ಬೆಂಗಳೂರು: ಮಾಜಿ ಸಚಿವ ವಿನಯ್ ಕುಲಕರ್ಣಿ ಸಿಎಂ ಬಸವರಾಜ್ ಬೊಮ್ಮಾಯಿ ಕ್ಷೇತ್ರ ಶಿಗ್ಗಾವಿಯಿಂದ ಸ್ಪರ್ಧೆ ಮಾಡುವಂತೆ ಕಾಂಗ್ರೆಸ್ ನಾಯಕರು ಒತ್ತಡ ಹೇರಿದ್ದಾರೆ ಎನ್ನಲಾಗಿದೆ. ಧಾರವಾಡ ಜಿಲ್ಲಾಪಂಚಾಯಿತಿ ಸದಸ್ಯ ಯೇಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿ ಜಾಮೀನಿನ ಮೇಲೆ ಹೊರಬಂದಿರುವ ವಿನಯ್ ಕುಲ್ಕರ್ಣಿ, ಈ ಬಾರಿ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಿರುದ್ಧ ಶಿಗ್ಗಾವಿಯಿಂದ ಸ್ಪರ್ಧೆ ಮಾಡುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ …
Read More »ಹೆರಿಗೆ ಮಾಡಿಸಲು ಹಣ ಕೇಳಿದ್ದ ಪ್ರಕರಣ ಡಾ.ಪಲ್ಲವಿ ಪೂಜಾರಿ ಅಮಾನತು
ಹೆರಿಗೆ ಮಾಡಿಸಲು ಹಣ ಕೇಳಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಸೂತಿ ಹಾಗೂ ಸ್ತ್ರೀ ರೋಗ ತಜ್ಞೆ ಡಾ.ಪಲ್ಲವಿ ಪೂಜಾರಿ ಅವರನ್ನು ಅಮಾನತುಗೊಳಿಸಿ ಯಾದಗಿರಿ ಜಿಲ್ಲಾಧಿಕಾರಿ ಸ್ನೇಹಲ್ ಆರ್.ಆದೇಶ ಹೊರಡಿಸಿದ್ದಾರೆ. ಹೆರಿಗೆಗಾಗಿ ಸಂಗೀತಾ ಎಂಬ ಗರ್ಭಿಣಿ ಆಸ್ಪತ್ರೆಗೆ ಬಂದಿದ್ದರು. ಸಿಜೇರಿಯನ್ ಮೂಲಕ ಹೆರಿಗೆ ಮಾಡಿಸಲು ಡಾ.ಪಲ್ಲವಿ 10 ಸಾವಿರ ಹಣ ಕೇಳಿದ್ದಾರೆ. ಅಷ್ಟೊಂದು ಹಣ ತಮ್ಮ ಬಳಿ ಇಲ್ಲ ಎಂದು ಸಂಗೀತಾ ಹೇಳಿದ್ದಾರೆ. ಹಣ ತರದೆ ಹೆರಿಗೆ ಮಾಡಿಸಲು ನಿರಾಕರಿಸಿದ್ದಾರೆ. ಸಂಗೀತಾ ಹಲವೆಡೆ …
Read More »ಪರಿಹಾರಕ್ಕಾಗಿ ಟವರ್ ಏರಿದ ರೈತರು
ಬಾಗಲಕೋಟೆ: ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಚಿಕ್ಕಲಗಿ ಗ್ರಾಮದ ಆರು ಜನ ರೈತರು ಮಳೆಯಿಂದಾದ ನಷ್ಟಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಗುರುವಾರ ಮೊಬೈಲ್ ಟವರ್ ಏರಿ ಕುಳಿತುಕೊಂಡಿದ್ದರಿಂದ ಕೆಲಕಾಲ ಆತಂಕದ ವಾತಾವರಣ ಉಂಟಾಗಿತ್ತು. ಮಲ್ಲಪ್ಪ ಬಿರಾದಾರ, ಸಿದ್ದು ಶಿಂಧೆ, ಯಲ್ಲಪ್ಪ ಬೆಳ್ಳುಬ್ಬಿ, ಮುನಿಕ ಗುರಚಿ, ಜ್ಞಾನದೇವ ಮಳಿಕ ಹಾಗೂ ಚಿರಾವ ಮೊಹಿತೆ ಟವರ್ ಏರಿದವರು. ವರ್ಷಪೂರ್ತಿ ಕಷ್ಟಪಟ್ಟು ಬೆಳೆದ ದ್ರಾಕ್ಷಿ ಬೆಳೆ ಹಾಳಾಗಿದೆ. ಕೂಡಲೇ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು. …
