Breaking News

ರಾಜ್ಯ

ಪಂಚಮಸಾಲಿ, ಒಕ್ಕಲಿಗ ಮೀಸಲಾತಿ ಓಟಕ್ಕೆ ಹೈಕೋರ್ಟ್‌ನಿಂದ ತಾತ್ಕಾಲಿಕ ತಡೆ

ಬೆಂಗಳೂರು: ಪಂಚಮಸಾಲಿ ಸಮುದಾಯವನ್ನು 2-ಎ ಪ್ರವರ್ಗಕ್ಕೆ ಸೇರಿಸಿ ಮೀಸಲಾತಿ ನೀಡುವ ವಿಚಾರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಗುರುವಾರ ಹೈಕೋರ್ಟ್‌ ಆದೇಶಿಸಿದೆ. ಪಂಚಮಸಾಲಿ ಸಮುದಾಯವನ್ನು 2-ಎ ಪ್ರವರ್ಗಕ್ಕೆ ಸೇರಿಸಬಾರದು ಎಂದು ಕೋರಿ ಬೆಂಗಳೂರು ನಿವಾಸಿ ಡಿ.ಜಿ. ರಾಘವೇಂದ್ರ ಎಂಬವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಲೆ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠದಲ್ಲಿ ಗುರುವಾರ ವಿಚಾರಣೆಗೆ ಪಟ್ಟಿಯಾಗಿತ್ತು. ಆದರೆ ದಿನದ ಕಲಾಪದ ಸಮಯ ಮುಗಿದದ್ದರಿಂದ ಅರ್ಜಿ ವಿಚಾರಣೆಗೆ ಬರಲಿಲ್ಲ. ಮುಖ್ಯ ನ್ಯಾಯಮೂರ್ತಿಯವರು …

Read More »

ಇದು ಬರೀ ಮಾದಕ ಲೋಕವಲ್ಲ, ಲಿವಿಂಗ್‌ ಟುಗೆದರ್‌, ಸೆಕ್ಸ್‌ ಬೆರೆತ ವೈದ್ಯ ವಿದ್ಯಾರ್ಥಿಗಳ ಕರಾಳ ಲೋಕ

ಮಂಗಳೂರು: ಮಂಗಳೂರಿನ ಮೆಡಿಕಲ್‌ ಕಾಲೇಜುಗಳಲ್ಲಿ ಬೆಳಕಿಗೆ ಬಂದಿರುವ ಗಾಂಜಾ ಡ್ರಗ್ಸ್‌ ದಂಧೆಯಲ್ಲಿ (Drugs Mafia) ಕೇವಲ ಮಾದಕ ಲೋಕ ಮಾತ್ರವಲ್ಲ, ಲಿವಿಂಗ್‌ ಟುಗೆದರ್‌, ಸೆಕ್ಸ್‌ ಮತ್ತು ಗರ್ಲ್‌ಫ್ರೆಂಡ್‌ಗಳನ್ನು ನಶೆಗೆ ಎಳೆಯುವ ಕರಾಳ ಲೋಕವೂ ಬೆಳಕಿಗೆ ಬಂದಿದೆ.   ಮಂಗಳೂರು ಪೊಲೀಸರು ಗಾಂಜಾ ಬಲೆಯಲ್ಲಿ ಬಿದ್ದಿದ್ದ, ಪೆಡ್ಲರ್‌ಗಳಾಗಿ ಕೆಲಸ ಮಾಡುತ್ತಿದ್ದ ನಾಲ್ವರು ವೈದ್ಯಕೀಯ ವಿದ್ಯಾರ್ಥಿನಿಯರು, ಇಬ್ಬರು ವಿದ್ಯಾರ್ಥಿಗಳು ಮತ್ತು ಇಬ್ಬರು ವೈದ್ಯರು ಸೇರಿದಂತೆ ೧೦ ಜನರನ್ನು ಬಂಧಿಸಿದ್ದಾರೆ. ಇವರು ಕೆಎಂಸಿ ಅತ್ತಾವರ, ಕೆ.ಎಂ.ಸಿ …

Read More »

ದೇಶದ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದ 6 ಯೂಟ್ಯೂಬ್‌ ಚಾನೆಲ್‌ಗ‌ಳಿಗೆ ನಿಷೇಧ

