Breaking News

ರಾಜ್ಯ

ಅಂದರ್- ಬಾಹರ್ ಆಟದಲ್ಲಿ ತೊಡಗಿದ್ದ ಎಂಟು ಜನ ಆರೋಪಿ ಪೊಲೀಸರು ವಶಕ್ಕೆ

ಖಾನಾಪುರ: ತಾಲೂಕಿನ ಪಾರಿಷ್ವಾಡ ಗ್ರಾಮದಲ್ಲಿ ಮಲಪ್ರಭಾ ನದಿ ದಂಡೆಯಲ್ಲಿ ಅಂದರ್- ಬಾಹರ್ ಆಟದಲ್ಲಿ ತೊಡಗಿದ್ದ ಎಂಟು ಜನ ಆರೋಪಿತರನ್ನು ಪೊಲೀಸರು ವಶಕ್ಕೆ ಪಡೆದ್ದಾರೆ. ಖಚಿತ ಮಾಹಿತಿ ಮೇರೆಗೆ ಖಾನಾಪುರ ಪೊಲೀಸ್ ಠಾಣೆ ಪಿಎಸ್ಐ ಪ್ರಕಾಶ ರಾಠೋಡ ಅವರು ಬೈಲಹೊಂಗಲ ಡಿಎಸ್ಪಿ ರವಿ ಡಿ.ನಾಯ್ಕ, ಖಾನಾಪುರ ಪಿಐ ರಾಮಚಂದ್ರ ನಾಯಕ ಅವರ ಮಾರ್ಗದರ್ಶನದಲ್ಲಿ ಸಿಬ್ಬಂದಿಗಳೊಂದಿಗೆ ದಾಳಿ ಮಾಡಿ 8 ಜನರನ್ನು ವಶಕ್ಕೆ ಪಡೆದರು.ಆರೋಪಿತರಿಂದ ಹಣ ಹಾಗೂ ಇಸ್ಪೀಟ್ ಎಲೆಗಳನ್ನು ಜಪ್ತಿ ಮಾಡಿಕೊಂಡಿದ್ದು, ತನಿಖೆ …

Read More »

ಬಿಜೆಪಿ ಸರಕಾರ ರಾಷ್ಟ್ರದ ಅತ್ಯಂತ ಭ್ರಷ್ಟ ಸರಕಾರ:ರಾಹುಲ್ ಗಾಂಧಿ

ಬೆಳಗಾವಿ: ಕರ್ನಾಟಕದ ಪ್ರಸ್ತುತ ಸರಕಾರ ದೇಶದ ಅತ್ಯಂತ ಭ್ರಷ್ಟ ಸರಕಾರವಾಗಿದೆ ಎಂದು ಕಾಗ್ರೆಸ್ ನಾಯಕ ರಾಹುಲ್ ಗಾಂಧಿ ನೇರವಾಗಿ ಹರಿಹಾಯ್ದಿದ್ದಾರೆ. ಬೆಳಗಾವಿಯಲ್ಲಿ ಸೋಮವಾರ ಯುವಕ್ರಾಂತಿ ಸಮಾವೇಶದಲ್ಲಿ ಅವರು ಮಾತನಾಡುತ್ತಿದ್ದರು. ಬಿಜೆಪಿ ಸರಕಾರ 40 ಪರ್ಸೆಂಟ್ ಸರಕಾರ. ಈ ಸರಕಾರದಿಂದ ಜನರು ಬೇಸತ್ತಿದ್ದಾರೆ. ಜನಸಾಮಾನ್ಯರ ಸರಕಾರವನ್ನು ಕರ್ನಾಟಕದ ಜನರು ಬಯಸಿದ್ದಾರೆ. ಹಾಗಾಗಿ ಈ ಬಾರಿ ಸ್ಪಷ್ಟ ಬಹುಮತದಿಂದ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಅವರು ಹೇಳಿದರು. ಕರ್ನಾಟಕದ ಸರಕಾರ ಭ್ರಷ್ಟ ಸರಕಾರ, …

Read More »

