ಹಾವೇರಿ: ಕಳೆದ ಬಾರಿಯ ರಾಜ್ಯ ಬಜೆಟ್‌ನಲ್ಲಿ ಕೊಟ್ಟಂತೆಯೇ, ಈ ಬಾರಿಯ ಬಜೆಟ್‌ನಲ್ಲೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ತವರು ಜಿಲ್ಲೆ ಹಾವೇರಿಗೆ ಭರಪೂರ ಕೊಡುಗೆಗಳನ್ನು ನೀಡಿದ್ದಾರೆ. ಹಾವೇರಿ ಜಿಲ್ಲೆಯಲ್ಲಿ ಹೊಸದಾಗಿ ಮೀನುಮರಿ ಉತ್ಪಾದನಾ ಮತ್ತು ಪಾಲನಾ ಕೇಂದ್ರ ಸ್ಥಾಪನೆ, ಸವಣೂರಿನಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಸ್ಥಾಪನೆ, ಹಾವೇರಿಯಲ್ಲಿ ಆಧುನಿಕ ತಂತ್ರಜ್ಞಾನ ಆಧರಿತ ಹೂವಿನ ಚಿಲ್ಲರೆ ಮಾರುಕಟ್ಟೆ ನಿರ್ಮಾಣ, ಬಂಕಾಪುರದ ನಗರೇಶ್ವರ ದೇವಸ್ಥಾನವನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸುವುದಾಗಿ ಘೋಷಿಸಲಾಗಿದೆ. …
Read More »ಬೆಳಗಾವಿ: ಅತ್ಯಾಚಾರವೆಸಗಿದ ಪಿಎಸ್‌ಐ- ವಿದ್ಯಾರ್ಥಿನಿಯಿಂದ ದೂರು ದಾಖಲು
ಬೆಳಗಾವಿ: ನಗರ ಪೊಲೀಸ್ ಆಯುಕ್ತಾಲಯದ ವ್ಯಾಪ್ತಿಗೆ ಬರುವ ವೈರ್‌ಲೆಸ್ ಠಾಣೆಯ ಪಿಎಸ್‌ಐ ಲಾಲ್‌ಸಾಬ್ ಅಲ್ಲಿಸಾಬ್ ನದಾಫ (28) ಅವರು ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ, ಕಾಲೇಜು ವಿದ್ಯಾರ್ಥಿನಿಯೊಬ್ಬರು ಗುರುವಾರ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಲಾಲ್‌ಸಾಬ್ ಅವರಿಗೆ ಫೆ. 10ರಂದು ಬೇರೊಬ್ಬ ಯುವತಿ ಜತೆಗೆ ಮದುವೆಯಾಗಿದೆ. ವಿಷಯ ಗೊತ್ತಾದ ಬಳಿಕ ವಿದ್ಯಾರ್ಥಿನಿ ದೂರು ದಾಖಲಿಸಿದ್ದಾರೆ. ‘2020ರ ಜೂನ್ 16ರಂದು ಪಿಎಸ್‌ಐ ಲಾಲ್‌ಸಾಬ್ ಫೇಸ್‌ಬುಕ್ ಮೆಸೆಂಜರ್ ಮೂಲಕ ಪರಿಚಯವಾಗಿದ್ದರು. …
Read More »ಬಜೆಟ್ ಗದಗ ಜಿಲ್ಲೆ ‘ಶೂನ್ಯ ಸಂಪಾದನೆ’: ಜನತೆ ಆಕ್ರೋಶ
