ದಾವಣಗೆರೆ: ರಾಜ್ಯ ಸರಕಾರದ ಕರ್ನಾಟಕ ಮೌಲ್ಯಮಾಪನ ಪ್ರಾಧಿಕಾರ ಹಾಗೂ ಸಾಮಾಜಿಕ ಪರಿಶೋಧನ ನಿರ್ದೇಶನಾಲಯವು ಶಾಲೆಗಳಲ್ಲಿ ಮಧ್ಯಾಹ್ನದ ಉಪಹಾರ ಯೋಜನೆಗೆ ಸಂಬಂಧಿಸಿ ಶುಚಿತ್ವ-ವ್ಯವಸ್ಥಿತ ನಿರ್ವಹಣೆ ಕುರಿತು ನೀಡಿದ ಮಹತ್ವದ ಶಿಫಾರಸುಗಳಿಗೆ ಪೂರಕವಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ, ರಾಜ್ಯದ ಎಲ್ಲ ಶಾಲೆಗಳ ಬಿಸಿಯೂಟ ಯೋಜನೆಯ ಅಡುಗೆ ಸಿಬಂದಿಗೆ ವಿಶೇಷ ತರಬೇತಿ ನೀಡಲು ಮುಂದಾಗಿದೆ. ಶಾಲಾ ಅಡುಗೆ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ಸಿಬಂದಿಗೆ ಪ್ರಸಕ್ತ ತಿಂಗಳಲ್ಲೇ ಒಂದು ದಿನದ ತರಬೇತಿ ನೀಡಲು ರಾಜ್ಯದ ಎಲ್ಲ ಶೈಕ್ಷಣಿಕ …
Read More »ಗೋವಾದಲ್ಲಿ ಕ್ರಿಸ್‍ಮಸ್ ಸಿದ್ಧತೆ ; ಭಾರಿ ಸಂಖ್ಯೆಯ ಪ್ರವಾಸಿಗರ ನಿರೀಕ್ಷೆ
ಪಣಜಿ: ಗೋವಾದಲ್ಲಿ ಕ್ರಿಸ್‍ಮಸ್ ಹಬ್ಬವನ್ನು ಅದ್ದೂರಿಯಿಂದ ಆಚರಿಸಲಾಗುತ್ತದೆ. ಹಬ್ಬಕ್ಕೆ ಇನ್ನು ಕೆಲವೇ ದಿನಗಳು ಬಾಕಿಯಿದ್ದು ಚರ್ಚ್ ಗಳಿಗೆ ಬಣ್ಣ ಬಡಿದು ಸಿಂಗರಿಸಲಾಗುತ್ತಿದ್ದು, ಕ್ರೈಸ್ತ ಬಾಂಧವರ ಮನೆಗಳಲ್ಲಿಯೂ ಸಿದ್ಧತಾ ಕಾರ್ಯ ಭರದಿಂದ ಸಾಗಿದೆ. ಕ್ರಿಸ್‍ಮಸ್ ಹಬ್ಬದೊಂದಿಗೆ ಹೊಸ ವರ್ಷ ಸಂಭ್ರಮಾಚರಣೆ ಕೂಡ ಆರಂಭಗೊಳ್ಳಲಿರುವುದರಿಂದ ಲಕ್ಷಾಂತರ ಸಮಖ್ಯೆಯಲ್ಲಿ ಪ್ರವಾಸಿಗರು ಆಗಮಿಸುವ ನಿರೀಕ್ಷೆಯನ್ನು ಗೋವಾದ ಪ್ರವಾಸೋದ್ಯಮ ಇಲಾಖೆ ಹೊಂದಿದೆ. ಮಾರುಕಟ್ಟೆಗಳಲ್ಲಿ ಕ್ರಿಸ್‍ಮಸ್ ಟ್ರಿ, ಸ್ಟಾರ್ ಗಳು, ಜಿಂಗಲ್‍ಬೆಲ್, ಸಾಂತಾಕ್ಲಾಸ್‍ಗಳು ಪ್ರಮುಖ ಆಕರ್ಷಣೆಯಾಗಿದೆ. ಮನೆ ಮನೆಯ ಮುಂದೆ …
Read More »ಕೌಜಲಗಿ: ಸಾಯಿ ಮಂದಿರ ವಾರ್ಷಿಕೋತ್ಸವ
ಕೌಜಲಗಿ: ಪಟ್ಟಣದ ಕಳ್ಳಿಗುದ್ದಿ ರಸ್ತೆಯಲ್ಲಿರುವ ಸಾಯಿಬಾಬಾ ಮಂದಿರದ ಪ್ರಥಮ ವಾರ್ಷಿಕೋತ್ಸವ ಗುರುವಾರ ಅತ್ಯಂತ ಶ್ರದ್ಧೆ-ಭಕ್ತಿಯಿಂದ ಜರುಗಿತು. ಕೌಜಲಗಿ ಸಾಯಿ ಸೇವಾ ಸಮಿತಿ ಹಾಗೂ ಸಮಸ್ತ ಭಕ್ತರ ಆಶ್ರಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಪ್ರಾತಃಕಾಲದಲ್ಲಿ ಸಾಯಿಬಾಬಾಗೆ ಮಹಾರುದ್ರಾಭಿಷೇಕ ಜರುಗಿತು. ಕೌಜಲಗಿ ಪ್ರದೇಶ ಅಭಿವೃದ್ಧಿ ಹಾಗೂ ಪ್ರಾಣಿಗಳ ಸಾಂಕ್ರಾಮಿಕ ಕಾಯಿಲೆ ನಿವಾರಣೆಗಾಗಿ ಪ್ರಾರ್ಥಿಸಿ ಈರಯ್ಯ ಶಾಸ್ತ್ರಿಗಳ ನೇತೃತ್ವದಲ್ಲಿ ಹೋಮ- ಹವನಗಳು ಜರುಗಿದವು. ಅನಂತರ ಸಾಯಿಬಾಬಾ ಪಲ್ಲಕ್ಕಿ ಉತ್ಸವ ನಡೆಯಿತು. ಪಲ್ಲಕ್ಕಿಯು ಭಕ್ತ ಕನಕದಾಸ …
Read More »ಗೋಕಾಕ: ಬಿಜೆಪಿ ಯುವ ಮೋರ್ಚಾ ನಗರ ಹಾಗೂ ಗ್ರಾಮೀಣ ಮಂಡಲಗಳ ಕಾರ್ಯಕಾರಿಣಿ ಸಭೆಯನ್ನು ಶಾಸಕ ರಮೇಶ ಜಾರಕಿಹೊಳಿ ಉದ್ಘಾಟಿಸಿದರು.
ಗೋಕಾಕ: ಬಿಜೆಪಿ ಪಕ್ಷ ಕೇಂದ್ರ ಹಾಗೂ ರಾಜ್ಯದಲ್ಲಿ ಅನೇಕ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಕಾರ್ಯಕರ್ತರು ತಮ್ಮಲ್ಲಿರುವ ವೈಮನಸ್ಸುಗಳನ್ನು ಬದಿಗಿಟ್ಟು ಸರಕಾರದ ಸಾಧನೆಗಳನ್ನು ಮನೆ ಮನಗಳಿಗೆ ತಲುಪಿಸುವ ಕಾರ್ಯ ಯುವ ಮೋರ್ಚಾ ಕಾರ್ಯಕರ್ತರು ಮಾಡಬೇಕು ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ನಗರದ ತಮ್ಮ ಗೃಹ ಕಚೇರಿಯಲ್ಲಿ ಬಿಜೆಪಿ ಯುವ ಮೋರ್ಚಾ ನಗರ ಹಾಗೂ ಗ್ರಾಮೀಣ ಮಂಡಲಗಳ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿ, ಬಿಜೆಪಿ ಸರಕಾರ ಬಡವರ ದೀನ ದಲಿತರ …
Read More »‘ನೆಮ್ಮದಿ ಜೀವನಕ್ಕಾಗಿ ಕಾನೂನು ಅವಶ್ಯ’
ಗೋಕಾಕ: ‘ನೆಮ್ಮದಿ ಜೀವನಕ್ಕಾಗಿ ರೂಪಿಸಿದ ಕಾನೂನುಗಳ ಅರಿವು ಪ್ರತಿಯೊಬ್ಬರಿಗೂ ಅವಶ್ಯಕ’ ಎಂದು ಇಲ್ಲಿನ ತಾಲ್ಲೂಕು ಕಾನೂನು ಸೇವೆಗಳ ಸಮಿತಿ ಕಾರ್ಯದರ್ಶಿ, ಪ್ರಧಾನ ಸಿವಿಲ್ ನ್ಯಾಯಾಧೀಶ ರಾಜೀವ ಗೋಳಸಾರ ಹೇಳಿದರು. ಇಲ್ಲಿನ ಸರ್ಕಾರ ಪ್ರೌಢಶಾಲೆಯಲ್ಲಿ ಈಚೆಗೆ ತಾಲ್ಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಹಾಗೂ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮತ್ತು ಸಾಮಾಜಿಕ ನ್ಯಾಯ ತಾಲ್ಲೂಕು ಘಟಕ ಮತ್ತು ಶಿಕ್ಷಣ ಇಲಾಖೆ, ಪಂಚಾಯತ ರಾಜ್ ಇಲಾಖೆ, ಮಹಿಳಾ ಮತ್ತು ಮಕ್ಕಳ …
Read More »ಬೆಳಗಾವಿ: ಅಧಿವೇಶನಕ್ಕೆ ತರಾತುರಿಯಲ್ಲೇ ಕಾಮಗಾರಿ!
