ಮುಂಡರಗಿ: ನಾಡಿನ ತುಂಬೆಲ್ಲಾ ಬಣ್ಣದ ಹೋಳಿ ಆಚರಣೆ ಮಾಡುತ್ತಾರೆ. ಆದರೆ, ಪಟ್ಟಣದ ಪಶ್ಚಿಮ ದಿಕ್ಕಿನ ಗುಡ್ಡದ ಮೇಲಿರುವ ಶ್ರೀ ಲಕ್ಷ್ಮೀ ಕನಕ ನರಸಿಂಹಸ್ವಾಮಿ ದೇವಸ್ಥಾನ ಇರುವ ಕಾರಣದ ಬಣ್ಣದ ಹಬ್ಬ ಓಕಳಿಯ ರಂಗಿನಾಟವನ್ನು ಜನರು ಆಡುವುದಿಲ್ಲ. ಜೊತೆಗೆ ರತಿ-ಮನ್ಮಥರನ್ನು ಕೂಡಾ ಕೂರಿಸುವುದಿಲ್ಲ. ಕಾಮ ದಹನ ಮಾಡುವುದಿಲ್ಲ. ಹೋಳಿ ಹುಣ್ಣಿಮೆ ಹಬ್ಬದ ಸಂಭ್ರಮ ಆಚರಣೆಯಂತೂ ನಡೆಯುವುದೇ ಇಲ್ಲ. ಪಟ್ಟಣದ ಶ್ರೀ ಲಕ್ಷ್ಮೀ ಕನಕನರಸಿಂಹಸ್ವಾಮಿ ಕಣ್ಣಿಗೆ ಕಾಣುವಷ್ಟು ದೂರದವರೆಗೂ ಬಣ್ಣ ಆಡುವುದಿಲ್ಲ ಎನ್ನುವುದು …
Read More »ಈ ರೈತನಿಗೆ ಐವರು ‘ಹೆಣ್ಣು ಮಕ್ಕಳು’, ಎಲ್ರೂ ‘IAS’ ಅಧಿಕಾರಿಗಳು, WOMENS DAY SPECIAL STORY
ಈ ರೈತನಿಗೆ ಐವರು ‘ಹೆಣ್ಣು ಮಕ್ಕಳು’, ಎಲ್ರೂ ‘IAS’ ಅಧಿಕಾರಿಗಳು, ಈ ಸ್ಟೋರಿ ಓದಿ, ನಿಮ್ಗೂ ‘ಸ್ಫೂರ್ತಿ’ ಆಗ್ತಾರೆ ಮನುಷ್ಯ ಆಕಾಶವನ್ನ ಮುಟ್ಟುತ್ತಿದ್ರೂ, ಸಾಗರದ ಆಳವನ್ನ ಅಳೆಯುತ್ತಿದ್ರೂ, ಅಸಾಧ್ಯವಾದ್ದನ್ನ ಸಾಧ್ಯ ಮಾಡುವತ್ತ ಹೆಜ್ಜೆ ಹಾಕುತ್ತಿದ್ರೂ, ಇಂದಿಗೂ ಹಲವಾರು ಮೂಢ ನಂಬಿಕೆಗಳನ್ನ ನಂಬುತ್ತಾರೆ. ಅದರಲ್ಲೂ ನಮ್ಮ ದೇಶದಲ್ಲಿ ಹುಡುಗಿ ಅಂದ್ರೆ ಮೈನಸ್, ಹುಡುಗ ಪ್ಲೆಸ್ ಎಂಬ ಕಲ್ಪನೆ ಚಾಲ್ತಿಯಲ್ಲಿದೆ. ಗಂಡು-ಹೆಣ್ಣು ಎಂಬ ಭೇದವಿಲ್ಲ ತಡೆಯಲು ಸರಕಾರ ಎಷ್ಟೇ ಕ್ರಮ ಕೈಗೊಂಡರೂ ಹೆಣ್ಣು …
Read More »ಆರೋಗ್ಯ ಇಲಾಖೆ’ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಗುಡ್ ನ್ಯೂಸ್ : ವೇತನ ಹೆಚ್ಚಳ, ಸೇವಾ ಭದ್ರತೆ ಕಡತ ಮಂಡಿಸಿ ಸಿಎಂ ಆದೇಶ
ಬೆಂಗಳೂರು: ರಾಜ್ಯದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಗುತ್ತಿಗೆ ಮತ್ತು ಹೊರಗುತ್ತಿಗೆ ಆಧಾರದ ನೌಕರರು ವಿವಿಧ ಬೇಡಿಕೆ ಈಡೇರಿಸುವಂತೆ ಮುಷ್ಕರ ನಡೆಸಿ ಒತ್ತಾಯಿಸಿದ್ದರು. ಇಂತಹ ನೌಕರರ ವೇತನ ಹೆಚ್ಚಳ ( Salary Hike ), ಸೇವಾ ಭದ್ರತೆ ಸೇರಿದಂತೆ ವಿವಿಧ ಡಿಕೆ ಈಡೇರಿಕೆಯ ಕಡತವನ್ನು ಮಂಡಿಸುವಂತೆ ಸಿಎಂ ಬಸವರಾಜ ಬೊಮ್ಮಾಯಿ ( CM Basavaraj Bommai ) ಆದೇಶಿಸಿದ್ದಾರೆ. ಈ ಕುರಿತಂತೆ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್ …