ನವದೆಹಲಿ: ದೇಶದ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದ ಆರು ಯೂಟ್ಯೂಬ್‌ ಚಾನೆಲ್‌ಗ‌ಳ ಮೇಲೆ ಕೇಂದ್ರ ಸರ್ಕಾರ ನಿಷೇಧ ಹೇರಿದೆ. ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಪ್ರಸ್‌ ಇನ್ಫೋರ್ಮೇಷನ್‌ ಬ್ಯೂರೋ (ಪಿಐಬಿ) ಈ ಬಗ್ಗೆ ಪ್ರಕಟಣೆ ನೀಡಿದ್ದು, “20 ಲಕ್ಷ ಚಂದಾದಾರರನ್ನು ಹೊಂದಿರುವ 6 ಯೂಟ್ಯೂಬ್‌ ಚಾನೆಲ್‌ಗ‌ಳು 51 ಕೋಟಿ ವೀಕ್ಷಕರನ್ನು ಹೊಂದಿವೆ. ಅವುಗಳು ಸುಪ್ರೀಂಕೋರ್ಟ್‌ನಲ್ಲಿ ನಡೆಯುತ್ತಿರುವ ಪ್ರಕರಣಗಳ ಬಗ್ಗೆ, ಚುನಾವಣಾ ವ್ಯವಸ್ಥೆಯ ಬಗ್ಗೆ, ಕೇಂದ್ರ ಸರ್ಕಾರ ಕಾರ್ಯನಿರ್ವಹಣೆಯ ಬಗ್ಗೆ ಸುಳ್ಳು ಮಾಹಿತಿ …

Read More »

ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಸ್ತಬ್ಧ ಚಿತ್ರಕ್ಕೆ ಅವಕಾಶ

ಬೆಂಗಳೂರು: ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದ (ಜ. 26) ಪೆರೇಡ್‌ನಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಕೊನೆ ಕ್ಷಣದಲ್ಲಿ ಅವಕಾಶ ನೀಡಲಾಗಿದೆ. ಕರ್ನಾಟಕ ಮಂಡಿಸಿದ್ದ ‘ನಾರಿ ಶಕ್ತಿ’ ವಿಷಯದ ಸ್ತಬ್ಧಚಿತ್ರವನ್ನು ಅಂತಿಮ ಹಂತದಲ್ಲಿ ಕೇಂದ್ರ ಸರ್ಕಾರ ಕೈಬಿಟ್ಟಿತ್ತು. ಇದು ಭಾರೀ ಟೀಕೆಗೆ ಕಾರಣವಾಗಿತ್ತು. ದೇಶದ ಇತರ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೂ ಅವಕಾಶ ಕಲ್ಪಿಸಬೇಕೆಂಬ ಉದ್ದೇಶದಿಂದ ಈ ಬಾರಿ ಕರ್ನಾಟಕದ ಸ್ತಬ್ಧಚಿತ್ರವನ್ನು ಪರಿಗಣಿಸಿಲ್ಲ ಎಂದು ಹೇಳಲಾಗಿತ್ತು. ರಕ್ಷಣಾ ಸಚಿವಾಲಯ ಸೆ.1ರಂದು ದೇಶದ ಎಲ್ಲ ರಾಜ್ಯ ಮತ್ತು …

Read More »

ಮದ್ಯ ಖರೀದಿ ವಯಸ್ಸಿನ ಮಿತಿ 21 ರಿಂದ 18ಕ್ಕೆ ಇಳಿಕೆ

ಬೆಂಗಳೂರು: 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವಂತಿಲ್ಲ ಎಂಬ ನಿರ್ಬಂಧವನ್ನು ಸಡಿಲಿಸಿ ವಯಸ್ಸಿನ ಮಿತಿಯನ್ನು 18 ವರ್ಷಗಳಿಗೆ ಇಳಿಕೆ ಮಾಡಲು ಕರ್ನಾಟಕ ಅಬಕಾರಿ ಪರವಾನಗಿಗಳು (ಸಾಮಾನ್ಯ ಷರತ್ತುಗಳು) ನಿಯಮಗಳು-1967ಕ್ಕೆ ತಿದ್ದುಪಡಿ ತರಲಾಗುತ್ತಿದೆ.   ಅಬಕಾರಿ ನಿಯಮಗಳಿಗೆ ತಿದ್ದುಪಡಿ ತರಲು ಇಲಾಖೆಯು ಸಿದ್ಧಪಡಿಸಿರುವ ಕರಡು ಪ್ರತಿಯನ್ನು ಸೋಮವಾರ (ಜನವರಿ 9) ಅಧಿಸೂಚನೆಯಲ್ಲಿ ಪ್ರಕಟಿಸಲಾಗಿದೆ. ಕರ್ನಾಟಕ ಅಬಕಾರಿ ಪರವಾನಗಿಗಳು (ಸಾಮಾನ್ಯ ಷರತ್ತುಗಳು) ನಿಯಮಗಳು-1967ರ ಸೆಕ್ಷನ್‌ 10 (1) (ಇ) ಅಡಿಯಲ್ಲಿ …

