Breaking News

ರಾಜ್ಯ

8ನೇ ತರಗತಿ ವಿದ್ಯಾರ್ಥಿನಿ 6 ತಿಂಗಳ ಗರ್ಭಿಣಿ; ಮೂವರಿಂದ ಅತ್ಯಾಚಾರ ಶಂಕೆ

ಎಂಟನೇ ತರಗತಿ ವಿದ್ಯಾರ್ಥಿನಿ (8th Class Student) ಗರ್ಭಿಣಿಯಾಗಿರುವ (Pregnant) ಆಘಾತಕಾರಿ ಘಟನೆ ಕೊಪ್ಪಳ ತಾಲೂಕಿನಲ್ಲಿ (Koppal Taluk) ಬೆಳಕಿಗೆ ಬಂದಿದೆ. ವಿದ್ಯಾರ್ಥಿನಿ ಮೇಲೆ ಮೂವರಿಂದ ಅತ್ಯಾಚಾರ ನಡೆದಿರುವ ಅನುಮಾನಗಳು ವ್ಯಕ್ತವಾಗಿವೆ. ಕೊಪ್ಪಳ ತಾಲೂಕಿನ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿ ಭಯದಿಂದ ತನ್ನ ಮೇಲಾದ ಅತ್ಯಾಚಾರವನ್ನು ಯಾರ ಬಳಿಯೂ ಹೇಳಿಕೊಂಡಿರಲಿಲ್ಲ. ಇದೀಗ ಆರು ತಿಂಗಳ ನಂತರ ಆಕೆ ಗರ್ಭಿಣಿಯಾಗಿದ್ದರಿಂದ ಈ ವಿಷಯ ಪೋಷಕರಿಗೆ (Parents) ಗೊತ್ತಾಗಿದೆ. ಈ ಸಂಬಂಧ …

Read More »

ಉತ್ತರ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ಚರ್ಚೆಯ ಬಗ್ಗೆ ಎರಡು ದಿನ ಮೀಸಲು: ಬಸವರಾಜ ಹೊರಟ್ಟಿ

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ಚರ್ಚೆಯ ಬಗ್ಗೆ ಎರಡು ದಿನ ಮೀಸಲು ಇಡಲಾಗುತ್ತದೆ. ಈ ಭಾಗದ ಸಮಸ್ಯೆಗಳ ಕುರಿತು ಸರ್ಕಾರ ನಿರ್ಧಾರ ತೆಗೆದುಕೊಳ್ಳುವ ಕೆಲಸವನ್ನು ಮಾಡಬೇಕು ಎಂದು ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.   ಸಿಎಂ ಬಸವರಾಜ ಬೊಮ್ಮಾಯಿಯವರ ಭೇಟಿಯ ನಂತರ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಎರಡು ದಿನ ಉತ್ತರ ಕರ್ನಾಟಕ ಸಮಸ್ಯೆ ಗಳಿಗೆ ಚರ್ಚೆ ಮೀಸಲು ಇಡಲಾಗುತ್ತದೆ. ಮಂಗಳವಾರ- ಬುಧವಾರ ಎರಡು …

Read More »

ರಾಜ್ಯದ ಸರ್ಕಾರಿ ನೌಕರರ ವರ್ಗಾವಣೆಗೆ ಸಿಎಂ ಬೊಮ್ಮಾಯಿ ಬ್ರೇಕ್: ಸ್ಥಳ ನಿರೀಕ್ಷೆಯಲ್ಲಿದ್ದವರಿಗೆ ಈ ಸೂಚನೆ ನೀಡಿದ ಮುಖ್ಯಮಂತ್ರಿ

ಬೆಂಗಳೂರು: ಈಗಾಗಲೇ ವಿವಿಧ ಇಲಾಖೆಯ ವರ್ಗಾವಣೆ ಕಡತಗಳನ್ನು ಮುಖ್ಯಮಂತ್ರಿಗಳ ಕಚೇರಿಗೆ ಸಲ್ಲಿಸದಂತೆ ಖಡಕ್ ಸೂಚನೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ನೀಡಿದ್ದರು. ಈ ಬೆನ್ನಲ್ಲೇ ಇಂದು ಮತ್ತೆ ಸರ್ಕಾರಿ ನೌಕರರ ವರ್ಗಾವಣೆಗೆ ಸಂಪೂರ್ಣ ಬ್ರೇಕ್ ಹಾಕಿದ್ದಾರೆ. ಅಲ್ಲದೇ ಸ್ಥಳ ನಿರೀಕ್ಷೆಯಲ್ಲಿದ್ದವರಿಗೆ ಸಚಿವರ ಹಂತದಲ್ಲೇ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದ್ದಾರೆ.   ಈ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಲೋಕೋಪಯೋಗಿ, ಜಲಸಂಪನ್ಮೂಲ ಹಾಗೂ ಸಣ್ಣ ನೀರಾವರಿ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಿಗೆ …

Read More »

ಹಳೆ ಪಿಂಚಣಿಗಾಗಿ ಹೋರಾಟ ನಡೆಸುತ್ತಿರುವ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : `NPS’ ಬಗ್ಗೆ ಚರ್ಚೆಗೆ ಸಿಎಂ ಬೊಮ್ಮಾಯಿ ಒಪ್ಪಿಗೆ

ಬೆಳಗಾವಿ : ಹಳೆ ಪಿಂಚಣಿ ಯೋಜನೆ ಜಾರಿಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಹಳೆ ಪಿಂಚಣಿ ಯೋಜನೆ ಜಾರಿ ಸಂಬಂಧ ಚರ್ಚೆಗೆ ಸರ್ಕಾರ ಒಪ್ಪಿಗೆ ಸೂಚಿಸಿದೆ.   ಸರ್ಕಾರಿ ನೌಕರರಿಗೆ ಹಳೇ ಪಿಂಚಣಿ ಯೋಜನೆ ಜಾರಿಗೆ ಆಗ್ರಹಿಸಿ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಕುರಿತು ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಸದನದಲ್ಲಿ ಸಮಗ್ರ ಚರ್ಚೆ ನಡೆದ ಬಳಿಕ ಸರ್ಕಾರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ …

Read More »

ಮೂವರು ವಿವಾಹಿತ ಶಿಕ್ಷಕರ ನಡುವಿನ ಪ್ರೀತಿಗೆ ವಿದ್ಯಾರ್ಥಿ ಬಲಿ;

ಗದಗ: ಮೂವರು ವಿವಾಹಿತ ಶಿಕ್ಷರ ಪ್ರೀತಿಗೆ ವಿದ್ಯಾರ್ಥಿ ಬಲಿ ಆಗಿದ್ದಾನೆ. ಅದರಲ್ಲೂ ಇಬ್ಬಿಬ್ಬರೊಂದಿಗಿದ್ದ ಅಮ್ಮನ ಸಲುಗೆ ಮಗನಿಗೇ ಮುಳುವಾಗಿದೆ. ಅಮ್ಮನೊಂದಿಗೆ ಸಲುಗೆಯಿಂದಿದ್ದ ಇಬ್ಬರು ಶಿಕ್ಷಕರ ಪೈಕಿ ಒಬ್ಬ ಆಕೆಯ ಮಗನನ್ನು ಭೀಕರವಾಗಿ ಕೊಲೆ ಮಾಡಿ ಕ್ರೌರ್ಯ ತೋರಿದ್ದಾನೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಗದಗ ಜಿಲ್ಲೆಯ ನರಗುಂದ ತಾಲೂಕಿನ ಹದ್ಲಿ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ನಿನ್ನೆ ಈ ಘಟನೆ ನಡೆದಿತ್ತು. ಸಹಶಿಕ್ಷಕಿ ಗೀತಾ ಎಂಬಾಕೆಯ …

Read More »