ಬೆಳಗಾವಿ: ವಿಧಾನಮಂಡಲ ಚಳಿಗಾಲ ಅಧಿವೇಶನ ಸಮೀಪಿಸುತ್ತಿದ್ದಂತೆ, ನಗರದಲ್ಲಿ ವಿವಿಧ ಅಭಿವೃದ್ಧಿ ಕೆಲಸ ತರಾತುರಿಯಲ್ಲಿ ನಡೆಯುತ್ತಿವೆ. ರಾಜ್ಯಪಾಲರು, ಮುಖ್ಯಮಂತ್ರಿ, ಸಚಿವರು, ಶಾಸಕರು ವಾಸ್ತವ್ಯ ಹೂಡಲಿರುವ ಹೋಟೆಲ್‌ಗಳು ಹಾಗೂ ಪ್ರವಾಸಿ ಮಂದಿರಗಳಿಗೆ ಸಂಪರ್ಕ ಕಲ್ಪಿಸುವ ಮಾರ್ಗದಲ್ಲಿ ಮಹಾನಗರ ಪಾಲಿಕೆ ಆದ್ಯತೆ ಮೇರೆಗೆ ರಸ್ತೆ ದುರಸ್ತಿ ಕಾಮಗಾರಿ ಕೈಗೊಳ್ಳುತ್ತಿದೆ. ಆದರೆ, ಉಳಿದ ಮಾರ್ಗದ ರಸ್ತೆಗಳತ್ತ ಅಧಿಕಾರಿಗಳು ಗಮನ ಹರಿಸದಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಗುಂಡಿಗಳನ್ನು ಮುಚ್ಚಲಾಗುತ್ತಿದೆ: ಈ ಬಾರಿ ಮಳೆಗಾಲದಲ್ಲಿ ನಗರದ ಹಲವು ಮಾರ್ಗಗಳ …
Read More »ರಿಪೋರ್ಟ್ ಕಾರ್ಡ್’ ಮುಂದಿಟ್ಟು ಮತ ಕೇಳಿ: ಶಾಸಕರಿಗೆ ಜೆ.ಪಿ. ನಡ್ಡಾ ಸಲಹೆ
ಕೊಪ್ಪಳ: ಬಡವರು, ರೈತರು, ದೀನದಲಿತರು ಹೀಗೆ ಎಲ್ಲಾ ವರ್ಗದವರ ಏಳಿಗೆಗೆ ನಮ್ಮ ಸರ್ಕಾರ ಜಾರಿಗೆ ತಂದ ಯೋಜನೆಗಳು ಹಾಗೂ ಮಾಡಿದ ಕೆಲಸಗಳನ್ನು ಜನರ ಮುಂದಿಟ್ಟು ಮತ ಕೇಳಬೇಕು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹೇಳಿದರು. ಇಲ್ಲಿನ ತಾಲ್ಲೂಕು ಕ್ರೀಡಾಂಗಣದಲ್ಲಿ ಗುರುವಾರ ನಡೆದ ಸಾರ್ವಜನಿಕ ಸಮಾರಂಭದಲ್ಲಿ ಸೇರಿದ್ದ ಸಾವಿರಾರು ಜನರನ್ನು ಹುರಿದುಂಬಿಸಿ ಮಾತನಾಡಿದ ಅವರು ಮುಂಬರುವ ವಿಧಾನಸಭಾ ಚುನಾವಣೆಗೆ ಮತ ಕಹಳೆ ಊದಿದರು. ‘ಪ್ರಧಾನಿ ನರೇಂದ್ರ ಮೋದಿ, ಬಿ.ಎಸ್. ಯಡಿಯೂರಪ್ಪ …
Read More »ನಾನು ರಾಜಕೀಯಕ್ಕೆ ಖಂಡಿತವಾಗಿ ಬರುವುದಿಲ್ಲ : ನಟ ಶಿವರಾಜಕುಮಾರ್