ನಾನು ಗೆದ್ದರೇ ಗಂಗಾವತಿಯ ಜನತೆಗೆ ಡಬಲ್ ಬೆಡ್ ರೂಮ್ ಮನೆ ಗಿಫ್ಟ್ – ಜನಾರ್ಧನ ರೆಡ್ಡಿ

ಕೊಪ್ಪಳ: ನಾನು ಶಾಸಕನಾದರೇ ಗಂಗಾವತಿಯ ಜನತೆಗೆ ಡಬಲ್ ಬೆಡ್ ರೂಮ್ ಮನೆ ಕಟ್ಟಿಸಿಕೊಡಲಾಗುತ್ತದೆ. ಗಂಗಾವತಿಯಲ್ಲಿ ರಿಂಗ್ ರಸ್ತೆ ನಿರ್ಮಾಣ ಮಾಡಿಕೊಡಲಾಗುತ್ತದೆ. ಗಂಗಾವತಿಯನ್ನು ಇಡೀ ರಾಜ್ಯಕ್ಕೆ ಮಾದರಿಯಾಗಿ ಮಾಡುವ ಕೆಲಸ ಮಾಡುವುದಾಗಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ರಾಜ್ಯಾಧ್ಯಕ್ಷ ಜನಾರ್ಧನ ರೆಡ್ಡಿ ( Farmer Minister Janardhana Reddy ) ಘೋಷಿಸಿದಿದ್ದಾರೆ.   ಇಂದು ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದಂತ ಅವರು, ಜಿಲ್ಲಾ ಮಂತ್ರಿಯಾಗಿದ್ದಾಗ ಹೊಸಪೇಟೆಯನ್ನು ಸುಂದರವಾಗಿ ಅಭಿವೃದ್ಧಿಗೊಳಿಸಲಾಗಿದೆ. …

Read More »

ರಾಜ್ಯದ ರೈತರಿಗೆ 10 ಹೆಚ್.ಪಿ ವರೆಗೆ ಉಚಿತ ವಿದ್ಯುತ್ : ಸಿಎಂ ಬೊಮ್ಮಾಯಿ

ಚಿತ್ರದುರ್ಗ : ರೈತ ಸಮುದಾಯಕ್ಕೆ ಸಿಎಂ ಬೊಮ್ಮಾಯಿ ಸಿಹಿಸುದ್ದಿ ನೀಡಿದ್ದು, ರಾಜ್ಯ ಸರ್ಕಾರದಿಂದ 10 ಹೆಚ್ ಪಿ ವರೆಗೆ ರೈತರಿಗೆ ಉಚಿತ ವಿದ್ಯುತ್ ನೀಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹೊಳಲ್ಕೆರೆ ಪಟ್ಟಣದಲ್ಲಿ ಭಾನುವಾರ ಹೊಳೆಲ್ಕೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಫಲಾನುಭವಿಗಳ ಸೌಲಭ್ಯ ಮತ್ತು ಸಲಕರಣೆಗಳ ವಿತರಣೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. …

Read More »

ನನ್ನ ಫೋನ್​ ಟ್ಯಾಪ್​ ಆಗಿಲ್ಲ, ಸಿಡಿಆರ್​ ತೆಗೆದುಕೊಳ್ಳುತ್ತಿದ್ದಾರೆ” ಎಂದ ಎಂ.ಬಿ ಪಾಟೀಲ! ಏನಿದು ಸಿಡಿಆರ್?

ವಿಜಯಪುರ‌: ನನ್ನ ಫೋನ್ ಟ್ಯಾಪ್ ಆಗಿಲ್ಲ. ಫೋನ್ ಸಿಡಿಆರ್ ತಗೆದುಕೊಳ್ಳುತ್ತಿದ್ದಾರೆ ಎಂದು ವಿಜಯಪುರ ನಗರದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ಎಂ ಬಿ ಪಾಟೀಲ ಹೇಳಿದರು. ಸಿಡಿಆರ್ ತೆಗೆಯುವ ಕೆಲಸ ಮಾಡುತ್ತಿದ್ದಾರೆ. ಬಹಳಷ್ಟು ಜನರಿಗೆ ಸಿಡಿಆರ್ ತೆಗೆಯುವ ಚಾಳಿ ಇದೆ. ಆದ್ರೇ, ಯಾರ ಹೆಸರು ಹೇಳೋದಿಲ್ಲ. ಖಾಸಗಿ ಸಿಡಿಆರ್ ತೆಗೆದುಕೊಳ್ಳುವ ಅಧಿಕಾರ ಯಾರಿಗೂ ಇಲ್ಲ. ಹಾಗೇನಾದರೂ ಆದ್ರೇ, ಸರ್ಕಾರ ಜವಾಬ್ದಾರಿ ಎಂದು ಪತ್ರ ಬರೆದಿದ್ದೇನೆ. ಫೋನ್ ಸಿಡಿಆರ್ ನನ್ನ ವಿರೋಧಿಗಳು ಮಾಡುತ್ತಿದ್ದಾರೆ. …

Read More »

ಮನನೊಂದು ನೇಣು ಬಿಗಿದುಕೊಂಡ 13ರ ಬಾಲಕಿ!