Read More »

ಆಪ್ ಸರ್ಕಾರ ವೈದ್ಯರು, ಶಿಕ್ಷಕರಿಗೆ ಸಂಬಳ ನೀಡುತ್ತಿಲ್ಲ: ಬಿಜೆಪಿ ಗಂಭೀರ ಆರೋಪ

ನವದೆಹಲಿ : ಅರವಿಂದ್ ಕೇಜ್ರಿವಾಲ್ ಸರ್ಕಾರವು ಇದೀಗ ರದ್ದುಪಡಿಸಿರುವ ಅಬಕಾರಿ ನೀತಿಗೆ ಸಂಬಂಧಿಸಿದ ಪ್ರಕರಣಗಳ ವಿರುದ್ಧ ಹೋರಾಡಲು 25 ಕೋಟಿ ರೂಪಾಯಿಗಳನ್ನು ಕಾನೂನು ಶುಲ್ಕವಾಗಿ ಪಾವತಿಸಿದೆ ಎಂದು ಬಿಜೆಪಿ ಬುಧವಾರ ಆರೋಪ ಮಾಡಿದೆ, ವೈದ್ಯರು ಮತ್ತು ಶಿಕ್ಷಕರ ಸಂಬಳ ನೀಡಲು ಹಣವಿಲ್ಲ, ಆದರೆ ಹಗರಣದ ಆರೋಪಿಗಳನ್ನು ರಕ್ಷಿಸಲು ಸಾರ್ವಜನಿಕ ಖಜಾನೆಯನ್ನು ಬಳಸುತ್ತಿದೆ ಎಂದು ಆರೋಪಿಸಿದೆ.   ಬಿಜೆಪಿ ವಕ್ತಾರ ಗೌರವ್ ಭಾಟಿಯಾ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಉಪ …

Read More »

ಸುರಕ್ಷಾ ಕ್ರಮಗಳ ಮೇಲಿರಲಿ ಹೆಚ್ಚಿನ ಆದ್ಯತೆ

ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್‌ ಕುಸಿದು ಮಂಗಳವಾರ ಇಬ್ಬರು ಅಮಾಯಕರು ಪ್ರಾಣ ಕಳೆದುಕೊಂಡಿದ್ದು, ತಾಯಿ ಮತ್ತು ಮಗುವಿನ ದಾರುಣ ಅಂತ್ಯಕ್ಕೆ “ನಮ್ಮ ಮೆಟ್ರೋ’ ದುಃಸಾಕ್ಷಿಯಾಗಿದೆ. ಇದು ಕಳಪೆ ಕಾಮಗಾರಿಯ ಪರಿಣಾಮ ಎಂದು ಮೇಲ್ನೋಟಕ್ಕೆ ಕಂಡು ಬಂದರೂ ಕಾಮಗಾರಿ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಸುರಕ್ಷಾ ಕ್ರಮಗಳ ಕೊರತೆ ಮತ್ತು ಕಾಮಗಾರಿಯ ನಿರ್ವಹಣೆಯ ಸ್ಥಾನಗಳಲ್ಲಿರುವವರ ಘೋರ ಅವಜ್ಞೆ ಇದಕ್ಕೆ ಪ್ರಮುಖ ಕಾರಣ.   ಮೆಟ್ರೋ ಕಾಮಗಾರಿ ವೇಳೆ ದುರಂತ ಘಟಿಸಿ ಸಾವು-ನೋವು ಸಂಭ ವಿಸಿದ್ದು ಇದೇ …

Read More »