ಗದಗ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಮಂಡಿಸಿದ ರಾಜ್ಯ ಬಜೆಟ್ ಜಿಲ್ಲೆಯ ಜನತೆಗೆ ನಿರಾಸೆ ಮೂಡಿಸಿದೆ. ತವರು ಜಿಲ್ಲೆ ಹಾವೇರಿಗೆ ಭರಪೂರ ಯೋಜನೆಗಳನ್ನು ಪ್ರಕಟಿಸಿರುವ ಅವರು ಪಕ್ಕದ ಗದಗ ಜಿಲ್ಲೆಯ ಬಗ್ಗೆ ಮಲತಾಯಿ ಧೋರಣೆ ತೋರಿದ್ದಾರೆ. ಕೈಗಾರಿಕೆ, ಕೃಷಿ, ನೀರಾವರಿ, ಪ್ರವಾಸೋದ್ಯಮ ಸೇರಿದಂತೆ ಜಿಲ್ಲೆಯ ವಿವಿಧ ಕ್ಷೇತ್ರಗಳ ಅಭಿವೃದ್ಧಿ ಸಾಕಷ್ಟು ಅನುದಾನ ಮತ್ತು ಹೊಸ ಯೋಜನೆಗಳು ಘೋಷಣೆ ಆಗಬಹುದು ಎಂಬ ಜಿಲ್ಲೆಯ ಜನರ ನಿರೀಕ್ಷೆಗಳು ಹುಸಿಯಾಗಿವೆ. ಕಳಸಾ ಮತ್ತು …
Read More »ಭದ್ರಾವತಿ: ವಿಐಎಸ್‌ಎಲ್ ಕಾರ್ಖಾನೆಗೆ ಕೊನೆ ಮೊಳೆ
ಶಿವಮೊಗ್ಗ: ವಿಐಎಸ್‌ಎಲ್ ಮುಚ್ಚುವುದಿಲ್ಲ, ಉಳಿಸಿಕೊಳ್ಳುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಇತ್ತ ಭರವಸೆ ನೀಡುತ್ತಿದ್ದರೆ; ಅತ್ತ ಕೇಂದ್ರ ಸರಕಾರ ಕಾರ್ಖಾನೆ ಮುಚ್ಚುವುದು ಶತಸ್ಸಿದ್ಧ ಎಂದು ರಾಜ್ಯಸಭೆಯಲ್ಲೇ ಸ್ಪಷ್ಟ ಪಡಿಸುವ ಮೂಲಕ ಶತ ಮಾ ನಕ್ಕೂ ಹೆಚ್ಚು ವರ್ಷಗಳ ಇತಿಹಾಸ ಹೊಂದಿರುವ ರಾಜ್ಯದ ಏಕೈಕ ಸಾರ್ವಜನಿಕ ಉಕ್ಕಿನ ಕಾರ್ಖಾನೆ ವಿಐಎಸ್‌ಎಲ್‌ಗೆ ಚರಮ ಗೀತೆ ಬರೆದಿದೆ. ಇಲ್ಲಿಗೆ ಕೈಗಾರಿಕಾ ನಗರದ ಇತಿಹಾಸವೂ ಕೊನೆಯಾಗಲಿದೆ. ಮೈಸೂರು ಸಂಸ್ಥಾನದ ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ಸರ್ ಎಂ. ವಿಶ್ವೇಶ್ವರಯ್ಯ ದೂರದೃಷ್ಟಿ ಫಲವಾಗಿ …
Read More »ಇಂದು ವಿಠಲಾಪೂರದಲ್ಲಿ ರಸಲಿಂಗಕ್ಕೆ ವಿಶೇಷ ಪೂಜೆ
ಮುಂಡರಗಿ: ತಾಲೂಕಿನ ವಿಠಲಾಪೂರ ಗ್ರಾಮದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಪರೂಪದ ಪಂಚಲೋಹದ ರಸಲಿಂಗ(ಶಿವಲಿಂಗ)ಇದ್ದು, ಮಹಾಶಿವರಾತ್ರಿಯಂದು ವಿಶೇಷವಾಗಿ ರಸಲಿಂಗ ಪೂಜೆ ನಡೆಯುತ್ತದೆ. ಶಿವರಾತ್ರಿ ದಿನ ರಸಲಿಂಗವನ್ನು ತೊಳೆದು ಸಕಲ ಹೂಗಳು, ಬಿಲ್ವಪತ್ರಿಗಳಿಂದ ಮಹಾಪುರುಷರ ಕುಟುಂಬದವರು ಪೂಜೆ ನೆರವೇರಿಸುತ್ತಾರೆ. ದಕ್ಷಿಣ ಭಾರತದಲ್ಲಿಯೇ ವಿಶೇಷವಾಗಿರುವ ರಸಲಿಂಗ ಹಲವು ಕುತೂಹಲಕರ ಸಂಗತಿಗಳಿಂದ ಒಡಗೂಡಿದೆ. ರಸಶಾಸ್ತ್ರ ಅಧ್ಯಯನ ಮಾಡಿದ್ದ ಯೋಗಗುರುಗಳು ರಸಲಿಂಗವನ್ನು ರಚನೆ ಮಾಡಿದ್ದರು ಎನ್ನುವ ಮಾತು ಜನಜನಿತವಾಗಿದೆ. ವಿಠಲಾಪೂರದ ಮಹಾಪುರುಷರ ಕುಟುಂಬದ ಮೂಲ ಪುರುಷರಾದ ಬಿಷ್ಟಪ್ಪಯ್ಯ …
