ಬೆಳಗಾವಿ: ಹಳೆಯ ಪಿಂಚಣಿ ಯೋಜನೆಯನ್ನು ರಾಜ್ಯದಲ್ಲಿ ಮತ್ತೆ ಜಾರಿಗೆ ತರುವ ಪ್ರಸ್ತಾವ ನಮ್ಮ ಮುಂದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಇದರಿಂದಾಗಿ ಬೆಂಗಳೂರಿನಲ್ಲಿ ಹಳೆ ಪಿಂಚಣಿ ಯೋಜನೆ ಜಾರಿಗಾಗಿ ಹೋರಾಡು ತ್ತಿರುವ ಸರಕಾರಿ ನೌಕರರಿಗೆ ಹಿನ್ನಡೆಯಾಗಿದೆ. ಮಂಗಳವಾರ ಬಿಜೆಪಿಯ ರೇಣುಕಾ ಚಾರ್ಯ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ಸಿಎಂ, ಹಳೆಯ ಪಿಂಚಣಿ ಯೋಜನೆಯ ಆರ್ಥಿಕ ಹೊರೆಯನ್ನು ನಿಭಾಯಿಸಲು ಸಾಕಷ್ಟು ನಿಧಿ ಇಲ್ಲ. ಹಾಗಾಗಿ ಮರು ಜಾರಿ ಕಷ್ಟ. ಅಲ್ಲದೇ ಆರ್‌ಬಿಐ …
Read More »ಹಳೆಯ ವಿದ್ಯಾರ್ಥಿಗಳು ತಮ್ಮ ಶಿಕ್ಷಣ, ವೃತ್ತಿ ಅನುಭವಗಳನ್ನು ಹೊಸ ವಿದ್ಯಾರ್ಥಿಗಳಿಗೆ ಧಾರೆ ಎರೆಯಬೇಕು
ಬೆಳಗಾವಿ: ‘ಹಳೆಯ ವಿದ್ಯಾರ್ಥಿಗಳು ತಮ್ಮ ಶಿಕ್ಷಣ, ವೃತ್ತಿ ಅನುಭವಗಳನ್ನು ಹೊಸ ವಿದ್ಯಾರ್ಥಿಗಳಿಗೆ ಧಾರೆ ಎರೆಯಬೇಕು. ಸುಸ್ಥಿರ ಸಮಾಜ ನಿರ್ಮಾಣಕ್ಕೆ ಇದೇ ಮೊದಲ ಹೆಜ್ಜೆ’ ಎಂದು ನಿವೃತ್ತ ಮುಖ್ಯಶಿಕ್ಷಕ ವೈ.ಎಂ.ಕಾಮಕರ ಕಿವಿಮಾತು ಹೇಳಿದರು. ಇಲ್ಲಿನ ಫುಲಬಾಗ್ ಗಲ್ಲಿಯಲ್ಲಿರುವ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ-ನಂಬರ್ 7ರಲ್ಲಿ ಭಾನುವಾರ ನಡೆದ, 1994ರಿಂದ 2000ರವರೆಗಿನ ವಿದ್ಯಾರ್ಥಿಗಳ ಒಕ್ಕೂಟದಿಂದ ಆಯೋಜಿಸಿದ್ದ ಸ್ನೇಹ ಸಮ್ಮಿಲನ ಹಾಗೂ ಗುರುವಂದನೆ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ‘ಹಳೆಯ …
Read More »ಹೊರನಾಡ ಕನ್ನಡಿಗರಿಗೆ ಮೀಸಲಾತಿ: ಸೂಕ್ತ ಚರ್ಚೆ
ಬೆಳಗಾವಿ: ‘ಮಹಾರಾಷ್ಟ್ರವೂ ಸೇರಿದಂತೆ ಹೊರನಾಡ ಕನ್ನಡಿಗರಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸಲು ಸೂಕ್ತ ಚರ್ಚೆ ನಡೆಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು. ನಗರದಲ್ಲಿ ಮಂಗಳವಾರ ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಮತ್ತು ಜತ್ತ ಕನ್ನಡಿಗರ ನಿಯೋಗದೊಂದಿಗೆ ಮಾತನಾಡಿದ ಅವರು, ‘ಹೊರನಾಡ ಕನ್ನಡಿಗರ ಮೀಸಲಾತಿ ಸಂಬಂಧ ಚರ್ಚಿಸಲು ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನು ಬೆಳಗಾವಿಗೆ ಕಳಿಸಲಾಗುವುದು. ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ …
Read More »ಸುವರ್ಣ ವಿಧಾನಸೌಧ ಹತ್ತಿರ ಪ್ರತಿಭಟನ ಸ್ಥಳದಲ್ಲಿ ಎಸೆದಿದ್ದ ಆಹಾರ ತಿಂದು 10 ಕುರಿಗಳು ಮೃತಪಟ್ಟಿವೆ.
