Breaking News

ರಾಜ್ಯ

ಕಾಂತಾರʼ ಸಿನಿಮಾ ಆಸ್ಕರ್‌ ರೇಸ್‌ ನಲ್ಲಿ ಸ್ಥಾನ

ಬೆಂಗಳೂರು: ರಿಷಬ್‌ ಶೆಟ್ಟಿ ನಿರ್ದೇಶನ ʼಕಾಂತಾರʼ ಸಿನಿಮಾ ಆಸ್ಕರ್‌ ರೇಸ್‌ ನಲ್ಲಿ ಸ್ಥಾನ ಪಡೆದುಕೊಂಡಿದೆ. ಈ ಬಗ್ಗೆ ಹೊಂಬಾಳೆ ಫಿಲ್ಮ್ಸ್‌ ಅಧಿಕೃತವಾಗಿ ಟ್ವಿಟರ್‌ ನಲ್ಲಿ ಮಾಹಿತಿಯನ್ನು ಕೊಟ್ಟಿದೆ. ಇತ್ತೀಚೆಗೆ ʼಕಾಂತಾರʼ ಸಿನಿಮಾವನ್ನು ಆಸ್ಕರ್‌ ಗೆ ಕಳುಹಿಸಲು ಅರ್ಜಿ ಸಲ್ಲಿಸಿದ್ದೇವೆ ಎಂದು ನಿರ್ಮಾಪಕ ವಿಜಯ್‌ ಕಿರಂದೂರು ಅವರು ಹೇಳಿದ್ದರು. ಟ್ವಟರ್‌ ನಲ್ಲಿ ಕಾಂತಾರಕ್ಕೆ ಆಸ್ಕರ್‌ ಸಿಗಬೇಕೆಂದು ಹಲವು ಮಂದಿ ಆಗ್ರಹಿಸಿದ್ದರು. ಪ್ರೇಕ್ಷಕರ ಮನವಿಯಂತೆ ಚಿತ್ರ ತಂಡ ಆಸ್ಕರ್‌ ಗಾಗಿ ಕಾಂತಾರವನ್ನು ಪರಿಗಣಿಸುವಂತೆ ಅರ್ಜಿ …

Read More »

ಡಿ.ಕೆ ಶಿವಕುಮಾರ್ ಭೇಟಿಯಾದ ಶಾಸಕ H.ನಾಗೇಶ್ : ಕಾಂಗ್ರೆಸ್ ಸೇರ್ಪಡೆ ಫಿಕ್ಸ್..?

ಬೆಂಗಳೂರು : ಪಕ್ಷೇತರ ಶಾಸಕ ಹೆಚ್. ನಾಗೇಶ್ ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ರನ್ನು ಭೇಟಿಯಾಗಿದ್ದು, ರಾಜ್ಯ ರಾಜಕಾರಣದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಪಕ್ಷೇತರ ಶಾಸಕನಾಗಿದ್ದರೂ ಬಿಜೆಪಿ ಬೆಂಬಲಿಸಿರುವ ನಾಗೇಶ್ ಅಂಬೇಡ್ಕರ್ ಅಭಿವೃದ್ದಿ ನಿಗಮದ ಅಧ್ಯಕ್ಷರಾಗಿದ್ದಾರೆ. ಇದೀಗ ಡಿಕೆ ಶಿವಕುಮಾರ್ ರನ್ನು ಭೇಟಿಯಾಗಿದ್ದು, ಮತ್ತೆ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರಾ ಎಂಬ ಕುತೂಹಲ ಮೂಡಿದೆ. ಕೆಲವು ತಿಂಗಳುಗಳ ಹಿಂದೆಯೇ ನಾಗೇಶ್ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ಗುಸುಗುಸು ಕೇಳಿಬಂದಿತ್ತು, ಆದರೆ ಕಾಂಗ್ರೆಸ್ ಸೇರ್ಪಡೆಯಾಗಿರಲಿಲ್ಲ. ಮಹತ್ತರದ …

Read More »

