ಹುಬ್ಬಳ್ಳಿ: ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ, ಗ್ರಾಹಕ ವ್ಯವಹಾರಗಳು ಮತ್ತು ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಜವಳಿ ಸಚಿವ ಪಿಯೂಷ್ ಗೋಯಲ್ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ನಿಲ್ದಾಣದಲ್ಲಿ ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್‌ಫಾರ್ಮ್‌ಗೆ ಭೇಟಿ ನೀಡಿದರು. ಸೌತ್ ವೆಸ್ಟರ್ನ್ ರೈಲ್ವೇ ಪ್ರಧಾನ ವ್ಯವಸ್ಥಾಪಕರಾದ ಸಂಜೀವ್ ಕಿಶೋರ್ ಅವರು ಸಚಿವರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಕಿಶೋರ್ ಅವರು ಹುಬ್ಬಳ್ಳಿ ಜಂಕ್ಷನ್ ನಲ್ಲಿ ಇತ್ತೀಚಿನ ದಿನಗಳಲ್ಲಿ ಕೈಗೊಂಡ ಪ್ರಮುಖ ಸುಧಾರಣೆಗಳು ಮತ್ತು ಭವಿಷ್ಯದ …
Read More »ಕೃಷಿ ಹೊಂಡಕ್ಕೆ ಬಿದ್ದು ಬಾಲಕರಿಬ್ಬರ ಬಲಿ
ಬೆಳಗಾವಿ: ಹುಕ್ಕೇರಿ ತಾಲೂಕಿನ ಯಾದಗೂಡ ಗ್ರಾಮದಲ್ಲಿ ಕೃಷಿ ಹೊಂಡಕ್ಕೆ ಬಿದ್ದು ಬಾಲಕರಿಬ್ಬರು ಬಲಿಯಾಗಿದ್ದಾರೆ. ಯಮನಪ್ಪ ಪ್ರಕಾಶ ರೆಡ್ಡರಟ್ಟಿ (10) ಹಾಗೂ ಯೇಶು ಬಸಪ್ಪ (14) ಮತರಾದ ಬಾಲಕರು. ಭಾನುವಾರ ಸಂಜೆ 4.30ರ ಹೊತ್ತಿಗೆ ಈ ಬಾಲಕರು ಈಸಲೆಂದು ಕೃಷಿ ಹೊಂಡಕ್ಕೆ ಇಳಿದಿದ್ದಾರೆ. ಈ ವೇಳೆ ಯಮನಪ್ಪ ನೀರಿನಲ್ಲಿ ಮುಳುಗುತ್ತಿದ್ದ. ಆತನನ್ನು ರಕ್ಷಿಸಲು ಯೇಶು ಪ್ರಯತ್ನಿಸಿದ್ದಾನೆ. ಆದರೆ ಇಬ್ಬರೂ ಬದುಕುಳಿಯಲಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.
Read More »ಫಕೀರನ ವೇಷದಲ್ಲಿ ಬಂದು ಮನೆಗೆ ಕನ್ನ ಹಾಕುತ್ತಿದ್ದ ಖದೀಮರು ಅಂದರ್; !
ಹೊಸಕೋಟೆ: ಹೊಸಕೋಟೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು ಖತರ್ನಾಕ್ಕಳ್ಳರು ಫಕೀರರ ವೇಷ ಹಾಗೂ ಪಾಲಿಶ್ ಮಾಡುವ ನೆಪದಲ್ಲಿ ಮನೆಗಳಿಗೆ ಬಂದು ಕನ್ನ ಹಾಕುತ್ತಿದ್ದವನ್ನು ಬಂಧಿಸಿದ್ದಾರೆ. ಈ ಮೂರು ಜನ ಅಂತರ್ರಾಜ್ಯ ಕುಖ್ಯಾತ ಕಳ್ಳರನ್ನು ಪೊಲೀಸರು ಬಂದಿಸಿದ್ದಾರೆ. ಬಂಧಿತರಿಂದ ಒಟ್ಟು 32 ಲಕ್ಷ ಮೌಲ್ಯದ 502 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದುಕೊಳ್ಳಲಾಗಿದೆ. ಬಂಧಿತರನ್ನು ಆರೋಪಿಗಳನ್ನು ಸೈಯದ್ ಆಲಿ, ಭರತ್ ಕುಮಾರ್, ಮತ್ತು ಆನಂದ್ ಎಂದು ಗುರುತಿಸಲಾಗಿದೆ. ಈ ಖದೀಮರು ಫಕೀರನ ವೇಶ ಹಾಕಿಕೊಂಡು …
Read More »ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಗೊಂಡ ಸೈಲೆಂಟ್ ಸುನೀಲ.
