ್ಟಿ ಬಿಡುಗಡೆ

ನವದೆಹಲಿ: ಕಳೆದ ಎರಡು ದಿನಗಳಿಂದ ವಿಧಾನಸಭಾ ಚುನಾವಣೆಗಾಗಿ ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಸಂಬಂಧ ದೆಹಲಿಯಲ್ಲಿ ಕಾಂಗ್ರೆಸ್ ಚುನಾವಣಾ ಸಮಿತಿಯ ಸಭೆ ನಡೆಯುತ್ತಿದೆ. ಅಂತಿಮವಾಗಿ ಪಟ್ಟಿ ಫೈನಲ್ ಮಾಡಲಾಗಿದ್ದು, ಇಂದು ಬೆಳಿಗ್ಗೆ 11 ಗಂಟೆಯೊಳಗೆ ಘೋಷಣೆಯಾಗಲಿದೆ.   ಈ ಬಗ್ಗೆ ಎಐಸಿಸಿ ಚುನಾವಣಾ ಸಮಿತಿಯ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು, ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಫೈನಲ್ ಆಗಿದೆ. ಗುರುವಾರ …

Read More »

ಅಂಕಲಗಿ ಶ್ರೀ ಗುರುಸಿದ್ಧ ಶ್ರೀಗಳಿಗೆ ಶೃದ್ಧಾಂಜಲಿ ಅರ್ಪಿಸಿದ ಹುಕ್ಕೇರಿ ಕಾರಂಜಿಮಠದ ಶ್ರೀಗಳು

ಬೆಳಗಾವಿ: ಅಂಕಲಗಿ ಅಡವಿಸಿದ್ದೇಶ್ವರ ಮಠದ ಶ್ರೀ ಗುರುಸಿದ್ಧ ಮಹಾಸ್ವಾಮೀಜಿ ಇತ್ತೀಚೆಗೆ ಲಿಂಗೈಕೆರಾಗಿದ್ದಾರೆ. ಇವರ ಗದ್ದುಗೆಗೆ ಬೆಳಗಾವಿ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹಾಗೂ ಬೆಳಗಾವಿ ಕಾರಂಜಿಮಠದ ಗುರುಸಿದ್ಧ ಸ್ವಾಮೀಜಿ ಪೂಜೆ ಸಲ್ಲಿಸಿ ಶೃದ್ಧಾಂಜಲಿ ಅರ್ಪಿಸಿದರು. ಈ ವೇಳೆ ಮಾತನಾಡಿದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಅಂಕಲಗಿ ಶ್ರೀಗಳು ಭಕ್ತರ ಶೃದ್ಧಾ ಕೇಂದ್ರವಾಗಿರುವ ಅಂಕಲಗಿ ಅಡವಿಸಿದ್ದೇಶ್ವರ ಮಠವನ್ನು ಪುನರೋತ್ಥಾನಗೊಳಿಸುವುದರ ಮೂಲಕ ಅನೇಕ ಜನಪರ ಕೆಲಸ ಮಾಡಿದ್ದಾರೆ. ಇವರ ಅಗಲಿಕೆಯಿಂದ ಇಡೀ ಸಮಾಜಕ್ಕೆ ತುಂಬಲಾರದಷ್ಟು …

Read More »

ಮಧ್ಯರಾತ್ರಿ ಮತ್ತೆ 1.50 ಕೋಟಿ ರೂ ಕೊಗನೋಳಿ ಚೆಕ್ ಪೋಸ್ಟ್ ನಲ್ಲಿ ವಶಪಡಿಸಿಕೊಳ್ಳಲಾಗಿದೆ.

ಬೆಳಗಾವಿ: ಮಹಾರಾಷ್ಟ್ರ ಗಡಿಯ ಕೊಗನೋಳಿ ಚೆಕ್ ಪೋಸ್ಟ್ ನಲ್ಲಿ ಬಸ್ ಪ್ರಯಾಣಿಕನೋರ್ವನಿಂದ ಒಂದೂವರೆ ಕೋಟಿ ರೂ. ವಶಪಡಿಸಿಕೊಳ್ಳಲಾಗಿದೆ. ಕರ್ತವ್ಯ ನಿರತ ಪೊಲೀಸರು ಮತ್ತು ಚುನಾವಣೆ ಸಿಬ್ಬಂದಿ ಖಾಸಗಿ ಬಸ್ ಒಂದರಲ್ಲಿ ಮುಂಬೈನಿಂದ ಬರುತ್ತಿದ್ದ ಪ್ರಯಾಣಿಕನಲ್ಲಿದ್ದ ಹಣವನ್ನು ವಶಕ್ಕೆ ಪಡೆದರು. ಈ ಹಣಕ್ಕೆ ಆತನ ಬಳಿ ಯಾವುದೇ ದಾಖಲೆಗಳಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಇದರಿಂದಾಗಿ ಬುಧವಾರ ಒಂದೇ ದಿನ ಬೆಳಗಾವಿ ಜಿಲ್ಲೆಯಲ್ಲಿ 3.61 ಕೇಟಿ ರೂ. ನಗದು ಹಾಗೂ 60.47 ಲಕ್ಷ …

Read More »

ಬಿಜೆಪಿಗೆ ಕಿಚ್ಚ ಸುದೀಪ್‌ ಬೆಂಬಲ.. ಚೇತನ್‌ ಅಹಿಂಸಾ ಏನ್‌ ಹೇಳಿದ್ರು ಗೊತ್ತಾ?