ದೇಗುಲಗಳಲ್ಲಿ ಎಲ್ಲರಿಗೂ ಮುಕ್ತ ಪ್ರವೇಶಕ್ಕೆ ಶಿಫಾರಸು

ಸುವರ್ಣ ವಿಧಾನಸೌಧ: ರಾಜ್ಯ ಮುಜರಾಯಿ ದೇವಸ್ಥಾನಗಳ ಪ್ರವೇಶ ದ್ವಾರದಲ್ಲಿ ದೇವಸ್ಥಾನದ ಒಳಗೆ ಎಲ್ಲ ಜಾತಿಯವರಿಗೂ ಮುಕ್ತ ಅವಕಾಶ ಇರುತ್ತದೆ ಎಂಬ ಬೋರ್ಡ್‌ ಅಳವಡಿಸುವ ಮೂಲಕ ಎಲ್ಲರಿಗೂ ದೇವಸ್ಥಾನದ ಒಳಗೆ ಪ್ರವೇಶಿಸಲು ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ವಿಧಾನ ಮಂಡಲ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ 6ನೇ ವರದಿಯಲ್ಲಿ ಸರ್ಕಾರಕ್ಕೆ ಈ ಶಿಫಾರಸು ಮಾಡಿದೆ. ಮಂಗಳವಾರ ವಿಧಾನಸಭೆಯಲ್ಲಿ ಸಮಿತಿಯ ಅಧ್ಯಕ್ಷ ಎಂ.ಪಿ.ಕುಮಾರಸ್ವಾಮಿ ವರದಿಯನ್ನು ಮಂಡಿಸಿದರು. ರಾಜ್ಯದಲ್ಲಿ ಪರಿಶಿಷ್ಟ ಹಾಗೂ …

Read More »

ಹಲಾಲ್‌ ವಿಚಾರ ಸರ್ಕಾರಕ್ಕೆ ಸಂಬಂಧವಿಲ್ಲ: ಸಿಎಂ ಬೊಮ್ಮಾಯಿ

ಬೆಳಗಾವಿ: ಹಲಾಲ್‌ ವಿಚಾರಕ್ಕೂ, ಸರಕಾರಕ್ಕೂ ಸಂಬಂಧವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಹಲಾಲ್‌ ಕುರಿತ ಯಾವುದೇ ವಿಚಾರ ಸರಕಾರಕ್ಕೆ ಸಂಬಂಧಿಸಿದ್ದಲ್ಲ. ಜಗತ್ತು ಬಹಳಷ್ಟು ಮುಂದುವರಿದಿದೆ. ಹಾಗೆಯೇ ಸರಕಾರವು ಅಭಿವೃದ್ಧಿ ಕುರಿತು ಯೋಚಿಸುತ್ತಿದೆ ಎಂದರು. ರಮೇಶ ಜಾರಕಿಹೊಳಿ ಮತ್ತು ಈಶ್ವರಪ್ಪ ಅವರೊಂದಿಗೆ ಸಂಪರ್ಕದಲ್ಲಿದ್ದೇವೆ. ಅವರು ಅಧಿವೇಶನದಲ್ಲಿ ಭಾಗವಹಿಸದೇ ಇರುವುದು ಬಹಿಷ್ಕಾರವಲ್ಲ. ತಮ್ಮ ಮೇಲಿದ್ದ ಪ್ರಕರಣಗಳಲ್ಲಿ ಮುಕ್ತರಾದ ಮೇಲೆ ಮತ್ತೂಮ್ಮೆ ಸಂಪುಟಕ್ಕೆ ಸೇರಬೇಕೆನ್ನುವ ಅವರ ಚಿಂತನೆ ಸರಿಯಿದೆ. ಅವರ ವಿಚಾರವನ್ನು …

Read More »

7 ದಿನಗಳಲ್ಲಿ ಭೂ ಪರಿವರ್ತನೆ ಕಡ್ಡಾಯ: ರಾಜ್ಯದ ಇತರ ಜಿಲ್ಲೆಗಳಲ್ಲಿ ಹೂಡಿಕೆ ಉತ್ತೇಜನ

ಬೆಳಗಾವಿ: ಕೃಷಿ ಭೂಮಿ ಕೃಷಿಯೇತರ ಬಳಕೆಗೆ ಪರಿವರ್ತನೆ 7 ದಿನಗಳಲ್ಲಿ ಕಡ್ಡಾಯವಾಗಿ ಮಾಡಿಕೊಡುವ ಉದ್ದೇಶದ ಕರ್ನಾಟಕ ಭೂ ಕಂದಾಯ ಎರಡನೇ ತಿದ್ದುಪಡಿ ಮಸೂದೆ ಹಾಗೂ ಬೆಂಗಳೂರು ಹೊರತುಪಡಿಸಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಕೈಗಾರಿಕೆ ಉತ್ತೇಜಿಸಿ ಹೆಚ್ಚಿನ ಹೂಡಿಕೆ ತರುವ ಉದ್ದೇಶದ ಕರ್ನಾಟಕ ವಿಶೇಷ ಹೂಡಿಕೆ ಪ್ರದೇಶ ಮಸೂದೆ ಸೇರಿದಂತೆ ಮೂರು ಮಸೂದೆಗಳನ್ನು ವಿಧಾನಸಭೆಯಲ್ಲಿ ಮಂಗಳವಾರ ಮಂಡಿಸಲಾಯಿತು.   ಸಚಿವ ಮುರುಗೇಶ್‌ ನಿರಾಣಿ ಪರವಾಗಿ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಅವರು, ಕರ್ನಾಟಕ …