ಬೆಂಗಳೂರು: ಬಿಜೆಪಿಗೆ ಸೈಲೆಂಟ್ ಸುನೀಲ ಸೇರುತ್ತಾರಾ ಇಲ್ಲವಾ ಎನ್ನುವ ಪ್ರಶ್ನೆ ಹಲವು ದಿನಗಳಿಂದ ಕಾಡುತ್ತಿತ್ತು. ಇದೀಗ ಬಿಜೆಪಿಗೆ ಸೈಲೆಂಟ್ ಸುನೀಲ ಅಧಿಕೃತವಾಗಿ ಸೇರ್ಪಡೆಯಾಗಿದ್ದು ಹಲವು ದಿನಗಳ ಕುತೂಹಲಕ್ಕೆ ತೆರೆ ಬಿದ್ದಿದೆ. ಈ ಹಿಂದೆ ಸೈಲೆಂಟ್ ಸುನೀಲ ರನ್ನು ಬಿಜೆಪಿಗೆ ಸೇರಿಸಿಕೊಳ್ಳಲ್ಲ ಎಂದು ಬಿಜೆಪಿ ಹೇಳಿತ್ತು. ಆದರೆ ಈಗ ಬಿಜೆಪಿಗೆ ಸೇರಿಸಿಕೊಳ್ಳುವ ಮೂಲಕ ಪ್ರತಿಪಕ್ಷಗಳಿಗೆ ಆಹಾರವಾಗಿದ್ದಾರೆ ಎನ್ನಲಾಗಿದೆ. ಈ ಹಿಂದೆ ಕಾಂಗ್ರೆಸ್ ಪಕ್ಷ, ಬಿಜೆಪಿಯನ್ನು ರೌಡಿ ಮೋರ್ಚಾ ಎಂದಿತ್ತು. ಸೈಲೆಂಟ್ ಸುನೀಲ ಪಕ್ಷ …
Read More »ಶ್ರೀಗಂಧದ ಕಟ್ಟಿಗೆಗಳನ್ನು ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ ಪೊಲೀಸರು
ಬೆಳಗಾವಿ: ಖಾನಾಪುರ ತಾಲೂಕಿನ ಕಸಬಾ ನಂದಗಡ ಗ್ರಾಮ ವ್ಯಾಪ್ತಿಯಲ್ಲಿ ಅಕ್ರಮವಾಗಿ ಶ್ರೀಗಂಧದ ಕಟ್ಟಿಗೆಗಳನ್ನು ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ಶ್ರೀಗಂಧದ ಕಟ್ಟಿಗೆ ವಶಪಡಿಸಿಕೊಂಡಿದ್ದಾರೆ. ಆನಂದ ಮಾರುತಿ ರಾಮಣ್ಣವರ (25) ಬಂಧಿತ ಆರೋಪಿ. ಈತ ಶ್ರೀಗಂಧದ ಗಿಡವನ್ನು ಕಡಿದು ಅದರ ತುಂಡುಗಳನ್ನು ಸರ್ಕಾರದ ಯಾವುದೇ ಪಾಸ್, ಪರ್ಮಿಟ್, ಲೈಸನ್ಸ್ ಯಾವುದೂ ಇಲ್ಲದೆ ತನ್ನ ವಶದಲ್ಲಿ ಇಟ್ಟುಕೊಂಡು ಕಾನೂನು ಬಾಹಿರವಾಗಿ ಸಾಗಿಸುವ ಯತ್ನದಲ್ಲಿದ್ದ.