ಬೆಳಗಾವಿ: ಇಲ್ಲಿನ ಸುವರ್ಣ ವಿಧಾನಸೌಧ ಹತ್ತಿರ ಪ್ರತಿಭಟನ ಸ್ಥಳದಲ್ಲಿ ಎಸೆದಿದ್ದ ಆಹಾರ ತಿಂದು 10 ಕುರಿಗಳು ಮೃತಪಟ್ಟಿವೆ. 40ಕ್ಕೂ ಹೆಚ್ಚು ಕುರಿಗಳು ಅಸ್ವಸ್ಥಗೊಂಡಿವೆ. ‘ಡಿ.22ರಂದು ಇಲ್ಲಿ ನಡೆದಿದ್ದ ವಿರಾಟ್ ಪಂಚಶಕ್ತಿ ಸಮಾವೇಶದ ಸ್ಥಳದಲ್ಲಿಯೇ ಉಳಿದಿದ್ದ ಆಹಾರ ಎಸೆಯಲಾಗಿತ್ತು. ಭಾನುವಾರ ಸಂಜೆ ಇದನ್ನೇ ಕುರಿಗಳು ತಿಂದಿದ್ದವು. ಸೋಮವಾರ ಬೆಳಗಿನವರೆಗೆ ನರಳಾಡಿ ಸತ್ತಿವೆ’ ಎಂದು ಕುರಿಗಾಹಿಗಳು ದೂರಿದ್ದಾರೆ. ‘ಆಹಾರವನ್ನು ಮೂರು ದಿನದ ಬಳಿಕ ಕುರಿಗಳು ತಿಂದಿದ್ದು, ಜೀರ್ಣವಾಗದೆ ಮೃತಪಟ್ಟಿವೆ. ಇದಕ್ಕೆ ‘ರುಮಿನಲ್ ಅಸಿಡೋಸಿಸ್’ …
Read More »ಪರಿಷತ್ ಸದಸ್ಯರಿಗೆ ತಲಾ ₹ 25 ಕೋಟಿ ಅನುದಾನಕ್ಕೆ ಪ್ರಕಾಶ ಹುಕ್ಕೇರಿ ಆಗ್ರಹ
ಬೆಳಗಾವಿ: ವಿಧಾನ ಪರಿಷತ್‌ನ ಎಲ್ಲ ಸದಸ್ಯರಿಗೂ ಅಭಿವೃದ್ಧಿ ಕಾಮಗಾರಿಗಳಿಗಾಗಿ ತಲಾ ₹ 25 ಕೋಟಿ ಅನುದಾನ ನೀಡಬೇಕು ಎಂದು ಕಾಂಗ್ರೆಸ್‌ನ ಪ್ರಕಾಶ ಹುಕ್ಕೇರಿ ವಿಧಾನ ಪರಿಷತ್‌ನಲ್ಲಿ ಸೋಮವಾರ ಒತ್ತಾಯಿಸಿದರು. ಪ್ರಶ್ನೋತ್ತರ ಕಲಾಪದ ಬಳಿಕ ವಿಷಯ ಪ್ರಸ್ತಾಪಿಸಿದ ಅವರು, ‘ವಿಧಾನಸಭೆಯ ಸದಸ್ಯರಿಗೆ ತಲಾ ₹ 50 ಕೋಟಿಯವರೆಗೂ ಅನುದಾನ ನೀಡಲಾಗಿದೆ. ಆದರೆ, ವಿಧಾನ ಪರಿಷತ್ ಸದಸ್ಯರಿಗೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಯಾವುದೇ ಅನುದಾನ ಒದಗಿಸಿಲ್ಲ. ಇದರಿಂದ ಜನರ ಪ್ರಶ್ನೆಗಳಿಗೆ ಉತ್ತರ ನೀಡುವುದು …