Read More »ಲಿಂಗಾಯತ ಮತ ಬೇಕಿಲ್ಲ; ಸುಳ್ಳಿನ ಫ್ಯಾಕ್ಟರಿಯಿಂದ ಸುಳ್ಳಿನ ಸುದ್ದಿ:ಸಿ.ಟಿ.ರವಿ
ಚಿಕ್ಕಮಗಳೂರು : ಲಿಂಗಾಯತ ಸಮುದಾಯಕ್ಕೆ ಪ್ರಾಮುಖ್ಯತೆ ಕೊಡಬೇಕಿಲ್ಲ ಎಂಬ ಹೇಳಿಕೆ ಕುರಿತು ವ್ಯಾಪಕ ಚರ್ಚೆಯಾಗುತ್ತಿರುವ ವೇಳೆಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ ಸ್ಪಷ್ಟನೆ ನೀಡಿದ್ದು, ”ಕಾಂಗ್ರೆಸ್ ಸುಳ್ಳಿನ ಫ್ಯಾಕ್ಟರಿಯಿಂದ ಸುಳ್ಳಿನ ಸುದ್ದಿ ಹಬ್ಬಿಸಿದ್ದಾರೆ” ಎಂದಿದ್ದಾರೆ. ”ಕನಸಿನಲ್ಲೂ ಕೂಡ ಜಾತಿ ರಾಜಕಾರಣ ಮಾಡಿದವನಲ್ಲ ಜಾತಿಯ ಬಗ್ಗೆ ಯೋಚನೆಯನ್ನು ಮಾಡಲ್ಲ,ಸುಳ್ಳು ಸುದ್ದಿ ಹಬ್ಬಿಸುವ ಮೂಲಕ ಲಿಂಗಾಯತ ವಿರೋಧಿ ಭಾವನೆ ಹುಟ್ಟು ಹಾಕುವ ಕೆಲಸವನ್ನ ಮಾಡುತ್ತಿದ್ದಾರೆ. ಇದರ ಹಿಂದೆ ಕಾಂಗ್ರೆಸ್ …
Read More »ಕನ್ನಡದ ಕೀರ್ತಿ ಪತಾಕೆಯನ್ನು ಜಗತ್ತಿನಾದ್ಯಂತ ಮೊಳಗಿಸಿದ “ಕಾಂತಾರ’ ನಟ-ನಿರ್ದೇಶಕ ರಿಷಭ್ ಶೆಟ್ಟಿ
ಜಿನೇವಾ: ಕನ್ನಡದ ಕೀರ್ತಿ ಪತಾಕೆಯನ್ನು ಜಗತ್ತಿನಾದ್ಯಂತ ಮೊಳಗಿಸಿದ “ಕಾಂತಾರ’ ನಟ-ನಿರ್ದೇಶಕ ರಿಷಭ್ ಶೆಟ್ಟಿ ವಿಶ್ವಸಂಸ್ಥೆಯಲ್ಲಿ ಕನ್ನಡದ ದನಿಯನ್ನು ಹೊಮ್ಮಿಸಿದ್ದಾರೆ. ಗುರುವಾರ ವಿಶ್ವಸಂಸ್ಥೆಯ ವಾರ್ಷಿಕ ಸಭೆಯಲ್ಲಿ ಮಾತನಾಡಿದ ರಿಷಭ್, ಭಾರತದ ನಾಗರಿಕ ಸಮಾಜ ತನ್ನ ಪರಿಸರ ವನ್ನು ರಕ್ಷಿಸಲು ಪಣ ತೊಡುತ್ತದೆ. ಇಂಥ ಪ್ರಜ್ಞೆಗೆ ಸಿನೆಮಾ ಮಾಧ್ಯಮವೂ ನೆರವಾಗುತ್ತದೆ ಎಂದು ಹೇಳುತ್ತ ನಿಸರ್ಗ ಮಯ ಚಿತ್ರ ಕಾಂತಾರದ ಮಹತ್ವವನ್ನು ವಿವರಿಸಿದರು. ಭಾರತದ ಹಲವಾರು ಸಿನೆಮಾಗಳು ವಾಸ್ತ ವಿಕ ಮತ್ತು ಕಾಲ್ಪನಿಕ ಕಥೆಗಳ ಮೂಲಕ ಪರಿಸರದ ಮಹತ್ವವನ್ನು ಜಗತ್ತಿಗೆ …
Read More »ಚುನಾವಣೆ ದಿನಾಂಕ ನಿಗದಿಗೆ ದಿನಗಣನೆ: ರಾಜ್ಯಕ್ಕೆ ರಾಷ್ಟ್ರ ನಾಯಕರ ದಾಂಗುಡಿ