Read More »

ಸೇಂದಿವನ ಜಾಗದಲ್ಲಿ ರೈತರಿಗೆ ಸಾಗುವಳಿ ಚೀಟಿ: ಅಶೋಕ್‌

ಸುವರ್ಣವಿಧಾನಸೌಧ: ಸೇಂದಿವನ ಜಾಗದಲ್ಲಿ ಉಳುಮೆ ಮಾಡುತ್ತಿರುವ ರೈತರಿಗೆ ಸಾಗುವಳಿ ಚೀಟಿ ನೀಡಲು ಸರ್ಕಾರ ತೀರ್ಮಾನಿಸಿದೆ. ಕಾಫಿ ತೋಟ ಒತ್ತುವರಿ ಸಕ್ರಮಕ್ಕಾಗಿ ನಿಯಮಾವಳಿ ರೂಪಿಸಿದೆ ಎಂದು ಕಂದಾಯ ಸಚಿವ ಆರ್‌.ಅಶೋಕ್‌ ಹೇಳಿದರು. ಕಾಂಗ್ರೆಸ್‌ನ ಟಿ.ಡಿ.ರಾಜೇಗೌಡ ಅವರ ಪ್ರಸ್ತಾಪಕ್ಕೆ ಉತ್ತರಿಸಿದ ಅವರು, ಬಿಜೆಪಿ ಸರ್ಕಾರ ಬಂದ ನಂತರ ಪ್ರಮುಖವಾಗಿ ಮಲೆನಾಡು, ಕರಾವಳಿ ಭಾಗದ ರೈತರ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಂಡಿದೆ.   ಕಾಫಿ ತೋಟ ಒತ್ತುವರಿ ಸಕ್ರಮ ಮಾಡಿ ಗುತ್ತಿಗೆಗೆ ನೀಡಲು ತೀರ್ಮಾನಿಸಿ ನಿಯಮಾವಳಿ …

Read More »

ಮಜೂರು ಗ್ರಾಪಂ ವ್ಯಾಪ್ತಿಯ ಐಎಸ್‌ಆರ್‌ಎಲ್‌ನಿಂದ ತೆರಿಗೆ ವಸೂಲಿಗೆ ಕ್ರಮ

ಸುವರ್ಣ ವಿಧಾನಸೌಧ: ಉಡುಪಿ ಜಿಲ್ಲೆ ಕಾಪು ತಾಲೂಕಿನ ಮಜೂರು ಗ್ರಾಪಂ ವ್ಯಾಪ್ತಿಯ ಪಾದೂರು ಗ್ರಾಮದಲ್ಲಿನ ಐಎಸ್‌ಆರ್‌ಎಲ್‌ ಸಂಸ್ಥೆಯಿಂದ ಗ್ರಾಪಂಗೆ ತೆರಿಗೆ ಪಾವತಿಗೆ ಸಂಬಂಧಿಸಿದಂತೆ ಸಂಸ್ಥೆಯವರೊಂದಿಗೆ ಚರ್ಚಿಸಿ ತೆರಿಗೆ ಮೊತ್ತ ವಸೂಲಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪರವಾಗಿ ಸಚಿವ ಮುರುಗೇಶ ನಿರಾಣಿ ಹೇಳಿದರು.   ವಿಧಾನಪರಿಷತ್‌ನಲ್ಲಿ ಬಿಜೆಪಿಯ ಕೆ. ಪ್ರತಾಪಸಿಂಹ ನಾಯಕ್‌ ವಿಷಯ ಪ್ರಸ್ತಾಪಿಸಿ, ಐಎಸ್‌ಪಿಆರ್‌ಎಲ್‌ ಸಂಸ್ಥೆ ಪಾದೂರು ಗ್ರಾಮದಲ್ಲಿ ಮೊದಲ ಹಂತದಲ್ಲಿ 180 ಎಕರೆಯಲ್ಲಿ ಕೈಗಾರಿಕೆ …

Read More »