Read More »ಬಡ ಜನರ ಕಲ್ಯಾಣವೇ ರಾಜ್ಯ ಬಿಜೆಪಿ ಸರ್ಕಾರದ ಗುರಿ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಬಳ್ಳಾರಿ : ಬಡ ಜನರ ಕಲ್ಯಾಣವೇ ಸರ್ಕಾರದ ಗುರಿಯಾಗಿದ್ದು, ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸರ್ಕಾರದ ಯೋಜನೆಗಳು ನೇರವಾಗಿ ತಲುಪುವಂತೆ ಮಾಡಲಾಗಿದೆ. ಇದು ಬಡಸಮರ್ಪಿತ ಸರ್ಕಾರವಾಗಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್ ಜೋಶಿ ಅವರು ತಿಳಿಸಿದರು. ನಗರದ ಡಾ.ರಾಜ್‍ಕುಮಾರ್ ರಸ್ತೆಯ ಮುನಿಸಿಪಲ್ ಕಾಲೇಜು ಮೈದಾನದಲ್ಲಿ ಮಂಗಳವಾರ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. …
Read More »ಬೆಳಗಾವಿ: ‘ಜನಪದರು ವಿದ್ವಾಂಸರಿಗಿಂತ ಜ್ಞಾನಿಗಳು
ಬೆಳಗಾವಿ: ‘ಜನಪದರು ವಿದ್ವಾಂಸರಿಗಿಂತ ಜ್ಞಾನವಂತರು. ಅವರು ರೂಪಕ, ಪ್ರತಿಮೆಗಳನ್ನು ಬಹು ಸೊಗಸಾಗಿ ದೈನಂದಿನ ಬದುಕಿನಲ್ಲಿ ಬಳಸುತ್ತಲೇ ಬಂದಿರುವರು. ಅವುಗಳನ್ನೇ ನಾವು ನಾಟಕ, ಸಾಹಿತ್ಯ, ಕಲೆಗಳಲ್ಲಿ ಪುನಃ ರಚಿಸಿ ಹಣ, ಪ್ರಶಸ್ತಿಗಳನ್ನು ಪಡೆಯುತ್ತೇವೆ. ಆದರೆ ನಿಜವಾದ ಕಲಾವಿದರಾದ ಅವರು ಮಾತ್ರ ಸರ್ಕಾರದ ಸಹಾಯ ಧನಕ್ಕೆ ಕೈಚಾಚಿ ನಿಲ್ಲುವಂಥ ಪರಿಸ್ಥಿತಿ ಇರುವುದು ದುರಂತ’ ಎಂದು ನಾಟಕಕಾರ ಡಿ.ಎಸ್.ಚೌಗಲೆ ಬೇಸರ ವ್ಯಕ್ತಪಡಿಸಿದರು. ಇಲ್ಲಿಯ ಮಹಿಳಾ ಅಭಿವೃದ್ಧಿ ಮತ್ತು ಸೇವಾ ಸಂಸ್ಥೆ, ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ …
Read More »ಐಗಳಿ: ಗಮನ ಸೆಳೆದ ಜಾನುವಾರ ಜಾತ್ರೆ