ಕೊಡಗು: ಒಂದು ವಾರದಿಂದ ಖಿನ್ನತೆಯಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡ್ಲಿಪೇಟೆ ಸಮಿಪದ ಶಿವರಳ್ಳಿ ಗ್ರಾಮದಲ್ಲಿ ನಡೆದಿದೆ. 13 ವರ್ಷದ ವೈಷ್ಣವಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿನಿ.     ಕೊಡ್ಲಿಪೇಟೆ ಸಮಿಪದ ಶಿವರಳ್ಳಿ ಗ್ರಾಮದ ಜಿತೇಂದ್ರ-ಅಕ್ಷತ ದಂಪತಿ ಪುತ್ರಿ ವೈಷ್ಣವಿ ಸೊಮವಾರಪೇಟೆಯ ಖಾಸಗಿ ಶಾಲೆಯಲ್ಲಿ ಏಳನೇ ತರಗತಿ ವ್ಯಾಸಾಂಗ ಮಾಡುತಿದ್ದಳು. ಕಳೆದ ಒಂದು ವಾರದಿಂದ ಖಿನ್ನತೆಯ ಸಮಸ್ಯೆಯಿಂದ ಬಳಲುತ್ತಿದ್ದಳು. ವಿದ್ಯಾರ್ಥಿನಿ ವೈಷ್ಣವಿ ಶನಿವಾರ ಸಂಜೆ ಮನೆಯಲ್ಲಿ ನೇಣುಬಿಗಿದುಕೊಂಡು …

Read More »

78 ಯೋಜನೆಗಳ ಬಂಡವಾಳ ಹೂಡಿಕೆ ಪ್ರಸ್ತಾವನೆಗಳಿಗೆ ಏಕಗವಾಕ್ಷಿ ಸಮಿತಿಯಿಂದ ಅನುಮೋದನೆ; ಸೃಷ್ಟಿಯಾಗಲಿವೆ 13,917 ಉದ್ಯೋಗಗಳು!

ಬೆಂಗಳೂರು: ಕರ್ನಾಟಕ ಉದ್ಯೋಗ ಮಿತ್ರ ಕಚೇರಿಯಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ನೇತೃತ್ವದಲ್ಲಿ ಏಕಗವಾಕ್ಷಿ ಸಮಿತಿ, ಬಂಡವಾಳ ಹೂಡಿಕೆ ಮತ್ತು ಉದ್ಯೋಗಾವಾಕಾಶಗಳನ್ನು ಸೃಷ್ಟಿಸುವ ನಿಟ್ಟಿನಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ 78 ಯೋಜನೆಗಳ 5298.69 ಕೋಟಿ ರೂ. ಬಂಡವಾಳ ಹೂಡಿಕೆಗೆ ಇಂದು (ಮಾ.19) ಅನುಮೋದನೆ ನೀಡಿದೆ. ಒಟ್ಟು 78 ಯೋಜನೆಗಳಿಂದ 5298.69 ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದ್ದು ಇದರ ಪರಿಣಾಮವಾಗಿ, 13917 ಜನರಿಗೆ ಉದ್ಯೋಗಗಳು ಲಭಿಸಲಿವೆ. ಅನುಮೋದನೆ …

Read More »

ಅಂತಾರಾಷ್ಟ್ರೀಯ ಖ್ಯಾತಿಯ ಬ್ಯಾಡಗಿ ಮೆಣಸಿನಕಾಯಿಗೆ ಈಗ ಚಿನ್ನದ ಬೆಲೆ

ಹಾವೇರಿ/ ವೀರೇಶ ಚೌಕಿಮಠ ಬ್ಯಾಡಗಿ ಅಂತಾರಾಷ್ಟ್ರೀಯ ಖ್ಯಾತಿಯ ಬ್ಯಾಡಗಿ ಮೆಣಸಿನಕಾಯಿಗೆ ಈಗ ಚಿನ್ನದ ಬೆಲೆ ಬಂದಿದೆ. ಪ್ರತಿ ಕ್ವಿಂಟಾಲ್ ಬ್ಯಾಡಗಿ ಕಡ್ಡಿ (ಕೆಡಿಎಲ್) ಮತ್ತು ಡಬ್ಬಿ ತಳಿಗೆ 60ರಿಂದ 65 ಸಾವಿರ ರೂ.ಗೆ ಏರಿಕೆಯಾಗಿದೆ. ಆದರೆ, ಅತಿವೃಷ್ಟಿ ಮತ್ತು ಅಕಾಲಿಕ ಮಳೆಯಿಂದಾಗಿ ಮೆಣಸಿನಕಾಯಿ ಇಳುವರಿ ಕಡಿಮೆಯಾಗುತ್ತಿದ್ದು, ಇದರ ಪರಿಣಾಮ ವಾರದಿಂದ ವಾರಕ್ಕೆ ದರ ಏರುತ್ತಲೇ ಇದೆ. ಈ ಬೆಳವಣಿಗೆಯಿಂದ ಗ್ರಾಹಕರು ಸೇರಿ ರೈತರಲ್ಲೂ ಆತಂಕ ಸೃಷ್ಟಿಯಾಗಿದೆ. ವಿಶ್ವದಲ್ಲೇ ಮೆಣಸಿನಕಾಯಿ ಮಾರುಕಟ್ಟೆಗೆ …