ಮತಾಂತರ ಗಂಭೀರ ಸಮಸ್ಯೆ, ರಾಜಕೀಯ ಮಾಡಬೇಡಿ: ಸುಪ್ರೀಂ

ನವದೆಹಲಿ, ಜನವರಿ 9: ಧಾರ್ಮಿಕ ಮತಾಂತರಕ್ಕೆ ರಾಜಕೀಯ ಬಣ್ಣ ನೀಡಬಾರದು ಎಂದಿರುದ ಸುಪ್ರೀಂ ಕೋರ್ಟ್, ಮೋಸದ ಧಾರ್ಮಿಕ ಮತಾಂತರಗಳನ್ನು ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಮತ್ತು ರಾಜ್ಯಗಳಿಗೆ ನಿರ್ದೇಶನ ಕೋರಿ ಸಲ್ಲಿಸಿರುವ ಮನವಿಯ ಕುರಿತು ಸೋಮವಾರ ಅಟಾರ್ನಿ ಜನರಲ್ ಆರ್ ವೆಂಕಟರಮಣಿ ಅವರ ನೆರವು ಕೋರಿದೆ.   ಬೆದರಿಕೆ, ಉಡುಗೊರೆಗಳು ಮತ್ತು ಹಣದ ಪ್ರಯೋಜನಗಳ ಮೂಲಕ ವಂಚನೆಯಿಂದ ಆಮಿಷ ಒಡ್ಡಿ ಸಹಾಯ ಮಾಡುವ ಮೂಲಕ ಧಾರ್ಮಿಕ ಮತಾಂತರವನ್ನು ಪರಿಶೀಲಿಸುವಂತೆ …

Read More »

ಮೀಸಲಾತಿಗಾಗಿ ಮತ್ತೊಂದು ಸಮುದಾಯದ ಹೋರಾಟ ತೀವ್ರ: ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಸಂಘ

ಬೆಂಗಳೂರು: ರಾಜ್ಯದಲ್ಲಿ ಮೀಸಲಾತಿ ಸಂಬಂಧ ವಿವಿಧ ಸಮುದಾಯಗಳ ಹೋರಾಟ ನಡೆಯುತ್ತಿದ್ದು, ಇದೀಗ ಇದೇ ವಿಚಾರವಾಗಿ ಇನ್ನೊಂದು ಸಮುದಾಯ ಹೋರಾಟ ತೀವ್ರಗೊಳಿಸಲು ನಿರ್ಧರಿಸಿದೆ. ಮಾತ್ರವಲ್ಲ, ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಎಚ್ಚರಿಕೆಯನ್ನೂ ನೀಡಿದೆ.   ಬಲಿಜ ಸಮುದಾಯಕ್ಕೆ ಪೂರ್ಣ ಪ್ರಮಾಣದಲ್ಲಿ ಪ್ರವರ್ಗ ‘2ಎ’ ಮೀಸಲಾತಿ ಕಲ್ಪಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಬಲಿಜ ಸಂಘ ಸೋಮವಾರ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿತ್ತು. ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸಿದ್ದ ಪ್ರತಿಭಟನಾಕಾರರು ನಮ್ಮಿಂದ ಕಸಿದುಕೊಂಡಿರುವ 2ಎ ಮೀಸಲಾತಿ ವಾಪಸ್ …

Read More »

ಸಚಿವ ‘ಸುನಿಲ್ ಕುಮಾರ್’ ವಿರುದ್ಧ ಅವಹೇಳನಕಾರಿ ಪೋಸ್ಟ್ : ಇಬ್ಬರಿಗೆ 25 ಸಾವಿರ ದಂಡ

ಮಂಗಳೂರು: ಸಚಿವ ವಿ. ಸುನಿಲ್ ಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಇಬ್ಬರು ಸ್ಥಳೀಯ ಮುಖಂಡರಿಗೆ ಕೋರ್ಟ್ ದಂಢ ವಿಧಿಸಿದೆ. ಸಚಿವ ವಿ. ಸುನಿಲ್ ಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದ ಕಾರ್ಕಳದ ಇಬ್ಬರು ಸ್ಥಳೀಯ ಮುಖಂಡರಿಗೆ ಬೆಂಗಳೂರಿನ 12ನೇ ಸಿಟಿ ಸಿವಿಲ್ ಕೋರ್ಟ್ 25,000 ದಂಡ ವಿಧಿಸಿ ಕ್ಷಮೆಯಾಚನೆಗೆ ಸೂಚನೆ ನೀಡಿದೆ.   ಕೆಲವು ತಿಂಗಳ ಹಿಂದೆ ಕಾರ್ಕಳದ ಯೋಗೇಶ್ ನಯನಾ ಇನ್ನಾ …

Read More »