ಐಗಳಿ: ಐಗಳಿ ಕ್ರಾಸ್‌ನ ಮಣಿಕಪ್ರಭು ದೇವರ ಜಾತ್ರೆಯ ಪೂರ್ವದಲ್ಲಿ ಬೃಹತ್ ಪ್ರಮಾಣದ ಜಾನುವಾರ ಜಾತ್ರೆ ಸೋಮವಾರ ಆರಂಭವಾಯಿತು. ರಾಜ್ಯವೂ ಸೇರಿದಂತೆ ಮಹಾರಾಷ್ಟ್ರದ ಕೊಲ್ಹಾಪುರ, ಸೊಲ್ಲಾಪುರ, ಪಂಡರಪುರ, ಆಂಧ್ರ ಪ್ರದೇಶದಿಂದಲೂ ವ್ಯಾಪಾರಿಗಳು ಬಂದಿದ್ದಾರೆ. ಜಾತ್ರಾ ಕಮಿಟಿಯವರು ನೀರಿನ ಹಾಗೂ ಬೆಳಕಿನ ವ್ಯವಸ್ಥೆ ಮತ್ತು ಸ್ವಚ್ಛತೆಗೆ ಆದ್ಯತೆ ನೀಡಿದ್ದಾರೆ. ರಾಚೋಟೇಶ್ವರ ಶಿವಯೋಗಿಗಳು ಕಂಡ ಕನಸು ನನಸಾಗಲೂ ಸಮೀಪಕ್ಕೆ ಬಂದಿದೆ ಎಂದು ಹಿರಿಯ ವ್ಯವಸ್ಥಾಪಕ ಶಿದರಾಯ ಬಿರಾದಾರ ಹೇಳಿದರು. ಟ್ರಸ್ಟ್ ಅಧ್ಯಕ್ಷ ಪ್ರಲ್ಹಾದ್ …
Read More »ಮದುವೆಯಾಗಿ ಮಕ್ಕಳನ್ನು ಪಡೆಯಲೇಬೇಕೇ? ಕಟೀಲ್‌ಗೆ ನಟ ಚೇತನ್ ಪ್ರಶ್ನೆ
ಬೆಂಗಳೂರು: ಲಸಿಕೆ ಪಡೆದರೆ ಮಕ್ಕಳಾಗದೆಂಬ ಸಿದ್ದರಾಮಯ್ಯ ಅವರ ಮಾತು ಕೇಳಿ ರಾಹುಲ್ ಗಾಂಧಿ ಮದುವೆ ಆಗುತ್ತಿಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆಗೆ ನಟ ಚೇತನ್ ಅಹಿಂಸಾ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕಟೀಲ್ ಹೇಳಿಕೆಯು ಕೀಳು ಮಟ್ಟದ್ದು ಮತ್ತು ತರ್ಕವಿಲ್ಲದ್ದು ಎಂದು ಚೇತನ್ ಅವರು ಅಭಿಪ್ರಾಯಪಟ್ಟಿದ್ದಾರೆ. ಸಾಗರದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ತಾಲ್ಲೂಕು ಬಿಜೆಪಿ ಪೇಜ್ ಪ್ರಮುಖರ ಸಭೆಯಲ್ಲಿ ಮಾತನಾಡಿದ್ದ ಕಟೀಲ್, ‘ಕೊರೊನಾ ಲಸಿಕೆ ಹಾಕಿಸಿಕೊಂಡರೆ …
Read More »ಹಬ್ಬಕ್ಕೆಂದು ಅಕ್ಕನ ಮನೆಗೆ ಬಂದಿದ್ದ ಗೃಹಿಣಿ ದುರಂತ ಅಂತ್ಯ: ಭಗ್ನ ಪ್ರೇಮಿಯಿಂದಲೇ ಘೋರ ಕೃತ್ಯ
ವಿಜಯನಗರ: ಹಬ್ಬಕ್ಕೆಂದು ಸಂಬಂಧಿಕರ ಮನೆಗೆ ಬಂದಿದ್ದ ಗೃಹಿಣಿಯನ್ನು ಮಾಜಿ ಪ್ರಿಯಕರನೊಬ್ಬ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹರಪನಹಳ್ಳಿ ತಾಲೂಕಿನ ದುಗ್ಗಾವತಿ ಗ್ರಾಮದಲ್ಲಿ ನಡೆದಿದೆ. ಪ್ರತಿಭಾ (27) ಕೊಲೆಯಾದ ಮೃತ ದುರ್ದೈವಿ. ಚಿರಸ್ತಹಳ್ಳಿ ಮೂಕಪ್ಪನವರ ಹನುಮಂತಪ್ಪ ಕೊಲೆ ಆರೋಪಿ. ರಾಣೆಬೆನ್ನೂರಿನ ಪ್ರತಿಭಾ ತನ್ನ ಪುತ್ರನೊಂದಿಗೆ ದುಗ್ಗಾವತಿ ಗ್ರಾಮದ ಸಂಬಂಧಿಕರ ಮನೆಗೆ ಬಂದಿದ್ದಳು. ಈ ವೇಳೆ ಪ್ರತಿಭಾ ಮೇಲೆ ಹನುಮಂತ ಏಕಾಏಕಿ ದಾಳಿ ಮಾಡಿ ಕೊಲೆ ಮಾಡಿದ್ದಾನೆ. ಹತ್ಯೆಯ ಬಳಿಕ …