Read More »

ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಕಣಬರಗಿ ಚೆಕ್ ಪೋಸ್ಟ್ ನಲ್ಲಿ 1.77 ಲಕ್ಷ ರೂಪಾಯಿ ಹಣ ಜಪ್ತಿ

ಬೆಳಗಾವಿ: ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಕಣಬರಗಿ ಚೆಕ್ ಪೋಸ್ಟ್ ನಲ್ಲಿ ಫ್ಲೈಯಿಂಗ್ ಸ್ಕ್ವಾಡ್ ತಂಡವು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 1.77 ಲಕ್ಷ ರೂಪಾಯಿ ಹಣವನ್ನು ಜಪ್ತಿ ಮಾಡಿದೆ. ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣಾ ಸಂದರ್ಭದಲ್ಲಿ ನಗದು ಪತ್ತೆಯಾಗಿರುತ್ತದೆ. ಸದರಿ ಹಣವನ್ನು ಜಿಲ್ಲಾ ಖಜಾನೆಯಲ್ಲಿ ಜಮೆ ಮಾಡಲಾಗಿದ್ದು, ಪಂಚಾಯತ ಮುಖ್ಯ ಕಾರ್ಯನಿರ್ವಾಹಕರು ಅಧ್ಯಕ್ಷರಾಗಿರುವ ತ್ರಿಸದಸ್ಯ ಸಮಿತಿಗೆ ಪ್ರಕರಣವನ್ನು ವರ್ಗಾಯಿಸಲಾಗಿರುತ್ತದೆ. ಚುನಾವಣಾಧಿಕಾರಿ ಅಕ್ರಮ್ ಇಂಫಾಲ್, ಮಾಳಮಾರುತಿ ಪೊಲೀಸ್ ಠಾಣೆಯ ಸಿಪಿಐ, ಎಫ.ಎಸ್.ಟಿ. …

Read More »

ಯುವಕ್ರಾಂತಿ ರ್ಯಾಲಿಯಲ್ಲಿ ಯುವಕರಿಗೆ ಯೋಜನೆ ಘೋಷಣೆ, ಯುವಕರಿಗೆ ಬಲತುಂಬಲು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಪಣ

ಬೆಳಗಾವಿ: ” ಭರವಸೆಗಳನ್ನು ನೀಡಿ, ಯುವಕರಿಗೆ ಉದ್ಯೋಗ ನೀಡದ ಬಿಜೆಪಿ ಸರ್ಕಾರವನ್ನು ಬುಡಸಮೇತ ಕಿತ್ತೆಸೆಯಲು ಯುವಜನತೆ ಮುಂದಾಗಬೇಕು ಎಂದು  ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪ ಸಿಂಗ್‌ ಸುರ್ಜೇವಾಲಾ ಕರೆ ನೀಡಿದರು. ಇಲ್ಲಿನ ಸಿಪಿಎಡ್‌ ವೈದಾನದಲ್ಲಿ ಸುದ್ದಿಗೋಷ್ಠಿಯಲ್ಲಿ  ಮಾತನಾಡಿದ ಅವರು, ರಾಜ್ಯದ ಸರ್ಕಾರ ನೀಡಿದ ಪೊಳ್ಳು ಭರವಸೆಯಿಂದ ಯುವಕರು ಉತ್ಸಾಹ ಕಳೆದುಕೊಂಡಿದ್ದಾರೆ. ಯುವಕರಿಗೆ ಬಲತುಂಬಲೆಂದೇ  ರಾಹುಲ್ ಗಾಂಧಿ ಅವರು ಪಣತೊಟ್ಟಿದ್ದು, ಬೆಳಗಾವಿಯಿಂದ  ಯುವಕಾಂತ್ರಿ ರ್ಯಾಲಿ ಮಾಡುವ ಮೂಲಕ ಚುನಾವಣೆ ರಣಕಹಳೆ ಮೊಳಗಿಸಲಿದ್ದಾರೆ ಎಂದರು. …

Read More »