ಜ.12 ರಂದು ಪ್ರಧಾನಿ ಮೋದಿ ಹುಬ್ಬಳ್ಳಿಗೆ ಆಗಮನ: ರಾಷ್ಟ್ರೀಯ ಯುವಜನೋತ್ಸವದಲ್ಲಿ ಭಾಗಿ

ಬೆಂಗಳೂರು: ಪ್ರಧಾನಿ ಮೋದಿಯವರು ಜನವರಿ 12 ರ ಮಧ್ಯಾಹ್ನದಂದು ಹುಬ್ಬಳ್ಳಿಗೆ ಆಗಮಿಸುತ್ತಿದ್ದು, ರಾಷ್ಟ್ರೀಯ ಯುವಜನೋತ್ಸವದಲ್ಲಿ ಭಾಗವಹಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.   ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಏಳು ದಿನಗಳ ಕಾಲ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ದೇಶದ 28 ರಾಜ್ಯಗಳಿಂದ ಹಾಗೂ 8 ಕೇಂದ್ರೀಯ ಪ್ರಾಂತ್ಯದಿಂದ ಯುವಜನರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಪ್ರಧಾನಿ ಮೋದಿಯವರು ಈ ಕಾರ್ಯಕ್ರಮವನ್ನು ಭಾಗವಹಿಸಿ ಹಿಂದಿರುಗಲಿದ್ದಾರೆ ಎಂದರು. ಜನವರಿ 19 ರಂದು ಪ್ರಧಾನಿ …

Read More »

ಡಿ.ಕೆ.ಶಿವಕುಮಾರ್ ಭೇಟಿಯಾದ ಪಕ್ಷೇತರ ಶಾಸಕ ನಾಗೇಶ್ ; ಕ್ಷೇತ್ರ ಫಿಕ್ಸ್ ?

ಬೆಂಗಳೂರು : ವಿಧಾನಸಭಾ ಚುನಾವಣೆಗೆ ಭರದ ಸಿದ್ದತೆ ನಡೆಸುತ್ತಿರುವ ಕಾಂಗ್ರೆಸ್ ಪ್ರಬಲ ಅಭ್ಯರ್ಥಿಗಳಿಗಾಗಿ ಹುಡುಕಾಟ ಮುಂದುವರಿಸಿದೆ. 2018 ರಲ್ಲಿ ಮುಳಬಾಗಿಲು ಎಸ್ ಸಿ ಮೀಸಲು ಕ್ಷೇತ್ರದಿಂದ ಪಕ್ಷೇತರರಾಗಿ ಆಯ್ಕೆಯಾಗಿದ್ದ ಶಾಸಕ ಹೆಚ್.ನಾಗೇಶ್ ಅವರನ್ನು ಬೇರೊಂದು ಮೀಸಲು ಕ್ಷೇತ್ರದಿಂದ ಕಣಕ್ಕಿಳಿಸಲು ಸಿದ್ಧತೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.   ನಾಗೇಶ್ ಅವರು ಸೋಮವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ನಾಗೇಶ್ ಅವರನ್ನು ಕಾಂಗ್ರೆಸ್ ಅಭ್ಯರ್ಥಿಯಾಗಿ ಮಹದೇವಪುರ ಕ್ಷೇತ್ರದಿಂದ …

Read More »

ಕೋಲಾರದಲ್ಲೇ ಸಿದ್ದರಾಮಯ್ಯ ಸಭೆ, ಮಾತುಕತೆ, ಚರ್ಚೆ ಏಕೆ? ಕುತೂಹಲ ಹುಟ್ಟಿಸಿದ ಮಾಜಿ ಸಿಎಂ ನಡೆ

ಕೋಲಾರ, ಡಿಸೆಂಬರ್ 09: ಈ ಬಾರಿಯ ಕರ್ನಾಟಕದ ವಿಧಾನಸಭೆ ಚುನಾವಣೆಗೂ ಮುನ್ನ ಅತಿ ಹೆಚ್ಚು ಚಾಲ್ತಿಯಲ್ಲಿರುವ ಹೆಸರು ಸಿದ್ದರಾಮಯ್ಯ. ಮಾಜಿ ಮುಖ್ಯಮಂತ್ರಿ ವರ್ಚಸ್ಸು ಇನ್ನೂ ರಾಜ್ಯದಲ್ಲಿ ಉಳಿದಿದೆ ಎಂಬುದಕ್ಕೆ ಅವರು ಹೋದ ಕಡೆಗಳಲ್ಲಿ ಸೇರುವ ಜನಸಾಗರವೇ ಸಾಕ್ಷಿ. ಆದರೆ, ಸಿದ್ದರಾಮಯ್ಯ ಈ ಬಾರಿ ಎಲ್ಲಿಂದ ಸ್ಪರ್ಧಿಸ್ತಾರೆ ಎಂಬ ಪ್ರಶ್ನೆ ಹಲವು ತಿಂಗಳಿಂದ ಚಾಲ್ತಿಯಲ್ಲಿದೆ. ಈ ಕುರಿತು ಕೇವಲ ಮಾಧ್ಯಮ ಹಾಗೂ ರಾಜಕೀಯ ವಲಯದಲ್ಲಿ ಅಷ್ಟೇ ಅಲ್ಲ, ಸಾಮಾನ್ಯ ಜನರಲ್ಲೂ ಚರ್ಚೆಗಳು …

