ಗಂಟು ಮೂಟೆ ಕಟ್ಟಿಕೊಂಡು ಕರ್ನಾಟಕ ಸರಕಾರ ಬೆಳಗಾವಿಯ ಸುವರ್ಣ ವಿಧಾನ ಸೌಧಕ್ಕೆ ಶಿಫ್ಟ್ ಆಗುತ್ತಿದೆ. ಸೋಮವಾರದಿಂದ ಚಳಿಗಾಲದ ಅಧಿವೇಶನ. ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ನಡೆಯಲಿದ್ದು, ಅದಕ್ಕಾಗಿ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಬೆಳಗಾವಿ ಮಹಾನಗರದಲ್ಲಿ ಹತ್ತು ದಿನಗಳ ಕಾಲ ಸಚಿವರು, ಅಧಿಕಾರಿಗಳು, ವಿವಿಧ ಪಕ್ಷದ ನಾಯಕರು, ಗಣ್ಯಾತಿ ಗಣ್ಯರು ಓಡಾಡುತ್ತಾರೆ. ಹೀಗಾಗಿ ನಗರದ ರಸ್ತೆಗಳನ್ನು ಸುಧಾರಿಸುವ ಕೆಲಸ ಒಂದು ಕಡೆ ನಡೆದರೆ, ಸುವರ್ಣ ವಿಧಾನಸೌಧಕ್ಕೆ ಹೊಸ ಸ್ವರೂಪ ನೀಡುವ ಕಾರ್ಯವೂ …
Read More »46 ಸಾವಿರ ನೇಕಾರ ಕುಟುಂಬಗಳ ವಿದ್ಯಾರ್ಥಿಗಳಿಗೆ ಮಕ್ಕಳ ವಿದ್ಯಾನಿಧಿ ಬಿಡುಗಡೆ?
ನೇಕಾರರ ಮಕ್ಕಳ ವಿದ್ಯಾನಿಧಿ ಯೋಜನೆಗೆ 46 ಸಾವಿರ ನೇಕಾರ ಕುಟುಂಬಗಳ ವಿದ್ಯಾರ್ಥಿಗಳಿಗೆ ಗುರುತಿಸಲಾಗಿದ್ದು, ಶೀಘ್ರವಾಗಿ ವಿದ್ಯಾನಿಧಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನೇಕಾರ್ ಸಮ್ಮಾನ್ ಯೋಜನೆಯಡಿ ಕೈಮಗ್ಗ ನೇಕಾರರಿಗೆ ಡಿಬಿಟಿ ಮೂಲಕ ಸಹಾಯಧನ ವರ್ಗಾವಣೆಗೆ ಚಾಲನೆ ನೀಡಿದರು. 46 ಸಾವಿರ ನೇಕಾರ ಕುಟುಂಬದ ವಿದ್ಯಾರ್ಥಿಗಳ ದಾಖಲೆಗಳನ್ನು ಹದಿನೈದು ದಿನದೊಳಗೆ ಪಡೆದು ಪಟ್ಟಿಯನ್ನು ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಮುಖ್ಯಮಂತ್ರಿಗಳು, ವಿದ್ಯಾರ್ಥಿಗಳಿಗೆ …
Read More »ವಕೀಲರಿಗೆ ಭದ್ರತೆ ಇಲ್ಲದಂತಾಗಿದೆ.