Read More »ಸುವರ್ಣಸೌಧಕ್ಕೆ ನುಗ್ಗಲು ಪ್ರತಿಭಟನಾನಿರತ ವಕೀಲರ ಯತ್ನ: ಪೊಲೀಸರೊಂದಿಗೆ ನೂಕಾಟ-ತಳ್ಳಾಟ
ಬೆಳಗಾವಿ: ವಕೀಲರ ರಕ್ಷಣಾ ಕಾಯ್ದೆ ಜಾರಿಗೆ ಆಗ್ರಹಿಸಿ ವಕೀಲರ ಸಂಘದಿಂದ ನಡೆದಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದು ಕೊಂಡಿದ್ದು, ರಾಷ್ಟ್ರೀಯ ಹೆದ್ದಾರಿ ಮೂಲಕ ಬಂದು ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸುತ್ತಿದ್ದಾರೆ ಈ ವೇಳೆ ರಾಷ್ಟ್ರೀಯ ಹೆದ್ದಾರಿ ಮೇಲೆ ಕಿಲೋಮೀಟರ್ ಗಟ್ಟಲೇ ಸಂಚಾರ ದಟ್ಟಣೆ ಉಂಟಾಗಿದೆ. ಸುವರ್ಣ ವಿಧಾನಸೌಧದ ಗೇಟಿನೆದುರು ವಕೀಲರು ಮುತ್ತಿಗೆ ಹಾಕಲು ಮುಂದಾಗಿದ್ದಾರೆ. ಗೇಟ್ ಒಳಗೆ ನುಗ್ಗಲು ಯತ್ನಿಸಿದ್ದಾರೆ. ಗೇಟ್ ಮುಂದೆ ನೂಕುನುಗ್ಗಲು ನಡೆದಿದ್ದು, ತಳ್ಳಾಟ …
Read More »ಈಗಾಗಲೇ ಮಹಾಜನ ವರದಿ ಇತ್ಯರ್ಥ : ಸಿದ್ದರಾಮಯ್ಯ
ಮಹಾರಾಷ್ಟ್ರ ರಾಜ್ಯ ಸರ್ಕಾರದ ನಿರ್ಣಯವನ್ನು ಖಂಡಿಸಿ ಕಾಂಗ್ರೆಸ್ ಸಿ ಎಲ್ ಪಿ ಅದ್ಯಕ್ಷ ಸಿದ್ದರಾಮಯ್ಯ ಮಾದ್ಯಮಗಳೊಂದಿಗೆ ಮಾತನಾಡುತ್ತಾ ಈಗಾಗಲೇ ಮಹಾಜನ್ ಆಯೋಗ ವರದಿ ಇತ್ಯರ್ಥ ಆಗಿದೆ ಆದರೆ ಮಹಾರಾಷ್ಟ್ರ ಸರ್ಕಾರ ನಮಗೆ ಸೇರಬೇಕು ಎಂದು ನಿರ್ಣಯ ಮಾಡಿದರೆ ಅದಕ್ಕೆ ಕಾನೂನು ಬಲ ಇಲ್ಲಾ, ನಾವು ನಮ್ಮ ವಿಧಾನಸಭೆಯಲ್ಲಿ ನಿರ್ಣಯ ತೆಗೆದುಕೊಂಡಿದ್ದೇವೆ. ಮಹಾರಾಷ್ಟ್ರ ವಿಧಾನಸಭೆ ನಿರ್ಣಯಕ್ಕೆ ಕವಡೆ ಕಾಸಿನಕಿಮ್ಮತ್ತು ಇಲ್ಲ ಎಂದರು.