ರಾಜ್ಯ ವಿಧಾನಸಭೆಗೆ ಚುನಾವಣೆಗೆ ದಿನಾಂಕ ನಿಗದಿಗೆ ದಿನಗಣನೆ ಆರಂಭವಾಗಿರುವಂತೆಯೇ ವಿವಿಧ ರಾಜಕೀಯ ಪಕ್ಷಗಳ ರಾಷ್ಟ್ರೀಯ ನಾಯಕರು ರಾಜ್ಯದತ್ತ ದಾಂಗುಡಿ ಇಡಲಾರಂಭಿಸಿದ್ದಾರೆ. ಮಹಾ ಸಂಗಮಕ್ಕೆ 10 ಲಕ್ಷ ಮಂದಿ ಬೆಂಗಳೂರು: ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ ಮಾ. 25ರಂದು ದಾವಣಗೆರೆಯಲ್ಲಿ ಸಮಾಪನಗೊಳ್ಳಲಿದ್ದು, ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿರುವ ಈ “ಮಹಾ ಸಂಗಮ’ದಲ್ಲಿ 10 ಲಕ್ಷ ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ಈ ಮೂಲಕ ಈ ಹಿಂದೆ ದಾವಣಗೆರೆಯಲ್ಲಿ ನಡೆದ “ಸಿದ್ದರಾಮೋತ್ಸವ’ಕ್ಕೆ ಪ್ರತ್ತಸ್ತ್ರ ಪ್ರಯೋಗಿಸಲು ಬಿಜೆಪಿ …
Read More »ಕೌಜಲಗಿ| ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಬಿಜೆಪಿ ಪಣ: ಶಿವರಾಜ ಸಿಂಗ್ ಚವ್ಹಾಣ್
ಕೌಜಲಗಿ: ‘ದೇಶದ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಪ್ರಧಾನಿ ನರೇಂದ್ರ ಮೋದಿ ಸಂಕಲ್ಪ ಮಾಡಿದ್ದಾರೆ. ಹಿಂದುಳಿದ ವರ್ಗಗಳ ಆಯೋಗಕ್ಕೆ ಹೆಚ್ಚಿನ ಶಕ್ತಿ ನೀಡಿದ್ದಾರೆ’ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ ಸಿಂಗ್ ಚವ್ಹಾಣ ಹೇಳಿದರು. ಪಟ್ಟಣದಲ್ಲಿ ಗುರುವಾರ ಜರುಗಿದ ಬಿಜೆಪಿಯ ಬೆಳಗಾವಿ ಲೋಕಸಭಾ ಕ್ಷೇತ್ರದ ಹಿಂದುಳಿದ ವರ್ಗಗಳ ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಹಿಂದುಳಿದ ವರ್ಗಗಳ ಅಭಿವೃದ್ಧಿ ಕೇವಲ ಬಿಜೆಪಿಯಿಂದ ಸಾಧ್ಯ’ ಎಂದರು. ‘ದೇವರು ಮೋದಿ ಅವರ ರೂಪದಲ್ಲಿ ಈ …
Read More »‘ಯುವ ಕ್ರಾಂತಿ’ ರ್‍ಯಾಲಿಗೆ 5 ಲಕ್ಷ ಜನ: ಸಿದ್ದರಾಮಯ್ಯ