Read More »ಮಹಾಶಿವರಾತ್ರಿಗೆ ಕೋಟಿಲಿಂಗೇಶ್ವರ ದೇಗುಲ ಸಜ್ಜು
ಕೆಜಿಎಫ್: ಮಹಾಶಿವರಾತ್ರಿ ಪ್ರಯುಕ್ತ ತಾಲೂಕಿನ ಪ್ರಸಿದ್ಧ ಕಮ್ಮಸಂದ್ರದ ಕೋಟಿಲಿಂಗೇಶ್ವರ ದೇವಾಲಯ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ. ಭಕ್ತರನ್ನು ತನ್ನತ್ತ ಕೈಬೀಸಿ ಕರೆಯುತ್ತಿದ್ದು, ಹಬ್ಬದ ದಿನ ಮತ್ತು ಮಾರನೆ ದಿನ ಸಹಸ್ರಾರು ಭಕ್ತರು ಆಗಮಿಸುವ ನಿರೀಕ್ಷೆಯಿದೆ. ಪ್ರತಿ ವರ್ಷದ ಜನವರಿ ಒಂದನೇ ತಾರೀಖೀ ನಂದು ದೇವಾಲಯದಲ್ಲಿ ವಿಶೇಷ ಪೂಜೆಗಳು ನಡೆಯುತ್ತವೆ. ಮಹಾಶಿವರಾತ್ರಿ ಹಬ್ಬದಂದು ಆರು ದಿನ ಜಾತ್ರೆ ವೈಭವದಿಂದ ನಡೆಯಲಿದೆ. ಎರಡು ಮೂರು ತಿಂಗಳಿನಿಂದ ದೇವಾಲಯದ ಒಳ, ಹೊರಭಾಗದಲ್ಲಿರುವ ಶಿವಲಿಂಗಗಳಿಗೆ ಸುಣ್ಣಬಣ್ಣ ಬಳಿಯುವ ಕಾರ್ಯ …
Read More »ಜಲ ಜೀವನ ಮಿಷನ್ ಕಾಮಗಾರಿಗೆ ₹88.05 ಕೋಟಿ ಬಿಡುಗಡೆ: ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ‘ಆರ್‌ಡಿಪಿಆರ್ ಇಲಾಖೆಯಿಂದ ಅರಭಾವಿ ಮತಕ್ಷೇತ್ರದ ಜಲ ಜೀವನ್ ಮಿಷನ್ (ಜೆಜೆಎಂ) ಕಾಮಗಾರಿಗೆ ₹88.05 ಕೋಟಿ ಅನುದಾನ ಬಿಡುಗಡೆಯಾಗಿದೆ’ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ತಾಲ್ಲೂಕಿನ ಮುನ್ಯಾಳ ತೋಟದಲ್ಲಿ ಜಲ ಜೀವನ ಮಿಷನ್ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಮದಲಮಟ್ಟಿ, ಶಿವಾಪೂರ, ರಂಗಾಪೂರ, ಖಾನಟ್ಟಿ, ಮುನ್ಯಾಳ, ಕಮಲದಿನ್ನಿ ತೋಟ, ಶಿವಾಪೂರ ತೋಟ, ಡೋಣಿ ತೋಟ, ಸ್ವಾಮಿ ತೋಟ ಮುನ್ಯಾಳ ಗ್ರಾಮದ ಸಾರ್ವಜನಿಕರಿಗೆ ಜೆಜೆಎಂ ಅಡಿಯಲ್ಲಿ …
Read More »ಬಜೆಟ್ ನಲ್ಲಿ ಬೆಳಗಾವಿಗೆ ಹೇಳಿಕೊಳ್ಳುವ ಕೊಡುಗೆ ಯಾವವು ಇಲ್ಲ, ಹಳೆ ಯೋಜನೆಗಳನ್ನು ಮತ್ತೆ ಹೇಳಿದ ಸಿ ಎಂ..