ಹೊಸಪೇಟೆ (ವಿಜಯನಗರ): ನಾನು ರಾಜಕೀಯಕ್ಕೆ ಖಂಡಿತವಾಗಿ ಬರುವುದಿಲ್ಲ. ಸಿನಿಮಾ ರಂಗದಲ್ಲಿಯೇ ಮುಂದುವರೆಯುತ್ತೇನೆ ಎಂದು ಚಿತ್ರನಟ ಶಿವರಾಜಕುಮಾರ್ ಹೇಳಿದರು. ವೇದ ಚಿತ್ರತಂಡದೊಂದಿಗೆ ಗುರುವಾರ ನಗರದಲ್ಲಿ ಸಿನಿಮಾ ಪ್ರಚಾರ ಕೈಗೊಂಡ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ‘ವೇದ ಸಿನಿಮಾದಲ್ಲಿ ಸಾಮಾಜಿಕ ಸಂದೇಶವಿದೆ. ಆಯಕ್ಷನ್, ಹಾಡು, ಮನರಂಜನೆ ಎಲ್ಲವೂ ಇದೆ. ಜೊತೆಗೆ ‘ಮಾಸ್-ಕ್ಲಾಸ್ ಫೀಲ್’ ಕೂಡ ಇದೆ. ಸಿನಿಮಾ ನೋಡಿದವರು ಯಾರೂ ಡಿಸಪಾಯಿಂಟ್ ಆಗಲ್ಲ’ ಇದು ಚಿತ್ರನಟ ಶಿವರಾಜಕುಮಾರ್ ಅವರು ಅವರ 125ನೇ …
Read More »ಹೆಡ್ ಮಾಸ್ಟರ್ ಗೆ ಹಿಗ್ಗಾ ಮುಗ್ಗಾ ಥಳಿಸಿದ ಹಾಸ್ಟೆಲ್ ವಿದ್ಯಾರ್ಥಿನಿಯರು
ಹಾಸ್ಟೆಲ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಕೊಡುತ್ತಿದ್ದ ಹೆಡ್ ಮಾಸ್ಟರ್ ಚಿನ್ಮಯಾನಂದ ವಿದ್ಯಾರ್ಥಿನಿಯರ ಕೈಗೆ ಸಿಕ್ಕಿ ಹಿಗ್ಗಾ ಮುಗ್ಗಾ ಹೊಡೆತ ತಿಂದು ಹೈರಾಣಾದ ಘಟನೆ ಮಂಡ್ಯದಲ್ಲಿ ನಡೆದಿದೆ. ಹಾಸ್ಟೆಲ್ ನ ಎಲ್ಲ ವಿದ್ಯಾರ್ಥಿನಿಯರು ಕೈಯಲ್ಲಿ ಕೋಲು ಹಿಡಿದುಕೊಂಡು ಹಿಗ್ಗಾ ಮುಗ್ಗಾ ಥಳಿಸಿದ್ದಾರೆ.
Read More »ರಾಷ್ಟ್ರೀಯ ಹೆದ್ದಾರಿ ತಡೆದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕರ್ನಾಟಕ ಪ್ರತಿಭಟನೆ
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಷ್ಟ್ರೀಯ ಹೆದ್ದಾರಿ 50 ನ್ನು ತಡೆದು ಪ್ರತಿಭಟನೆ ನಡೆಸಲಾಯಿತು. ಕರ್ನಾಟಕ ರಾಜ್ಯ ರೈತ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರಾಷ್ಟ್ರೀಯ ಹೆದ್ದಾರಿ 50 ತಡೆದು ಹೋರಾಟ ನಡೆಸಿರುವ ಘಟನೆ ವಿಜಯಪುರ ಜಿಲ್ಲೆ ನಿಡಗುಂದಿ ಪಟ್ಟಣದಲ್ಲಿ ನಡೆಯಿತು. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ವಿಜಯ ಪೂಜಾರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. …
Read More »
Laxmi News 24×7