ಬೆಂಗಳೂರು: ಈ ಬಾರಿಯ ಏರೋ ಇಂಡಿಯಾ ಜನರಲ್ಲಿ ಭಾರೀ ನಿರೀಕ್ಷೆಗಳನ್ನು ಹುಟ್ಟು ಹಾಕಿದ್ದು ಕುತೂಹಲ ಭರಿತರಾಗಿ ನೋಡುತ್ತಿದ್ದಾರೆ. ಇನ್ನೇನು ಚುನಾವಣೆಯೂ ಹತ್ತಿರದಲ್ಲಿದ್ದು ಪ್ರಧಾನಿ ಮೋದಿ ಎರಡನೇ ಬಾರಿಗೆ ಬಂದಿದ್ದಾರೆ. ಈ ಸಂದರ್ಭದಲ್ಲಿ ಏರೋ ಇಂಡಿಯಾ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದ್ದಾರೆ. ನಿಗದಿಗಿಂತ ಮೊದಲೇ ರಾಜಭವನದಿಂದ ಹೊರಟ ಪ್ರಧಾನಿ ಮೋದಿ (ಬೆಳಗ್ಗೆ 8.35ರ ಹೊತ್ತಿಗೆ) ರಸ್ತೆ ಮಾರ್ಗವಾಗಿ ಮೇಖ್ರೀ ರಸ್ತೆಯಲ್ಲಿರುವ HQTC ಹೆಲಿಪ್ಯಾಡ್ಗೆ ಆಗಮಿಸಿದರು. ಅಲ್ಲಿಂದ ಯಲಹಂಕ ವಾಯುನೆಲೆಗೆ ವಾಯು ಮಾರ್ಗವಾಗಿ Mi17 …
Read More »ಕ್ರೂಜರ್, ದ್ವಿಚಕ್ರ ವಾಹನಗಳ ಮಧ್ಯೆ ಸರಣಿ ಅಪಘಾತ
ರಾಮದುರ್ಗ: ತಾಲೂಕಿನ ಕಡ್ಲಿಕೊಪ್ಪ ಗ್ರಾಮದ ಬಳಿ ಕ್ರೂಜರ್ ಹಾಗೂ ಎರಡು ದ್ವಿಚಕ್ರ ವಾಹನಗಳ ಮಧ್ಯೆ ಸಂಭವಿಸಿದ ಸರಣಿ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು ಇನ್ನಿಬ್ಬರು ಗಂಭೀರ ಗಾಯಗೊಂಡಿದ್ದಾರೆ. ಭಾನುವಾರ ಸಂಜೆ ಈ ಘಟನೆ ನಡೆದಿದ್ದು, ಭಾಗ್ಯ ನಗರದ ಮಾಲಿಂಗ ನಂದಪ್ಪ ಆಚಮಟ್ಟಿ (25) ಹಾಗೂ ಬಸವನ ಬಾಗೇವಾಡಿಯ ರಫಿಕ್ ಚಲವಾದಿ (20) ಮೃತ ಪಟ್ಟವರು. ಗಂಭೀರ ಗಾಯಗೊಂಡಿರುವ ಆಶ್ರಯ ಪ್ಲಾಟ್ ನಿವಾಸಿ ಯುನೂಸ್ ಮಹ್ಮದ್ ಪಟೇಲ್ (25) ಅವರನ್ನು ಬಾಗಲಕೋಟೆ ಆಸ್ಪತ್ರೆಗೆ ಸಾಗಿಸಿದ್ದು, ಭಾಗ್ಯ …
Read More »ಸುನಿಲ್ ಕುಮಾರ್ ವಿರುದ್ಧ ಸ್ಪರ್ಧೆಗೆ ಬಿಜೆಪಿ ಸಚಿವರಿಂದಲೇ ಸಹಕಾರ: ಪ್ರಮೋದ್ ಮುತಾಲಿಕ್
ಮಂಗಳೂರು: ಕಾರ್ಕಳದಲ್ಲಿ ಸ್ಪರ್ಧಿಸಲು ಬಿಜೆಪಿ ಸಚಿವರು, ಶಾಸಕರು ತನುಮನ ಧನದ ಸಹಕಾರ ನೀಡುವ ಭರವಸೆ ನೀಡಿದ್ದಾರೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಸ್ಪೋಟಕ ಹೇಳಿಕೆ ನೀಡಿದ್ದಾರೆ, ಮಂಗಳೂರಿನಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸುನಿಲ್ ಕುಮಾರ್ ಮುಂದಿನ ಮುಖ್ಯಮಂತ್ರಿ ಎಂದು ಬಿಂಬಿಸಲ್ಪಡುತ್ತಿದ್ದು, ಮುಖ್ಯಮಂತ್ರಿ ರೇಸ್ ನಲ್ಲಿರುವ ಇತರ ಕೆಲವು ಬಿಜೆಪಿ ಮುಖಂಡರು ನನಗೆ ಸಹಕಾರದ ಭರವಸೆ ನೀಡಿದ್ದಾರೆ. ಕಾರ್ಕಳದಲ್ಲಿ ನನ್ನ ಗೆಲುವು ಖಚಿತ. ನಕಲಿ ಹಿಂದುತ್ವ ಮತ್ತು …
Read More »ಹಳ್ಳಿಗೂ ಬಂತು ಐಟಿ ಕಂಪನಿ;
ಶಿರಸಿ: ಐಟಿ, ಬಿಟಿ ಎಂದರೆ ಬೃಹತ್ ನಗರಗಳಿಗಷ್ಟೇ ಸೀಮಿತ. ಅದು ಆ ನಗರದ ಹಾಗೂ ಕಂಪನಿಯ ಪ್ರತಿಷ್ಠೆಯ ಪ್ರಶ್ನೆಯೂ ಹೌದು ಎಂಬ ಭಾವನೆ ದೂರಗೊಳಿಸುವ ವಿದ್ಯಮಾನಕ್ಕೆ ಐಟಿ ಕಂಪನಿಯೊಂದು ಶ್ರೀಗಣೇಶ ಹಾಡಿದೆ. ದಟ್ಟಾರಣ್ಯಗಳ ತವರೆಂದೇ ಖ್ಯಾತವಾದ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬೆಂಗಳೆ ಗ್ರಾಮದ ಒಡ್ಡಿನಕೊಪ್ಪದ ಹಸಿರ ಹೊದಿರಿನ ಮಧ್ಯೆ ಆಲ್ಟ್ ಡಿಜಿಟಲ್ ಟೆಕ್ನಾಲಜೀಸ್ ಎಂಬ ಕಂಪನಿ ಪಾದಾರ್ಪಣೆ ಮಾಡುವ ಮೂಲಕ ಹೊಸ ಬೆಳವಣಿಗೆಗೆ ನಾಂದಿ ಹಾಡಿದೆ. ಐಟಿಯಲ್ಲಿ ಸಾಕಷ್ಟು ಹೆಸರುವಾಸಿಯಾಗಿರುವ ಈ …
Read More »ಪತ್ನಿ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದು ಶಂಕಿಸಿ ಮಕ್ಕಳನ್ನೇ ಕೊಂದ ತಂದೆ
ದೇವದುರ್ಗ (ರಾಯಚೂರು ಜಿಲ್ಲೆ): ಪತ್ನಿ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದು ಶಂಕಿಸಿದ ದೇವದುರ್ಗ ತಾಲ್ಲೂಕಿನ ಜಕ್ಲೇರದೊಡ್ಡಿ ಗ್ರಾಮದ ನಿಂಗಪ್ಪ ಎಂಬಾತ ತನ್ನ ಇಬ್ಬರು ಮಕ್ಕಳನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಶನಿವಾರ ಕೃತ್ಯ ನಡೆದಿದ್ದು, ಭಾನುವಾರ ಗೊತ್ತಾಗಿದೆ. ಶಿವರಾಜ ನಿಂಗಪ್ಪ (5), ರಾಘವೇಂದ್ರ ನಿಂಗಪ್ಪ (3) ಕೊಲೆಯಾದ ಮಕ್ಕಳು. ಶನಿವಾರ ಮಧ್ಯರಾತ್ರಿಯೇ ದೇವದುರ್ಗ ಪೊಲೀಸ್ ಠಾಣೆಗೆ ತೆರಳಿ ಪತಿ ನಿಂಗಪ್ಪನ ವಿರುದ್ಧ ಪತ್ನಿ ಪ್ರಭಾವತಿ ದೂರು ಸಲ್ಲಿಸಿದ್ದಾರೆ. ಆರೋಪಿಯನ್ನು ಪೊಲೀಸರು …