ದೇಶದಲ್ಲಿ ನ್ಯಾಯಾಂಗ ವ್ಯವಸ್ಥೆಯಲ್ಲಿ ವಕೀಲರ ಪಾತ್ರ ಮಹತ್ವದಾಗಿದ್ದು, ಆದ್ರೆ ವಕೀಲರಿಗೆ ಭದ್ರತೆ ಇಲ್ಲದಂತಾಗಿದೆ. ಹೀಗಾಗಿ ವಕೀಲರಿಗೆ ಭದ್ರತೆಯನ್ನು ಒದಗಿಸುವ ಕಾನೂನನ್ನು ರಾಜ್ಯದಲ್ಲಿ ತರುವಂತೆ ಒತ್ತಾಯಿಸಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಚಿಕ್ಕೋಡಿ ತಾಲ್ಲೂಕು ವಕೀಲರ ಸಂಘದಿಂದ ತಹಶೀಲ್ದಾರರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಚಿಕ್ಕೋಡಿ ತಾಲ್ಲೂಕು ವಕೀಲರ ಸಂಘದ ಕಚೇರಿಯಿಂದ ಮಿನಿ ವಿಧಾನಸೌಧದವರೆಗೂ ಪ್ರತಿಭಟನಾ ಮೆರವಣಿಗೆ ಕೈಗೊಂಡ ವಕೀಲರು ಕೆಲ ಕಾಲ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿ …
Read More »ಆಪರೇಷನ್ ಬಾಂಬ್ ಸಿಡಿಸಿದ ಸಚಿವ ಮುನಿರತ್ನ
ಕೋಲಾರ: ಕಂದಾಯ ಸಚಿವ ಆರ್.ಅಶೋಕ್ ಆಪರೇಷನ್ ಕಮಲದ ಸುಳಿವು ನೀಡಿದ ಬೆನ್ನಲ್ಲೇ ತೋಟಗಾರಿಕಾ ಸಚಿವ ಮುನಿರತ್ನ 10 ಕಾಂಗ್ರೆಸ್ ನಾಯಕರ ಟೀಂ ನ್ನು ಕರೆತರುತ್ತಿದ್ದೇವೆ ಎಂದು ಹೇಳಿದ್ದಾರೆ. ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಮುನಿರತ್ನ, ಸಮ್ಮಿಶ್ರ ಸರ್ಕಾರ ಇದ್ದಾಗ ನಾವು 17 ಶಾಸಕರು ಬಿಜೆಪಿಗೆ ಬಂದಿದ್ದೆವು. ಈಗ 10 ಶಾಸಕರು ಸಜ್ಜಾಗಿದ್ದಾರೆ. ಶೀಘ್ರದಲ್ಲಿಯೇ ಅವರನ್ನು ಬಿಜೆಪಿಗೆ ಕರೆತರಲಾಗುವುದು ಎಂದರು. ಒಟ್ಟು 22 ಶಾಸಕರು ರೆಡಿ ಇದ್ದಾರೆ ಅವರಲ್ಲಿ ನಾವು 10 ಜನರನ್ನು …
Read More »ಮದುವೆ ಆಗುವುದಾಗಿ ಹೇಳಿ ಲೈಂಗಿಕವಾಗಿ ಬಳಸಿಕೊಂಡ.. ಕೊನೆಗೂ ಕೈಕೊಟ್ಟು ಸಿಕ್ಕಿಬಿದ್ದ
ಹೈದರಾಬಾದ್:ಸರ್ಕಾರಿ ಅಧಿಕಾರಿಯೋರ್ವ ತನ್ನದೇ ಇಲಾಖೆ ಮಹಿಳೆ ಅಧಿಕಾರಿಯನ್ನು ಲೈಂಗಿಕವಾಗಿ ಬಳಸಿಕೊಂಡು ಮೋಸ ಮಾಡಿರೋ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಕರ್ನೂಲ್ ಜಿಲ್ಲೆಯಲ್ಲಿ ಡ್ರಗ್ ಇನ್ಸ್ಪೆಕ್ಟರ್ ಆಗಿ ಕೆಲಸ ಮಾಡುತ್ತಿರುವ ಅಬೀದ್ ಅಲಿ ಎಂಬಾತ ತನ್ನ ಸಹೋದ್ಯೋಗಿ ಮಹಿಳೆಗೆ ವಂಚಿಸಿದ ಕಿಡಿಗೇಡಿ. ಇಬ್ಬರು ಒಂದೇ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದರು. ಜತೆಗೆ ಒಂದೇ ಸಮುದಾಯಕ್ಕೆ ಸೇರಿದವರು ಕೂಡ. ಅಬೀದ್ ಅಲಿ ತನಗೆ ಮದುವೆ ಆಗಿರೋ ವಿಷಯ ಬಚ್ಚಿಟ್ಟು ತನ್ನ ಇಲಾಖೆ ಮಹಿಳಾ ಅಧಿಕಾರಿ …
Read More »ಉಡುಪಿ | ಮಲ್ಪೆಯಲ್ಲಿ ಮತ್ತೆ ತೇಲುವ ಸೇತುವೆ!