Read More »ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಿಂತು ಯುವಕನೊಬ್ಬ ಆಜಾನ್ ಕೂಗಿದ
ಶಿವಮೊಗ್ಗ: ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಿಂತು ಯುವಕನೊಬ್ಬ ಆಜಾನ್ ಕೂಗಿದ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಆಜಾನ್ ಬಗ್ಗೆ ನೀದಿದ್ದ ಹೇಳಿಕೆ ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಮುಸ್ಲಿಂ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು, ಈ ವೇಳೆ ಯುವಕನೊಬ್ಬ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಿಂತು ಆಜಾನ್ ಕೂಗಿದ್ದಾನೆ. ಈ ವಿಡಿಯೋ ವೈರಲ್ ಆಗಿದೆ. ಯುವಕ ಆಜಾನ್ ಕೂಗುತಿದ್ದಂತೆ ಪೊಲೀಸರು ವಿರೋಧ ವ್ಯಕ್ತಪಡಿಸಿದ್ದು, ಈ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ …
Read More »ನಾಳೆ ಇಡೀ ದಿನ ಆಟೋ ಸೇವೆ ಬಂದ್ ಆಗುವ ಸಾಧ್ಯತೆ?
ಬೆಂಗಳೂರು ಆಟೊರಿಕ್ಷಾ ಚಾಲಕರ ಸಂಘಟನೆಗಳ ಒಕ್ಕೂಟ ಬೆಂಗಳೂರಲ್ಲಿ ಬೈಕ್ ಟ್ಯಾಕ್ಸಿ ನಿಷೇಧಿಸುವಂತೆ ಆಗ್ರಹಿಸಿ ಮಾರ್ಚ್ 20ರಂದು ಆಟೋ ಸಂಚಾರ ಸ್ಥಗಿತಗೊಳಿಸುವ ಎಚ್ಚರಿಕೆ ನೀಡಿದೆ. ಇದರಿಂದ ನಾಳೆ ಸೋಮವಾರ ಇಡೀ ದಿನ ಸಾರ್ವಜನಿಕರಿಗೆ ಆಟೋ ಸೇವೆ ಸಿಗುವುದು ಅನುಮಾನ ಮೂಡಿಸಿದೆ. ಭಾನುವಾರ ಸಂಜೆ ವೇಳೆಗೆ ಸಿಎಂ ಬೈಕ್ ಟ್ಯಾಕ್ಸಿ ಸೇವೆ ರದ್ದು ಮಾಡದಿದ್ದರೇ ಸೋಮವಾರ ಆಟೋ ಸೇವೆ ಬಂದ್ ಮಾಡುವುದು ನಿಶ್ಚಿತ ಎಂದು ಒಕ್ಕೂಟ ಎಚ್ಚರಿಸಿದೆ. ‘ಸಾರಿಗೆ ಇಲಾಖೆ ಮತ್ತು …
Read More »ಬೆಳಗಾವಿ: ಸುರೇಶ ಅಂಗಡಿ, ವೆಂಕಟೇಶ್‌ಗೆ ರಾಣಿ ಚನ್ನಮ್ಮ ವಿ.ವಿ ಗೌರವ ಡಾಕ್ಟರೇಟ್
ಬೆಳಗಾವಿ: ಇಲ್ಲಿನ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 11ನೇ ಘಟಿಕೋತ್ಸವ ಮಾರ್ಚ್ 20ರಂದು ನಡೆಯಲಿದೆ. ಈ ಬಾರಿ ಇಬ್ಬರಿಗೆ ಗೌರವ ಡಾಕ್ಟರೇಟ್, 27 ಪಿಎಚ್‌ಡಿ ಹಾಗೂ 47,185 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುವುದು ಎಂದು ಕುಲಪತಿ ಪ್ರೊ.ಎಂ. ರಾಮಚಂದ್ರ ಗೌಡ ತಿಳಿಸಿದರು. ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ಸುರೇಶ ಅಂಗಡಿ ಅವರಿಗೆ ಸಮಾಜ ಸೇವೆಯನ್ನು ಪರಿಗಣಿಸಿ, ಮರಣೋತ್ತರವಾಗಿ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿನ ಕೊಡುಗೆ ಪರಿಗಣಿಸಿ ಮಲ್ಲೇಪುರಂ ಜಿ. ವೆಂಕಟೇಶ್ ಅವರಿಗೆ …