Read More »2.60 ಕೋಟಿ ರೂ. ಮೌಲ್ಯದ ವಜ್ರ ವಶಕ್ಕೆ ಪಡೆದ ಅಧಿಕಾರಿಗಳು
ಮಂಗಳೂರು: ಭಾರತ ದಿಂದ ದುಬಾೖಗೆ ಅಕ್ರಮವಾಗಿ ವಿಮಾನದಲ್ಲಿ 2.60 ಕೋಟಿ ರೂ. ಮೌಲ್ಯದ ವಜ್ರ ಸಾಗಿಸುತ್ತಿದ್ದ ಇಬ್ಬರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಭಾರತೀಯ ಕಂದಾಯ ಗುಪ್ತಚರ ನಿರ್ದೇಶನಾಲಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ದುಬಾೖಗೆ ತೆರಳುತ್ತಿದ್ದ ಭಟ್ಕಳದ ಅನಾಸ್ ಮತ್ತು ಅಮ್ಮರ್ ತಮ್ಮ ಶೂ ಮತ್ತು ಬ್ಯಾಗ್ ಅಡಿಯಲ್ಲಿ ಅನುಮಾನ ಬಾರದಂತೆ ವಜ್ರವನ್ನು ಅಡಗಿಸಿಟ್ಟು ಸಾಗಾಟ ಮಾಡುತ್ತಿದ್ದರು. ಮುಂಬಯಿಯಿಂದ ತಂದಿದ್ದರು ಮಂಗಳೂರು ವಿಮಾನ ನಿಲ್ದಾಣದ ಇಮಿಗ್ರೇಶನ್ ವಿಭಾಗದಲ್ಲಿ ತಪಾಸಣೆ ವೇಳೆ ಇದು …
Read More »ರಾಜ್ಯಪಾಲರ ನೇಮಕದಲ್ಲೂ ಕೇಂದ್ರದಿಂದ ಚಾಣಾಕ್ಷ ನಡೆ
ದೇಶದ ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ರಾಜ್ಯಪಾಲರು ಮತ್ತು ಲೆಫ್ಟಿನೆಂಟ್ ಗವರ್ನರ್‌ಗಳಿಗೆ ವಿಶೇಷ ಸ್ಥಾನಮಾನವಿದೆ. ರಾಜ್ಯಪಾಲರು ಆಯಾಯ ರಾಜ್ಯಗಳ ಪ್ರಥಮ ಪ್ರಜೆಯಾಗಿದ್ದು ಇವರನ್ನು ಕೇಂದ್ರ ಸರಕಾರದ ಶಿಫಾರಸಿನ ಮೇರೆಗೆ ರಾಷ್ಟ್ರಪತಿ ಅವರು ನೇಮಕ ಮಾಡುತ್ತಾರೆ. ರಾಜ್ಯ ಮತ್ತು ಕೇಂದ್ರ ಸರಕಾರದ ನಡುವಣ ಕೊಂಡಿಯಾಗಿ ರಾಜ್ಯಪಾಲರು ಕರ್ತವ್ಯ ನಿರ್ವಹಿಸುತ್ತಾರೆ. ರಾಜ್ಯದಲ್ಲಿ ಯಾವುದೇ ಸಾಂವಿಧಾನಿಕ ಬಿಕ್ಕಟ್ಟು ಸೃಷ್ಟಿಯಾದಾಗ ರಾಜ್ಯಪಾಲರ ಪಾತ್ರ ಅತೀ ಮಹತ್ವದ್ದಾಗಿರುತ್ತದೆ. ರವಿವಾರದಂದು ಕೇಂದ್ರ ಸರಕಾರದ ಶಿಫಾರಸಿನಂತೆ ಹೊಸದಾಗಿ …
Read More »JDS ಶಾಸಕರು ಕಾಂಗ್ರೆಸ್ ಸೇರುವುದು ಖಚಿತ