ಉಡುಪಿ: ಮಲ್ಪೆಯ ಕಡಲ ಕಿನಾರೆಯಲ್ಲಿ ಮತ್ತೆ ತೇಲುವ ಸೇತುವೆ (ಫ್ಲೋಟಿಂಗ್ ಬ್ರಿಡ್ಜ್) ನಿರ್ಮಾಣವಾಗುತ್ತಿದ್ದು ಕೆಲವೇ ದಿನಗಳಲ್ಲಿ ಪ್ರವಾಸಿಗರಿಗೆ ಮುಕ್ತವಾಗಲಿದೆ. ಕಳೆದ ಬಾರಿಯ ಅವಘಡ ಮತ್ತೊಮ್ಮೆ ಮರುಕಳಿಸಬಾರದು ಎಂಬ ದೃಷ್ಟಿಯಿಂದ ಈ ಬಾರಿ ಹೊರ ರಾಜ್ಯ ಹಾಗೂ ರಾಜ್ಯದ ಕಡಲ ತಜ್ಞರ ತಂಡಗಳು ತೇಲುವ ಸೇತುವೆಯ ಸಾಮರ್ಥ್ಯ, ಕಾರ್ಯಕ್ಷಮತೆಯನ್ನು ಪರೀಕ್ಷೆಗೊಳಪಡಿಸಿ ದೃಢೀಕರಿಸಿವೆ. ತೇಲುವ ಸೇತುವೆ ಚಂಡಮಾರುತದಂತಹ ಪ್ರತಿಕೂಲ ವಾತಾವರಣವನ್ನು ತಡೆದುಕೊಳ್ಳಬಹುದೇ? ದೈತ್ಯ ಅಲೆಗಳು ಅಪ್ಪಳಿಸಿದರೆ ತಾಳಿಕೊಳ್ಳುವುದೇ ಎಂಬುದನ್ನು ವೈಜ್ಞಾನಿಕವಾಗಿ ಪರೀಕ್ಷೆ ಗೊಳಪಡಿಸಿದೆ. …
Read More »ಇಂದು 100 ಕ್ಕೂ ಹೆಚ್ಚು `ಜೆಡಿಎಸ್’ ಅಭ್ಯರ್ಥಿಗಳ ಪಟ್ಟಿ ಪ್ರಕಟ:H.D.K.
ಬೆಂಗಳೂರು : ಮುಂದಿನ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು ಬಿಡುಗಡೆ ಮಾಡಲಾಗುವುದು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ನನ್ನ ಅಭಿಪ್ರಾಯದಲ್ಲಿ ರಥಯಾತ್ರೆ ಆರಂಭ ಆದ ನಂತರ ಬಿಜೆಪಿ, ಕಾಂಗ್ರೆಸ್ ಪಕ್ಷಗಳಲ್ಲಿ ಗಲಿಬಿಲಿ ಪ್ರಾರಂಭ ಆಗಿದೆ. ಈಗ ಬರುತ್ತಿರುವ ಸಮೀಕ್ಷೆಗಳಲ್ಲಿ ಇವೆರಡೂ ಪಕ್ಷಗಳಿಗಿಂತ ಹೆಚ್ಚು ಸ್ಥಾನಗಳನ್ನು ಜೆಡಿಎಸ್ ಗೆಲ್ಲಲಿದೆ ಎಂದು …
Read More »ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
ಚಿತ್ರದುರ್ಗ : ಮುರುಘಾ ಶ್ರೀ ವಿರುದ್ಧ ಪೋಕ್ಸೋ ಪ್ರಕರಣದಲ್ಲಿ ಪಿತೂರಿ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಚಿತ್ರದುರ್ಗ ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ, ಮಾಜಿ ಶಾಸಕ ಎಸ್.