Read More »

‘ಸಿದ್ದು ನಿಜಕನಸುಗಳು’ ಪುಸ್ತಕ ಬಿಡುಗಡೆಗೆ ಸಿಟಿ ಸಿವಿಲ್ ಕೋರ್ಟ್​​ನಿಂದ ಮಧ್ಯಂತರ ತಡೆಯಾಜ್ಞೆ

ಬೆಂಗಳೂರು: ಬಿಜೆಪಿ ಇಂದು ‘ಸಿದ್ದು ನಿಜಕನಸುಗಳು’ ಎಂಬ ಪುಸ್ತಕವನ್ನು ಲೋಕಾರ್ಪಣೆ ಮಾಡಲು ಮುಂದಾಗಿತ್ತು. ಇದೀಗ ಈ ಪುಸ್ತಕವನ್ನು ಬಿಡುಗಡೆ ಮಾಡದಂತೆ ಸಿಟಿ ಸಿವಿಲ್ ಕೋರ್ಟ್ ಮಧ್ಯಂತರ ತಡೆಯಾಜ್ಞೆ ಹೊರಡಿಸಿ ಆದೇಶಿಸಿದೆ. ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ‘ಸಿದ್ದು ನಿಜಕನಸುಗಳು’ ಪುಸ್ತಕ ಬಿಡುಗಡೆಯಾಗದಂತೆ ಕೋರ್ಟ್​​ಗೆ ತಡೆಯಾಜ್ಞೆ ಅರ್ಜಿ ಸಲ್ಲಿಸಿದ್ದರು. ಪರಿಶೀಲಿಸಿದ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆ ನೀಡಿದೆ. ಬಿಜೆಪಿ ಹೊರತರಲು ನಿರ್ಧರಿಸಿದ್ದ ಪುಸ್ತಕವನ್ನು ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ್ ಲೋಕಾರ್ಪಣೆಗೊಳಿಸಬೇಕಿತ್ತು. ‘ಸಿದ್ದು ನಿಜಕನಸುಗಳು’ ಎಂಬ ಪುಸ್ತಕದ …

Read More »

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ವಿದ್ಯುತ್ ಕಡಿತ ಚಿಂತೆ ಬಿಡಿ, ಸೋಲಾರ್ ಪಂಪ್ ಖರೀದಿಗೆ ಸಿಗುತ್ತೆ ಸಬ್ಸಿಡಿ

ಬೆಂಗಳೂರು: ತೋಟಗಾರಿಕೆ ಇಲಾಖೆ ಕೃಷಿಕರಿಗೆ ಸೋಲಾರ್ ಪಂಪ್ ಸೆಟ್ ಗಳನ್ನು ನೀಡಲು ಮುಂದಾಗಿದೆ. ರೈತರು ವಿದ್ಯುತ್ ಕೈ ಕೊಟ್ಟ ಸಂದರ್ಭದಲ್ಲಿ ಪೂರ್ಣ ಬೆಳೆಗೆ ನೀರು ಹಾಯಿಸಲಾಗದೆ ಸಂಕಷ್ಟ ಎದುರಿಸುತ್ತಿದ್ದಾರೆ. ಪದೇ ಪದೇ ವಿದ್ಯುತ್ ಸಮಸ್ಯೆಯಿಂದ ಬೆಳೆಗಳಿಗೆ ನಿರಂತರವಾಗಿ ಮತ್ತು ಅವಶ್ಯಕತೆ ಇರುವಾಗ ನೀರು ಹಾಯಿಸಲು ಸಾಧ್ಯವಾಗುವುದಿಲ್ಲ. ಈ ಹಿನ್ನೆಲೆಯಲ್ಲಿ ಸೌರಶಕ್ತಿಯ ಪಂಪ್ ಗಳನ್ನು ನೀಡಲು ತೋಟಗಾರಿಕೆ ಇಲಾಖೆ ಮುಂದಾಗಿದೆ. ಸೌರಶಕ್ತಿಯ 3 ಹೆಚ್.ಪಿ. ಸೋಲಾರ್ ಪಂಪ್ ಬೆಲೆ 2 ರಿಂದ 2.5 …

Read More »