ರಾಯಚೂರು: ಜೆಡಿಎಸ್ ಶಾಸಕ ಶಿವಲಿಂಗೇಗೌಡರು ಕಾಂಗ್ರೆಸ್ ಸೇರಲು ಸಜ್ಜಾಗಿದ್ದು, ನೂರಕ್ಕೆ ನೂರರಷ್ಟು ಅವರು ಕಾಂಗ್ರೆಸ್ ಗೆ ಬರುತ್ತಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ. ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಅರಸಿಕೆರೆ ಜೆಡಿಎಸ್ ಶಾಸಕ ಶಿವಲಿಂಗೇಗೌಡರು 100 ಪರ್ಸೆಂಟ್ ಕಾಂಗ್ರೆಸ್ ಗೆ ಬರ್ತಾರೆ. ಯಾಕೆ ಅನುಮಾನಾನಾ? ಎಂದು ಪ್ರಶ್ನಿಸಿದ್ದಾರೆ. ವಿಧಾನಮಂಡಲ ಅಧಿವೇಶನ ಮುಗಿದ ಮೇಲೆ ಯಾವತ್ತು ಬೇಕಾದರೂ ಅವರು ಕಾಂಗ್ರೆಸ್ ಗೆ ಬರುತ್ತಾರೆ ಎಂದು ತಿಳಿಸಿದ್ದಾರೆ. ಅರಸಿಕೆರೆ ಜೆಡಿಎಸ್ ಶಾಸಕರಾಗಿರುವ ಶಿವಲಿಂಗೇಗೌಡರಿಗೆ …
Read More »ಚಿನ್ನ ಗಿರವಿ ಇಡಲು ಅಂಗಡಿಗೆ ಬಂದ ಗ್ರಾಹಕ ಚಿನ್ನದ ಶಾಪ್ ಗೆ ಬೆಂಕಿ ಇಟ್ಟ
ಬೆಂಗಳೂರು: ಚಿನ್ನ ಗಿರವಿ ಇಡಲು ಅಂಗಡಿಗೆ ಬಂದ ಗ್ರಾಹಕ ಚಿನ್ನದ ಶಾಪ್ ಗೆ ಬೆಂಕಿ ಇಟ್ಟಿರುವ ಘಟನೆ ಬೆಂಗಳೂರಿನ ಮುನೇಶ್ವರ ಬ್ಲಾಕ್ ನಲ್ಲಿ ನಡೆದಿದೆ. ಚಿನ್ನ ಗಿರವಿ ಇಟ್ಟಿದ್ದಕ್ಕೆ ಕೇವಲ 50 ಸಾವಿರ ರೂಪಾಯಿ ಕೊಡುವುದಾಗಿ ಹೇಳಿದ್ದಕ್ಕೆ ಸಿಟ್ಟಿಗೆದ್ದ ವ್ಯಕ್ತಿ ಗಿರವಿ ಅಂಗಡಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಗಿರವಿ ಅಂಗಡಿ ಮಾಲೀಕ ಭರತ್ ಲಾಲ್ (54) ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Read More »ಕಲಿ ದಾಖಲೆಗಳನ್ನು ಸೃಷ್ಟಿಸಿದ ಆಸ್ತಿ ನೋಂದಣಿ ರದ್ದು ಮಾಡುವ ಕಾಯ್ದೆ ಶೀಘ್ರವೇ ಜಾರಿ
ಬೆಂಗಳೂರು : ರಾಜ್ಯ ಸರ್ಕಾರವು ಆಸ್ತಿ ಮಾಲೀಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆಸ್ತಿ ನೋಂದಣಿ ರದ್ದು ಮಾಡುವ ಕಾಯ್ದೆ ಶೀಘ್ರವೇ ಜಾರಿಯಾಗಲಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಕಂದಾಯ ಸಚಿವ ಆರ್. ಅಶೋಕ್. ಶೀಘ್ರವೇ ಕರ್ನಾಟಕ ನೋಂದಣಿ ಕಾಯ್ದೆಯನ್ನು ಮಾರ್ಪಾಡು ಮಾಡಲಿದ್ದು, ನಕಲಿ ದಾಖಲೆ ಸೃಷ್ಟಿಸಿದ ನೋಂದಣಿಗಳನ್ನು ರದ್ದುಪಡಿಸುವ ಅಧಿಕಾರವನ್ನು ಜಿಲ್ಲಾ ನೋಂದಣಿ ಅಧಿಕಾರಿಗಳಿಗೆ ನೀಡಲಾಗುವುದು ಇದರಿಂದ …
Read More »
Laxmi News 24×7