ಬೆಳಗಾವಿ: ‘ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಸಿ.ಪಿ.ಇಡಿ ಮೈದಾನದಲ್ಲಿ ಮಾರ್ಚ್ 20ರಂದು ‘ಯುವ ಕ್ರಾಂತಿ ರ್‍ಯಾಲಿ’ ನಡೆಸಲಿದ್ದಾರೆ. ಇದರಲ್ಲಿ 5 ಲಕ್ಷಕ್ಕೂ ಹೆಚ್ಚು ಯುವಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ’ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದರು. ನಗರದಲ್ಲಿ ಗುರುವಾರ ಮಾಧ್ಯಮದವರಿಗೆ ಮಾಹಿತಿ ನೀಡಿದ ಅವರು, ‘ಅಂದು ಬೆಳಿಗ್ಗೆ 11ಕ್ಕೆ ಯುವ ಸಮುದಾಯವನ್ನು ಉದ್ದೇಶಿಸಿ ರಾಹುಲ್ ಅವರು ಭಾಷಣ ಮಾಡುತ್ತಾರೆ. ಯಾವ ಕಾರಣಕ್ಕೆ ಭಾರತ್ ಜೋಡೋ ಯಾತ್ರೆ …
Read More »ಬೇಲೂರು: ಗ್ರಾಮೀಣರ ಸಬಲೀಕರಣಕ್ಕೆ ಪುಷ್ಪಗಿರಿ ಶ್ರೀಗಳ ಮುನ್ನುಡಿ
ಬೇಲೂರು: ಕೃಷಿಯಿಂದ ರೈತರೇ ದೂರ ಸರಿಯುತ್ತಿರುವ ಈ ಸಂದರ್ಭದಲ್ಲಿ ಇಲ್ಲಿನ ಸ್ವಾಮೀಜಿಗಳ ಕೃಷಿ ಪ್ರೀತಿ ಕಂಡರೆ ನಿಜಕ್ಕೂ ಅಚ್ಚರಿಯೊಂದಿಗೆ ಸಂತಸವೂ ಆಗುತ್ತದೆ. ಮಠದ ಧಾರ್ಮಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಕೆಲಸದ ನಡುವೆ ತಾವೇ ಜಮೀನಿಗೆ ಇಳಿದು ಕೃಷಿ ಕಾಯಕದಲ್ಲಿ ಸಂಪೂರ್ಣ ತೊಡಗಿಕೊಳ್ಳುತ್ತಿರುವ ಶ್ರೀಗಳ ಸಾಹಸಗಾಥೆ ಇಂದಿನ ಯುವ ಸಮುದಾಯಕ್ಕೆ ಮಾದರಿಯಾಗಿದೆ. ಹೌದು! ಕಾಯಕದಿಂದ ಬಂದಿದ್ದು ಕಾರೇ ಸೊಪ್ಪಾದರೂ ಲಿಂಗಕ್ಕೆ ಅರ್ಪಿತ ಎಂಬ ವಚನದಂತೆ ಕಾಯಕ-ದಾಸೋಹದ ಬಗ್ಗೆ ಅಗಮ್ಯ ನಂಬಿಕೆ ಹೊಂದಿದ …
Read More »ನಿಪ್ಪಾಣಿ-ಕಾಕಾಸಾಹೇಬ್ ಪಾಟೀಲ್, ಹುಕ್ಕೇರಿ-ಎ.ಬಿ.ಪಾಟೀಲ್ ಅಭ್ಯರ್ಥಿಗಳ ಪಟ್ಟಿ ನಾಳೆಯೇಬಿಡುಗಡೆ
ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಫೈನಲ್ ಆಗಿದ್ದು, ನಾಳೆಯೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. 224 ವಿಧಾನಸಭಾ ಕ್ಷೇತ್ರಗಳ ಪೈಕಿ 155 ಕ್ಷೇತ್ರಗಳ ಅಭ್ಯರ್ಥಿಗಳ ಲಿಸ್ಟ್ ಫೈನಲ್ ಆಗಿದ್ದು, 66 ಕ್ಷೇತ್ರಗಳಿಗೆ ಒಬ್ಬೊಬ್ಬ ಅಭ್ಯರ್ಥಿಗಳ ಹೆಸರು ಅಂತಿಮವಾಗಿದ್ದು, 89 ಕ್ಷೇತ್ರಗಳಿಗೆ ಇಬ್ಬರು ಅಭ್ಯರ್ಥಿಗಳ ಹೆಸರನ್ನು ಸ್ಕ್ರೀನಿಂಗ್ ಕಮಿಟಿ ಸಭೆ ಸೂಚಿಸಿದೆ. ಇಬ್ಬರಲ್ಲಿ ಒಬ್ಬರ ಹೆಸರನ್ನು ಹೈಕಮಾಂಡ್ ಅಂತಿಮಗೊಳಿಸಬೇಕಿದೆ. ಸ್ಕ್ರೀನಿಂಗ್ ಕಮಿಟಿ ಹೈಕಮಾಂಡ್ …
Read More »
Laxmi News 24×7