Read More »ಗೋವಾಕ್ಕೆ ಬಂದಿದ್ದ ಮುಂಬೈ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಬಸ್ ಚಾಲಕ
ಪಣಜಿ: ರಜೆ ಇದ್ದ ಕಾರಣಕ್ಕೆ ಗೋವಾಕ್ಕೆ ಬಂದಿದ್ದ ಮುಂಬೈ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಬಸ್ ಚಾಲಕನನ್ನು ಬಂಧಿಸಲಾಗಿದೆ. ಗೋವಾದಲ್ಲಿ ವಿಹಾರಕ್ಕೆ ಬಂದಿದ್ದ ಮುಂಬೈ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 35 ವರ್ಷದ ಬಸ್ ಚಾಲಕನನ್ನು ಗೋವಾ ಪೊಲೀಸರು ಬಂಧಿಸಿದ್ದಾರೆ. ಶಂಕಿತ ಆರೋಪಿಯನ್ನು ದಕ್ಷಿಣ ಗೋವಾದ ಮೊರ್ಮುಗಾವೊದ ಜುವಾರಿನಗರ ಪ್ರದೇಶದ ನಿವಾಸಿ ಚಂದ್ರಶೇಖರ್ ವಾಸು ಲಮಾಣಿ ಎಂದು ಪೊಲೀಸರು ಗುರುತಿಸಲಾಗಿದೆ. ಅತ್ಯಾಚಾರ ಸಂತ್ರಸ್ತೆ ಎಂಜಿನಿಯರಿಂಗ್ ವಿದ್ಯಾರ್ಥಿನಿಯಾಗಿದ್ದು, ಬಸ್ …
Read More »ಮಹಾರಾಷ್ಟ್ರ ರಾಜ್ಯಕ್ಕೆ ಕರ್ನಾಟಕದ ಒಂದಿಂಚೂ ಜಾಗ ಕೊಡುವುದಿಲ್ಲ ಎಂದ ಕಾಂಗ್ರೆಸ್ ಮುಖಂಡ ಈಶ್ವರ ಖಂಡ್ರೆ
ಮಹಾರಾಷ್ಟ್ರ ರಾಜ್ಯಕ್ಕೆ ಕರ್ನಾಟಕದ ಒಂದಿಂಚೂ ಜಾಗ ಕೊಡುವುದಿಲ್ಲ ಎಂದು ಕಾಂಗ್ರೆಸ್ ಮುಖಂಡ ಈಶ್ವರ ಖಂಡ್ರೆ ಹೇಳಿದರು. ಮಹಾರಾಷ್ಟ್ರ ರಾಜ್ಯದವರು ವಿನಾಕಾರಣ ರಾಜಕೀಯ ದುರುದ್ದೇಶದಿಂದ ಹೀಗೆ ಮಾಡ್ತಾ ಇದ್ದಾರೆ ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಒಂದಿಂಚೂ ಜಾಗ ಕೂಡ ಮಹಾರಾಷ್ಟ್ರಕ್ಕೆ ಹೋಗೋದು ಸಾಧ್ಯವಿಲ್ಲ ಎಂದು ಮಾದ್ಯಮಗಳಿಗೆ ಮಾಹಿತಿ ನೀಡಿದರು.
Read More »ಪೋಲಿಸ್ ಇನ್ಸಪೇಕ್ಟರ ರನ್ನು ಗದರಿಸಿದ ಶಾಸಕ
ಸುವರ್ಣಸೌಧ ವಿ ಐ ಪಿ ಗೇಟ ಮುಂದೆ ನಿಂತಿದ್ದ ಕುಣಿಗಲ್ ಶಾಸಕ ರಂಗನಾಥ ಮತ್ತು ಅವರ ಸಂಗಡಿಗರನ್ನು ಪೋಲಿಸ್ ಇನ್ಸಪೇಕ್ಟರ ದೂರು ಸರಿಯಿರಿ ಎಂದು ಗದರಿಸಿದರು ಕೂಡಲೇ ಗರಂ ಆದ ಶಾಸಕ ರಂಗನಾಥ ಇನ್ಸಪೇಕ್ಟರ ರನ್ನು ಹಿಗ್ಗಾ ಮುಗ್ಗಾ ತರಾಟೆಗೆ ತಗೆದುಕೊಂಡರು. ನನಗೆ ನೀವು ಯಾರು ಎಂದು ಗೊತ್ತಾಗಿಲ್ಲಾ ಎಂದು ಇನ್ಸಪೇಕ್ಟರ, ಗೋತ್ತಾಗದಿದ್ದರೆ ಗೋತ್ತು ಮಾಡಿಕೋಳ್ಳ ಬೇಕು , ಎಲ್ಲಾ ಶಾಸಕರನ್ನು ಹೀಗೆ ಕೇಳ್ತಿರಾ ಎಂದು ಗದರಿಸಿದರು.
Read More »
Laxmi News 24×7