ಬೆಂಗಳೂರು : ಚೇತನ್‌ ಅಹಿಂಸಾ ಸದಾ ಒಂದಲ್ಲ ಒಂದು ವಿಚಾರಕ್ಕೆ ಮುನ್ನೆಲೆಗೆ ಬಂದೇ ಬರುತ್ತಾರೆ. ಅದರಲ್ಲೂ ಅವರು ಮಾಡುವ ಟ್ವೀಟ್‌ಗಳು ಸೆನ್ಸೇಷನ್‌ ಹುಟ್ಟು ಹಾಕುತ್ತವೆ. ಸೋಷಿಯಲ್‌ ಮೀಡಿಯಾದಲ್ಲಿ ಸದಾ ಸಕ್ರಿಯವಾಗಿರುವ ಚೇತನ್‌, ಇದೀಗ ಕಿಚ್ಚ ಸುದೀಪ್‌ ಬಿಜೆಪಿಗೆ ಬೆಂಬಲ ನೀಡಿದ್ದರ ಬಗ್ಗೆಯೂ ಟ್ವೀಟ್‌ ಮಾಡಿದ್ದಾರೆ. ಸುದೀಪ್‌ ಬಿಜೆಪಿ ಸೇರಲಿದ್ದಾರೆ, ಚುನಾವಣೆಗೂ ಸ್ಪರ್ಧಿಸಲಿದ್ದಾರೆ ಎಂಬ ಅನೇಕ ಸುದ್ದಿ ಎಲ್ಲೆಡೆ ಹರಿದಾಡುತ್ತಿದ್ದವು. ಇದೆಲ್ಲದಕ್ಕೂ ಇಂದು ಸುದೀಪ್‌ ಸ್ಪಷ್ಟನೆ ಕೊಟ್ಟಾಗಿದೆ. ನಾನು ಯಾವುದೇ ಕಾರಣಕ್ಕೂ ರಾಜಕೀಯಕ್ಕೆ …

Read More »

ಮಹಾರಾಷ್ಟ್ರ ಸರ್ಕಾರ ಎರಡೂ ರಾಜ್ಯಗಳ ಗಡಿ ಭಾಗದಲ್ಲಿ ಗೊಂದಲ ಸೃಷ್ಟಿಸುವ ಕೆಲಸ

ಬೆಂಗಳೂರು: ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ಸುಪ್ರೀಂ ಕೋರ್ಟ್ ‌ನಲ್ಲಿ ಇದ್ದರೂ ಮಹಾರಾಷ್ಟ್ರ ಸರ್ಕಾರ ಎರಡೂ ರಾಜ್ಯಗಳ ಗಡಿ ಭಾಗದಲ್ಲಿ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದೆ. ಮಹಾರಾಷ್ಟ್ರ ಸರ್ಕಾರ ಇದೇ ರೀತಿ ಉದ್ದಟತನ ಮುಂದುವರೆಸಿದರೆ ಕರ್ನಾಟಕ ಸರ್ಕಾರವೂ ಕೂಡ ಮಹಾರಾಷ್ಟ್ರ ಗಡಿಯಲ್ಲಿರುವ ಕನ್ನಡಿಗರ ರಕ್ಷಣೆಗೆ ಇದೇ ರೀತಿಯ ವಿಮೆ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ‌.   ಮಹಾರಾಷ್ಡೃ ಸರ್ಕಾರ ಕರ್ನಾಟಕದ ಗಡಿಯಲ್ಲಿರುವ ಕೆಲವರಿಗೆ ವಿಮೆ ನೀಡುವ …

Read More »

ಗಂಡನ ಅನೈತಿಕ ಸಂಬಂಧ ಪ್ರಶ್ನಿಸಿದಕ್ಕೆ ಪತ್ನಿಯನ್ನು ಬರ್ಬರವಾಗಿ ಕೊಲೆ

ಬೆಂಗಳೂರು : ಬೆಂಗಳೂರಿನ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದಲ್ಲಿ ಗಂಡನ ಅನೈತಿಕ ಸಂಬಂಧ ಪ್ರಶ್ನಿಸಿದಕ್ಕೆ ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿದ ಆರೋಪ ಕೇಳಿ ಬಂದಿದೆ.   ಮೃತ ಮಹಿಳೆ ಜಯಮಹಲ್ ಲೇಔಟ್ ನಿವಾಸಿ ಜಯಂತಿ ಎಂದು ತಿಳಿದುಬಂದಿದೆ. ಮೃತ ಮಹಿಳೆ ಗಂಡ ಬ್ಯೂಟಿ ಪಾರ್ಲರ್ ಮಹಿಳೆ ಜೊತೆ ಅನೈತಿಕ ಸಂಬಂಧವಿಟ್ಟುಕೊಂಡಿದ್ದನು ಎಂದು ಆರೋಪಿಸಲಾಗಿದೆ. ಅನೈತಿಕ ಸಂಬಂಧವನ್ನು ಪ್ರಶ್ನೆ ಮಾಡಿದ್ದಕ್ಕೆ ಪತಿಯೇ ಪತ್ನಿಯನ್ನು ಕೊಲೆ ಮಾಡಿದ ಬಳಿಕ ಆಕೆಯ ಶವವನ್ನು ಆಸ್ಪತ್ರೆಗೆ ತಂದು …

Read More »