ಬೆಳಗಾವಿ: ‘ಪ್ರಸಕ್ತ ಬಜೆಟ್‌ನಲ್ಲಿ ಕೂಡ ಬೆಳಗಾವಿ ಜಿಲ್ಲೆಗೆ ಹೇಳಿಕೊಳ್ಳುವಂಥ ಯಾವುದೇ ಕೊಡುಗೆ ನೀಡಿಲ್ಲ. ಹಳೆ ಪ್ರಸ್ತಾವಗಳನ್ನೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತೆ ಬಡಬಡಿಸಿದ್ದಾರೆ’ ಎಂದು ಜಿಲ್ಲೆಯ ಮುಖಂಡರು ವಿಶ್ಲೇಷಿಸಿದ್ದಾರೆ. ಶಾಸಕರಾದ ಲಕ್ಷ್ಮೀ ಹೆಬ್ಬಾಳಕರ, ಸತೀಶ ಜಾರಕಿಹೊಳಿ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಬಜೆಟ್ ನಿರಾಶಾದಾಯಕ ಎಂದು ಟೀಕಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ ಹಾಗೂ ವಾಣಿಜ್ಯ ಸಂಘಟನೆಗಳ ಕೆಲ …
Read More »ಸಂಕೇಶ್ವರ: ಶಿವಾಜಿ ಪ್ರತಿಮೆ ಬೃಹತ್ ಮೆರವಣಿಗೆ
ಸಂಕೇಶ್ವರ: ಪಟ್ಟಣದಲ್ಲಿ ಫೆ.19ರಂದು ಅನಾವರಣಗೊಳ್ಳಲಿರುವ ಅಶ್ವಾರೂಢ ಶಿವಾಜಿ ಮಹಾರಾಜರ ಪ್ರತಿಮೆಯ ಬೃಹತ್ ಮೆರವಣಿಗೆ ಹಾಗೂ ಶೋಭಾ ಯಾತ್ರೆಯು ಗುರುವಾರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ವಿಜೃಂಭಣೆಯಿಂದ ಜರುಗಿತು. ಛತ್ರಪತಿ ಶಿವಾಜಿ ಮಹಾರಾಜರ ಅಶ್ವಾರೋಡ ಪ್ರತಿಮೆಗೆ ಪಟ್ಟಣದ ಶಂಕರಾಚಾರ್ಯರ ಸಂಸ್ಥಾನ ಮಠದ ಸಚ್ಚಿದಾನಂದ ಅಭಿನವ ವಿದ್ಯಾನರಸಿಂಹ ಭಾರತಿಯ ಸ್ವಾಮೀಜಿ ಶಿವಾಜಿ ಮಹಾರಾಜರ ಪ್ರತಿಮೆಗೆ ಪೂಜೆ ಸಲ್ಲಿಸಿ ಶೋಭಾಯಾತ್ರೆಗೆ ಚಾಲನೆ ನೀಡಿದರು. ಡೊಳ್ಳು ಕುಣಿತ, ಜಾಂಜ ಪದಕ, ಡೋಲ್ ತಾಶ ಸೇರಿದಂತೆ ಅನೇಕ …
Read More »‘ಮಠ, ಮಂದಿರ ನಿರ್ಮಾಣದಿಂದ ಸಮಾಜದಲ್ಲಿ ಶಾಂತಿ, ನೆಮ್ಮದಿ, ಬೆಳೆಯುತ್ತದೆ’:ಶಿಂದೊಗಿ ಮುಕ್ತಾನಂದ ಸ್ವಾಮೀಜಿ
ಯರಗಟ್ಟಿ: ‘ಮಠ, ಮಂದಿರ ನಿರ್ಮಾಣದಿಂದ ಸಮಾಜದಲ್ಲಿ ಶಾಂತಿ, ನೆಮ್ಮದಿ, ಪೂಜಾ ಭಾವನೆ ಬೆಳೆಯುತ್ತದೆ’ ಎಂದು ಶಿಂದೊಗಿ ಮುಕ್ತಾನಂದ ಸ್ವಾಮೀಜಿ ಹೇಳಿದರು. ಸಮೀಪದ ರೈನಾಪೂರದಲ್ಲಿ ಗುರುವಾರ ದುರ್ಗಾದೇವಿ ದೇವಸ್ಥಾನ ಆವರಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ, ಸಿ, ಟ್ರಸ್ಟ್ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದಿಂದ ಆಯೋಜಿಸಿದ್ದ ಸಾಮೂಹಿ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಿವೃತ್ತ ಬಸವೇಶ್ವರ ಪೌಢ ಶಾಲೆ ಮುಖ್ಯ ಶಿಕ್ಷಕ ರಂಗಪ್ಪ ಜೂಗನವರ …
Read More »
Laxmi News 24×7