Read More »ರಾಜಧಾನಿ ಎಕ್ಸ್‌ಪ್ರೆಸ್ ರೈಲಿನಲ್ಲಿಎಣ್ಣೆ ಕೊಟ್ಟು ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಯೋಧ್
ಅಲಪ್ಪುಳ: ರಾಜಧಾನಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಮಹಿಳೆಯೊಬ್ಬಳಿಗೆ ಆಲ್ಕೋಹಾಲ್ ನೀಡಿ, ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಯೋಧನನ್ನು ಕೇರಳ ಪೊಲೀಸರು ಶನಿವಾರ (ಮಾ.18) ಬಂಧಿಸಿದ್ದಾರೆ. ಬಂಧಿತ ಯೋಧನನ್ನು ಪ್ರತೀಶ್ ಕುಮಾರ್ ಎಂದು ಗುರುತಿಸಲಾಗಿದೆ. ದೌರ್ಜನ್ಯಕ್ಕೆ ಒಳಗಾದ ತ್ರಿವೆಂಡ್ರಮ್ ಮೂಲದ ಮಹಿಳೆ ದೂರು ನೀಡಿದ ಬಳಿಕ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿ ಪ್ರತೀಶ್ ಕಾಶ್ಮೀರದಲ್ಲಿ ನೆಲೆಸಿರುವ ಯೋಧ. ಈತ ತನ್ನ ಊರಿಗೆ ತೆರಳುತ್ತಿದ್ದ ವೇಳೆ ಉಡುಪಿಯಿಂದ ರಾಜಧಾನಿ ಎಕ್ಸ್‌ಪ್ರೆಸ್ ಹತ್ತಿದ ಮಹಿಳೆಯೊಂದಿಗೆ ಸ್ನೇಹ ಬೆಳೆಸಿದ. …
Read More »ಸ್ವಂತ ತಮ್ಮನನ್ನೇ ಹತ್ಯೆ ಮಾಡಿದ್ದ ಅಕ್ಕ; 8 ವರ್ಷದ ಬಳಿಕ ಪೊಲೀಸರಿಗೆ ಸಿಕ್ಕಿ ಬಿದ್ದಳು!
ಆನೇಕಲ್: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಎಂಬ ಕಾರಣಕ್ಕೆ ಪ್ರಿಯಕರನೊಂದಿಗೆ ಸೇರಿ ಸ್ವಂತ ತಮ್ಮನನ್ನೇ ಕೊಲೆ ಮಾಡಿ ಪರಾರಿಯಾಗಿದ್ದ ಹಂತಕಿ ಅಕ್ಕ ಹಾಗೂ ಪ್ರಿಯಕರ 8 ವರ್ಷದ ಬಳಿಕ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಬಿಜಾಪುರ ಮೂಲದ ಭಾಗ್ಯಶ್ರೀ(38) ಹಾಗೂ ಶಂಕರಪ್ಪ (42) ಬಂಧಿತ ಆರೋಪಿಗಳು. ಅಕ್ಕನ ಸಂಚಿಗೆ ಲಿಂಗರಾಜು (35) ಮೃತ ದುದೈವಿ. ರಾಯಚೂರಿನ ಕಾಲೇಜೊಂದರಲ್ಲಿ ಓದುತ್ತಿದ್ದ ಭಾಗ್ಯಶ್ರೀ ಆ ದಿನಗಳಲ್ಲೆ ಶಂಕರಪ್ಪ ತಳವಾರ ಎಂಬುವನೊಂದಿಗೆ ಸಲುಗೆ ಬೆಳೆಸಿಕೊಂಡಿದ್ದಳು. ಈ ವೇಳೆಗಾಗಲೇ ಶಂಕರಪ್ಪನಿಗೆ …
Read More »
Laxmi News 24×7