Read More »ಮಹಿಳಾ ದಿನಾಚರಣೆ; ನಾಳೆ BMTCಯಲ್ಲಿ ಉಚಿತ ಪ್ರಯಾಣ
ಬೆಂಗಳೂರು: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಬಿಎಂಟಿಸಿ ಬಸ್ಗಳಲ್ಲಿ ನಾಳೆ (ಮಾ.8)ರಂದು ಒಂದು ದಿನ ಮಹಿಳೆಯರು ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಮಹಿಳಾ ದಿನಾಚರಣೆ ಅಂಗವಾಗಿ ಒಂದು ದಿನ ಮಹಿಳೆಯರಿಗೆ ಉಚಿತ ಸಂಚಾರಕ್ಕೆ ಅನುಮತಿ ನೀಡಿ ಎಂದು ಸರ್ಕಾರಕ್ಕೆ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ (ಎಂ.ಡಿ) ಸತ್ಯವತಿ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆಯ ಸೆಕ್ರೆಟರಿ ಎನ್. ವಿ ಪ್ರಸಾದ್ ಇಂದು ಅಧಿಕೃತ ಆದೇಶ ಹೊರಡಿಸಿದ್ದಾರೆ. ಅಂತಾರಾಷ್ಟ್ರೀಯ ಮಹಿಳಾ ದಿನಾಚಣೆಯ ಅಂಗವಾಗಿ …
Read More »ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಹೈಕೋರ್ಟ್‌ನಿಂದ ನಿರೀಕ್ಷಣಾ ಜಾಮೀನು
ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್‌ಡಿಎಲ್) ನಿಯಮಿತದ ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಪಡೆದ ಆರೋಪಕ್ಕೆ ಗುರಿಯಾಗಿ ಬಂಧನದ ಭೀತಿ ಎದುರಿಸುತ್ತಿದ್ದ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಕೆ.ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಈ ಸಂಬಂಧ ವಿರೂಪಾಕ್ಷಪ್ಪ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು, ‘ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ಮೇಲ್ಮನವಿಯ ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಕೆ.ನಟರಾಜನ್ ಅವರು ಮಂಗಳವಾರ ವಿಚಾರಣೆ ನಡೆಸಿದರು. ವಿಚಾರಣೆ …
Read More »
Laxmi News 24×7