ಕೋಟಿ ಕೈಗಳಿಗೆ ಕೆಲಸ ನೀಡಿದ ಬೆಳಗಾವಿ; ನರೇಗಾ ಮಾನವ ದಿನ ಸೃಜನೆಯಲ್ಲಿ ರಾಜ್ಯದಲ್ಲೇ ಪ್ರಥಮ

ಬೆಳಗಾವಿ: ಕೊರೊನಾ ಮತ್ತು ಪ್ರಕೃತಿ ವಿಕೋಪದಿಂದ ತತ್ತರಿಸಿದ್ದ ಬೆಳಗಾವಿ ಜಿಲ್ಲೆಯ ಗ್ರಾಮೀಣ ಪ್ರದೇಶದ ಜನರಿಗೆ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಹೊಸ ಭರವಸೆ ಮೂಡಿಸಿದೆ. ಜಿಲ್ಲೆಯಲ್ಲಿ ಯೋಜನೆಯಡಿ ಒಂದು ಕೋಟಿ ಮಾನವ ದಿನ ಸೃಜಿಸಿ ರಾಜ್ಯದಲ್ಲೇ ಪ್ರಥಮ ಸ್ಥಾನ ಗಳಿಸಿದೆ. ರಾಯಚೂರು ಜಿಲ್ಲೆ 96.40 ಲಕ್ಷ ಮಾನವ ದಿನ ಸೃಜನೆಯೊಂದಿಗೆ 2ನೇ ಸ್ಥಾನದಲ್ಲಿದೆ. 71.91ಲಕ್ಷ ಮಾನವ ದಿನ ಸೃಜಿಸಿರುವ ಕೊಪ್ಪಳ 3ನೇ ಸ್ಥಾನದಲ್ಲಿದ್ದರೆ, ವಿಜಯನಗರ ಜಿಲ್ಲೆ 58.24 ಲಕ್ಷ ಮತ್ತು ಬಳ್ಳಾರಿ …

Read More »

ಶಿಕ್ಷಕರ ವರ್ಗಾವಣೆ: ಇಂದಿನಿಂದ ದಾಖಲೆಗಳ ಪರಿಶೀಲನೆ

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಮಾ.10ಕ್ಕೆ ಪೂರ್ಣಗೊಳ್ಳಲಿದೆ ಎಂದು ಶಿಕ್ಷಣ ಇಲಾಖೆ ವರ್ಗಾವಣಾ ವೇಳಾಪಟ್ಟಿ ಪ್ರಕಟಿಸಿದೆ. ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯ ಪರಿಷ್ಕೃತ ವೇಳಾಪಟ್ಟಿಯನ್ನು ಇಲಾಖೆ ಬುಧವಾರ ಪ್ರಕಟಿಸಿದೆ. ಡಿ.28ರಂದು ಪ್ರಕಟಿಸಿದ್ದ ಹೆಚ್ಚುವರಿ ಶಿಕ್ಷಕರ ಕರಡು ಪಟ್ಟಿಯನ್ನು ಮರು ಪ್ರಕಟಿಸಿದ್ದು ಜ.12ರಿಂದ 16ರ ವರೆಗೆ ಹೆಚ್ಚುವರಿ ಶಿಕ್ಷಕರು ಸಲ್ಲಿಸಿರುವ ಆದ್ಯತೆಯಲ್ಲಿನ ದಾಖಲೆಗಳ ಪರಿಶೀಲನೆ ನಡೆಯಲಿದೆ. ಕರಡು ಪಟ್ಟಿಯಿಂದ ಸಮಸ್ಯೆಗೆ ಒಳಗಾದ ಶಿಕ್ಷಕರು ಜ.16 ಮತ್ತು …

Read More »

40 ಕ್ಷೇತ್ರಗಳಲ್ಲಿ ಕೆಆರ್‌ಪಿಪಿ ಪಕ್ಷ ಗೆಲ್ಲಲಿದೆ: ಜನಾರ್ದನ ರೆಡ್ಡಿ

ಗಂಗಾವತಿ: ಅಭಿಮಾನಿಗಳ ಉತ್ಸಾಹ ನೋಡುತ್ತಿದ್ದರೆ ಕಲ್ಯಾಣ ರಾಜ್ಯ ಪ್ರಗತಿ ಪಾರ್ಟಿ ರಾಜ್ಯದ 40 ಕ್ಷೇತ್ರಗಳಲ್ಲಿ ಗೆಲ್ಲುವ ನಿರೀಕ್ಷೆ ಇದೆ. ಹಿಂದೂಗಳ ಪವಿತ್ರ ಶಕ್ತಿ ಕೇಂದ್ರ ಕಿಷ್ಕಿಂದಾ ಅಂಜನಾದ್ರಿಯನ್ನು ಸಮಗ್ರ ಅಭಿವೃದ್ಧಿ ತಮ್ಮ ವಿಷನ್ ಆಗಿದ್ದು ಯುವ ಕಾರ್ಯಕರ್ತರ ಬೆಂಬಲ ಸಹಕಾರದಿಂದ ಗಂಗಾವತಿ ಕ್ಷೇತ್ರದಿಂದ ಗೆಲ್ಲುವ ವಿಶ್ವಾಸವಿದೆ ಎಂದು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹೇಳಿದರು.     ಅವರು ಕನಕಗಿರಿ ರಸ್ತೆಯಲ್ಲಿ ತಮ್ಮ ನಿವಾಸದ ವೇದಿಕೆಯಲ್ಲಿ ಜನ್ಮದಿನದ ನಿಮಿತ್ತ ಅಭಿಮಾನಿಗಳಿಂದ …

Read More »