ಕೆ. ಬಸವರಾಜನ್ ಪತ್ನಿ ಸೌಭಾಗ್ಯ ಬಸವರಾಜನ್ ಅವರನ್ನು ಚಿತ್ರದುರ್ಗ ಗ್ರಾಮಾಂತರ ಠಾನೆ ಪೊಲೀಸರು ಬಂಧಿಸಿದ್ದಾರೆ. ಮುರುಘಾ ಶ್ರೀ ವಿರುದ್ಧ ಪೋಕ್ಸೋ ಪ್ರಕರಣದಲ್ಲಿ ಪಿತೂರಿ ಆರೋಪದ ಹಿನ್ನೆಲೆಯಲ್ಲಿ ನವೆಂಬರ್ 9 ರಂದು ಬಸವರಾಜನ್, ಸೌಭಗ್ಯ ವಿರುದ್ಧ ದೂರು ದಾಖಲಾಗಿತ್ತು. ನವೆಂಬರ್ 10 ರಂದು …
Read More »ಖಾತೆಗೆ 5 ಸಾವಿರ ರೂ. ವರ್ಗಾವಣೆಗೆ ಇಂದು ಸಿಎಂ ಚಾಲನೆ; ನೇಕಾರ ಸಮ್ಮಾನ್ ಯೋಜನೆಯಡಿ ನೆರವು
ಬೆಂಗಳೂರು: ಕೈಮಗ್ಗ ನೇಕಾರರಿಗೆ ತಲಾ 5000 ರೂ. ಖಾತೆಗೆ ಜಮಾ ಮಾಡಲಾಗುವುದು. ನೇಕಾರ ಸಮ್ಮಾನ್ ಯೋಜನೆಯಡಿ ಈ ವರ್ಷದ ಹಣ ವರ್ಗಾವಣೆಗೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು, ನೇರ ನಗದು ವರ್ಗಾವಣೆಯ ಮೂಲಕ ಕೈಮಗ್ಗ ನೇಕಾರರಿಗೆ ವಾರ್ಷಿಕ ಆರ್ಥಿಕ ನೆರವು ತಲಾ 5000 ರೂ. ನಂತೆ 23.43 ಕೋಟಿ ರೂ. ಮೊತ್ತವನ್ನು ಬ್ಯಾಂಕ್ ಖಾತೆಗಳಿಗೆ …
Read More »ಪ್ರತಿಷ್ಠಿತ ಬ್ಯಾಂಕ್ನಲ್ಲಿಟ್ಟಿದ್ದ ಚಿನ್ನ ಮಾಯ
ಕಳ್ಳಕಾಕರ ಭಯದಿಂದ ಜನಸಾಮಾನ್ಯರು ತಮ್ಮ ಹಣ ಹಾಗೂ ಚಿನ್ನ ಸುರಕ್ಷಿತವಾಗಿರುತ್ತೆ ಅಂತ ಬ್ಯಾಂಕ್ನಲ್ಲಿಡುತ್ತಾರೆ. ಆದ್ರೆ ಆ ಬ್ಯಾಂಕ್ನಲ್ಲಿಟ್ಟ ಹಣವೇ ಮಂಗಮಾಯವಾದ್ರೆ.. ಇಂಥ ಶಾಕಿಂಗ್ ಸುದ್ದಿಯಿಂದ ಕುಟುಂಬವೊಂದು ಕಂಗಾಲಾಗಿದೆ. ಬ್ಯಾಂಕ್ ಅಂದ್ರೆ ಜನಸಾಮಾನ್ಯರ ದುಡ್ಡಿನ ಹಾಗೂ ಚಿನ್ನದ ಸೆಕ್ಯೂರಿಟಿ ಗಾರ್ಡ್. ಕಷ್ಟ ಪಟ್ಟು ದುಡಿದು ಸಂಪಾದಿಸಿದ ಹಣ ಅಥವಾ ಕೊಂಡುಕೊಂಡ ಚಿನ್ನವನ್ನ ಮನೆಯಲ್ಲಿಟ್ರೆ ಯಾವಾಗ ಅದ್ಯಾವ ಖದೀಮರು ಮನೆಗೆ ನುಗ್ಗಿ ಎಸ್ಕೇಪ್ ಮಾಡಿಬಿಡ್ತಾರೋ ಅನ್ನೋ ಭಯಕ್ಕೆ ಜನ ಬ್ಯಾಂಕ್ಗಳಲ್ಲಿ ಠೇವಣಿ ಇಡ್ತಾರೆ. …
Read More »
Laxmi News 24×7